Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ಸಿಎಂ ಸಿದ್ದರಾಮಯ್ಯನವರ ಕುರ್ಚಿ ಅಲುಗಾಡುತ್ತಿದ್ದು ಆ ಕಾರಣದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಪುಟ ಸಭೆ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಂದ್ರ ಹೇಳಿಕೆ ನೀಡಿದ್ದರು. ಇವರ ಒಂದು ಹೇಳಿಕೆಗೆ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿರುಗೇಟು ನೀಡಿದ್ದು, ಸಿಎಂ ಸಿದ್ದರಾಮಯ್ಯನವರು ಕಟ್ಟಿದ್ದಾರೆ ಅವರ ಕುರ್ಚಿಯು ಕಟ್ಟಿ ಇದೆ ಈಗ ಅಲಗಾಡುತ್ತಿರುವುದು ಬಿವೈ ವಿಜಯೇಂದ್ರ ಕುರ್ಚಿ ಎಂದು ತಿರುಗೇಟು ನೀಡಿದರು. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಂಬಿ ಪಾಟೀಲ್, ಸಿಎಂ ಸಿದ್ದರಾಮಯ್ಯ ಗಟ್ಟಿಯಾಗಿದ್ದಾರೆ. ಅವರ ಕುರ್ಚಿಯು ಕೂಡ ಗಟ್ಟಿ ಇದೆ. ಆದರೆ ಈಗ ಅಲುಗಾಡುತ್ತಿರುವುದು ಬಿ ವೈ ವಿಜಯೇಂದ್ರ ಕುರ್ಚಿ ಎಂದು ಬಿ ವೈ ವಿಜಯೇಂದ್ರ ಹೇಳಿಕೆಗೆ ತಿರುಗೇಟು ಕೊಟ್ಟರು. ಈಗ ಬಿವೈ ವಿಜಯೇಂದ್ರ ಕುರ್ಚಿ ಅಲುಗಾಡುತ್ತಿದೆ. ಬಸನಗೌಡ ಪಾಟೀಲ್ ಯತ್ನಾಳ, ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕುರ್ಚಿ ಅಲಗಾಡುತ್ತಿದೆ ಹೀಗಾಗಿ ವಿಜಯೇಂದ್ರ ಮೊದಲು ತಮ್ಮ ಕುರ್ಚಿ ಕಟ್ಟಿ…
ರಾಮನಗರ : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಅಡಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ರಾಮನಗರ ಠಾಣೆಗೆ ಮಹಿಳೆಯೊಬ್ಬರು ದೂರು ನೀಡಲು ಮುಂದಾಗಿದ್ದಾರೆ. ಹೌದು ದೂರು ನೀಡಲು ಆಗಮಿಸಿರುವ ಬೆಂಗಳೂರು ಮೂಲದ ಮಹಿಳೆ ರಾಮನಗರ ಪೊಲೀಸ್ ಠಾಣೆಗೆ ದೂರು ನೀಡಲು ಆಗಮಿಸಿದ್ದಾಳೆ. ಮಹಿಳೆಯರ ಜೊತೆ ಮುನಿರತ್ನ ನಾಯ್ಡು ಅನುಚಿತ ವರ್ತನೆ ಆರೋಪ ಕೇಳಿ ಬಂದಿದ್ದು, ಡಿವೈಎಸ್ಪಿ ಕಚೇರಿಯಲ್ಲಿ ಮಹಿಳೆಯ ಜೊತೆ ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ. ಮಹಿಳೆಯ ಜೊತೆ ಮುನಿರತ್ನ ನಾಯ್ಡು, ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು ಡಿವೈಎಸ್ಪಿ ಕಚೇರಿಯಲ್ಲಿ ಮಹಿಳೆಯ ಜೊತೆ ಪೊಲೀಸರು ಸದ್ಯ ಮಾತುಕತೆ ನಡೆಸುತ್ತಿದ್ದಾರೆ. ಶಾಸಕ ಮುನಿರತ್ನ ನಾಯ್ಡು ವಿರುದ್ಧ ದೂರು ಸ್ವೀಕರಿಸುವಂತೆ ಮಹಿಳೆ ಪೊಲೀಸರಿಗೆ ಮನವಿ ಮಾಡಿದ್ದಾರೆ.ಸದ್ಯ ಕಗ್ಗಲೀಪುರ ಪೊಲೀಸ್ ಠಾಣೆಗೆ ರಾಮನಗರ ಪೊಲೀಸರು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಮದ್ಯ ಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ರಾಜ್ಯ ಸರ್ಕಾರ ಬಿಯರ್ ದರ ಹೆಚ್ಚಿಗೆ ಮಾಡಲು ಚಿಂತನೆ ನಡೆಸಿದೆ. ಬಿಯರ್ ದರವನ್ನು 10 ರಿಂದ 15 ರೂಪಾಯಿ ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಕಳೆದಾಗ 15 ತಿಂಗಳಲ್ಲಿ ಎರಡೆರಡು ಬಾರಿ ಮದ್ಯದ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಇದೀಗ ಮೂರನೇ ಬಾರಿ ಬಿಯರ್ ಮೇಲಿನ ದರ ಏರಿಕೆಗೆ ಮುಂದಾಗಿದ್ದು, ಅಕ್ಟೋಬರ್ ಆರಂಭದಿಂದ ಈ ಹೊಸ ದರ ಜಾರಿಗೆ ಬರುವ ಸಾಧ್ಯತೆಯಿದೆ. ಬುಲೆಟ್, ಪವರ್ ಕೂಲ್, ಲೆಜೆಂಡ್, ಆರ್.ಸಿ.ಸ್ಟ್ರಾಂಗ್, ನಾಕೌಟ್ ಮತ್ತಿತರ ಬ್ಯಾಂಡ್ಗಳ ಬೆಲೆಯಲ್ಲಿ ಶೇ.10 ರಿಂದ ಶೇ.15ರಷ್ಟು ಬೆಲೆ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಪ್ರತಿ ಬಾಟಲಿ ಬಿಯರ್ ಮೇಲಿನ ದರವನ್ನ 10ರಿಂದ 15 ರೂಪಾಯಿ ಏರಿಸಲು ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಅಂಗೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬೆಂಗಳೂರು : ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಡ್ರಗ್ಸ್ ತಡೆಗಟ್ಟಲು ಹೊಸ ಕಾನೂನು ಜಾರಿಗೊಳಿಸಲು ನಿರ್ಧಾರ ಮಾಡಲಾಗಿದೆ ಎಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು. ಇದೀಗ ಡ್ರಗ್ಸ್ ತಡೆಗಟ್ಟಲು 7 ಸಚಿವರನ್ನು ಒಳಗೊಂಡ ಟಾಸ್ಕ್ ಫೋರ್ಸ್ ಸಮಿತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡ್ರಗ್ಸ್ ತಡೆಗಟ್ಟಲು ಟಾಸ್ಕ್ ಪೋಸ್ ರಚಿಸಿದ ರಾಜ್ಯ ಸರ್ಕಾರ, ಸಮಿತಿಯಲ್ಲಿ 7 ಸಚಿವರನ್ನು ಒಳಗೊಂಡ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಿದ್ದು, ಸಮಿತಿ ಅಧ್ಯಕ್ಷರಾಗಿ ಗೃಹ ಸಚಿವ ಜಿ ಪರಮೇಶ್ವರ್ ನೇಮಕ ಮಾಡಲಾಗಿದೆ. ಇನ್ನುಳಿದ 6 ಸಚಿವರು ಸಮಿತಿಯ ಸದಸ್ಯರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ, ಮಧು ಬಂಗಾರಪ್ಪ, ಶರಣಪ್ರಕಾಶ್ ಪಾಟೀಲ್, ಎಂಸಿ ಸುಧಾಕರ್ ಹಾಗೂ ದಿನೇಶ್ ಗುಂಡೂರಾವ್ ಅವರನ್ನು ನೇಮಿಸಿದೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಿಂಗಳಿಗೆ ಒಂದು ಬಾರಿ ಸಭೆ ನಡೆಸುವಂತೆ ಸಮಿತಿ ಸದಸ್ಯರಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ. ಡ್ರಗ್ಸ್ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.…
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ನಡೆದಂತಹ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸುಳ್ಳು ಮಾಹಿತಿ ಹಂಚಿಕೆ ಆರೋಪದ ಅಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ನಾಗಮಂಗಲದ ಟೌನ್ ಠಾಣೆಯಲ್ಲಿ ದಾಖಲಾಗಿದೆ. ಹೌದು ನಾಗಮಂಗಲದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿಗಳನ್ನು ಹಂಚಿದ್ದಾರೆ ಎಂದು ಆರೋಪ ಬದಲಾಗಿದ್ದು, ಇದೀಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೋಮುಗಲಭೆ ಸಂಬಂಧ ಸುಳ್ಳು ಮಾಹಿತಿ ಹಂಚಿಕೆ ಆರೋಪದ ಮೇಲೆ ಇದೀಗ ನಾಗಮಂಗಲ ಘಟನೆಗೆ ಸಂಬಂಧಿಸಿದ ವಿಡಿಯೋ, ಫೋಟೋ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಇದೀಗ ನಾಗಮಂಗಲದ ಟೌನ್ ಠಾಣೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ‘FIR’ ದಾಖಲಾಗಿದೆ.
ದಕ್ಷಿಣಕನ್ನಡ : ನಟ ನಿರ್ದೇಶಕರಾದ ಉಪೇಂದ್ರ ಅವರ ಸಿನೆಮಾಗಳು ಒಂದು ಸಲ ನೋಡಿದ್ರೆ ಅರ್ಥವಾಗಲ್ಲ. ಇದೀಗ ಅವರ ನಟನೆಯ ಬುದ್ಧಿವಂತ ಸಿನೆಮಾ ಸ್ಟೈಲ್ ನಲ್ಲಿ ಮಹಿಳೆಯರಿಗೆ ವಂಚಿಸಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗುತ್ತಿದ್ದ ಕಿಲಾಡಿ ಕಳ್ಳನೊಬ್ಬ ಕೊನೆಗೂ ಪೋಲೀಸರ ಬಲೆಗೆ ಬಿದ್ದಿದ್ದಾನೆ. ಹೌದು ಮಹಿಳೆಯರಿಗೆ ವಂಚನೆ ಮಾಡಿ ಕೋರ್ಟ್ನಲ್ಲಿ ನಾನವನಲ್ಲ. ನಾನವನಲ್ಲ ಎಂದು ಪ್ರೇಕ್ಷಕರನ್ನು ರಂಜಿಸಿದ್ದ ಉಪೇಂದ್ರ ಅವರ ಬುದ್ದಿವಂತ ಸಿನಿಮಾದಂತೆ ಇಲ್ಲೊಬ್ಬ ರಿಯಲ್ ಲೈಫ್ನಲ್ಲಿ ಇದೇ ರೀತಿ ಸಾಕಷ್ಟು ಮಹಿಳೆಯರಿಗೆ ವಂಚನೆ ಮಾಡಿ ಎಸ್ಕೇಫ್ ಆಗುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ರೋಹಿತ್ ಮಥಾಯೀಸ್ ಎಂಬಾತ 2019 ರಲ್ಲಿ ಪಕ್ಕದ ಮನೆಯಲ್ಲಿ ವಾಸವಿದ್ದ ನಿವೃತ್ತ ಪಿಡಿಓ ಭರತಲಕ್ಷ್ಮಿ ಎಂಬವವರನ್ನು ಕೊಂದು ಅವರ ಮನೆಯಲ್ಲಿ ಚಿನ್ನಾಭರಣವನ್ನು ಲೂಟಿ ಮಾಡಿದ್ದ. ನಂತರ ಶವವನ್ನು ಬಾವಿಗೆ ಬಿಸಾಕಿದ್ದ. ಬಂಧನವಾಗಿ ಜಾಮೀನಿನ ಮೇಲೆ ಹೊರಬಂದು ಮುಂಬೈ ಸೇರಿಕೊಂಡಿದ್ದ. ಬಳಿಕ ಫೇಸ್ ಬುಕ್ನಲ್ಲಿ ಕರಾವಳಿ ಭಾಗದ ಅದರಲ್ಲೂ ಕ್ರಿಶ್ಚಿಯನ್ ಧರ್ಮದ ಮಹಿಳೆಯರನ್ನು ಸಂಪರ್ಕ…
ರಾಯಚೂರು : ಈ ಬಾರಿ ಲೋಕಸಭಾ ಚುನಾವಣೆಗೆ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೊಡಬೇಡಿ ಎಂದು ನಾನೇ ಹೇಳಿದ್ದೆ ಎಂದು ವಿಧಾನ ಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಅಮೇರಿಕಾದಲ್ಲಿ ಮೀಸಲಾತಿ ಕುರಿತು ಸಂಸತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಖಂಡಿಸಿ ರಾಹುಲ್ ಗಾಂಧಿ ರಾಜೀನಾಮೆಗೆ ಆಗ್ರಹಿಸಿ ರಾಯಚೂರಿನಲ್ಲಿ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಅನಂತ ಕುಮಾರ್ ಹೆಗಡೆಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ವಿಚಾರವನ್ನು ಪ್ರಸ್ತಾಪಿಸಿದರು. ಹೌದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಮಂತ್ರಿ ಇದ್ದಾಗಲೇ ಮೋದಿಜಿಯವರು ಅನಂತ್ ಕುಮಾರ್ ಅವರನ್ನು ಪಾರ್ಲಿಮೆಂಟಿಗೆ ಕರೆಸಿ ದೇಶದ ಜನರ ಕ್ಷಮೆ ಕೇಳಿಸಿದ್ದರು. ಆದ್ರೆ, ಅವರು ಪುನಃ ಸಂವಿಧಾನ ಬದಲಾವಣೆ ಮಾತನಾಡಿದರು. ಹಾಗಾಗಿ ನಾನೇ ನಮ್ಮ ಮುಖಂಡರಿಗೆ ಖಡಕ್ ಆಗಿ ಹೇಳಿದ್ದೆ. ಯಾವುದೇ ಕಾರಣಕ್ಕೂ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೊಡಬೇಡಿ ಎಂದಿದ್ದೆ ಎಂದರು. ಅಂದು ನಾವು ಸಂವಿಧಾನದ ಕುರಿತು…
ಬೆಂಗಳೂರು : ಒಂದು ದೇಶ ಒಂದು ಚುನಾವಣೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿರುವ ವಿಚಾರವಾಗಿ ಇದೀಗ ಪರ ಮತ್ತು ವಿರೋಧ ಚರ್ಚೆಗಳು ಪ್ರಾರಂಭವಾಗಿದ್ದು, ಬೆಂಗಳೂರಿನಲ್ಲಿ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾತ್ರಿ ಒಂದು ಕನಸು ಕಾಣುತ್ತಾರೆ ಅದನ್ನು ನನಸು ಮಾಡಲು ಮರುದಿನ ಸಂಪುಟ ಸಭೆ ಕರೆಯುತ್ತಾರೆ ಎಂದು ವ್ಯಂಗ್ಯವಾಡಿದರು. ಬೆಂಗಳೂರಿನಲ್ಲಿ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು, ಒಂದು ದೇಶ ಒಂದು ಚುನಾವಣೆಯ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ರಾಜ್ಯ ಸರ್ಕಾರಗಳ ಜೊತೆ ಕೇಂದ್ರ ಸರ್ಕಾರ ಚರ್ಚೆ ಮಾಡಬೇಕಿತ್ತು. ದೇಶದಲ್ಲಿ ಹಲವು ರೀತಿಯಲ್ಲಿ ಚುನಾವಣೆ ನಡೆಯುತ್ತದೆ ಇದನ್ನು ಹೇಗೆ ಮಾಡಬೇಕೆಂದು ರಾಜ್ಯಗಳ ಜೊತೆ ಕೇಂದ್ರ ಸರ್ಕಾರ ಚರ್ಚಿಸಬೇಕಿತ್ತು ಎಂದರು. ಪಂಚಾಯಿತಿಯಿಂದ ಪಾರ್ಲಿಮೆಂಟ್ ಅವರಿಗೆ ಚುನಾವಣೆ ನಡೆಸುತ್ತೀರಾ? ಪಾರ್ಲಿಮೆಂಟ್ ನಿಂದ ಅಸೆಂಬ್ಲಿ ಚುನಾವಣೆ ಮಾತ್ರ ನಡೆಸುತ್ತೀರಾ? ಎಲ್ಲವೂ ಕೂಡ ಚರ್ಚೆ ಆಗಬೇಕು. ಒಂದು ಕಡೆ ಒಂದು ದೇಶ ಒಂದು ಚುನಾವಣೆ ಅಂತ…
ಬೆಂಗಳೂರು : ನಮ್ಮ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಅವರು “ಆಪರೇಷನ್ ಕಮಲಕ್ಕೆ ಮೂಲದಾತರುಗಳಾದ ಬಿಜೆಪಿಯವರೇ ಒಂದು ರಾಷ್ಟ, ಒಂದು ಚುನಾವಣೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕುಮಾರಪಾರ್ಕ್ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಅವರು, “ಅನೇಕ ರಾಜ್ಯಗಳಲ್ಲಿ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಮುಂದಾಗಿದ್ದಾರೆ. ಪ್ರಾದೇಶಿಕ ಪಕ್ಷಗಳು ಬೆಳೆಯುತ್ತಿರುವುದನ್ನು ತಡೆಯಲು ಕೇಂದ್ರ ಬಿಜೆಪಿ ಸರ್ಕಾರ ಈ ಹುನ್ನಾರ ಮಾಡಿದೆ ಎಂದರು. ದೇಶದಲ್ಲಿ ಎಲ್ಲಾ ಪಕ್ಷಗಳಿಗೂ ಅವಕಾಶ ಸಿಗಬೇಕು. ಈ ಹಿಂದೆಯೂ ಒಂದು ರಾಷ್ಡ್ರ, ಒಂದು ಚುನಾವಣೆ ವ್ಯವಸ್ಥೆ ನಮ್ಮಲ್ಲಿತ್ತು. ನಮ್ಮ ರಾಜ್ಯದಲ್ಲಿಯೂ ಒಟ್ಟಿಗೆ ಚುನಾವಣೆ ಮಾಡಲಾಯಿತು. ಆನಂತರ ಸಾಧ್ಯವಾಯಿಯೇ? ಆಗಲಿಲ್ಲ. ಏಕೆಂದರೆ ಒಂದಷ್ಟು ಸರ್ಕಾರಗಳು ಕ್ಯಾಬಿನೆಟ್ ಅಲ್ಲಿ ಆರು ಹಾಗೂ ಮೂರು ತಿಂಗಳು ಮುಂಚಿತವಾಗಿ ಚುನಾವಣೆಗೆ ಹೋಗುತ್ತೇವೆ ಎಂದರು, ಒಂದಷ್ಟು ರಾಜ್ಯಗಳಲ್ಲಿ ಸರ್ಕಾರಗಳೇ ವಿಸರ್ಜನೆಗೊಂಡವು. ಹೀಗಿರುವಾಗ ಈ ವ್ಯವಸ್ಥೆಯನ್ನು ಜಾರಿಗೆ ತರಲು ಹೇಗೆ…
ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಬೆಂಗಳೂರು ನಗರ ಮತ್ತು ಹೊರವಲಯದ ಪ್ರದೇಶಗಳ ಸಾರ್ವಜನಿಕ ಪ್ರಯಾಣಿಕರಿಗೆ, ಸುರಕ್ಷಿತ ಹಾಗೂ ಮಿತವ್ಯಯಕರ ಪ್ರಯಾಣ ದರಗಳಲ್ಲಿ ವಿವಿಧ ಮಾದರಿಯ ಬಸ್ಸುಗಳೊಂದಿಗೆ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಪ್ರಸ್ತುತ, ಬೆಂ.ಮ.ಸಾ.ಸಂಸ್ಥೆಯು ಪ್ರತಿದಿನ 5725 ಬಸ್ಸುಗಳಿಂದ 11.73 ಲಕ್ಷ ಕಿ.ಮೀಗಳಲ್ಲಿ 59,709 ಸರತಿಗಳನ್ನು ಕಾರ್ಯಾಚರಣೆಗೊಳಿಸುತ್ತಿದ್ದು, ಪ್ರತಿದಿನ 40.00 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ವಾಯುಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಮತ್ತು ಸಾರ್ವಜನಿಕ ಪ್ರಯಾಣಿಕರಿಗೆ ಹೆಚ್ಚಿನ ಹಾಗೂ ಉತ್ತಮ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳಡಿಯಲ್ಲಿ Gross Cost Contract (GCC) ಆಧಾರದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ಸುಗಳನ್ನು ಆಚರಿಸುತ್ತಿದೆ. GCC ಆಧಾರದಲ್ಲಿ ಕಾರ್ಯಾಚರಿಸುತ್ತಿರುವ ಮತ್ತು ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳು : 1) Bengaluru Smart City ಯೋಜನೆ ಅಡಿಯಲ್ಲಿ 09 ಮೀಟರ್ ಉದ್ದದ 90 ಹವಾನಿಯಂತ್ರಣ ರಹಿತ…













