Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಶಾರ್ಟ್ ಸರ್ಕ್ಯೂಟ್ ನಿಂದ ಹೊಲದಲ್ಲಿದ್ದಂತಹ ತೋಟದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಮನೆಯಲ್ಲಿದ್ದ ಸುಮಾರು 10 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿರಾಳ್ ಗ್ರಾಮದಲ್ಲಿ ಈ ಒಂದು ಬೆಂಕಿ ಅವಘಡ ಸಂಭವಿಸಿದೆ. ಹೌದು ಯಡ್ರಾಮಿ ತಾಲೂಕಿನ ಬಿರಾಳ್ ಗ್ರಾಮದ ಈರಣ್ಣ ಭಜಂತ್ರಿ ಎಂಬ ರೈತರಿಗೆ ಸೇರಿದ ತೋಟದ ಮನೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಈ ಒಂದು ಘಟನೆಯಿಂದಾಗಿ ಮನೆಯಲ್ಲಿದ್ದ ಅಪಾರ ಪ್ರಮಾಣದ ದವಸ ಧಾನ್ಯ, ಮನೆಯ ಪರಿಕರಗಳು ಸುಟ್ಟು ಭಸ್ಮವಾಗಿವೆ. ಮನೆಯಲ್ಲಿದ್ದ 10 ಲಕ್ಷ ರೂ. ಮೌಲ್ಯದ ಹತ್ತಿ, ತೊಗರಿ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ. ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಲ್ಲಿ ಯಶಸ್ವಿಯಾದರು
ಬೆಂಗಳೂರು : ಮಾವನ ಲೈಂಗಿಕ ಕಿರುಕುಳ ತಾಳದೆ ಟೆಕ್ಕಿ ಯುವತಿಯೊಬ್ಬಳು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಚ್‌ಎಎಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿಯನ್ನು ಸುಹಾಸಿ ಸಿಂಗ್ (24) ಎಂದು ತಿಳಿದುಬಂದಿದೆ. ಯುವತಿಯ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಏನಿದು ಪ್ರಕರಣ? ಸುಹಾಸಿ ಸಿಂಗ್ ಮತ್ತು ಪ್ರವೀಣ್ ಸಿಂಗ್ ಸಂಬಂಧಿಗಳು. ಇಬ್ಬರೂ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಉತ್ತಮ ಸಂಬಂಧ ಬೆಳೆದಿದೆ. ಇಬ್ಬರು ಒಟ್ಟಿಗೆ ಹೊರಗಡೆ ಹೋಗುತ್ತಿದ್ದರು. ಹೀಗೆ ಹೊರಗಡೆ ಹೋಗಿದ್ದಾಗ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಖಾಸಗಿ ವಿಡಿಯೋ ಹಾಗೂ ಫೋಟೋಗಳನ್ನು ಇಟ್ಟುಕೊಂಡು ಸ್ವತಃ ಮಾವನೇ ಸೊಸೆಯನ್ನು ಮಂಚಕ್ಕೆ ಕರೆದಿದ್ದಾರೆ. ಅವಳ ಖಾಸಗಿ ವಿಡಿಯೋ ತೋರಿಸಿ ವಿಕೃತಿಯಾಗಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಇನ್ನು ನೀನು ದೈಹಿಕವಾಗಿ ತನಗೆ ಸ್ಪಂದಿಸದಿದ್ದರೆ ನಿನ್ನ…
ಬೆಂಗಳೂರು : ಇಂದು ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತ ಘಟನೆ ಬೀದರ್ ನಲ್ಲಿ ನಡೆದಿದ್ದು, ಎಟಿಎಂ ಗೆ ಹಣ ಹಾಕುವ ವೇಳೆ ದುಷ್ಕರ್ಮಿಗಳು ಹಾಡು ಹಗಲೇ ಶೂಟೌಟ್ ನಡೆಸಿ ಒಬ್ಬ ಸಿಬ್ಬಂದಿಯನ್ನು ಹತ್ಯೆಗೈದು ಸುಮಾರು 83 ಲಕ್ಷ ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಇಂದು ಬೀದರ್ನಲ್ಲಿ ನಡೆದಿತ್ತು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ATM ಗೆ ಹಣ ಹಾಕುವಾಗ ಕ್ಯಾಮೆರಾ ಇರಬೇಕು, ಸೆಕ್ಯೂರಿಟಿ ಗಾರ್ಡ್ ಇರಬೇಕು. ಹಣ ಹಾಕುವಾಗ ಬಂದೂಕು ಹಾಗೂ ಕ್ಯಾಮರಾ ಇರಬೇಕು. ಸೆಕ್ಯೂರಿಟಿ ಗಾರ್ಡ್ ಗಳಿಗೆ, ಸಿಬ್ಬಂದಿಗಳಿಗೆ ಸ್ಟ್ಯಾಂಡಿಂಗ್ ಇಂಟ್ರಕ್ಷನ್ ಕೊಟ್ಟಿರುತ್ತೇವೆ. ಪ್ರಕರಣದ ಕುರಿತು ಡೀಟೇಲ್ ರಿಪೋರ್ಟ್ ತೆಗೆದುಕೊಂಡ ನಂತರ ಮಾತನಾಡುತ್ತೇನೆ ಎಂದು ತಿಳಿಸಿದರು. ಆರೋಪಿಗಳ ಹಿನ್ನೆಲೆ ಏನಿದೆ ಅಂತ ನೋಡಬೇಕು. ದರೋಡೆ ಅಷ್ಟಕ್ಕೆ ಸೀಮಿತನ ಅಥವಾ ಬೇರೆ ಇನ್ಯಾವುದೋ ಉದ್ದೇಶ ಇತ್ತೋ ಅಂತ ನೋಡಬೇಕು…
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು ಈ ಒಂದು ಸಭೆಯಲ್ಲಿ ಸುಮಾರು 35 ವಿಷಯಗಳ ಕುರಿತು ಚರ್ಚಿಸಿದ್ದೇವೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು. ಸಚಿವ ಸಂಪುಟ ಸಭೆಯಲ್ಲಿ 35 ವಿಷಯಗಳನ್ನು ಚರ್ಚೆ ಮಾಡಿದ್ದೇವೆ ಎಂದು ಸಂಪುಟದ ಸಭೆಯ ನಂತರ ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿಕೆ ನೀಡಿದರು. ಮಂಡ್ಯದಲ್ಲಿ ಕೃಷಿ ತೋಟಗಾರಿಕೆ ಇಂಟಿಗ್ರೇಟೆಡ್ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಅಲ್ಲದೇ 5ನೇ ರಾಜ್ಯ ಹಣಕಾಸು ಆಯೋಗದ ಅವಧಿ ವಿಸ್ತರಣೆಗೆ ಸಂಪುಟದಲ್ಲಿ ಅನುಮೋದನೆ ದೊರೆತಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.
ತುಮಕೂರು : ಇತ್ತೀಚಿಗೆ ಚಿಕ್ಕ ಮಕ್ಕಳಿಂದ ಹಿಡಿದು ಯುವಕರು ವಯೋ ವಿರುದ್ಧರು ಎನ್ನದೆ ಹೃದಯಘಾತ ಹಾಗೂ ಹೃದಯ ತಮ್ಮನ ದಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದೀಗ ಸ್ನೇಹಿತರ ಜೊತೆಗೆ ಮಾತನಾಡುತ್ತಿರುವಾಗಲೇ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿ ಒಬ್ಬ ಸಾವನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ. ಹೌದು ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವನನಪ್ಪಿದ್ದಾನೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ಈ ಒಂದು ಘಟನೆ ಸಂಭವಿಸಿದೆ.ಕಾಲೇಜಿನ ಮುಂದೆಯೇ ವಿದ್ಯಾರ್ಥಿ ಶಮಂತ್ (17) ಕುಸಿದು ಬಿದ್ದಿದ್ದಾನೆ.ಸ್ನೇಹಿತರ ಜೊತೆ ಮಾತನಾಡುತ್ತಿದ್ದಾಗ ಶಮಂತ್ ಕುಸಿದು ಬಿದ್ದಿದ್ದ. ತಕ್ಷಣ ಆದನ್ನು ಆಸ್ಪತ್ರೆಗೆ ಕರೆದೋಯ್ಯುವಾಗ ಮಾರ್ಗ ಮಧ್ಯೆ ಸಾವನಪ್ಪಿದ್ದಾನೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.
ಬೆಂಗಳೂರು : ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿಯಾಗಿ ಇಬ್ಬರು ಓಂಶಕ್ತಿ ಮಾಲಾಧಾರಿಗಳು ಗಂಭೀರ ಗಾಯಗೊಂಡ ಘಟನೆ ನೆಲಮಂಗಲದ ಬೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ಸಂಭವಿಸಿದೆ. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಚಾಲಕನ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ ಆರೋಪದ ಅಡಿ ಇದೀಗ FIR ದಾಖಲಾಗಿದೆ. ಅಪಘಾತಕ್ಕೆ ಇಳದಂತಹ KA 55 P 0003 ನಂಬರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಹಿನ್ನಲೆ ಇಂದು ಬೆಳಿಗ್ಗೆ ಬೆಂಗಳೂರು ತುಮಕೂರು ಹೆದ್ದಾರಿಯಲ್ಲಿ ಶಾಸಕರು ಸಂಚರಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆಸಿದೆ.ಮೂರು ಮಂದಿ ಮಾಲಾಧಾರಿಗಳಿಗೆ ಕಾರು ಡಿಕ್ಕಿ ಹೊಡೆದಿದ್ದು, ಇಬ್ಬರು ಮಾಲಾಧಾರಿಗೆ ಗಂಭೀರ ಹಾನಿಯಾಗಿದೆ ಎನ್ನಲಾಗಿದೆ. ಶಾಸಕರು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಾಸಕರು ಚಿತ್ರದುರ್ಗದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದರು. ನೆಲಮಂಗಲ ಸಮೀಪ ಪಾದಯಾತ್ರೆ ಮೂಲಕ ಓಂ…
ಮಂಗಳೂರು : ಇತ್ತೀಚಿಗೆ ಚಿಕ್ಕ ಮಕ್ಕಳಿಂದ ಹಿಡಿದು ಯುವಕರು ವಯೋ ವೃದ್ಧರೆನ್ನದೇ ಹೃದಯಘಾತ, ಹೃದಯ ಸ್ತಂಭದಂತಹ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಆಟವಾಡುತ್ತಲೇ ಯುವಕನೋರ್ವ ಹೃದಯಘಾತಕ್ಕೀಡಾಗಿ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹೌದು ಮೃತ ಯುವಕನನ್ನು ಅತ್ತಾವರ್ ಐವರಿ ಟವರ್ ನಿವಾಸಿಯಾಗಿದ್ದ ಶರೀಫ್ ಅವರ ಪುತ್ರ ಶಹೀಮ್ (20) ಮೃತ ಯುವಕ ಎಂದು ತಿಳಿದುಬಂದಿದ್ದು, ಈತ ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಶಹೀಮ್ ಗೆಳೆಯರೊಂದಿಗೆ ಬುಧವಾರ ಶಟ್ಲ ಬ್ಯಾಡ್ಮಿಂಟನ್ ಆಟ ಆಡುತ್ತಿದ್ದರು ಎಂಗು ಹೇಳಲಾಗಿದ್ದು, ಈ ವೇಳೆ ಏಕಾಏಕಿ ಕೋರ್ಟ್ ಮೇಲೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಶಹೀಮ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಶಹೀಮ್ ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದರು.
ತುಮಕೂರು : ತುಮಕೂರು ಜಿಲ್ಲೆಯಲ್ಲಿ ಘೋರವಾದಂತ ದುರಂತ ಸಂಭವಿಸಿದ್ದು ತೆಂಗಿನಕಾಯಿ ಫ್ಯಾಕ್ಟರಿ ಎಲ್ಲಿ ನೀರಿನ ತ್ಯಾಜ್ಯ ಇರುವ ಗುಂಡಿಗೆ ಎರಡು ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ದುರಂತ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮೀಸೆತಿಮ್ಮನಹಳ್ಳಿ ಬಳಿ ಇರುವ ಮಾನ್ಯಶ್ರೀ ಕೋಕನೆಟ್ ಫ್ಯಾಕ್ಟರಿಯಲ್ಲಿ ನಡೆದಿದೆ. ಮೃತ ಮಗುವನ್ನು ಕುಸುಮ ಕುಮಾರಿ (2) ಎಂದು ತಿಳಿದುಬಂದಿದೆ. ಈಕೆಯು ಬಿಹಾರ ಮೂಲದ ತಂದೆ ಹರೀಂದ್ರಕುಮಾರ್ ಮತ್ತು ತಾಯಿ ರೀನಾದೇವಿ ಮಗಳು ಎಂದು ತಿಳಿದುಬಂದಿದೆ. ಬುಧವಾರ 2 ಗಂಟೆ ಸುಮಾರಿಗೆ ಆಟವಾಡುತ್ತಿದ್ದ ಮಗು ಕಾಣದೇ ಇದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾ. ಈ ಸಂದರ್ಭ ಗುಂಡಿ ಒಳಗೆ ಬಿದ್ದಿರುವುದನ್ನು ಗಮನಿಸಿ ಮಗುವನ್ನು ಮೇಲೆ ಎತ್ತಲಾಗಿದೆ. ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದೆ. ಘಟನೆ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗದಗ : ಇಬ್ಬರೂ ಯುವಕರು 15 ವರ್ಷದ ಬಾಲಕಿಯ ಬೆನ್ನು ಹಿಂದೆ ಬಿದ್ದು ನನ್ನನ್ನು ಪ್ರೀತಿಸು ಎಂದು ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದ 15 ವರ್ಷದ ಬಾಲಕಿಯು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಬಣಗಾರ ಕಾಲೋನಿಯಲ್ಲಿ ನಡೆದಿದೆ. ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿಯನ್ನು ಖುಷಿ (15) ಎಂದು ತಿಳಿ ಬಂದಿದ್ದು ಹೀಗೆ 9ನೇ ತರಗತಿಯಲ್ಲಿ ಓದುತ್ತಿದ್ದಳು. ಅದೇ ಊರಿನವರ ಯುವಕರಾದ ಮುತ್ತುರಾಜ್ ಮ್ಯಾಗೇರಿ ಹಾಗೂ ಜುನೇದಸಾಬ್ ಕಂದಗಲ್ ಅವರ ಲವ್ ಕಿರುಕುಳದಿಂದ ಖುಷಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಇಬ್ಬರು ಸೇರಿ ಈ ಖುಷಿಯನ್ನು ಲವ್ ಮಾಡ್ತಿದ್ದರು. ಈ ವಿಷಯ ಗೊತ್ತಾಗಿ ಇಬ್ಬರಿಗೂ ತಾಕೀತು ಮಾಡಲಾಗಿತ್ತು. ಆದರೂ ಇಬ್ಬರು ಆಗಾಗ ಭೇಟಿಯಾಗಿ ಮಾತನಾಡಿ ಟಾರ್ಚರ್ ನೀಡುತ್ತಿದ್ದರು. ಈ ಟಾರ್ಚರ್‌ನಿಂದ ಬೇಸತ್ತು ಬಾಲಕಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ದೂರಿದ್ದಾರೆ. ಸದ್ಯ ಇಬ್ಬರು ಯುವಕರ…
ಕಲಬುರಗಿ : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರವಾದ ರಸ್ತೆ ಅಪಘಾತವಾಗಿದ್ದು ಚಾಲಕನ ನಿಯಂತ್ರಣ ತಪ್ಪಿ ಕಾರು ಒಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಚಲಿಸುತ್ತಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಯಲ್ಲಮ್ಮ ಗೇಟ್ ಸಮೀಪದಲ್ಲಿ ಬುಧವಾರ ನಡೆದಿದೆ. ಅಪಘಾತದಲ್ಲಿ ಮೃತ ಪಟ್ಟವರನ್ನು ಸೇಡಂ ತಾಲ್ಲೂಕಿನ ಮೀನಹಾಬಾಳ ಗ್ರಾಮದ ಯಲ್ಲಪ್ಪ ಹಳಿಮನಿ (45), ತೊಟ್ನಳ್ಳಿ ಗ್ರಾಮದ ಸದಾಶಿವ (65) ಮತ್ತು ಮೀನಹಾಬಾಳ ಗ್ರಾಮದ ಭೀಮಶಾ (44) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಮೀನಹಾಬಾಳ ಗ್ರಾಮದ ಮೌನೇಶ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ತಿಳಿದು ಬಂದಿದೆ. ನಾಲ್ವರು ಪ್ರಯಾಣಿಕರಿದ್ದ ಕಾರು ಚಿಂಚೋಳಿ ಮಾರ್ಗದಿಂದ ಸೇಡಂ ಕಡೆಗೆ ಹೊರಟಿತ್ತು ಎನ್ನಲಾಗಿದೆ. ವೇಗವಾಗಿ ಕಾರು ಚಲಾಯಿಸಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಅದ್ದೂರು ಶ್ರೀನಿವಾಸಲು, ಸೇಡಂ ಠಾಣೆಯ ಪೊಲೀಸ್…














