Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷಾಚರಣೆ ಆಗಮಿಸಲಿದ್ದು, ಬೆಂಗಳೂರು ನಗರಕ್ಕೆ ಗಾಂಜಾ ಘಾಟು ಬಡಿದಿದೆ. ಈ ಸಂಬಂಧ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ ಗಳನ್ನು ಇದೀಗ ಸೋಲದೇವನಹಳ್ಳಿಯ ಬಳಿ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ನೈಜೆರಿಯ ಮೂಲದ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಹೌದು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಮತ್ತೊಂದು ಕಾರ್ಯಾಚರಣೆ ನಡೆಸಿದ್ದು, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ಗಳ ಬಂಧನವಾಗಿದ್ದು, ಬಂಧಿತರ ಬಳಿ ಇದ್ದ 3 ಕೋಟಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಿಕೊಳ್ಳಲಾಗಿದೆ. ಸೋಲದೇವನಹಳ್ಳಿ ಬಳಿ ಆರೋಪಿಗಳು ಡ್ರಗ್ ಸಂಗ್ರಹಿಸಿದ್ದರು. ಬಂಧಿತರಿಂದ ಒಂದು ಕೆಜಿ 520g ಎಂಡಿಎಂಎ ಕ್ರಿಸ್ಟಲ್ 202 ಗ್ರಾಂ ಕೊಕೆನ್ ಗ್ರಾಂ ಎಂಡಿಎಂಎ ಎಕ್ಸಟ್ಸಿ ಜಪ್ತಿ ಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ನ್ಯೂ ಇಯರ್ ಗೆ ಡ್ರಗ್ಸ್ ಮಾಡಲು ಸಜ್ಜಾಗಿದ್ದರು ಎನ್ನಲಾಗಿದೆ. ಮುಂಬೈನಿಂದ ಬೆಂಗಳೂರಿಗೆ ಡ್ರಗ್ಸ್ ಪೂರೈಸುತ್ತಿದ್ದರು ಎಂದು ತಿಳಿದುಬಂದಿದೆ. ವೈದ್ಯಕೀಯ…
ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡ್ರಗ್ಸ್ ಮಾರಾಟ ಮಾಡಲು ಸಂಚು ರೂಪಿಸಿದ್ದ, ಇಬ್ಬರು ದಂಪತಿಗಳು ಸೇರಿದಂತೆ ಒಟ್ಟು ಮೂವರನ್ನು ಬೆಂಗಳೂರಿನ ಗೋವಿಂದಪುರ ಠಾಣೆಯ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 3.25 ಕೋಟಿ ಮೌಲ್ಯದ 318 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಗೋವಿಂದಪುರ ಠಾಣೆಯ ಪೊಲೀಸರಿಂದ ಮೂವರು ಆರೋಪಿಗಳ ಜಮೀರ್ ಮತ್ತು ರೇಷ್ಮಾ ದಂಪತಿ ಹಾಗೂ ಕೇರಳ ಮೂಲದ ಇನ್ನೊಬ ಆರೋಪಿ ಸೇರಿ ಮೂವರ ಬಂಧನವಾಗಿದೆ. ನ್ಯೂ ಇಯರ್ ಗೆ ಬೆಂಗಳೂರು ಮತ್ತು ಕೇರಳದಲ್ಲಿ ಡ್ರಗ್ಸ್ ಮಾರಾಟ ಮಾಡಲು ಸಂಚು ರೂಪಿಸಿದ್ದರು. ಕಾರಿನಲ್ಲಿ ಗಾಂಜಾ ಸಾಗಿಸುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ಎಚ್ ಬಿ ಆರ್ ಲೇಔಟ್ ಬಳಿ ಕಾರಿನ ಮೇಲೆ ಗೋವಿಂದಪುರ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಸುಮಾರು 3.25 ಕೋಟಿ ರೂಪಾಯಿ ಮೌಲ್ಯದ 318 ಕೆಜಿ ಗಾಂಜಾ ಪತ್ತೆಯಾಗಿದೆ. ಒಡಿಶಾದಿಂದ ಬೆಂಗಳೂರಿಗೆ 3 ಆರೋಪಿಗಳು…
ಬೆಂಗಳೂರು : ರಾಜಾಜೀನಗರ ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ ದುರಂತದಲ್ಲಿ ಮೃತಪಟ್ಟ ಪ್ರಿಯಾ ಅವರ ಮನೆಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಪ್ರಿಯಾ ಅವರ ಕುಟುಂಬ ವರ್ಗ ಗಾಂಧಿನಗರದ ಓಕಳಿಪುರಂ ನಲ್ಲಿ ನೆಲೆಸಿದ್ದು, ಸಚಿವರ ಭೇಟಿ ವೇಳೆ, ಶೋ ರೂಮ್ ಮಾಲೀಕರ ವಿರುದ್ಧ ಕುಟುಂಬ ವರ್ಗದವರು ಅಸಮಾಧಾನ ವ್ಯಕ್ತಪಡಿಸಿದರು. ಶೋ ರೂಮ್ ಮಾಲೀಕರು ಯಾರು ಕೂ ಇಲ್ಲಿಯ ವರೆಗೆ ಏನು ಎಂದು ಕೇಳಲು ಬಂದಿಲ್ಲ. ಶಾಸಕರಾಗಿ ನೀವೇ ನಮಗೆ ನ್ಯಾಯ ಒದಗಿಸಬೇಕು ಎಂದು ಪ್ರಿಯಾ ಅವರ ತಂದೆ ಸಚಿವದಿನೇಶ್ ಗುಂಡೂರಾವ್ ಅವರ ಬಳಿ ಮನವಿ ಮಾಡಿದರು. ಯುವತಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಸಚಿವ ದಿನೇಶ್ ಗುಂಡೂರಾವ್, ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಶೋ ರೂಮ್ ಮಾಲೀಕರನ್ನ ಕರೆದು ಚರ್ಚಿಸುವುದಾಗಿ ಪ್ರಿಯಾ ಅವರ ತಂದೆ ತಾಯಿ ಅವರಿಗೆ ಭರವಸೆ ನೀಡಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ದಿನೇಶ್ ಗುಂಡೂರಾವ್, ಪ್ರಿಯಾ…
ಬೆಂಗಳೂರು : ವಕ್ಫ್ ವಿಚಾರವಾಗಿ ಇಂದು ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಬಿಜೆಪಿಯ ಪರಿಷತ್ ಸದಸ್ಯ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 1500 ವರ್ಷಗಳ ಹಿಂದೆ ಯಾವ ಅಲ್ಲಾನು ಇರಲಿಲ್ಲ ಯಾವ ಮುಲ್ಲಾನು ಇರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ನನ್ನು ನಂಬಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಅವಕಾಶಕೊಟ್ಟ ಜನರನ್ನೇ ಸುಡಲು ಕಾಂಗ್ರೆಸ್ ಪಕ್ಷ ಹೊರಟಿದೆ ಎಂದು ಬಿಜೆಪಿ ಪ್ರತಿಭಟನೆಯಲ್ಲಿ ಪರಿಷತ್ ಸದಸ್ಯ ಸಿಟಿ ರವಿ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಗೆ ಅಧಿಕಾರ ನೀಡಿದ್ದು ಬಸ್ಮಾಸುರನಿಗೆ ಅವಕಾಶ ಕೊಟ್ಟಂತಾಗಿದೆ. ಭಸ್ಮಾಸುರನ ಪಾತ್ರವನ್ನು ಕಾಂಗ್ರೆಸ್ ನಿರ್ವಹಿಸುತ್ತಿದೆ. ಬಕಾಸುರನ ಪಾತ್ರವನ್ನು ನಿರ್ವಹಿಸುತ್ತಿದೆ ಎಂದು ಕಿಡಿ ಕಾರಿದರು. 1500 ವರ್ಷಗಳ ಹಿಂದೆ ಯಾವ ಅಲ್ಲಾನು ಇರಲಿಲ್ಲ. ಮುಲ್ಲಾನು ಇರಲಿಲ್ಲ. ವಿಧಾನಸೌಧನು ನಮ್ಮದು ಅಂತಾರೆ ಅಂದರೆ ಈ ಸೊಕ್ಕು ಎಲ್ಲಿಂದ ಬಂತು? ಕಾಂಗ್ರೆಸ್…
ಮೈಸೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಬೆನ್ನು ನೋವಿನ ಸಮಸ್ಯೆ ಹಿನ್ನೆಲೆ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಕುರಿತಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಶಸ್ತ್ರಚಿಕಿತ್ಸೆ ಬಳಿಕ ನಟ ದರ್ಶನ್ ಅವರು ಮತ್ತೆ ಜೈಲಿಗೆ ಹೋಗಬೇಕು ಎಂದು ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ದರ್ಶನ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಪಡೆಯುತ್ತಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮುಂದುವರೆದು ಬೇಲ್ ಕೇಳಬಹುದು. ಹಾಗಾಗಿ ಅವರಿಗೆ ಬೇಲ್ ಕೊಡಬಾರದು ಅಂತ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕುತ್ತೇವೆ. ಕೊಲೆ ಪ್ರಕರಣ ಕುರಿತು ಮತ್ತಷ್ಟು ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣ ಬಳಿಕ ಸಂಪೂರ್ಣ ಸಲ್ಲಿಕೆ ಮಾಡುತ್ತೇವೆ ಎಂದು ತಿಳಿಸಿದರು. ಚಿಕಿತ್ಸೆಯ ಬಳಿಕ ದರ್ಶನ ವಾಪಸ್ ಜೈಲಿಗೆ ಹೋಗಬೇಕು. ದರ್ಶನ್ ಗೆ ಶಸ್ತ್ರಚಿಕಿತ್ಸೆ ದಿನಾಂಕ ನಿಗದಿ ಮಾಡಿಲ್ಲ. ಆಪರೇಷನ್ ಗಳ ಬಗ್ಗೆ ದರ್ಶನ್ ರಕ್ತದೊತ್ತಡ ಕಾರಣವಾಗಿದೆ. ಚಿಕಿತ್ಸೆಗೆ ದರ್ಶನ್ ಸಿದ್ಧರಿದ್ದಾರೆ…
ಬೆಂಗಳೂರು : ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದ್ದ ರಾಜ್ಯ ಸರ್ಕಾರ ಇದೀಗ, ಜನರ ಆಕ್ರೋಶಕ್ಕೆ ಮಣಿದು, ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆಯನ್ನು ಸ್ಥಗಿತಗೊಳಿಸಿದೆ. ಹೀಗಾಗಿ ಬಿಪಿಎಲ್ ಕಾರ್ಡ್ ದಾರರು ತಮ್ಮ ಕಾರ್ಡ್ ಗಳನ್ನು ಸರಿಪಡಿಸಿಕೊಳ್ಳಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎದುರು ಸಾಲುಗಟ್ಟಿ ನಿಂತಿದ್ದಾರೆ. ಹೌದು ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ನಿಲ್ಲಿಸಿದ ರಾಜ್ಯ ಸರ್ಕಾರ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಇದೀಗ ಬಿಪಿಎಲ್ ಕಾರ್ಡ್ ಪರಿಷ್ಕರಣೆಯನ್ನು ಸ್ಥಗಿತಗೊಳಿಸಲಾಗಿದೆ. ರದ್ದಾಗಿರುವ ಕಾರ್ಡ್ ಲಿಸ್ಟ್ ಪಡೆದು ಸರಿಪಡಿಸಲು ಸೂಚನೆ ನೀಡಲಾಗಿದೆ. ಒಂದು ವಾರದಲ್ಲಿ ಕಾರ್ಡ್ ಸರಿಪಡಿಸುವಂತೆ ಸೂಚನೆ ನೀಡಲಾಗಿದೆ. ಹಾಗಾಗಿ ಇದೀಗ ರದ್ದಾಗಿರುವ ಅರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳು ದಾಖಲೆಗಳನ್ನು ತೆಗೆದುಕೊಂಡು ತಮ್ಮ ಕಾರ್ಡ್ ಗಳನ್ನು ಸರಿಪಡಿಸಿಕೊಳ್ಳುತ್ತಿರುವ ಫಲಾನುಭವಿಗಳು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗಳತ್ತ ಫಲಾನುಭವಿಗಳು ತೆರಳುತ್ತಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗಳ ಆವರಣದಲ್ಲಿ ಇದೀಗ ಜನಜಂಗುಳಿ ಕಂಡುಬಂದಿದೆ.
ಬೆಂಗಳೂರು : ವಕ್ಫ್ ವಿವಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಕಚೇರಿಗೆ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಇಂದು ವಕ್ಫ್ ವಿರುದ್ಧ ಶ್ರೀರಾಮ ಸೇನೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಗೂ ಮುನ್ನ ಚಾಮರಾಜಪೇಟೆಯ ಮಹದೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಲಾಯಿತು. ಪೂಜೆಯ ಬಳಿಕ ಶಾಸಕ ಜಮೀರ್ ಕಚೇರಿಯ ವರೆಗೂ ಶ್ರೀಮರಾಮ ಸೇನೆ ಪಾದಯಾತ್ರೆ ನಡೆಸಿತು. ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಪುತಾಲಿಕ್ ನೇತೃತ್ವದಲ್ಲಿ ರ್ಯಾಲಿ ನಡೆಯಿತು. ಈ ವೇಳೆ ಸಚಿವ ಜಮೀರ್ ಅಹ್ಮದ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಮುತಾಲಿಕ್ ಗೆ ತಡೆ ಒಡ್ಡಲಾಯಿತು. ರ್ಯಾಲಿ ಬೇಡ ವಾಹನದಲ್ಲಿ ತೆರಳಿ ಮನವಿಪತ್ರ ಸಲ್ಲಿಸುವಂತೆ ಈ ವೇಳೆ ಪೊಲೀಸರು ಸೂಚನೆ ನೀಡಿದರು. ಮನವೊಲಿಕೆಗೆ ಒಪ್ಪದ ಹಿನ್ನೆಲೆಯಲ್ಲಿ ಪೊಲೀಸರು ಮುತಾಲಿಕ್ ಅವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ರಾಯಚೂರು : ತನ್ನ ಊರಿಗೆ ಹೋಗಲು ಬಸ್ ಸಿಗಲಿಲ್ಲ ಎಂದು ಪುಂಡನೊಬ್ಬ ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಬಂಧಿತ ಆರೋಪಿಯನ್ನು ಲಿಂಗಸುಗೂರಿನ ಗೋಲಪಲ್ಲಿಯ ತಿಮ್ಮಣ್ಣ ಎಂದು ಗುರುತಿಸಲಾಗಿದೆ. ಗ್ರಾಮದ ಬಳಿ ನ.19ರ ಬೆಳಗಿನ ಜಾವ 2ರ ವೇಳೆ ಆರೋಪಿ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದ. ಕಲ್ಲು ತೂರಾಟದಲ್ಲಿ ಮೂರು ಸಾರಿಗೆ ಬಸ್, ಕಾರು ಹಾಗೂ ಲಾರಿಗಳ ಗಾಜುಗಳು ಒಡೆದು ಹೋಗಿದ್ದವು. ಅಲ್ಲದೇ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಘಟನೆಯಿಂದಾಗಿ ಮೂರು ಸಾರಿಗೆ ಬಸ್, ಕಾರು ಹಾಗೂ ಲಾರಿಗಳ ಗಾಜುಗಳು ಒಡೆದು ಹೋಗಿದ್ದವು. ಅಲ್ಲದೇ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಆರೋಪಿಗಳು ಕುಡಿದ ಅಮಲಿನಲ್ಲಿ ಕಲ್ಲುತೂರಾಟ ನಡೆಸಿರುವುದು ತನಿಖೆಯಲ್ಲಿ ತಿಳಿದು ಬಂದಿತ್ತು. ಮಾತ್ರವಲ್ಲದೇ ಕಳ್ಳನ ಮಾಡಲು ಈ ಕೃತ್ಯ ನಡೆಸಲಾಗಿದೆ ಎಂದು ಶಂಕಿಸಲಾಗಿತ್ತು. ಬಂಧಿತ ಆರೋಪಿ ತನ್ನ ಅಕ್ಕ, ಬಾವನನ್ನ ಬೆಂಗಳೂರಿಗೆ…
ಬೆಂಗಳೂರು : ವ್ಯಕ್ತಿಯೊಬ್ಬರಿಗೆ ಮಹಿಳೆಯೊಬ್ಬಳು ಖಾಸಗಿ ಫೋಟೋ ಕಳುಹಿಸಿ, ಹನಿಟ್ರ್ಯಾಪ್ ಮೂಲಕ 2 ಕೋಟಿಗೂ ಅಧಿಕ ರೂಪಾಯಿ ಹಣ ವಸೂಲಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹನಿ ಟ್ರ್ಯಾಪ್ ಮಾಡಿದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಸರ್ಕಾರಿ ಸಂಸ್ಥೆಯಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಿಂದ 2.5 ಕೋಟಿ ರೂಪಾಯಿಗಳನ್ನು ವಸೂಲಿ ಮಾಡಲಾಗಿದ್ದು, ಬಂಧಿತ ಆರೋಪಿಗಳನ್ನು ತಬ್ಸಂ ಬೇಗಂ, ಅಜೀಮ್ ಉದ್ದಿನ್, ಆನಂದ್ ಹಾಗೂ ಅಭಿಷೇಕ್ ಎಂದು ಗುರುತಿಸಲಾಗಿದೆ. ವಂಚನೆಗೆ ಒಳಗಾದ ವ್ಯಕ್ತಿಯನ್ನು ಜಿಮ್ ಒಂದರಲ್ಲಿ ಆರೋಪಿ ತಬ್ಸಂ ಬೇಗಂ ಪರಿಚಯ ಮಾಡಿಕೊಂಡಿದ್ದಳು. ಮಗುವನ್ನು ದತ್ತು ಪಡೆದುಕೊಳ್ಳುವ ವಿಚಾರವಾಗಿ ಆರೋಪಿಯು, ವ್ಯಕ್ತಿಗೆ ಹತ್ತಿರವಾಗಿ ವಾಟ್ಸಪ್ ಮೂಲಕ ಚಾಟಿಂಗ್ ಆರಂಭಿಸಿದ್ದಾರೆ. ಈ ವೇಳೆ ಖಾಸಗಿ ಫೋಟೋಗಳನ್ನು ಮಹಿಳೆ ಕಳುಹಿಸಿದ್ದಾಳೆ. 2021 ರಿಂದ ಇಲ್ಲಿಯವರೆಗೂ ಬೆದರಿಸಿ ಹಂತಹಂತವಾಗಿ 2.5 ಕೋಟಿಯವರೆಗೂ ಹಣ ವಸೂಲಿ ಮಾಡಿದ್ದಾರೆ. ಇದೀಗ ವ್ಯಕ್ತಿ ಸಿಸಿಬಿಗೆ ಈ ಕುರಿತು ದೂರು ನೀಡಿದ್ದು, ಸಿಸಿಬಿ ಪೊಲೀಸರು ಆರೋಪಗಳನ್ನು ಅವಶ್ಯಕ ಪಡೆದು…
ಉತ್ತರಕನ್ನಡ : ಜಿಲ್ಲೆಯ ಮುಂಡಗೋಡು ವಸತಿ ಶಾಲೆಯ ಮಕ್ಕಳಲ್ಲಿ ಮಂಗನಬಾವು ಪತ್ತೆ ಹಿನ್ನೆಲೆಯಲ್ಲಿ ಮುಂಡಗೋಡು ಇಂದಿರಾ ವಸತಿ ಶಾಲೆಗೆ ಮೂರು ದಿನಗಳ ಕಾಲ ರಜೆ ನೀಡಲಾಗಿದೆ ಎಂದು ಕಾರವಾರದಲ್ಲಿ ಉತ್ತರ ಕನ್ನಡದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಈ ಕುರಿತು ಮಾಹಿತಿ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ವಸತಿ ಶಾಲೆಯ ಕೆಲವು ಮಕ್ಕಳಲ್ಲಿ ಜ್ವರ ಕಾಣಿಸಿಕೊಂಡಿದೆ. ವಸತಿ ಶಾಲೆಗೆ ಒಂದು ವೈದ್ಯಕೀಯ ತಂಡ ನಿಯೋಜನೆ ಮಾಡಲಾಗುತ್ತದೆ. ಮನೆಗೆ ಹೋಗಲು ಬಯಸುವವರೆಗೆ ಮನೆಗೆ ಕಳುಹಿಸುತ್ತೇವೆ ಎಂದು ಅವರು ತಿಳಿಸಿದರು. ಅಲ್ಲದೇ ಮನೆಗೆ ಹೋದಾಗ ಸೋಂಕು ಹರಡದಂತೆ ಮುನ್ನೆಚ್ಚರಿಕೆಗೆ ಸೂಚನೆ ನೀಡಿದ್ದೇವೆ. ಮನೆಗೆ ಹೋದವರನ್ನು ಐಸೋಲೇಶನ್ ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಐಸೋಲೇಶನ್ ನಲ್ಲಿರುವವರ ಬಗ್ಗೆ ನಿಗಾ ವಹಿಸಲು ಗ್ರಾಮ ಪಂಚಾಯಿತಿಗಳಿಗೆ ಸೂಚಿಸಲಾಗಿದೆ ಎಂದು ಉತ್ತರ ಕನ್ನಡದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಮಾಹಿತಿ ನೀಡಿದರು.













