Author: kannadanewsnow05

ಬೆಂಗಳೂರು : ನಿನ್ನೆ ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್‌ಗೆ ಪಂಚೆ ಧರಿಸಿ ಬಂದಿದ್ದ ರೈತರೊಬ್ಬರನ್ನು ಒಳಗೆ ಬಿಡದೆ ಅವಮಾನ ಮಾಡಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾಲ್ ವಿರುದ್ಧ ಕೆಪಿ ಅಗ್ರಹಾರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ನಿನ್ನೆ ಹಾವೇರಿ ಮೂಲದ ನಾಗರಾಜ್‌ ಎಂಬವರು ತಂದೆ ತಾಯಿಗೆ ಸಿನಿಮಾ ತೋರಿಸಲು ಅವರನ್ನು ಜಿ.ಟಿ ಮಾಲ್‌ಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಪಂಚೆ ಧರಿಸಿದ್ದಕ್ಕೆ ಅವರನ್ನು ಒಳಗೆ ಬಿಡದೆ ಅವಮಾನಿಸಿದ್ದರು. ಇದೀಗ ರೈತನನ್ನು ಅವಮಾನಿಸಿದ್ದ ಜಿಟಿ ಮಾಲ್ ವಿರುದ್ಧ ಬೆಂಗಳೂರಿನ ಕೆ ಪಿ ಅಗ್ರಹಾರ ಠಾಣೆಯಲ್ಲಿ FIR ದಾಖಲಾಗಿದೆ. ಮಾಲ್ ನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವಿರುದ್ಧ FIR ದಾಖಲಾಗಿದೆ. ರೈತ ಫಕೀರಪ್ಪಗೆ ಮಾಲ್ ನ ಸಿಬ್ಬಂದಿ ಅವಮಾನಿಸಿದ್ದರು. ಪಂಚೇ ಧರಿಸಿ ಬಂದಿದ್ದಕ್ಕೆ ರೈತನನ್ನು ಒಳಗೆ ಬಿಟ್ಟಿರಲಿಲ್ಲ. ಸಿಬ್ಬಂದಿ ಅರುಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಇದೀಗ ದೂರು ಸಲ್ಲಿಕೆಯಾಗಿದೆ. ಧರ್ಮರಾಜಗೌಡ ಎನ್ನುವವರ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ. ಘಟನೆ ಹಿನ್ನೆಲೆ? ಹಾವೇರಿ ಮೂಲದ…

Read More

ಬಾಗಲಕೋಟೆ : ಸದ್ಯ ರಾಜ್ಯಾದ್ಯಂತ ವಾಲ್ಮೀಕಿ ನಿಗಮ ಹಾಗೂ ಬಾಗಲಕೋಟೆ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಭಾರಿ ಸದ್ದು ಮಾಡತ್ತಿದ್ದು, ಈ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯ ಕಾರ್ಮಿಕ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರನೇ 2.83 ರೂ. ಕೋಟಿ ವಂಚಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಹೌದು ದ್ಯಾವಪ್ಪ ತಳವಾರ ವಂಚಕ ಹೊರಗುತ್ತಿಗೆ ಸಿಬ್ಬಂದಿ ಎಂದು ಹೇಳಲಾಗುತ್ತಿದ್ದು, ಸದ್ಯ ಬಾಗಲಕೋಟೆ ಸಿಇಎನ್ ಪೊಲೀಸರು ವಂಚನೆ ಮಾಡಿದ ನೌಕರನಿಂದ 37 ಲಕ್ಷ ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ, ಅವನ ಬ್ಯಾಂಕ್‌ನಲ್ಲಿದ್ದ 76 ಲಕ್ಷ ಹಣ ವನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ವಂಚಿಸಿದ ಇನ್ನೂ 1.70 ಕೋಟಿ ಹಣದ ಮೂಲವನ್ನು ಅಧಿಕಾರಿಗಳು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದು, ತನಿಖೆ ಮುಂದುವರಿಸಿದ್ದಾರೆ. ಕಟ್ಟಡ ಹಾಗೂ ಇತರೆ ನಿರ್ಮಾಣ ನೋಂದಾಯಿತ ಕಾರ್ಮಿಕ ಫಲಾನುಭವಿಗಳ ಮಕ್ಕಳಿಗೆ ಮದುವೆ ಹಾಗೂ ವೈದ್ಯಕೀಯ ವೆಚ್ಚದ ಧನ ಸಹಾಯವನ್ನು ಕಾರ್ಮಿಕ ಇಲಾಖೆಯಿಂದ ನೀಡಲಾಗುತ್ತಿದೆ. ಅವರಿಗೆ ಹಣ ಮಂಜೂರು ಮಾಡುವ…

Read More

ಬೆಂಗಳೂರು : ಬಿಲ್‌ ಪಾವತಿ ಮಾಡದ ಕಾರಣ ಗುತ್ತಿಗೆ ಪಡೆದ ಸಂಸ್ಥೆ ಆಹಾರ ಪೂರೈಕೆ ಮಾಡದ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದ 11 ಇಂದಿರಾ ಕ್ಯಾಂಟೀನ್‌ಗಳು ಬುಧವಾರದಿಂದ ಸ್ಥಗಿತಗೊಂಡಿವೆ ಎಂದು ತಿಳಿದುಬಂದಿದೆ. ಈ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆಯ ಕೆಯ ಗುತ್ತಿಗೆಯನ್ನು ಶೆಫ್ ಟಾಕ್ ಸಂಸ್ಥೆ ಪಡೆದು ಕೊಂಡಿದೆ. ಕಳೆದ 1 ವರ್ಷದಿಂದ ಇಂದಿರಾ ಕ್ಯಾಂಟೀನ್‌ಗಳಿಗೆ ಪೂರೈಕೆ ಮಾಡಿದ ಬಿಲ್ ಪಾವತಿ ಮಾಡಿಲ್ಲವೆಂದು ಬುಧವಾರದಿಂದ ಆಹಾರ ಪೂರೈಕೆಯನ್ನು ಏಕಾಏಕಿ ಸ್ಥಗಿತಗೊಳಿದೆ. ಸುಮಾರು 47 ಕೋಟಿ ರು. ಬಿಲ್ ಬಾಕಿ ಇದ್ದು, ಹಣ ಬಿಡುಗಡೆ ಮಾಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಹಲವು ಬಾರಿ ಮನವಿ ಮಾಡಿದರೂ ಹಣ ಬಿಡುಗಡೆ ಮಾಡಿಲ್ಲ ಎಂಬ ಕಾರಣಕ್ಕೆ ಆಹಾರ ಪೂರೈಕೆ ನಿಲ್ಲಿಸಿದೆ. ಹಲವು ದಿನಗಳ ಹಿಂದೆಯೇ ಈ 11 ಇಂದಿರಾ ಕ್ಯಾಂಟೀನ್‌ನಲ್ಲಿ ರಾತ್ರಿ ಊಟವನ್ನು ಸ್ಥಗಿತಗೊ ಳಿಸಲಾಗಿತ್ತು. ಬುಧವಾರದಿಂದ ಸಂಪೂರ್ಣ ವಾಗಿ ಬಂದ್ ಮಾಡಲಾಗಿದೆ. ಅಲ್ಲದೆ ಗುತ್ತಿಗೆ ಒಪ್ಪಂದದಲ್ಲಿ ಇಂದಿರಾ ಕ್ಯಾಂಟೀನ್ ಗಳ ನೀರಿನ ಬಿಲ್…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಫರ್ನಿಚರ್ ಶಾಪ್ನಲ್ಲಿ ಆಕಸ್ಮಿಕ ಬೆಂಕಿಯಿಂದ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ವಿಜ್ಞಾನ ನಗರದಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ.ಆದರೆ ಅದೃಷ್ಟಪಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೌದು ಬೆಂಗಳೂರಿನ ವಿಜ್ಞಾನ ನಗರದ ಬಸ್ ನಿಲ್ದಾಣದ ಬಳಿ ಇರುವ ಫರ್ನಿಚರ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಅಂಗಡಿ ಪೂರ್ತಿ ಬೆಂಕಿಗೆ ಆಹುತಿಯಾಗಿದೆ. ಶಾಪ್ ಕ್ಲೋಸ್ ಮಾಡಿದ ಬಳಿಕ ಈ ಒಂದು ಬೆಂಕಿ ಅವಘಡ ಸಂಭವಿಸಿದೆ. ಅದೃಷ್ಟಪಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ಕುರಿತಂತೆ ಭೈಯಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇಂದಿನ ಆಧುನಿಕ ಹಾಗೂ ತಂತ್ರಜ್ಞಾನದ ಯುಗದಲ್ಲಿ ಸಾಮಾನ್ಯವಾಗಿ ಹೈಸ್ಕೂಲಿನಲ್ಲೆ ಪೋಷಕರು ಮಕ್ಕಳ ಕೈಯಲ್ಲಿ ಮೊಬೈಲ್, ಕಂಪ್ಯೂಟರ್ ಅಂತ ಅವರ ಓದಿಗಾಗಿ ಏನೆಲ್ಲಾ ಮಾಡುತ್ತಾರೆ. ಕೆಲವು ಮಕ್ಕಳು ಅದರಿಂದ ಸದುಪಯೋಗ ಪಡೆದುಕೊಂಡರೆ ಇನ್ನೂ ಕೆಲವರು ಅದರಿಂದ ಹಾಳಾಗುತ್ತಾರೆ. ಇದೀಗ ಅಂತರ್ಜಾಲದ ಮೂಲಕ ಮಕ್ಕಳ ಆಶ್ಲೀಲ ಚಿತ್ರಗಳ ವೀಕ್ಷಣೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ ಅಪರಾಧವಾಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಹೌದು ಮಕ್ಕಳ ಆಶ್ಲೀಲ ಚಿತ್ರಗಳ ವೀಕ್ಷಣೆ ಮಾಡಿದ ಆರೋಪದಲ್ಲಿ ದಾಖಲಾದ ಪ್ರಕರಣ ರದ್ದು ಕೋರಿ ಹೊಸಕೋಟೆಯ ಎನ್. ಇನಾಯತುಲ್ಲಾ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ. ಅರ್ಜಿದಾರ ಇನಾಯತುಲ್ಲ ಅವರು 2023ರ ಮಾರ್ಚ್​ 23ರಂದು ಮಧ್ಯಾಹ್ನ 3.30ರಿಂದ 4.40ರ ಅವಧಿಯಲ್ಲಿ ತನ್ನ ಮೊಬೈಲ್​ ಮೂಲಕ ಮಕ್ಕಳ ಆಶ್ಲೀಲ ಚಿತ್ರಗಳನ್ನು ವೀಕ್ಷಣೆ ಮಾಡಿದ್ದರು. ಈ ಸಂಬಂಧ ಕೇಂದ್ರ ಸರ್ಕಾರ ಜಾರಿ ಮಾಡಿರುವ ಮಹಿಳೆ ಮತ್ತು ಮಕ್ಕಳ ಮೇಲಿನ…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಾರಿ ನಿರ್ದೇಶನಾಲಯ ವಿಸ್ತೃತ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಈ ಒಂದು ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರ ಕೈವಾಡ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಹೌದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ವಿಚಾರಕ್ಕೆ ಸಂಬಂಧಪಟ್ಟಂತೆ ಇಡಿ ಈಗ ವಿಸ್ತೃತ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, 89.65 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಜಾರಿ ನಿರ್ದೇಶನಾಲಯದಿಂದ ವಿಸ್ತೃತ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಹಗರಣ ಸಂಬಂಧ ನಾವು ನಾಲ್ಕು ರಾಜ್ಯಗಳ 23 ಕಡೆಗೆ ದಾಳಿ ನಡೆಸಿದ್ದೇವೆ. 18 ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ.ನಂತರ ಹಲವು ನಕಲಿ ಅಕೌಂಟ್ ಗಳಿಗೆ ಹೋಗಿ ಕ್ಯಾಶ್ ಆಗಿ ಮಾರ್ಪಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ಬಸನಗೌಡ ಗದ್ದಲ್ ಮನೆಯಲ್ಲಿ ದಾಖಲೆ ಪತ್ತೆಯಾಗಿದೆ. ಈ ಹಣವನ್ನು ಚುನಾವಣೆ ಹಾಗೂ…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ಬಿ ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ಇಡಿ ಅಧಿಕಾರಿಗಳು ಕಚೇರಿಗೆ ಕರೆತಂದು ವಿಚಾರಣೆ ನಡೆಸಿದದ್ದರು. ಇದೀಗ ವಿಚಾರಣೆ ಅಂತ್ಯವಾಗಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾ ವಿಚಾರಣೆ ಅಂತ್ಯವಾಗಿದೆ. ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಯಲ್ಲಿ ಮಂಜುಳಾ ಅವರನ್ನು ಅಧಿಕಾರಿಗಳ ವಿಚಾರಣೆ ನಡೆಸಿದ್ದರು. ವಿಚಾರಣೆಯ ಬಳಿಕ ಇಡಿ ಅಧಿಕಾರಿಗಳು ಅವರನ್ನು ಪುನಹ ಅಪಾರ್ಟ್ಮೆಂಟ್ನಲ್ಲಿ ಬಿಟ್ಟು ತೆರಳಿದ್ದಾರೆ. ನಾಗೇಂದ್ರ ರಾಮ್ಕಿ ಉತ್ಸವ ಅಪಾರ್ಟ್ಮೆಂಟಲ್ಲಿ ಬಿಟ್ಟು ಹೋಗಿದ್ದಾರೆ. ಸದ್ಯ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂದಿಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ.

Read More

ಉತ್ತರಕನ್ನಡ : ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಹಲವರು ಸಾವನ್ನಪ್ಪಿದ್ದರು. ಇದೀಗ ಕಳೆದ ಎರಡು ದಿನಗಳ ಹಿಂದೆ ಕಾಳಜಿ ಕೇಂದ್ರದಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಡೂರಿನಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಅನಿಲ್ ರಾಘೋಬ ಪೆಡ್ನೇಕರ್(65) ಎಂದು ತಿಳಿದುಬಂದಿದೆ.ಅನಿಲ್ ಅವರು ಜುಲೈ 17ರಂದು ಇಡೂರು ಪ್ರಾಥಮಿಕ ಶಾಲೆಯಲ್ಲಿರುವ ಕಾಳಜಿ ಕೇಂದ್ರಕ್ಕೆ ತೆರಳಿದ್ದರು. ಊರಿನಲ್ಲಿ ನೀರು ತುಂಬಿದ್ದರಿಂದ ಗೋವುಗಳ ರಕ್ಷಣೆಗೆ ಅನಿಲ್ ರಾಘೋಬ ಪೆಡ್ನೇಕರ್ ತೆರೆಳಿದ್ದರು. ಕಾಳಜಿ ಕೇಂದ್ರದಲ್ಲಿ ಮಧ್ಯಾಹ್ನ ಊಟ ಮುಗಿಸಿ ಮನೆಯಲ್ಲಿದ್ದ ದನಕರುಗಳನ್ನು ಬಿಡಲು ತೆರಳಿದ್ದರು. ಹಸುಗಳನ್ನು ರಕ್ಷಣೆ ಮಾಡಿ ಹಿಂತಿರುಗುವಾಗ ನೀರಿನ ಸೆಳೆತಕ್ಕೆ ಅನಿಲ್ ಕೊಚ್ಚಿ ಹೋಗಿದ್ದರು. ಈ ಬಗ್ಗೆ ನಿನ್ನೆ ಸಂಜೆ ಅನಿಲ್‌ ಕುಟುಂಬಸ್ಥರು ಕಾರವಾರ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ಅನಿಲ್‌ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಭೇಟಿ…

Read More

ಉತ್ತನಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಗೆ ಅನಾಹುತಗಳು ಮುಂದುವರೆದಿದ್ದು, ಅಂಕೋಲಾದ ಶಿರೂರಿನಲ್ಲಿ ಮಂಗಳವಾರ ಗುಡ್ಡ ಕುಸಿತ ದುರಂತ ಸಂಭವಿಸಿದ್ದು, ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಕೂಡ ಧರೆ ಕುಸಿದು ರಸ್ತೆ ಸಂಚಾರ ಬಂದ್ ಆಗಿದೆ. ಮಣ್ಣು ತೆರವು ಕಾರ್ಯಾಚರಣೆ ಸಾಗಿದೆ. ಈ ಹಿಂದೆ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದರೂ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿತ್ತು. ಆದರೆ, ಈ ಸಲ ಇನ್ನೂ ಒಂದು ದಿವಸ ಮಣ್ಣು ತೆರವುಗೊಳಿಸಲು ಸಮಯ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಎರಡು ಜೆಸಿಬಿ ಬಳಸಿ ಮಣ್ಣು ತೆರವು ಮಾಡಲಾಗುತ್ತಿದ್ದು, ಅದನ್ನು ಟಿಪ್ಪರ್ ಮೂಲಕ ಸಾಗಿಸಿ ಸಮೀಪದಲ್ಲೇ ಡಂಪ್ ಮಾಡಲಾಗುತ್ತಿದೆ. ಈ ರಸ್ತೆಯನ್ನು ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಸಾಗರಮಾಲಾ ಯೋಜನೆ ಅಡಿ ಆರ್.ಎನ್.ಎಸ್. ಕಂಪನಿಯಿಂದ ಕಾಮಗಾರಿ ಮಾಡಲಾಗುತ್ತಿದೆ. ಕೆಲವೆಡೆ ಗುಡ್ಡಗಳನ್ನು ಕಡಿದು ರಸ್ತೆ ಅಗಲೀಕರಣ ಮಾಡಿದ್ದು, ಪರಿಣಾಮ ಧರೆ ಕುಸಿತ ಸಂಭವಿಸಿದೆ. ಮುಖ್ಯವಾಗಿ ಜಿಲ್ಲೆಯ ಘಟ್ಟದ ಮೇಲಿನ‌ ಭಾಗವನ್ನು ಕರಾವಳಿಗೆ ಸೇರಿಸುವ ರಸ್ತೆ…

Read More

ಶಿವಮೊಗ್ಗ : ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, SIT ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಎಂದು ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಿಷ್ಠ ನೋಟಿಸ್ ಕೊಟ್ಟು ನಾಗೇಂದ್ರಗೆ ಅಧಿಕಾರಿಗಳು ವಿಚಾರಣೆಗೆ ಕರೆದಿಲ್ಲ. ಎಸ್ಐಟಿ ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಅವರಿಗೆ ಖುಷಿ ಬಂದ ರೀತಿ ತನಿಖೆ ಮಾಡಿದರೆ ನ್ಯಾಯ ಸಿಗಲ್ಲ ಪರಿಶಿಷ್ಟ ಪಂಗಡಕ್ಕೆ ನ್ಯಾಯ ಸಿಗುವುದಕ್ಕೆ ಸಾಧ್ಯವೇ ಇಲ್ಲ ಎಂದರು. ಕಳೆದ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಸಮಸ್ಯೆ ಇರಲಿಲ್ಲ. ಕಳೆದ ಬಾರಿ ಸಮಸ್ಯೆ ಇಲ್ಲದೆ ಸಿದ್ದರಾಮಯ್ಯ ಆಡಳಿತ ಮಾಡಿದ್ದರು. ಅನುಭವಿ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು. ‘ಮುಡಾ’ ಹಗರಣದಲ್ಲಿ ಸಿಎಂ ಇಡೀ ಕುಟುಂಬವೆ ಭಾಗಿ ಇನ್ನೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಇಡೀ ಕುಟುಂಬ…

Read More