Subscribe to Updates
Get the latest creative news from FooBar about art, design and business.
Author: kannadanewsnow05
ಬಳ್ಳಾರಿ : ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ನನ್ನು ತಾಯಿ ಮೀನಾ ತೂಗುದೀಪ, ಅಕ್ಕ ದಿವ್ಯಾ ಹಾಗೂ ಭಾವ ಸೇರಿ ಕುಟುಂಬ ಸದಸ್ಯರು ಗುರುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ವೇಳೆ ಮಗನ ಸ್ಥಿತಿ ಕಂಡು ತಾಯಿ ಕಣ್ಣಿರು ಹಾಕಿದ್ದು, ದರ್ಶನ್ ಸಮಾಧಾನಮಾಡಿದ್ದಾರೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಕೊಲೆ ಆರೋಪಿ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ನಿನ್ನೆ ದರ್ಶನ ಅವರನ್ನು ಭೇಟಿ ಮಾಡಲು ತಾಯಿ ಮೀನಾ ತೂಗುದೀಪ ಅಕ್ಕ, ಭಾವ, ಹಾಗೂ ಸೋದರ ಅಳಿಯ ಜೈಲಿಗೆ ಬಂದಿದ್ದರು. ಈ ವೇಳೆ ತಾಯಿ ಮೀನಾ ತೂಗುದೀಪ್ ಅವರು ದರ್ಶನ್ಗೆ ಆತ್ಮಸ್ಥೈರ್ಯ ತುಂಬಿದ್ದಾರೆ ಎನ್ನಲಾಗಿದೆ. ಪುತ್ರ ದರ್ಶನ್ ಗೆ ಆತ್ಮಸ್ಥೈರ್ಯ ತುಂಬಿರುವ ಮೀನಾ ತೂಗುದೀಪ್ ಕೆಟ್ಟಗಳಿಗೆ ನಡೆದಿರಬಹುದು. ನಿನ್ನ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಿದ್ದಾರೆ. ರಾಜರಾಜೇಶ್ವರಿ ದೇವಿಯ ಕೃಪೆಯಿಂದ ಬೇಲ್ ಸಿಗುತ್ತೆ. ತಾಯಿಯ ಮಾತಿನಿಂದ ಆರೋಪಿ ದರ್ಶನ್ ಧೈರ್ಯ ತೆಗೆದುಕೊಂಡಿದ್ದಾರೆ. ತಾಯಿ ಭೇಟಿಯ ಬಳಿಕ ಆರೋಪಿ ದರ್ಶನ ಲವಲವಿಕೆಯಿಂದ…
ಮಂಗಳೂರು : ಗುತ್ತಿಗೆದಾರರೊಬ್ಬರು ಕೆರೆ ಅಭಿವೃದ್ಧಿಗಾಗಿ ಕಾಮಗಾರಿ ನೆರವೇರಿಸಿದ್ದರು. ಈ ಒಂದು ಕಾಮಗಾರಿಯ ಬಿಲ್ ಪಾವತಿಗಾಗಿ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಸ್ವೀಕರಿಸುತ್ತಿರುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಇಬ್ಬರನ್ನು ರೆಡ್ ಹ್ಯಾಂಡಾಗಿ ಹಿಡಿದಿರುವ ಘಟನೆ ಮಂಗಳೂರಿನಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ ನಡೆದಿದೆ. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರು, ಕೆರೆ ಅಭಿವೃದ್ಧಿ ಕಾಮಗಾರಿಗೆ ಗುತ್ತಿಗೆ ಕೆಲಸ ನಿರ್ವಹಿಸಿದ್ದರು. ಕಾಮಗಾರಿಯ 9,77,154 ರೂ ಮೊತ್ತದ ಬಿಲ್ ಮಂಜೂರಾತಿಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ನಾಗರಾಜು ಅವರ ಬಳಿ ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರು ತೆರಳಿದ್ದರು. ಈ ವೇಳೆ ಬಿಲ್ ಪಾಸ್ ಮಾಡಲು ತನಗೆ 37 ಸಾವಿರ ರೂ. ಮತ್ತು ಕಿನ್ನಿಗೊಳಿ ಪಟ್ಟಣ ಪಂಚಾಯತ್ನ ಮುಖ್ಯಾಧಿಕಾರಿಗೆ 15 ಸಾವಿರ ರೂ. ಲಂಚ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಅಲ್ಲದೆ ಜೂನಿಯರ್ ಇಂಜಿನಿಯರ್ ನಾಗರಾಜು ಮುಂಚಿತವಾಗಿ 7000 ರೂ. ಲಂಚ ಪಡೆದಿದ್ದರು.ಉಳಿದ ಲಂಚದ ಮೊತ್ತವಾಗಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ನ…
ದಾವಣಗೆರೆ : ನಿನ್ನೆ ದಾವಣಗೆರೆ ನಗರದಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಮೆರವಣಿಗೆಯ ಮೇಲೆ ಕಲ್ಲುತೂರಾಟ ನಡೆಸಿದ್ದ 18 ಆರೋಪಿಗಳನ್ನು ಇಂದು ಪೊಲೀಸರು ಜಡ್ಜ್ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಬಳಿಕ ಜಡ್ಜ್ ಎಲ್ಲಾ 18 ಆರೋಪಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಹೌದು ದಾವಣಗೆರೆಯಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯ ಬಸವ ನಗರ ಠಾಣೆಯಲ್ಲಿ ಈ ಕುರಿತು ಎರಡು ಪ್ರಕರಣ ದಾಖಲಾಗಿತ್ತು. ಇದೀಗ ಬಂಧಿತ 18 ಆರೋಪಿಗಳನ್ನು ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ. ಎಂಸಿಸಿಎ ಬ್ಲಾಕ್ ನಲ್ಲಿರುವ ಜಡ್ಜ್ ಪ್ರಶಾಂತ ನಿವಾಸದಲ್ಲಿ ಇದೀಗ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದಾರೆ. ಸದ್ಯ 18 ಆರೋಪಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜಡ್ಜ್ ಪ್ರಶಾಂತ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : ನಿನ್ನೆ ಅಟ್ರಾಸಿಟಿ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಇಂದು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆಯ ಪೊಲೀಸರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಮುನಿರತ್ನ ವಿರುದ್ಧ ಮತ್ತೊಬ್ಬ ಮಹಿಳೆಯೊಬ್ಬರು ಅತ್ಯಾಚಾರದ ಆರೋಪ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ಪಟ್ಟಂತೆ, ಕೃತ್ಯ ನಡೆದ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಬುಧವಾರ ತಡರಾತ್ರಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತೆ ಡಿವೈಎಸ್ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಸಂತ್ರಸ್ತೆ ಮಹಿಳೆಯ ದೂರಿನಲ್ಲಿ ಏನಿದೆ? ಕೋವಿಡ್ ಸಂದರ್ಭದಲ್ಲಿ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ಆಗ್ಗಾಗೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದರು. ನಗ್ನವಾಗಿ ಇರುವಂತೆ ಕರೆ ಮಾಡಿ ಒತ್ತಾಯಿಸಿದಾಗ ಅದನ್ನು ನಿರಾಕರಿಸಿದ್ದೆ. ಒಮ್ಮೆ ಸ್ಥಳವೊಂದಕ್ಕೆ ಬರಲು ಹೇಳಿದ್ದರು. ನಾನು ಅಲ್ಲಿಗೆ ಹೋದಾಗ ತಬ್ಬಿಕೊಳ್ಳಲು ಮುಂದಾಗಿದ್ದರು. ಅದಕ್ಕೆ ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇವೆಲ್ಲಾ…
ರಾಮನಗರ : ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಾಗೆ ಜಾಮೀನು ಮಂಜೂರು ಮಾಡಿತ್ತು. ಇಂದು ಈ ಒಂದು ಪ್ರಕರಣದಲ್ಲಿ ಜಾಮೀನು ಪಡೆದುಕೊಂಡು ಬಿಡುಗಡೆಯಾದ ತಕ್ಷಣ ಅತ್ಯಾಚಾರ ಪ್ರಕರಣದಲ್ಲಿ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯ ಪೊಲೀಸರು ಮುನಿರತ್ನ ಅವರನ್ನು ಮತ್ತೆ ಅರೆಸ್ಟ್ ಮಾಡಿದ್ದಾರೆ. ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಮನಗರ ಠಾಣೆಯ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿ ಇದೀಗ ಕಗ್ಗಲಿಪುರ ಠಾಣೆಗೆ ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ. ಈಗಾಗಲೇ ಅಟ್ರಾಸಿಟಿ ಪ್ರಕರಣದಲ್ಲಿ ಮುನಿರತ್ನಗೆ ಬೆಂಗಳೂರಿನ 84ನೇ ಸಿಸಿಎಚ್ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಇದರ ಬೆನ್ನಲ್ಲೇ 40 ವರ್ಷದ ಮಹಿಳೆ, ಮುನಿರತ್ನ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ ಬಳಿಕ ಮುನಿರತ್ನ ಅವರನ್ನು ಕಗ್ಗಲಿಪುರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾಗಾಗಿ ಈ ಒಂದು ಪ್ರಕರಣದಿಂದ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.
ಬೆಂಗಳೂರು : ಹೃದಯಾಘಾತ ಎನ್ನುವುದು ಈಗ ಸಾಮಾನ್ಯವಾಗಿ ಬಿಟ್ಟಿದೆ. ಯಾವಾಗ ಯಾರಿಗೆ ಹೃದಯಾಘಾತ ಸಂಭವಿಸುತ್ತದೆಯೋ ಗೊತ್ತಿಲ್ಲ. ಇದೀಗ ಬಸ್ ಚಾಲನೆ ಮಾಡುತ್ತಿರುವಾಗಲೇ ಬಿಎಂಟಿಸಿ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ ಸೇರಿದಂತೆ 45 ಜನರ ಜೀವ ಉಳಿದಿದೆ. ನಿನ್ನೆ ಮಧ್ಯಾಹ್ನ ಬೆಂಗಳೂರಿನ ಶಾಂತಿನಗರ ಡಬಲ್ ರೋಡ್ ಬಳಿ ಈ ಒಂದು ಘಟನೆ ನಡೆದಿದೆ. ಕೆ ಎ 51 ಎಜೆ 6905 ನಂಬರ್ ಬಸ್ ಡ್ರೈವರ್ ದಿನೇಶ್ ಅವರಿಗೆ ಚಾಲನೆ ಮಾಡುತ್ತಿರುವಾಗಲೇ ಹೃದಯಘಾತ ಸಂಭವಿಸಿದೆ. ಬಸ್ ನಿಧಾನಕ್ಕೆ ಚಲಿಸುತ್ತಿರುವುದನ್ನು ಗಮನಿಸಿದ ಸಂಚಾರಿ ಪೊಲೀಸರು ಕೂಡಲೇ ಧಾವಿಸಿ ಬಸ್ ಚಾಲಕನನ್ನು ರಕ್ಷಿಸಿದ್ದಾರೆ. ಹಲಸೂರಿನ ಟ್ರಾಫಿಕ್ ASI ರಘು ಹಾಗೂ ಕಾನ್ಸ್ಟೇಬಲ್ ಅವರ ಸಮಯ ಪ್ರಜ್ಞೆಯಿಂದ 45 ಜನರ ಪ್ರಾಣ ಉಳಿದಿದೆ.ಬಸ್ ನಲ್ಲಿ ಸುಮಾರು 45 ಜನ ಪ್ರಯಾಣಿಕರಿದ್ದರು. ಸಂಚಾರಿ ಪೊಲೀಸರ ಈ ಒಂದು ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿದೆ 45 ಜನರ ಜೀವ ಉಳಿದಿದೆ.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ರೈಲು ನಿಂತಾಗ ಮಾತ್ರ ರೈಲು ಹತ್ತಬೇಕು. ಒಂದು ವೇಳೆ ಚಲಿಸುತ್ತಿರುವ ರೈಲನ್ನು ಹತ್ತುವ ಸಾಹಸ ಏನಾದರು ಮಾಡಿದರೆ ನಮ್ಮ ಜೀವಕ್ಕೆ ಕುತ್ತು ಬರುವಂತಹ ಸಂಭವವಿರುತ್ತದೆ. ಇದೀಗ ಉಡುಪಿಯಲ್ಲಿ ಅಂತದ್ದೇ ಘಟನೆ ನಡೆದಿದ್ದು, ಚಲಿಸುತ್ತಿರುವ ರೈಲನ್ನು ಹತ್ತಲು ಹೋಗಿ ಮಹಿಳೆ ಆಯತಪ್ಪಿ ಬಿದ್ದಿದ್ದಾರೆ ಈ ವೇಳೆ ತಕ್ಷಣ ಅಲ್ಲೇ ಇದ್ದ ಆರ್ ಪಿ ಎಫ್ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಹೌದು, ಈ ಒಂದು ಘಟನೆ ಉಡುಪಿಯಲ್ಲಿ ನಡೆದಿದ್ದು ಮಂಗಳೂರು ಮತ್ತು ಮಡಗಾಂವ್ ಮಧ್ಯ ಚಲಿಸುತ್ತಿದ್ದ ರೈಲನ್ನು ಹತ್ತಲು ಓಡುತ್ತಿದ್ದ ಮಹಿಳೆಯನ್ನು ಆರ್ ಪಿ ಎಫ್ ಮಹಿಳಾ ಸಿಬ್ಬಂದಿ ರಕ್ಷಿಸಿದ್ದಾರೆ. ಇಂದು ಬೆಳಗ್ಗೆ ನಡೆದ ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರು ಮಡಗಾಂವ್ ರೈಲು ಹತ್ತುವಾಗ ಈ ಒಂದು ದುರಂತ ಸಂಭವಿಸಿದೆ. ಈ ವೇಳೆ ಆರ್ಪಿಎಫ್ ಮಹಿಳಾ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಇದಿಗ ಆರ್ಪಿಎಫ್ ಮಹಿಳಾ ಸಿಬ್ಬಂದಿ ಅರ್ಪಣಾ ಕಾರ್ಯಕ್ಕೆ ಎಲ್ಲರಿಂದ ಇದೀಗ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೌಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಇಂದು ಶಾಸಕ ಬಿ ನಾಗೇಂದ್ರ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿ ನಾಗೇಂದ್ರ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈ ಪ್ರಕರಣದಲ್ಲಿ ಶಾಸಕ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಿ. ನಾಗೇಂದ್ರ ಇದ್ದಾರೆ. ಪ್ರಕರಣದ ಸಂಬಂಧಪಟ್ಟಂತೆ ಎಲ್ಲ ರೀತಿಯ ವಿಚಾರಣೆ ಮಾಡಿದ್ದು, ಇಡಿ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಅಲ್ಲದೆ ಚಾರ್ಜ್ ಶೀಟ್ ನಲ್ಲಿ ಈ ಹಗರಣದ ಮಾಸ್ಟರ್ ಮೈಂಡ್ ಬಿ ನಾಗೇಂದ್ರ ಎಂದು ಇಡಿ ಅಧಿಕಾರಿಗಳು ಉಲ್ಲೇಖಿಸಿದ್ದಾರೆ ಹೀಗಾಗಿ ಇಂದು ಬಿ ನಾಗೇಂದ್ರ ಅವರ ಜಾಮೀನು…
ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆಯ ಪೊಲೀಸರು ಬಿಜೆಪಿ ಶಾಸಕ ಮುರತ್ನ ಅವರನ್ನು ಬಂಧಿಸಿದ್ದಾರೆ. ಮುನಿರತ್ನ ವಿರುದ್ಧ ದೂರು ಸಲ್ಲಿಸಿದ್ದ ಸಂತ್ರಸ್ತೆ ಮಹಿಳೆ ಕೆಲವು ಸ್ಫೋಟಕ ಆರೋಪ ಮಾಡಿದ್ದು, ಎಚ್ ಐ ವಿ ಸೋಂಕಿತರನ್ನು ಬಳಸಿಕೊಂಡು ಮುನಿರತ್ನ ಹನಿ ಟ್ರಾಪ್ ಮಾಡುತ್ತಿದ್ದರು ಎಂಬ ಸ್ಪೋಟಕವಾದಂತಹ ಆರೋಪ ಮಾಡಿದ್ದಾರೆ. ಹೌದು ತಮ್ಮ ವಿರೋಧಿಗಳನ್ನು ಬಗ್ಗು ಬಡಿಯಲು ಮುನಿರತ್ನ ಅವರು ಹನಿಟ್ರ್ಯಾಪ್ ಗೆ ಎಚ್ ಐ ವಿ ಸೋಂಕಿತರನ್ನು ಬಳಸಿಕೊಂಡಿದ್ದಲ್ಲದೆ, ಅನೇಕರ ಖಾಸಗಿ ವಿಡಿಯೋಗಳು ಮುನಿರತ್ನ ಅವರ ಬಳಿ ಇವೆ ವಿಡಿಯೋ ಕುರಿತು ದೂರಿನಲ್ಲಿ ಅತ್ಯಾಚಾರಕ್ಕೆ ಒಳಗಾದ ಮಹಿಳೆ ಇದೀಗ ಉಲ್ಲೇಖಿಸಿದ್ದಾರೆ. ದೂರಿನಲ್ಲಿ ಮುನಿರತ್ನ ವಿರುದ್ಧ ಅತ್ಯಾಚಾರ ಸಂತ್ರಸ್ತೆ ಉಲ್ಲೇಖ ಮಾಡಿದ್ದು, ರಾಜಕೀಯ ಎದುರಾಳಿಗಳನ್ನು ಹಣಿಯಲು ಹನಿ ಟ್ರ್ಯಾಪ್ ತಂತ್ರ ಕೂಡ ಮುನಿರತ್ನ ಪ್ರಯೋಗ ಮಾಡುತ್ತಾ ಇದ್ದರು. ಹಾಗಾಗಿ ಅನೇಕರ ಖಾಸಗಿ ವಿಡಿಯೋ ಕೂಡ ಇದೆ ಎಂದು ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತ ಮಹಿಳೆ ದೂರಿನಲ್ಲಿ…
ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ನಿನ್ನೆ ಜಾಮೀನು ಪಡೆದು ಹೊರಬಂದಿದ್ದ ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಇದೀಗ ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೌದು 2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೋಲೀಸರು ಬಿಜೆಪಿ ಶಾಸಕ ಮುನಿರತ್ನ ಅವರನ್ನು ಮತ್ತೆ ಬಂಧಿಸಿದ್ದಾರೆ. ಪ್ರಕರಣ ಸಂಬಂಧ ನೆಲಮಂಗಲ ನ್ಯಾಯಾಧೀಶರ ಮುಂದೆ ಸಂತ್ರಸ್ತೆ ಸೆಕ್ಷನ್ 164 ಅಡಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಅತ್ಯಾಚಾರ ನಡೆದ ಸ್ಥಳವಾದ ಜೆಪಿ ಪಾರ್ಕ್ ಬಳಿಯ ಶೆಡ್ನಲ್ಲಿ ನಿನ್ನೆ ಮಹಿಳೆಯ ಸಮ್ಮುಖದಲ್ಲಿ ಮಹಜರು ಕಾರ್ಯ ಮಾಡಲಾಗಿದೆ. ಹಾಗಾಗಿ ಇಂದು ಮುನಿರತ್ನ ಜೈಲಿನಿಂದ ಬಿಡುಗಡೆಯಾದ ಕೂಡಲೇ ಅವರನ್ನು ಪೊಲೀಸರು ಬಂಧಿಸಿದ್ದಾರೆ.













