Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆ ವಿಚಾರವಾಗಿ ಹಲವು ಬಾರಿ ಗೊಂದಲದ ಸಂದೇಶಗಳನ್ನು ಪ್ರಕಟಿಸಿ ಕೊನೆಗೆ ತಡೆಹಿಡಿರುವ ಬಗ್ಗೆ ಘೋಷಣೆ ಮಾಡಿರುವ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಇದು ‘ಯು ಟರ್ನ್ ಸರ್ಕಾರ’ ಎಂದು ಕಿಡಿಕಾರಿದ್ದಾರೆ. ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ. ‘ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ’ ಎಂದು ಪರಿಗಣಿಸಿ ಈ…
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಳೆದ ಎರಡು ದಿನಗಳ ಹಿಂದೆ ಗುಡ್ಡ ಕುಸಿದು ಹಲವರು ಮಣ್ಣಿನ ಅಡಿ ಸಿಲುಕಿ ಸಾವನ್ನಪ್ಪಿದ್ದರು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಬಾಲಕಿ ಅವಂತಿಕ ಹಾಗೂ ಇದೀಗ ಟ್ಯಾಂಕರ್ ಚಾಲಕನ ಶವ ಪತ್ತೆಯಾಗಿದೆ. ಹೌದು ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲ ತಾಲೂಕಿನ ಮಂಜಗುಣಿ ಬಳಿ ಮತ್ತೊಂದು ಶವ ಪತ್ತೆಯಾಗಿದೆ. ತಮಿಳುನಾಡು ಮೂಲದ ಚಾಲಕ ಚಿನ್ನ (55) ಶವ ಪತ್ತೆಯಾಗಿದೆ ಗುಡ್ಡ ಕುಸಿತ ಪ್ರಕರಣದಲ್ಲಿ ಇದುವರೆಗೂ 6 ಜನರ ಮೃತದೇಹ ಪತ್ತೆಯಾಗಿವೆ. ಅಲ್ಲದೆ ಇಂದು ಬೆಳಿಗ್ಗೆ ಘಟನೆಯಲ್ಲಿ ಮಣ್ಣಿನೊಂದಿಗೆ ಕೊಚ್ಚಿ ಹೋಗಿದ್ದ ಒಂದೇ ಕುಟುಂಬದ ನಾಲ್ವರ ಮೃತ ದೇಹ ನಿನ್ನೆ ಪತ್ತೆಯಾಗಿತ್ತು. ಇದೀಗ ಇಂದು ಬೆಳಿಗ್ಗೆ 5 ವರ್ಷದ ಬಾಲಕಿ ಅವಂತಿಕ ಮೃತದೇಹ ಕೂಡ ಪತ್ತೆಯಾಗಿದೆ.…
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಕುಟುಂಬವೊಂದು ಕೊಚ್ಚಿ ಹೋದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ನಾಪತ್ತೆಯಾಗಿದ್ದ 5 ವರ್ಷದ ಬಾಲಕಿ ಅವಂತಿಕ ಮೃತ ದೇಹ ಪತ್ತೆಯಾಗಿದೆ. ಹೌದು ಗುಡ್ಡ ಕುಸಿತ ದುರಂತದಲ್ಲಿ ಗಂಗೆಕೊಳ್ಳದ ಸಮುದ್ರ ತೀರದಲ್ಲಿ 5 ವರ್ಷದ ಬಾಲಕಿ ಅವಂತಿಕ ಶವ ಪತ್ತೆಯಾಗಿದೆ. ತಕ್ಷಣ ಅವಂತಿಕಾಳ ಮೃತದೇಹವನ್ನು ಗೋಕರ್ಣದ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ನಿನ್ನೆ ಕುಟುಂಬದ ಇತರೆ ಸದಸ್ಯರ ಮೃತದೇಹ ಪತ್ತೆಯಾಗಿತ್ತು. ಲಕ್ಷ್ಮಣ ನಾಯಕ, ಶಾಂತಿ, ಪುತ್ರ ರೋಶನ್ ಮೃತ ದೇಹ ಪತ್ತೆಯಾಗಿತ್ತು. ಇದೀಗ ಗಂಗೆ ಕೊಳದ ಸಮುದ್ರ ತೀರದಲ್ಲಿ ಲಕ್ಷ್ಮಣ ಪುತ್ರಿ ಅವಂತಿಕಾಳ ಮೃತದೇಹ ಪತ್ತೆಯಾಗಿದೆ. ಸದ್ಯ ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಇನ್ನು ಕೆಲವರು ಮಣ್ಣಿನಡಿ ಸಿಲುಕಿರುವ ಶಂಕೆ ಇದ್ದಿದ್ದರಿಂದ ಕಾರ್ಯಚರಣೆ ಮುಂದುವರೆದಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದು, ಪೊಲೀಸರು ಎಷ್ಟೇ ಕಠಿಣವಾದಂತ ಕ್ರಮ ಕೈಗೊಂಡರು ಕೂಡ ಅವರ ಅಟ್ಟಹಾಸ ನಿಂತಿಲ್ಲ. ಇದೀಗ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯ ಸಮೀಪದಲ್ಲಿ ಮನೆಯ ಮುಂದೆ ನಿಲ್ಲಿಸಿದ ಕಾರಿನ ಮೇಲೆ ದಾಳಿ ಮಾಡಿದ್ದು, ಕಾರಿನ ಗಾಜು ಪುಡಿ ಪುಡಿ ಮಾಡಿ ಅಲ್ಲಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಹೌದು ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಪುಡಿ ಪುಡಿ ಮಾಡಿದ ಪುಂಡರು, ಲಾಂಗ್ ನಿಂದ ಕಾರಿನ ಮೇಲೆ ದಾಳಿ ಮಾಡಿ ಗಾಜು ಪುಡಿಪುಡಿ ಮಾಡಿದ್ದಾರೆ. ಕಾರಿನಲ್ಲಿ ಬಂದ ಸುಕೀಲ್ ಗೌಡ ಹಾಗೂ ಕಪಿಲ್ ಪುರೋಹಿತ್ ಎಂಬುವವರಿಂದ ಈ ಒಂದು ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಕುಡಿದ ಮತ್ತಿನಲ್ಲಿ ಆರೋಪಿಗಳು ಬಂದು ಈ ರೀತಿ ಪುಂಡಾಟ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಒಂದು ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಸಮೀಪದಲ್ಲಿಯೇ ನಡೆದಿರುವಂತದ್ದು, ಹಾಗಾಗಿ ಘಟನೆ ಕುರಿತಂತೆ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಈ ಕುರಿತು FIR ದಾಖಲಾಗಿದೆ.
ಶಿವಮೊಗ್ಗ : ಕರಾವಳಿ ಭಾಗದಲ್ಲಿ ವರುಣ ಇದೀಗ ಅಬ್ಬರಿಸುತ್ತಿದ್ದು ಹಲವು ಕಡೆ ಮಳೆಯ ತೀವ್ರತೆಯಿಂದ ಅವಾಂತರಗಳು ಕೂಡ ಸೃಷ್ಟಿಯಾಗಿವೆ. ಇದೀಗ ಉಡುಪಿ ಮತ್ತು ಶಿವಮೊಗ್ಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದರಿಂದ ಇಂದು ಉಡುಪಿ ಜಿಲ್ಲೆಯ ಎರಡು ತಾಲೂಕು ಹಾಗೂ ಶಿವಮೊಗ್ಗದ ಆರು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಶಿವಮೊಗ್ಗ ಜಿಲ್ಲೆಯ 6 ತಾಲೂಕುಗಳ ಶಾಲಾ ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ತೀರ್ಥಹಳ್ಳಿ, ಸೊರಬ, ಸಾಗರ, ಹೊಸನಗರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ ನೀಡಿ ಡಿಡಿಪಿಐ ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ. ಶಿಕಾರಿಪುರ ತಾಲ್ಲೂಕು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ ಬೈಂದೂರು ಹಾಗೂ ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದದ್ಯಾಕುಮಾರಿ…
ಹಾಸನ : ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತದಿಂದ ಹಲವರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಇದೀಗ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಚಲಿಸುತ್ತಿದ್ದ ಓಮ್ನಿ ಕಾರಿನ ಮೇಲೆ ಗುಡ್ಡ ಕುಸಿತ ಉಂಟಾಗಿದ್ದು, ಅದೃಷ್ಟಶಾತ್ ಕಾರಿನಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೌದು ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಗುಡ್ಡ ಕುಸಿತ ಉಂಟಾಗಿ ಓಮ್ನಿ ಕಾರೊಂದು ಮಣ್ಣಿನ ರಾಶಿಯ ಅಡಿ ಸಿಲಿಕಿದ ಘಟನೆ ಸಕಲೇಶಪುರ ತಾಲೂಕಿನ ದೊಡ್ಡ ತಪ್ಪಲು ಬಳಿ ಈ ಒಂದು ಘಟನೆ ನಡೆದಿದೆ. ಅದರೆ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿ ಸುಮಾರು ನಾಲ್ಕೈದು ಜನ ಪ್ರಯಾಣಿಸುತ್ತಿದ್ದು ಒಬ್ಬರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ. ಭೂಕುಸಿತದಿಂದ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಗುಡ್ಡ ಕುಸಿತದಿಂದಾಗಿ ಹೆದ್ದಾರಿ 75 ರಲ್ಲಿ ಟ್ರಾಫಿಕ್ ಉಂಟಾಗಿದ್ದು, ಸುಮಾರು 5 ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಆಗಿದೆ.
ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ BMRCL ಅಧಿಕಾರಿಗಳು ಸಿಹಿ ಸುದ್ದಿ ನೀಡಿದ್ದು ಹಳದಿ ಮಾರ್ಗವು ಈ ವರ್ಷದ ಅಂತ್ಯದ ವೇಳೆಗೆ ಶುರುವಾಗಲಿದೆ ಎಂದು ತಿಳಿಸಿದ್ದಾರೆ. ಪ್ರಾರಂಭಿಕವಾಗಿ 15 ನಿಮಿಷಗಳಿಗೆ ಒಂದರಂತೆ ಒಟ್ಟು ಎಂಟು ರೈಲುಗಳು ಸೇವೆಗೆ ಸಿದ್ಧವಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ತಿಳಿಸಿದೆ. ಹೌದು ಈಗಾಗಲೇ ಚಾಲಕ ರಹಿತ ಮೆಟ್ರೋ ಹೊಂದಿರುವ ಹಳದಿ ಮಾರ್ಗ ಡಿಸೆಂಬರ್ ತಿಂಗಳಲ್ಲಿ ಆರಂಭವಾಗಲಿದ್ದು 15 ನಿಮಿಷಗಳಿಗೆ ಬಂದರಂತೆ ಒಟ್ಟು 8 ರೈಲುಗಳನ್ನು ಬಿಡಲಾಗುತ್ತೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ಮತ್ತಷ್ಟು ರೈಲು ಬೋಗಿಗಳು ಆಗಸ್ಟ್ ತಿಂಗಳಲ್ಲಿ ಬೆಂಗಳೂರು ತಲುಪುವ ನಿರೀಕ್ಷೆಯಿದೆ. ಫೆಬ್ರವರಿಯಲ್ಲಿ ಚೀನಾದಿಂದ ಬಂದ ಆರು ಬೋಗಿಗಳನ್ನು ರೈಲಿನೊಂದಿಗೆ ಅಳವಡಿಸಿ ಜೂನ್ 13 ರಂದು ಹಳದಿ ಮಾರ್ಗದಲ್ಲಿ ಪೂರ್ಣ ಪ್ರಮಾಣದ ಪ್ರಯೋಗವನ್ನು ಮಾಡಲಾಗಿತ್ತು. ಆಸಿಲೇಷನ್ ಟ್ರಯಲ್ಸ್ ಮತ್ತು ಸೇಫ್ಟಿ ಕ್ಲಿಯರೆನ್ಸ್ ಸೇರಿದಂತೆ ಟ್ರಯಲ್ ರನ್‌ಗಳು ಸೆಪ್ಟೆಂಬರ್-ಅಕ್ಟೋಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಡಿಸೆಂಬರ್‌ನಲ್ಲಿ ವಾಣಿಜ್ಯ ಕಾರ್ಯಾಚರಣೆಗಳು ಪ್ರಾರಂಭವಾಗಬಹುದು. ಹಾಗಾಗಿ ನಮ್ಮ ಮೆಟ್ರೋ ಹಳದಿ…
ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವಂತ ಘಟನೆ ನಡೆದಿದ್ದು, ಮನೆಯೊಂದರಲ್ಲಿ ಇದ್ದಂತಹ ಬುದ್ಧಿಮಾಂದ್ಯ ಯುವತಿಯ ಮೇಲೆ ಅನ್ಯಕೋಮಿನ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಸಮೀರ್ ಅಬ್ಬಾಸ್ ಧಾಮಣೇಕರ(30) ಎಂದು ಹೇಳಲಾಗುತ್ತಿದೆ. ಹಾಗಾಗಿ ಸದ್ಯ ಈ ಒಂದು ಘಟನೆಯಿಂದ ಗ್ರಾಮ ಬಿಗುವಿನ ವಾತಾವರಣದಿಂದ ಕೂಡಿದೆ. ಇವತಿಗೆ ಮನೆಯವರು ಹೊರಗಡೆ ತೆರಳಿದ್ದಾಗ ಈ ವೇಳೆ ಮನೆಗೆ ಹೋಗಿದ್ದ ಆರೋಪಿ ಯುವತಿಯ ಬಟ್ಟೆ ಬಿಚ್ಚಿ ತಾನು ಕೂಡ ಬೆತ್ತಲಾಗಿದ್ದಾನೆ. ಈ ವೇಳೆ ಯುವತಿ ಕುಟುಂಬ ಸದಸ್ಯರೊಬ್ಬರು ಮನೆಗೆ ಆಗಮಿಸಿದಾಗ ಸಿಕ್ಕಿಬಿದ್ದಿದ್ದಾನೆ. ಯುವತಿ ಮನೆಯವರು ಸಮೀರ್ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಗ್ರಾಮಸ್ಥರಿಗೆ ವಿಷಯ ಗೊತ್ತಾಗುತ್ತಿದ್ದಂತೆ ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿ ಎಲ್ಲ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾಗಲಿದ್ದು, ಇಂದು ಮಧ್ಯಾಹ್ನದ ನಂತರ ವಿಡಿಯೋ ಕಾನ್ಫರೆನ್ಸ್ ಮೂಲಕ ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ. ಹೌದು ಇಂದು ಜಡ್ಜ್ ಎದುರುಗಡೆ ದರ್ಶನ್ ಮತ್ತು ಗ್ಯಾಂಗ್ ವಿಚಾರಣೆಗೆ ಹಾಜರಾಗುತ್ತಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳು ಇಂದು ಹಾಜರಾಗಲಿದ್ದಾರೆ.ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಸಾಧ್ಯತೆ ಎನ್ನಲಾಗುತ್ತಿದೆ. ಇಂದು ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಕೂಡ ನಡೆಯಲಿದೆ. ಅಲ್ಲದೆ ಜೈಲಿನಲ್ಲಿ ಮನೆ ಊಟ ಕೋರಿ, ದರ್ಶನ್ ಅರ್ಜಿ ಸಲ್ಲಿಸಿದರು. ಆದರೆ ಇದಕ್ಕೆ ಮನೆ ಊಟಕ್ಕೆ ಜೈಲಾಧಿಕಾರಿಗಳು ಆಕ್ಷೇಪಣೆ ಸಲ್ಲಿಸಿದ್ದಾರೆ. ಅಲ್ಲದೆ ತನಿಖಾಧಿಕಾರಿಗಳಿಂದಲು ಕೂಡ ಮನೆ ಊಟಕ್ಕೆ ಅಕ್ಷೆಪಣೆ ವ್ಯಕ್ತಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಮಧ್ಯಾಹ್ನದ ಬಳಿಕ ವಿಚಾರಣೆ ನಡೆಯಲಿದೆ. ಹೀಗಾಗಿ ನಟ ದರ್ಶನ್ ಮತ್ತು ಎಲ್ಲಾ ಹದಿನೇಳು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ದಲ್ಲಿ ನಡೆದ ಅಕ್ರಮ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರ ಇಡಿ ಕಸ್ಟಡಿ ಅವಧಿ ಇಂದು ಅಂತ್ಯವಾಗಿದ್ದು ಇಡಿ ಅಧಿಕಾರಿಗಳು ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ಬಿ ನಾಗೇಂದ್ರ ಅವರ ಇಡಿ ಕಚಡಿ ಅಂತ್ಯವಾಗಿದ್ದು, ಇಂದು ಇಡಿ ಅಧಿಕಾರಿಗಳು ಅವರನ್ನು ಕೋರ್ಟಿಗೆ ಹಾಜರುಪಡಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಯ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳ ಹಿಂದೆ ನಾಗೇಂದ್ರರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. 6 ದಿನಗಳಿಂದ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ವಿಚಾರಣೆ ನಡೆಸಿತ್ತು. ವಿಚಾರಣೆಯ ವೇಳೆ ನಾಗೇಂದ್ರ ಅವರು ಸಮರ್ಪಕವಾಗಿ ಉತ್ತರ ನೀಡದ ಕಾರಣ ಇಂದು ಮತ್ತೆ ಇಡಿ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ನಿನ್ನೆ ನಾಗೇಂದ್ರ ಅವರ ಪತ್ನಿ ಮಂಜುಳ…