Author: kannadanewsnow05

ಬೆಂಗಳೂರು : ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಹೊರಡಿಸುವ ನಿರ್ವಹಣಾ ಸಮಿತಿ ನಮಗೆ ಬೇಡ. ಕಾವೇರಿ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಜೈಲ್ ಭರೋ ಚಳುವಳಿ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಕಾವೇರಿ ನಿರ್ವಹಣಾ ಸಮಿತಿ ಪ್ರತಿದಿನ 1 ಟಿಎಂಸಿ, ಜು.31ರವರೆಗೂ ಬಿಡುಗಡೆ ಮಾಡಬೇಕೆಂದು ಆದೇಶ ನೀಡಿದ್ದಾರೆ. ಇದು ನಿಜವಾಗ್ಲೂ ಕರ್ನಾಟಕಕ್ಕೆ, ನಮ್ಮ ರೈತರಿಗೆ ಅನ್ಯಾಯವಾಗಿದೆ. ನಮ್ಮ ಕೆರೆಗಳಲ್ಲಿ ನೀರಿಲ್ಲ, ನಮ್ಮ ಬೆಳೆಗಳು ನಾಶವಾಗ್ತಿವೆ. ಎಲ್ಲಾ ಜಲಾಶಯಗಳು ಸದ್ಯ 60 ಟಿಎಂಸಿ ನೀರು ಇರಬಹುದು. ಈಗಿನ ಪರಿಸ್ಥಿತಿಯಲ್ಲಿ 90-95 ಟಿಎಂಸಿ ನೀರು ಇರಬೇಕಿತ್ತು. ಆದರೆ, ನೀರು ತುಂಬಾ ಕಡಿಮೆ ಇದ್ದರೂ ನಿರ್ವಹಣಾ ಪ್ರಾಧಿಕಾರ ಕಾವೇರಿ ಜಲಾಶಯದಿಂದ ನೀರು ಬಿಡುವಂತೆ ಆದೇಶ ಹೊರಡಿಸುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಮಿಳುನಾಡಿನವರು ಭಾರತ ದೇಶದಲ್ಲಿ ಇದ್ದೀವಿ ಅಂತ ಅನ್ಕೊಂಡಿಲ್ಲ. ಕರ್ನಾಟಕ ಮೇಲೆ ತಮಿಳುನಾಡಿನ ಎಲ್ಲ ಮುಖ್ಯಮಂತ್ರಿಗಳು ವಿರೋಧ ಮಾಡಿಕೊಂಡೇ ಬರುತ್ತಿದ್ದಾರೆ. ಮೇಕೆದಾಟು ಬಗ್ಗೆ ಸರ್ಕಾರ ನಿಲುವು ಏನು? ಮೇಕೆದಾಟು ಪಾದಯಾತ್ರೆ ಮಾಡಿದ್ರಿ…

Read More

ಬಾಗಲಕೋಟೆ : ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ ರಾಜ್ಯದಲ್ಲಿ ಮತ್ತೊಂದು ಅಕ್ರಮ ಹಣ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿದ್ದು, ಬಾಗಲಕೋಟೆಯಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಹೆಸರಿನಲ್ಲಿದ್ದ ಮೂರು ಅಕೌಂಟ್‌ಗಳಿಂದ ಹಣ ವರ್ಗಾಯಿಸಲಾಗಿದೆ. ಇಲಾಖೆಯ ಹಿರಿಯ ಅಧಿಕಾರಿಗಳು ಅಕೌಂಟ್‌ಗಳ ಬಗ್ಗೆ ಮಾಹಿತಿ ಕೊಡಿ ಎಂದು ಆದೇಶಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹೌದು ವಾಲ್ಮೀಕಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಒಂದು ಹಗರಣದ ತನಿಖೆ ನಡೆಯುತ್ತಿರುವಾಗಲೇ ಇದೀಗ ಮತ್ತೊಂದು ಹಗರಣ ಸರ್ಕಾರಕ್ಕೆ ಇಕ್ಕಟ್ಟಿಗೆ ಸಿಲುಕಿಸಿದೆ. ಬಾಗಲಕೋಟೆ ನಗರದ ಐಡಿಬಿಐ ಬ್ಯಾಂಕ್‌ನಲ್ಲಿ ಪ್ರವಾಸೋದ್ಯಮ ಇಲಾಖೆಯ 3 ಖಾತೆಗಳ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ. ಹಗರಣದಲ್ಲಿ 2,47,00,773 ರೂಪಾಯಿ ಮಾಯವಾಗಿದ್ದು, ಬ್ಯಾಂಕ್‌ ಅಧಿಕಾರಿ, ಸಿಬ್ಬಂದಿ ಹಗರಣದಲ್ಲಿ ಶಾಮೀಲಾಗಿರುವ ಶಂಕೆ ಇದೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಲಾಖೆಯ ಖಾತೆಗಳ ಪೈಕಿ ಬೇರೆ ಬೇರೆ…

Read More

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಐದು ದಿನ ಕರಾವಳಿ ಮತ್ತು ಮಲೆನಾಡಿನ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ದಕ್ಷಿಣ ಕರ್ನಾಟಕದ ಉತ್ತರ ಕನ್ನಡ ದಕ್ಷಿಣ ಕನ್ನಡ ಮಂಗಳೂರು ಉಡುಪಿ ಸೇರಿಯಂತೆ ಹಲವಡೆ ಮಳೆಯ ಅವಾಂತರ ಸೃಷ್ಟಿಯಾಗಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.ಇಂದು ಸೇರಿದಂತೆ ಐದು ದಿನ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹೈಅಲರ್ಟ್ ಮುಂದುವರೆಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಲಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 40 ರಿಂದ 50 ಕಿಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯೂ ಇರಲಿದೆ. ದಕ್ಷಿಣ ಒಳನಾಡಿನ ಹಾಸನ ಮತ್ತು ಚಾಮರಾಜನಗರ ಜಿಲ್ಲೆಯಲ್ಲೂ ಮಳೆ…

Read More

ಮಂಗಳೂರು : ಮಂಗಳೂರಿನಲ್ಲಿ ಶಾಸಕ ಭರತ್ ಶೆಟ್ಟಿ ವಿರುದ್ಧ ದಾಖಲಾಗಿರುವ ಎಂದು ಬಿಜೆಪಿ ನಾಯಕರು ಮಂಗಳೂರಿನ ಜಂಕ್ಷನ್ ಬಳಿ ಪ್ರತಿಭಟನೆ ನಡೆಸಿದರು ಈ ವೇಳೆ ವಿಪಕ್ಷ ನಾಯಕ ಮಾತನಾಡಿದ್ದು, ನಮ್ಮ ಮೈಯಲ್ಲಿ ಹರಿಯುತ್ತಿರುವುದು ಭಾರತ ಮಾತೆಯ ರಕ್ತ ನಾವು ಇಂತಹ ಗೊಡ್ಡು ಬೆದರಿಕೆಗಳಿಗೆಲ್ಲ ಹೆದರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. ಮಂಗಳೂರು ಶಾಸಕ ಭಾರತ ಶೆಟ್ಟಿ ವಿರುದ್ಧ FIR ಹಿನ್ನೆಲೆಯಲ್ಲಿ ಇಂದು ಮಂಗಳೂರು ಜಂಕ್ಷನ್ ನಲ್ಲಿ ಬಿಜೆಪಿ ನಾಯಕರು ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಹೋರಾಟ ಪೊಲೀಸರು ವಿರುದ್ಧ ಅಲ್ಲ ಬಿಜೆಪಿ ಶಾಸಕರನ್ನು ಹೆದರಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ಮೋದಿ ಹತ್ಯೆ ಮಾಡಬೇಕು ಎಂದವನಿಗೆ ಟಿಕೆಟ್ ನೀಡಿದೆ. ಪಾಕ್ ಜಿಂದಾಬಾದ್ ಎಂದವರ ಪರ ಮಂತ್ರಿಗಳ ಬ್ಯಾಟಿಂಗ್ ಮಾಡಿದ್ದಾರೆ. ಬಾಂಬ್ ಹಾಕಿದವರನ್ನು ಡಿಕೆ ಸಹೋದರರು ಬ್ರದರ್ಸ್ ಅಂತಾರೆ. ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಪದೇ ಪದೇ ತೋರಿಸುತ್ತೆ. ಜೈ ಶ್ರೀ ರಾಮ್…

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ತಾಯಿಯೊಬ್ಬಳು ತನ್ನ ಮಗನನ್ನು ಕೊಂದು ನಂತರ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕದ RNZ ಅಪಾರ್ಟ್ಮೆಂಟಲ್ಲಿ ನಡೆದಿದೆ. ಹೌದು ಬೆಂಗಳೂರಿನ ಯಲಂಕದ RNZ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದೆ. ನೇಣು ಬಿಗಿದು ವರ್ಷದ ಪುತ್ರ ಭಾರ್ಗವ್ (13) ಕೊಲೆ ಮಾಡಿದ್ದೂ, ಬಳಿಕ ತಾಯಿ ರಮ್ಯಾ (40) ತಾನು ಕೂಡ ನೇಣಿಗೆ ಶರಣಾಗಿದ್ದಾಳೆ. ಮೂರು ತಿಂಗಳ ಹಿಂದೆ ಪತಿ ಶ್ರೀಧರ್ ಕ್ಯಾನ್ಸರಿಂದ ಸಾವನಪ್ಪಿದ್ದರು. ಇದರಿಂದ ರಮ್ಯಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಜೂನ್ 19ರಂದು ಪಿಜಿಯಲ್ಲಿದ್ದ ಮಗಳ ಜೊತೆ ಮಾತನಾಡಿದರು. ಮಗಳ ಜೊತೆ ಮಾತನಾಡಿ ನೇಣಿಗೆ ಶರಣಾಗಿರುವ ರಮ್ಯಾ ಪೊಲೀಸರು, ವೈದ್ಯರು ಹಾಗೂ ಮಗಳಿಗೆ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಪ್ರಹ್ಲಾದ್ ಜೋಶಿ ಹೈಟೆಕ್ ಏನೇನೋ ಮಾತಾಡ್ತಾರೆ ಎಂದು ತಿರುಗೇಟು ನೀಡಿದರು. ಹುಬ್ಬಳ್ಳಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು. 530 ಗಣಿ ಗುತ್ತಿಗೆಗಳನ್ನು ಆದಾನಿಗೆ ಕೊಟ್ಟಿದ್ದಾರೆ. ಇದರ ಬಗ್ಗೆ ಕೇಂದ್ರ ಸಚಿವ ಜೋಶಿ ಚರ್ಚೆ ಮಾಡುತ್ತಾರಾ? ಐದು ವರ್ಷದ ಅವಧಿಯಲ್ಲಿ ಎಷ್ಟು ಮೈನಿಂಗ್ ಲೈಸನ್ಸ್ ಯಾರಿಗೆ ಕೊಟ್ಟಿದ್ದೀರಿ ಯಾವ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಾಗ್ದಾಳಿ ನಡೆಸಿದರು. ಅಮಿತ್ ಶಾ ಮಗ ಜಯ್ ಶಾ ಬ್ಯಾಂಕ್ ನಲ್ಲಿ ಹಣ ಟ್ರಾನ್ಸ್ಫರ್ ಆಗಿದೆ. ಈ ಬಗ್ಗೆ ಡೇಟಾ ಕೊಡಲಾ? ಕೇಂದ್ರ ಸಚಿವ ಜೋಶಿ ಹೈಟೆಕ್ ಏನೇನೋ ಮಾತಾಡ್ತಾರೆ. ಜೋಶಿ ಅವರು ನೀಟ್ ಅಕ್ರಮದ ಬಗ್ಗೆ ಏಕೆ ಮಾತಾಡಲ್ಲ? ಏರ್ಪೋರ್ಟ್ ಕುಸಿದು ಬಿದ್ದು…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣ ವರ್ಗಾವಣೆ ಪ್ರಕರಣಕ್ಕೆ ಇದೀಗ ಸ್ಪೋಟಕ ಸಿಕ್ಕಿದ್ದು, ನಿಗಮದ ಅಧ್ಯಕ್ಷ ಚಂದ್ರಶೇಖರನ ಆತ್ಮಹತ್ಯೆ ಮಾಡಿ ಕೊಳ್ಳುವ ವೇಳೆ ಕೇವಲ ಐದು ಕೋಟಿ ಇತ್ತು, ಆದರೆ ಉಳಿದ 94 ಕೋಟಿ ಬಗ್ಗೆ ಇದೀಗ ಇಡಿ ಹಾಗೂ ಎಸ್ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ. ಹೌದು ವಾಲ್ಮೀಕಿ ನಿಗಮದಲ್ಲಿ ಇದ್ದದ್ದು ಭರ್ತಿ 94 ಕೋಟಿ ಇತ್ತು ಎನ್ನಲಾಗಿದೆ. ನಿಗಮದ ಅಧಿಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಾಗ ನಿಗಮದಲ್ಲಿ ಇದ್ದಂತದ್ದು 5 ಕೋಟಿ ಮಾತ್ರ ಎಂದು ತಿಳಿದುಬಂದಿದೆ. ಇಡಿ ಎಸ್ ಐ ಟಿ ವಿಚಾರಣೆಯ ವೇಳೆ 34 ಕೋಟಿ ಲೆಕ್ಕ ಮಾತ್ರ ಸಿಕ್ಕಿದೆ. ಆದರೆ ಇನ್ನೂ 55 ಕೋಟಿ ಲೆಕ್ಕದ ಬಗ್ಗೆ ವಿಚಾರಣೆಗಾಗಿ ಇಡಿ ಮುಂದಾಗಿದೆ ಈಗ ಇಡಿ ಎಸ್ ಐ ಟಿ ವಿಚಾರಣೆ ಮುಂದುವರೆಸಿದೆ. ಅಲ್ಲದೆ ನಿಗಮದಿಂದ ಬೆಂಗಳೂರಿನಲ್ಲಿರುವ ಬ್ಯಾಂಕಿಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ. ಎಂ ಜಿ ರಸ್ತೆಯಲ್ಲಿರುವ ಬ್ಯಾಂಕಿಗೆ 89 ಕೋಟಿ ಹಣ…

Read More

ಹಾವೇರಿ : ಸವಣೂರು ತಾಲೂಕಿನ ಯುವಕರ ಗುಂಪೊಂದು ನನ್ನ ಗಿಡಕ್ಕೆ ಹೋಗುವಾಗ ಇನ್ನೊಂದು ವಾಹನವನ್ನು ಅವರು ಟೈಪ್ ಮಾಡಲು ಹೋಗಿ ಬೇವಿನಮರಕ್ಕೆ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಹೌದು ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಬಳಿ ಬೆಳಿಗ್ಗೆ ಈ ಒಂದು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ನೀಲಪ್ಪ (23) ಸುದೀಪ್ ಕೋಟಿ (18) ಸ್ಥಳದಲ್ಲಿ ಮೃತಪಟ್ಟಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಶಿವನಗೌಡ (20) ಕಲ್ಮೇಶ್ (26) ಇದೀಗ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಶಿವನಗೌಡ, ಕಲ್ಮೇಶ್ ಸಾವನಪ್ಪಿದ್ದಾರೆ. ಮೃತರು ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಸ್ವಿಫ್ಟ್ ಕಾರಿನಲ್ಲಿ ನಂದಗಡಕ್ಕೆ ತೆರಳುತ್ತಿದ್ದ ಏಳು ಯುವಕರ ತಂಡ ಬೇರೆ ವಾಹನ ಓವರ್ಟೇಕ್ ಮಾಡಲು ಹೋಗಿ ಅಪಘಾತ ಆಗಿರುವ ಶಂಕೆ ವ್ಯಕ್ತವಾಗಿದೆ. ಚಾಲಕನ ನಿಯಂತ್ರಣದ ತಪ್ಪಿ…

Read More

ಬೆಂಗಳೂರು : ಇದೆ ಜುಲೈ 15 ರಂದು ಸೋಮವಾರದಂದು ವಿಧಾನ ಮಂಡಲ ಅಧಿವೇಶನ ಆರಂಭಗೊಳ್ಳುತ್ತಿದ್ದು ಈ ವಿಚಾರವಾಗಿ ಕಾಂಗ್ರೆಸ್ ಅನ್ನು ಕಟ್ಟಿಹಾಕಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಈಗಾಗಲೇ ಬಿಗ್ ಪ್ಲಾನ್ ಮಾಡಿಕೊಂಡಿದ್ದು, ಅಧಿವೇಶನ ಆರಂಭದಲ್ಲಿ ಯಾವುದೇ ಪ್ರತಿಭಟನೆ ಧರಣಿ ನಡೆಸಿದಂತೆ ಕೇಂದ್ರ ಸಚಿವರು ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಸದನದಲ್ಲಿ ಮೂಡ ಸೈಟ್ ಪ್ರಕರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳು ಎರಡು ಹಗರಣಗಳ ಬಗ್ಗೆ ನಿಲುವಳಿ ಮಂಡನೆ ಮೂಲಕ ಚರ್ಚೆಗೆ ನಿರ್ಧರಿಸಿದ್ದು, ಈ ವಿಷಯಗಳನ್ನ ಪ್ರಸ್ತಾಪಿಸಲು ಬಿಜೆಪಿ ಹಾಗೂ ಜೆಡಿಎಸ್ ನಿರ್ಧಾರ ಮಾಡಿದೆ. ಉಳಿದಂತೆ ಎಸ್ಸಿ ಎಸ್ಟಿ, ಟಿಎಸ್‌ಪಿ ಅನುದಾನ ಬಳಕೆ, ಬೆಲೆ ಏರಿಕೆ ಕಾನೂನು ಮತ್ತು ಸುವ್ಯವಸ್ಥೆ, ಮತ್ತಿತರ ವಿಷಯಗಳು ಸನ್ನಿವೇಶ ಆಧಾರಿತವಾಗಿ ಪ್ರಸ್ತಾಪಿಸಲು ವಿಪಕ್ಷಗಳು ಇದೀಗ ತೀರ್ಮಾನಿಸಿವೆ. ಯಾವುದೇ ವಿಷಯಕ್ಕೆ ಆರಂಭದಲ್ಲಿ ಧರಣಿ ನಡೆಸದೆ ಕೊನೆಯಲ್ಲಿ ಧರಣಿ ನಡೆಸಲು ತೀರ್ಮಾನಿಸಲಾಗಿದ್ದು, ಕೊನೆಯಲ್ಲಿ ಪ್ರತಿಭಟನೆಗೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ತೀರ್ಮಾನ ಮಾಡಿವೆ.ಎಲ್ಲದಕ್ಕೂ…

Read More

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಈಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಅವರಿಗೆ ಸಂಕಷ್ಟ ಎದುರಾಗಿದ್ದು ಬಿಜೆಪಿ ಅಧಿಕಾರದಲ್ಲಿದ್ದಾಗ ಅವರು ಸಚಿವರಾಗಿದ್ದ ವೇಳೆ ಅಕ್ರಮ ನಡೆದಿತ್ತು ಎಂಬ ಆರೋಪ ಕೇಳಿ ಬಂದಿದೆ. ಹಾಗಾಗಿ ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಶ್ರೀರಾಮುಲುಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಡಿ ಅಧಿಕಾರಿಗಳು ಹಲವರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಅದರ ಬೆನ್ನಲ್ಲೇ ಎಸ್ ಐ ಟಿ ಅಧಿಕಾರಿಗಳು ಕೂಡ ತನಿಖೆಯನ್ನು ಚುರುಕುಗೊಳಿಸಿದ್ದು ಮಾಜಿ ಸಚಿವ ಶ್ರೀರಾಮುಲುಗೆ ವಿಚಾರಣೆಗೆ ಹಾಜರಾಗುವಂತೆ ಸದ್ಯದಲ್ಲೇ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

Read More