Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರ ರಸ್ತೆ ಅಪಘಾತ ಒಂದು ಸಂಭವಿಸಿದ್ದು, ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಹೊರವಲಯದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಹೊರವಲಯದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಪತಿ ದಿನೇಶ್ ಪತ್ನಿ ಅಂಜು ಹಾಗೂ ಮಗ ಇಶಾನ್ ಕೃಷ್ಣ ಮೃತಪಟ್ಟವರು ಎಂದು ತಿಳಿದುಬಂದಿದೆ. ಕೇರಳದಿಂದ ಗುಂಡ್ಲುಪೇಟೆಗೆ ಮೂವರು ಬೈಕ್ ನಲ್ಲಿ ಬರುತ್ತಿದ್ದರು. ಕುಡಿದ ಮತ್ತಿನಲ್ಲಿ ಚಾಲಕ ಟಿಪ್ಪರ್ ಚಲಾಯಿಸುತ್ತಿದ್ದ ಎನ್ನಲಾಗುತ್ತಿದ್ದು, ಚಾಲಕನ ಅಜಾಗರುಕತೆಯಿಂದ ಇದೀಗ ಮೂವರು ಬಲಿಯಾಗಿದ್ದಾರೆ. ಘಟನೆ ಕುರಿತಂತೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ, ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವಂತಹ ಆರೋಪಿ ದರ್ಶನ್ ನನ್ನು ನೋಡಲು ಇಂದು ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ದನ್ವೀರ್ ಆಗಮಿಸಿದ್ದರು. ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವಿರ್ ದರ್ಶನ ಭೇಟಿ ಆಗಲು ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ದರ್ಶನ್ ಬೇಟಿಯ ವೇಳೆ ಸ್ವಲ್ಪ ಹೊತ್ತು ಮಾತನಾಡಿದ ಬಳಿಕ ನಟ ದನ್ವೀರ್ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಪತ್ನಿ ವಿಜಯಲಕ್ಷ್ಮಿ ಅವರ ಜೊತೆಗೆ ನಟ ದರ್ಶನ್ ಕೆಲವು ಹೊತ್ತು ಮಾತುಕತೆ ನಡೆಸಿದ್ದು, ಜಾಮೀನು ಕುರಿತಾಗಿ ಹಾಗೂ ಕಾನೂನು ಹೋರಾಟದ ಕುರಿತಾಗಿ ನಟ ದರ್ಶನ್ ವಿಜಯಲಕ್ಷ್ಮಿ ಅವರೊಂದಿಗೆ ಚರ್ಚಿಸಿದ್ದಾರೆ. ಕೇವಲ ಅರ್ಧ ಗಂಟೆ ಸಮಯ ಇರುವುದರಿಂದ ನಟ ದನ್ವೀರ್ ಹಾಗೂ ಪತ್ನಿ ವಿಜಯಲಕ್ಷ್ಮಿ ನಟ ದರ್ಶನ್ ಅವರನ್ನು ಇದೀಗ ಬಳ್ಳಾರಿ ಜಿಲ್ಲೆಯಲ್ಲಿ ಭೇಟಿ ಮಾಡಿದ್ದಾರೆ.
ಬಾಗಲಕೋಟೆ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಂತಹ ಗಲಭೆಯ ಬೆಂಕಿ ಅರುವ ಮುನ್ನವೇ ಇದೀಗ ಬಾಗಲಕೋಟೆಯಲ್ಲಿ ಯುವಕನೊಬ್ಬ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಪಾಕಿಸ್ತಾನದ ಧ್ವಜವಿರುವ ಸ್ಟೇಟಸ್ ಹಾಕಿ ಪುಂಡಾಟ ಮೆರೆದಿದ್ದು, ಇದೀಗ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಬಾಗಲಕೋಟೆ ತಾಲ್ಲೂಕಿನ ಕಲಾದಗಿ ಗ್ರಾಮದ ಯುವಕ ತೌಶೀಪ್ ಮೆಹ್ತರ್ ಬಂಧಿತ ಆರೋಪಿ ಎನ್ನಲಾಗಿದ್ದು, ಪಾಕಿಸ್ತಾನ ಪರ ವಾಟ್ಸಾಪ್ ಸ್ಟೇಟಸ್ ಹಾಕಿ ಪುಂಡತನ ಮೆರೆದ ಘಟನೆ ನಡೆದಿದೆ. ಯಾವುದೋ ವಾಹನದ ಮೇಲೆ ಪಾಕಿಸ್ತಾನದ ಧ್ವಜ ಹಾರಾಡುತ್ತಿರುವ ವಿಡಿಯೋದ ತುಣುಕನ್ನು ಸ್ಟೇಟಸ್ ಇಟ್ಟುಕೊಂಡು ಪುಂಡಾಟ ಮೆರೆದಿದ್ದಾನೆ. ಇದೀಗ ತೌಶೀಪ್ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಹಿಂದೂ ಕಾರ್ಯಕರ್ತರು ಕಿಡಿಕಾರಿದ್ದಾರೆ. ಈ ಹಿನ್ನಲೆ ಎಚ್ಚೆತ್ತ ಕಲಾದಗಿ ಪೊಲೀಸರು ಆರೋಪಿ ತೌಶೀಪ್ನನ್ನು ವಶಕ್ಕೆ ಪಡೆದಿದ್ದಾರೆ.ಮಂಡ್ಯ ಜಿಲ್ಲೆಯ ನಾಗಮಂಗಲದ ಘಟನೆ ಮಾಸುವ ಮುನ್ನವೇ ಇದೀಗ ಬಾಗಲಕೋಟೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು ಹಿಂದೂ ಕಾರ್ಯಕರ್ತರನ್ನು ಕೆರಳಿಸಿದೆ.
ಬೆಂಗಳೂರು : ಸುಮಾರು 6 ಎಕರೆ ಪ್ರದೇಶದಲ್ಲಿ ಟೊಮ್ಯಾಟೋ ಬೆಳೆ ಬೆಳೆದಿದ್ದ ಟೆಕ್ಕಿ ಒಬ್ಬ, ಟೊಮ್ಯಾಟೋ ಲಾಸ್ ಆಗಿದ್ದಕ್ಕೆ ತಾನು ಈ ಹಿಂದೆ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಸುಮಾರು 22 ಲಕ್ಷ ಮೌಲ್ಯದ ಲ್ಯಾಪ್ಟಾಪ್ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಮಿಳುನಾಡಿನ ಹೊಸೂರಿನ ಮುರುಗೇಶ್ ಎಂಬ ಟೆಕ್ಕಿ ಐಟಿಪಿಲ್ ಬಳಿಯಿರುವ ಕಂಪನಿಯೊಂದರಲ್ಲಿ ಸಿಸ್ಟಂ ಅಡ್ಮಿನ್ ಆಗಿ ಕೆಲಸ ಆರಂಭಿಸಿದ್ದ. ಆಗಸ್ಟ್ 22ರಿಂದ ಕೆಲಸಕ್ಕೆ ಬಾರದೆ ಗೈರಾಗಿದ್ದ. ಅನುಮಾನಗೊಂಡ ಕಂಪನಿಯವರು ಪರಿಶೀಲಿಸಿದಾಗ ಆರೋಪಿ ಕೆಲಸ ನಿರ್ವಹಿಸುತ್ತಿದ್ದಾಗ ಆತನ ಸುಪರ್ದಿಯಲ್ಲಿದ್ದ ಒಟ್ಟು 57 ಲ್ಯಾಪ್‌ಟಾಪ್‌ಗಳು ನಾಪತ್ತೆಯಾಗಿರುವುದು ಕಂಡು ಬಂದಿತ್ತು. ತಕ್ಷಣ ಕಂಪನಿಯ ಪ್ರತಿನಿಧಿ ವೈಟ್‌ಫೀಲ್ಡ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ತಮಿಳುನಾಡಿನ ಹೊಸೂರಿನ ರಾಘವೇಂದ್ರ ಚಿತ್ರಮಂದಿರದ ಬಳಿ ಸಿಸ್ಟಂ ಅಡ್ಮಿನ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಸಾಲ ಮಾಡಿ ಹೊಸೂರಿನಲ್ಲಿರುವ ತನ್ನ 5 ಎಕರೆ ಜಮೀನಿನಲ್ಲಿ ಟೊಮ್ಯಾಟೊ ಬೆಳೆದಿದ್ದ ಆರೋಪಿಗೆ ಉತ್ತಮ ಬೆಲೆ ಸಿಗದೆ ಸಾಕಷ್ಟು ನಷ್ಟವಾಗಿತ್ತು.…
ದಕ್ಷಿಣಕನ್ನಡ : ಧರ್ಮ ನಿಂದನೆ ಪ್ರಚೋದನಕಾರಿ ಭಾಷಣ ಹಾಗೂ ಸಮಾಜದಲ್ಲಿ ಶಾಂತಿ, ನೆಮ್ಮದಿ ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲು ಅವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಸೆಪ್ಟೆಂಬರ್ 16ರಂದು ಬಿಸಿ ರೋಡಿನ ದೇವಸ್ಥಾನ ಒಂದರ ಮುಂಭಾಗದಲ್ಲಿ ಶರಣ್ ಪಂಪ್ವೆಲ್, ಭಾರತ್ ಕುಮ್ದೇಲು ಪ್ರಚೋದನಕಾರಿಯಾದಂತಹ ಭಾಷಣ ಮಾಡಿದ್ದು ಅಲ್ಲದೆ ತಾವು ಮಾತನಾಡಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಮಾಜದಲ್ಲಿ ಶಾಂತಿ ನೆಮ್ಮದಿ ಕದಡುವಂತಹ ಕೆಲಸ ಮಾಡಿದ ಕಾಗೆ ಇದೀಗ ಅವರ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ದ್ವೇಷ ಸಂಘರ್ಷ ಉಂಟಾಗುವ ರೀತಿಯಲ್ಲಿ ಮಾತನಾಡಿದ್ದಲ್ಲದೆ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ಬಿ.ಮೂಡ ಗ್ರಾಮದ ಬಂಟ್ವಾಳ ಕೆಳಗಿನ ಪೇಟೆ ನಿವಾಸಿ ಮಹಮ್ಮದ್ ರಫೀಕ್ ಎಂಬವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇನ್ನೂ ಮುಸ್ಲಿಂ ಧರ್ಮವನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ ಯಶೋಧರ ಕರ್ಬೆಟ್ಟು ಎಂಬಾತನ…
ಚಿತ್ರದುರ್ಗ : ರೈತರ ಪಹಣಿ ಪ್ರತ್ಯೇಕ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತಿ ಗ್ರಾಮ ಲೆಕ್ಕಿಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ನಡೆದಿದೆ. ಹೌದು ಹಿರಿಯೂರು ಪಟ್ಟಣದಲ್ಲಿ ಗ್ರಾಮ ಲೆಕ್ಕೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲಗಲದ್ದಿ ಗ್ರಾಮ ಪಂಚಾಯಿತಿ ಗ್ರಾಮಲೆಕ್ಕಿಗ ನಾಗಪ್ಪ ಲಮಾಣಿ ರೇಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ. ಪಹಣಿ ಪ್ರತ್ಯೇಕ ಮಾಡಿಕೊಡಲು ಹಲಗಲದ್ದಿ ಗ್ರಾಮದ ತಿಪ್ಪೇಸ್ವಾಮಿ ಬಳಿ 9 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾನೆ. ಹಿರಿಯೂರು ತಾಲೂಕು ಕಚೇರಿ ಆವರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ.
ಧಾರವಾಡ : ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ಗಲಭೆ ನಡೆದಂತಹ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಗಲಭೆ, ಗಲಾಟೆ ನಡೆಯದಂತೆ ಸೂಕ್ತವಾದಂತ ಬಂದೋಬಸ್ತ್ ಮಾಡಿ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈದ್ಗ ಮೈದಾನದಲ್ಲಿ ಗಣಪತಿ ಇಡಲು ಅವಕಾಶ ಕೊಟ್ಟರು.ಅದಕ್ಕೆ ಅವರಿಗೆ ಎಷ್ಟು ಗೌರವ ಸಿಕ್ಕಿತ್ತು ನೋಡಿ. ಸಮಾಜದಲ್ಲಿ ಕೆಲವರು ಬೆಂಕಿ ಹಚ್ಚುವವರು ಇರುತ್ತಾರೆ. ಗಲಾಟೆ ಮಾಡುವ ಉದ್ದೇಶವನ್ನೇ ಇಟ್ಟುಕೊಂಡಿದ್ದಾರೆ ಎಲ್ಲರೂ ಹೊಂದಿಕೊಂಡು ಹೋಗುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಆದ್ದರಿಂದ ಉತ್ತರ ಪ್ರದೇಶದಂತೆ ಬಂದೋಬಸ್ತ್ ಮಾಡಿ.ಗಲಾಟೆ ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂಬ ಗ್ಯಾರಂಟಿಯೇ ಇಲ್ಲ. 4-5 ದಿನ ಜೈಲಿನಲ್ಲಿದ್ದು ಹೊರ ಬರುತ್ತಾರೆ. ಇದು ತಪ್ಪಬೇಕು ಈ ಸಂಬಂಧ ನಾನು ಮುಖ್ಯಮಂತ್ರಿ ಅವರಿಗೆ ಪತ್ರ ಬರೆಯುತ್ತೇನೆ ಎಂದು ಧಾರವಾಡದಲ್ಲಿ ಸಭಾಪತಿ ಬಸವರಾಜ್ ಹೊರಟಿ ಹೇಳಿಕೆ ನೀಡಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಮೆಟ್ರೋ ನಿಲ್ದಾಣದಲ್ಲಿ ಸುರಕ್ಷಾತೆಗಾಗಿ ಎಷ್ಟೇ ಕಠಿಣವಾದಂತ ಕ್ರಮದ ಕೈಕೊಂಡರು ಸಹ ಆಗಾಗ ಅನಾಹುತಗಳು ಸಂಭವಿಸುತ್ತಲೆ ಇರುತ್ತವೆ. ಇದೀಗ ಬೆಂಗಳೂರಿನಲ್ಲಿ ಮೆಟ್ರೋ ಟ್ರ್ಯಾಕಿನ ಮೇಲೆ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಮೆಟ್ರೋ ಟ್ರೈನ್ ಬರುತ್ತಿದ್ದಂತೆ ವ್ಯಕ್ತಿ ಟ್ರ್ಯಾಕ್ಗೆ ಹಾರಿದ್ದಾನೆ. ರೈಲು ಕ್ರಮಿಸಿದ್ದರು ಸಹ ಪ್ರಾಣಾಪಾಯದಿಂದ ವ್ಯಕ್ತಿ ಪಾರಾಗಿದ್ದಾನೆ 10 ಮೀಟರ್ ರೈಲು ಕ್ರಮಿಸಿದರು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರೈಲು ಸಂಚಾರ ಬಂದ್ ಮಾಡಿ ವ್ಯಕ್ತಿನ ರಕ್ಷಿಸಿದ್ದಾರೆ. ಏಕಾಏಕಿ ಟ್ರ್ಯಾಕಿಗೆ ಹಾರಿದ ವ್ಯಕ್ತಿಯನ್ನು ಮೆಟ್ರೋ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಪ್ರಾಣ ಅಪಾಯ ಸಂಭವಿಸಿಲ್ಲ. ಆತ್ಮಹತ್ಯೆಗೆ ಇನ್ನೂ ನಿಖರವಾದಂತಹ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತಂತೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
BREAKING : ‘BPL’ ಕಾರ್ಡ್ ದಾರರಿಗೆ ಸಿಹಿಸುದ್ದಿ : ಇನ್ನುಮುಂದೆ ಹಣದ ಬದಲು ಅಕ್ಕಿ ವಿತರಣೆ : ಸಚಿವ ಕೆ.ಎಚ್ ಮುನಿಯಪ್ಪ
ಕಲಬುರ್ಗಿ : ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಇಷ್ಟು ದಿನ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಹಾಗೂ ಇನ್ನೂ 5 ಕೆಜಿ ಅಕ್ಕಿಯ ಬದಲು ಡಿಬಿಟಿ ಮೂಲಕ ಮನೆಯಲ್ಲಿ ಎಷ್ಟು ಸದಸ್ಯರು ಇರುತ್ತಾರೆ ಅಷ್ಟು ಮೊತ್ತದ ಹಣ ಸಂದಾಯ ಮಾಡುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರಕ್ಕೆ ನೀಡಲು ಒಪ್ಪಿಗೆ ಸೂಚಿಸಿದ್ದರಿಂದ ಇನ್ನು ಮುಂದೆ ಹಣದ ಬದಲಾಗಿ ಅಕ್ಕಿ ನೀಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ ಆಯ್ಕೆಕೊಡಲು ಇದೀಗ ಮುಂದಾಗಿದೆ. ಬಿಪಿಎಲ್ ಫಲಾನುಭವಿಗಳಿಗೆ ಆದಷ್ಟು ಬೇಗ ಅಕ್ಕಿ ನೀಡುತ್ತೇವೆ. ಇಷ್ಟು ದಿನ ಡಿಬಿಟಿ ಮೂಲಕ ಹಣ ಹಾಕಲಾಗುತ್ತಿತ್ತು. ಇದೀಗ ಹಣ ಹಾಕುವ ಬದಲು ಜನರಿಗೆ ಅಕ್ಕಿ ಕೊಡುತ್ತೇವೆ ಎಂದರು. ಬಡತನ ಗಿಂತ ಕೆಳಗಿರುವವರಿಗೆ ಮಾತ್ರ BPL ಕಾರ್ಡ್ ಮುಂದುವರಿಸುತ್ತೇವೆ. ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಸೂಚಿಸಲಾಗಿದೆ. ಇನ್ನು ಹೊಸ ಬಿಪಿಎಲ್ ಕಾರ್ಡ್ ಗಾಗಿ ಸಾಕಷ್ಟು…
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಘೋರ ದುರಂತ ಒಂದು ನಡೆದಿದ್ದು, ವೃದ್ಧೆ ಒಬ್ಬರು ಕ್ಯಾನ್ಸರ್ ಇಂದ ಬಳಲುತ್ತಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದು, ತಾವು ಇದ್ದ ಅಪಾರ್ಟ್ಮೆಂಟ್ ನ 16ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಇಂದ ಜಿಗಿದು ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಟ್ಟಡದ 16ನೇ ಮಹಡಿಯಿಂದ ಜಿಗಿದು ಜಯಲಕ್ಷ್ಮಮ್ಮ (68) ಆತ್ಮಹತ್ಯೆ ಮಾಡಿಕೊಂಡಿರುವ ವೃದ್ದೆ ಎಂದು ತಿಳಿದುಬಂದಿದೆ.ಕೆಲವು ವರ್ಷಗಳಿಂದ ಜಯಲಕ್ಷ್ಮಮ್ಮ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಪುತ್ರ, ಸೊಸೆ ಕೆಲಸಕ್ಕೆ ಹೋದ ವೇಳೆ ವೃದ್ಧಿಯ ಜಯಲಕ್ಷ್ಮಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಘಟನೆ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














