Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಎಸ್ಐಟಿಗೆ ನೋಟಿಸ್ ನೀಡಿದೆ. ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ.ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿತು. ಸಿಐಡಿ ದಾಖಲಿಸಿರುವ ಎರಡನೇ ಎಫ್ಐಆರ್ ಸಂಬಂಧ ಪ್ರಜ್ವಲ್ ರೇವಣ್ಣನವರಿಗೆ ತನಿಖಾಧಿಕಾರಿಗಳು ಈವರೆಗೂ ಬಂಧನ ತೋರಿಸಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆಗೆ ಅರ್ಹತೆಗೆ ಸಂಬಂಧ ಕಚೇರಿ ಆಕ್ಷೇಪಣೆ ಎತ್ತಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು. ಈ ವೇಳೆ ನ್ಯಾಯಪೀಠ, ಸಿಐಡಿ ದಾಖಲಿಸಿರುವ ಎಫ್ಐಆರ್ನಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಲು ಅವಕಾಶವಿದೆಯೇ ಎಂದು ಪ್ರಶ್ನಿಸಿತು. ಅಲ್ಲದೆ, ಸರ್ಕಾರ ಈ ಸಂಬಂಧ ಆಕ್ಷೇಪಣೆ…
ಬೆಂಗಳೂರು : ಇತ್ತೀಚಿಗೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು ಮಾಲಿನ್ಯ ಉಂಟಾಗುತ್ತಿರುವುದರ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ಅಧ್ಯಯನಕ್ಕೆ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹೌದು ರಾಜ್ಯದ ಜೀವನದಿ ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು ಮಾಲಿನ್ಯ ಉಂಟಾಗುತ್ತಿರುವುದನ್ನು ಹಾಗೂ ಹಾಗೂ ನಾಗರಿಕರು ಮತ್ತು ಜಲಚರಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದರ ಬಗ್ಗೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ಪತ್ರ ಬರೆದಿದ್ದರು. ಪತ್ರದ ಮೂಲಕ ಸರ್ಕಾರದ ಗಮನ ಸೆಳೆದ ಬೆನ್ನಲ್ಲೇ ಪೂರಕ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ತುರ್ತು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಸಂಬಂಧಪಟ್ಟ ಇಲಾಖೆಗಳ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಿದೆ ಎಂದು ತಿಳಿದುಬಂದಿದೆ. ಕಾವೇರಿ…
ಬೆಂಗಳೂರು : ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 17 ಸ್ಥಾನಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ 9 ಸ್ಥಾನ ಪಡೆದುಕೊಂಡು ಜೆಡಿಎಸ್ ಮೂರರಲ್ಲಿ ಎರಡು ಸ್ಥಾನ ಪಡೆದುಕೊಂಡಿತು. ಈಗ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ ಬಿ ಶ್ರೀರಾಮುಲು ನನ್ನ ಸೋಲಿಗೆ ಬೇರೆ ಯಾರು ಕಾರಣ ಅಲ್ಲ ನಾನೇ ಕಾರಣ ಎಂದು ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಬೇರೆ ಯಾರು ಕಾರಣ ಅಲ್ಲ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ನನ್ನ ಸೋಲಿಗೆ ನಾನೇ ಕಾರಣನಾಗಿದ್ದೇನೆ ಎಂದು ಬೆಂಗಳೂರಿನಲ್ಲಿ ಪರಾಜಿತ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮಲು ಹೇಳಿಕೆ ನೀಡಿದರು. ನಿಮ್ಮ ಸೋಲಿಗೆ ಕಾರಣ ಏನು ಅಂತ ರಾಧಾ ಮೋಹನ್ದಾಸ್ ಕೇಳಿದಾಗ ಸೋಲಿಗೆ ವೈಯಕ್ತಿಕವಾಗಿ ನಾನೇ ಕಾರಣ ಅಂತ ಹೇಳಿದ್ದೇನೆ ಎಂದರು. ಬಳ್ಳಾರಿ ಸೋಲಿನ ಹೊಣೆಯನ್ನು ನಾನೇ ಹೊತ್ತುಕೊಳ್ಳುತ್ತೇನೆ ಅಂದಿದ್ದೇನೆ. ಇನ್ನೂ ಸಂಡೂರು ವಿಧಾನಸಭೆ ಉಪಚುನಾವಣೆ ಟಿಕೆಟ್ ಕೇಳಿಲ್ಲ. ಆದರೆ ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆಯೋ ಅವರ…
ಬೆಂಗಳೂರು : ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಎಸ್ಐಟಿಗೆ ನೋಟಿಸ್ ನೀಡಿದೆ. ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ.ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿತು. ಸಿಐಡಿ ದಾಖಲಿಸಿರುವ ಎರಡನೇ ಎಫ್ಐಆರ್ ಸಂಬಂಧ ಪ್ರಜ್ವಲ್ ರೇವಣ್ಣನವರಿಗೆ ತನಿಖಾಧಿಕಾರಿಗಳು ಈವರೆಗೂ ಬಂಧನ ತೋರಿಸಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆಗೆ ಅರ್ಹತೆಗೆ ಸಂಬಂಧ ಕಚೇರಿ ಆಕ್ಷೇಪಣೆ ಎತ್ತಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು. ಈ ವೇಳೆ ನ್ಯಾಯಪೀಠ, ಸಿಐಡಿ ದಾಖಲಿಸಿರುವ ಎಫ್ಐಆರ್ನಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಲು ಅವಕಾಶವಿದೆಯೇ ಎಂದು ಪ್ರಶ್ನಿಸಿತು. ಅಲ್ಲದೆ, ಸರ್ಕಾರ ಈ ಸಂಬಂಧ ಆಕ್ಷೇಪಣೆ…
ದಾವಣಗೆರೆ : ವೈದ್ಯರ ನಿರ್ಲಕ್ಷತನ ಎಡವಟ್ಟಿನಿಂದ ಹಲವಾರು ದುರಂತಗಳು ಸಂಭವಿಸುತ್ತಲೇ ಇರುತ್ತವೆ. ಇದೀಗ ಅಂತದ್ದೇ ಮತ್ತೊಂದು ದುರಂತ ಸಂಭವಿಸಿದ್ದು ಹೆರಿಗೆ ಮಾಡುವ ವೇಳೆ ಮಗುವಿನ ಮರ್ಮಾಂಗವನ್ನೇ ಕಟ್ ಮಾಡಿದ್ದರಿಂದ ಕಣ್ಣು ಬಿಡುವುದಕ್ಕೂ ಮುಂಚೆಯೇ ಮಗು ಸಾವನ್ನಪ್ಪಿರುವಂತಹ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಕೊಂಡಜ್ಜಿ ರಸ್ತೆಯ ನಿವಾಸಿ ಅರ್ಜುನ್ ಎಂಬುವರ ಪತ್ನಿ ಅಮೃತಾ ಅವರು ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ನಾರ್ಮಲ್ ಡೆಲಿವರಿ ಆಗದ ಹಿನ್ನೆಲೆ ಸಿಸರಿನ್ ಮಾಡಿ ಮಗು ತೆಗೆಯುವ ವೇಳೆ ಮಗುವಿನ ಮರ್ಮಾಂಗಕ್ಕೆ ವೈದ್ಯರಿಂದ ತೊಂದರೆ ಮಾಡಿದ್ದಾರೆ. ಅಮೃತಾಳಿಗೆ ಸಿಸರಿನ್ ಮೂಲಕ ಮಗುವನ್ನು ಹೊರ ತೆಗೆಯಬೇಕು ಎಂದು ವೈದ್ಯರು ಸೂಚಿಸಿದ್ದರು. ಸಿಸರಿನ್ ಮಾಡಿ ಮಗು ತೆಗೆಯುವ ವೇಳೆ ವೈದ್ಯ ನಿಜಾಮುದ್ದೀನ್ ಮಗುವಿನ ಮರ್ಮಾಂಗವನ್ನು ಆಕಸ್ಮಿಕವಾಗಿ ಕೊಯ್ದಿದ್ದಾರೆ. ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದರಿಂದ ಕೂಡಲೇ ಬಾಪುಜಿ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಮಗುವಿನ ಸಾವಿಗೆ ವೈದ್ಯರು ಕಾರಣ ಅಂತ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮಗುವಿನ ಸಾವಿಗೆ ಕಾರಣವಾದ ವೈದ್ಯನನ್ನು ಅಮಾನತು…
ತುಮಕೂರು : ಜಮೀನು ವಿವಾದ ವಿಚಾರಕ್ಕೆ ಎರಡು ಕುಟುಂಬಗಳ ಪರಸ್ಪರ ಬಡಿದಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಸೊಂಡೆಮಾರ್ಗೋನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರವಾದ ಗಾಯಗಳಾಗಿರುವ ಘಟನೇ ನಡೆದಿದೆ. ಶಶಿಕುಮಾರ್, ಲಕ್ಷ್ಮಣಯ್ಯ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ, ಘಟನೆಯಲ್ಲಿ ಲಕ್ಷ್ಮಣಯ್ಯ ಗಂಭೀರ ಗಾಯಗೊಂಡಿದ್ದು, ತುರುವೇಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಗೇಗೌಡನಪಾಳ್ಯದ ಮಂಜುನಾಥ್,ಗಂಗಮ್ಮ,ನಾಗಯ್ಯ,ಮಂಜುನಾಥ ನ ತಾಯಿ,ಪತ್ನಿ ಹಲ್ಲೆ ಮಾಡಿದವರು. ಲಕ್ಷ್ಮಣಯ್ಯ ಕುಟುಂಬಸ್ಥರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿರುವ ಮಂಜುನಾಥ್ ಕುಟುಂಬಸ್ಥರು ಲಕ್ಷ್ಮಣಯ್ಯರನ್ನ ನೀರಿನಲ್ಲಿ ಮುಳುಗಿಸಿ ಕುಡುಗೋಲು, ಕಲ್ಲಿನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ ಲಕ್ಷ್ಮಣಯ್ಯ ಗಂಭೀರ ಗಾಯಗೊಂಡಿದ್ದು ಸದ್ಯ ತುರುವೇಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೀಗ ಮಾಜಿ ಉಪಮೇಯರು ಒಬ್ಬರು ನಟ ದರ್ಶನ್ ಅವರಿಗೆ ಹಣ ಸಹಾಯ ಮಾಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಅವರಿಗೆ ವಿಚಾರಣೆ ಹಾಜರಾಗಿ ಎಂದು ನೋಟಿಸ್ ನೀಡಿತ್ತು. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಮಾಜಿ ಉಪಮೇಯರ್ ಮೋಹನ್ ರಾಜ್ ಅವರು ದರ್ಶನ್ ಅವರಿಗೆ 40 ಲಕ್ಷ ಹಣ ನೀಡಿದ್ದರು ಎಂದು ಆರೋಪ ಕೇಳಿಬಂದಿದೆ. ಹಾಗಾಗಿ ಉಪ ಮೇಯರ್ ಮೋಹನ್ ರಾಜ್ ಇದಿ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ರೇಣುಕಾ ಸ್ವಾಮಿ ಕೊಲೆಯಾದ ದಿನದಂದೇ ದರ್ಶನ್ ಅವರು ಮೋಹನ್ ರಾಜ್ ಅವರ ಬಳಿ ನಲವತ್ತು ಲಕ್ಷ ಯಾಕೆ ತೆಗೆದುಕೊಂಡರು? ಹಾಗೂ ಏನು ಕಾರಣ ಎಂಬುದರ ಕುರಿತು ಪೊಲೀಸರು ಉಪಮೇಯರ್ ಮೋಹನ್ ರಾಜ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮಾಜಿ ಉಪಮೇಯ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರಗೆ ಸಂಕಷ್ಟ ಎದುರಾಗಿದ್ದು, ವಿಶೇಷ ತನಿಕಾ ತಂಡದಿಂದ (SIT) ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲಗು SIT ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮವಾಗಿ ಹಣ ವರ್ಗಾವಣೆ ಆಗಿದೆ ಎಂದು ನಿಗಮದ ಅಧ್ಯಕ್ಷರ ಚಂದ್ರಶೇಖರ ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತರ ಸರ್ಕಾರ ಪ್ರಕರಣವನ್ನು ಸಿಐಡಿ ಗೆ ಬಯಸಿತ್ತು ಇದಾದ ಬಳಿಕ ಹಲವು ಬೆಳವಣಿಗೆಯ ನಂತರ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿದ್ದರು. ಇದೀಗ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ವಿತರಣೆಗೆ ಹಾಜರಾಗುವಂತೆ…
ರಾಯಚೂರು : ಸಾಮಾನ್ಯವಾಗಿ ಕಳ್ಳರು ಮನೆಯಲ್ಲಿ ಯಾರು ಇಲ್ಲದೆ ಇದ್ದಾಗ ಬೀಗ ಹಾಕಿದ ಮನೆಗೆ ಕನ್ನ ಹಾಕಿ ನಗದು ಚಿನ್ನಾಭರಣ ಕಳ್ಳತನ ಮಾಡುವುದನ್ನು ಕೇಳಿದ್ದೇವೆ, ನೋಡಿದ್ದೇವೆ. ಆದರೆ ಇಲ್ಲಿ ಭಕ್ತರ ಸೋಗಿನಲ್ಲಿ ಬಂದು ಮಠಾಧೀಶರಿಗೆ ಹೆದರಿಸಿ ಲಕ್ಷಾಂತರ ರೂಪಾಯಿ ಚಿನ್ನ, ನಗದನ್ನು ದೋಚಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂರಿನಲ್ಲಿ ನಡೆದಿದೆ. ಹೌದು ಭಕ್ತರ ಸೋಗಿನಲ್ಲಿ ಬಂದು ಚಿತ್ತರಗಿ ವಿಜಯ ಮಹಾಂತೇಶ್ವರ ಶಾಖಾ ಮಠದ ಪೀಠಾಧಿಪತಿಗೆ ಹೆದರಿಸಿ ಚಿನ್ನಾಭರಣ, ನಗದು ಸೇರಿದಂತೆ ಸುಮಾರು 35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ ಘಟನೆ ಲಿಂಗಸುಗೂರಿನಲ್ಲಿ ನಡೆದಿದೆ. ಪಟ್ಟಣದ ಬಸವಸಾಗರ ರಸ್ತೆಯಲ್ಲಿರುವ ಮಠದ ಸಿದ್ಧಲಿಂಗ ಸ್ವಾಮೀಜಿಗಳಿಗೆ ಹೆದರಿಸಿ ಸುಲಿಗೆಕೋರರು 20 ರಿಂದ 25 ಲಕ್ಷ ರೂ. ನಗದು, 80 ಗ್ರಾಂ ಚಿನ್ನಾಭರಣ, 7 ಕೆ.ಜಿ ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.ಭಕ್ತರ ಸೋಗಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಕಲಬುರಗಿಯಿಂದ ಬಂದಿದ್ದೇವೆ. ರಾತ್ರಿ ಮಠದಲ್ಲಿ ಆಶ್ರಯ ಕೊಡಿ ಎಂದು ಕೇಳಿದ್ದಾರೆ. ಬಳಿಕ ನೀರು ಕೇಳುವ ನೆಪದಲ್ಲಿ…
ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಹೊಳೆನರಸಿಪುರದಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಅರ್ಜಿ ಕುರಿತು ವಿಚಾರ ನಡೆಸಿದ ಹೈಕೋರ್ಟ್ ಎರಡು ವಾರಗಳ ಕಾಲ ವಿಚಾರಣೆ ಮುಂದೂಡಿದೆ. ಇಂದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ಸಲ್ಲಿಸಿದ ಗ್ರಾಮೀಣ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಒಂದು ಪ್ರಕರಣದಲ್ಲಿ ಮಾತ್ರ ಪ್ರಜ್ವಲ್ ಅವರನ್ನು ಪೊಲೀಸರು ಬಂಧೀಸಿದ್ದಾರೆ. ಉಳಿದ ಕೇಸ್ ಗಳಲ್ಲಿ ಬಾಡಿ ವಾರೆಂಟ್ ಮೂಲಕ ಕಸ್ಟಡಿಗೆ ಪಡೆದಿದ್ದರು. ಹೀಗಾಗಿ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ಪರಿಗಣಿಸಲು ಮನವಿ ಮಾಡಿದ್ದಾರೆ. ಜಾಮೀನು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಇದೀಗ SIT ಗೆ ಹೈಕೋರ್ಟ್ ಸೂಚನೆ ನೀಡಿದೆ. ತನಿಖೆ ನಡೆಯಲಿ ಶೀಘ್ರ ವಿಚಾರಣೆ ಅಗತ್ಯವಿಲ್ಲ ಎಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದ್ದು,ಜಾಮೀನು ಅರ್ಜಿ ವಿಚಾರಣೆ ಎರಡು ವಾರ ಮುಂದೂಡಿದ್ದಾರೆ ಎಂದು ತಿಳಿಬಂದಿದೆ.…