Author: kannadanewsnow05

ವಿಜಯಪುರ : ಇಂದು ರಾಜ್ಯಾದಂತ್ಯ ಮೊಹರಂ ಹಬ್ಬ ಅತ್ಯಂತ ವಿಜೃಂಭಣೆಯಿಂದ ನಡೆಯಿತ್ತಿದ್ದೂ, ಕೆಲವು ದುರಂತಗಳು ಕೂಡ ಸಂಭವಿಸಿವೆ. ವಿಜಯಪುರದಲ್ಲಿ ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ಓರ್ವ ಸಾವು ವಾಹನ ಚಾಲಕ ಮೊಹಮ್ಮದ್ ಇನಾಂದಾರ್ (40) ಎನ್ನುವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ವಿಜಯಪುರದ ನಗರದ ಮೆಹತರ್ ಮಹಲ್ ಎದುರು ನಡೆದಿದೆ. ಎದುರಿಗೆ ಬರುತ್ತಿದ್ದ ಕಾರಿಗೆ ದಾರಿ ಬಿಡಲು ಚಾಲಕ ಸೈಡ್ ಗೆ ವಾಹನ ತೆಗೆದುಕೊಂಡಿದ್ದ, ಈ ವೇಳೆ ಟ್ರಾನ್ಸ್ಫರ್ ಮರ್ಗೆ ವಾಹನ ತಗುಲಿದರಿಂದ ವಿದ್ಯುತ್ ತಗುಲಿ ಸಾವನಪ್ಪಿದ್ದಾನೆ. ವಿದ್ಯುತ್ ಸ್ಪರ್ಶದಿಂದ ಮತ್ತೊರ್ವ ಸಾದಿಕ್ ಎಂಬಾತ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗದ್ದು, ಸ್ಥಳಕ್ಕೆ ಗೋಲಗುಂಬಜ್ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರ ಗೌಡ ಹಾಗೂ ಎಲ್ಲಾ 17 ಆರೋಪಿಗಳನ್ನು ತಕ್ಷಣ ಬಂಧಿಸಿದ್ದಾರೆ. ಆದರೆ ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಈ ರೀತಿ ಕ್ರಮ ಯಾಕೆ ಆಗಲಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದರು. ಇಂದು ವಿಧಾನಸಭೆಯಲ್ಲಿ ಮಾತನಾಡಿದ ಅವರು,ಕೊಲೆ ಮಾಡಿದರು ಅಂತ ದರ್ಶನ ಅಂಡ್ ತಂಡವನ್ನು ಬಂಧಿಸಿದರು. ಆದರೆ ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣಕ್ಕೆ ಸಂಬಂದಿಸಿದಂತೆ ಏಕೆ ಈ ರೀತಿ ತಕ್ಷಣ ಬಂದಿಸುವ ಕ್ರಮ ಆಗಲಿಲ್ಲ ಎಂದು ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಯತ್ನಾಳ್ ಪ್ರಶ್ನಿಸಿದರು. ಹಗರಣ ಬೆಳಕಿಗೆ ಬಂದ ಬಳಿಕ 40 ದಿನಗಳ ಕಳೆದರೂ ಕೂಡ ಯಾರನ್ನು ಬಂಧನ ಮಾಡಿಲ್ಲ ಯಾಕೆ? ನಮ್ಮ ಹೋರಾಟ ಬಳಿಕ ನಾಗೇಂದ್ರ ರಾಜೀನಾಮೆ ಪಡೆದರು. ನಂತರ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ನಡೆಸಿದರು. ಸರ್ಕಾರ ಯಾಕೆ ಹಳಿ ತಪ್ಪಿತೋ ಗೊತ್ತಿಲ್ಲ ಸಿಎಂ ಸಿದ್ದರಾಮಯ್ಯರ ಮೇಲೆ ಭಾರಿ ನಂಬಿಕೆ ಇತ್ತು ಎಂದರು ಯಾಕೆ…

Read More

ಬೆಂಗಳೂರು : ರಾಮನಗರದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ರಸ್ತೆಯಲ್ಲೇ ಕಾರೊಂದು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಕಾರಿನಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೌದು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕಾರೋಂದು ಹೊತ್ತಿ ಉರಿದಿರುವ ಘಟನೆ ರಾಮನಗರ ಜಿಲ್ಲೆಯ ಬಿಡದಿ ಸಮೀಪ ಶೇಷಗಿರಿ ಟೋಲ್ ಬಳಿ ಈ ಒಂದು ಘಟನೆ ನಡೆದಿದೆ. ಬಿಡದಿ ಬಳಿ ಇರುವ ಟೋಲ್ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಕಾರು ಒಂದು ಹೊತ್ತಿ ಉರಿದಿದೆ. ಕೂಡಲೇ ಕಾರಿನಲ್ಲಿದ್ದ ಕುಟುಂಬಸ್ಥರು ಕೆಳಗೆ ಇಳಿದಿದ್ದಾರೆ. ಘಟನಾ ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕಾರು ಹೊತ್ತಿ ಉರಿದಿದ್ದರಿಂದ ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

Read More

ಕಲಬುರ್ಗಿ : ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಸರ್ಕಾರಿ ಗೋಧಾವಿನಲ್ಲಿ ಸುಮಾರು 2 ಕೋಟಿಗೂ ಹೆಚ್ಚು ಮೌಲ್ಯದ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ನನ್ನು ಇದೀಗ ಕಲ್ಬುರ್ಗಿಯಲ್ಲಿ ಶಹಪುರದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 2 ಕೋಟಿಗೂ ಹೆಚ್ಚು ಮೌಲ್ಯದ ಸುಮಾರು 6077 ಕ್ವಿಂಟಲ್ ಅಕ್ಕಿ ಕಳ್ಳತನ ಮಾಡಿದ್ದು, ಅಕ್ಕಿ ಕಳ್ಳತನ ಪ್ರಕರಣ ಸಂಬಂಧಪಟ್ಟಂತೆ ಯಾದಗಿರಿ ಜಿಲ್ಲೆಯ ಶಹಪುರ ಸರ್ಕಾರಿ ಗೋದಾಮಿನಲ್ಲಿ ಅಕ್ಕಿ ಕಳ್ಳತನ ಮಾಡಿದ್ದಾನೇ ಎಂಬ ಆರೋಪ ಕೇಳಿ ಬಂದಿತ್ತ. ಅಕ್ಕಿ ಕಳ್ಳತನ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ಶಹಾಪುರ ಪೊಲೀಸರು ಮಣಿಕಂಠ ರಾಠೋಡ್ಗೆ ನೋಟಿಸ್ ನೀಡಿದ್ದರು. ಆದರೆ ಮಣಿಕಂಠ ರಾಠೋಡ್ ವಿಚಾರಣೆಗೆ ಹಾಜರಾಗಿಲ್ಲ ಹಾಗಾಗಿ ಇಂದು ಕಲಬುರ್ಗಿಯಲ್ಲಿ ಮಣಿಕಂಠ ರಾಠೋಡನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಿರುವಾಗ ಇಂದು ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಘೋರ ದುರಂತ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ , ಇದುವರೆಗೂ 6 ಜನರ ಮೃತದೇಹ ಗಳು ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇನ್ನು ಈ ಘಟನೆಯಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್​ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್(11) ಸೇರಿ ಟ್ರಕ್​​​​ ಚಾಲಕನ ಶವ ಪತ್ತೆಯಾಗಿದೆ. ಈ ನಾಲ್ವರ ಮೃತದೇಹಗಳು ಗೋಕರ್ಣ ಸಮೀಪ ಸಿಕ್ಕಿದೆ. ಇನ್ನು ಕುಮಟಾ ಸರ್ಕಾರಿ ಅಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ. ಇನ್ನು ಈ ಗುಡ್ಡ ಕುಸಿತ ಸ್ಥಳದಲ್ಲಿ ಮೊದಲು ಓರ್ವ ಮಹಿಳೆ ಶವ ಪತ್ತೆಯಾಗಿತ್ತು. ಬಳಿಕ ಐದು ಜನರ ಮೃತದೇಹ ಸಿಕ್ಕಿತ್ತು. ಇದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತರಾದರೆ, ಇನ್ನುಳಿದ ಇರ್ವರು ಯಾರು ಎಂಬುವುದು ಗುರುತು ಸಿಗುತ್ತಿಲ್ಲ. ಇದೀಗ ಕೊನೆಗೂ…

Read More

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು ಇಂದು ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 487 ಕೇಸ್ ದಾಖಲಾಗಿವೆ ಎಂದು ತಿಳಿದುಬಂದಿದೆ. ಹೌದು ಕರ್ನಾಟಕ ರಾಜ್ಯದಲ್ಲಿ ದಿನೇ ದಿನೇ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 487 ಡೇಂಗಿ ಕೇಸ್ ದಾಖಲಾಗಿವೆ. ಅಲ್ಲದೆ ಬೆಂಗಳೂರಿನಲ್ಲಿ 24 ಗಂಟೆಯಲ್ಲಿ 283 ಡೆಂಘಿ ಕೇಸ್ ದಾಖಲಾಗಿವೆ. ಕರ್ನಾಟಕ ರಾಜ್ಯದಲ್ಲಿ ಒಟ್ಟು 128 ಡೇಂಗಿ ಕೇಸ್ ಸಕ್ರಿಯವಾಗಿದ್ದು, ಒಟ್ಟು ಕೇಸ್ ಗಳ ಸಂಖ್ಯೆ 10449ಕ್ಕೆ ಏರಿಕೆಯಾಗಿವೆ. ಈಗಾಗಲೇ ಆರೋಗ್ಯ ಇಲಾಖೆಯು ಡೆಂಗ್ಯೂ ಸೊಂಕನ್ನು ತಡೆಗಟ್ಟಲು ಸೂಕ್ತವಾದ ಕ್ರಮಗಳನ್ನು ಕೈಗೊಂಡಿದ್ದು ಅಲ್ಲದೆ ಜಿಲ್ಲಾವಾರು ಆರೋಗ್ಯ ಅಧಿಕಾರಿಗಳು ಮುಂಜಾಗೃತ ಕ್ರಮವಾಗಿ ರೋಗನ್ನು ತಡೆಗಟ್ಟಲು, ಜನರಲ್ಲಿ ಜಾಗೃತಿ ಮೂಡಿಸುವಂತಹ ಕಾರ್ಯವನ್ನು ಕೂಡ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಪುಂಡರ ಹಾವಳಿ ಹೆಚ್ಚುತ್ತಿದ್ದು ಇದೀಗ, ಚಲಿಸುತ್ತಿದ್ದ ಕಾರಿನ ಹಿಂಬದಿ ಇಬ್ಬರು ಯುವಕರು ನೇತಾಡಿ ಹುಚ್ಚುತನ ಮೆರೆದಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಹೌದು ಜಯನಗರದಿಂದ ಬನಶಂಕರಿ ತೆರಳುವ ಮಾರ್ಗದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಟ್ರಾಫಿಕ್ ಪೊಲೀಸರ ಭಯವೇ ಇಲ್ಲದಂತೆ ಯುವಕರ ವರ್ತನೆಯೂ ಇತರೆ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ಈ ಘಟನೆಯ ವಿಡಿಯೋ ಸ್ಥಳೀಯರ ಮೊಬೈಲ್​ವೊಂದರಲ್ಲಿ ಸೆರೆಯಾಗಿದ್ದು, ಸವಾರರು ಕಿಡಿಕಾರಿದ್ದಾರೆ. ಇನ್ನು ಬೆಂಗಳೂರಿನ ನೆಲಮಂಗಲದ ಹೆದ್ದಾರಿಯಲ್ಲಿ ಪುಂಡರು ವೀಲಿಂಗ್ ಮಾಡಿದ್ದು, ಹೆದ್ದಾರಿಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ವೀಲಿಂಗ್ ನಡೆಸಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿದ್ದಾರೆ. ಪುಂಡರು ವೀಲಿಂಗ್ ಮಾಡುತ್ತಿದ್ದು ವಾಹನದಲ್ಲಿ ಚಲಿಸುತ್ತಿದ್ದ ಇತರೆ ಸವಾರರಿಗೆ ಆತಂಕ ಉಂಟು ಮಾಡಿದ್ದು, ಪೊಲೀಸರು ಯಾವುದೇ ರೀತಿ ಕ್ರಮ ಕೈಗೊಂಡಿಲ್ಲವಾದ್ದರಿಂದ ಈ ರೀತಿ ಪುಂಡರು ಹುಚ್ಚಾಟ ಮೇರೆಯುತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Read More

ಬೆಂಗಳೂರು : ನಕಲಿ ದಾಖಲೆ ಮತ್ತು ನೋಂದಣಿ ಸಂಖ್ಯೆ ಸೃಷ್ಟಿಸಿ ಕಾರುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, 2.5 ಕೋಟಿ ಮೌಲ್ಯದ 17 ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಗಳಿಂದ ಇನ್ನೋವಾ, ಫಾರ್ಚೂನರ್, ಮಹೀಂದ್ರಾ ಜೀಪ್, ಹ್ಯೂಂಡೈ ಕ್ರೆಟಾ ಸೇರಿದಂತೆ 2.5 ಕೋಟಿ ಮೌಲ್ಯದ 17 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೌದು ನಕಲಿ ದಾಖಲೆ ಮತ್ತು ನೋಂದಣಿ ಸಂಖ್ಯೆ ಸೃಷ್ಟಿಸಿ ಕಾರುಗಳನ್ನು ಮಾರಾಟ ಮಾಡುವ ಮೂಲಕ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ಬಯಲಿಗೆಳೆದಿರುವ ಸಿಸಿಬಿಯ ಪಶ್ಚಿಮ ವಿಭಾಗದ ಸಂಘಟಿತ ಅಪರಾಧ ದಳದ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಸೈಯ್ಯದ್ ರಿಯಾಜ್ ಹಾಗೂ ಆಸ್ಟಿನ್ ಕಾರ್ಡೋಸ್ ಎನ್ನಲಾಗಿದೆ. ಅನ್ಯ ರಾಜ್ಯಗಳಲ್ಲಿ ಕದ್ದ ಕಾರುಗಳಿಗೆ ನಕಲಿ ನೋಂದಣಿ ಸಂಖ್ಯೆ, ದಾಖಲೆಗಳನ್ನ ಸೃಷ್ಟಿಸುತ್ತಿದ್ದ ಆರೋಪಿಗಳು ಅವುಗಳನ್ನ ಮಾರಾಟ ಮಾಡುತ್ತಿದ್ದರು. ಅದೇ ರೀತಿ ಬ್ಯಾಂಕ್‌ನಲ್ಲಿ ಪಡೆದ ಲೋನ್ ಮರುಪಾವತಿಸಲಾಗದವರಿಂದ ಕಾರುಗಳನ್ನು ಆರೋಪಿಗಳು ಅಡಮಾನವಿರಿಸಿಕೊಳ್ಳುತ್ತಿದ್ದರು. ಬಳಿಕ ಲೋನ್ ಮರುಪಾವತಿಯಾಗಿರುವಂತೆ ಎನ್ಓಸಿ ಸಿದ್ಧಪಡಿಸಿ‌ ಅವುಗಳನ್ನು ಇತರರಿಗೆ ಮಾರಾಟ ಮಾಡುತ್ತಿದ್ದರು. ಫೇಸ್‌ಬುಕ್‌…

Read More

ಬೆಂಗಳೂರು : ಹುಬ್ಬಳಿಯಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿಯವರೊಂದಿಗೆ ಮಾತನಾಡಿ ಅವರ ಕುಟುಂಬಕ್ಕೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ‌‌. ಪರಮೇಶ್ವರ್​​ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹತ್ಯೆ ಪ್ರಕರಣ ಸಂಬಂಧ ಸಿಐಡಿ ತನಿಖೆ ನಡೆಸಿ ನಿಗದಿತ ದಿನದೊಳಗೆ ದೋಷಾರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದೆ. ಚಾರ್ಜ್​ ಶೀಟ್​ ಸಲ್ಲಿಸಿದ ಬಳಿಕ ನ್ಯಾಯಾಲಯ ನಿಗದಿಪಡಿಸುವ ವಿಚಾರಣಾ ದಿನಾಂಕಗಳಂದು ಸಾಕ್ಷಿದಾರರಿಗೆ ಸಾಕ್ಷಿ ನುಡಿಯುವಂತೆ ತಿಳಿವಳಿಕೆ ಮೂಡಿಸಲಾಗುತ್ತಿದೆ ಎಂದರು. ಸಾಕ್ಷ್ಯದ ಬಗ್ಗೆ ಕೋರ್ಟ್​ ಮಾನಿಟರಿಂಗ್ ಸೆಲ್ ಮುಖಾಂತರ ತ್ವರಿತ ವಿಚಾರಣೆಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಂತದಲ್ಲಿ ತ್ವರಿತಗತಿಯಲ್ಲಿ ನ್ಯಾಯಾಲಯಕ್ಕೆ ಒಪ್ಪಿಸುವ ಪ್ರಮೇಯ ಬರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಕಳೆದ ಮೇ 15 ರಂದು ಹುಬ್ಬಳಿಯಲ್ಲಿ ಅಂಜಲಿಯನ್ನು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಸಿಐಡಿಗೆ ಪ್ರಕರಣ ವರ್ಗಾಯಿಸಿಕೊಂಡು ತನಿಖೆ ನಡೆಸಿ…

Read More

ಕೊಡಗು : ಲಾರಿ ಹಾಗೂ ದ್ವಿಚಕ್ರ ವಾಹನದ ಮಧ್ಯ ಭೀಕರವಾಗಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಲಾರಿ ಬೈಕ್ ಮಧ್ಯ ಅಪಘಾತ ನಡೆದಿದ್ದು, ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೊಡಗರಹಳ್ಳಿಯಲ್ಲಿ ಈ ಒಂದು ಅಪಘಾತ ನಡೆದಿದೆ. ದ್ವಿಚಕ್ರ ವಾಹನದಲ್ಲಿದ್ದ ರಕ್ಷಿತ್ (27) ಮಂಜು (26) ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ನಿಲ್ಲದ ‘ವೀಲಿಂಗ್’ ಪುಂಡರ ಹಾವಳಿ ಬೆಂಗಳೂರಲ್ಲಿ ನೆಲಮಂಗಲ ಹೆದ್ದಾರಿಯಲ್ಲಿ ಪುಂಡರ ವೀಲಿಂಗ್ ಹಾವಳಿ ಮುಂದುವರೆದಿದ್ದು, ಹೆದ್ದಾರಿಯಲಿ ವಾಹನಗಳನ್ನು ಪುಂಡರು ಅಡ್ಡಗಟ್ಟಿದ್ದಾರೆ. ಸವಾರರಿಗೆ ಪುಂಡರು ವೀಲಿಂಗ್ ಮಾಡುವ ಮೂಲಕ ಆತಂಕ ಸೃಷ್ಟಿ ಮಾಡುತ್ತಿದ್ದಾರೆ.ಪುಂಡರ ವೀಲಿಂಗೆ ಪೊಲೀಸರು ಬ್ರೇಕ್ ಹಾಕದೆ ಇರುವುದರಿಂದ ಪುಂಡರು ಬಾಲ ಬಿಚ್ಚುತ್ತಿದ್ದಾರೆ.

Read More