Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನ : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ದುಷ್ಕರ್ಮಿ ಒಬ್ಬ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಘಟನೆ ನಡೆದಿತ್ತು. ಅದಾದ ಬಳಿಕ ಮೈಸೂರಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಕೂಡ ಹಸುಗಳ ಬೆಲೆ ಹಲ್ಲೆ ನಡೆದಿತ್ತು. ಇದೀಗ ಹಾಸನದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ಚರಂಡಿಯಲ್ಲಿ ಕಿಡಿಗೇಡಿಗಳು ಹಾವುಗಳ ಚರ್ಮ ಸುಲಿದು ಬಿಸಾಡಿರುವ ಘಟನೆ ವರದಿಯಾಗಿದೆ. ಹೌದು ಹಾಸನ ಜಿಲ್ಲೆಯ ಹೊಳೆನರಸೀಪುರದ ದರ್ಜಿ ಬೀದಿಯಲ್ಲಿ ಒಂದು ಘಟನೆ ನಡೆದಿದೆ. ಚರಂಡಿಯಲ್ಲಿ ಹಾವುಗಳ ಚರ್ಮ ಮತ್ತು ಅವಶೇಷಗಳು ಪತ್ತೆಯಾಗಿವೆ. ಹಾವುಗಳ ಚರ್ಮ ಸುಲಿದು ಕಿಡಿಗಿಡಿಗಳು ಮಾಂಸ ಬೇರ್ಪಡಿಸಿದ್ದಾರೆ. ಚರಂಡಿಯಲ್ಲಿ ಹಾವುಗಳ ಚರ್ಮ ಹಾಗೂ ಅವಶೇಷಗಳು ಪತ್ತೆಯಾಗಿವೆ. ಘಟನೆಯಿಂದ ಸಹಜವಾಗಿ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಕಿಡಿಗೇಡಿಗಳು ಹಾವುಗಳ ಮಾಂಸಕ್ಕಾಗಿ ಹಾವಿನ ಚರ್ಮ ಸುಲಿದಿರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಸ್ಥಳೀಯರಲ್ಲಿ ಈ ಒಂದು ಘಟನೆ ಆತಂಕ ಸೃಷ್ಟಿ ಮಾಡಿದೆ. ಘಟನೆ ಕುರಿತು ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ…
BREAKING : ಸಿಟಿ ರವಿಗೆ ಬಿಗ್ ರಿಲೀಫ್ : ಅಶ್ಲೀಲ ಪದ ಬಳಕೆ ಕೇಸ್ ನಲ್ಲಿ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ!
ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೈಕೋರ್ಟ್ ಸಿಟಿ ರವಿ ಅವರಿಗೆ ಬಿಗ್ ರಿಲೀಫ್ ನೀಡಿದ್ದು ಫೆಬ್ರವರಿ 30ರವರೆಗೆ ಸಿಟಿ ರವಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಹೌದು ಇಂದು ಹೈಕೋರ್ಟ್ ನಲ್ಲಿ ಈ ಪ್ರಕರಣದ ವಿಚಾರವಾಗಿ ವಾದ ಪ್ರತಿವಾದ ನಡೆಯಿತು. ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್ ಇಂದು ಬಿಗ್ ರಿಲೀಫ್ ನೀಡಿದೆ. ಸಿಟಿ ರವಿ ವಿರುದ್ಧ ಫೆಬ್ರವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ. ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು. ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ…
ರಾಯಚೂರು : ನಿನ್ನೆಯಷ್ಟೇ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿತ್ತು. ಇದೀಗ ಈ ಒಂದು ಘಟನೆ ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭವಿಸಿದ್ದು ಲಾರಿ ಹಾಗೂ ಕಾರಿನ ಮಧ್ಯ ಭೀಕರ ಅಪಘಾತ ಸಂಭವಿಸಿ ಜೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಸಮೀಪ ಲಾರಿ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ವೆಂಕಟಾಚಲಪತಿ (48) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸ್ಥಳಕ್ಕೆ ಮಾನ್ವಿ ತಾಲೂಕು ಮಾನ್ವಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಉಡುಪಿ : ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ ನಡೆಸಿದ್ದು ಅಲ್ಲದೆ, ಅಲ್ಲಿದ್ದ ಹಲವು ಪೀಠೋಪಕರಣಗಳನ್ನು ಹೊಡೆದು ಹಾಕಿ, ಮಹಿಳೆಯರ ಮೇಲು ದೌರ್ಜನ್ಯ ಎಸಗಿರುವ ಘಟನೆ ಮಂಗಳೂರಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಬಿಜೈ ಬಳಿಯ ಮಸಾಜ್ ಪಾರ್ಲರ್ ನಲ್ಲಿ ಈ ಒಂದು ಘಟನೆ ನಡೆದಿದೆ.ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ದಾಳಿ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾಳಿ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಡುಪಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು ತಿಳಿಸಿದರು.ಪಾಲಿಕೆಯಲ್ಲಿ ಟ್ರೇಡ್ ಲೈಸೆನ್ಸ್ ಪಡೆದಿರುತ್ತಾರೆ. ಇದರ ಬಗ್ಗೆ ನಾವು ಪರಿಶೀಲನೆ ನಡೆಸುತ್ತೇವೆ. ಲೈಸೆನ್ಸ್ ಇಲ್ಲದಿದ್ದರೆ ನಾವು ಅದನ್ನು ಸೀಜ್ ಮಾಡುತ್ತೇವೆ ಎಂದು ಉಡುಪಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಮಂಗಳೂರಿನ ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ್ ಅವರ ಕಾರ್ಯಕರ್ತರು ಈ ಒಂದು ಮಸಾಜ್ ಪಾರ್ಲರ್…
ಬಾಗಲಕೋಟೆ : ಇತ್ತೀಚಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಹಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದೀಗ ಇಂತಹದ್ದೇ ಘಟನೆ ಬಾಗಲಕೋಟೆಯಲ್ಲಿ ನಡೆದಿದ್ದು, ವಿಪರೀತ ಸಾಲದಿಂದ ಬೇಸತ್ತು ವೃದ್ಧ ದಂಪತಿಗಳು ಇಬ್ಬರು ಬ್ರಿಡ್ಜ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ. ಮೃತ ದಂಪತಿಗಳನ್ನು ಮಲ್ಲಪ್ಪ ಲಾಳಿ (56) ಹಾಗೂ ಪತ್ನಿ ಮಹಾದೇವಿ (51) ಎಂದು ತಿಳಿದುಬಂದಿದೆ.ಕಳೆದ 15 ವರ್ಷಗಳಿಂದ ಮೆಟಗುಡ್ಡ ಗ್ರಾಮದಲ್ಲಿ ವಾಸವಾಗಿದ್ದ ದಂಪತಿಗಳು ಅದೇ ಗ್ರಾಮದಲ್ಲಿ ಕಿರಾಣಿ ಅಂಗಡಿ ನಡೆಸ್ತಿದ್ದರು, ಫೈನಾನ್ಸ್ಗಳಲ್ಲಿ, ಖಾಸಗಿ ವ್ಯಕ್ತಿಗಳ ಬಳಿಯಲ್ಲಿ ಸಾಕಷ್ಟು ಸಾಲ ಮಾಡಿದ್ದರು. ಜೊತೆಗೆ ಇಬ್ಬರು ಹೆಣ್ಣು ಮಕ್ಕಳ ಮದುವೆಗಾಗಿಯೂ ಸಾಲ ಮಾಡಿದ್ದರು. ಈ ರೀತಿ ವಿಪರೀತವಾಗಿ ದಂಪತಿಗಳು ಸಾಲ ಮಾಡಿದ್ದರು ಆದರೆ ಸಾಲ ತೀರಿಸಲು ಪರದಾಡುತ್ತಿದ್ದರು ಇದರಿಂದ ಬೇಸತ್ತ ದಂಪತಿಗಳು ಮುಧೋಳ ತಾಲೂಕಿನ ಯಾದವಾಡ ಬ್ರಿಡ್ಜ್ಗೆ ನೇಣು ಹಾಕಿಕೊಂಡು ದಂಪತಿಗಳು ಸೂಸೈಡ್ ಮಾಡಿಕೊಂಡಿದ್ದು. ಸ್ಥಳದಲ್ಲೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಲೋಕಾಪುರ…
ಬೆಂಗಳೂರು : ಬಿಜೆಪಿಯ ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ನಡುವಿನ 30 ವರ್ಷಗಳ ಸ್ನೇಹದಲ್ಲಿ ಇದೀಗ ಬಿರುಕು ಉಂಟಾಗಿದ್ದು, ನಿನ್ನೆ ಜನಾರ್ದನ ರೆಡ್ಡಿ ವಿರುದ್ಧ ಶ್ರೀರಾಮುಲು ಗಂಭೀರವಾದ ಆರೋಪ ಮಾಡಿದ್ದರು. ಇದೀಗ ಜನಾರ್ಧನ ರೆಡ್ಡಿ ಸತೀಶ್ ಜಾರಕಿಹೊಳಿಯನ್ನು ಮಣಿಸಲು ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಾಮುಲು ಜೊತೆಗೆ ಚರ್ಚಿಸಿದ್ದಾರೆ ಎಂದು ಹೊಸ ಬಾಂಬ್ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಗಂಗಾವತಿ ಕ್ಷೇತ್ರದ ಶಾಸಕ ಜನಾರ್ಧನ ರೆಡ್ಡಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶ್ರೀರಾಮುಲು ಹಾಗೂ ನನ್ನ ನಡುವೆ ಸುಮಾರು 30 ವರ್ಷಗಳ ಕಾಲ ಸ್ನೇಹವಿದೆ. ಇದೆಲ್ಲವನ್ನು ಮರೆತು ಪಕ್ಷ ಬಿಟ್ಟು ಹೋಗುವುದಾದರೆ ಹೋಗಲಿ. ಸತೀಶ್ ಜಾರಕಿಹೊಳಿ ಅವರನ್ನು ಮಡಿಸಲು ಡಿಕೆ ಶಿವಕುಮಾರ್ ಅವರಿಗೆ ಒಬ್ಬರು ಬೇಕಾಗಿದ್ದಾರೆ ಹಾಗಾಗಿ ಶ್ರೀರಾಮುಲು ಅವರ ಜೊತೆ ಡಿಕೆ ಶಿವಕುಮಾರ್ ಚರ್ಚಿಸಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು. ಪಕ್ಷ ಹೇಳಿದಂತೆ ಬಂಗಾರು ಹನುಮಂತು ಪರವಾಗಿ ಕೆಲಸ ಮಾಡಿದ್ದೇನೆ. ಶ್ರೀರಾಮುಲು ಸಾಯುವವರೆಗೂ ನನಗೆ ಸ್ನೇಹಿತ ಯಾವುದೇ ಕಾರಣಕ್ಕೂ…
ಮಂಗಳೂರು : ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ರಾಮಸೇನೆ ಸಂಸ್ಥಾಪಕ ಪ್ರಸಾದ ಅತ್ತಾವರ್ ಕಾರ್ಯಕರ್ತರು ಅನೈತಿಕ ಪೊಲೀಸ್ ಗಿರಿ ನಡೆಸಿ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿ, ಪಾರ್ಲರ್ ನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿರುವ ಘಟನೆ ಮಂಗಳ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಬಿಜೈ ಬಳಿಯ ಕಲರ್ಸ್ ಬ್ಯೂಟಿ ಪಾರ್ಲರ್ ನಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಮಸಾಜ್ ಸೆಂಟರ್ ಗೆ ದಾಳಿ ನಡೆಸಿ ರಾಮಸೇನೆ ಗಲಾಟೆ ನಡೆಸಿದ್ದು, ಸ್ಪಾ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಬಿಜೈ ಬಳಿಯ ಕಲರ್ಸ್ ಹೆಸರಿನ ಮಸಾಜ್ ಪಾರ್ಲರ್ ಮೇಲೆ ರಾಮಸೇನೆ ದಾಳಿ ಮಾಡಿ ಅನೈತಿಕ ಪುಂಡಾಟಗೆ ನಡೆಸಿದೆ.ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ ಮಾಡಿದೆ ಮಂಗಳೂನ ಬಿಜೆ ಕೆಎಸ್ಆರ್ಟಿಸಿ ಬಳಿ ಇರುವ ಮಸಾಲ್ ಸೆಂಟರ್ ಬಳಿ ರಾಮಸೇನೆ ಅನೈತಿಕ ಪೊಲೀಸ್ ಗಿರಿ ನಡೆಸಿದೆ. ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿ ಪಿಟೋಪಕರಣ ಧ್ವಂಸ ಮಾಡಿದೆ.ಅನೈತಿಕ ಚಟುವಟಿಕೆ…
ಬೆಂಗಳೂರು : ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಸ್ಟಾಫ್ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಸ್ಟಾಫ್ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ನಡೆದಿದೆ. ಕೊಡಿಗೇಹಳ್ಳಿಯಲ್ಲಿ ವಾಸವಿದ್ದ ವಿಜಯ ಕುಮಾರಿ (32) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ರಾಮಯ್ಯ ಆಸ್ಪತ್ರೆಯಲ್ಲಿ ಮೃತ ವಿಜಯಕುಮಾರಿ ಸ್ಟಾಫ್ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿಜಯಕುಮಾರಿಗೆ ವರದಕ್ಷಿಣೆ ಕಿರುಕುಳಕ್ಕೆ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ ವಿಜಯ ಕುಮಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಪತಿ ಹಾಗೂ ಕುಟುಂಬಸ್ಥರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಲಾಗುತ್ತಿದ್ದು,ಘಟನೆ ಕುರಿತು ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಳ್ಳಾರಿ : ಕಳೆದ ಉಪಚುನಾವಣೆಯಲ್ಲಿ ಸಂಡೂರಲ್ಲಿ ಸೋಲಲು ನಾನೇ ಕಾರಣ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಹೇಳಿಕೆಯಿಂದ ನನಗೆ ನೋವಾಗಿದ್ದು, ಪಕ್ಷ ಬಿಡು ಎಂದರೆ ಬಿಡುತ್ತೇನೆ ಎಂದು ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಇದರ ಮಧ್ಯ ಬಿಜೆಪಿ ಪರಾಜೀತ ಅಭ್ಯರ್ಥಿ ಬಂಗಾರು ಹನುಮಂತು ಶ್ರೀರಾಮುಲು ವಿರುದ್ಧ ಕಿಡಿ ಕಾರಿದು 2023ರಲ್ಲೂ ಕೂಡ ನಾನು ಟಿಕೆಟ್ ಆಕಾಂಕ್ಷಿಯಾಗಿದ್ದು, ವಿಧಾನಸಭಾ ಟಿಕೆಟ್ ನನಗೆ ಟಿಕೆಟ್ ತಪ್ಪಲು ಇದೇ ಶ್ರೀರಾಮುಲು ಕಾರಣ ಎಂದು ಅಸಮಧಾನ ಹೊರಹಾಕಿದ್ದಾರೆ. ಹೌದು ಮಾಜಿ ಸಚಿವ ಬಿ.ಶ್ರೀರಾಮುಲು ವಿರುದ್ಧ ಇದೀಗ ಬಂಗಾರು ಹನುಮಂತ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತು ಕಳೆದ ಎರಡು ದಿನಗಳ ಹಿಂದೆ ಪ್ರತ್ಯೇಕವಾಗಿ ಸಭೆ ನಡೆಸಿದ್ದಾರೆ. ರಾತ್ರೋರಾತ್ರಿ ಸಭೆ ನಡೆಸಿ ಶ್ರೀರಾಮುಲು ವಿರುದ್ಧ ಹನುಮಂತು ರಣತಂತ್ರ ಹೆಣದಿದ್ದಾರೆ. ಸಭೆಯಲ್ಲಿ ಯಾವುದೇ ಕಾರಣಕ್ಕೂ ಶ್ರೀರಾಮುಲು ಕೂಡ್ಲಿಗಿ ಕ್ಷೇತ್ರಕ್ಕೆ ಬರೋದು ಬೇಡ. ಸ್ಥಳೀಯರಿಗೆ ಟಿಕೆಟ್ ಕೇಳೋಣ ಎಂದು ಸಭೆಯಲ್ಲಿ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.…
ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದಿಂದ ನಾನು ಮೂರು ಬಾರಿಗೆ ಗೆದ್ದಿದ್ದೇನೆ.ಇನ್ನೊಂದು ಬಾರಿ ವಿಧಾನಸಭೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇನೆ. ಹಾಗಾಗಿ ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ. ಬಿಜೆಪಿಯಲ್ಲಿ ನಿಲ್ಲಬಹುದು ಅಥವಾ ಪಕ್ಷೇತರನಾಗಿ ಸ್ಪರ್ಧಿಸಬಹುದು ಎಂದು ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ವಿಧಾನಸಭಾ ಕ್ಷೇತ್ರದಿಂದ ನಾನು ಮೂರು ಬಾರಿಗೆ ಗೆದ್ದಿದ್ದೇನೆ. ಇನ್ನೂ ಮೂರುವರೆ ವರ್ಷ ಇದೆ. ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂದು ಮುಂದೆ ನಿರ್ಧರಿಸುತ್ತೇನೆ.ಪಕ್ಷ ಕರೆದರೆ ನಾನು ಬಿಜೆಪಿಗೆ ಸೇರುತ್ತೇನೆ. ಸದ್ಯದ ಬೆಳವಣಿಗೆಗಳನ್ನು ನೋಡುತ್ತಿರುವಾಗ ಬಿಜೆಪಿಗೆ ನನ್ನ ಅವಶ್ಯಕತೆ ಇಲ್ಲ ಅಂತ ಅನ್ನಿಸಿರಬೇಕು. ಹಾಗಾಗಿ ಬಿಜೆಪಿ ನನ್ನನ್ನು ಆಹ್ವಾನಿಸುತ್ತಿಲ್ಲ ಎಂದು ಹೇಳಿದ್ದಾರೆ. ಉಡುಪಿಯಲ್ಲಿ ನಾನು ಮೂರು ಬಾರಿ ಶಾಸಕನಾಗಿದ್ದವನು. ಬಿಜೆಪಿ ನನ್ನನ್ನು ಯಾವ ರೀತಿ ನೋಡಿಕೊಳ್ಳುತ್ತಿದೆ ಎಂದು ನೆನೆದರೆ ಬೇಸರವಾಗುತ್ತದೆ. ಬಿಜೆಪಿಯ ಇತರ ನಾಯಕರು ಕೂಡ ಈ ಬಗ್ಗೆ ಯೋಚನೆ ಮಾಡಿಲ್ಲ. ನನ್ನ ಬೆಳವಣಿಗೆಯಲ್ಲಿ ಬಿಜೆಪಿಯ ಪಾತ್ರ ಇದೆ. ಹಾಗಾಗಿ ಆ…














