Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ತಡರಾತ್ರಿ ಕಲಬುರ್ಗಿಯಲ್ಲಿ ಬಸ್ ಹಾಗು ಟ್ಯಾಂಕರ್ ನಡುವೆ ಬೀಕರವಾದ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ಬಸ್ ನಲ್ಲಿ ಇದ್ದಂತಹ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಬಸ್ ಚಾಲಕ ಸೇರಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಯಡ್ರಾಮಿ ಪಟ್ಟಣ ಹೊರವಲಯದಲ್ಲಿ ನಡೆದಿದೆ. ತಡರಾತ್ರಿ ಈ ಒಂದು ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ಜೇವರ್ಗಿಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.ಬಸ್ ಚಾಲಕನಿಗೆ ಮತ್ತು ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರು ಯಡ್ರಾಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : ಕಳೆದ ಜನವರಿ 9 ರಂದು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಈ ಒಂದು ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ತಾಲೋಕ್ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂದು ಆರೋಪಿಸಿ ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಹೌದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುತಾಲಿಕ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಸಕಲೇಶಪುರದಲ್ಲಿ ಜನವರಿ 9ರಂದು ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಮುತಾಲಿಕ್ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪ ಕೇಳಿ ಬಂದಿತ್ತು. ಸದ್ಯ ಸಕಲೇಶಪುರ ಠಾಣೆಗೆ ಪೊಲೀಸ್ ಸಿಬ್ಬಂದಿ ಎಂ ಕೆ ಶ್ರೀಧರ್ ದೂರು ನೀಡಿದ್ದಾರೆ. ಅವರ ದೂರಿನ ಅನ್ವಯ BNS 2023 U/S-196(1) 353(2) 3(5)ರ ಅಡಿ ಕೇಸ್ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ಅಗ್ನಿ ಅವಘಡಗಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ತಾನೇ ಬೆಂಗಳೂರಿನ, ದಾಸರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು 7 ಜನರು ಗಾಯಗೊಂಡಿರುವ ಘಟನೆ ನಡೆದಿದೆ.ಇದರ ಬೆನ್ನಲ್ಲೇ ಇದೀಗ, ನೆಲಮಂಗಲದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಗಾರ್ಮೆಂಟ್ಸ್ ಒಂದಕ್ಕೆ ಬೆಂಕಿ ತೆಗೆದು ಸುಮಾರು 40 ಲಕ್ಷಕ್ಕೂ ಹೆಚ್ಚು ಮೌಲ್ಯದ ಬಟ್ಟೆಗಳು ಕರಕಲಾಗಿರುವ ಘಟನೆ ನಡೆದಿದೆ. ಹೌದು ನೆಲಮಂಗಲದ ಬಳಿ ಆರ್.ಎ ಫ್ಯಾಶನ್ ಗಾರ್ಮೆಂಟ್ಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅರುಣ್ ಮತ್ತು ಶಿವುಗೆ ಎಂಬುವರಿಗೆ ಸೇರಿದ ಗಾರ್ಮೆಂಟ್ಗೆ ಬೆಂಕಿ ತಗುಲಿದೆ. ಈ ಒಂದು ಅಗ್ನಿ ಅವಘಡದಲ್ಲಿ ಗಾರ್ಮೆಂಟ್ಸ್ನಲ್ಲಿದ್ದ ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ಬಟ್ಟೆಗಳು ಸೇರಿದಂತೆ ಇನ್ನೂ ಅನೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಪಿಣ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಇದೀಗ ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಟನೆ ಕುರಿತು ಪೀಣ್ಯ ಪೊಲೀಸ್…
ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ವ್ಯಕ್ತಿ ಒಬ್ಬನನ್ನು ಇಬ್ಬರು ಹಂತಕರು ಕೊಂದಿದ್ದಾರೆ. ಬಳಿಕ ಇದು ಸಹಜ ಸಾವು ಎಂದು ಬಿಂಬಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಬಾರ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಆಗಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಮೂಡಲಗಿ ಬಾರ್ ಒಂದರಲ್ಲಿ ಈ ಒಂದು ಘಟನೆ ಸಂಭವಿಸಿದೆ. ಲಕ್ಷ್ಮಣ್ ಮರಣೂರು ಎನ್ನುವ ವ್ಯಕ್ತಿಯ ಕೊಲೆಯಾಗಿದ್ದು, ರಂಗಪ್ಪ ಪಾಟೀಲ್ ಮತ್ತು ಈರಪ್ಪ ತುಂಗಳ ಅವರು ಲಕ್ಶ್ಮಣ ಜೊತೆ ಗಲಾಟೆ ಮಾಡಿದ್ದಾರೆ. ಇಬ್ಬರು ಸಹ ಲಕ್ಷ್ಮಣನ ಜೊತೆ ಜಗಳ ಮಾಡಿದ್ದು, ಹಲ್ಲೆ ನಡೆಸಿ ಕೊಂದಿದ್ದಾರೆ. ಲಕ್ಷ್ಮಣ್ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಕೂಡ ಮೊಬೈಲ್ ನಲ್ಲಿ ಸೆರೆಯಾಗಿದೆ. ಸ್ಥಳೀಯರ ಒಬ್ಬರ ಮೊಬೈಲಲ್ಲಿ ಈ ಒಂದು ವಿಡಿಯೋ ಸೆರೆಯಾಗಿದೆ. ರಂಗಪ್ಪ ಪಾಟೀಲ್ ಮತ್ತು ಈರಪ್ಪ ತುಂಗಳ ಕೊಲೆ ಆರೋಪಿಗಳು, ಕೊಲೆ ಮಾಡಿ ಇದು ಸಹಜ ಸಾವು ಎಂದು ಬೆಂಬಲಿಸಲು ಇಬ್ಬರು ಆರೋಪಿಗಳು ಮುಂದಾಗಿದ್ದರು. ಆದರೆ ಕೂಡಲೇ ಆರೋಪಿಗಳನ್ನು ಪತ್ತೆಹಚ್ಚಿ ಪೊಲೀಸ್ರು ಅರೆಸ್ಟ್…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡು 7 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದಿದೆ. ಸಿಲಿಂಡರ್ ಬ್ಲಾಸ್ಟ್ ಘಟನೆಯಲ್ಲಿ , ದಿಜುಧಾರ್, ಅಂಜಲಿದಾಸ್, ಮನುಶ್ರೀ, ತಿಪ್ಪರುದ್ರಸ್ವಾಮಿ, ಮನು, ಶೋಭಾ, ಕರೀಬುಲ್ಲ ಎಂಬುವರು ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡ 7 ಜನರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಗೆ ನಿಖರವಾದಂತಹ ಕಾರಣ ತಿಳಿದು ಬಂದಿಲ್ಲ ಸದ್ಯ ಘಟನಾ ಸ್ಥಳಕ್ಕೆ ಪೀಣ್ಯ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ : ತಮ್ಮ ಮಗಳ ನಾಮಕರಣ ಸಿದ್ಧತೆಯಲ್ಲಿದ್ದಂತಹ ಪತ್ರಕರ್ತರೊಬ್ಬರು ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ದೇವಾಲಯಕ್ಕೆ ಡಿಕ್ಕಿಯಾಗಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಮಾಚಹಳ್ಳಿ ಕೆರೆ ಏರಿಯ ಮೇಲೆ ಈ ಒಂದು ದುರ್ಘಟನೆ ಸಂಭವಿಸಿದೆ. ಮೃತರನ್ನು ಗುಂಡಿಬಂಡೆ ಮೂಲದ ಭರತ್ (32) ಎಂದು ತಿಳಿದುಬಂದಿದ್ದು, ವೇಗವಾಗಿ ಬಂದು ದೇವಾಲಯಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಭರತ್ ಮೃತಪಟ್ಟಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗುಡಿಬಂಡೆ ಪಟ್ಟಣದಿಂದ ಬಾಗೇಪಲ್ಲಿಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ದೇವಾಲಯಕ್ಕೆ ಡಿಕ್ಕಿ ಹೊಡೆದಿದೆ. ಭರತ್ ತಮ್ಮ ಮಗಳ ನಾಮಕರಣ ಸಿದ್ಧತೆಯಲ್ಲಿರುವಾಗಲೇ ಈ ಒಂದು ದುರಂತ ಸಂಭವಿಸಿದ್ದು, ಕುಟುಂಬಸ್ಥರ ಆಕ್ರಂದನ ಇದೀಗ ಮುಗಿಲು ಮುಟ್ಟಿದೆ.
ಉತ್ತರಕನ್ನಡ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ರಸ್ತೆ ಅಪಘಾತ ಸಂಭವಿಸಿದ್ದು ಚಲಿಸುತ್ತಿರುವ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಚರಂಡಿಗೆ ಬಿದ್ದ ಪರಿಣಾಮ ಕಾರಿನಲ್ಲಿ ಸಂಚರಿಸುತ್ತಿದ್ದ 5 ಜನರ ಪೈಕಿ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಮೃತರನ್ನು ದಂಪತಿಗಳೆಂದು ತಿಳಿದು ಬಂದಿದ್ದು, ಈ ಒಂದು ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿಯ 63 ರ ಬೊಳೆಯ ಜಮಗೋಡ ಬಳಿ ಭಾನುವಾರ ಸಂಜೆ ನಡೆದಿದೆ. ಮುಂಬಯಿ ಅಂದೇರಿಯ ನಾಗೇಂದ್ರ ಸದಾಶಿವ ಭಟ್ಕಳ (72) ಹಾಗೂ ಇವರ ಪತ್ನಿ ಸುಧಾ ನಾಗೇಂದ್ರ ಭಟ್ಕಳ (65) ಮೃತ ಪಟ್ಟವರು.ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದು ನಮಿತಾ ನಿತ್ಯಾನಂದ ನಾಯಕ (56), ದೀಪ್ತಿ ವಿಶ್ವಾಸ ಪ್ರಭು (36) ಹಾಗೂ ಮಂಗಳೂರಿನ ನಿತ್ಯಾನಂದ ವಾಮನ ನಾಯಕ ಗಾಯಗೊಂಡವರು. ದೀಪ್ತಿ ವಿಶ್ವಾಸ ಪ್ರಭು ಅವರಿಗೆ ಗಂಭೀರ ಸ್ವರೂಪ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ನಾಗೇಂದ್ರ ಸದಾಶಿವ ಭಟ್ಕಳ ಅವರ ಕುಟುಂಬದವರು ಮಂಗಳೂರಿನಿಂದ ಅಂಕೋಲಾದ ಶ್ರೀ ಲಕ್ಷ್ಮೀನಾರಾಯಣ…
ವಿಜಯನಗರ : ಬೆಂಗಳೂರಿನಲ್ಲಿ ರಾಕ್ಷಸರು ಹಸುವಿನ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸುಗಳ ಕೆಚ್ಚಲು ಕೊಯ್ದಿರುವುದು ತಪ್ಪು. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಆಗೇ ಆಗುತ್ತದೆ ಎಂದು ತಿಳಿಸಿದರು. ಇಂದು ವಿಜಯನಗರ ಜಿಲ್ಲೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಪ್ರಕರಣದ ಕುರಿತು ಮಾತನಾಡಿದ ಅವರು, ಘಟನೆ ಕುರಿತು ಈಗಾಗ್ಲೇ ಕಮಿಷನರ್ ಜೊತೆಗೆ ಮಾತನಾಡಿದ್ದೇನೆ. ಯಾರು ಅಂತ ಪತ್ತೆಹಚ್ಚಲು ಕಮಿಷನರಿಗೆ ತಿಳಿಸಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ ಎಂದು ಅವರು ತಿಳಿಸಿದರು. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲೇಬೇಕು. ಯಾರು ಮಾಡಿದ್ದಾರೆ ಅಂತ ನನಗೆ ಗೊತ್ತಿಲ್ಲ. ಅದಕ್ಕೆ ಹಿಂದೂ ಸಂಘಟನೆಗಳು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಆ ರೀತಿ ಮಾಡಬಾರದು. ತಪ್ಪಿತಸರಿಗೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.
ಬಾಗಲಕೋಟೆ : ಬಾಗಲಕೋಟೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವ ಘಟನೆ ನಡೆದಿದ್ದು, ಶಾಲೆಯ ವಾಚ್ ಮೆನ್ ನನ್ನು ಹೆಡ್ ಮಾಸ್ಟರ್ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೆಳಗಿ ತಾಲೂಕಿನ ನಾಗರಾಳ ಎಂಬ ಗ್ರಾಮದಲ್ಲಿ ನಡೆದಿದೆ. ನೀರು ಕಾಯಿಸುವ ವಿಚಾರಕ್ಕೆ ಹೆಡ್ ಮಾಸ್ಟರ್ ಹಾಗೂ ವಾಚ್ ಮ್ಯಾನ್ ನಡುವೆ ಗಲಾಟೆ ನಡೆದಿದೆ. ಕಟ್ಟಿಗೆಯಿಂದ ಹೆಡ್ ಮಾಸ್ಟರ್ ವಾಚ್ ಮೆನ್ ಇವಳೆ ಗಾಯಗೊಂಡ ವಾಚ್ ಮಣ್ಣನ್ನು ನಾಗಪ್ಪಗೆ ಥಳಿಸಿದ್ದ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವಾಗ ನಾಗಪ್ಪ ತೋಳಮಟ್ಟಿ (55) ಸಾವನ್ನಪ್ಪಿದ್ದಾನೆ. ವಾಚ್ಮನ್ ನಾಗಪ್ಪನನ್ನು ಮುಖ್ಯ ಶಿಕ್ಷಕ ಧನರಾಜ ರಾಥೋಡ್ ಕಟ್ಟಿಗೆಯಿಂದ ಥಳಿಸಿದ್ದಾನೆ. ನಾಗರಾಳ ಗ್ರಾಮದ ರಾಧಾಕೃಷ್ಣ ಖಾಸಗಿ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬೀಳಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬೆಳಗಾವಿಯಲ್ಲಿ ಅಂಗನವಾಡಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಬೆಳಗಾವಿ : ಇತ್ತೀಚಿಗೆ ದೇಶದಲ್ಲಿ ಕಾಮುಕರ ಅಟ್ಟಹಾಸ ಮೀರುತ್ತಿದ್ದು, ಇದೀಗ ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಅಂಗನವಾಡಿಗೆ ನುಗ್ಗಿ ಶಿಕ್ಷಕೀಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿಯಲ್ಲಿ ಅಡುಗೆ ಮಾಡುವ ಮಹಿಳಾ ಸಹಾಯಕಿಯ ಗಂಡನೊಬ್ಬ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅಂಗನವಾಡಿ ಕೇಂದ್ರದಲ್ಲಿರುವ ಅಡುಗೆ ಸಿಬ್ಬಂದಿಗೆ ಶೌಚಾಲಯ ಸ್ವಚ್ಛ ಮಾಡುವಂತೆ ಅಡುಗೆ ಮಾಡುವ ಮಹಿಳೆಗೆ ಶಿಕ್ಷಕಿ ಹೇಳಿದ್ದಾರೆ. ಈ ವಿಚಾರವನ್ನ ತನ್ನ ಗಂಡನಿಗೆ ಅಡುಗೆ ಸಿಬ್ಬಂದಿ ಸಾವಿತ್ರಿ ಕರ್ಲಟ್ಟಿ ಹೋಗಿ ಹೇಳಿದ್ದಾರೆ. ಇದರಿಂದ ಕೋಪಗೊಂಡು ಅಂಗನವಾಡಿಗೆ ಆಗಮಿಸಿದ್ದ ಆರೋಪಿ ಸಿದ್ರಾಯಿ ಕರ್ಲಟ್ಟಿ, ತನ್ನ ಹೆಂಡತಿಗೆ ಶೌಚಾಲಯ ಕ್ಲಿನ್ ಮಾಡಲು ಹಚ್ಚುತ್ತಿಯಾ ಅಂತಾ ಅವಾಚ್ಯವಾಗಿ ನಿಂದಿಸಿದ್ದಾರೆ.ಇದೇ ವೇಳೆ ಶಿಕ್ಷಕಿ ಸೀರೆ ಎಳೆದು ಮಾನಭಂಗ ಪಡಿಸಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ಇನ್ನು ಶಿಕ್ಷಕಿ ಬ್ರೈನ್ ಟ್ಯೂಮರ್ದಿಂದ ಬಳಲುತ್ತಿದ್ದು, ಮಾನಸಿಕ ಕಿರುಕುಳ ತಾಳಲಾರದೇ ಆತ್ಮಹತ್ಯೆಗೂ…












