Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದ 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಇದೀಗ ಚಾರ್ಜ್ ಶೀಟ್ನ ಪ್ರತಿಯೊಂದು ಇದೀಗ ವೈರಲ್ ಆಗಿದೆ. ಹೌದು ರೇಣುಕಾಸ್ವಾಮಿ ಪವಿತ್ರ ಗೌಡಗೆ ಮೆಸೇಜ್ ಮಾಡಿರುವುದರಿಂದ ಹಿಡಿದು ಆತನನ್ನು ಕಿಡ್ನ್ಯಾಪ್ ಮಾಡಿಕೊಂಡು ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಪಟ್ಟಣಗೆರೆ ಶೆಡ್ಗೆ ತಂದಿದ್ದು, ಅಲ್ಲಿ ರೇಣುಕಾ ಸ್ವಾಮಿಯ ಮೇಲೆ ಉಳಿದ ಆರೋಪಿಗಳು ಹಲ್ಲೆ ಮಾಡಿದ್ದು, ನಂತರ ದರ್ಶನ್ ಪವಿತ್ರ ಗೌಡ ಕೂಡ ರೇಣುಕಾ ಸ್ವಾಮಿಯ ಮೇಲೆ ಹಲ್ಲೆ ಮಾಡಿ, ಆಟ ಮರಣ ಹೊಂದಿದ ನಂತರ ನಂತರ ಶವವನ್ನು ರಾಜ್ಯ ಕಾಲುವಿಗೆ ಬಿಸಾಡಿದ್ದು, ಅನಂತರ ಕೆಲವು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದು ಎಲ್ಲಾ ಅಂಶಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಇನ್ನೊಂದೆಡೆ ಪೊಲೀಸರು ಮಹಜರು ನಡೆಸುತ್ತಿರುವ ಸಂದರ್ಭದಲ್ಲಿ ದರ್ಶನ ಶೂ ಕೊಟ್ಟಿರುವುದು ಫೋಟೋ ಇದೀಗ ವೈರಲ್ ಆಗಿದೆ. ದರ್ಶನ್ ಬಳಸಿದ್ದ ಶೂ ವನ್ನು ಪತ್ನಿ ವಿಜಯಲಕ್ಷ್ಮಿ ಅವರು ಬ್ಯಾಗಲ್ಲಿ ಹಾಕಿ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರ ಗೌಡ, ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಜೈಲು ಸೇರಿದ್ದಾರೆ. ಕಳೆದ ಮೂರು ತಿಂಗಳಿನಿಂದ ಪವಿತ್ರ ಗೌಡ ಜೈಲಿನಲ್ಲಿ ಇರುವ ಕಾರಣದಿಂದ ಪವಿತ್ರ ಗೌಡ ನಿವಾಸದಲ್ಲಿರುವ ಎರಡು ಶ್ವಾನಗಳನ್ನು ದರ್ಶನ್ ಮನೆಗೆ ಇದೀಗ ಶಿಫ್ಟ್ ಮಾಡಲಾಗುತ್ತಿದೆ. ಹೌದು ಪವಿತ್ರಾಗೌಡ ಮನೆಯಲ್ಲಿ ಇರುವ ನೆಚ್ಚಿನ ನಾಯಿಗಳದ ಬೆಲ್ಜಿಯನ್ ಮೆಲೋಸಿಸ್ ಹಾಗೂ ಫ್ರೆಂಚ್ ಬುಲ್ ಡಾಗ್ ನಾಯಿಗಳನ್ನು ದರ್ಶನ್ ಮನೆಗೆ ಶಿಫ್ಟ್ ಮಾಡಲಾಗುತ್ತೆ. ಎರಡು ಶ್ವಾನಗಳು ದರ್ಶನ್ ಮನೆಗೆ ಶಿಫ್ಟ್ ಆಗಲಿದೆ ಮನೆಯಲ್ಲಿರುವ ಎರಡು ನಾಯಿಗಳನ್ನ ದರ್ಶನ ಅವರ ಮನೆಗೆ ಶಿಫ್ಟ್ ಮಾಡಲಾಗುತ್ತಿದೆ. ಪವಿತ್ರ ಗೌಡ ಮನೆಯಲ್ಲಿ ನಾಯಿಗಳನ್ನು ನೋಡಿಕೊಳ್ಳಲು ಯಾರು ಇಲ್ಲ. ಅವುಗಳ ಆರೋಗ್ಯದ ದೃಷ್ಟಿಯಿಂದ ದರ್ಶನ ಮನೆಗೆ ಈ ಎರಡು ನಾಯಿಗಳನ್ನ ಶಿಫ್ಟ್ ಮಾಡಲಾಗುತ್ತದೆ ಎಂದು ಪ್ರಾಣಿ ದಯಾ ಸಂಘದ ಸದಸ್ಯರಾಗಿರುವಂತಹ ಹರೀಶ್ ಸ್ಪಷ್ಟನೆ ನೀಡಿದರು.
ಉಡುಪಿ : ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ಘೋಷಿಸಿದ್ದ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಯನ್ನು ತಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ವೇಳೆ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದಕ್ಕೆ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಹೌದು ಕಳೆದ 2 ದಿನಗಳ ಹಿಂದೆ ಉಡುಪಿಯಲ್ಲಿ ಪ್ರಾಂಶುಪಾಲರಿಗೆ ಘೋಷಿಸಿದ್ದ ಪ್ರಶಸ್ತಿ ತಡೆ ಹಿಡಿದಿದ್ದಕ್ಕೆ ಬಿಜೆಪಿ ನಾಯಕರು ಮಣಿಪಾಲದ ಸಿಂಡಿಕೇಟ್ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ರಸ್ತೆ ತಡೆದು ಮುಖ್ಯಮಂತ್ರಿಗಳ ಪ್ರತಿಕೃತಿ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ್ದರು. ಹಿಂದೂ ವಿರೋಧಿ ಸಿದ್ದರಾಮಯ್ಯರನ್ನು ತೊಲಗಿಸಿ ಎಂದು ಘೋಷಣೆ ಕೂಗಿದ್ದರು. ಶಾಂತಿಗೆ ಭಂಗ ತರುವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆ ಎಂದು ಎನ್ಎಸ್ಯುಐ ಮುಖಂಡ ಸೌರಭ್ ಬಲ್ಲಾಳ್ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಸದಸ್ಯರಾದ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ…
ಕಲಬುರ್ಗಿ : ಕಲಬುರ್ಗಿಯಲ್ಲಿ ಅಮಾಯಕ ಯುವತಿ ನೀರನ್ನು ಬಳಸಿಕೊಂಡು ಹನಿ ಟ್ರ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷರು ಆಗಿರುವಂತಹ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯೆ ನೀಡಿ ದಲಿತ ಸೇನೆ ಕ್ರೂರ ಸಂಘಟನೆ, ಎಲ್ಇಟಿ ಸಂಘಟನೆ ಮೀರಿಸುವಂತಿದೆ ಎಂದು ಕಿಡಿ ಕಾರಿದರು. ಕಲ್ಬುರ್ಗಿಯಲ್ಲಿ ಯುವತಿಯರನ್ನು ಬಳಸಿಕೊಂಡು ಹನಿ ಟ್ರಾಪ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ಸಿದ್ದಲಿಂಗ ಸ್ವಾಮಿಜಿ ಮಾತನಾಡಿ, ಇತ್ತೀಚಿಗೆ ಕಲಬುರ್ಗಿ ಜಿಲ್ಲೆ ಕುಖ್ಯಾತಿಗೆ ಒಳಗಾಗುತ್ತಿದೆ. ಸಮಾಜ ಸೇವೆ ಮುಖವಾಡ ಧರಿಸಿ ಹೆಣ್ಣು ಮಕ್ಕಳನ್ನು ದಂಧೆ ಮೈಗೆ ಬಳಸುತ್ತಿದ್ದಾರೆ. ದಲಿತ ಸೇನೆ ಕ್ರೂರ ಸಂಘಟನೆ, ಎಲ್ಇಟಿ ಸಂಘಟನೆ ಮೀರಿಸುವಂತಿದೆ ಎಂದು ವಾಗ್ದಾಳಿ ನಡೆಸಿದರು. ಅಮಾಯಕ ಮಹಿಳೆಯ ಮೇಲೆ ಅತ್ಯಾಚಾರವಾಗಿದೆ. ಭ್ರೂಣ ಹತ್ಯೆ ಮಹಾ ಪಾಪ. ದಲಿತ ಸಂಘಟನೆಯವರು ಭ್ರೂಣ ಹತ್ಯೆ ಮಾಡಿಸಿದ್ದಾರೆ. ನ್ಯಾಯಕ್ಕಾಗಿ ಬಂದ ಮಹಿಳೆಯನ್ನು ಹನಿ ಟ್ರ್ಯಾಪ್‍ಗೆ ಬಳಸಿಕೊಂಡಿದ್ದಾರೆ. ನಾಗರಿಕ ಸಮಾಜ ತಲೆತಗ್ಗಿಸುವಂತಹ ಆಗಿದೆ. ಪೊಲೀಸರು ತನಿಖೆಗೆ ಮುಂದಾಗುತ್ತಿಲ್ಲ. ಸ್ಟ್ರಾಂಗ್ ಮಿನಿಸ್ಟರ್ ಪವರ್ಫುಲ್ ಕಮಿಷನರ್ ಇದ್ದರು ತನಿಖೆ…
ಕಲಬುರ್ಗಿ : ತನ್ನ ಪತ್ನಿಯೊಂದಿಗೆ ಕೆಲಸ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಪತ್ನಿಯ ಎದುರೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಪತಿಯನ್ನು ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಗ್ರಾಮದಲ್ಲಿ ನಡೆದಿದೆ. ಹೌದು ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಕೆಸರಟಗಿ ಗ್ರಾಮದ ಬಳಿ ನಡೆದಿದೆ. ಕಪಿಲ್ ಗಾಯಕ್ವಾಡ್ (37) ಕೊಲೆಯಾದ ವ್ಯಕ್ತಿ. ಕಪಿಲ್ ಗಾಯಕ್ವಾಡ್ ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಕೆಸರಟಗಿಗೆ ಹೋಗುತ್ತಿದ್ದರು. ಮಾರ್ಗ ಮಧ್ಯೆ, ಕೆಸರಟಗಿ ಬಳಿಯ ರೈಲ್ವೆ ಅಂಡರ್ ಬ್ರೀಡ್ಜ್ ಬಳಿ ಕಪಿಲ್ ಗಾಯಕ್ವಾಡ್ ಅವರನ್ನು ಅಡ್ಡಗಟ್ಟಿ ಪತ್ನಿಯ ಮುಂದೆ ಹತ್ಯೆ ಮಾಡಲಾಗಿದೆ.ಕೊಲೆ ಹಿಂದೆ ಕಪಿಲ್ ಗಾಯಕ್ವಾಡ್ ಪತ್ನಿ ಭಾಗ್ಯ ಕೈವಾಡವಿದೆ ಎಂದು ಮೃತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಬಗ್ಗೆ ಸೂಕ್ತ ತನೀಖೆ ನಡೆಸುವಂತೆ ಕುಟುಂಬಸ್ಥರು ಆಗ್ತಹಿಸಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ : ಮೇಲಾಧಿಕಾರಿಗಳ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಕಂ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ನಡೆದಿದೆ. ಹೌದು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನಲ್ಲಿ ತಮ್ಮ ಮನೆಯಲ್ಲಿ ತಡರಾತ್ರಿ ಚಾಲಕ ಕಂ ಕಂಡಕ್ಟರ್ ಶ್ರೀಶೈಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಬೀಳಗಿ ಹನಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. 2022 ರಲ್ಲಿ ಮೇಲಾಧಿಕಾರಿಗಳ ಕಿರುಕುಳದ ಬಗ್ಗೆ ಶ್ರೀಶೈಲ್ ಮಾತನಾಡಿದರು ಅಲ್ಲದೆ ಮೇಲಾಧಿಕಾರಿಗಳ ಕಿರುಕುಳದ ಕುರಿತು ಶ್ರೀಶೈಲ ವಿಡಿಯೋ ಕೂಡ ಮಾಡಿದ್ದ ಹಳೆ ವಿಡಿಯೋ ಕೂಡ ವೈರಲ್ ಆಗಿತ್ತು.
ಬಾಗಲಕೋಟೆ : ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಉಳಿಯುತ್ತಾರೋ ಇಲ್ವೋ ಗೊತ್ತಿಲ್ಲ. ಅಕಸ್ಮಾತ್ ತೀರ್ಪಿನಲ್ಲಿ ಸಿದ್ದರಾಮಯ್ಯನವರದ್ದೇ ತಪ್ಪಿದೆ ಎಂದು ಎಫ್‌ಐಆರ್ ದಾಖಲಾದರೆ ರಾಜೀನಾಮೆ ಕೊಡಬಹುದು, ಕೊಡಬೇಕಾಗಬಹುದು ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ ನೀಡಿದರು.. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರದ್ದೇ ತಪ್ಪಿದೆ ಎಂದು ಎಫ್‌ಐಆರ್ ದಾಖಲಾದರೆ ರಾಜೀನಾಮೆ ಕೊಡಬಹುದು, ಕೊಡಬೇಕಾಗಬಹುದು. ಆ ಸಂದರ್ಭದಲ್ಲಿ ಏನಾಗಬಹುದು. ಸಿದ್ದರಾಮಯ್ಯ ಅಪೇಕ್ಷೆ ಪಡುವಂತಹ ವ್ಯಕ್ತಿ ಸಿಎಂ ಆಗ್ತಾರಾ? ಸಿದ್ದರಾಮಯ್ಯ ಇಷ್ಟಪಡುವ ವ್ಯಕ್ತಿ ಸಿಎಂ ಆಗಲು ಬಿಡ್ತಾರಾ? ಕಾಂಗ್ರೆಸ್‌ನ ಡಿಕೆಶಿ, ಎಂಬಿ ಪಾಟಿಲ್ ಉಳಿದಂತೆ ಎಲ್ಲ ಪ್ರಮುಖರು ಅವರಿಗೆ ಅವಕಾಶ ಕೊಡಲಿಲ್ಲ ಅಂದರೆ ಸರ್ಕಾರ ಎಷ್ಟರಮಟ್ಟಿಗೆ ಇರುತ್ತೆ ಇರೋದಿಲ್ಲ, ಅದು ಜಡ್ಜ್ಮೆಂಟ್ ಮೇಲೆ ತೀರ್ಮಾನ ಆಗುತ್ತದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಖುರ್ಚಿ ಮೇಲೆ ಬಹಳಷ್ಟು ಜನರ ಕಣ್ಣಿದೆ. ಆದರೆ ಸಿಎಂ ಖುರ್ಚಿ ಮೇಲೆ ಟವೆಲ್ ಹಾಸ್ತಾ ಇದಾರೆ ಎಂಬ ಪದ ನಾನು ಬಳಸುವುದಿಲ್ಲ. ಆದರೆ ಬಹಳ ಜನಕ್ಕೆ (ಸಿಎಂ) ಅದರ…
ಬೆಳಗಾವಿ : ಇಂದಿನ ಆಧುನಿಕ ಕಾಲದಲ್ಲಿ ಮೊಬೈಲ್, ಕಂಪ್ಯೂಟರ್ ಇಲ್ಲದೆ ಜೀವನವೇ ಇಲ್ಲ ಎನ್ನುವಂತಹ ಮನಸ್ಥಿತಿಯಲ್ಲಿ ನಾವೆಲ್ಲರೂ ಇದ್ದೇವೆ. ಆದರೆ ಇದನ್ನೇ ದುರುಪಯೋಗ ಮಾಡಿಕೊಂಡು ಅಡ್ಡ ದಾರಿ ಹಿಡಿಯುವವರು ಇದ್ದಾರೆ. ಇದೀಗ ಬೆಳಗಾವಿಯಲ್ಲಿ ಬೆತ್ತಲೆ ಗ್ಯಾಂಗ್ ಒಂದು ಆಕ್ಟಿವ್ ಆಗಿದ್ದು ಮಹಿಳೆಯರು ಮತ್ತು ಯುವತಿಯರೆ ಈ ಒಂದು ಗ್ಯಾಂಗಿಗೆ ಟಾರ್ಗೆಟ್ ಆಗಿದ್ದಾರೆ. ಹೌದು ಈ ಒಂದು ಗ್ಯಾಂಗ್ ಬೆಳಗಾವಿಯಲ್ಲಿ ಆಕ್ಟಿವ್ ಆಗಿದ್ದು, ಮುಂಬೈ ಕ್ರೈಂ ಬ್ರ್ಯಾಂಚ್, ಗುಪ್ತಚರ ಇಲಾಖೆಯಿಂದ ಕರೆ ಮಾಡುತ್ತಿದ್ದೇವೆ ಅಂತ ವಿಡಿಯೋ ಕಾಲ್ ಮಾಡಿ, ಮಹಿಳೆಯರ ನಗ್ನ ದೇಹವನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿರುವ ಬಗ್ಗೆ ಬೆಳಗಾವಿ ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೃತ್ಯ ಹೇಗೆ ನಡೆಯುತ್ತೆ? ಇನ್ನೂ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾತನಾಡಿ, ಹೊಸ ಮಾದರಿಯ ಸೈಬರ್ ಕ್ರೈಮ್ ಬೆಳಕಿಗೆ ಬಂದಿದೆ. ಮಹಿಳೆಯರಿಗೆ ಮೇಲ್, ಮೆಸೇಜ್, ಕರೆ ಅಥವಾ ವಾಟ್ಸಪ್ ಮೂಲಕ…
ಬೆಳಗಾವಿ : ಒಂದು ಕಡೆ ಮುಡಾ ಹಗರಣದಿಂದ ಹೇಗೆ ಪಾರಾಗಬೇಕು ಎಂದು ತಲೆಕೆಡಿಸಿಕೊಂಡಿರುವ ಸಿದ್ದರಾಮಯ್ಯ, ಇನ್ನೊಂದಡೆ ಉಳಿದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಿಎಂ ಕುರ್ಚಿಯ ಮೇಲೆ ಕಣ್ಣು ಬಿದ್ದಿದೆ. ಇದರ ಮಧ್ಯ ಹಲವು ಸಚಿವರು ಈಗಾಗಲೇ ನಾನು ಸಿಎಂ ಆಗುತ್ತೇನೆ ಎಂಬ ಹೇಳಿಕೆಯನ್ನು ಕೂಡ ನೀಡಿದ್ದಾರೆ. ಇನ್ನು ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ, ಮಾಧ್ಯಮಗಳೊಂದಿಗೆ ಮಾತನಾಡಿ, 2028 ರಲ್ಲಿ ತಾವು ಈ ಹಿಂದೆ ಸಿಎಂ ಆಗುವ ಹೇಳಿಕೆ ನೀಡಿದ್ದೀರಿ ಎಂದು ಮಾಧ್ಯಮದ ಪ್ರಶ್ನೆ ಉತ್ತರಿಸಿದವರು ಅದಕ್ಕೆ ಇನ್ನೂ ಟೈಮ್ ಇದೆ. ಇನ್ನು ನಾಲ್ಕು ವರ್ಷ ಎಲ್ಲಾ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಬೆಂಬಲಿಗರು ಕಾಯಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ಮುನ್ಸೂಚನೆ ನೀಡಿದ್ರಾ ಎಂದು ಪ್ರಶ್ನೆ ಉದ್ಭವಿಸಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪರ ಪೋಸ್ಟರ್ ಅಭಿಯಾನ ಆರಂಭಿಸಲಾಗಿದೆ ಎನ್ನುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಅಗಲಿ ಎಂದು ಸ್ವಾಭಾವಿಕವಾಗಿ ಹೇಳುತ್ತಾರೆ ಅದನ್ನು ಸೀರಿಯಸ್ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಯಾರೋ…
ಬೆಳಗಾವಿ : ಒಂದು ಕಡೆ ಮುಡಾ ಹಗರಣದಿಂದ ಹೇಗೆ ಪಾರಾಗಬೇಕು ಎಂದು ತಲೆಕೆಡಿಸಿಕೊಂಡಿರುವ ಸಿದ್ದರಾಮಯ್ಯ, ಇನ್ನೊಂದಡೆ ಉಳಿದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಿಎಂ ಕುರ್ಚಿಯ ಮೇಲೆ ಕಣ್ಣು ಬಿದ್ದಿದೆ. ಇದರ ಮಧ್ಯ ಹಲವು ಸಚಿವರು ಈಗಾಗಲೇ ನಾನು ಸಿಎಂ ಆಗುತ್ತೇನೆ ಎಂಬ ಹೇಳಿಕೆಯನ್ನು ಕೂಡ ನೀಡಿದ್ದಾರೆ. ಇದೀಗ ಸಚಿವ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಪೋಸ್ಟ್ ವೈರಲ್ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸತೀಶ್ ಜಾರಕಿಹೊಳಿ ಪರ ಅಭಿಯಾನ ಆರಂಭಿಸಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಪೋಸ್ಟ್ ಕಾಡಿದಾಡುತ್ತಿದೆ ಸಿಎಂ ಸತೀಶ್ ಜಾರಕಿಹೊಳಿ ಅಂತ ಗ್ರೂಪ್ ಕ್ರಿಯೇಟ್ ಮಾಡಲಾಗಿದ್ದು ಪತ್ರಿಕೆಯಲ್ಲಿ ಜಾಹೀರಾತು ನೀಡಿ ಅಭಿಮಾನಿಗಳಿಂದ ಅಭಿನಂದನೆ ಸಲ್ಲಿಸಲಾಗುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಸತೀಶ್ ಜಾರಕಿಹೊಳಿ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿದ್ದಾರೆ. ದೆಹಲಿಗೆ…














