Author: kannadanewsnow05

ಬೆಂಗಳೂರು : ಅರಣ್ಯಗಳಲ್ಲಿ ಚಲನಚಿತ್ರ ಚಿತ್ರೀಕರಣದ ವೇಳೆ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ ಎಂದು ರಾಜ್ಯ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ. ರಿಷಬ್ ಶೆಟ್ಟಿ ನಟನೆಯ ಕಾಂತಾರ ಟು ಚಿತ್ರೀಕರಣದ ವೇಳೆ ಅರಣ್ಯದಲ್ಲಿ ಪಟಾಕಿ ಸ್ಫೋಟಿಸಿ ನಿಯಮ ಉಲ್ಲಂಘನೆ ಮಾಡಿದ್ದರು. ಈ ವಿಚಾರವಾಗಿ ಇದೀಗ ಈಶ್ವರ ಖಂಡ್ರೆ ಅವರು ಅರಣ್ಯದಲ್ಲಿ ಯಾವುದೇ ಚಲನಚಿತ್ರ ಮಾಡುವ ವೇಳೆ ರಾಜ್ಯ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ ಎಂದು ಖಡಕ್ ಸೂಚನೆ ನೀಡಿದ್ದಾರೆ. ಕಾಂತಾರ-2 ಸಿನೆಮಾಗೆ ಬಿಗ್ ರಿಲೀಫ್ ಹಾಸನ ಜಿಲ್ಲೆಯ ಸಕಲೇಶಪುರದ ಹೆರೂರು ಅರಣ್ಯದಲ್ಲಿ ಜನವರಿ 2 ರಿಂದ ಕಾಂತಾರ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಈ ವೇಳೆ ಚಿತ್ರೀಕರಣಕ್ಕಾಗಿ ಗೋಮಾಳ ಜಾಗಕ್ಕೆ ಪರವಾನಿಗೆ ಪಡೆದಿರುವ ಚಿತ್ರ ತಂಡ ಕಾಡಿಗೆ ಬೆಂಕಿ ಹಚ್ಚಿ ನಾಶ ಪಡಿಸುತ್ತಿದೆ ಎಂದು ಆರೋಪಿಸಲಾಗಿತ್ತು. ಈ ಕುರಿತು ಈಶ್ವರ್ ಖಂದ್ರ್ ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆ ಆಗಿಲ್ಲ ಎಂಬುದು ಪ್ರಾಥಮಿಕ ವರದಿ. ಆದರೂ ಸಂಪೂರ್ಣ ವರದಿ…

Read More

ಬೆಂಗಳೂರು : ಗಂಗಾವತಿ ಕ್ಷೇತ್ರದ ಶಾಸಕ ಜನಾರ್ಧನ ರೆಡ್ಡಿ ಹಾಗೂ ಬಿಜೆಪಿಯ ಮಾಜಿ ಸಚಿವ ಶ್ರೀರಾಮುಲು ನಡುವೆ ಇದೀಗ ಬಿರುಕು ಉಂಟಾಗಿದೆ. ಉಪಚುನಾವಣೆಯಲ್ಲಿ ಸೋಲಲು ಶ್ರೀರಾಮುಲು ಕಾರಣ ಎಂದು ಜನಾರ್ದನ ರೆಡ್ಡಿ ಇತ್ತೀಚಿಗೆ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಶ್ರೀರಾಮುಲು ಆರೋಪಿಸಿದ್ದರು. ಬಳಿಕ ಜನಾರ್ಧನ ರೆಡ್ಡಿ ಕೂಡ ಶ್ರೀರಾಮುಲು ವಿರುದ್ಧ ಗಂಭೀರವಾದ ಆರೋಪ ಮಾಡಿದ್ದರು. ಇದೀಗ ಇವರಿಬ್ಬರ ನಡುವೆ ಸಂಧಾನ ನಡೆಸಲು ಬಿಜೆಪಿ ಹೈಕಮಾಂಡ್ ಕೇಂದ್ರ ಸಚಿವ ಪ್ರಹ್ಲಾದ ಜೋಶಿಗೆ ಸಂಧಾನದ ಜವಾಬ್ದಾರಿ ನೀಡಿದೆ. ಹೌದು ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾರಿ ಸಚಿವ ಶ್ರೀರಾಮುಲು 30 ವರ್ಷಗಳ ಸ್ನೇಹದ ನಡುವೆ ಇದೀಗ ಬಿರುಕು ಉಂಟಾಗಿದೆ.ಹಾಗಾಗಿ ಜ್ ಇಬ್ಬರ ನಡುವೆ ಸಂಧಾನ ನಡೆಸುವ ಜವಾಬ್ದಾರಿಯನ್ನು ಪ್ರಹ್ಲಾದ ಜೋಶಿಗೆ ಹೈಕಮಾಂಡ್ ಇದೀಗ ಜವಾಬ್ದಾರಿ ವಹಿಸಿದ್ದಾರೆ.ಬಿಜೆಪಿ ರಾಷ್ಟ್ರೀಯ ನಾಯಕರು ರಾಮುಲು ಕರೆದುಕೊಂಡು ದೆಹಲಿಗೆ ಬರುವಂತೆ ಜೆಪಿ ನಡ್ಡಾ ಇದೀಗ ಸೂಚನೆ ನೀಡಿದ್ದಾರೆ.ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ನಡೆದ ವಿಚಾರವಾಗಿ, ಶ್ರೀರಾಮುಲು…

Read More

ಶಿವಮೊಗ್ಗ : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಒಬ್ಬಳು, ತೀವ್ರ ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತಿದ್ದಾಳೆ. ಈ ವೇಳೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಶಿವಮೊಗ್ಗದಲ್ಲಿ ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸೌಮ್ಯ (25) ಎನ್ನುವ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಶಿವಮೊಗ್ಗದ ನೇತಾಜಿ ವ್ರತ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ.ಮೃತ ಯುವತಿ ಸೌಮ್ಯ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಳು. ಕಳೆದ ಹಲವು ದಿನಗಳಿಂದ ಸೌಮ್ಯಳಿಗೆ ಉಸಿರಾಟದ ಸಮಸ್ಯೆ ಎದುರಾಗಿದ್ದು ಇದರಿಂದ ತೀವ್ರವಾಗಿ ಆರೋಗ್ಯ ಸಮಸ್ಯೆ ಯನ್ನು ಎದುರಿಸಿದ್ದಳು. ಅನಾರೋಗ್ಯದಿಂದ ಬೇಸತ್ತು ಸೌಮ್ಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾವೇರಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಅಟ್ಟಹಾಸ ಮಿತಿಮೀರಿದ್ದು, ಈಗಾಗಲೇ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಮಹಿಳೆಯೊಬ್ಬರು ನನ್ನ ಮಾಂಗಲ್ಯ ಭಾಗ್ಯ ಉಳಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ತಾಳಿ ಪೋಸ್ಟ್ ಮಾಡಿ ಮನವಿ ಮಾಡಿರುವ ಘಟನೆ ವರದಿಯಾಗಿದೆ. ಹೌದು ಹಾವೇರಿ ಜಿಲ್ಲೆಯಲ್ಲೂ ಮೈಕ್ರೋ ಫೈನಾನ್ಸ್ ಅವರ ಉಪಟಳ ಹೆಚ್ಚುತ್ತಿದೆ. ಫೈನಾನ್ಸ್ ಕಿರುಕುಳಕ್ಕೆ ರಾಣೆಬೆನ್ನೂರು ಪಟ್ಟಣದ ನಿವಾಸಿ ಶೈಲಾ ಬೇಸತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಶೈಲಾ ಪತಿ ಮನೆ ತೊರೆದಿದ್ದಾರೆ. ಈ ವೇಳೆ ಶೈಲಾ ಸಿಎಂ ಗೆ ತಾಳಿ ಪೋಸ್ಟ್ ಮಾಡಿ ನನ್ನ ಮಾಂಗಲ್ಯ ಭಾಗ್ಯ ಉಳಿಸಿಕೊಡಿ ಎಂದು ಶೈಲಾ ಅವರು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ. ಮಾಂಗಲ್ಯದ ಬದಲಾಗಿ ಅರಿಶಿನ ಕೊಂಬು ಕಟ್ಟಿಕೊಂಡು ಶೀಲಾ ಇದೀಗ ಜೀವನ ನಡೆಸುತ್ತಿದ್ದಾರೆ. ವಿಕಲಚೇತನ ಪುತ್ರನ ಜೊತೆಗೆ ಶೈಲಾ ಇದೀಗ ಜೀವನ ನಡೆಸುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ದಬ್ಬಾಳಿಕೆಗೆ ಕಡಿವಾಣ ಹಾಕಲು ಶೈಲಾ…

Read More

ಬೆಂಗಳೂರು : ನಾನು ಡಿಕೆ ಸುರೇಶ ಸಹೋದರಿ ಎಂದು ಹೇಳಿ ವಂಚನೆ ಎಸಗಿರುವ ಆರೋಪಿ ಐಶ್ವರ್ಯ ಗೌಡ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.ಐಶ್ವರ್ಯ ಗೌಡ ವಿರುದ್ಧ ಸೌಭಾಗ್ಯ ಎಂಬ ಮಹಿಳೆ ದೂರು ನೀಡಿರುವ ವಿಚಾರವಾಗಿ ಸೌಭಾಗ್ಯ ವಿರುದ್ಧ ವರ್ಷದ ಹಿಂದೆಯೇ ಐಶ್ವರ್ಯ ಸಹೋದರ ದೂರು ನೀಡಿದ್ದರು ಎಂದು ತಿಳಿದುಬಂದಿದೆ. ಹೌದು ಈ ಹಿಂದೆಯೇ ಐಶ್ವರ್ಯ ಜೊತೆಗಿನ ವ್ಯವಹಾರವನ್ನು ಸೌಭಾಗ್ಯ ಕಳೆದುಕೊಂಡಿದ್ದರು. ಸೌಭಾಗ್ಯ ಜೊತೆಗಿನ ವ್ಯವಹಾರ ಅಂತ್ಯಗೊಂಡ ಕುರಿತ ವಿಡಿಯೋ ಕೂಡ ಬಿಡುಗಡೆ ಮಾಡಿದ್ದಾರೆ. ಇದೀಗ ವಿಡಿಯೋ ದಾಖಲೆ ಬಿಡುಗಡೆ ಮಾಡಿರುವ ಐಶ್ವರ್ಯ ಗೌಡ ಟೀಂ. ನನಗೂ ಐಶ್ವರ್ಯ ಗೌಡಗು ಇದ್ದ ಹಣದ ವ್ಯವಹಾರ ಮುಕ್ತಾಯವಾಗಿದೆ.ನನಗೆ ಐಶ್ವರ್ಯ ಗೌಡ ಅಲಿಯಾಸ್ ನವ್ಯಶ್ರೀ 30 ಲಕ್ಷ ಹಣ ಕೊಟ್ಟಿದ್ದಾರೆ. ನನ್ನ ಮಗಳ ವ್ಯವಹಾರ ಕೂಡ ಪೂರ್ಣಗೊಂಡಿದೆ. ಇನ್ನು ಮುಂದೆ ಐಶ್ವರ್ಯ ಜೊತೆಗೆ ಯಾವುದೇ ವ್ಯವಹಾರ ಇಲ್ಲ ಎಂದು ಹೇಳಿಕೆ ನೀಡಿರುವ ವಿಡಿಯೋ ಇದೀಗ ಬಿಡುಗಡೆ ಮಾಡಿದ್ದಾರೆ. ಜೊತೆಗೆ 200 ನೂರು ರೂಪಾಯಿ ಸ್ಟ್ಯಾಂಪ್…

Read More

ಬೆಳಗಾವಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರು ಕುಟುಂಬ ಸಮೇತ ಮನೆಯನ್ನು ತೊರೆಯುತ್ತಿದ್ದಾರೆ. ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಬಾಣಂತಿಯನ್ನು ಹೊರಹಾಕಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಮನೆಗೆ ಬೀಗ ಜಡಿದಿರುವ ಘಟನೆ ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಫೈನಾನ್ಸ್ ಕಿರುಕುಳಕ್ಕೆ ನೊಂದು ಗಣಪತಿ ಲಾಹೋರ್ ಎನ್ನುವ ಕುಟುಂಬ ಇದೀಗ ಕಣ್ಣೀರು ಹಾಕುತ್ತಿದೆ. ಒಂದು ತಿಂಗಳ ಮಗು ಸಮೇತ ಸಿಬ್ಬಂದಿಯಗಳು ಬಾಣಂತಿಯ ಕುಟುಂಬವನ್ನು ಹೊರಹಾಕಿದ್ದಾರೆ. ಮನೆ ಕಟ್ಟಲು ಗಣಪತಿ ಲಾಹೋರ್ 5 ಲಕ್ಷ ಸಾಲ ಪಡೆದಿದ್ದರು. ಅಫ್ಟೋಸ್ ಫೈನಾನ್ಸ್ ನಲ್ಲಿ 5 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಈಗಾಗಲೇ 3,50,000 ಸಾಲವನ್ನು ಗಣಪತಿಯವರು ಮರುಪಾವತಿ ಮಾಡಿದ್ದರು.ಅನಾರೋಗ್ಯ ಮಗಳ ಹೆರಿಗೆ ಕಾರಣದಿಂದ ಮುಂದಿನ ಕಂತುಗಳನ್ನು ಗಣಪತಿಯವರು ಕಟ್ಟಿರಲಿಲ್ಲ. ಇದೀಗ 7 ಲಕ್ಷಕ್ಕೂ ಅಧಿಕ ಹಣಕಟ್ಟಿ ಅಂತ ಹೇಳಿ ಮನೆ ಸೀಜ್ ಮಾಡಿದ್ದಾರೆ. ನ್ಯಾಯಾಲಯದಿಂದ ಆದೇಶ ತಂದು…

Read More

ಬೆಂಗಳೂರು : ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಹೆಣ್ಣು ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಗುಲಾಬಿ ಬಣ್ಣದ ದೀಪಾಲಂಕಾರ ಮಾಡಲು ನಿರ್ಧರಿಸಿದೆ. ಇದೆ ವೇಳೆ ಇಂದು ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಜನಿಸುವ ಹೆಣ್ಣು ಮಕ್ಕಳಿಗೆ 1 ಸಾವಿರ ರೂ. ಕಿಟ್ ಗಿಫ್ಟ್ ನೀಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಹೌದು ಇಂದು ರಾಜ್ಯದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನ ವಿಶಿಷ್ಟವಾಗಿ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಹೆಣ್ಣುಮಕ್ಕಳ ಲಿಂಗಾನುಪಾತವನ್ನ ಹೆಚ್ವಿಸುವುದರ ಜೊತೆಗೆ ಹೆಣ್ಣುಭ್ರೂಣ ಹತ್ಯೆಯನ್ನ ಹೋಗಲಾಡಿಸಲು ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದೆ. ಈ ಬಾರಿಯ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನ ರಾಜ್ಯದಾದ್ಯಂತ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಸಂಭ್ರಮದಿಂದ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ಆಸ್ಪತ್ರೆಗಳಲ್ಲಿ ಪಿಂಕ್ ಲೈಟಿಂಗ್ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಮಕ್ಕಳಿಗೆ ಸ್ಪೆಷಲ್ ಗಿಫ್ಟ್ ನೀಡುವಂತೆ ಆರೋಗ್ಯ ಸಚಿವ…

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು ಆಗತಾನೆ ಹುಟ್ಟಿದ ನವಜಾತ ಶಿಶುವನ್ನು ಪಾಪಿಗಳು ಮುಳ್ಳಿನ ಪೊದೆಯಲ್ಲಿ ಎಸೆದು ಪರಾರಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ. ಮುಧೋಳ ತಾಲೂಕಿನ ಹಲಗಲಿಯ ಬಳಿ ಮುಳ್ಳಿನ ಪೊದೆಯಲ್ಲಿ ನವಜಾತ ಶಿಶುವನ್ನು ಪಾಪಿಗಳು ಎಸೆದು ಹೋಗಿದ್ದಾರೆ. ವಿಷಯ ತಿಳಿದ ಸ್ಥಳೀಯರು ನವಜಾತಶವನ್ನು ರಕ್ಷಣೆ ಮಾಡಿ ಸ್ಥಳೀಯ ಹಲಗಲಿ ಆರೋಗ್ಯ ಕೇಂದ್ರಕ್ಕೆ ಮಗುವನ್ನು ಕಳಿಸಿದ್ದಾರೆ. ಸದ್ಯ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮುಧೋಳ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಇದೀಗ ಮತ್ತೊಂದು ಸೂಸೈಡ್ ಪ್ರಕರಣ ವರದಿಯಾಗಿದ್ದು, ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು, ಸಾಲದಿಂದ ಬೇಸತ್ತು ಬೆಂಗಳೂರಿನ ಮಲ್ಲೇಶ್ವರ ಬಳಿ ಇರುವ ಮಂತ್ರಿ ಮಾಲ್‌ನ 2ನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ನಿನ್ನೆ ರಾತ್ರಿ ಆತ್ಮಹತ್ಯೆ ‌ಮಾಡಿಕೊಂಡಿದ್ದಾರೆ‌. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ತುಮಕೂರು ಜಿಲ್ಲೆಯ ತಿಪಟೂರಿನ‌ ನಿವಾಸಿ ಟಿ.ಸಿ. ಮಂಜುನಾಥ್ (55) ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ 9ರ ಸುಮಾರಿಗೆ ಮಾಲ್‌ನಲ್ಲಿ ಹೆಚ್ಚಿನ ಗ್ರಾಹಕರು ಇದ್ದರು.‌ ಅದೇ ವೇಳೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಂಜುನಾಥ್ ಅವರು ಬ್ಯಾಂಕ್ ಸೇರಿದಂತೆ ವಿವಿಧೆಡೆ ಸಾಲ ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆಕೊಂಡಿರುವ ಸಾಧ್ಯತೆಯಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಮೃತ ವ್ಯಕ್ತಿಯ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ಕೇವಲ ಆಟೋ ಟಚ್ ಆಗಿದ್ದಕ್ಕೆ ಚಾಲಕನ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್ ಟಿ ನಗರ ಠಾಣಾ ವ್ಯಾಪ್ತಿಯ ರೆಹಮದ್ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಆಟೋ ಚಾಲಕ ಸಲ್ಮಾನ್ (27) ಕೊಲೆಯಾದವರು ಎಂದು ತಿಳಿದುಬಂದಿದೆ. ಘಟನೆ ಸಂಬಂಧ ರಹಮತ್‌ ನಗರದ ಸೈಯದ್ ಪರ್ವೇಜ್, ಆತನ ಸಹೋದರ ಸೈಯದ್ ತಬ್ರೇಜ್ ಮತ್ತು ಸಂಬಂಧಿಕರಾದ ಸಾದಿಕ್, ತೌಸಿಫ್ ಎಂಬವರನ್ನು ಬಂಧಿಸಿದ್ದಾರೆ. ಆರೋಪಿ ಸೈಯದ್ ಪರ್ವೇಜ್‌ ತಂದೆಗೆ ರಹಮತ್‌ ನಗರದಲ್ಲಿ ಬುಧವಾರ ಬೆಳಿಗ್ಗೆ ಆಟೊ ಡಿಕ್ಕಿಯಾಗಿತ್ತು. ಈ ಕಾರಣಕ್ಕೆ ಪರ್ವೇಜ್‌ನ ತಂದೆ, ಆಟೊ ಚಾಲಕ ಸಲ್ಮಾನ್‌ಗೆ ಬೈದಿದ್ದರು. ಇದರಿಂದ ಕೋಪಗೊಂಡ ಸಲ್ಮಾನ್, ಅವರ ಮೇಲೆ ಹಲ್ಲೆ ನಡೆಸಿ ಮನೆಗೆ ತೆರಳಿದ್ದ. ಬಳಿಕ ಬಂಧಿತ ನಾಲ್ವರು ಆರೋಪಿಗಳು ಸಲ್ಮಾನ್ ಮನೆಗೆ ತೆರಳಿ ಅಲ್ಲಿ ಸಲ್ಮಾನ್ ಜೊತೆಗೆ ಜಗಳಕ್ಕೆ ಇಳಿದಿದ್ದಾರೆ.ಗಲಾಟೆಯ ವೇಳೆ ಆಟೋ ಚಾಲಕ ಸಲ್ಮಾನ್ ಮೇಲೆ ಹಲ್ಲೆ ನಡೆಸಿದರು.ಹಲ್ಲೆಯಿಂದ ಅಸ್ವಸ್ಥಗೊಂಡಿದ್ದ ಸಲ್ಮಾನ್ ತಕ್ಷಣ ಆಸ್ಪತ್ರೆಗೆ…

Read More