Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಒಬ್ಬ ವಿಚಿತ್ರ ಕಳ್ಳನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಟೋರಿಯಸ್ ಕಳ್ಳನನ್ನು ಅರೆಸ್ಟ್ ಮಾಡಲಾಗಿದ್ದು, 5 ಜಿಲ್ಲೆಗೆ ಬೇಕಾಗಿದ್ದ ನಟೋರಿಯಸ್ ಕಳ್ಳ ಅರೆಸ್ಟ್ ಆಗಿದ್ದಾನೆ. ವಿದ್ಯಾರಣ್ಯಪುರ ಪೊಲೀಸರಿಂದ ಕಳ್ಳನ ಬಂಧನವಾಗಿದೆ. ಅಸ್ಲಾಂ ಪಾಷಾ ವಿರುದ್ಧ 150 ಪ್ರಕರಣ ದಾಖಲಾಗಿತ್ತು. ಬೆಂಗಳೂರು , ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿಯೂ ಈತ ಮನೆಗಳ ತನ ಮಾಡಿದ್ದ. ಕದ್ದ ಮಾಲ್ ಅಲ್ಲಿ ದೇವರಿಗೆ ಪಾಲು! ಕಳ್ಳತನದಲ್ಲೂ ಅಸ್ಲಾಂ ಪಾಶಾಗೆ ದೇವರ ಮೇಲೆ ನಂಬಿಕೆ ಹೆಚ್ಚಾಗಿತ್ತು. ಪ್ರತಿ ಬಾರಿಯೂ ಕದ್ದ ಮಾಲಿನಲ್ಲಿ ದೇವರಿಗೆ ಪಾಲು ನೀಡುತ್ತಿದ್ದ. ಕಳ್ಳತನ ಮಾಡಿ ಅಜ್ಮೀರ್ ದರ್ಗಾ ಗೆ ಪಾಶ ಹೋಗುತ್ತಿದ್ದ. ದರ್ಗಾದಲ್ಲಿ ಹುಂಡಿಗೆ ಹಣ ಹಾಕುತ್ತಿದ್ದ ಅಜ್ಮೀರ್ ದರ್ಗಾ ಗೆ ಪ್ರಾರ್ಥನೆ ಬಳಿಕ ಈತ ವಿಲಾಸಿ ಜೀವನ ನಡೆಸುತ್ತಿದ್ದ. ಇದೀಗ ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಈತ ಕಳ್ಳತನವನ್ನೇ ತನ್ನ ಕಾಯಕವನ್ನಾಗಿ ಮಾಡಿಕೊಂಡಿದ್ದ ಕಳೆದ 20 ವರ್ಷಗಳಿಂದ…

Read More

ಬೆಂಗಳೂರು : ಮೆಕ್ಕೆಜೋಳ ಖರೀದಿಯಲ್ಲಿ ಭಾರಿ ವಂಚನೆ ಆಗಿದೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ, ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಸಂಕಷ್ಟ ಎದುರಾಗಿದ್ದು, ಜಮೀರ್ ಅಹ್ಮದ್ ಖಾನ್ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿದೆ. ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ದೂರು ನೀಡಿದ್ದಾರೆ. ಸಂಪುಟದಿಂದ ಸಚಿವ ಜಮೀರ್ ಅಹ್ಮದ್ ಖಾನ್ ರನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ವಂಚನೆ ಮಾಡಿದ ವ್ಯಕ್ತಿಯ ಪರವಾಗಿ ಜಮೀರ್ ನಿಂತಿರುವ ಆರೋಪ ಕೇಳಿ ಬಂದಿದೆ. ಹೈದರಾಬಾದ್ ವ್ಯಕ್ತಿಗೆ ಜಮೀರ್ ಅಹ್ಮದ್ ಸಹಕರಿಸುವಂತೆ ಫೋನ್ ಕರೆ ಮಾಡಿದ್ದರಂತೆ, ಅಲ್ಲದೇ ಆರೋಪಿ ಅಕ್ಬರ್ ಪಾಷಾಗೆ ಸರ್ಕಾರಿ ವಾಹನ ಬಳಕೆ ಮಾಡಲು ಕೂಡ ಜಮೀರ್ ಅಹ್ಮದ್ ಅವಕಾಶ ಮಾಡಿಕೊಟ್ಟಿರುವ ಆರೋಪ ಕೇಳಿಬಂದಿದೆ. ಹೀಗಾಗಿ ರಾಜ್ಯಪಾಲರಿಗೆ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎನ್ನುವವರು ದೂರು ನೀಡಿದ್ದು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

Read More

ಬೆಂಗಳೂರು : ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ‌ ಪ್ರಯಾಣಿಕರು ಮಾನ್ಯ ಸಚಿವರ ಗಮನಕ್ಕೆ ತಂದಿದ್ದರು. ಈ‌ ಬಗ್ಗೆ ಸಚಿವರು ಕೂಡಲೇ ಕಾಮಗಾರಿ ಕೈಗೆತ್ತಿಕೊಂಡು ಬಸ್ ಗಳ ಸುಗಮ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದರು. ಈ ಸಂಬಂಧ ತೆಗೆದುಕೊಂಡಿರುವ ಕ್ರಮವನ್ನು ಪರಿಶೀಲಿಸಲು ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಾಮರ್ಶೆ ನಡೆಸಿರುತ್ತಾರೆ. ಮೊದಲನೇ ಹಂತದಲ್ಲಿ ಸದರಿ‌‌ ಕಾಮಗಾರಿಯನ್ನು ಪೂರ್ಣಗೊಳಿಸಿ, ಮುಂದಿನ‌ ಹಂತದಲ್ಲಿ‌‌ ಇನ್ನೆರಡು‌ ಸ್ಥಳಗಳಲ್ಲಿ ( ಮಳೆಗ ಹಾನಿಗೆ ಸಿಲುಕುವ) ಕಾರ್ಯಕೈಗೊಳ್ಳಲು ಸೂಚನೆ‌ ನೀಡಿರುತ್ತಾರೆ. ಇದೇ ಸಂದರ್ಭದಲ್ಲಿ ಬಸ್ ನಿಲ್ದಾಣದ ಎಲ್ಲಾ ಟರ್ಮಿನಲ್ ಗಳ ಪರಿವೀಕ್ಷಣೆ ನಡೆಸಿದರು. ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ವಾಣಿಜ್ಯ ಮಳಿಗೆಗಳು ಖಾಲಿ ಉಳಿಯದಂತೆ ಕ್ರಮವಹಿಸಲು ತಿಳಿಸಿದರು. ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಚಾಲನಾ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ದೀಪದ…

Read More

ಮಂಡ್ಯ : ಇಂದು ಮಂಡ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು. ಮಂಡ್ಯದ ಮೈಷುಗರ್ ಶಾಲೆಗೆ ಆಗಮಿಸಿ, ಶಾಲೆಯ ಆಡಳಿತ ಮಂಡಳಿ ಜೊತೆ ಸಭೆ‌ ನಡೆಸಲಿದ್ದಾರೆ. ಶಾಲೆಯ ಶಿಕ್ಷಕರಿಗೆ ಸಂಬಳ ಕೊಡಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿರುವ ಶಾಲೆ. ಈ ಬಗ್ಗೆ 25 ಕೋಟಿ ಹಣ ಡೆಪಸಿಟ್ ಇಡುವುದಾಗಿ ಹೆಚ್.ಡಿ.ಕೆ. ಈ ಹಿಂದೆ ಹೇಳಿದ್ದರು. ಹಾಗಾಗಿ ಇಂದು ನಡೆಯುವ ಸಭೆ ಕುತೂಹಲಕ್ಕೆ ಕಾರಣವಾಗಿದೆ. ಮಂಡ್ಯದ ಮೈಶುಗರ್ ಶಾಲೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಷಣ ಮಾಡಿದರು. ನನ್ನ ಬಗ್ಗೆ ಸಣ್ಣ ತನದ ಮಾತುಗಳನ್ನಾಡುತ್ತಿದ್ದಾರೆ. ಶಾಲಾ ಶಿಕ್ಷಕರ ಸಂಬಳಕ್ಕೆ ಹಣ ಕೊಡ್ತೀನಿ ಎಂದು ಕೊಟ್ಟಿಲ್ಲ ಅಂತಿದ್ದಾರೆ. ಸಿಎಸ್ಆರ್ ಫಂಢ್ ನಲ್ಲಿ ಸಂಬಳ ಕೊಡಲು ಆಗಲ್ಲ. ನನಗೆ ಬರುವ ಸಂಬಳವನ್ನ ಶಿಕ್ಷಕರಿಗೆ ಕೊಡುವ ತೀರ್ಮಾನ ಮಾಡಿದ್ದೇನೆ. ಅದು ಪಾಪದ ಹಣ ಅಲ್ಲ ಎಂದು ತಿಳಿಸಿದರು. ನಾನು ವರ್ಗಾವಣೆಗೆ ಯಾರಿಂದಲೂ ದುಡ್ಡು ಪಡೆಯಲ್ಲ, ಕಮಿಷನ್ ಪಡೆದಿಲ್ಲ. ನನ್ನ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಲಿ.ಜನರಿಗೆ ದ್ರೋಹ ಮಾಡುವವನು ನಾನು ಅಲ್ಲ.…

Read More

ನವದೆಹಲಿ : ನವೆಂಬರ್, ಡಿಸೆಂಬರ್, ಜನವರಿ ಯಾವ ಕ್ರಾಂತಿಯು ಆಗಲ್ಲ. ಆದರೆ 2028ಕ್ಕೆ ಕ್ರಾಂತಿ ಹಾಗೆ ಆಗುತ್ತೆ. 2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರೋದೇ ಕ್ರಾಂತಿ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿ ಆಗಲಿದೆ ಮುಂದಿನ ಬಾರಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ ಸಂಪುಟ ಪುನಾರಚನೆಯ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಯಾವಾಗ ಏನ್ ಬೇಕು ಹೈಕಮಾಂಡ್ ಮಾಡುತ್ತಾರೆ. ಎಂದು ನವದೆಹಲಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು 2028ಕ್ಕೆ ಕ್ರಾಂತಿ ಆಗಲಿದೆ 2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿ ಆಗಲಿದೆ 2025-26 ಕ್ಕೆ ಯಾವುದೇ ಕ್ರಾಂತಿ ಆಗಲ್ಲ ಮುಂದಿನ ಬಾರಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಆಕಾಂಕ್ಷಿಗಳಿಗೆ ಏನು ಹೇಳಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಿಳಿಸಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರ ಎನ್ನುವ ವಿಚಾರವಾಗಿ ನಾಯಕತ್ವ ಬದಲಾವಣೆಯ ಬಗ್ಗೆ ಸಿಎಂ ಹೇಳಿದ್ರಾ ಅಥವಾ ನಾನು ಹೇಳಿದ್ನ? ಪಕ್ಷ ಹೇಗೆ ಹೇಳುತ್ತೋ ಹಾಗೆ ಕೇಳಿಕೊಂಡು ಹೋಗುತ್ತೇನೆ. ಐದು…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಟೆಕ್ಕಿಯನ್ನು ಅರೆಸ್ಟ್ ಮಾಡಲಾಗಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಗುಜರಾತ್ ಮೂಲದ ಮಹಿಳಾ ಸಾಫ್ಟ್ವೇರ್ ಇಂಜಿನಿಯರ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರಿಂದ ರೆನೆ ಜೋಶಿಲ್ದಾ ಎನ್ನುವ ಮಹಿಳಾ ಟೆಕ್ಕಿಯನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಮೂಲಕ ಬೆದರಿಕೆ ಸಂದೇಶ ಕಳುಹಿಸಿದಳು. ಚೆನ್ನೈ ಹೈದರಾಬಾದ್ ಹಾಗೂ ಗುಜರಾತಿನ ಶಾಲೆಗಳಿಗೂ ಕೂಡ ಈಕೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದಳು. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿರುವುದು ಪತ್ತೆಯಾಗಿದೆ.

Read More

ಬೆಂಗಳೂರು : ʻಕೆಜಿಎಫ್‌ʼ ಸಿನಿಮಾದಲ್ಲಿ ʻಕೆಜಿಎಫ್‌ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್‌ ರಾಯ್‌ (57) ಇಂದು ನಿಧನರಾಗಿದ್ದಾರೆ. ಅವರು ಥೈರಾಯ್ಡ್‌ ಕ್ಯಾನ್ಸರ್‌ ಸಮಸ್ಯೆಯಿಂದ ಬಳಲುತ್ತಿದ್ದರು. ಹೌದು ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ನಿಧನರಾಗಿದ್ದಾರೆ ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿರುವ ಇವರು ಕನ್ನಡ ಮಾತ್ರವಲ್ಲದೆ, ತಮಿಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಶಿವರಾಜ್ ಕುಮಾರ್ ಅಭಿನಯದ ‘ಓಂ’ ಚಿತ್ರದಲ್ಲಿನ ‘ರಾಯ್’ ಪಾತ್ರದಿಂದ ಗಮನ ಸೆಳೆದ ಇವರು, ಸಾಕಷ್ಟು ಚಿತ್ರಗಳಲ್ಲಿ ಖಳನಟನಾಗಿ, ಪೋಷಕ ನಟನಾಗಿ ಕಾರ್ಯ ನಿರ್ವಹಿಸಿದ್ದಾರೆ. ಬೆಂಗಳೂರು ಅಂಡರ್ ವರ್ಲ್ಡ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫ‌ರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್ವುಡ್ನ ಟಾಪ್ ಸಿನಿಮಾ ಕೆಜಿಎಫ್ ಚಾಪ್ಟ‌ರ್ 1 ಹಾಗೂ ಕೆಜಿಎಫ್ ಚಾಪ್ಟರ್ 2ರಲ್ಲಿ ಅಭಿನಯಿಸಿದ್ದಾರೆ. ಕೆಜಿಎಫ್, ಓಂ,…

Read More

ಬೆಂಗಳೂರು : ಬೆಂಗಳೂರಲ್ಲಿ ಪಾಪಿ ಪತಿಯೊಬ್ಬ ಪತ್ನಿ ಡಿವೋರ್ಸ್ ಕೇಳಿದಕ್ಕೆ ಪತ್ನಿಯ ಖಾಸಗಿ ಫೋಟೋಗಳು ಅಪ್ಲೋಡ್ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾಲತಾಣದಲ್ಲಿ ಪತ್ನಿಯ ಖಾಸಗಿ ಫೋಟೋ ಅಪ್ಲೋಡ್ ಮಾಡಿದ್ದ ಪತಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಗೋವಿಂದರಾಜುವನ್ನು ಅಮೃತಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗೋವಿಂದರಾಜು ಬಂದು ನಿತ್ಯ ಗಲಾಟೆ ಮಾಡಿದಕ್ಕೆ ಪತ್ನಿ ಡಿವೋರ್ಸ್ ಕೇಳಿದ್ದಾರೆ. ಪತಿ ಗೋವಿಂದರಾಜು ಆನ್ಲೈನ್ ಬೆಟ್ಟಿಂಗ್, ಕುಡಿತದ ಚಟಕ್ಕೆ ಹಣ ಕಳೆದುಕೊಂಡಿದ್ದ. ಬಳಿಕ ಮನೆ ಬಿಟ್ಟು ಪಿಜಿಯಲ್ಲಿ ಗೋವಿಂದರಾಜು ಪತ್ನಿ ವಾಸವಿದ್ದರು. ಪಿಜಿ ಬಳಿಯೂ ಗೋವಿಂದರಾಜು ಹೋಗಿ ಗಲಾಟೆ ಮಾಡಿದ್ದ. ಘಟನೆ ಬಳಿಕ ಪತ್ನಿ ಡೈವೋರ್ಸ್ ಕೇಳಿದ್ದಾರೆ. ಇದೆ ದ್ವೇಷಕ್ಕೆ ಪತ್ನಿಯ ಖಾಸಗಿ ಫೋಟೋಗಳನ್ನ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಘಟನೆ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪತ್ನಿಯ ದೂರು ಆಧರಿಸಿ ಪತಿ ಗೋವಿಂದರಾಜುವನ್ನು ಅರೆಸ್ಟ್ ಮಾಡಿದ್ದಾರೆ.

Read More

ಧಾರವಾಡ : ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ತೆರವು ಕೊರಿದ್ದ ಅರ್ಜಿಯ ಕುರಿತಂತೆ ಧಾರವಾಡ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಇದೀಗ ಈ ಒಂದು ತಡೆ ನೀಡಲು ವಿಭಗೀಯ ಪೀಠ ನಕಾರಾ ವ್ಯಕ್ತಪಡಿಸಿದೆ. ಅಕ್ಟೋಬರ್ 28ರಂದು ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರದ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ನವೆಂಬರ್ 4ರಂದು ನಡೆದಿದ್ದ ಅರ್ಜಿಯ ವಿಚಾರಣೆ ವಾದ ಪ್ರತಿವಾದ ಆಲಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು ಇಂದು ಹೈಕೋರ್ಟ್ ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ವಿಭಗೀಯ ಪೀಠ ನಕಾರ ವ್ಯಕ್ತಪಡಿಸಿದೆ. ತಡೆ ತೆರವಿಗೆ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿತು. ರಾಜ್ಯ ಸರ್ಕಾರದ ಮೇಲ್ಮನವಿ ವಜಾಗೊಳಿಸಿತು.

Read More

ಬೆಂಗಳೂರು : ಬೆಂಗಳೂರಿನ EPFO ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದ ಕೋಟ್ಯಾಂತರ ರೂ. ವಂಚನೆಯಲ್ಲಿ ಅಕೌಂಟೆಂಟ್ ಜಗದೀಶ್ ಮಾಸ್ಟರ್‌ಮೈಂಡ್ ಎಂಬುದು ಬಯಲಾಗಿದೆ. ಸದ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಸರ್ಕಾರ ನಿರ್ಧರಿಸಿದೆ. ಹೌದು EPFO ಸ್ಟಾಫ್ ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣದ ಗಂಭೀರತೆಯನ್ನು ಮನಗಂಡ ಸರ್ಕಾರ, ತನಿಖೆಯನ್ನು ಸಿಐಡಿಗೆ ವರ್ಗಾಯಿಸಲು ನಿರ್ಧರಿಸಿದೆ. ಪ್ರಾಥಮಿಕ ತನಿಖೆಯನ್ನು ಮುಗಿಸಿದ ನಂತರ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಿದ್ದಾರೆ. ಪ್ರಸ್ತುತ ತನಿಖೆ ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಅವರ ಮೇಲ್ವಿಚಾರಣೆಯಲ್ಲಿ ಮುಂದುವರಿದಿದೆ. ಇಪಿಎಫ್​ಒ ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸಿಇಒ ಗೋಪಿನಾಥ್ ಈ ಕೇಸ್‌ನ ಮಾಸ್ಟರ್‌ಮೈಂಡ್ ಎಂದು ಈ ಹಿಂದೆ ಭಾವಿಸಿದ್ದ ಪೊಲೀಸರು ಅಕೌಂಟೆಂಟ್ ಜಗದೀಶ್‌ನ ಆಸ್ತಿ, ಖಾತೆಗಳು ಹಾಗೂ ವಂಚನೆ ವಿಧಾನ ನೋಡಿ ಆಘಾತಕ್ಕೊಳಗಾಗುವಂತಾಗಿದೆ. ಕೇವಲ 21,000 ರೂ. ಸಂಬಳ ಪಡೆಯುತ್ತಿದ್ದ ಜಗದೀಶ್ ಕೋಟ್ಯಂತರ ಮೌಲ್ಯದ ಮನೆ, ಕಾರು, ಫಾರ್ಮ್‌ಹೌಸ್ ಸೇರಿದಂತೆ ಹಲವು ಆಸ್ತಿಗಳನ್ನು ಹೊಂದಿರುವುದು ಪತ್ತೆಯಾಗಿದೆ.

Read More