Author: kannadanewsnow05

ಬೆಂಗಳೂರು : ರೋಗಿಯೊಬ್ಬ ಸರ್ಕಾರಿ ಆಸ್ಪತ್ರೆ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ರೋಗಿಯನ್ನ ಮುನಿಯಲ್ಲಪ್ಪ (45) ಎಂದು ತಿಳಿದುಬಂದಿದೆ. ಕಳೆದ ಜುಲೈ 16ರಂದು ಆಸ್ಪತ್ರೆಗೆ ದಾಖಲಾಗಿದ್ದ ಮುನಿಯಲ್ಲಪ್ಪ ಆಸ್ಪತ್ರೆಗೆ ದಾಖಲಾಗಿದ್ದ.ಅಸ್ತಮಾ ಹೊಟ್ಟೆ ನೋವು, ಜ್ವರ ಎಂದು ಮುನಿಯಲ್ಲಪ್ಪ ದಾಖಲಾಗಿದ್ದ. ಕೆಳ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಮುನಿಯಪ್ಪ ಬಳಲುತ್ತಿದ್ದ. ಆಸ್ಪತ್ರೆಗೆ ದಾಖಲಾಗಿ ಒಂದೇ ದಿನಕ್ಕೆ ಡಿಸ್ಚಾರ್ಜ್ ಆಗಿದ್ದ. ಇಂದು ಮತ್ತೆ ಆನೇಕಲ್ ತಾಲೂಕು, ಆಸ್ಪತ್ರೆಗೆ ಮುನಿಯಪ್ಪ ಬಂದಿದ್ದ. ಆಸ್ಪತ್ರೆಯ 2ನೇ ಮಹದಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆಸ್ಪತ್ರೆಯ ಬಿಲ್ಡಿಂಗ್ ನ ಸಜ್ಜಾದ ಮೇಲೆ ಮುನಿಯಲ್ಲಪ್ಪನ ಶವ ಬಿದ್ದಿತ್ತು. ಘಟನ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಮೈಸೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಗ್ಯಾಸ್ ಟ್ಯಾಂಕರ್ ಒಂದು ದಂಪತಿಗಳು ತೆರುಳುತ್ತಿದ್ದ ಬೈಕ್ ಗೆ ರಭಸವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಂಪತಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಈ ಒಂದು ಘಟನೆ ಮೈಸೂರಿನ ಕೂರ್ಗಳ್ಳಿ ಬಳಿ ರಿಂಗ್ ರಸ್ತೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಬೈಕ್ನಲ್ಲಿ ತೆರಳುತ್ತಿದ್ದ ಪತಿ ಚಂದ್ರು ಹಾಗೂ ಪತ್ನಿ ಪ್ರೇಮಾ ದುರ್ಮರಣ ಹೊಂದಿದ್ದಾರೆ. ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ದಂಪತಿಗಳ ದೇಹಗಳು ಛಿದ್ರ ಛಿದ್ರವಾಗಿವೆ. ಸ್ಥಳಕ್ಕೆ ವಿವಿ ಪುರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಹೌದು ನಿಗಮದಲ್ಲಿ ನಡೆದಿರುವಂತಹ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗೆ ಹಾಜಾರಾಗುವಂತೆ ಇಡಿ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಇದೀಗ ವಿಚಾರಣೆ ಹಾಜರಾಗಿದ್ದಾರೆ. ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿಯಲ್ಲಿ ಬಸನಗೌಡ ದದಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆ ಬಸನಗೌಡ ದದ್ದಲ್ ಅವರಿಗೆ ಎಸ್ಐಟಿ ಅಧಿಕಾರಿಗಳು ಮೂರು ಬಾರಿ ನೋಟಿಸ್ ನೀಡಿದರು. ಬಳಿಕ ಎಸ್ಐಟಿ ವಿಚಾರಣೆಗೆ ಹಾಜರಾದ ಅವರು, ನನ್ನನ್ನು ಅರೆಸ್ಟ್ ಮಾಡಿ ಎಂದು ಎಸ್ಐಟಿ ಅಧಿಕಾರಿಗಳ ಮುಂದೆ ಮನವಿ ಮಾಡಿದರು. ಅದಾದ ಬಳಿಕ ಅವರು ಎಲ್ಲಿಯೂ ಕಾಣಿಸದೆ ನಾಪತ್ತೆಯಾಗಿದ್ದರು. ಕಳೆದ ಜುಲೈ 15 ರಂದು ವಿಧಾನ ಮಂಡಲ ಅಧಿವೇಶನ ಆರಂಭವಾಗುತ್ತಿದ್ದಂತೆ ತಕ್ಷಣ ವಿಧಾನಸೌಧದಲ್ಲಿ ದದ್ದಲ್ ಅವರು ಪ್ರತ್ಯಕ್ಷರಾಗಿದ್ದರು.…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಜೈಲಿನ ಊಟ ನನಗೆ ಸರಿ ಹೊಂದುತ್ತಿಲ್ಲ, ಹಾಗಾಗಿ ಮನೆಯ ಊಟ, ಪುಸ್ತಕ ಸೇರಿದಂತೆ ಹಲವು ವಸ್ತುಗಳಿಗಾಗಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು ನಾಳೆ ಮಧ್ಯಾಹ್ನ 2 ಗಂಟೆಗೆ ವಿಚಾರಣೆ ಮುಂದೂಡಿದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ನಟ ದರ್ಶನ್ ಸಲ್ಲಿಸಿದ್ದ ವಿಚಾರಣೆ ನಡೆಯುತ್ತಿದ್ದು, ಮನೆಯಿಂದ ಊಟ ಹಾಸಿಗೆ ಪುಸ್ತಕ ಕೋರಿ ದರ್ಶನವರು ರಿಟ್ ಅರ್ಜಿಯನ್ನು ಸಲ್ಲಿಸಿದ್ದರು.ಈ ಕುರಿತು ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನಟ ದರ್ಶನ್ ಅರ್ಜಿಗೆ ಸರ್ಕಾರ ಹಾಗೂ ತನಿಖಾಧಿಕಾರಿ ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ವೇಳೆ ನ್ಯಾಯ ಪೀಠವು ಸರ್ಕಾರ ಆಕ್ಷೇಪಣೆ ಸಲ್ಲಿಸಬಹುದು. ಆದರೆ ತನಿಖಾಧಿಕಾರಿ ಅಲ್ಲ ಎಂದು ದರ್ಶನ್ ಪರ ಹಿರಿಯ ವಕೀಲ ಕೆಎನ್ ಫಣಿಂದ್ರ ವಾದ ಮಂಡಿಸಿದರು. ಈ ವೇಳೆ ನ್ಯಾಯಾದೀಶರು ನಾಳೆ ಮಧ್ಯಾಹ್ನ 2:30 ಕ್ಕೆ ಅರ್ಜಿ ವಿಚಾರಣೆ…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಪೊಲೀಸರು ಬಿವೈ ವಿಜಯೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು. ಬೆಂಗಳೂರಿನ ಫ್ರೀಡಂ ಪಾರ್ಕ್ ನಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಸಂದರ್ಭದಲ್ಲಿ ಬಿ ವೈ ವಿಜಯೇಂದ್ರ ಅವರು ಬ್ಯಾರಿಕೇಡ್ ಹತ್ತಿ ಹೋಗಲು ಪ್ರಯತ್ನಿಸಿದಾಗ ಬಿ ವೈ ವಿಜಯೇಂದ್ರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ಒಂದು ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ಸಾವಿರಾರು ಕಾರ್ಯಕರ್ತರು, ಮುಖಂಡರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಈ ವೇಳೆ ರಸ್ತೆಗೆ ಅಡ್ಡಲಾಗಿ ಬ್ಯಾರಿ ಕೇಡುಗಳನ್ನು ಅಳವಡಿಕೆ ಮಾಡಲಾಗಿತ್ತು. ಬ್ಯಾರಿಕೆಡ್ ಹತ್ತಿ ಹೋಗಲು ಬಿವೈ ವಿಜಯೇಂದ್ರ ಯತ್ನಿಸಿದರು. ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರನ್ನು ಖಾಕಿ ವಶಕ್ಕೆ ಪಡೆದುಕೊಂಡಿದೆ.

Read More

ಬೆಂಗಳೂರು : ನಕಲಿ ಜಮೀನು ದಾಖಲೆಗಳನ್ನು ಸೃಷ್ಟಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ​2 ಕೋಟಿ ರೂ.ಗೂ ಹೆಚ್ಚು ಸಾಲ ಪಡೆದು ವಂಚಿಸಿದ್ದ ಮೂವರು ಆರೋಪಿಗಳನ್ನು ಬ್ಯಾಂಕ್​ ಮ್ಯಾನೇಜರ್​ ನೀಡಿದ ದೂರಿನನ್ವಯ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಹೌದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬೆಂಗಳೂರು ಕೇಂದ್ರ ಶಾಖೆಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ನೀಡಿದ್ದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದರು.ಶಿವಣ್ಣ, ಸೈಯ್ಯದ್ ಹಾಶಿಂ ಹಾಗೂ ರಂಗನಾಥ ಬಂಧಿತರು ಎಂದು ತಿಳಿದುಬಂದಿದೆ. ಬೆಂಗಳೂರು ಉತ್ತರ ತಾಲ್ಲೂಕಿನ ಮಲ್ಲತ್ತಹಳ್ಳಿ ವಿಲೇಜ್‌ನಲ್ಲಿರುವ ಆಸ್ತಿಯನ್ನು ಶಿವಣ್ಣ ಎಂಬವರಿಂದ ಖರೀದಿಸಲು ಸಾಲಕ್ಕಾಗಿ ಎಸ್‌ಬಿಐಗೆ ಅಚ್ಚುಕುಟ್ಟನ್ ಎಂಬವರು ಅರ್ಜಿ ಸಲ್ಲಿಸಿದ್ದರು. 2023ರ ಜನವರಿಯಲ್ಲಿ 1.16 ಕೋಟಿ ರೂ ಸಾಲವನ್ನು ಬ್ಯಾಂಕ್ ಮಂಜೂರು ಮಾಡಿತ್ತು. ಮೂರು ಕಂತಿನ ಬಳಿಕ ನಂತರದ ಕಂತುಗಳನ್ನು ಪಾವತಿಸದಿದ್ದಾಗ ಬ್ಯಾಂಕ್‌ನಿಂದ ಅಚ್ಚುಕುಟ್ಟನ್‌ಗೆ ನೋಟಿಸ್ ಜಾರಿಯಾಗಿತ್ತು. ಆದರೆ ನೋಟಿಸ್ ಸ್ವೀಕೃತವಾಗದಿದ್ದಾಗ ಬ್ಯಾಂಕ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ನಿವೇಶನ ಬೇರೆಯವರ ಹೆಸರಿನಲ್ಲಿರುವುದು ಪತ್ತೆಯಾಗಿತ್ತು. ಅನುಮಾನಗೊಂಡ ಅಧಿಕಾರಿಗಳು ಪರಿಶೀಲಿಸಿದ್ದು,…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ಮಾಡಿರುವ 5 ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಎಸ್‌ಟಿಪಿ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಎಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು ಈ ಒಂದು ಪ್ರತಿಭಟನೆಯಲ್ಲಿ ಬಿಜೆಪಿಯ ಮಾಜಿ ಸಂಸದ ಸಿಎಂ ಸಿದ್ದರಾಮಯ್ಯ ಬಿಸ್ಕೆಟ್ ಹಾಕಿ ದಲಿತ ನಾಯಕರನ್ನು ಖರೀದಿಸಿದ್ದಾರೆ ಎಂದು ಕಿಡಿ ಕಾರಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ದಲಿತ ನಾಯಕರನ್ನು ಬಿಸ್ಕೆಟ್ ಹಾಕಿ ಸಿದ್ದರಾಮಯ್ಯ ಖರೀದಿಸಿದ್ದಾರೆ ದಲಿತರಿಗೆ ಮೀಸಲಿಟ್ಟ ಹಣ ಕಾಂಗ್ರೆಸ್ ಸರ್ಕಾರ ಲೂಟಿ ಹೊಡೆದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಸಿದ್ದರಾಮಯ್ಯ ಅಹಿಂದ ನಾಯಕ ಅಲ್ಲ. ಅಹಿಂದ ವಿರೋಧೀ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದ್ದ ಖಳನಾಯಕ. ಸಿದ್ಧರಾಮಯ್ಯ ಖರ್ಗೆಯವರು ಸಿಎಂ ಆಗುವುದನ್ನು ತಪ್ಪಿಸಿದ್ದಾರೆ ಹಾಗಾಗಿ ಅವರು ಒಬ್ಬ ಖಳನಾಯಕ ಎಂದು ಮಾಜಿ ಸಂಸದ ಮುನಿಸ್ವಾಮಿ ಕಿಡಿಕಾರಿದರು.

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ-ಅಂಕೋಲ ಬಿಜೆಪಿ ಶಾಸಕ ಸತೀಶ್ ಸೈಲ್ ಈವರೆಗೂ ಈ ಒಂದು ದುರಂತದಲ್ಲಿ 15 ಜನರು ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದರು. ಘಟನೆ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಡ್ಡ ಕುಸಿದು 15 ಜನರು ಮೃತ ಪಟ್ಟಿದ್ದಾರೆ ಎಂದು ಮತ್ತೆ ಸ್ಪಷ್ಟಪಡಿಸಿದ್ದೇನೆ ಎಂದು ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ ಹೇಳಿಕೆ ನೀಡಿದ್ದಾರೆ. ದುರಂತದಲ್ಲಿ 15 ಜನರು ಮೃತಪಟ್ಟಿರುವ ಬಗ್ಗೆ ಪಕ್ಕಾ ಮಾಹಿತಿ ಇದೆ ಎಂದರು. ಘಟನೆಗೆ ಸಂಬಂಧಿಸಿದಂತೆ ಸಾವಿನ ಪ್ರಮಾಣ 15 ಕ್ಕೂ ಹೆಚ್ಚು ಆಗಬಹುದು. ಆದರೆ ಕಡಿಮೆ ಅಂತೂ ಆಗಲ್ಲ. ಸಿಎಂ, ಡಿಸಿಎಂ ಹಾಗೂ ಸಚಿವರು ಸ್ಥಳಕ್ಕೆ ಬರಬೇಕೆಂದು ಆಗ್ರಹ ಮಾಡುತ್ತೇನೆ. ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಪರಿಹಾರ ಕೊಡಲು ಹೋದಾಗ ನೋವು ಆಗುತ್ತೆ ಎಂದು ಬೇಸರ ವ್ಯಕ್ತಪಡಿಸಿದರು. ನಮಗೆ ನಿಮ್ಮ ತಾತ್ಕಾಲಿಕ ಪರಿಹಾರ ಬೇಡವೇ ಬೇಡ. ಕಾರವಾರ ಅಂಕೋಲಾ ಕ್ಷೇತ್ರದ…

Read More

ಬೆಂಗಳೂರು : ಪತಿ-ಪತ್ನಿ ನಡುವಿನ ಜಗಳವು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 498 ಅಡಿ ಕ್ರೌರ್ಯ ಮತ್ತು ಕಿರುಕುಳದ ಅಪರಾಧ ಕೃತ್ಯವಾಗುವುದಿಲ್ಲ. ಕ್ರೌರ್ಯ ಎಂದರೆ ಉದ್ದೇಶ ಪೂರ್ವಕ ಕೃತ್ಯವಾಗಿದ್ದು, ಆತ್ಮಹತ್ಯೆಗೆ ಶರಣಾಗಲು ಅಥವಾ ಜೀವಕ್ಕೆ ಅಪಾಯ ತಂದು ಕೊಳ್ಳಲು ವಿವಾಹಿತ ಮಹಿಳೆಯನ್ನು ಪ್ರಚೋದಿ ಸಿರಬೇಕಾಗುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ದೋಷಿಯಾಗಿ ಪರಿಗಣಿಸಿ ಶಿಕ್ಷೆ ವಿಧಿಸಿದ ವಿಚಾರಣಾ ನ್ಯಾಯಾಲಯದ ಆದೇಶ ರದ್ದು ಕೋರಿ ಮಡಿಕೇರಿ ತಾಲೂಕಿನ ಮುರ್ನಾಡ್ ಗ್ರಾಮದ ನಿವಾಸಿಗಳಾದ ಬಿ.ಎಸ್.ಜನಾರ್ದನ (52) ಮತ್ತು ಆತನ ತಾಯಿ ಬಿ.ಎಸ್.ಉಮಾವತಿ (73) ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಪುರಸ್ಕರಿಸಿದ ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ್ ಅವರ ಪೀಠ ಈ ಆದೇಶ ಮಾಡಿದೆ. ಸೆಕ್ಷನ್ 498 ಅಡಿಯಲ್ಲಿ ಕ್ರೌರ್ಯ ಮತ್ತು ಕಿರುಕುಳ ಅಪರಾಧ ಕೃತ್ಯವಾಗುವುದಿಲ್ಲ. ಪತ್ನಿಯ ಮೇಲೆ ಪತಿ ಹಾಗೂ ಕುಟುಂಬಸ್ಥರಿಂದ ಕ್ರೌರ್ಯ ನಡೆದಿರುವುದನ್ನು ಪ್ರಾಸಿಕ್ಯೂಷನ್ ಸಾಬೀತುಪಡಿಸಬೇಕಾಗುತ್ತದೆ. ಕ್ರೌರ್ಯ ಎಂದರೆ ಉದ್ದೇಶಪೂರ್ವಕ ಕೃತ್ಯವಾಗಿದ್ದು, ಆತ್ಮಹತ್ಯೆ, ಗಂಭೀರ ಗಾಯ ಅಥವಾ ಜೀವಕ್ಕೆ ಅಪಾಯ…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, ಈ ಒಂದು ಪ್ರಕರಣದಲ್ಲಿ ಬಂಧಿತರಾಗಿರುವ ನಾಗೇಂದ್ರಗೆ ED ಅಧಿಕಾರಿಗಳು ಸರ್ಕಾರದ ಪ್ರಮುಖರು ಭಾಗಿಯಾಗಿದ್ದಾರೆ ಎಂದು ಬಲವಂತದ ಹೇಳಿಕೆ ನೀಡಿ ಎಂದು ಹೆದರಿಸುತ್ತಿದ್ದಾರೆ ಎಂದು ಆರೋಪಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನಮನ್ನಣೆ ಕಳೆದುಕೊಂಡು ಕರ್ನಾಟಕದಲ್ಲಿ ಅಧಿಕಾರ ಕಳೆದುಕೊಂಡು ದೇಶದಲ್ಲೂ ಸಹ ಲೋಕಸಭೆ ಚುನಾವಣೆಯಲ್ಲಿ ದುರ್ಬಲವಾಗಿರುವಂತಹ ಬಿಜೆಪಿಯು ಮೊದಲಿನಿಂದಲೂ ಸಹ ವಾಮ ಮಾರ್ಗಗಳನ್ನು ಬಳಸಿ ವಿರೋಧ ಪಕ್ಷಗಳ ಸರ್ಕಾರಗಳನ್ನು ಬುಡಮೇಲು ಮಾಡಿ ತನ್ನ ಏಕ ಪಕ್ಷ ಸಾಮ್ರಾಜ್ಯವನ್ನು ದೇಶದಲ್ಲಿ ಕಟ್ಟಿರುವಂತಹ ಪ್ರಯತ್ನ ಮಾಡಿರುವುದು ಬೇಕಾದಷ್ಟು ಉದಾಹರಣೆಗಳಿವೆ. ಇದಕ್ಕೆ ಇಡಿ, ಐಟಿ, ಸಿಬಿಐ ಬಳಸಿಕೊಂಡು ವಿರೋಧ ಪಕ್ಷಗಳ ಮೇಲೆ ನೇರ ದಾಳಿಗಳನ್ನು ಮಾಡುತ್ತಾ ಬಂದಿದ್ದಾರೆ. ಇಡಿ ಐಟಿ ಸಿಬಿಐ ಗಳನ್ನು ಸರ್ಜಿಕಲ್ ಸ್ಟ್ರೈಕ್ ತರ ವಿರೋಧ ಪಕ್ಷಗಳ ಮೇಲೆ…

Read More