Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕ ಮತ್ತು ಕಂಡಕ್ಟರ್ ಗಳ ಮೇಲೆ ಹಲ್ಲೆ ನಡೆಸುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಕುಡಿದ ನಶೆಯಲ್ಲಿದ್ದ ಇಬ್ಬರು ವ್ಯಕ್ತಿಗಳು ಬಿಎಂಟಿಸಿ ಕಂಡಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಶಾಂತಿನಗರ ಬಳಿ ನಡೆದಿದೆ. ಹೌದು ಪಾನಮತ್ತ ಇಬ್ಬರು ವ್ಯಕ್ತಿಗಳಿಂದ ಬಿಎಂಟಿಸಿ ಬಸ್ ನಲ್ಲಿ ಗಲಾಟೆ ನಡೆದಿದ್ದು, ಪ್ರಶ್ನೆ ಮಾಡಿದ ಕಂಡಕ್ಟರ್ ರಾಜಣ್ಣ ಎನ್ನುವವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಶಾಂತಿನಗರ ಬಳಿ ಈ ಒಂದು ಘಟನೆ ನಡೆದಿದೆ. ಗೋಪಾಲ ಹಾಗೂ ಹನುಮಂತಯ್ಯನನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಮೆಜೆಸ್ಟಿಕ್ ನಿಂದ ಗಂಗೊಂಡನಹಳ್ಳಿಗೆ ಬರುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಪಾನಮತ್ತರಾಗಿ ಇಬ್ಬರು ಬಿಎಂಟಿಸಿ ಬಸ್ನಲ್ಲಿ ಗಲಾಟೆ ಮಾಡಿದ್ದಾರೆ. ಈ ವೇಳೆ ಪ್ರಶ್ನೆ ಮಾಡಿದ ಕಂಡಕ್ಟರ್ ರಾಜಣ್ಣ ಮೇಲೆ ಗೋಪಾಲ್ ಮತ್ತು ಹನುಮಂತಯ್ಯ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಕುರಿತು…
ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಕೊಲೆ ಆರೋಪಿಯ ಮೇಲೆ ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣೆಯ ಪೊಲೀಸರು ಫೈರಿಂಗ್ ಮಾಡಿ ಅರೆಸ್ಟ್ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ದೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ. ಕೊಲೆ ಆರೋಪಿ ಮೇಲೆ ಸರ್ಜಾಪುರ ಪೊಲೀಸರಿಂದ ಫೈರಿಂಗ್ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಮೇಲೆ ಫೈರಿಂಗ್ ಮಾಡಲಾಗಿದೆ. ದೊಮ್ಮಸಂದ್ರದ ಬಳಿ ಫೈರಿಂಗ್ ನಡೆಸಿ ಆರೋಪಿ ಶ್ರೀನಿವಾಸ್ ನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ದೊಮ್ಮಸಂದ್ರ ಗ್ರಾಮದಲ್ಲಿ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಮಾಜಿ ರೌಡಿಶೀಟರ್ ವೆಂಕಟೇಶ್ ಅಲಿಯಾಸ್ ವೆಂಕಿಯ ಕೊಲೆ ಆಗಿತ್ತು. ಜನವರಿ 28ರ ರಾತ್ರಿ ವೆಂಕಟೇಶ್ ನನ್ನು ಶ್ರೀನಿವಾಸ್ ಮತ್ತು ಗ್ಯಾಂಗ್ ಕೊಲೆ ಮಾಡಿತ್ತು. ಈ ಒಂದು ಕೊಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರು ಫೈರಿಂಗ್ ಮಾಡಿದ್ದಾರೆ.ವೆಂಕಟೇಶ್ ನನ್ನು ಬರ್ಬರವಾಗಿ ಹತ್ಯೆ ಮಾಡಿ ಶ್ರೀನಿವಾಸ್ ಮತ್ತು ಗ್ಯಾಂಗ್ ಪರಾರಿಯಾಗಿತ್ತು. ಈ ಸಂದರ್ಭದಲ್ಲಿ…
ತುಮಕೂರು : ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತುಮಕೂರಿನ ಜುವೆಲ್ಲರೀ ಶಾಪ್ ಮಾಲೀಕನ ವಂಚನೆ ಕೇಸ್ ನಲ್ಲಿ ಮಾಲೀಕ ಪತ್ತೆಯಾಗಿದ್ದಾನೆ. ನಾಪತ್ತೆಯಾಗಿದ್ದ ಜ್ಯುವೆಲರಿ ಶಾಪ್ ಮಾಲೀಕನನ್ನ ಅರೆಸ್ಟ್ ಮಾಡಲಾಗಿದೆ. ಹೌದು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಚಿನ್ನ ಖರೀದಿಸಿ, ಬೆಲೆ ಹೆಚ್ಚಾದಾಗ ಮಾರಾಟ ಮಾಡಿ ದುಪ್ಪಟ್ಟು ಲಾಭಕೊಡುವುದಾಗಿ ಜನರನ್ನು ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದ ಆಕಾಶ್ ಜ್ಯುವೆಲರ್ಸ್ ಮಾಲೀಕ ಶಿವಾನಂದಮೂರ್ತಿ, ಪತ್ನಿ ಅನ್ನಪೂರ್ಣ ಅವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆಕಾಶ್ ಜ್ಯುವೆಲರ್ಸ್ ಮಾಲೀಕರ ವಿರುದ್ಧ ಜ.29ರಿಂದ ಫೆ.2ರ ವರೆಗೆ ನಗರ ಠಾಣೆಯಲ್ಲಿ 56 ದೂರುಗಳು ಸಲ್ಲಿಕೆಯಾಗಿವೆ. ಮೊದಲ ದಿನ 50 ಕ್ಕೂ ಹೆಚ್ಚು ಜನ ಠಾಣೆಯ ಮೆಟ್ಟಿಲು ಹತ್ತಿದ್ದರು. ಈ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗಿದ್ದು ಭಾನುವಾರವೂ ಹಲವರು ದೂರು ಸಲ್ಲಿಸಿದ್ದರ್‌ಉ. ಕೋಟಿಗಟ್ಟಲೆ ಹಣ ವಂಚಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಸಿದ್ದಲಿಂಗಪ್ಪ ಎಂಬುವರು ನೀಡಿದ ದೂರಿನ ಮೇರೆಗೆ ಶಿವಾನಂದಮೂರ್ತಿ, ಅನ್ನಪೂರ್ಣ, ಪುತ್ರ ಆಕಾಶ್ ಮತ್ತು ಇತರರ ವಿರುದ್ಧ…
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನಿನ್ನೆ ಒಂದೇ ದಿನ 6 ಜನ ಬಲಿಯಾಗಿದ್ದು, ಬೆಳಗಾವಿ, ಹಾವೇರಿ, ಹಾಸನ, ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಸೇರಿದಂತೆ ಒಟ್ಟು 6 ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಅಡವಿ ಆಂಜನೇಯ ಬಡಾವಣೆಯಲ್ಲಿ ಮಾಲತೇಶ್ (42) ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳದಿಂದ ನೊಂದು ಮನೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಹಾಸನ ಜಿಲ್ಲೆಯ ಅರಕಲಗೂಡ ತಾಲೂಕಿನ ಕಂಟೇನಹಳ್ಳಿಯಲ್ಲಿ ರೈತ ರವಿ (50) ಎಂಬುವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ ವಿವಿಧ ಸಂಘ, ಮೈಕ್ರೋ ಫೈನಾನ್ಸ್ ಗಳಿಂದ 9 ಲಕ್ಷ ಸಾಲ ಮಾಡಿದ್ದರು. ಜೊತೆಗೆ ಶುಂಠಿ ಬೆಲೆ ಕುಸಿತ ಕಂಡಿದ್ದು, ಇದರಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಚ್.ನಾಗಸಂದ್ರ ಗ್ರಾಮದಲ್ಲಿ ಎನ್. ಆರ್ ನರಸಿಂಹಯ್ಯ (58) ಎಂಬುವರು ನೇಣಿಗೆ ಶರಣಾಗಿದ್ದಾರೆ. ಆಟೋ…
ಬೆಂಗಳೂರು : ಜಮೀನು ಮಾಲೀಕರ ಹೆಸರನ್ನು ಪಹಣಿಯಲ್ಲಿ ಸೇರಿಸಲು 2 ಲಕ್ಷ ಲಂಚ ಪಡೆಯುತ್ತಿದ್ದ ಯಲಹಂಕ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಸೇರಿ ಮೂವರನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಮಧ್ಯವರ್ತಿಗಳಾದ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕ ನಾಗರಾಜು ಮತ್ತು ಸಂದೀಪ್ ಹಾಗೂ ಮುನಿಶಾಮಿ ರೆಡ್ಡಿ ಬಂಧಿತ ಆರೋಪಿಗಳು. ಜಮೀನಿನ ದಾಖಲೆಗೆ ಮಾಲೀಕರ ಹೆಸರು ಸೇರಿಸುವಂತೆ ವಕೀಲ ಮಹೇಶ್ ಅವರು ಅರ್ಜಿ ಸಲ್ಲಿಸಿದ್ದರು. ಕೆಲಸ ಮಾಡಿಕೊಡಲು ವಿಶೇಷ ತಹಶೀಲ್ದಾರ್ ಅವರು 10 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 3 ಲಕ್ಷ ಪಡೆದುಕೊಂಡಿದ್ದರು. ಎರಡನೇ ಕಂತಿನಲ್ಲಿ 2 ಲಕ್ಷ ಕೊಡುವಂತೆ ಸೂಚಿಸಿದ್ದರು. ಈ ಕುರಿತು ಮಹೇಶ್ ಅವರು ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ದೂರು ನೀಡಿದ್ದರು. ವಿಶೇಷ ತಹಶೀಲ್ದಾರ್ ಸೂಚನೆಯಂತೆ ನಾಗರಾಜು ಅವರನ್ನು ಭೇಟಿಮಾಡಿದ ದೂರುದಾರ 2 ಲಕ್ಷ ನಗದನ್ನು ನೀಡಿದರು. ನಾಗರಾಜು ಹಣವನ್ನು ತನ್ನ ಸಂಬಂಧಿಯೂ ಆದ ವಿಐಟಿ ಕಾಲೇಜು ಪ್ರಯೋಗಾಲಯದ ಸಿಬ್ಬಂದಿ ಸಂದೀಪ್ ಕೈಗೆ ನೀಡಿದ್ದರು. ತಕ್ಷಣ…
ಹಾವೇರಿ : ಹಾವೇರಿಯಲ್ಲಿ ಘೋರವಾದ ಘಟನೆ ನಡೆದಿದ್ದು, ಎಗ್ ರೈಸ್ ನಲ್ಲಿ ವಿಷ ಬೆರೆಸಿ ಮೊದಲು ಮಕ್ಕಳಿಗೆ ತಿನ್ನಿಸಿ ಬಳಿಕ ತಂದೆ ತಾನು ಕೂಡ ತಿಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾವೇರಿ ತಾಲೂಕಿನ ಹಳೇರಿತ್ತಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗಪ್ಪ ತಿಪ್ಪಣ್ಣ ಪೌಡೆಪ್ಪನವರ ಎಂಬುವವರು ತಮ್ಮ ಮಕ್ಕಳಿಬ್ಬರಿಗೆ ವಿಷವುಣಿಸಿ ತಾವೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಪತ್ನಿ ಹಾಗೂ ಇಬ್ಬರು ಮಕ್ಕಳು, ಹಳೇರಿತ್ತಿಯಲ್ಲಿ ವಾಸವಿದ್ದರು. ಇತ್ತೀಚೆಗಷ್ಟೇ ಊರಿಗೆ ಬಂದಿದ್ದ ನಾಗಪ್ಪ, ಸೋಮವಾರ ತಮ್ಮಿಬ್ಬರ ಮಕ್ಕಳಿಗೆ ವಿಷ ಮಿಶ್ರಣ ಮಾಡಿದ್ದ ಎಗ್‌ರೈಸ್ ತಿನ್ನಿಸಿದ್ದ. ನಂತರ, ತಾವೂ ಅದೇ ಎಗ್‌ರೈಸ್ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಗಪ್ಪ ಅವರು ವಿವಿಧ ಕಡೆಗಳಲ್ಲಿ ಸಾಲ ಮಾಡಿದ್ದರು. ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿರುವ ಅನುಮಾನವಿದೆ. ಜೊತೆಗೆ, ಕೌಟುಂಬಿಕ ವಿಚಾರವೂ ಕಾರಣವಾಗಿರಬಹುದು. ಪೊಲೀಸರು ಸೂಕ್ತ ತನಿಖೆ ನಡೆಸಿ, ನಿಜಾಂಶ ತಿಳಿಸಬೇಕು ಎಂದು ಸಂಬಂಧಿಕರೊಬ್ಬರು ತಿಳಿಸಿದರು. ವಿಷದ ಆಹಾರ ಸೇವನೆಯಿಂದ ತೀವ್ರ ಅಸ್ವಸ್ಥಗೊಂಡಿದ್ದ ತಂದೆ ಹಾಗೂ ಮಕ್ಕಳಿಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ನೀಡಿರುವ…
ಬೆಂಗಳೂರು : ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸಿದೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ 8ನೇ ಮೈಲಿಯ ಪ್ರಕ್ರಿಯ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ. ಆದರೆ ಆಸ್ಪತ್ರೆಯ ವೈದ್ಯರು 2 ಲಕ್ಷ ಹಣ ವಸೂಲಿ ಮಾಡಿದ ಬಳಿಕ ಸಾವನ್ನು ದಡಪಡಿಸಿದ್ದಾರೆ ಎಂದು ಇದೀಗ ಕುಟುಂಬಸ್ಥರು ವೈದ್ಯರ ವಿರುದ್ಧ ಹಾಗೂ ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕಿತ್ಸೆ ಫಲಿಸಿದೆ ಜೆ ಬ್ಯಾಡರಹಳ್ಳಿ ನಿವಾಸಿ ರವಿಕಿರಣ್ (25) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜೆ. ಬ್ಯಾಡರಹಳ್ಳಿ ನಿವಾಸಿ ರವಿಕಿರಣ್ ಮನೆಯವರು ನಿಂದಿಸಿದ್ದಾರೆ ಎಂದು ನಿನ್ನೆ ಮನೆಯಲ್ಲಿ ವಿಷ ಸೇವಿಸಿದ್ದ. ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿತ್ತು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲು ವೈದ್ಯರು ಸಲಹೆ ನೀಡಿದರು. ಆದರೆ ಆಂಬುಲೆನ್ಸ್ ವಾಹನದ ಚಾಲಕ ಪ್ರಕ್ರಿಯೆ ಆಸ್ಪತ್ರೆಗೆ ದಾಖಲಿಸಿದ್ದ ರಾತ್ರಿ 9:00 ಸುಮಾರಿಗೆ ಚಿಕಿತ್ಸೆ ಫಲಿಸಿದೆ ರವಿಕಿರಣ್ ಸಾವನ್ನಪ್ಪಿದ್ದಾನೆ. ಎರಡು ಲಕ್ಷ ರೂಪಾಯಿ ಮಾಡಿದ…
ಬೆಂಗಳೂರು : ಬೆಂಗಳೂರಲ್ಲಿ ಹೊರರಾಜ್ಯಗಳಲ್ಲಿ ನೋಂದಣಿಯಾಗಿ ರಾಜ್ಯದಲ್ಲಿ ತೆರಿಗೆ ಪಾವತಿಸದೆ ವಂಚಿಸುತ್ತಿದ್ದ 30ಕ್ಕೂ ಹೆಚ್ಚಿನಐಷಾರಾಮಿ ಕಾರುಗಳನ್ನು ಬೆಂಗಳೂರು ದಕ್ಷಿಣ ವಲಯ ವ್ಯಾಪ್ತಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಐಷಾರಾಮಿ ಕಾರುಗಳಿಗೆ ತೆರಿಗೆ ವಂಚನೆಯಾಗುತ್ತಿರುವ ಕುರಿತಂತೆ ಕಳೆದ ಶುಕ್ರವಾರದಿಂದ ಭಾನುವಾರದವರೆಗೆ ಸಾರಿಗೆ ಅಧಿಕಾರಿಗಳು ವಿವಿಧೆಡೆ ಕಾರ್ಯ ಚರಣೆ ನಡೆಸಿದರು. ಈ ವೇಳೆ ಬೆನ್ಸ್, ಪೋರ್ಶ್, ಫೆರಾರಿ, ಬಿಎಂಡಬ್ಲ್ಯು ಸೇರಿ ದಂತೆ ಇನ್ನಿತರ ಸಂಸ್ಥೆಗಳ ಐಷಾರಾಮಿ ಕಾರುಗಳು ಹೊರರಾಜ್ಯಗಳಲ್ಲಿ ನೋಂದಣಿಯಾಗಿ ನಂತರ ರಾಜ್ಯದಲ್ಲಿ ಸಾರಿಗೆ ತೆರಿಗೆ ಪಾವತಿಸದೇ ಸಂಚರಿಸುವುದು ಪತ್ತೆಯಾಗಿದೆ. ಹೀಗೆ ಸುಮಾರು 30ಕ್ಕೂ ಹೆಚ್ಚಿನ ಕಾರು ಪತ್ತೆ ಮಾಡಿ ಅವನ್ನು ಜಪ್ತಿ ಮಾಡ ಲಾಗಿದೆ. ಈ ಕಾರುಗಳಿಂದ ಸುಮಾರು 3 ಕೋಟಿ ರು.ಗೂ ಹೆಚ್ಚಿನ ತೆರಿಗೆ ವಸೂಲಿ ಯಾಗುವ ನಿರೀಕ್ಷೆ ಹೊಂದಲಾಗಿದೆ.ದಕ್ಷಿಣ ವಲಯದ ಹೆಚ್ಚುವರಿ ಸಾರಿಗೆ ಆಯುಕ್ತ ಸಿ. ಮಲ್ಲಿಕಾರ್ಜುನ್ ಮಾರ್ಗ ದರ್ಶನದಲ್ಲಿ ಆರ್‌ಟಿಒಗಳಾದ ಬಿ. ಶ್ರೀನಿವಾಸ್ ಪ್ರಸಾದ್, ಎಲ್. ದೀಪಕ್, ಶ್ರೀನಿವಾಸಪ್ಪ, ರಂಜಿತ್ ಅವರನ್ನೊಳ ಗೊಂಡ…
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ನವರ ಅಟ್ಟಹಾಸಕ್ಕೆ ಅಂಕುಶ ಹಾಕಲು, ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಮುಂದಾಗಿದೆ. ಅದರಂತೆಯೇ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಸಿಎಂಗೆ ಡ್ರಾಫ್ಟ್ ಪ್ರತಿ ರವಾನಿಸಿದ್ದರು. ಇದೀಗ ಪರಿಶೀಲಿಸಿದ ಬಳಿಕ ಕರುಡು ಪ್ರತಿ ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ. 3 ವರ್ಷದ ಬದಲು 10 ವರ್ಷ ಜೈಲು ಶಿಕ್ಷೆ ಅಂತಾ ಕರಡು ಪ್ರತಿಯಲ್ಲಿ ಬದಲಾವಣೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಸುಗ್ರೀವಾಜ್ಞೆ ಹೊರಬೀಳಲಿದೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ವಿರುದ್ಧ ಸುಗ್ರೀವಾಜ್ಞೆ ಜಾರಿಗೆ ಗ್ರೀನ್ಸಿಗ್ನಲ್ ಸಿಕ್ಕಿತ್ತು. ಅದರಂತೆಯೇ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಸಿಎಂಗೆ ಡ್ರಾಫ್ಟ್ ಪ್ರತಿ ರವಾನೆ ಮಾಡಿದ್ದರು. ಇದೀಗ ಪರಿಶೀಲಿಸಿದ ಬಳಿಕ ಡ್ರಾಫ್ಟ್ ಪ್ರತಿ ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ. ಶಿಕ್ಷೆ ಪ್ರಮಾಣದಲ್ಲಿ 3 ವರ್ಷದ ಬದಲು 10 ವರ್ಷ ಜೈಲು ಶಿಕ್ಷೆಗೆ ಒಳಪಡಿಸೋಕೆ ಬದಲಾವಣೆ ಮಾಡಿ ಕರಡು ಪ್ರತಿ ರವಾನೆ ಮಾಡಲಾಗಿದೆ. ಇನ್ನೇನಿದ್ದರೂ ರಾಜ್ಯಪಾಲರ ಅಂಕಿತ ಒಂದೇ ಬಾಕಿ ಇದೆ.
ಬೆಂಗಳೂರು: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧದ ಚುನಾವಣಾ ಬಾಂಡ್ ಸುಲಿಗೆ ಆರೋಪ ಪ್ರಕರಣದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಅಸ್ಪಷ್ಟ ದೂರು ಎಂದು ಹೇಳಿ ಮೇಲ್ಮನವಿಯನ್ನು ವಜಾಗೊಳಿಸಿದೆ. ಆ ಮೂಲಕ ನಳಿನ್ ಕುಮಾರ್ ಕಟೀಲ್ಗೆ ರಿಲೀಫ್ ಸಿಕ್ಕಿದೆ. ಹೌದು ಈ ಕುರಿತು ಮೇಲ್ಮನವಿ ಅರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠವು ಜನಾಧಿಕಾರ ಸಂಘರ್ಷ ಪರಿಷತ್ತಿನ ಆದರ್ಶ ಅಯ್ಯರ್ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ವಿಚಾರಣೆ ಮಾಡಿದ್ದು, ಅಸ್ಪಷ್ಟ ದೂರು, ಸಂಪೂರ್ಣ ಊಹೆಯ ದೂರು ಎಂದು ಹೇಳಿದೆ. ಆ ಮೂಲಕ ಮೇಲ್ಮನವಿಯನ್ನು ವಜಾಗೊಳಿಸಿದೆ. ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್…












