Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಅಲ್ಲದೆ ಕಳೆದ ಹಲವು ದಿನಗಳಿಂದ ಸೋಂಕಿನಿಂದ ಮಕ್ಕಳು ಹಾಗೂ ಯುವಕರು ಬಲಿಯಾಗುತ್ತಿದ್ದಾರೆ ಈ ಕುರಿತು ಇಂದು ತುಮಕೂರಲ್ಲಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಹೈ ವೋಲ್ಟೇಜ್ ಸಭೆ ನಡೆಸಿದರು. ಹೌದು ಡೆಂಘಿ ಪ್ರಕರಣಗಳ ನಿಯಂತ್ರಣಕ್ಕೆ ಇಂದು ತುಮಕೂರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ಹೈ ವೋಲ್ಟೇಜ್ ಮೀಟಿಂಗ್ ನಡೆಸುತ್ತಿದ್ದು, ಆರೋಗ್ಯ ಅಧಿಕಾರಿಗಳ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಸಭೆ ನಡೆಸುತ್ತಿದ್ದಾರೆ. ತುಮಕೂರು ನಗರ ಜಿಲ್ಲೆ ಸೇರಿ 10 ತಾಲೂಕುಗಳ ಅಧಿಕಾರಿಗಳು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದಾರೆ.ಸಭೆಯಲ್ಲಿ ಡೇಂಗಿ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇದೆ ವೇಳೆ ತಾಲೂಕು ಮಟ್ಟದಲ್ಲೂ ಫಾಗಿಂಗ್ ಮಷೀನ್ ಖರೀದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ತುಮಕೂರು ಜಿಲ್ಲೆಯಲ್ಲಿ ಡೆಂಗಿ ಪ್ರಕರಣ ಹೇಗೆ ನಿಯಂತ್ರಿಸುತಿದ್ದೀರಿ ಏನಿಲ್ಲ ಕ್ರಮ ಕೈಗೊಂಡಿದ್ದೀರಿ ಎಂದು ಅಧಿಕಾರಿಗಳ ಜೊತೆ ಚರ್ಚಿಸುತ್ತಿದ್ದಾರೆ.
ಬೆಂಗಳೂರು : ವಿದೇಶದಲ್ಲಿ ನೆಲೆಸಿದ್ದರು ಕೂಡ ಬೆಂಗಳೂರಿನ ಸ್ಥಳೀಯರನ್ನು ಬಳಸಿಕೊಂಡು ಡ್ರಗ್ಸ್, ಮಾದಕವಸ್ತುಗಳನ್ನ ಮಾರಾಟ ದಂಧೆ ನಡೆಸುತ್ತಿರುವ ಆರೋಪದಡಿ ತಾಯಿ, ಮಗಳು ಸೇರಿ ಮೂವರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಜಕ್ಕೂರಿನ ಎಂಬೆಸ್ಸಿ ಬುಲೆವಾರ್ಡ್ ನಿವಾಸಿ ಆಯಾಜ್ ಮೆಹಮೂದ್ ಎಂಬುವವರು ನೀಡಿದ ದೂರಿನ ಮೇರೆಗೆ ದುಬೈ ನಿವಾಸಿಗಳಾದ ನತಾಲಿಯಾ ನಿರ್ವಾನಿ, ಅವರ ತಾಯಿ ಲೀನಾ ನಿರ್ವಾನಿ ಹಾಗೂ ರಂಜನ್ ಎಂಬುವವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೂರುದಾರ ಆಯಾಜ್ ಮೆಹಮೂದ್ ನೀಡಿದ ದೂರಿನಲ್ಲಿ ‘ ನತಾಲಿಯಾ ನಿರ್ವಾನಿ ಅವರು ತಮ್ಮ ತಾಯಿ ಲೀನಾ ನಿರ್ವಾನಿ ಜತೆಗೆ ದುಬೈನಲ್ಲಿ ನೆಲೆಸಿದ್ದಾರೆ. ನತಾಲಿಯಾ ನಗರದ ಸ್ಥಳೀಯ ರಂಜನ್ ಎಂಬಾತನ ಮುಖಾಂತರ ಸ್ಥಳೀಯರಿಂದ ಹಣ ಪಡೆದು ಹೈಡೋ ಗಾಂಜಾ ಮತ್ತು ಎಂಡಿಎಂಎ ಸೇರಿ ಇತರೆ ಮಾದಕಸ್ತುಗಳನ್ನು ಸರಬರಾಜು ಮಾಡುತ್ತಿದ್ದಾರೆ. ನತಾಲಿಯಾ ದುಬೈ-ಬೆಂಗಳೂರು ನಡುವೆ ಪ್ರಯಾಣ ಮಾಡುತ್ತಾ ಮಾದಕವಸ್ತು ದಂಧೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಇಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ HC ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಇಲಿ ಹೋಯಿತು, ಕೋತಿ ಹೋಯಿತು ಸಿಬಿಐ ಕೊಡಿ ಎಂದರೆ ಹೇಗೆ? ನಮ್ಮ ಅಧಿಕಾರಿಗಳು ತನಿಖೆ ಮಾಡಲು ಸಮರ್ಥರಿದ್ದಾರೆ ಬಿಜೆಪಿ ಅವಧಿಯಲ್ಲಿ ಎಷ್ಟು ಪ್ರಕರಣಗಳು ಸಿಬಿಐ ಕೊಟ್ಟಿದ್ದಾರೆ ಹೇಳಿ ಎಂದು ವಾಗ್ದಾಳಿ ನಡೆಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಒತ್ತಾಯದ ವಿಚಾರವಾಗಿ ಮೂಡಾದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಸಮಿತಿ ರದ್ದಿಗೆ ಸಲಹೆ ನೀಡಿದ್ದೇವೆ.ಸಮಿತಿ ರದ್ದು ಮಾಡಲು ಸ್ವಯಂ ಸಿದ್ಧರಾಮಯ್ಯಗೆ ಸಲಹೆ ಕೊಟ್ಟಿದ್ದೇವೆ. ಮೂವರ ಸಮಿತಿಯಷ್ಟೇ ಇರಲಿ ಎಂದು ಸಿಎಂ ಗೆ ಸಲಹೆ ಕೊಟ್ಟಿದ್ದೇವೆ ಎಂದರು. ಈ ಸಲಹೆಗೆ ಸಿಎಂ ಸಿದ್ದರಾಮಯ್ಯ ಪೂರಕವಾಗಿ ಸ್ಪಂದಿಸಿದ್ದಾರೆ. ಇಲಿ ಹೋಯಿತು, ಕೋತಿ ಹೋಯಿತು, ಸಿಬಿಐ ಕೊಡಿ ಎಂದರೆ ಹೇಗೆ?ನಮ್ಮ ಅಧಿಕಾರಿಗಳು ತನಿಖೆ ಮಾಡಲು ಸಮರ್ಥರಿದ್ದಾರೆ.ಬಿಜೆಪಿ ಅವಧಿಯಲ್ಲಿ ಎಷ್ಟು ಪ್ರಕರಣಗಳು ಸಿಬಿಐ ಕೊಟ್ಟಿದ್ದಾರೆ ಹೇಳಿ ಎಂದು ಮೈಸೂರಿನಲ್ಲಿ ಸಮಾಜ ಕಲ್ಯಾಣ…
ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಘೋರ ದುರಂತ ಒಂದು ನಡೆದಿದ್ದು, ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿ ಇರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡಿದೆ. ಆದರೆ ಅದೃಷ್ಟವಶಾತ್ ಕಾರ್ಖಾನೆಯಲ್ಲಿದ್ದ ಸಿಬ್ಬಂದಿಗಳೆಲ್ಲರೂ ಪ್ರಾಣ ಅಪಾಯದಿಂದ ಪಾರಾಗಿದ್ದಾರೆ. ಹೌದು ಇಂದು ಕಾರ್ಖಾನೆಯ ಸುಮಾರು 15 ಜನರು ನಸುಕಿನ ಜಾವ ಚಹಾ ಕುಡಿಯಲು ಹೊರಗೆ ತೆರಳಿದ್ದ ವೇಳೆ ಬಾಯ್ಲರ್ ಬ್ಲಾಸ್ಟ್ ಆಗಿದೆ. ಅದೃಷ್ಟವ್ವಶಾತ್ ಕೂದಲೆಳೆ ಅಂತರದಲ್ಲಿ ಕಾರ್ಮಿಕರು ಪಾರಾಗಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಮುಂದಿನ ಅವಧಿಗೆ ಕಬ್ಬು ನುರಿಸಲು ಕಾರ್ಖಾನೆ ಸಿದ್ದ ಮಾಡುತ್ತಿರುವ ವೇಳೆ ಬಾಯ್ಲರ್ ಸ್ಫೋಟಗೊಂಡಿದೆ. 2023ರ ಮಾ.4ರಂದು ಇದೇ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟವಾಗಿತ್ತು. ಆಗ ಓರ್ವ ಕಾರ್ಮಿಕ ಮೃತಪಟ್ಟಿದ್ದು, ನಾಲ್ವರಿಗೆ ಸುಟ್ಟ ಗಾಯಗಳಾಗಿದ್ದವು. ಕಳಪೆ ಬಾಯ್ಲರ್ ನಿರ್ಮಾಣದಿಂದ ಅವಘಡ ಸಂಭವಿಸುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಯ್ಲರ್ ಬ್ಲಾಸ್ಟ್ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕೆಂದು ರೈತರ ಒತ್ತಾಯಿಸಿದ್ದಾರೆ.
ಮೈಸೂರು : ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ಕಿರುಕುಳದಿಂದ ಬೇಸತ್ತು ನಾನು ಮೈಸೂರು ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಪಿ.ಎಂ. ಪ್ರಸನ್ನ ತಿಳಿಸಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರಕ್ಕೆ ಇದೀಗ ಮತ್ತೊಂದು ವಿಚಾರ ಉರುಳಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ರಾಜಕೀಯ ಕಾರಣಕ್ಕೆ ನನಗೆ ಬಹಳ ಕಿರುಕುಳ ಕೊಡುತ್ತಿದ್ದಾರೆ. ವಾಸ ದೃಢೀಕರಣ ಪತ್ರದ ವಿಚಾರದಲ್ಲಿ ಪದೇ ಪದೇ ನೋಟೀಸ್ ಕೊಟ್ಟು ಕಿರುಕುಳ ನೀಡುತ್ತಿದ್ದಾರೆ. ನಾನು ರಾಜೀನಾಮೆ ಕೊಡದೆ ಇದ್ದರೆ, ಎಲ್ಲಾ ಪದಾಧಿಕಾರಿಗಳ ವಜಾಕ್ಕೆ ವಾಮಾಮಾರ್ಗದ ಮೂಲಕ ಯತ್ನ ಮಾಡುತ್ತಿದ್ದಾರೆ. ಈ ಕಾರಣಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಹೇಳಿದ್ದಾರೆ. ರಾಜೀನಾಮೆ ಕೊಟ್ಟ ಬಳಿಯೂ 28ಸಿ ಅನುಸಾರ ತನಿಖೆಗೆ ನೋಟಿಸ್ ಕೊಟ್ಟಿದ್ದಾರೆ. ಪಿರಿಯಾಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಚಿವ ಕೆ.ವೆಂಕಟೇಶ್ ಧ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನಾನು ಅವರಿಗೆ ಪ್ರತಿಸ್ಪರ್ಧಿಯಾಗುತ್ತೇನೆ ಎಂದು…
ಕೆಲವರು ರೀಲ್ಸ್ ಹುಚ್ಚಿಗಾಗಿ ಏನೇನೋ ಕೆಲಸಗಳನ್ನು ಮಾಡಲು ಹೋಗಿ ಎಡವಟ್ಟು ಮಾಡಿಕೊಳ್ಳುತ್ತಾರೆ.ರೀಲ್ಸ್ ಹೆಸರಲ್ಲಿ ಯುವ ಸಮುದಾಯ ಮಾಡ್ತಿರೋ ಹುಚ್ಚಾಟಗಳಿಗೆ ಕೊನೆಯೇ ಇಲ್ಲದಂತಾಗಿದೆ. ಈಗಾಗಲೇ ಈ ರೀಲ್ಸ್ ಹುಚ್ಚಾಟಕ್ಕೆ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇದೀಗ ಇಂತಹದ್ದೇ ಒಂದು ರೀಲ್ಸ್ ಹುಚ್ಚಿಗೆ ಯುವಕನೊಬ್ಬ ಸ್ಕೂಟರ್ ಸಮೇತ ಸಮುದ್ರಕ್ಕೆ ಇಳಿದಿರುವ ದೃಶ್ಯ ಇದೀಗ ವೈರಲ್ ಆಗಿದೆ. ಇದು ಎಲ್ಲಿ ಯಾವಾಗ ನಡೆದಿದೆ ಇಂಡಿ ತಿಳಿದುಬಂದಿಲ್ಲ. The Figen ಎನ್ನುವವರು ತಮ್ಮ X ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂದಿದ್ದಾರೆ. ಆದರೆ ಯುವಕನೊಬ್ಬ ಸ್ಕೂಟರ್ ಸಮೇತ ಸಮುದ್ರಕ್ಕೆ ಇಳಿದು ಹುಚ್ಚಾಟ ಮೆರೆದಿದ್ದಾನೆ.ಆದರೆ ವೈರಲ್ ಆಗಿರುವ ವೀಡಿಯೋದಲ್ಲಿ ಯುವಕನೊಬ್ಬ ತನ್ನ ಸ್ಕೂಟರ್‌ನಲ್ಲಿ ಕುಳಿತಿರುವುದನ್ನು ಕಾಣಬಹುದು. ಆದರೆ ಯುವಕನು ಹೆಲ್ಮೆಟ್ ಹಾಕಿದ್ದು, ತನ್ನ ಸ್ಕೂಟರ್ ಅನ್ನು ಸಮುದ್ರದ ನೀರಿನಲ್ಲಿ ಓಡಿಸಿದ್ದಾನೆ. ಎದುರುಗಡೆ ಸಮುದ್ರದ ಅಲೆಗಳು ಬರುತ್ತಿದ್ದರ, ಅದರ ವಿರುದ್ಧವಾಗಿ ಈತ ಸ್ಕೂಟರ್ ಚಲಾಯಿಸಿಕೊಂಡು ಸಮುದ್ರಕ್ಕೆ ಇಳಿದಿದ್ದಾನೆ. ಈ ವೇಳೆ ಸಮುದ್ರದ ಅಲೆಗಳು ಜೋರಾಗಿ ಬಂದಾಗ ಮತ್ತೆ ಸ್ಕೂಟರ್ ತಿರುಗಿಸಿ ವಾಪಸ್ ಬರುವಾಗ…
ಮಂಡ್ಯ : ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕೇಂದ್ರ ಸಚಿವರಾದಂತಹ ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ ಅವರು ನಿನ್ನೆ ಮಂಡ್ಯ ಜಿಲ್ಲೆಯಲ್ಲಿ ಜನದಾದರ್ಶನ ಕಾರ್ಯಕ್ರಮ ನಡೆಸಿದರು. ಇದಾದ ಬಡಿಕ ಇಂದು ಎಚ್ ಡಿ ಕುಮಾರಸ್ವಾಮಿಗೆ ಕೌಂಟರ್ ಕೊಡಲು ಕಾಂಗ್ರೆಸ್ ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಜನತಾದರ್ಶನ ಕಾರ್ಯಕ್ರಮ ಆಯೋಜನೆ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಯಿತು. ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಜನತಾದರ್ಶನ ಕಾರ್ಯಕ್ರಮ ಆಯೋಜಿಸಿದ್ದು, ಕೆರಗೋಡು ಗ್ರಾಮದಲ್ಲಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ ನೀಡಿದ್ದು, ನಾವು ಅಧಿಕಾರಕ್ಕೆ ಬಂದ ಕೂಡಲೇ ಐದು ಗ್ಯಾರಂಟಿಗಳನ್ನು ಜಾರಿಗೆಗೊಳಿಸಿದ್ದೇವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳು ಎಲ್ಲ ಸಲ್ಲದ ಹೇಳಿಕೆಗಳನ್ನು ನೀಡುತ್ತೇವೆ. ಸಬ್ಸಿಡಿ ಯೋಜನೆಗಳನ್ನು ನಾವು ನಿಲ್ಲಿಸಿಲ್ಲ ಎಂದರು. ಬಿತ್ತನೆ ಬೀಜಗಳಿಗೆ ಯಾವುದೇ ತೊಂದರೆ ಇಲ್ಲ. ರೈತರ ಪರ ನಾವಿದ್ದೇವೆ. ವಿಪಕ್ಷಗಳು ಜನರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿವೆ. ಜಿಲ್ಲೆಯಲ್ಲಿ 27,000 ಈ ಸ್ವತ್ತು ಪ್ರಕರಣ ವಿಲೇವಾರಿ ಮಾಡಲಾಗಿದೆ.ಕಳೆದ…
ಮಂಡ್ಯ : ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲು ಸರ್ಕಾರ ಮುಂದಾಗಿದ್ದು ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ತುರ್ತು ಸಭೆ ನಡೆಸಿದ್ದು ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ಗೆ ತಾತ್ಕಾಲಿಕ ತಡೆ ನೀಡಿದ್ದಾರೆ. ರೈತರು, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ಹಿನ್ನೆಲೆ ಮಂಡ್ಯದ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ತುರ್ತು ಸಭೆ ನಡೆಸಲಾಗಿದೆ. ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಇದು 2018 ರಿಂದ ಇದೆ. ಸಾಕಷ್ಟು ರೈತರು ಟ್ರಯಲ್ ಬ್ಲಾಸ್ಟ್ ಬೇಡ ಎಂದು ಹೇಳಿದ್ದಾರೆ. ಸರ್ಕಾರ ಹಾಗೂ ನಮಗೆ ಬೇರೆ ಯಾವ ವಿಶೇಷ ಕಾಳಜಿ ಇಲ್ಲ. ನಮಗೆ ಜಲಾಶಯದ ಸುರಕ್ಷತೆ ಮುಖ್ಯ ಎಂದರು. ಜುಲೈ 15 ರ ಒಳಗೆ ಕೋರ್ಟಿಗೆ ಸಮಗ್ರ ಮಾಹಿತಿ ಕೊಡಲಿದ್ದೇವೆ. ಗೊಂದಲ ಬಗ್ಗೆ ಹರಿಯದಿದ್ರೆ ಸಮಯಾವಕಾಶ ಕೇಳಲಿದ್ದೇವೆ ಎಂದು ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ ನೀಡಿದರು. ಟ್ರಯಲ್ ಬ್ಲಾಸ್ಟ್ ಗೆ ಕೋರ್ಟ್…
ಬೆಂಗಳೂರು : ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪ ಚುನಾವಣೆ ಇದೀಗ ಭಾರಿ ಮಹತ್ವ ಪಡೆದುಕೊಂಡಿದ್ದು, ಕಾಂಗ್ರೆಸ್ ಪರವಾಗಿ ಪ್ರಬಲ ಅಭ್ಯರ್ಥಿ ಕಣಕ್ಕೆ ಇಳಿಸಲಿದ್ದು,, ಇನ್ನೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷಗಳಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಮಗಳು ಅನುಸೂಯ ಅವರನ್ನು ಕಣಕ್ಕೆ ಇಳಿಸಲಾಗುತ್ತದೆ ಎಂದು ಸುದ್ದಿ ಹರಿದಾಡಿತ್ತು. ಇದೀಗ ಈ ಒಂದು ಊಹಾಪೋಹಗಳಿಗೆ ಸಂಸದ ಡಾ.ಸಿಎನ್ ಮಂಜುನಾಥ್ ಅವರು ತೆರೆ ಎಳೆದಿದ್ದು, ನೂರಕ್ಕೆ ನೂರರಷ್ಟು ಅನುಸೂಯ ಈ ಒಂದು ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಅನುಸೂಯ ಸ್ಪರ್ಧೆ ವಿಚಾರವಾಗಿ ನಾನು ಸ್ಪಷ್ಟಪಡಿಸುತ್ತಿದ್ದೇನೆ ನೂರಕ್ಕೆ ನೂರರಷ್ಟು ಅನುಸೂಯ ಸ್ಪರ್ಧಿಸುವುದಿಲ್ಲ ಎಂದರು. ಬೆಂಗಳೂರಿನಲ್ಲಿ ಬಿಜೆಪಿಯ ಸಂಸದ ಡಾ.ಸಿ. ಮಂಜುನಾಥ್ ಸ್ಪಷ್ಟನೆ ನೀಡಿದ ಅವರು, i ವಿಷಯ ಕೆಲ ಮಾಧ್ಯಮಗಳಲ್ಲಿ ಈ ಸುದ್ದಿ ಬಂದಿದ್ದು ನನಗೆ ತುಂಬಾ ಮುಜುಗರ ತರಿಸಿದೆ ಯಾವುದೇ ಕಾರಣಕ್ಕೂ ಅನುಸೂಯ ಅವರು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಬಿಜೆಪಿ…
ಶಿವಮೊಗ್ಗ : ಇಂದು ಶಿವಮೊಗ್ಗದ ಲಯನ್ ಸಫಾರಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಭೀಕರ ಅಪಘಾತವಾಗಿದ್ದು, ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೂವರು ಸಾವನ್ನಪ್ಪಿದ್ದರೆ.ಮೂವರ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನಪ್ಪಿದ್ದು ಮೂವರ ಸ್ಥಿತಿ ಗಂಭೀರವಾಗಿದೆ. ಗಯಾಳುಗಳನ್ನು ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಶಿವಮೊಗ್ಗದ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ