Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬಾಗಲಕೋಟೆ : ತನ್ನ ಸಹೋದರಿಗೆ ಚುಡಾಯಿಸಿದನೆಂದು ಯುವಕನೋರ್ವನಿಗೆ ಅಪ್ರಾಪ್ತ ಬಾಲಕನೊಬ್ಬ ಚಾಕುವಿನಿಂದ ಇರಿದು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ನವನಗರದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕ ಮೊಹಮ್ಮದ್ ಆಸೀಫ್ ನದಾಫ್ ಎಂಬ ಯುವಕನಿಗೆ ಚಾಕು ಇರಿದು ಗಾಯಗೋಳಿಸಿದ್ದಾನೆ. ಆಸೀಫ್ ಅಪ್ರಾಪ್ತನ ಸಹೋದರಿ ಸೈಕಲ್ ಅಡ್ಡಗಟ್ಟಿ ಚುಡಾಯಿಸಿದ್ದ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಆರಂಭದಲ್ಲಿ ಜಗಳ ನಡೆದಿತ್ತು. ಕಿತ್ತಾಟದ ವಿಚಾರ ತಿಳಿದು ಮುಸ್ಲಿಮ್ ಸಮಾಜದ ಹಿರಿಯರು ಇಬ್ಬರನ್ನು ಸಂಧಾನ ಮಾತುಕತೆಗೆ ಕರೆದಿದ್ದರು. ಸಂಧಾನ ಮಾತುಕತೆ ವೇಳೆ ಆಸೀಫ್ ಹಾಗೂ ಅಪ್ರಾಪ್ತ ಬಾಲಕನ ಮಧ್ಯೆ ಮತ್ತೆ ಜಗಳ ಶುರುವಾಗಿದೆ. ಜಗಳ ಜೋರಾಗುತ್ತಿದ್ದಂತೆ ಬಾಲಕ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಆಸೀಫ್ ತಲೆ, ಮೂಗು,ಕೆನ್ನೆಯ ಭಾಗಗಳಲ್ಲಿ ಚಾಕು ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡ ಆಸೀಫ್‌ನನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ನವನಗರ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿರುವ 16,500 ಸರಕಾರಿ ಶಾಲೆಗಳಿಗೆ ಮಕ್ಕಳ ಊಟಕ್ಕಾಗಿ ಹೊಸ ಅಡುಗೆ ಪಾತ್ರೆ ವಿತರಣೆ ಮಾಡಲಾಗುತ್ತೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಂದು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ರಾಜ್ಯದ 16,500 ಸರಕಾರಿ ಶಾಲೆಗಳಿಗೆ ಹಳೆಯ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರಕಾರ ತೆಗೆದುಕೊಂಡಿದೆ. ಹಾಗಾಗಿ ಶೀಘ್ರದಲ್ಲಿಯೇ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಹೇಳಿದರು. ಸರಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು ಟಿವಿಗಳ ಬಳಕೆಯನ್ನು ಹೆಚ್ಚಿಸಲು ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಸುಮಾರು 46,000 ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗಿದೆ. ಇದರಿಂದ ಮಕ್ಕಳು ಸ್ಮಾರ್ಟ್ ಕ್ಲಾಸ್ ಗಳ ಸದುಪಯೋಗ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕಂಟೆನರ್ ಬಿದ್ದು 4 ವರ್ಷದ ಬಾಲಕಿ ಹಾಗು ಆಕೆಯ ತಂದೆ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರವಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಹೌದು ಬೈಕ್ ಮೇಲೆ ಕಂಟೇನರ್ ಬಿದ್ದು ತಂದೆ ಮಗಳು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್ನಲ್ಲಿದ್ದ ತಂದೆ ವೆಂಕಟೇಶ ಹಾಗೂ ಮಗಳು ದೀಕ್ಷಿತ (4) ಸಾವನ್ನಪ್ಪಿದ್ದಾರೆ. ಮೃತ ವೆಂಕಟೇಶ್ ಪತ್ನಿ ರೂಪ ಅವರ ಸ್ಥಿತಿ ಚಿಂತಾ ಜನಕವಾಗಿದೆ. ಮೃತರು ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. ಮಂಡಳಿಯಿಂದ ನಾಯನ ಹಳ್ಳಿಗೆ ಹೊರಟಿದಾಗ ಈ ದುರ್ಘಟನೆ ಸಂಭವಿಸಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅಲ್ಲದೇ ಕಂಟೆನರ್ ಕೆಳಗಡೆ ಮತ್ತಿಬ್ಬರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇಶಾ ಫೌಂಡೇಶನ್ ಗೆ ಹೋಗಿ ವಾಪಸ್ ಬರುವಾಗ ಈ ಘೋರವಾದ ದುರಂತ ಸಂಭವಿಸಿದೆ.
ಹಾವೇರಿ : ಶಿಕ್ಷಕರೊಬ್ಬರ ಅಮಾನತು ಆದೇಶವನ್ನು ಹಿಂಪಡೆಯಲು ಕ್ಷೇತ್ರ ಶಿಕ್ಷಣಾಧಿಕಾರಿ (BEO) ಒಬ್ಬರು 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದು, 15 ಸಾವಿರ ಪಡೆದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ್ ಬಡಿಗೇರ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಮಾನತುಕೊಂಡಿದ್ದ ನೊಂದ ಶಿಕ್ಷಕರೊಬ್ಬರ ದೂರಿನ ಮೇರೆಗೆ ಇಂದು ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ರೆಡ್ ಹ್ಯಾಂಡ್ ಆಗಿ ಬಲೆಗೆ ಬೀಳಿಸಿದ್ದಾರೆ. ಸದ್ಯ ಮೌನೇಶ್ ಬಡಿಗೇರ್ ಅವರನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ಅವರ ವಿರುದ್ಧ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಮೌನೇಶ್, ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಶಿಕ್ಷಕರೊಬ್ಬರ ಅಮಾನತು ಆಗಿತ್ತು. ಅಮಾನತು ಆದೇಶ ಹಿಂಪಡೆಯುವಂತೆ ಶಿಕ್ಷಕರು ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ್ದ ಮೌನೇಶ್, ₹ 50 ಸಾವಿರ ಕೊಟ್ಟರೆ ಆದೇಶ ಹಿಂಪಡೆಯುವುದಾಗಿ ಹೇಳಿದ್ದರು ಎಂದು ಲೋಕಾಯುಕ್ತ ಪೊಲೀಸ್…
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏ.23ರಿಂದ ಪ್ರಕರಣದ ಸಾಕ್ಷಿ ವಿಚಾರಣೆ ಹಿನ್ನೆಲೆಯಲ್ಲಿ ಎಸ್ಐಟಿ ಸಂಗ್ರಹಿಸಿದ ಡಿಜಿಟಲ್ ಸಾಕ್ಷಿ ವೀಕ್ಷಣೆಗೆ ಬೆಂಗಳೂರಿನ ಜನಪ್ರತಿನಿದಿಗಳ ನ್ಯಾಯಾಲಯ ಅವಕಾಶ ನೀಡಿತು. ಪ್ರಕರಣ ಸಂಬಂಧ ಇಂದು ಜನಪ್ರತಿನಿದಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಐಟಿ ತಜ್ಞ ಶುಭಂಗೆ ವಿಡಿಯೋ ನೋಡಲು ಇದೀಗ ಕೋರ್ಟ್ ಅವಕಾಶ ನೀಡಿದ್ದು, ಈ ಕುರಿತು ಪ್ರಜ್ವಲ್ ರೇವಣ್ಣ ಪರ ವಕೀಲರು ವಿಡಿಯೋ ವೀಕ್ಷಣೆಗೆ ಅವಕಾಶ ಕೋರಿ ಮನವಿ ಮಾಡಿದ್ದರು. ಪ್ರಜ್ವಲ್ ಅವರ ಇಬ್ಬರು ವಕೀಲರು, ಎಸ್ಪಿಪಿ ಅಥವಾ ಸಹಾಯಕರು, ಪ್ರಜ್ವಲ್ ರೇವಣ್ಣ ಪರ ಐಟಿ ತಜ್ಞ, ತನಿಖಾಧಿಕಾರಿ ಹಾಗೂ ಸಹಾಯಕರು ವಿಡಿಯೋ ವೀಕ್ಷಣೆಗೆ ಹಾಜರಿರಬೇಕು. ಇಂದು, ಏಪ್ರಿಲ್ 21 ರಂದು ವಿಡಿಯೋ ಕಾನ್ಫರೆನ್ಸ್ ರೂಮ್ನಲ್ಲಿ ವಿಡಿಯೋ ವೀಕ್ಷಣೆ ನಡೆಯಲಿದೆ. ಖಾಸಗಿ ವಿಡಿಯೋವಾಗಿದ್ದರಿಂದ ಕಾಪಿ ಮಾಡಲು ಅವಕಾಶವಿಲ್ಲ ಎಂದು ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.ಈ ಹಿನ್ನೆಲೆಯಲ್ಲಿ ತನ್ನದೇ…
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದು, ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಒಂದು ಪ್ರಕರಣದ ಜಾಮೀನು ಅರ್ಜಿ ವಜಾಗೊಳಿಸಿದೆ. ಹೌದು ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ವೀಕ್ಷಣೆಗೆ ಕೋರ್ಟ್ ಅವಕಾಶ ನೀಡಿದ್ದು, ಅದರ ಬೆನ್ನಲ್ಲೇ, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮತ್ತೊಂದು ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾಗೊಂಡಿದೆ. ಕ್ರೈಂ ನಂಬರ್ 20/2024 ಪ್ರಕರಣದಲ್ಲಿ ಜಾಮೀನು ಅರ್ಜಿ ವಜಾ ಗೊಳಿಸಲಾಗಿದೆ. ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ ಗಜಾನನ ಭಟ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಬೈಕ್ ಮೇಲೆ ತೆರಳುತ್ತಿದ್ದಾಗ ಕಂಟೆನರ್ ಬಿದ್ದು 4 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರವಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನರಸನಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಘಟನೆ ವೇಳೆ 4 ವರ್ಷದ ಬಾಲಕಿ ಬೈಕ್ ಮೇಲೆ ತೆರಳುತ್ತಿದ್ದಾಗ ಕಂಟೆನರ್ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಲ್ಲದೇ ಕಂಟೆನರ್ ಕೆಳಗಡೆ ಮತ್ತಿಬ್ಬರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇಶಾ ಫೌಂಡೇಶನ್ ಗೆ ಹೋಗಿ ವಾಪಸ್ ಬರುವಾಗ ಈ ಘೋರವಾದ ದುರಂತ ಸಂಭವಿಸಿದೆ.
ಮಂಗಳೂರು : ವಕ್ಫ್ ತಿದ್ದುಪಡಿ ವಿರೋಧಿ ಸೇನೆನೆ ಮಂಗಳೂರಿನ ಅಡ್ಯಾರ್ ಮೈದಾನದಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದ್ದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಪ್ರತಿಭಟನೆ ವೇಳೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ವಿಚಾರವಾಗಿ ಪ್ರತಿಭಟನಾಕಾರರ ವಿರುದ್ಧ ಇದೀಗ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಿನ್ನೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಕೃಷ್ಣಾಪುರ ನಿವಾಸಿ ಜಲೀಲ್, ಹೊಳಚ್ಚಿಲ್ ನಿವಾಸಿ ಫಾಜಿಲ್ ಹಾಗು ಮೊಹಮ್ಮದ್ ಹನೀಫ್ ನೌಫಾಲ್ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. BNS ಕಾಯ್ದೆ 189(2), 126(2), 270, 324, 132, 185, 190ರಡಿ ಪ್ರಕರಣ ದಾಖಲಾಗಿದೆ ನೆನ್ನೆ ಮಂಗಳೂರಿನ ಆಡಾರಿನಲ್ಲಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಗೂ ಮುನ್ನ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡದಂತೆ ಪ್ರತಿಭಟನೆ ಮಾಡಿ ಎಂದು ಸೂಚನೆ ನೀಡಿತ್ತು. ಆದರೆ ಹೈಕೋರ್ಟ್ ಆದೇಶವನ್ನು ಮೀರಿಭಟ್ಟನಾಕಾರರು ರಾಷ್ಟ್ರೀಯ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಮೆಡಿಕಲ್ ಶಾಪ್ ಮತ್ತು ಜನರಲ್ ಸ್ಟೋರ್ ಆಕಸ್ಮಿಕ ಬೆಂಕಿಯಿಂದಾಗಿ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಗಾಯತ್ರಿನಗರದ ಮುಖ್ಯ ರಸ್ತೆಯಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ. ಬೆಂಗಳೂರಿನಲ್ಲಿ ಮೆಡಿಕಲ್ ಶಾಪ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹೆಲ್ತ್ ಕೇರ್ ಫಾರ್ಮ ಮತ್ತು ಜನರಲ್ ಸ್ಟೋರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಗಾಯತ್ರಿನಗರದ ಮುಖ್ಯ ರಸ್ತೆಯಲ್ಲಿರುವ ಮೆಡಿಕಲ್ ಶಾಪ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರವೀಣ್ ಆತ್ಮಹತ್ಯೆ ಮಾಡಿಕೊಳ್ಳೋಕು ಮುನ್ನ ಡೆತ್ ನೋಟ್ ಅಲ್ಲಿ ಉಲ್ಲೇಖಿಸಿದ ಇಬ್ಬರು ಆರೋಪಿಗಳನ್ನು ಆನೇಕಲ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಕರಣದ A1 ಆರೋಪಿ ಕಿರಣಗೌಡ ಮತ್ತು A3 ಹರೀಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಪ್ರವೀಣ್ ಗೌಡನ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಪ್ರಕರಣದ ಪ್ರಮುಖ ಆರೋಪಿಗಳಿಂದ ಪ್ರವೀಣ್ ವಿಡಿಯೋ ವೈರಲ್ ಆಗಿದೆ. ಆನೇಕಲ್ ಮಂಡಲ ಬಿಜೆಪಿ ಅಧ್ಯಕ್ಷ ಮುನಿರಾಜುಗೌಡ ಆನೇಕಲ್ ಪುರಸಭೆ ಸದಸ್ಯೆ ಭಾಗ್ಯಲಕ್ಷ್ಮಿ ಮತ್ತು ಪತಿ ಶ್ರೀನಿವಾಸ್ ಅವರಿಂದ ವಿಡಿಯೋ ವೈರಲ್ ಆಗಿದೆ. ಪ್ರಕರಣ ಹಿನ್ನೆಲೆ? ನಿನ್ನೆ ಆನೇಕಲ್ ನ ಎಸ್.ವಿ.ಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೇಸ್ಬುಕ್ ವಿಡಿಯೋ ಮಾಡಿ ಹಲವರ ಹೆಸರುಗಳನ್ನು ಪ್ರಸ್ತಾಪಿಸಿರುವ ಪ್ರವೀಣ್, ಮರಕ್ಕೆ ನೇಣು…













