Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ತಡರಾತ್ರಿ ವಿಜಯಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರವಣಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೊರ್ತಿ ಕೋಲಾರ ಸೇತುವೆ ಬಳಿ ನಡೆದಿದೆ. ಮೃತರನ್ನು ತಾಲೂಕಿನ ತೆಲಗಿ ಗ್ರಾಮದ ಅಶೋಕ್ ಚಲವಾದಿ (36) ಮತ್ತು ಮುತ್ತಪ್ಪ ಅರ್ಜುನ್ ಮಳೆಪ್ಪಗೊಳ (45) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇನ್ನೋರ್ವ ವ್ಯಕ್ತಿ ಸದಾಶಿವ ಮಾದರ ಎಂದು ತಿಳಿದು ಬಂದಿದ್ದು, ಆತನನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಲಬುರ್ಗಿ : ಮಗಳ ಮದುವೆಗೆ ಹಣ ಹೊಂದಿಸಲಾಗದೆ, CRPF ಯೋಧರೊಬ್ಬರೂ ಮನನೊಂದು ತಮ್ಮ ಸ್ನೇಹಿತರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯೋಧರನ್ನು ತುಳಜಾರಾಮ್ ಸೂರ್ಯವಂಶಿ (51) ಎಂದು ತಿಳಿದುಬಂದಿದೆ. ಮೃತ ತುಳಜಾರಾಮ್ ಛತ್ತೀಸಗಢದ ದಂತೇವಾಡದಲ್ಲಿ ಸಿಆರ್‌ಪಿಎಫ್ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದರು. 19 ವರ್ಷದ ಮಗಳ ನಿಶ್ಚಿತಾರ್ಥ ಸಮಾರಂಭವು ಜುಲೈ ತಿಂಗಳಲ್ಲಿ ನಿಗದಿಯಾಗಿತ್ತು. ಅವರಿಗೆ ಪತ್ನಿ, ಒಬ್ಬಳು ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ರಜೆಯ ಮೇಲೆ ಕಲಬುರಗಿಗೆ ಬಂದಿದ್ದ ತುಳಜಾರಾಮ ಅವರು ಸ್ನೇಹಿತ ಮಳೇಂದ್ರ ಕುಮಾರ ಅವರ ಮನೆಯ ಕೋಣೆಯಲ್ಲಿ ಉಳಿದುಕೊಂಡಿದ್ದರು. ಮಗಳ ಮದುವೆ ಶುಭ ಕಾರ್ಯಕ್ಕೆ ಹಣ ಹೊಂದಿಸಲು ಆಗದೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಸೊಸೈಡ್ ಮಾಡಿಕೊಂಡಿದ್ದಾರೆ. ಘಟನೆ ಕುರಿತಂತೆ ಆರ್.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಒಂದು ಕಡೆ ರಾಜ್ಯ ಕಾಂಗ್ರೆಸ್ ಪಕ್ಷದ ಕೆಲವು ನಾಯಕರೇ ನವೆಂಬರ್ ತಿಂಗಳಿನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯ ಬಿಜೆಪಿಯಲ್ಲೂ ಅಸಮಾಧಾನದ ಹೊಗೆ ಆಡುತ್ತಿರುವುದು, ಅಲ್ಲದೆ ಜುಲೈ 2ನೇ ವಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಹೊಸ ಅಧ್ಯಕ್ಷರ ನೇಮಕ ಮಾಡುವ ಸಾಧ್ಯತೆ ಇದೆ. ಈ ವಿಚಾರವಾಗಿ ಬಿಜೆಪಿ ರೆಬೆಲ್ ಟೀಮ್ ಫುಲ್ ಆಕ್ಟಿವ್ ಆಗಿದ್ದು ಬೆಂಗಳೂರಿನಲ್ಲಿ ಸಾಲು ಸಾಲು ಸಭೆ ನಡೆಸುತ್ತಿದೆ. ಹೌದು ಬಿಜೆಪಿಯಲ್ಲಿ ಅಸಮಾಧಾನಿ ತರ ತಂಡ ಫುಲ್ ಆಕ್ಟಿವ್ ಆಗಿದ್ದು, ಸಾಲು ಸಾಲು ಸಭೆ ಮಾಡುತ್ತಿದೆ. ಬೆಂಗಳೂರಿನಲ್ಲಿ ಅತೃಪ್ತರ ತಂಡ ಮತ್ತೆ ಸಾಲು ಸಾಲು ಸಭೆ ನಡೆಸಿದೆ. ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ನಿವಾಸದಲ್ಲಿ ಸಭೆ ನಡೆಸುತ್ತಿದೆ. ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ, ಬಿಪಿ ಹರೀಶ್ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದಾರೆ. ವಿಜಯೇಂದ್ರ ವಿರುದ್ಧ ಮುಂದಿನ…
ಮೈಸೂರು : ಕಳೆದ 6 ತಿಂಗಳಿಂದ ಸಂಬಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ನೌಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಕ್ರೀಡಾ ಇಲಾಖೆ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದೆ. ಕಚೇರಿಯಲ್ಲಿ ಹೊರಗುತ್ತಿಗೆ ನೌಕರ ದೀಪಕ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕಳೆದ ಆರು ತಿಂಗಳಿನಿಂದ ಸಂಬಳ ನೀಡದಿದ್ದಕ್ಕೆ ದೀಪಕ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಲಸಕ್ಕೆ ಬಂದ ವೇಳೆ ಉಪ ನಿರ್ದೇಶಕರನ್ನು ಸಂಪರ್ಕಿಸಿದ್ದಾನೆ. ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದೀಪಕ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ದೀಪಕ್ ನಾನು ತಡೆದು ಸಹ ಸಿಬ್ಬಂದಿಗಳು ವಾಪಸ್ ಕಳುಹಿಸಿದ್ದಾರೆ. ಈ ವಿಚಾರವಾಗಿ ನಾಲ್ಕು ತಿಂಗಳ ಹಿಂದೆ ದೀಪಕ್ ಕೈ ಕೊಯ್ದುಕೊಂಡಿದ್ದ ಎನ್ನಲಾಗಿದೆ. ಆತ ಹೊರಗುತ್ತಿಗೆ ನೌಕರ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ. ಮನೆಯಲ್ಲಿನ ಸಮಸ್ಯೆಯಿಂದ ಈ ರೀತಿ ಮಾಡಿಕೊಂಡಿದ್ದಾನೆ. ಕೆಲ ಹೊತ್ತಿನಲ್ಲಿ ಸಂಬಳ ಹಾಕುತ್ತೇವೆ ಎಂದು ಉಪನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ. ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಈ ಕುರಿತು ಸ್ಪಷ್ಟನೆ ನೀಡಿದರು.
ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಳವಳ್ಳಿಯಲ್ಲಿ ನಡೆದಿದೆ. ಶ್ರೀಕಾಂತ್ ಹೆಬ್ಬಾರ್ ಪುತ್ರಿ ಸಾಧ್ವಿ (2) ಗೊಬ್ಬರದ ಗುಂಡಿಗೆ ಬಿದ್ದು ಸಾವನಪ್ಪಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಳವಳ್ಳಿ ಎಂಬ ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ತಂದೆ ಜೊತೆಗೆ 2 ವರ್ಷದ ಮಗು ಸಾದ್ವಿ ದನದ ಕೊಟ್ಟಿಗೆ ಬಳಿ ತೆರಳಿದ್ದಳು. ಈ ವೇಳೆ ತಂದೆ ಶ್ರೀಕಾಂತ್ ಕೊಟ್ಟಿಗೆ ಕೆಲಸದಲ್ಲಿ ಮಗ್ನರಾಗಿದ್ದಾಗ, ಗೊಬ್ಬರದ ಗುಂಡಿಯಲ್ಲಿ ಎರಡು ವರ್ಷದ ಮಗು ಬಿದ್ದು ಸಾವನ್ನಪ್ಪಿದ್ದಾಳೆ ತಕ್ಷಣ ಸಾದ್ವಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಮೃತಪಟ್ಟಿದ್ದಳು. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ : ಕೋಲಾರದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಹಾಡಹಗಲೇ ಖತರ್ನಾಕ್ ಕಳ್ಳರು, ಮಹಿಳೆಯನ್ನು ಅಟ್ಟಾಡಿಸಿ ಸರಗಳ್ಳತನ ಮಾಡಿದ್ದಾರೆ. ಮಹಿಳೆಯ ಹಿಂಬಾಲಿಸಿ ಕಳ್ಳರಿಂದ ಸರಗಳ್ಳತನ ಮಾಡಲಾಗಿದೆ. ಮುಳಬಾಗಿಲಿನ ಸಂಜಪ್ಪ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದೆ. ಸರಗಳ್ಳರು ಮಹಿಳೆಯನ್ನು ನಿಧಾನವಾಗಿ ಹಿಂಬಾಲಿಸಿಕೊಂಡು ಬಂದಿದ್ದಾರೆ. ಮಹಿಳೆ ತನ್ನ ಸ್ಕೂಟಿ ಪಾರ್ಕ್ ಮಾಡುತ್ತಿದ್ದಂತೆ, ಹಿಂಬಾಲಿಸಿಕೊಂಡ ಬಂದ ಕಳ್ಳನೊಬ್ಬ ಮಹಿಳೆಯನ್ನು ಓಡಾಡಿಸಿಕೊಂಡು ಮಹಿಳೆಯ ಕೊರಳಲ್ಲಿದ್ದ ನಕಲಿ ಸರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಲ್ಲಿ, ಅಡುಗೆ ಮಾಡುವ ವಿಚಾರವಾಗಿ ಸ್ನೇಹಿತರ ಮಧ್ಯೆ ಗಲಾಟೆ ಆಗಿ ಓರ್ವ ಯುವಕನ ಕೊಲೆಯಲ್ಲಿ ಅಂತ್ಯವಾಗಿತ್ತು. ಇದೀಗ ಬೆಂಗಳೂರಲ್ಲಿ ಮತ್ತೊಂದು ಕೊಲೆ ನಡೆದಿದ್ದು, ಅಡುಗೆ ಮಾಡುವ ವಿಚಾರಕ್ಕೆ ಗಲಾಟೆಯಾಗಿ ಪತಿಯಿಂದ ಪತ್ನಿಯ ಭೀಕರ ಕೊಲೆ ಆಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ. ತುರೆಮಣೆಯಿಂದ ಹೊಡೆದು ತಿಮ್ಮಮ್ಮ (65) ಎನ್ನುವ ಪತ್ನಿಯನ್ನು ಪತಿ ರಂಗಯ್ಯ ಕೊಲೆ ಮಾಡಿದ್ದಾನೆ. ಮತ್ತಿಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ.ಕೊಲೆ ಮಾಡಿದ ನಂತರ ಆರೋಪಿ ರಂಗಯ್ಯ ತಿರುಪತಿಗೆ ಪರಾರಿ ಆಗಲು ಯತ್ನಿಸಿದ್ದಾನೆ.ಈ ವೇಳೆ ಪೊಲೀಸರು ರಾಮನಗರದಲ್ಲಿ ಆರೋಪಿ ರಂಗಯ್ಯನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಕುರಿತಂತೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇತ್ತೀಚಿಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಹೇಳಿಕೆ ನೀಡಿದ್ದರು. ಬಳಿಕ ಆ ಒಂದು ಹೇಳಿಕೆ ನಾನು ತಮಾಷೆಯಾಗಿ ಹೇಳಿದ್ದೇನೆ ಎಂದು ಹೇಳಿಕೆಯಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಚಿವ ಪರಮೇಶ್ವರ್ ಬಳಿಕ ಇದೀಗ ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರಿಂದ ಸರ್ಕಾರದ ಮೇಲೆ ಆರ್ಥಿಕ ಹೊರೆ ಇದೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2013ರಲ್ಲಿ ಇದ್ದಂತೆ ಸಿಎಂ ಈ ಬಾರಿ ಇಲ್ಲ ಅನ್ನೋ ಹೇಳಿಕೆ ವಿಚಾರವಾಗಿ, ಏನು ಮಾಡುವುದು ಪವರ್ ಸೆಂಟರ್ಗಳು ಜಾಸ್ತಿ ಆಗಿವೆ. 2013 ರಿಂದ 18 ರವರೆಗೆ ಒಂದೇ ಪವರ್ ಸೆಂಟರ್ ಇತ್ತು. ಈಗ ಒಂದು ಎರಡು ಮೂರು ಲೆಕ್ಕ ಎಷ್ಟಾದರೂ ಹಾಕಿಕೊಳ್ಳಿ. 2013 ರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಒತ್ತಡ ಇರಲಿಲ್ಲ. ಪವರ್ ಸೆಂಟರ್ ಜಾಸ್ತಿಯಾಗಿದ್ದರಿಂದ ಜಂಜಾಟ ಹೆಚ್ಚಾಗಿದೆ. ಸಿಎಂ ರಾಜ್ಯಾದ್ಯಂತ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕೊಡುತ್ತಿದ್ದಾರೆ…
BIG NEWS : ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಸಾಧ್ಯತೆ ವಿಚಾರ : ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಬೆಂಗಳೂರು : ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗುತ್ತಿದೆ ಎಂಬ ವಿಚಾರವಾಗಿ ಅಂತಹ ಭಾರಿ ಬದಲಾವಣೆ ಏನು ಆಗಲ್ಲ ಆದರೆ ಸ್ವಲ್ಪ ಬದಲಾವಣೆ ಆದರೆ ಆಗಬಹುದು ಭಾರಿ ಬದಲಾವಣೆಯ ರೀತಿ ಆಗುತ್ತದೆ ಅಂತ ಏನು ಅನಿಸುತ್ತಿಲ್ಲ ಎಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವರಾದಂತಹ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಇನ್ನು ಸರ್ಕಾರದ ವಿರುದ್ಧ ಶಾಸಕ ರಾಜು ಕಾಗೆ ಅಸಮಾಧಾನ ಹೊರ ಹಾಕಿರುವ ವಿಚಾರವಾಗಿ, ರಾಜು ಕಾಗೆ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ಕೇವಲ ಅನುದಾನ ವರ್ಗಾವಣೆಗೆ ಅಸಮಾಧಾನ ಅಂತ ಏನಿಲ್ಲ. ನೀರಾವರಿ ಯೋಜನೆಗಳ ಬಗ್ಗೆಯೂ ಬಹಳಷ್ಟು ಬಾರಿ ಹೇಳಿದ್ದಾರೆ. ನಾವು ನೀರಾವರಿ ಅನುದಾನ ವಿಚಾರವಾಗಿ ಮಾಹಿತಿ ನೀಡಿದ್ದೇವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಳಿ ಸಿಎಂ ಸಿದ್ದರಾಮಯ್ಯ ಮಾತನಾಡಬಹುದು ಎಂದರು. ನೀರಾವರಿ ಇಲಾಖೆಯಲ್ಲಿ 26,000 ಕೋಟಿ ಅನುದಾನವಿದೆ. ಎಲ್ಲವನ್ನು ಸರಿಪಡಿಸಲು ಹೈಕಮಾಂಡ್ ನಾಯಕರು ಹೇಳಿದರು. ವೈಯಕ್ತಿಕವಾಗಿ ಶಸ್ತ್ರ ತ್ಯಾಗ ಏನಿಲ್ಲ. ಯುದ್ಧ ಇದ್ದಾಗ ಶಸ್ತ್ರ ಹಿಡಿಯಬೇಕು ಸುಮ್ಮನೆ ಹಿಡಿಯಬಾರದು. ಅಸಮಾಧಾನ…
ಬೆಂಗಳೂರು : ಈಗಾಗಲೇ ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಮುಂಬರುವ ನವೆಂಬರ್ ತಿಂಗಳಲ್ಲಿ ಸಿಎಂ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಿಕೆ ನೀಡಿದ್ದರು. ಇದೀಗ ಸಹಕಾರ ಸಚಿವರಾದಂತಹ ಕೆ.ಎನ್ ರಾಜಣ್ಣ ಅವರು ಬರುವ ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಹೌದು ಅಗಸ್ಟ್ ಸೆಪ್ಟೆಂಬರ್ ನಲ್ಲಿ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಸ್ಫೋಟಕವಾದ ಹೇಳಿಕೆ ನೀಡಿದರು. ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ರೀತಿಯಲ್ಲಿ ಬದಲಾವಣೆ ಆಗಲಿದೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ತಣ್ಣಗೆ ಬೀಸುತ್ತಿದೆ. ಸೆಪ್ಟೆಂಬರ್ ಒಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ವಿಧಾನಸೌಧದಲ್ಲಿ ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದರು.