Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ನವದೆಹಲಿ : ಜಮ್ಮು ಕಾಶ್ಮೀರದಲ್ಲಿ ನಿನ್ನೆ ಉಗ್ರರು ಪ್ರವಾಸಿಗರ ಮೇಲೆ ಭೀಕರವಾದ ಗುಂಡಿನ ದಾಳಿ ನಡೆಸಿದ್ದಾರೆ. ಈ ಒಂದು ಗುಂಡಿನ ದಾಳಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದು ಕರ್ನಾಟಕ ಮೂಲದ ಇಬ್ಬರು ಪ್ರವಾಸಿಗರು ಸಹ ಸಾವನಪ್ಪಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ. ಹೌದು ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಇದೀಗ ಉಗ್ರರ ದಾಳಿ ಕುರಿತು ಸುಪ್ರೀಂ ಕೋರ್ಟ್ ಅಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲಿನ ದಾಳಿ ಕುರಿತಂತೆ ಇದೀಗ ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ. ಇನ್ನು ಈ ಒಂದು ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಹಾಗೂ ಬೆಂಗಳೂರು ಮೂಲದ ಭರತ್ ಭೂಷಣ್ ಅವರು ಬಲಿಯಾಗಿದ್ದಾರೆ. ಇದೀಗ ರಾಜ್ಯ ಸರ್ಕಾರ ಮೃತ ದೇಹಗಳನ್ನು ರಾಜ್ಯಕ್ಕೆ ತರುವ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು ನಾಳೆ ಮಂಜುನಾಥ್ ಮೃತದೇಹ ಬೆಂಗಳೂರಿಗೆ ಆಗಮಿಸಲಿದೆ.…
ಶಿವಮೊಗ್ಗ : ಉಗ್ರರ ಗುಂಡಿನ ದಾಳಿಯಲ್ಲಿ ಬಲಿಯಾದ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರ ಮೃತದೇಹವನ್ನು ನಾಳೆ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಲಿದೆ. ಬಳಿಕ ರಸ್ತೆಯ ಮೂಲಕ ಶಿವಮೊಗ್ಗಕ್ಕೆ ತರಳಾಗುತ್ತೆ ಎಂದು ಶಿವಮೊಗ್ಗದಲ್ಲಿ ಬಿಜೆಪಿ ಶಾಸಕ ಚನ್ನಬಸಪ್ಪ ಹೇಳಿಕೆ ನೀಡಿದರು. ಅಂತಿಮ ದರ್ಶನಕ್ಕೆ ಇಡೀ ಶಿವಮೊಗ್ಗದ ಜನರು ಬರುವ ನಿರೀಕ್ಷೆ ಇದೆ. ವರ್ತಕರ ಎಲ್ಲರು ಅಂಗಡಿ ಮುಂಗಟ್ಟು ಮುಚ್ಚುವ ತೀರ್ಮಾನ ಮಾಡಿದ್ದಾರೆ. ಭಯೋತ್ಪಾದನೆ ಸರ್ವ ನಾಶವಾಗಬೇಕೆಂದು ತೀರ್ಮಾನ ಮಾಡಿದ್ದಾರೆ. ಸ್ವಯಂ ಪ್ರೇರಿತರಾಗಿ ಬಂದ್ ಮಾಡಲು ಜನರು ತೀರ್ಮಾನಿಸಿದ್ದಾರೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದರು. ಮನೆಯ ಮುಂದೆ ಧಾರ್ಮಿಕ ವಿಧಿ ವಿಧಾನ ನಡೆಸಿದ ಬಳಿಕ ಮೆರವಣಿಗೆ ಮೂಲಕ ರೋಟರಿ ಚಿತಾಗಾರಕ್ಕೆ ತೆರಳಿ ಅಂತ್ಯಕ್ರಿಯೆ ನೆರವೇರಲಿದೆ. ಮಧ್ಯಾಹ್ನ 12 ಗಂಟೆ ಬಳಿಕ ಮೆರವಣಿಗೆ ಆರಂಭವಾಗಲಿದೆ. ಮಂಜುನಾಥ ನಿವಾಸಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ರಸ್ತೆಯ ಮೂಲಕ ಮೃತದೇಹವನ್ನು ಶಿವಮೊಗ್ಗಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರು : ಪುಲ್ವಾಮಾ ದಾಳಿ ನಂತರ ಇಲ್ಲಿಯವರೆಗೆ ಇಂತಹ ದುರ್ಘಟನೆಗಳು ನಡೆದಿರಲಿಲ್ಲ. ಹಿಂದೂಗಳನ್ನು ಗುರಿ ಮಾಡಿದ್ದಾರೆ. ದಾಳಿ ವೇಳೆ ನೀನು ಹಿಂದೂ ಅದಕ್ಕಾಗಿ ಕೊಲ್ಲುತ್ತಿದ್ದೇವೆ ಎಂದು ಭಯೋತ್ಪಾದಕರು ಹೇಳಿಕೊಂಡಿರುವುದು ನಿಜಕ್ಕೂ ಆತಂಕಕಾರಿ ವಿಚಾರ. ಇದು ಹೊಸದಲ್ಲ ಅನ್ನಿಸುತ್ತದೆ. ದಾಳಿ ಮಾಡುವಾಗ ಅನೇಕ ಸಂದರ್ಭದಲ್ಲಿ ಆ ಮಾತುಗಳನ್ನು ಹೇಳಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಬಹಳ ಶಕ್ತಿಯುತ, ಪರಿಣಾಮಕಾರಿಯಾದ ಮಿಲಿಟರಿ ಇಂಟೆಲಿಜೆನ್ಸ್ ಇದ್ದರೂ ಸಹ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ ಹೇಗಾಯ್ತು ಎಂಬುದು ಅತಿದೊಡ್ಡ ಪ್ರಶ್ನೆಯಾಗಿದೆ.ಅನೇಕ ಸಂದರ್ಭಗಳಲ್ಲಿ ಮಿಲಿಟರಿ ಇಂಟಲಿಜೆನ್ಸ್ ಒಳ್ಳೆಯ ಕೆಲಸ ಮಾಡಿದೆ. ಯಾಕೆ ಇಂಟಲಿಜೆನ್ಸ್ ಫೆಲ್ಯೂರ್ ಆಯ್ತು?. ಟೆರರಿಸ್ಟ್‌ಗಳು ಎಲ್ಲಿಂದ, ಹೇಗೆ ಬಂದ್ರು ಎಂಬುದು ಅತಿದೊಡ್ಡ ಪ್ರಶ್ನೆ ಎಂದರು. ಕೃತ್ಯಕ್ಕೆ ಸ್ಥಳೀಯರ ಸಹಕಾರ ಇದ್ದುಕೊಂಡೇ ಆಗಿರಲಿ ಅಥವಾ ಸ್ಥಳೀಯರ ಸಹಕಾರ ಇಲ್ಲದೆಯೂ ಆಗಿರಲಿ. ನಮ್ಮ ಫೋರ್ಸ್ ಒಳಗಡೆ ಯಾರಾದರೂ ಸಹಕಾರ ಮಾಡಿದವರು ಇದ್ದರು ಸಹ ಅದನ್ನೆಲ್ಲ ಪತ್ತೆಹಚ್ಚಿ, ನಿರ್ದಾಕ್ಷಿಣ್ಯವಾಗಿ ಕ್ರಮ…
ಹಾವೇರಿ : ಜಮ್ಮು ಕಾಶ್ಮೀರದಲ್ಲಿ ನಿನ್ನೆ ಉಗ್ರರು ಪ್ರವಾಸಿಗರ ಮೇಲೆ ಭೀಕರ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಸುಮಾರು 30ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಅದರಲ್ಲಿ ಕನ್ನಡಿಗರು ಇಬ್ಬರು ಬಲಿಯಾಗಿದ್ದಾರೆ. ಈ ಒಂದು ದಾಳಿಯ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸುವ ಅವಶ್ಯಕತೆ ಇರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆರ್ಟಿಕಲ್ 370 ತೆರವುಗೊಳಿಸಿದ ನಂತರ ಕಾಶ್ಮೀರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಿತ್ತು, ಈ ಪ್ರಾಂತ್ಯ ತನ್ನ ಕೈ ತಪ್ಪಿಹೋಗುತ್ತಿದೆ ಅಂತ ಪಾಕಿಸ್ತಾನಕ್ಕೆ ಹತಾಶೆ ಶುರುವಾಗಿತ್ತು, ಅದರ ಪರಿಣಾಮವೇ ನಿನ್ನೆ ಪಹೆಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆದು 28 ಅಮಾಯಕ ಹಿಂದೂಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಕಳೆದ 10 ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿಯವರು ಆ ಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ, ಅದು ಕೇಂದ್ರಾಡಳಿತ…
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ರಜೆಗಾಗಿ ತನ್ನ ಊರಿಗೆ ತೆರಳಿದ್ದ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 31 ವರ್ಷದ ಯುವಕನನ್ನು ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧನಂಜಯ್ ಎಂದು ತಿಳಿದುಬಂದಿದೆ. ಈ ಘಟನೆ ಮಂಗಳೂರಿನಲ್ಲಿ ಬಾಲಕಿಯ ಅಮ್ಮನ ಸ್ನೇಹಿತೆಯ ಮನೆಯಲ್ಲಿ ನಡೆದಿದ್ದು, ಆರೋಪಿ ಬಾಲಕಿಯ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ಬಳಸಿಕೊಂಡು ಆಕೆಯನ್ನು ಬ್ಲಾಕ್‌ಮೇಲ್ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ, ಧನಂಜಯ ಬಾಲಕಿಯನ್ನು ಬೆದರಿಸಿ ಬೆಂಗಳೂರಿಗೆ ಬಂದು ಬಾಲಕಿಯನ್ನ ಕರೆದುಕೊಂಡು ಹೋಗಿದ್ದ. ಆನಂತರ, ಸಕಲೇಶಪುರದ ಒಂದು ತೋಟದಲ್ಲಿ ಆಕೆಯನ್ನು ಬಚ್ಚಿಟ್ಟು, ನಿರಂತರವಾಗಿ ಅತ್ಯಾಚಾರವನ್ನು ಮುಂದುವರೆಸಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯು ತನ್ನ ದುಃಸ್ಥಿತಿಯನ್ನು ಪೋಷಕರಿಗೆ ತಿಳಿಸಿದ ನಂತರ, ಅವರು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ವೈದ್ಯಕೀಯ ತಪಾಸಣೆಯಿಂದ ಅತ್ಯಾಚಾರದ ಆರೋಪ ದೃಢಪಟ್ಟಿದ್ದು, ಸೋಲದೇವನಹಳ್ಳಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿ ಧನಂಜಯನನ್ನು ಬಂಧಿಸಿದರು. ಲೈಂಗಿಕ ಅಪರಾಧಗಳಿಂದ ಪೋಕ್ಸೋ…
ಮೈಸೂರು : ಜಮ್ಮು ಕಾಶ್ಮೀರದ ಅನಂತ್ ನಾಗ್ ನಲ್ಲಿ ನಿನ್ನೆ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ 30ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದು, ಅವರಲ್ಲಿ ಇಬ್ಬರು ಕರ್ನಾಟಕದವರು ಸೇರಿದ್ದಾರೆ. ಇದೀಗ ಮೈಸೂರು ಜಿಲ್ಲೆಯ ಮೂಲದ ಹತ್ತು ಜನ ಪ್ರವಾಸಿಗರು ಶ್ರೀನಗರದಲ್ಲಿ ಸುರಕ್ಷಿತವಾಗಿ ಇದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಹೌದು ಮೈಸೂರಿನಿಂದ ಪ್ರವಾಸಕ್ಕೆ ತೆರಳಿದ 10 ಜನರು ಶ್ರೀನಗರದಲ್ಲಿ ಸೇಫ್ ಆಗಿದ್ದಾರೆ. ದೆಹಲಿ ಹಾಗೂ ಕಾಶ್ಮೀರ ಪ್ರವಾಸಕ್ಕೆ ಮೈಸೂರಿನ 10 ಜನರು ತೆರಳಿದ್ದರು. ಏಪ್ರಿಲ್ 28 ರಂದು ಮೈಸೂರು ಪ್ರವಾಸಿಗರು ಕರ್ನಾಟಕಕ್ಕೆ ವಾಪಸ್ ಬರಬೇಕಿತ್ತು, ಆದರೆ ಕಾಶ್ಮೀರದಲ್ಲಿ ಉಗ್ರರಿಂದ ದಾಳಿ ಹಿನ್ನೆಲೆಯಲ್ಲಿ ಪ್ರವಾಸವನ್ನು ಮೊಟಕು ಗೊಳಿಸಿದ್ದರು.ಇದೀಗ ಶ್ರೀನಗರದ ಹೋಟೆಲ್ ಒಂದರಲ್ಲಿ ಪ್ರವಾಸಿಗರು ಉಳಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಸಚಿವ ಸಂತೋಷ್ ಲಾಡ್ ಮೈಸೂರು ಮೂಲದ 10 ಜನ ಪ್ರವಾಸಿಗರನ್ನು ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಚಿಕ್ಕಬಳ್ಳಾಪುರ : ಮಾಜಿ ಎಂಎಲ್ಸಿ ವೈ.ಎ ನಾರಾಯಣಸ್ವಾಮಿ ಸಂಬಂಧಿಯಿಂದ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ಗುಂಡಿನ ದಾಳಿಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಎಂಬಲ್ಲಿ ನಡೆದಿದೆ. ಸರ್ಕಾರಿ ಜಾಗದಲ್ಲಿ ಕ್ರಷರ್ ನಿರ್ಮಾಣಕ್ಕೆ ರಸ್ತೆ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಇಂದು ಮಂಚೇನಹಳ್ಳಿಯಲ್ಲಿ ಸ್ಥಳೀಯರು ಪ್ರತಿಭಟನೆ ಮಾಡುತ್ತಿದ್ದರು. ಈ ವೇಳೆ ಮಾಜಿ ಎಂಎಲ್ಸಿ ವೈ.ಎ ನಾರಾಯಣಸ್ವಾಮಿ ಸಂಬಂಧಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗೂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಚಿಕನ್ ರವಿ ಎಂಬುವವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 27 ಹಿಂದೂಗಳನ್ನು ಕೊಂದಿರುವ ಉಗ್ರರ ನೀಚತನದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ರಿಯಾಕ್ಟ್ ಮಾಡಿದ್ದಾರೆ. ಮುಗ್ಧ ಜನರ ಕ್ರೂರ ಹತ್ಯೆಯಿಂದ ತೀವ್ರ ದುಃಖವಾಗಿದೆ ಎಂದು ಯಶ್ ಹೇಳಿದ್ದಾರೆ. ಟ್ವೀಟ್ ನಲ್ಲಿ ಈ ಕುರಿತು ಬೇಸರ ಹೊರಹಾಕಿರುವ ಅವರು, ಪಹಲ್ಗಾಮ್‌ನಲ್ಲಿ ಮುಗ್ಧ ಜನರ ಕ್ರೂರ ಹತ್ಯೆಗಳಿಂದ ತೀವ್ರ ದುಃಖವಾಗಿದೆ. ಮುಗ್ಧ ವ್ಯಕ್ತಿಗಳ ಮೇಲಿನ ದಾಳಿಯನ್ನು ಊಹಿಸಲು ಸಾಧ್ಯವಿಲ್ಲ. ಈ ಭೀಕರ ದುರಂತದ ಶೋಕದಲ್ಲಿ ಬಲಿಪಶುಗಳ ಕುಟುಂಬಗಳು ಮತ್ತು ರಾಷ್ಟ್ರದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದು ಬರೆದುಕೊಂಡಿದ್ದಾರೆ. https://twitter.com/TheNameIsYash/status/1914936733067509792?t=ilH_cSSMSMIIB2s8PmgAuQ&s=19
ಬೆಂಗಳೂರು : ನಿನ್ನೆ ಕಾಶ್ಮೀರದ ಪಹಲ್ಗಾಮ್ ಪಟ್ಟಣದಲ್ಲಿನಡೆದ ಉಗ್ರರ ದಾಳಿಯಲ್ಲಿ ಬೆಂಗಳೂರಿನ ಮತ್ತೊಬ್ಬ ಸಾಫ್ಟ್‌ವೇರ್ ಎಂಜಿನಿಯರ್ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ನಿನ್ನೆ ಶಿವಮೊಗ್ಗ ಹಾಗು ಬೆಂಗಳೂರಿನ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರು. ಇದೀಗ ಮತ್ತೋರ್ವ ಟೆಕ್ಕಿ ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದ ಮಧುಸೂದನ್ ಮೃತಪಟ್ಟವರು. ಮೂಲತಃ ಆಂಧ್ರಪ್ರದೇಶದವರಾದ ಮಧುಸೂದನ್ ಅವರು ರಾಮಮೂರ್ತಿ ನಗರದಲ್ಲಿ ಸ್ವಂತ ಮನೆ ನಿರ್ಮಿಸಿಕೊಂಡು ಕುಟುಂಬಸ್ಥರ ಜತೆಗೆ ನೆಲಸಿದ್ದರು. ಪತ್ನಿ, ಮಕ್ಕಳು ಹಾಗೂ ಸ್ನೇಹಿತರೊಂದಿಗೆ ಭಾನುವಾರ ಕಾಶ್ಮೀರದ ಪ್ರವಾಸಿ ತಾಣಗಳಿಗೆ ತೆರಳಿದ್ದರು. ಮಂಗಳವಾರ ಬೆಳಿಗ್ಗೆ ಪಹಲ್ಲಾಮ್ ಪಟ್ಟಣವನ್ನು ತಲುಪಿದ್ದರು. ಪತ್ನಿ, ಮಕ್ಕಳು ಹಾಗೂ ಸ್ನೇಹಿತರು ತಿಂಡಿ ತರಲು ತೆರಳಿದ್ದರು. ಮಧುಸೂದನ್ ರಾವ್ ಅವರು ಹುಲ್ಲಿನ ಮೇಲೆ ಕುಳಿತಿದ್ದರು. ಆ ಸಂದರ್ಭದಲ್ಲಿ ನಡೆದ ಉಗ್ರರ ದಾಳಿಗೆ ಮಧುಸೂದನ್ ಅವರು ಬಲಿಯಾಗಿದ್ದಾರೆ ಎಂದು ಗೊತ್ತಾಗಿದೆ.
ಶ್ರೀನಗರ : ಜಮ್ಮು ಕಾಶ್ಮೀರದ ಅನಂತ್ ನಾಗನ ಪಹಲ್ಗಾಮ್ ನಲ್ಲಿ ನಿನ್ನೆ ಪ್ರವಾಸಿಗರ ಮೇಲೆ ಉಗ್ರರು ಭೀಕರವಾದ ಗುಂಡಿನ ದಾಳಿ ನಡೆಸಿದ್ದರು.ಈ ಒಂದು ಗುಂಡಿನ ದಾಳಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದು, ಅದರಲ್ಲಿ ಕರ್ನಾಟಕದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಇದೀಗ ಈ ಒಂದು ಘಟನೆಯ ಹಿಂದೆ ಪಾಪಿ ಪಾಕಿಸ್ತಾನದ ಕೈವಾಡ ಇರುವುದು ಬಟಾ ಬಯಲಾಗಿದೆ. ಹೌದು ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡ ಇದೀಗ ಬಯಲಾಗಿದೆ. ನಿನ್ನೆ ನಡೆದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನ ನಂಟಿರೋದು ಬಟಾ ಬಯಲಾಗಿದೆ. ಘಟನೆ ಹಿಂದೆ ಪಾಕಿಸ್ತಾನದ ಡಿಜಿಟಲ್ ಫೂಟ್ ಪ್ರಿಂಟ್ ಇರೋದು ಪತ್ತೆಯಾಗಿದೆ. ಅಲ್ಲದೇ LTE ಸಂಘಟನೆಯ ಡೆಪ್ಯುಟಿ ಚೀಫ್ ಸೈಫುಲ್ ಕಸೂರಿಯನ್ನು ಪಾಕಿಸ್ತಾನ ಛೂ ಬಿಟ್ಟು ಕಳ್ಳಾಟ ನಡೆಸುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. LET ಉಗ್ರ ಸಂಘಟನೆಯ ಉಗ್ರ ಕಸೂರಿ ಸೇರಿದಂತೆ ಅನೇಕ ಉಗ್ರರನ್ನು ಇದೀಗ ಪಾಕಿಸ್ತಾನ ಪೋಷಣೆ ಮಾಡುತ್ತಿದೆ. ಅಲ್ಲದೇ 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಕೈವಾಡ…













