Author: kannadanewsnow05

ಕಲಬುರ್ಗಿ : ಕಲಬುರ್ಗಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಿಂದ ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಇದರಿಂದ ಜನ ಜೀವನ ಕೂಡ ಅಸ್ತವ್ಯಸ್ತಗೊಂಡಿದೆ. ಇದೀಗ ಕಲಬುರ್ಗಿ ಜಿಲ್ಲೆಯ ಅಫ್ಜಲ್ಪುರ ತಾಲೂಕಿನ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹೌದು ಕಲ್ಬುರ್ಗಿಯಲ್ಲಿ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಗಾಣಗಪುರದಲ್ಲಿನ ದತ್ತಾತ್ರೇಯ ದೇಗುಲಕ್ಕೆ ನೀರು ನುಗ್ಗಿದೆ. ಕಲ್ಬುರ್ಗಿ ಜಿಲ್ಲೆಯ ಆಫ್ಜಲ್ ಪುರ ತಾಲೂಕಿನ ಗಾಣಗಾಪುರ ದೇವಾಲಯದ ಒಳಗೆ ನೀರು ನುಗ್ಗಿ ಭಕ್ತರು ಪರದಾಡಿದ್ದಾರೆ.ಅಲ್ಲದೆ ದೇವಸ್ಥಾನದ ಆವರಣದಲ್ಲಿರುವ ಅಂಗಡಿಗಳು ಕೂಡ ಮಳೆ ನೀರಿನಿಂದ ಜಲಾವೃತಗೊಂಡಿವೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 17 ಆರೋಪಿಗಳಿಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರ ಮಧ್ಯ ಇಂದು ನಟ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ತೂಗುದೀಪ್ ಭೇಟಿಯಾಗಲು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದರು. ಈ ವೇಳೆ ಪತ್ನಿ ಸಹೋದರ ಹಾಗೂ ಕುಟುಂಬದ ಸದಸ್ಯರು ದರ್ಶನ್ ಅವರನ್ನು ಭೇಟಿಯಾದರು. ನಂತರ ಪತ್ನಿಯೊಂದಿಗೆ ದರ್ಶನ್ ಕೆಲ ಕಾಲ ಮಾತುಕತೆ ನಡೆಸಿದರು. ಈ ವೇಳೆ ಪತ್ನಿ ವಿಜಯಲಕ್ಷ್ಮಿ ತನಿಖೆ ಪ್ರಗತಿಯಲ್ಲಿ ಇರುವುದರಿಂದ ಸದ್ಯ ಜಾಮೀನು ಸಿಗುವುದು ಸಾಧ್ಯವಿಲ್ಲ ಕಾನೂನು ಹೋರಾಟ ನಡೆಸೋಣ ಎಂದರು. ಈ ಒಂದು ಮಾತಿಗೆ ನಟ ದರ್ಶನ್ ಅವರು ಸ್ವಲ್ಪ ಬೇಸರ ಆಗಿದ್ದು ಕಂಡುಬಂದಿತು. ನಂತರ ದರ್ಶನ್ ಅವರು ನೋಡೋಣ ಬಿಡಿ ಎಂದು ಬೇಸರದಲ್ಲಿ ತಿಳಿಸಿದ್ದಾರೆ ವೇಳೆ ನನಗೆ ಜೈಲಿನ ಊಟ ಒಗ್ಗುತ್ತಿಲ್ಲ. ಮನೆ ಊಟ ಬೇಕು ಎಂದು ಮತ್ತೆ ಕುಟುಂಬಸ್ಥರ ಬಳಿ ತಿಳಿಸಿದ್ದಾರೆ.…

Read More

ಬೆಂಗಳೂರು : ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ.  ಹೊಸೂರು ಕಡೆ ತೆರಳುತ್ತಿದ್ದ XUV 700 ಹಾಗೂ ಕಿಯಾ ಕಾರಿನ ಮಧ್ಯ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಮೈಸೂರು ರಾಷ್ಟ್ರೀಯ ಹೆದ್ದಾರಿಯತ್ತ ತಿರುಳುತ್ತಿದ್ದ ಕಿಯಾ ಕಾರಿಗೆ XUV 700 ಕಾರು ಡಿಕ್ಕಿ ಹೊಡೆದಿದೆ. ಮಳೆಯಿಂದ ನಿಯಂತ್ರಣ ತಪ್ಪಿ ಕಿಯಾ ಕಾರಿಗೆ XUV 700 ಕಾರು ಡಿಕ್ಕಿ ಹೊಡೆದಿದೆ. ಕಿಯಾ ಕಾರು XUV 700 ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು : ಕೆಆರ್‌ಎಸ್ ಡ್ಯಾಂನಿಂದ ರೈತರ ಹೆಸರಿನಲ್ಲಿ ತಮಿಳುನಾಡಿಗೆ ನೀರು ಹರಿಸಲಾಗಿದೆ. ನೀರು ಬಿಟ್ಟು ಕಾಟಾಚಾರಕ್ಕೆ ಸಭೆ ಕರೆದಿದ್ದಾರೆ. ನೀರು ಬಿಟ್ಟಿದ್ದಕ್ಕೆ ಶಹಬ್ಬಾಶ್‍ಗಿರಿ ಕೊಡಲು ಹೋಗಬೇಕಿತ್ತಾ? ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ನಿನ್ನೆ ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆಗೆ HD ಕುಮಾರಸ್ವಾಮಿ ಅವರು ಗೈರಾಗಿದ್ದರು. ಈ ಕುರಿತು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಈ ವೇಳೆ ಸಿಡಬ್ಲ್ಯೂಆರ್‌ಸಿ ಶಿಫಾರಸು ಹಿನ್ನೆಲೆ ಸಭೆ ಕರೆದಿದ್ದರು. ಯಾವ ವಿಚಾರ ಚರ್ಚಿಸಲು ಅವರು ಸಭೆ ಕರೆದಿದ್ದರು? ಚರ್ಚೆಗೂ ಮುನ್ನವೇ ತಮಿಳುನಾಡಿಗೆ ನೀರು ಹರಿದು ಹೋಗಿದೆ. ಕಬಿನಿಯಿಂದ ನೀರು ಹರಿದಿದೆ. ಸಭೆಯಲ್ಲಿ ಕೊಡುವ ಗೊಡಂಬಿ, ಬಾದಾಮಿ ತಿನ್ನೋಕೆ ಹೋಗಬೇಕಿತ್ತಾ? ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯದಲ್ಲಿ ಜನತಾ ದರ್ಶನ ಮಾಡಿದರೆ, ಅಧಿಕಾರಿಗಳು ಭಾಗಿಯಾಗಬಾರದು ಎಂದು ಆದೇಶ ಮಾಡಿದ್ದಾರೆ. ಅಧಿಕಾರಿಗಳ ಸಭೆ ನಡೆಸಬಾರದು ಎಂದು ಆದೇಶ ಮಾಡಿದ ಮೇಲೆ ನಮ್ಮಿಂದ ಏನು ಬಯಸುತ್ತೀರಾ? ಪಾಂಡವಪುರದಲ್ಲಿ ಮತ ಕೊಟ್ಟ ಜನರಿಗೆ ಧನ್ಯವಾದ ಹೇಳಬೇಕಿತ್ತು ಹೋಗಿದ್ದೆ. ಯಾವ ಸಂದರ್ಭದಲ್ಲಿ…

Read More

ಬೆಳಗಾವಿ : ಇತ್ತೀಚ್ಚಿಗೆ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಭಾರಿ ಸದ್ದು ಮಾಡಿದ್ದೂ, ಇದೀಗ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದುಕೊಂಡರು ಕೂಡ ಸೀಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ ಕಡಿಮೆ ಅಂಕ ಪಡೆದುಕೊಂಡವರಿಗೆ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ ಅಂತಾರಾಜ್ಯ ವಂಚಕನನ್ನು ಬೆಳಗಾವಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹೈದ್ರಾಬಾದ್ ಮೂಲದ ಅರವಿಂದ್ ಅರಗೊಂಡ ಎಂದು ತಿಳಿದುಬಂದಿದೆ. ಬೆಳಗಾವಿ ಮೂಲದ ಓರ್ವ ವಿದ್ಯಾರ್ಥಿ ತಾಯಿ ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ. ತಾಂತ್ರಿಕ ಸಾಕ್ಷಿಗಳ ಆಧಾರದ ಮೇಲೆ ಆರೋಪಿಯನ್ನು ಖೆಡ್ಡಾಗೆ ಬೀಳಿಸಲಾಗಿದೆ. ಬಂಧಿತ ಆರೋಪಿಯಿಂದ 12 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ್ದ 12 ಕಂಪ್ಯೂಟರ್, ಒಂದು ಲ್ಯಾಪ್ ಟಾಪ್ ಜಪ್ತಿ ಮಾಡಲಾಗಿದೆ. 2023ರಲ್ಲಿ ಬೆಳಗಾವಿಯಲ್ಲಿ ಅರವಿಂದ್ ನೀಟ್ ಕೌನ್ಸೆಲಿಂಗ್ ಸೆಂಟರ್​ ಓಪನ್ ಮಾಡಿದ್ದ. ಹತ್ತು ಜನ ಟೆಲಿ ಕಾಲರ್ಸ್​​ ನೇಮಕ ಮಾಡಿಕೊಂಡು ವಂಚಿಸುತ್ತಿದ್ದ. ಕಡಿಮೆ…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಕೃತ್ಯಕ್ಕೆ ಸಂಬಂಧಿಸಿದ ಸಿಸಿಟಿವಿ ಫೋಟೆಜ್ ಗಳು, ಆರೋಪಿಗಳ ಚಲನವಲನ, ಓಡಾಡಿರುವ, ಮೃತ ದೇಹ ಸಾಗಿಸಿದ ಮಾರ್ಗ ಸೇರಿದಂತೆ ಇದುವರೆಗೂ 33ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದು, ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ. ಕೊಲೆ ಸಂಬಂಧ 33ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಲು ಮುಂದಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದ ಪೊಲೀಸರು ಕೊಲೆ ಪ್ರಕರಣದ ಪ್ರಮುಖ ಸಾಕ್ಷಾಧಾರಾಗಳಾದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಕೊಲೆಗೂ ಮುನ್ನ ಪಾರ್ಟಿ ಮಾಡಿದ್ದ ರೆಸ್ಟೋರೆಂಟ್ ಆದಂತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ನಿಂದ ಪಟ್ಟಣಗೆರೆ ಶೆಡ್ ವರೆಗಿನ ಮಾರ್ಗ ಮಧ್ಯದ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಎಲ್ಲಾ ಸಿಸಿಟಿವಿಗಳ ದೃಶ್ಯಗಳನ್ನು ಸಂಗ್ರಹ ಮಾಡುತ್ತಿದ್ದು ಶೆಡ್ ಇಂದ ಸೋಮನಹಳ್ಳಿ ರಾಜ ಕಾಲುವೆ ಮಾರ್ಗ ಸಿಸಿಟಿವಿಗಳನ್ನು ಸಂಗ್ರಹಿಸುತ್ತಿದ್ದಾರೆ. ರಸ್ತೆಯ ಬದಿಯ ಎಲ್ಲಾ ಹೋಟೆಲ್ ಸಿಸಿಟಿವಿ ದೃಶ್ಯಗಳನ್ನ ಸಂಗ್ರಹಿಸುತ್ತಿವ ಪೊಲೀಸರು ಆರೋಪಿಗಳ…

Read More

ಬೆಂಗಳೂರು : ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಭೇಟಿಗಾಗಿ ಕುಟುಂಬ ಇದೀಗ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ತಮ್ಮ ದಿನಕರ್ ಇದೀಗ ಜೈಲಿಗೆ ಆಗಮಿಸಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ ಸೇರಿ 17 ಆರೋಪಿಗಳಿಗೆ ಜುಲೈ 18ರ ವರೆಗೆ ನ್ಯಾಯಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಜೈಲಿನಲ್ಲಿ ಊಟ ಸೇರದೆ ದರ್ಶನ್ ಅವರು ದಿನದಿಂದ ದಿನಕ್ಕೆ ತಮ್ಮ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ. ವಾರದಲ್ಲಿ ಕೇವಲ ಮೂರು ದಿನ ಮಾತ್ರ ಭೇಟಿಗೆ ಅವಕಾಶ ಇದ್ದಿದ್ದರಿಂದ ಇಂದು ಪತ್ನಿ ವಿಜಯಲಕ್ಷ್ಮಿ ಹಾಗೂ ತಮ್ಮ ದಿನಕರ ತೂಗುದೀಪ ಅವರು ನಟ ದರ್ಶನ್ ಅವರನ್ನು ಭೇಟಿ ಮಾಡಲು ಜೈಲಿಗೆ ಆಗಮಿಸಿದ್ದರು. ಕಳೆದ ಕೆಲವು ದಿನಗಳ ಹಿಂದೆ ನಟ ದರ್ಶನ್ ಅವರಿಗೆ ಬಟ್ಟೆ, ಹಣ್ಣು ಹಾಗೂ ಓದಲು ಪುಸ್ತಕ ಸೇರಿದಂತೆ ಹಲವು ವಸ್ತುಗಳನ್ನು ತಂದು ಕೊಟ್ಟಿದ್ದರು. ಪತಿಯ ಬಿಡುಗಡೆಗೆ ಪತ್ನಿ ವಿಜಯಲಕ್ಷ್ಮಿ ವಕೀಲರೊಂದಿಗೆ ಚರ್ಚೆ…

Read More

ಗದಗ : ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯಾಕೆ ಚುಡಾಯಿಸಿದ್ದೀರಿ ಎಂದು ಪ್ರಶಸ್ತಿ ಹಾಗೂ ಆತನ ಕುಟುಂಬಸ್ಥರ ಬೆಲೆ ಕಿಟಿಗೇಡಿಗಳು ಮನಸೋ ಇಚ್ಛೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೋಗೇರಿಯಲ್ಲಿ ನಡೆದಿದೆ. ದೇವರಾಜ, ಭಾಗವ್ವ, ಚಂದ್ರವ್ವ, ಹಾಗೂ ದಾನಪ್ಪ ಹಲ್ಲೆಗೊಳಗಾದವರು ಎನ್ನಲಾಗಿದ್ದು, ಬಸವರಾಜ, ರವಿ, ಕೋಟೆಪ್ಪ ಹಾಗೂ ಮುತ್ತಪ್ಪ ಎನ್ನುವವರು ಹಲ್ಲೆ ನಡೆಸಿದ್ದಾರೆ. ಬೋವಿ ಸಮುದಾಯದ ದಲಿತ ಕುಟುಂಬದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದ್ದು ಕುರುಬ ಸಮುದಾಯಕ್ಕೆ ಸೇರಿದ 6 ಜನರ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಇನ್ನು ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಿಡಿಗೇಡಿಗಳು ತನ್ನ ಪತ್ನಿ ಶೋಭಾಳನ್ನು ಚುಡಾಯಿಸುತ್ತಿದ್ದಾರೆ ಎಂದು ಪ್ರಶ್ನೆ ಮಾಡಲು ಹೋದ ದೇವರಾಜ್ ಅವರನ್ನು ಹಾಗೂ ಕುಟುಂಬದವರಾದ ಚಂದ್ರಪ್ಪ, ದಾನಪ್ಪ, ಚಂದ್ರಮ್ಮ, ಭಾಗ್ಯಮ್ಮರ ಮೇಲೆ ಹಲ್ಲೆ ನಡೆಸಿದ್ದಾರೆ. ಬಸವರಾಜ, ರವಿ, ಕೋಟೆಪ್ಪ, ಮುತ್ತಪ್ಪ ಸೇರಿದಂತೆ 6 ಜನರ ವಿರದ್ಧ ಹಲ್ಲೆ ಆರೋಪ ಕೇಳಿ ಬಂದಿದೆ.…

Read More

ಚಿಕ್ಕಮಗಳೂರು : ಇದೀಗ ರಾಜ್ಯದಲ್ಲಿ ವರುಣ ಅಬ್ಬರಿಸುತ್ತಿದ್ದು, ರೈತರು ಸಹಜವಾಗಿ ಮಳೆ ಆಗುತ್ತಿದರಿಂದ ಖುಷಿಗೊಂಡಿದ್ದು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಇನ್ನೊಂದೆಡೆ ಜಲಪಾತಗಳು ತುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ. ಆದರೆ ಚಿಕ್ಕಮಂಗಳೂರಿನಲ್ಲಿ ಜಲಪಾತದಲ್ಲಿ ಮೋಜು ಮಸ್ತಿ ಮಾಡುವ ಪ್ರವಾಸಿಗರ ವಿರುದ್ಧ ಇದೀಗ FIR ದಾಖಲಾಗಿದೆ. ಹೌದು ಜಲಪಾತದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ಪ್ರವಾಸಿಗರ ವಿರುದ್ಧ FIR ದಾಖಲಾಗಿದೆ. ಪ್ರವಾಸಿಗರು ಮೋಜಿನಾಟದಲ್ಲಿ ತೊಡಗಿದ್ದ 6 ಜನರು, ಮೈದಾಡಿ ರಸ್ತೆಯಲ್ಲಿರುವ ಕಿರು ಜಲಪಾತದಲ್ಲಿ ಮೋಜು ಮಸ್ತಿ ಮಾಡಿದ್ದರು.ಇದೀಗ ಮಂಗಳೂರು ಮೂಲದ 6 ಪ್ರವಾಸಿಗರ ವಿರುದ್ಧ ಇದೀಗ ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ಮೂಡಿಗೆರೆ ತಾಲೂಕಿನಲ್ಲಿ 5 ಕುಡಿದ ಮತ್ತಿನಲ್ಲಿ ಯುವಕರು ಕಿ.ಮೀ ರಸ್ತೆಯಲ್ಲಿ ನೂರಕ್ಕೂ ಹೆಚ್ಚು ಬಾರಿ ಓಡಾಟ ಮಾಡಿದ್ದು, ಚಾರ್ಮಾಡಿ ಘಾಟ್, ದೇವರಮನೆ ಗುಡ್ಡದಲ್ಲಿ ರಾಣಿ ಝರಿ ಬಳಿಕಿರಿಕ್ ಮಾಡಿಕೊಂಡಿದ್ದಾರೆ. ಮೂಡಿಗೆರೆ ತಾಲೂಕಿನ ರಾಣಿಝರಿ ಬಳಿ ಈ ಒಂದು ಘಟನೆ ನಡೆದಿದೆ. ಬೈಕ್ ನ ಎಕ್ಸ್ಲೇಟರ್ ರೈಸ್ ಮಾಡಿ ಕರ್ಕಶ ಶಬ್ದವನ್ನು…

Read More

ಬೆಂಗಳೂರು : ಕಾವೇರಿ ನೀರು ಹಂಚಿಕೆಯ ವಿಚಾರವಾಗಿ ನಿನ್ನೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ನಡೆಯಿತು ಈ ಒಂದು ಸಭೆಗೆ ಕೇಂದ್ರ ಬಿಜೆಪಿ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಗೈರಾಗಿದ್ದರು. ಈ ವಿಚಾರವಾಗಿ ಸಚಿವ ಚೆಲುವರಾಯಸ್ವಾಮಿ, ಸರ್ವ ಪಕ್ಷ ಸಭೆ ಬದಲು ಅವರು ಬಾಡೂಟಕ್ಕೆ ತೆರಳಿದ್ದು ದುರಂತ ಎಂದು ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವ ಪಕ್ಷ ಸಭೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಗೈರು ವಿಚಾರವಾಗಿ ಸಭೆಗೆ ಮಂಡ್ಯ ಕ್ಷೇತ್ರದ ಸಂಸದ ಎಚ್ ಡಿ ಕುಮಾರಸ್ವಾಮಿ ಬಂದಿಲ್ಲ. ಅವರು ಬಾಡೂಟಕ್ಕೆ ಹೋಗಿದ್ದರು ಇದು ದುರಂತ ಅಲ್ಲವೇ ಎಂದು ವಿಧಾನಸೌಧದಲ್ಲಿ ಸಚಿವ ಎನ್ ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು. ನಿನ್ನ ಸರ್ವಪಕ್ಷ ಸಭೆಗೆ ಕೇಂದ್ರದ ಯಾವ ಸಚಿವರು ಬಂದಿಲ್ಲ. ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಬಂದಿಲ್ಲ. ಕನಿಷ್ಠ ರೈತರ ವಿಚಾರ ಬಂದಾಗ ಕುಮಾರಸ್ವಾಮಿ ಬರಬೇಕಿತ್ತು. ಅವರು ಮಾಜಿ ಮುಖ್ಯಮಂತ್ರಿ…

Read More