Author: kannadanewsnow05

ಬೆಂಗಳೂರು : ಒಂದೆಡೆ ನವೆಂಬರ್ ನಲ್ಲಿ ಸಿಎಂ ಬದಲಾವಣೆ ಆಗುತ್ತಾರೆ ಅಂತ ಸುದ್ದಿ ಹರಿದಾಡುತ್ತಿದ್ದು, ಇನ್ನೊಂದೆಡೆ ವರ್ಷಾಂತ್ಯಕ್ಕೆ ಕಾಂಗ್ರೆಸ್​​ನಲ್ಲಿ ಭಾರೀ ಬದಲಾವಣೆ ಆಗಲಿದೆ ಎಂಬ ಚರ್ಚೆ ವಿಚಾರವಾಗಿ, ಸಣ್ಣಪುಟ್ಟ ಬದಲಾವಣೆಗಳಾಗಲಿದೆ. ಹಾಗಂತ ಭಾರಿ ಬದಲಾವಣೆ ಯಾವುದೂ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗಲ್ಲ. ಕೆಲ ಸಚಿವರ ಬದಲಾವಣೆ ಆಗಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.‌ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನ ನಡೆಸಿಯೇ ಇಲ್ಲ.‌ ಪ್ರಯತ್ನ ನಡೆಸಿದ್ದರೆ ಮುಂದುವರೆಸಬಹುದು. ನಾನು ಎಲ್ಲಿದ್ದೆನೋ, ಅಲ್ಲೇ ಇದ್ದೇನೆ. ನಮ್ಮನ್ನು ಪುಶ್ ಮಾಡೋರು ಇಲ್ವಲ್ಲ. ಬಿಜೆಪಿ ರಾಜ್ಯಾದ್ಯಕ್ಷ ಬದಲಾವಣೆ ನೋಡಿಕೊಂಡು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತಾ ಅನ್ನೋ‌ ಪ್ರಶ್ನೆಗೆ, ಬಿಜೆಪಿ ಫಾರ್ಮುಲಾ ಬೇರೆ, ನಮ್ಮದು ಬೇರೆ. ಅವರ ಐಡಿಯಾಲಜಿ ಬೇರೆ, ನಮ್ಮದು ಬೇರೆ.‌ ಬಿಜೆಪಿಗೂ ನಮ್ಮ ಆಯ್ಕೆಗೂ ಸಂಬಂಧವಿಲ್ಲ ಎಂದು ತಿಳಿಸಿದರು.‌ ಜಲಸಂಪನ್ಮೂಲ ಇಲಾಖೆ ಮೇಲೆ ಶಾಸಕ ರಾಜು ಕಾಗೆ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ಮೊದಲಿನಿಂದ ನೀರಾವರಿ ಸಮಸ್ಯೆ…

Read More

ಬೆಂಗಳೂರು : ಇತ್ತೀಚಿಗೆ ಯುವಜನತೆಯಲ್ಲಿ ಹೃದಯಾಘಾತ ಹೆಚ್ಚಾಗಿ ಕಂಡುಬರುತ್ತಿದ್ದು, ಅದರಲ್ಲೂ ಕಳೆದ ಒಂದು ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಅತಿ ಹೆಚ್ಚು ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ ಕಳೆದ 24 ಗಂಟೆಯಲ್ಲೇ ಓರ್ವ ಯುವಕ, ಯುವತಿ ಸೇರಿದಂತೆ ಇಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೌದು ನಿನ್ನೆ ಸಂಜೆ ಅಷ್ಟೇ ಹಾಸನ ಮೂಲದ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಮತ್ತೋರ್ವ ಹಾಸನ ಮೂಲದ ಯುವತಿ ಬೆಂಗಳೂರಿನಲ್ಲಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಹಾಸನದವರು ಒಂದೇ ತಿಂಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 32 ವರ್ಷದ ಆಟೋ ಚಾಲಕ ಸಾವು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ ಹೊನ್ನೇನಹಳ್ಳಿ ಗ್ರಾಮದ 32 ವರ್ಷದ ಯೋಗೇಶ್​ ಬೆಂಗಳುರಿನಲ್ಲಿ ನಿನ್ನೆ(ಜೂನ್ 25) ಹೃದಯಾಘಾತದಿಂದ ಸಾವನ್ನಪ್ಪಿದ್ದರು. ನಾಲ್ಕು ವರ್ಷಗಳ ಹಿಂದೆ ಅಷ್ಟೇ ವಿವಾಹವಾಗಿದ್ದ ಯೋಗೇಶ್​ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಲಗ್ಗೆರೆಯಲ್ಲಿ ವಾಸವಿದ್ದ. ಆದ್ರೆ, ಬುಧವಾರ ಬೆಳಗ್ಗೆ ಆಟೋ ಓಡಿಸಿ ಮನೆಗೆ ಬಂದು ಮಲಗಿದ್ದು, ಕೊಠಡಿಯಲ್ಲೇ ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾನೆ. ಬಳಿಕ ಆಸ್ಪತ್ರೆಗೆ ಹೋದಾಗ…

Read More

ಬೆಂಗಳೂರು : ಬರುವ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಇಂದು ಬೆಳಿಗ್ಗೆ ಸಹಕಾರ ಸಚಿವ ರಾಜಣ್ಣ ಸ್ಫೋಟಕವಾದ ಹೇಳಿಕೆ ನೀಡಿದ್ದರು. ಇದೀಗ ಮತ್ತೊಂದು ಹೇಳಿಕೆ ನೀಡಿದ್ದು, ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಾನು ಮಂತ್ರಿ ಸ್ಥಾನ ಬಿಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದು ಸತ್ಯ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಸಚಿವ ಸ್ಥಾನವನ್ನು ಬಿಡುತ್ತೇನೆ. ನಾನು ಯಾವತ್ತೂ ಅಧಿಕಾರವನ್ನು ಕೇಳಿಲ್ಲ. ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿ ನನಗೆ ಜನ ಕೊಟ್ಟಿದ್ದಾರೆ. ಸಿಎಂ ಸ್ಥಾನ ಬದಲಾವಣೆ ಆಗಬಹುದು ಆಗದೇ ಇರಬಹುದು ಎಂದು ಸಚಿವ ಕೆ. ಎನ್ ರಾಜಣ್ಣ ಹೇಳಿಕೆ ನೀಡಿದರು. ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಕುರಿತಂತೆ ಆಗಸ್ಟ್ ತಿಂಗಳಲ್ಲಿ ಕ್ರಾಂತಿ ಆಗುತ್ತೆ ಅಂತ ಹೇಳಿಲ್ವಾ? ಯಾವ ಕ್ರಾಂತಿ ಅಂತ ಹೇಳಿದರೆ ಆಸಕ್ತಿ ಹೋಗಿಬಿಡುತ್ತದೆ. ಪಕ್ಷದ…

Read More

ಹಾವೇರಿ : ನೆರೆಯಿಂದ ಮಳೆ ನೆರೆಯಿಂದ ಮನೆ ಹಾನಿ ಪರಿಹಾರ ಮಂಜೂರಾತಿಗೆ ಲಂಚ ನೀಡಿರುವ ಆರೋಪ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿಯ ಚಿನ್ನ ಅಡವಿಟ್ಟು ಲಂಚ ನೀಡಿದ್ದೆ ಎಂದು ತಹಶೀಲ್ದಾರ್ ಗೆ ದೂರು ನೀಡಿದ ದಂಪತಿಗಳು ಇದೀಗ ನಮಗೇನು ಗೊತ್ತೇ ಇಲ್ಲ ಅಂತ ಉಲ್ಟಾ ಹೊಡೆದಿದ್ದಾರೆ. ಹೌದು ನೆರೆಯಿಂದ ಮಳೆ ನೆರೆಯಿಂದ ಮನೆ ಹಾನಿ ಪರಿಹಾರ ಮಂಜೂರಾತಿಗೆ ಲಂಚ ನೀಡಿರುವ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಲಂಚ ಪಡೆದಿದ್ದ ಎಸ್ ಡಿ ಎ ನೌಕರ ಮದನ್ ಮೋಹನ ರಕ್ಷಣೆಗೆ ಅಧಿಕಾರಿಗಳು ನಿಂತಿದ್ದಾರೆ. ಎಸ್ಡಿಎ ಮದನ್ ಗೆ ಲಂಚ ನೀಡಿದ್ದಾಗಿ ಮಹಾಂತೇಶ್ ಎನ್ನುವವರು ದೂರು ನೀಡಿದ್ದರು. ಹಾವೇರಿ ತಾಲೂಕಿನ ಬೆಳವಿಗೆ ಗ್ರಾಮದ ಮಹಾಂತೇಶ್ ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರ ಜೊತೆಗೆ ತೆರಳಿತಶೀಲ್ದಾರ್ ಅವರಿಗೆ ದೂರು ನೀಡಿದ್ದರು. ಪತ್ನಿಯ ಕೊರಳಲ್ಲಿದ್ದ ಚಿನ್ನದ ಸರವನ್ನು ಅಡವಿಟ್ಟು ಆ ಹಣದಲ್ಲಿ ಲಂಚ ನೀಡಿದ್ದೆ. ಗುತ್ತಲದ ಫೈನಾನ್ಸ್ ನಲ್ಲಿ ಚಿನ್ನ ಅಡವಿಟ್ಟು ಸಾಲ ತಂದು…

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಟ್ರ್ಯಾಕ್ಟರ್ ಚಕ್ರದ ಅಡಿ ಸಿಲುಕಿ ಇಬ್ಬರು ನರಳಾಟ ನಡೆಸಿರುವ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಬಮ್ಮೇಗಟ್ಟಿ ಕ್ರಾಸ್ ನಲ್ಲಿ ಒಂದು ಘಟನೆ ನಡೆದಿದ್ದು, ಟ್ರಾಕ್ಟರ್ ಮತ್ತು ಗೂಡ್ಸ್ ಚಾಲಕನ ನಡುವೆ ಜಗಳ ಆಗಿತ್ತು. ಅಪಘಾತದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗೂಡ್ಸ್ ಚಾಲಕ ಟ್ರ್ಯಾಕ್ಟರ್ ಏರಿ ವಾಗ್ವಾದ ನಡೆಸುತ್ತಿದ್ದ. ಗೂಡ್ಸ್ ಚಾಲಕ ಟ್ರಾಕ್ಟರ್ ಏರಿದಾಗಲೇ ಟ್ರಾಕ್ಟರ್ ಚಾಲಕ ಕೂಡಲೇ ಟ್ರಾಕ್ಟರ್ ಅನ್ನು ಮುಂದೆ ತೆಗೆದುಕೊಂಡು ಹೋಗಿದ್ದಾನೆ. ಈ ವೇಳೆ ಟ್ರಾಕ್ಟರ್ ಕೆಳಗೆ ಇಬ್ಬರು ಸಿಲುಕಿ ನಳಾಡಿದ್ದಾರೆ. ಟ್ಯಾಕ್ಟರ್ ಹಿಂಬದಿ ಚಕ್ರಕ್ಕೆ ಇಬ್ಬರು ಸಿಲುಕಿ ನರಳಾಡಿದ್ದಾರೆ. ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಉತ್ತರಕನ್ನಡ : ಹೆಸ್ಕಾಂ ಸಿಬ್ಬಂದಿಯ ನಿರ್ಲಕ್ಷಕ್ಕೆ ವಿದ್ಯುತ್ ಪ್ರವಹಿಸಿ ಕಾರ್ಮಿಕ ಒಬ್ಬ ಸಾವನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅಣಲೇಸರ ಗ್ರಾಮದಲ್ಲಿ ನಡೆದಿದೆ.ಮೃತ ಕಾರ್ಮಿಕನನ್ನು ಆನಂದ್ ಸಿದ್ದಿ (25) ಎಂದು ತಿಳಿದುಬಂದಿದೆ. ಹೆಸ್ಕಾಮ ಅಧಿಕಾರಿ ಮತ್ತು ಲೈನ್ ಮ್ಯಾನ್ ಎಡವಟ್ಟಿಗೆ ಅಮಾಯಕ ಕಾರ್ಮಿಕ ಬಲಿಯಾಗಿದ್ದಾನೆ. ಮಳೆಯ ನಡುವೆ ಕಂಬ ಹತ್ತಿದ್ದಾಗ, ವಿದ್ಯುತ್ ಪ್ರವಹಸಿ ಆನಂದ್ ಸಿದ್ದಿ ಸಾವನ್ನಪ್ಪಿದ್ದಾನೆ. ಮಳೆ ನಡುವೆ ಅಧಿಕಾರಿ ನಾಗರಾಜ್ ವಿದ್ಯುತ್ ಕಂಬವನ್ನು ಹತ್ತಿಸಿದ್ದಾನೆ. ವಿದ್ಯುತ್ ಕಂಬ ಹತ್ತಿದಾಗ ಕರೆಂಟ್ ಶಾಕ್ ನಿಂದ ಈ ಒಂದು ದುರ್ಘಟನೆ ನಡೆದಿದೆ.

Read More

ವಿಜಯಪುರ : ತಡರಾತ್ರಿ ವಿಜಯಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರವಣಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೊರ್ತಿ ಕೋಲಾರ ಸೇತುವೆ ಬಳಿ ನಡೆದಿದೆ. ಮೃತರನ್ನು ತಾಲೂಕಿನ ತೆಲಗಿ ಗ್ರಾಮದ ಅಶೋಕ್ ಚಲವಾದಿ (36) ಮತ್ತು ಮುತ್ತಪ್ಪ ಅರ್ಜುನ್ ಮಳೆಪ್ಪಗೊಳ (45) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇನ್ನೋರ್ವ ವ್ಯಕ್ತಿ ಸದಾಶಿವ ಮಾದರ ಎಂದು ತಿಳಿದು ಬಂದಿದ್ದು, ಆತನನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More

ಕಲಬುರ್ಗಿ : ಮಗಳ ಮದುವೆಗೆ ಹಣ ಹೊಂದಿಸಲಾಗದೆ, CRPF ಯೋಧರೊಬ್ಬರೂ ಮನನೊಂದು ತಮ್ಮ ಸ್ನೇಹಿತರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯೋಧರನ್ನು ತುಳಜಾರಾಮ್ ಸೂರ್ಯವಂಶಿ (51) ಎಂದು ತಿಳಿದುಬಂದಿದೆ. ಮೃತ ತುಳಜಾರಾಮ್ ಛತ್ತೀಸಗಢದ ದಂತೇವಾಡದಲ್ಲಿ ಸಿಆರ್‌ಪಿಎಫ್‌ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದರು. 19 ವರ್ಷದ ಮಗಳ ನಿಶ್ಚಿತಾರ್ಥ ಸಮಾರಂಭವು ಜುಲೈ ತಿಂಗಳಲ್ಲಿ ನಿಗದಿಯಾಗಿತ್ತು. ಅವರಿಗೆ ಪತ್ನಿ, ಒಬ್ಬಳು ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ರಜೆಯ ಮೇಲೆ ಕಲಬುರಗಿಗೆ ಬಂದಿದ್ದ ತುಳಜಾರಾಮ ಅವರು ಸ್ನೇಹಿತ ಮಳೇಂದ್ರ ಕುಮಾರ ಅವರ ಮನೆಯ ಕೋಣೆಯಲ್ಲಿ ಉಳಿದುಕೊಂಡಿದ್ದರು. ಮಗಳ ಮದುವೆ ಶುಭ ಕಾರ್ಯಕ್ಕೆ ಹಣ ಹೊಂದಿಸಲು ಆಗದೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಸೊಸೈಡ್ ಮಾಡಿಕೊಂಡಿದ್ದಾರೆ. ಘಟನೆ ಕುರಿತಂತೆ ಆರ್‌.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಒಂದು ಕಡೆ ರಾಜ್ಯ ಕಾಂಗ್ರೆಸ್ ಪಕ್ಷದ ಕೆಲವು ನಾಯಕರೇ ನವೆಂಬರ್ ತಿಂಗಳಿನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯ ಬಿಜೆಪಿಯಲ್ಲೂ ಅಸಮಾಧಾನದ ಹೊಗೆ ಆಡುತ್ತಿರುವುದು, ಅಲ್ಲದೆ ಜುಲೈ 2ನೇ ವಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಹೊಸ ಅಧ್ಯಕ್ಷರ ನೇಮಕ ಮಾಡುವ ಸಾಧ್ಯತೆ ಇದೆ. ಈ ವಿಚಾರವಾಗಿ ಬಿಜೆಪಿ ರೆಬೆಲ್ ಟೀಮ್ ಫುಲ್ ಆಕ್ಟಿವ್ ಆಗಿದ್ದು ಬೆಂಗಳೂರಿನಲ್ಲಿ ಸಾಲು ಸಾಲು ಸಭೆ ನಡೆಸುತ್ತಿದೆ. ಹೌದು ಬಿಜೆಪಿಯಲ್ಲಿ ಅಸಮಾಧಾನಿ ತರ ತಂಡ ಫುಲ್ ಆಕ್ಟಿವ್ ಆಗಿದ್ದು, ಸಾಲು ಸಾಲು ಸಭೆ ಮಾಡುತ್ತಿದೆ. ಬೆಂಗಳೂರಿನಲ್ಲಿ ಅತೃಪ್ತರ ತಂಡ ಮತ್ತೆ ಸಾಲು ಸಾಲು ಸಭೆ ನಡೆಸಿದೆ. ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ನಿವಾಸದಲ್ಲಿ ಸಭೆ ನಡೆಸುತ್ತಿದೆ. ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ, ಬಿಪಿ ಹರೀಶ್ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದಾರೆ. ವಿಜಯೇಂದ್ರ ವಿರುದ್ಧ ಮುಂದಿನ…

Read More

ಮೈಸೂರು : ಕಳೆದ 6 ತಿಂಗಳಿಂದ ಸಂಬಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ನೌಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಕ್ರೀಡಾ ಇಲಾಖೆ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದೆ. ಕಚೇರಿಯಲ್ಲಿ ಹೊರಗುತ್ತಿಗೆ ನೌಕರ ದೀಪಕ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕಳೆದ ಆರು ತಿಂಗಳಿನಿಂದ ಸಂಬಳ ನೀಡದಿದ್ದಕ್ಕೆ ದೀಪಕ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಲಸಕ್ಕೆ ಬಂದ ವೇಳೆ ಉಪ ನಿರ್ದೇಶಕರನ್ನು ಸಂಪರ್ಕಿಸಿದ್ದಾನೆ. ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದೀಪಕ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ದೀಪಕ್ ನಾನು ತಡೆದು ಸಹ ಸಿಬ್ಬಂದಿಗಳು ವಾಪಸ್ ಕಳುಹಿಸಿದ್ದಾರೆ. ಈ ವಿಚಾರವಾಗಿ ನಾಲ್ಕು ತಿಂಗಳ ಹಿಂದೆ ದೀಪಕ್ ಕೈ ಕೊಯ್ದುಕೊಂಡಿದ್ದ ಎನ್ನಲಾಗಿದೆ. ಆತ ಹೊರಗುತ್ತಿಗೆ ನೌಕರ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ. ಮನೆಯಲ್ಲಿನ ಸಮಸ್ಯೆಯಿಂದ ಈ ರೀತಿ ಮಾಡಿಕೊಂಡಿದ್ದಾನೆ. ಕೆಲ ಹೊತ್ತಿನಲ್ಲಿ ಸಂಬಳ ಹಾಕುತ್ತೇವೆ ಎಂದು ಉಪನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ. ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಈ ಕುರಿತು ಸ್ಪಷ್ಟನೆ ನೀಡಿದರು.

Read More