Subscribe to Updates
Get the latest creative news from FooBar about art, design and business.
Author: kannadanewsnow05
ಬಳ್ಳಾರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಲೋಕಾಯುಕ್ತ ಹಾಗೂ ಇಡಿ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿವೆ. ಯಾವಾಗ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದರಾಯ್ತೋ ಪತ್ನಿ ಪಾರ್ವತಿ ಮುಡಾಗೆ 14 ನಿವೇಶನಗಳನ್ನು ಹಿಂತಿರುಗಿಸಿದ್ದಾರೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಅವರು ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆನೂ ಕೊಡಲ್ಲ ಎಂದು ಮತ್ತೊಮ್ಮೆ ಪುನರುಚ್ಚಿಸಿದ್ದಾರೆ. ಇಂದು ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆ ಕೊಡುವುದಿಲ್ಲ. ಬಿಜೆಪಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅಧಿಕಾರಕ್ಕೆ ಬಂದ 8 ತಿಂಗಳಿನಲ್ಲಿ 5 ಗ್ಯಾರಂಟಿಗಳು ಜಾರಿ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗೆ 56,000 ಕೋಟಿ ಖರ್ಚು ಮಾಡುತ್ತಿದ್ದೇವೆ. ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನವರು ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪು ಹೊರಬೀಳಲಿದ್ದು, ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ಜಾಮೀನು ಕುರಿತಂತೆ ತೀರ್ಪು ಪ್ರಕಟಿಸಲಿದೆ. ಇನ್ನು ಕೊಲೆ ಆರೋಪಿ ನಟ ದರ್ಶನವರು ಬಳ್ಳಾರಿ ಜೈಲಲ್ಲಿ ಇದ್ದು ಅವರು ಇತ್ತೀಚಿಗೆ ತೀವ್ರವಾಗಿ ಬೆನ್ನು ನೋವು ನಿಂದ ಬೀಳುತ್ತಿದ್ದಾರೆ ಅಲ್ಲದೆ ವೈದ್ಯರು ಕೂಡ ತಪಾಸಣೆ ಮಾಡಿದ್ದು, ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಆದರೆ ಇಂದು ಅವರ ಜಾಮೀನು ತೀರ್ಪು ಅವರ ಬೀಳುವ ಹಿನ್ನೆಲೆಯಲ್ಲಿ ಟೆನ್ಶನ್ ಅಲ್ಲಿ ಇದ್ದಾರೆ. ಈಗಾಗಲೇ 125 ದಿನಗಳ ಕಾಲ ಜೈಲಲ್ಲಿ ಕಳೆದಿದ್ದಾರೆ. ಇದರ ಮಧ್ಯ ಜಾಮೀನು ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ಜೈಲಿನಲ್ಲಿ ಚಡಪಡಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ ಸಿಗದೇ ನಟ ದರ್ಶನ್ ಅವರು ಟೆನ್ಶನ್ ಅಲ್ಲಿ ಇದ್ದಾರೆ. ಅಲ್ಲದೆ ಊಟ ಕೊಡಲು ಬಂದ ಸಿಬ್ಬಂದಿಯ ಬಳಿಯೂ ಕೂಡ ದರ್ಶನ್ ಅವರು ಜಾಮೀನು ವಿಚಾರವಾಗಿ ಮಾಹಿತಿ ಕೇಳಿದ್ದಾರೆ…
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಎಚ್ ಸಿ ಮಹದೇವಪ್ಪ ಅವರು ಬೌದ್ಧ ಧರ್ಮ ಸ್ವೀಕರಿಸುವುದಾಗಿ ಘೋಷಿಸಿದ್ದಾರೆ. ಇಂದು ಧಮ್ಮ ಚಕ್ರ ಪರಿವರ್ತನಾ ದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶುಭಾಯಶ ಕೋರಿರುವ ಮಹದೇವಪ್ಪ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈ ಕುರಿತು ಅವರು ಟ್ವೀಟ್ ನಲ್ಲಿ ಬೌದ್ಧ ಧರ್ಮ ಸ್ವೀಕಾರದ ಕುರಿತಂತೆ ತಿಳಿಸಿರುವ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ, ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ.ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು…
ಧಾರವಾಡ : ಇಂದು ಲೋಕಾಯುಕ್ತ ಅಧಿಕಾರಿಗಳು ಧಾರವಾಡ ನಗರದ ಹೊಸ ಬಸ್ ನಿಲ್ದಾಣದ ಮೇಲೆ ದಾಳಿ ಮಾಡಿದರು. ಸಾರ್ವಜನಿಕರಿಂದ ನಿಲ್ದಾಣದ ಸ್ವಚ್ಛತೆ ಹಾಗೂ ಇತರೆ ವಿಷಯಗಳ ಕುರಿತಾಗಿ ದೂರು ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೌದು ಧಾರವಾಡ ಹೊಸ ಬಸ್ ನಿಲ್ದಾಣದ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಬಸ್ ನಿಲ್ದಾಣದ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ವೆಂಕಟನಗೌಡ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೊಸ ಬಸ್ ನಿಲ್ದಾಣದ ನಿರ್ವಹಣೆ ಮತ್ತು ಸ್ವಚ್ಛತೆಯ ಕುರಿತು ಅಧಿಕಾರಿಗಳು ಫೈಲ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಇತ್ತೀಚಿಗೆ ಕೆಲವು ತಿಂಗಳವರೆಗೆ ಹಣ ಬಂದಿಲ್ಲ ಎಂದು ಮಹಿಳೆಯರು ಆಕ್ರೋಶಗೊಂಡಿದ್ದರು. ಬಳಿಕ ಎರಡು ಕಂತಿನ ಹಣವನ್ನು ಒಮ್ಮೆಲೆ ಹಾಕಲಾಗಿತ್ತು. ಇದೀಗ ಒಂದು ತಿಂಗಳ ಹಣ ಜಮೆ ಆಗದೆ ಇರುವ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಒಂದು ತಿಂಗಳ ಹಣ ಜಮೆಯ ವಿಚಾರವಾಗಿ 2 ಕಂತಿನ ಹಣವನ್ನು ಕ್ಲಿಯರ್ ಮಾಡಿದ್ದೇವೆ. ನಾವು ಕೊಟ್ಟ ಭರವಸೆಯಂತೆ ಎರಡು ತಿಂಗಳ ಹಣವನ್ನು ಹಾಕಿದ್ದೇವೆ. 1.22 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಹಾಕಲಾಗಿದೆ.ಎರಡು ತಿಂಗಳಿಗೆ 5000 ಕೋಟಿ ಹಣ ಬಿಡುಗಡೆ ಮಾಡಿದ್ದೇನೆ. 80000 ಫಲಾನುಭವಿಗಳಿಗೆ ತಾಂತ್ರಿಕ ದೋಷ ಅಂತ ಬರುತ್ತಿದೆ. ಜಿಎಸ್ಟಿ ಐಟಿ ಇಂದ ಸಹಕಾರ ಸಿಗುತ್ತಿಲ್ಲ. ಹೀಗಾಗಿ ಹಣ ಹಾಕಲು ಆಗುತ್ತಿಲ್ಲ ಎಂದು ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಬೆಂಗಳೂರು : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ವಿಚಾರವಾಗಿ ನನ್ನ ಮೇಲಿನ ಕೇಸ್ ವಾಪಸ್ ಪಡೆಯಲಾಗಿದೆ ಎಂದು ಹೇಳಿದ್ದಾರೆ.ಯಾವ ಕೇಸ್ ವಾಪಸ್ ಪಡೆಯಿರಿ ಅಂತ ನಾನು ಅರ್ಜಿ ಹಾಕಿದ್ದೇನೆ ಹೇಳಿ? ಸರ್ಕಾರದ ಮುಂದೆ ನಾನು ಭಿಕ್ಷೆ ಬೇಡಿಲ್ಲ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಕೋಲಾರ ಚಿಕ್ಕಬಳ್ಳಾಪುರದಲ್ಲಿ ಕೇಸ್ ದಾಖಲಾಗಿರಲಿಲ್ಲ. ನಾನು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಪೊಲೀಸರಿಗೆ ಹೊಡೆದಿರಲಿಲ್ಲ. ಪಿಎಫ್ ಐ ಮುಖಂಡರ ಮೇಲಿನ ಕೆಎಸ್ ವಾಪಸ್ ತೆಗೆದುಕೊಂಡರು ಬಳಿಕ ರುದ್ರೇಶ್ ಪ್ರಶಾಂತ್ ಪೂಜಾರಿಯ ಹತ್ಯೆಯಾಯಿತು. ಸರ್ಕಾರ ಈ ಹಂತಕರ ಕೇಸ್ ವಾಪಸ್ ಪಡೆದು ಸುಪಾರಿ ಕೊಟ್ಟಿದೆ. ಇದರ ವಿರುದ್ಧ ನಾವು ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಸಿಟಿ ರವಿ ತಿಳಿಸಿದರು.
ಬೆಂಗಳೂರು : ಮನೆ ಬಾಡಿಗೆಗೆ ಇದ್ದಂತಹ ವ್ಯಕ್ತಿ ಒಬ್ಬ ವೃದ್ಧ ದಂಪತಿಗೆ ಸಹಾಯ ಮಾಡುವ ನೆಪದಲ್ಲಿ ಅವರ ಮನೆಯನ್ನೇ ದೋಚಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಲ್ಲಿ ರಾಬರಿ ಮಾಡಿದ ಮೂವರು ಆರೋಪಿಗಳ ಬಂಧನವಾಗಿದೆ. ಕಳೆದ ಸೆಪ್ಟೆಂಬರ್ 21 ರಂದು ರಾಮಮೂರ್ತಿ ನಗರದ ಕಸ್ತೂರಿ ನಗರದಲ್ಲಿ ಈ ಒಂದು ರಾಬರಿ ನಡೆದಿತ್ತು. ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿ ಆರೋಪಿಗಳು ರಾಬರಿ ಮಾಡಿದ್ದರು. ಈ ಒಂದು ಪ್ರಕರಣಕ್ಕೆ ಟ್ವಿಸ್ಟ್ ಏನೆಂದರೆ ಬಾಡಿಗೆದಾರೆ ರಾಬರಿ ಮಾಡಿದ್ದಾರೆ ಎಂಬುವುದು ತನಿಖೆಯ ವೇಳೆ ಬಯಲಾಗಿದೆ. ಹೌದು ಶಿವಕುಮಾರ್ ಮಣಿಕಂಠ ಮತ್ತು ಪ್ರಶಾಂತ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ವೃದ್ದ ದಂಪತಿ ಮನೆಯಲ್ಲಿ ಬಾಡಿಗೆಗೆ ಇದ್ದ ಶಿವಕುಮಾರ್ ದಂಪತಿಗಳಿಗೆ ಸಹಾಯ ಕೂಡ ಮಾಡುತ್ತಿದ್ದ. ದಂಪತಿಗಳ ಮನೆ ರಾಬರಿಗೆ ಸ್ಕೆಚ್ ಹಾಕಿದ್ದ ಎನ್ನಲಾಗುತ್ತಿದೆ. ಇದಕ್ಕಾಗಿ ಮಣಿಕಂಠ ಮತ್ತು ಪ್ರಶಾಂತ ಜೊತೆ ರಾಬರಿಗೆ ಸ್ಕೆಚ್ ಹಾಕಿದ್ದ. ಶಿವಕುಮಾರ್ ಸೆಪ್ಟೆಂಬರ್ 21ರ ಬೆಳಿಗ್ಗೆ…
ಕಲಬುರ್ಗಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಅಲ್ಲಿ ರಾಜಾತಿಥ್ಯ ಪಡೆದುಕೊಳ್ಳುವ ವಿಚಾರವಾಗಿ ನಂತರ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾದರಿಯಲ್ಲೇ ಇದೀಗ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಆರೋಪಿಗಳು ಜೈಲಿನಲ್ಲಿ ಇದ್ದುಕೊಂಡೆ ಸ್ಮಾರ್ಟ್ ಫೋನ್ ಬಳಸಿ ವಿಡಿಯೋ ಕಾಲ್ ಮಾಡಿರುವ ಫೋಟೋ ಇದೀಗ ವೈರಲ್ ಆಗಿದೆ. ಹೌದು ವಿಶಾಲ, ಸಾಗರ ಹಾಗೂ ಸೋನು ಎಂಬುವವರು ಜೈಲಿನ ಕೋಣೆಯೊಳಗೆ ಕುಳಿತು ತಮ್ಮ ಸ್ನೇಹಿತರೊಂದಿಗೆ ಮಾತನಾಡುತ್ತಾ, ಗಾಂಜಾ ಸೇದುತ್ತಿದ್ದಾರೆ ಎನ್ನಲಾದ ದೃಶ್ಯಗಳು ಬಹಿರಂಗವಾಗಿವೆ.ಈ ಮೂವರು ಬೇರೆ ಬೇರೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಸೇರಿದ್ದಾರೆ. ಜೈಲಿನಲ್ಲಿ ಇರುವ ಕೆಲ ಕೈದಿಗಳು ಐಷರಾಮಿ ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಮೂವರು ಕೈದಿಗಳು ಸ್ಮಾರ್ಟ್ಫೋನ್ ಬಳಸಿ ತಮ್ಮ ಸ್ನೇಹಿತರಿಗೆ ವಿಡಿಯೊ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.ಕಳೆದ…
ನೌಕಾನೆಲೆಯ ಸಮರಾಭ್ಯಾಸ ಹಿನ್ನೆಲೆ : 3 ದಿನಗಳ ಕಾಲ ‘ನೇತ್ರಾಣಿ’ ದ್ವೀಪದಲ್ಲಿ, ಮೀನುಗಾರರಿಗೆ, ಪ್ರವಾಸಿಗರಿಗೆ ನಿರ್ಬಂಧ!
ಉತ್ತರಕನ್ನಡ : ನೌಕಾನೆಲೆ ಸಮಾರಾಭ್ಯಾಸ ಹಿನ್ನೆಲೆಯಲ್ಲಿ ನಾಳೆಯಿಂದ ಅಂದರೆ ಅಕ್ಟೋಬರ್ 14 ರಿಂದ 16 ವರೆಗೆ ಮೂರು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ನೇತ್ರಾಣಿ ದ್ವೀಪದಲ್ಲಿ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿರುವ ನೇತ್ರಾಣಿ ದ್ವೀಪದಲ್ಲಿ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.ಅಕ್ಟೋಬರ್ 14 ರಿಂದ 16 ರವರೆಗೆ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ನೇತ್ರಾಣಿ ದ್ವೀಪದಿಂದ 10 ನಾಟಿಕಲ್ ಮೈಲಿ ದೂರದಿಂದ ಸಮರಭ್ಯಾಸ ನಡೆಸಲಾಗುತ್ತದೆ. ಆಗಸದಿಂದ ಯುದ್ಧ ಫೈಟರ್ ಮೂಲಕ ನೌಕಾದಳದಿಂದ ಸಮಾರಾಭ್ಯಾಸ ನಡೆಸಲಿದೆ. ಆಗಸದಿಂದ ನೇತ್ರಾಣಿ ದ್ವೀಪದಲ್ಲಿ ಫೈರಿಂಗ್ ನಡೆಯುವುದರಿಂದ ಈ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ. ನೇತ್ರಾಣಿ ದ್ವೀಪದಲ್ಲಿ ಮೀನುಗಾರರು ಹಾಗೂ ಪ್ರವಾಸಿಗರಿಗೆ ಮೂರು ದಿನ ನಿರ್ಬಂಧ ವಿಧಿಸಲಾಗಿದೆ.
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಸೇರಿದಂತೆ ರೌಡಿ ಶೀಟರ್ ಗಳಿಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೊಬೈಲ್ ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದರು. ಇದಾದ ಬಳಿಕವೂ ಜೈಲಿನಲ್ಲಿ ಮೊಬೈಲ್ ಬಳಕೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಹೌದು ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲಲ್ಲಿರುವ ಆರೋಪಿ, ನಟ ದರ್ಶನ್ ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದರು. ಅಲ್ಲಿ ದರ್ಶನ್ಗೆ ಹಾಗೂ ಕೆಲ ರೌಡಿ ಶೀಟರ್ಗಳಿಗೆ ರಾಜಾತಿಥ್ಯ ನೀಡಿರುವ ಪ್ರಕರಣ ಸದ್ದು ಮಾಡಿತ್ತು. ಆದರೂ ಸಹ ಜೈಲಿನಲ್ಲಿ ಇದ್ದುಕೊಂಡೆ ಕೆಲ ರೌಡಿ ಶೀಟರ್ ಗಳು ಬೆದರಿಕೆ ಹಾಕುವ ಘಟನೆಗಳು ನಡೆದಿದ್ದು ಬೆಳಕಿಗೆ ಬಂದಿದೆ. ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿದ ರೌಡಿ ಶೀಟರ್! ದರ್ಶನ್ ಪ್ರಕರಣದ ಬಳಿಕ ಕೂಡ ಜೈಲಲ್ಲಿ ಮೊಬೈಲ್ ಬಳಕೆ ಮುಂದುವರೆದಿದೆ. ಜೈಲ್ಲಿನಿಂದಲ್ಲೇ ಇನ್ಸ್ಟಾಗ್ರಾಮ್ ಮೂಲಕ ಬೆದರಿಕೆ ಹಾಕಿರುವ ಗಂಭೀರ ಆರೋಪ ಕೇಳಿಬಂದಿದೆ. 2021…













