Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದ್ದು, ಶೀಲ ಸಂಕೇಸಿ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆಯಾಗಿದೆ. ಬೆಂಗಳೂರಿನ ಅಮೃತಹಳ್ಳಿಯ ಗಂಗಮ್ಮ ಲೇಔಟ್ ನಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಶೀಲಸಂಖಿಸಿ ಪತ್ನಿ ಅಂಜಲಿಯನ್ನು (20) ಪತಿ ರವಿಚಂದ್ರನ್ ಕೊಲೆ ಮಾಡಿದ್ದಾನೆ. ತರಕಾರಿ ಅಂಗಡಿಯಲ್ಲಿ ಮೃತ ಅಂಜಲಿ ಕೆಲಸ ಮಾಡಿಕೊಂಡಿದ್ದಳು. ಟ್ರಾವೆಲ್ಸ್ ಕಚೇರಿಯಲ್ಲಿ ಪತಿ ರವಿಚಂದ್ರ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಕೊಲೆ ಕುರಿತಂತೆ ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪಥಸಂಚಲನಕ್ಕಾಗಿ ಆರ್ ಎಸ್ ಎಸ್ ನಿಂದ ಅರ್ಜಿ ಸಲ್ಲಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಕಲ್ಬುರ್ಗಿಯ ಹೈಕೋರ್ಟ್ ಪೀಠದಲ್ಲಿ ಇಂದು ಮತ್ತೆ ಅರ್ಜಿಯ ಕುರಿತು ವಿಚಾರಣೆ ನಡೆಯಲಿದೆ ಇಂದು ಮಧ್ಯಾಹ್ನ 2:30ಕ್ಕೆ ಕಲ್ಬುರ್ಗಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿಗಳು ವಿಚಾರಣೆ ನಡೆಸಲಿದ್ದಾರೆ. ಹೈಕೋರ್ಟ್ ಆದೇಶದಂತೆ ಎ ಜಿ ಶಶಿಕಿರಣಶೆಟ್ಟಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಶಾಂತಿ ಸಭೆ ನಡೆದ ಬಳಿಕ ವಿಚಾರಣೆ ನಡೆಯಲಿದೆ ಆರ್ ಎಸ್ ಎಸ್ ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಂ ಅವರು ವಾದ ಮಂಡಿಸಲಿದ್ದಾರೆ. ನವೆಂಬರ್ 13 ಅಥವಾ 16 ರಂದು ಆರ್ಎಸ್ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಅನುಮತಿ ಕೇಳಿದೆ. ಹೀಗಾಗಿ ಇಂದು ಆರ್ ಎಸ್ ಎಸ್ ಪಥ ಸಂಚಲನದ ದಿನಾಂಕ ನಿಗದಿ ಆಗುವ ಸಾಧ್ಯತೆ ಇದೆ. ಹಾಗಾಗಿ ಇಡೀ ರಾಜ್ಯದ ಜನತೆಯ ಚಿತ್ತ ಹೈಕೋರ್ಟ್ ಪೀಠದತ್ತ ಇದೆ.
ದಾವಣಗೆರೆ : ದಾವಣಗೆರೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನೀರಿನ ತೊಟ್ಟಿಗೆ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಆಯತಪ್ಪಿ ನಿರ್ಮಾಣ ಹಂತದ ಕಟ್ಟಡದಲ್ಲಿ ನಿರ್ಮಿಸಿದ್ದ ತೊಟ್ಟಿಯಲ್ಲಿ ಬಿದ್ದು ಅವಾಜ್ ಖಾನ್ ಎಂಬ 6 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಫುಟ್ ವೇರ್ ಅಂಗಡಿ ಮಾಲೀಕ ಅಫ್ತಾಜ್ ತಮ್ಮ ಪುತ್ರ ಅವಾಜ್ ಖಾನ್ ನನ್ನು ಕರೆದುಕೊಂಡು ಅಂಗಡಿಗೆ ಬಂದಿದ್ದರು. ಮೂತ್ರ ವಿಸರ್ಜನೆಗೆಂದು ಬಾಲಕ ಅಂಗಡಿ ಪಕ್ಕದ ನಿರ್ಮಾಣ ಹಂತದ ಕಟ್ಟಡದೊಳಗೆ ಹೋಗಿದ್ದಾನೆ. ಬಾಲಕ ಎಲ್ಲೂ ಪತ್ತೆಯಾಗದ ಹಿನ್ನೆಲೆ ಪೋಷಕರು ಎಲ್ಲಾ ಕಡೆ ಹುಡುಕಾಟ ನಡೆಸಿದ್ದು, ನಂತರ ನೀರಿನ ತೊಟ್ಟಿಯಲ್ಲಿ ಬಾಲಕನ ಚಪ್ಪಲಿ ತೇಲುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಪ್ರತಿ ಟನ್ ಕಬ್ಬಿಗೆ 3500 ನಿಗದಿ ಮಾಡುವಂತೆ ಕಬ್ಬು ಬೆಳೆಗಾರರು ಈಗಾಗಲೇ ಭಾರಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಬೆಳಿಗ್ಗೆ ಕಾರ್ಖಾನೆ ಮಾಲೀಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು ಬಳಿಕ ಮಧ್ಯಾಹ್ನ 1 ಗಂಟೆಗೆ ರೈತ ಮುಖಂಡರ ಜೊತೆಗೆ ಸಿಎಂ ಸಭೆ ನಡೆಸಲಿದ್ದಾರೆ. ಆದರೆ ರೈತ ಮುಖಂಡರು ಈ ಒಂದು ಸಭೆಯನ್ನು ಬಹಿಷ್ಕರಿಸಿದ್ದು, ಕಾರ್ಖಾನೆ ಮಾಲೀಕರೊಂದಿಗೆ ಮಾತುಕತೆ ನಡೆಸಿ 3500 ಪ್ರತಿ ಟನ್ ಕಬ್ಬಿಗೆ ನಿಗದಿ ಮಾಡಿ ಎಂದು ಪಟ್ಟು ಹಿಡಿದಿದ್ದಾರೆ. ಈ ಮಧ್ಯ ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಚರ್ಚಿಸಲು ತುರ್ತು ಭೇಟಿಗೆ ಅವಕಾಶ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.ರಾಜ್ಯದಲ್ಲಿ ಕಬ್ಬು ಬೆಳೆಗಾರರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮಾತುಕತೆಗೆ ರಾಜ್ಯ ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದ್ದರೂ, ಪ್ರತಿಭಟನೆ ತೀವ್ರ ಸ್ವರೂಪಕ್ಕೆ ಹೋಗುತ್ತಿದೆ. ಇದರಿಂದ ರೈತ ಸಮುದಾಯದಲ್ಲಿ ಪ್ರಕ್ಷುಬ್ಧತೆ ಹೆಚ್ಚಾಗಿದೆ.…
ಶಿವಮೊಗ್ಗ : ಕಳೆದ ಕೆಲವು ದಿನಗಳ ಹಿಂದೆ ನಾನು ಮುಂದಿನ ಜನ್ಮದಲ್ಲಿ ಸಾಬರಾಗಿ ಹುಟ್ಟುವೆ ಎಂಬ ಹೇಳಿಕೆ ನೀಡಿ ಸುದ್ದಿಯಾಗಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ತಿಳಿಸಿದ್ದು ಮುಂದಿನ ಚುನಾವಣೆಯಲ್ಲಿ ಪುತ್ರನಿಗೆ ಆಶೀರ್ವಾದ ಮಾಡುವಂತೆ ಮನವಿ ಮಾಡಿದ್ದಾರೆ. ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ನಡೆದ ಗ್ಯಾರಂಟಿ ಫಲಾನುಭವಿಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಇದೇ ನನ್ನ ಕೊನೆಯ ಚುನಾವಣೆ. ಇಷ್ಟು ವರ್ಷ ನೀವು ನಿಮ್ಮ ಸಹೋದರ ಎಂದು ತಿಳಿದು ನನಗೆ ಆಶೀರ್ವಾದ ಮಾಡಿದಂತೆ, ಮುಂದಿನ ಚುನಾವಣೆಯಲ್ಲಿ ನನ್ನ ಮಗ ಗಣೇಶ್ ಅವರಿಗೆ ನಿಮ್ಮ ಬೆಂಬಲ ಮತ್ತು ಆಶೀರ್ವಾದ ಇರಲಿ ಎಂದರು.
ಬೆಳಗಾವಿ : ಪ್ರತಿ ಟನ್ ಕಬ್ಬಿಗೆ 3500 ನಿಗದಿ ನೀಡುವಂತೆ ರೈತರು ಭಾರಿ ಪ್ರತಿಭಟನೆ ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ಕರೆದಿದ್ದ ಸಭೆಯನ್ನು ಕಬ್ಬು ಬೆಳೆಗಾರರು ಇದೀಗ ಬಹಿಷ್ಕಾರ ಮಾಡಿದ್ದಾರೆ. ಪ್ರತಿಭಟನೆ ಮುಂದುವರೆದಿದ್ದು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ನಲ್ಲಿ ಪ್ರತಿಭಟನೆ ಮುಂದುವರೆದಿದೆ. ಸಿಎಂ ಸಿದ್ದರಾಮಯ್ಯ ಅಹ್ವಾನ ತಿರಸ್ಕರಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಹೌದು ಪ್ರತಿ ಟನ್ ಕಬ್ಬಿಗೆ 3500 ನಿಗದಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು ರೈತರು ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆಗೆ ಹಿಂದೂ ಸಿಎಂ ಸಿದ್ದರಾಮಯ್ಯ ಹೈ ವೋಲ್ಟೇಜ್ ಸಭೆ ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಒಂದು ಸಭೆ ನಡೆಯಲಿದೆ. ಸಭೆಗೆ ಬರುವಂತೆ 82 ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ಸೂಚನೆ ನೀಡಲಾಗಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಕಬ್ಬು ಬೆಳೆಗಾರರ ಜೊತೆಗೆ ಸಿಎಂ ಸಭೆ ನಡೆಸಲಿದ್ದು ಒಟ್ಟು…
ತೆಲಂಗಾಣ : ಮುಸ್ಲಿಮರು ಎಂದರೆ ಕಾಂಗ್ರೆಸ್, ಮತ್ತು ಕಾಂಗ್ರೆಸ್ ಎಂದರೆ ಮುಸ್ಲಿಮರು. ಇಂದು, ಕಾಂಗ್ರೆಸ್ನ ಶಕ್ತಿ, ತೆಲಂಗಾಣ ಸರ್ಕಾರದ ಶಕ್ತಿ. ತೆಲಂಗಾಣ ಸರ್ಕಾರದ ಎರಡು ಕಣ್ಣುಗಳು ಮುಸ್ಲಿಮರು ಮತ್ತು ಹಿಂದೂಗಳು. ನಾವು ಇಬ್ಬರ ನಡುವೆ ಯಾವುದೇ ವ್ಯತ್ಯಾಸವನ್ನು ಎಂದಿಗೂ ನೋಡಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿವಾದದ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾನು ಜಿ ಕಿಶನ್ ರೆಡ್ಡಿ ಅವರನ್ನು ಕೇಳಲು ಬಯಸುತ್ತೇನೆ, ನಾವು ನಿಮ್ಮ ತಂದೆಯ ಆಸ್ತಿಯನ್ನು ಅಥವಾ ಗುಜರಾತ್ನಲ್ಲಿ ನರೇಂದ್ರ ಮೋದಿಯವರ ಭೂಮಿಯನ್ನು ಕೇಳುತ್ತಿಲ್ಲ. ತೆಲಂಗಾಣ ರಾಜ್ಯದಲ್ಲಿ ನಮ್ಮ ಮುಸ್ಲಿಂ ಸಹೋದರರ ಪಾಲು, ಸಂಪುಟದಲ್ಲಿ ಅವರ ಪಾಲಿಗಾಗಿ ನಾವು ಮೊಹಮ್ಮದ್ ಅಜರುದ್ದೀನ್ ಅವರನ್ನು ಸಚಿವರನ್ನಾಗಿ ಮಾಡಿದ್ದೇವೆ. ಸಚಿವರನ್ನಾಗಿ ಮಾಡುವ ಮೂಲಕ, ನಾವು ಅವರಿಗೆ ಅಲ್ಪಸಂಖ್ಯಾತ ಪಾಲನ್ನು ನೀಡಿದ್ದೇವೆ ಎಂದರು. https://twitter.com/ANI/status/1986133788888604742?t=E71yE78aXcX2C_r1upaT5Q&s=19
ಬೆಂಗಳೂರು : ಕನ್ನಡ ಚಿತ್ರರಂಗದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಇದೀಗ ಬಾಲಿವುಡ್ ವರೆಗೂ ಖ್ಯಾತಿಗಳಿಸಿರುವ ರಶ್ಮಿಕ ಮಂದನ್ನ ಹಾಗೂ ತೆಲುಗು ನಟ ವಿಜಯ್ ದೇವರಕೊಂಡ ಇತ್ತೀಚಿಗೆ ನಿಶ್ಚಿತರ್ಥ ಮಾಡಿಕೊಂಡಿದ್ದರು. ಅಲ್ಲದೇ ಅವರು ಮುಂದಿನ ವರ್ಷ ಫೆಬ್ರುವರಿಯಲ್ಲಿ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಕೂಡ ಹರಿದಾಡಿತ್ತು. ಆದರೆ ಇದೀಗ ಫೆಬ್ರುವರಿಯಲ್ಲಿ ಯಾವ ದಿನಾಂಕ ಎಲ್ಲಿ ಮದುವೆಯಾಗಲಿದ್ದಾರೆ ಎನ್ನುವ ಕುರಿತು ದಿನಾಂಕ ಮತ್ತು ಸ್ಥಳ ರಿವಿಲ್ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ thecinegossips ನಡೆಸಿದ ವೈರಲ್ ಪೋಸ್ಟ್ನಲ್ಲಿ, ಮದುವೆ ಫೆಬ್ರವರಿ 26, 2026 ರಂದು ಉದಯಪುರದ ಸುಂದರ ಅರಮನೆಯಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ. ಈ ವದಂತಿಯ ಬೆಳವಣಿಗೆ ಕಾಡ್ಗಿಚ್ಚಿನಂತೆ ಹರಡಿದ್ದು, ಅಭಿಮಾನಿಗಳು ಈಗಾಗಲೇ ಇದನ್ನು ವರ್ಷದ ಅತ್ಯಂತ ನಿರೀಕ್ಷಿತ ಮದುವೆ ಎಂದು ಕರೆಯುತ್ತಿದ್ದಾರೆ. ಆದಾಗ್ಯೂ, ನಟಿಯರಾದ ರಶ್ಮಿಕಾ ಮಂದಣ್ಣ ಅಥವಾ ವಿಜಯ್ ದೇವರಕೊಂಡ ಇಬ್ಬರೂ ಅಧಿಕೃತವಾಗಿ ಈ ಸುದ್ದಿಯನ್ನು ದೃಢಪಡಿಸಿಲ್ಲ ಅಥವಾ ನಿರಾಕರಿಸಿಲ್ಲ. ವರದಿಗಳ ಪ್ರಕಾರ, ಈ ಜೋಡಿಯ ನಿಶ್ಚಿತಾರ್ಥವು ಅಕ್ಟೋಬರ್ 2025 ರಲ್ಲಿ ಹೈದರಾಬಾದ್ನಲ್ಲಿ…
ಬೆಂಗಳೂರು : ಕಬ್ಬಿನ ದರ ಹೆಚ್ಚಳ ಮಾಡುವಂತೆ ಬೆಳಗಾವಿ ಜಿಲ್ಲೆಯ ರೈತರು ಪ್ರತಿಭಟನೆ ಮಾಡುತ್ತಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಇಂದು ಬೆಳಿಗ್ಗೆ 11 ಗಂಟೆಗೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗೆ ಸಭೆ ನಡೆಸುತ್ತೇನೆ ಎಂದು ಸಚಿವ ಸಂಪುಟ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನಿನ್ನೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೈತರ ಪ್ರತಿಭಟನೆಯ ಬಗ್ಗೆ ಚರ್ಚೆ ಮಾಡುತ್ತೇವೆ. ಅಲ್ಲದೇ ಎಫ್ಆರ್ಪಿ ಬಗ್ಗೆಯೂ ಚರ್ಚೆ ಮಾಡುತ್ತೇವೆ . ನಾಳೆ ಪ್ರಧಾನ ಮಂತ್ರಿಗಳಿಗೆ ನಾನು ಪತ್ರ ಬರೆಯುತ್ತೇನೆ. ನನಗೆ ಭೇಟಿ ಮಾಡೋಕೆ ಅವಕಾಶ ಕೊಡಬೇಕು ಅಂತ ಪತ್ರ ಬರೆಯುತ್ತೇನೆ ರೈತರ ಸಮಸ್ಯೆ ಬಗ್ಗೆ ನಾನು ಮೋದಿ ಜೊತೆಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು. ನಾಳೆ ಮಧ್ಯಾಹ್ನ 1 ಗಂಟೆಗೆ ರೈತ ಮುಖಂಡರ ಜೊತೆಗೆ ಸಭೆ ನಡೆಸುತ್ತೇನೆ. ಬೆಳಗಾವಿ ಹಾವೇರಿ ಬಾಗಲಕೋಟೆ ಹಾಗೂ ವಿಜಯಪುರ ರೈತರ ಜೊತೆ ಸಭೆ ನಡೆಸುತ್ತೇನೆ ಕಬ್ಬು ಬೆಳೆಗಾರರ ಬೇಡಿಕೆ…
ಗುಜರಾತ್ : 2013 ರ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಅವರಿಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಗುಜರಾತ್ ಹೈಕೋರ್ಟ್ ಗುರುವಾರ ಆರು ತಿಂಗಳ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ. ರಾಜಸ್ಥಾನ ಹೈಕೋರ್ಟ್ ವೈದ್ಯಕೀಯ ಆಧಾರದ ಮೇಲೆ ಇದೇ ರೀತಿಯ ಪರಿಹಾರವನ್ನು ನೀಡಿದ ಸುಮಾರು ಒಂದು ವಾರದ ನಂತರ, ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆರ್.ಟಿ.ವಾಚಾನಿ ಅವರ ವಿಭಾಗೀಯ ಪೀಠವು ಈ ಆದೇಶವನ್ನು ಹೊರಡಿಸಿತು. ರಾಜಸ್ಥಾನ ನ್ಯಾಯಾಲಯವು ಉಲ್ಲೇಖಿಸಿದ ಅದೇ ಆಧಾರದ ಮೇಲೆ 86 ವರ್ಷದ ಅಸಾರಾಂ ಅವರಿಗೆ ಜಾಮೀನು ವಿಸ್ತರಿಸುತ್ತಿರುವುದಾಗಿ ಗುಜರಾತ್ ಹೈಕೋರ್ಟ್ ಹೇಳಿದೆ. ಅವರ ಆರೋಗ್ಯ ಹದಗೆಡುತ್ತಿರುವುದನ್ನು ಉಲ್ಲೇಖಿಸಿ ಅವರ ವಕೀಲರು ಹಿಂದಿನ ಆದೇಶವನ್ನು ಸಲ್ಲಿಸಿದರು ಮತ್ತು ಸಡಿಲಿಕೆ ಕೋರಿದರು. ರಾಜ್ಯ ಸರ್ಕಾರವು ಈ ಅರ್ಜಿಯನ್ನು ವಿರೋಧಿಸಿ, ಅಸಾರಾಂ ಅವರನ್ನು ಬಿಡುಗಡೆ ಮಾಡುವ ಬದಲು ಅಹಮದಾಬಾದ್ನ ಸಬರಮತಿ ಕೇಂದ್ರ ಕಾರಾಗೃಹದಲ್ಲಿ ಸಾಕಷ್ಟು ಚಿಕಿತ್ಸೆ ಪಡೆಯಬಹುದು ಎಂದು ವಾದಿಸಿತು. ಕಳೆದ ತಿಂಗಳು, ಅಕ್ಟೋಬರ್ 29…














