Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚಿತ್ರದುರ್ಗದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ತಿರುವು ಪಡೆದುಕೊಂಡಿದ್ದು ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡುವ ಸಂದರ್ಭದಲ್ಲಿ ನಟ ದರ್ಶನವರೇ ರೇಣುಕಾ ಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದಾರೆ. ನಟ ದರ್ಶನ್ ಅವರು ರೇಣುಕಾ ಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದರಿಂದಲೇ ಆತ ಸಾವನಪ್ಪಿದ್ದಾನೆ ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಹೌದು ಈ ಒಂದು ಪ್ರಕರಣಕ್ಕೆ ಇದೀಗ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದ್ದು, ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿನ ಆರ್ ಆರ್ ನಗರದ ಪಟ್ಟಣಗೆರೆ ಶೆಡ್ ಗೆ ಕರೆದುಕೊಂಡು ಬಂದಾಗ ನಟ ದರ್ಶನ್ ರೇಣುಕಾ ಸ್ವಾಮಿ ಮರ್ಮಾಂಗಕ್ಕೆ ಒದಿದ್ದರಿಂದಲೇ ರೇಣುಕಾ ಸ್ವಾಮಿ ಮೃತಪಟ್ಟಿದ್ದಾನೆ ಎಂದು ಮತ್ತೊಬ್ಬ ಆರೋಪಿಯಾದ ದೀಪಕ್ ಪೊಲೀಸರ ಎದುರು ಬಾಯಿಬಿಟ್ಟಿದ್ದಾನೆ ಎಂಬ ಸ್ಪೋಟಕ ಮಾಹಿತಿ ಬೆರಂಗವಾಗಿದೆ. ಈಗಾಗಲೇ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐ ವಿಟ್ನೆಸ್ ಗಾಗಿ ದೀಪಕ್ ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ ಹಾಗಾಗಿ ದೀಪಕ್ ಈ ಒಂದು ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿದ್ದು ಕೋರ್ಟ್ ನಲ್ಲಿ ಕೂಡ ಇದೇ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ತಿರುವು ಪಡೆದುಕೊಂಡಿದ್ದು, ಈ ಒಂದು ಕೃತ್ಯದಲ್ಲಿ ಈಗಾಗಲೇ ಪವಿತ್ರ ಗೌಡ, ನಟ ದರ್ಶನ್ ಸೇರಿದಂತೆ 13 ಆರೋಪಿಗಳು ಜೈಲು ಪಾಲಾಗಿದ್ದಾರೆ ಇದರ ಬೆನ್ನಲ್ಲೇ ಇದೀಗ ಈ ಒಂದು ಪ್ರಕರಣದಲ್ಲಿ ಪೊಲೀಸರು ಶಮಿಲಾಗಿದ್ದಾರಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಹೌದು ರೇಣುಕಾಸ್ವಾಮಿ ಕೊಲೆ ನಂತರ ಆರೋಪಿಗಳು ಪಿಎಸ್ಐಯೊಬ್ಬರಿಗೆ ಕರೆ ಮಾಡಿದ್ದರು. ಆಗ, ನಮ್ಮ ಠಾಣಾ ವ್ಯಾಪ್ತಿಯಲ್ಲಿ ಹೆಣ ಹಾಕಬೇಡಿ ಎಂದು ಪಿಎಸ್ಐ ಹೇಳಿದ್ದರು ಎನ್ನಲಾಗಿದೆ. ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾಸ್ವಾಮಿಯನ್ನು ಹೊಡೆದು ಕೊಲೆ ಮಾಡಿದ ಆರೋಪ ದರ್ಶನ್ ಗ್ಯಾಂಗ್ ಮೇಲಿದೆ. ಈ ಪ್ರದೇಶದ ಬೆಂಗಳೂರಿನ ರಾಜರಾಜೇಶ್ವರಿನಗರ ಠಾಣಾ ವ್ಯಾಪ್ತಿಯಲ್ಲಿದೆ. ಪಿಎಸ್ಐ ಬಳಿ ಚರ್ಚಿಸಿದ ನಂತರವೇ ದರ್ಶನ್ ಗ್ಯಾಂಗ್ ರೇಣುಕಾಸ್ವಾಮಿ ಶವವನ್ನು ಕಾಮಾಕ್ಷಿಪಾಳ್ಯಕ್ಕೆ ಶವ ಕೊಂಡೊಯ್ದು ಎಸೆದಿದ್ದರು. ಅಲ್ಲದೆ, ದರ್ಶನ್ ಮತ್ತು 13ನೇ ಆರೋಪಿ ದೀಪಕ್ನನ್ನು ಪ್ರಕರಣದಿಂದ ಬಚಾವ್ ಮಾಡಲು 5 ಕೋಟಿ ರೂಪಾಯಿಗೆ ಡೀಲ್ ನಡೆಸಲು ಮುಂದಾಗಿದ್ದರು ಎಂಬ ಆರೋಪ ಇದೀಗ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನೀನಾಸಂ ಸತೀಶ ಪ್ರತಿಕ್ರಿಯೆ ನೀಡಿದ್ದು, ತಪ್ಪು ಯಾರೇ ಮಾಡಿದರು ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಯಾರೇ ಮಾಡಿದರು ಕಾನೂನು ಪ್ರಕಾರ ಶಿಕ್ಷೆ ಆಗಬೇಕು. ಊಹಾಪೋಹಗಳಿಗೆ ತಲೆಕೆಡಿಸಿಕೊಳ್ಳಬಾರದು ಈ ಬಗ್ಗೆ ವಾಣಿಜ್ಯ ಮಂಡಳಿ ಕೂಡ ಸೂಕ್ತ ಕ್ರಮ ಕೈಗೊಳ್ಳಲಿದೆ ಅಂದು ಬೆಂಗಳೂರಿನಲ್ಲಿ ಸ್ಯಾಂಡಲ್ವುಡ್ ನೀನಾಸಂ ಅಶ್ವಥ್ ಹೇಳಿಕೆ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎ1 ಆರೋಪಾಗಿರುವ ಪವಿತ್ರ ಗೌಡ ಏಟು ಆರೋಪಿ ಆಗಿರುವ ನಟ ದರ್ಶನ್ ಹಾಗೂ ಆರೋಪಿಗಳನ್ನು ಕರೆದುಕೊಂಡು ನಿನ್ನೆ ಪೊಲೀಸರು ಆರ್ ಆರ್ ನಗರದಲ್ಲಿರುವ ಪಟ್ಟಣಗೆರೆ ಶೆಡ್ ನಲ್ಲಿ ಸ್ಥಳ ಮಹಜರು ನಡೆಸಿದ್ದರು. ಇಂದು ಕೂಡ ಪೊಲೀಸರು ಆರೋಪಿಗಳ ವಿಚಾರಣೆಯನ್ನು ಮುಂದುವರಿಸಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಪೊಲೀಸರು ಭರ್ಜರಿ ಬೇಟೆಯಾಡಿದ್ದು,ಇದೀಗ ನಕಲಿ ಆರ್‌ಎಂಡಿ ಗುಟ್ಕಾ ತಯಾರಿಕ ಜಾಲವನ್ನು ಪತ್ತೆ ಮಾಡಿದ್ದು, 7 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 30 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕೂಡ ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಂತೇಶ್ ಮೂಲಿಮನಿ ಎಂಬುವವರ ದೂರಿನ ಮೇಲೆ ಕಾರ್ಯಾಚರಣೆ ಆರಂಭಿಸಿದ್ದ ಪೊಲೀಸರು, ಆರ್‌ಎಂಡಿ ಪಾನ್ ಮಸಾಲಾ ಮತ್ತು ಎಂ ಗೋಲ್ಡ್ ಸೆಂಟೆಡ್ ಟೊಬ್ಯಾಕೋ ಹೆಸರಿನ ಪೌಚ್ ತಯಾರಿಕೆ ಮಾಡುತ್ತಿದ್ದವರ ದಾಳಿ ಮಾಡಿ, ಏಳು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ದೆಹಲಿ, ಹೈದ್ರಾಬಾದ್, ಬೆಳಗಾವಿ ಹಾಗೂ ನಿಪ್ಪಾಣಿ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಮಹಮ್ಮದ ವಶೀಮ್ ಮುನೀರ, ಹಿಮಾಯತ, ಮಹ್ಮದ್, ವಿಕಾಸ್ ಚವ್ಹಾಣ, ಸಂತೋಷ ಬಳ್ಳೋಳ್ಳೆ, ಜಹೀರ , ಇಕ್ವಾಲ್ ಎಂದು ಹೇಳಲಾಗುತ್ತಿದ್ದು,ಸುಮಾರು 30 ಲಕ್ಷ ರೂ. ಮೌಲ್ಯದ ಎಂ ಗೋಲ್ಡ್ ಸೆಂಟೆಡ್ ಟೊಬ್ಯಾಕೋ ಹಾಗೂ ಆರ್‌ಎಂಡಿ ಪಾನ್ ಮಸಾಲಾ…
ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 18ರ ವರೆಗೆ ಎಸ್ಐಟಿ ಕಷ್ಟಡಿಗೆ ನೀಡಿ ಬೆಂಗಳೂರಿನ 42ನೇ ಎಸ್ಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಹೊಳೆನರಸೀಪುರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 42ನೆ ACMM ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಸೈಬರ್ ಕ್ರೈಂ ಠಾಣೆ ನಂಬರ್ 02/ 2024 ರಲ್ಲಿ ಕಸ್ಟಡಿಗೆ ನೀಡಿ ಎಂದು ಎಸ್ಐಟಿ ಅಧಿಕಾರಿಗಳು ನ್ಯಾಯಾಧೀಶರಿಗೆ ಮನವಿ ಮಾಡಿದ್ದರು. ಹೀಗಾಗಿ ಮನವಿ ಪುರಸ್ಕರಿಸಿ ಕೋರ್ಟ್ ಬಾಡಿ ವಾರೆಂಟ್ ಜಾರಿಗೊಳಿಸಿದೆ ಈ ಹಿನ್ನೆಲೆಯಲ್ಲಿ ಜೂನ್ 18 ರವರೆಗೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಕರ್ತರಿಗೆ ನೀಡಿ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಮಂಗಳೂರು : ಹಣ ಸುಲಿಗೆಗೆ ಇದೀಗ ಸೈಬರ್ ಖದೀಮರು ಹೊಸ ತಂತ್ರ ಅನುಸರಿಸುತ್ತಿದ್ದೂ, ನಗರ ವಿವಿಧ ಶಾಲೆಗಳಲ್ಲಿ ಕಲಿಯುತ್ತಿರುವ ಕೆಲ ವಿದ್ಯಾರ್ಥಿಗಳ ಪೋಷಕರಿಗೆ ಕಳೆದೆರಡು ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಶಾಲಾ ಅವಧಿಯಲ್ಲಿ ಪೋಷಕರನ್ನು ಬೆದರಿಸಿ ಹಣ ದೋಚುವ ಖದೀಮರ ಕುತಂತ್ರ ಇದಾಗಿದ್ದು, ಇಂತಹ ಕರೆಗಳ ಬಗ್ಗೆ ಪೋಷಕರು ಅಥವಾ ಶಿಕ್ಷಣ ಸಂಸ್ಥೆಗಳು ಭಯ ಪಡಬೇಕಾಗಿಲ್ಲ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ವಾಟ್ಸಾಪ್ ಮೂಲಕ ಸ್ವೀಕರಿಸಲಾದ ಈ ಕರೆಗಳು ಪೋಲೆಂಡ್ ಮತ್ತು ಪಾಕಿಸ್ತಾನದ ವಿದೇಶಿ ಸಂಖ್ಯೆಗಳನ್ನು ಹೊಂದಿದ್ದು, ಕರೆ ಮಾಡಿದಾತ ತಾನು ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡಿದ್ದಾನೆ. ಹಿಂದಿಯಲ್ಲಿ ಮಾತನಾಡುವ ವ್ಯಕ್ತಿ, ಕರೆ ಸ್ವೀಕರಿಸಿದ ಪೋಷಕರಿಗೆ, ತಮ್ಮ ಮಗ/ಮಗಳನ್ನು ಬಂಧಿಸಿದ್ದು, ಬಿಡುಗಡೆ ಮಾಡಲು ಹಣ ನೀಡುವಂತೆ ಒತ್ತಾಯಿಸಿದ್ದಾನೆ. ಸೈಬರ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಕರೆಗಳನ್ನು ಪರಿಶೀಲಿಸಿದಾಗ ಇವುಗಳು ನಕಲಿಯಾಗಿದ್ದು, ವಿದ್ಯಾರ್ಥಿಗಳು ಸುರಕ್ಷಿತವಾಗಿರುವುದು ಕಂಡು…
ಶಿವಮೊಗ್ಗ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ ಅವರನ್ನು ಈಗಾಗಲೇ ಬಂಧಿಸಲಾಗಿದೆ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಅವರು ಈಗಾಗಲೇ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದರು ಇದೀಗ ನಿರ್ದೇಶಕರಾದ ಇಂದ್ರಜಿತ್ ಲಂಕೇಶ್ ಅವರು ಕೂಡ ಪ್ರತಿಕ್ರಿಯೆ ನೀಡಿದ್ದು, ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ ಎಂದು ಮಾರ್ಮಿಕವಾಗಿ ತಿಳಿಸಿದ್ದಾರೆ. ಸಿನಿಮಾ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ನಟ ದರ್ಶನ್ ಬಂಧನ ವಿಚಾರವಾಗಿ ಮಾತನಾಡಿ, ನಟ ದರ್ಶನ್ ವಿರುದ್ಧದ ಕೂಲೆ ಆರೋಪ ಪ್ರಕರಣದ ತನಿಖೆ ನಡೆಯುತ್ತಿದೆ. ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇಂತಹ ಸಮಯದಲ್ಲಿ ನಾನು ಕಾಮೆಂಟ್ ಮಾಡಿದರೆ ತಪ್ಪಾಗುತ್ತದೆ. ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ಕ್ಷಣಕ್ಷಣದ ವರದಿಯನ್ನು ನಾನೊಬ್ಬ ವೀಕ್ಷಕನಾಗಿ ನೋಡುತ್ತಿದ್ದೇನೆ ಎಂದರು. ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ. ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ. ನೆರೆಯವರ ದು:ಖಕ್ಕೆ ಅಳುವವರ ಮೆಚ್ಚ ಕೂಡಲಸಂಗಮದೇವ’ ಎಂದು ಬಸವಣ್ಣನವರ ವಚನ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ A2 ಆರೋಪಿಯಾಗಿರುವ ನಟ ದರ್ಶನವರನ್ನು ಸ್ಥಳ ಮಹಜರುಗಾಗಿ ಪೊಲೀಸರು ಆರ್ ಆರ್ ನಗರದ ಪಟ್ಟಣಗೆರೆ ಶೆಡ್ಡಿಗೆ ಕರೆದು ತಂದಿದ್ದಾರೆ. ರೇಣುಕಾ ಸ್ವಾಮಿ ಹತ್ಯೆಯಾದ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗುತ್ತಿದ್ದು, ಪಟ್ಟಣಗೆರೆ ಇದೀಗ ಪೊಲೀಸರು ನಟ ದರ್ಶನ್ ಅವರನ್ನು ಕರೆತಂದಿದ್ದಾರೆ. ಶೆಡ್ನಲ್ಲಿ ದರ್ಶನ್ ಕರೆ ತಂದು ಸ್ಥಳ ಮಹಜರು ನಡೆಸಲಿದ್ದಾರೆ. ಈಗಾಗಲೇ ದರ್ಶನ್ ಅವರನ್ನು ಹೊರತುಪಡಿಸಿ ಅದಕ್ಕೂ ಮುನ್ನ ಪ್ರಕರಣದ ಎಲ್ಲಾ ಆರೋಪಿಗಳನ್ನು ಕರೆ ತಂದು ಸ್ಥಳ ಮಹಜರು ನಡೆಸಲಾಗಿತ್ತು. ಇದೀಗ ನಟ ದರ್ಶನ್ ಅವರನ್ನು ಪೊಲೀಸರು ಕರೆದುಕೊಂಡು ಬಂದಿದ್ದು ಸ್ಥಳ ಮಹಜರು ನಡೆಸಲಿದ್ದಾರೆ.
ಬೆಳಗಾವಿ : ಇತ್ತೀಚಿಗೆ ಮುಕ್ತಾಯವಾದ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ಮುಗಿಸಿಕೊಂಡು ರಜೆಯ ಮೇಲೆ ಇದ್ದ ಕಾನ್ಸ್ಟೇಬಲ್ ಒಬ್ಬರು ಜೀವನದಲ್ಲಿ ಜಿಗುಪ್ಸೆ ಹೊಂದಿ ಮನನೊಂದು ಕುಡಿದ ಅಮಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೈಲಹೊಂಗಲ ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆಯನ್ನು ಮುರಕಿಬಾಂವಿ ಗ್ರಾಮದ ಬಸನಗೌಡ ಈರಪ್ಪ ಗೌಡರ (40) ಎಂದು ಹೇಳಲಾಗುತ್ತಿದ್ದು, ಈತ ಅತಿಯಾಗಿ ಕುಡಿದಿದ್ದರಿಂದ, ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿದಿದ್ದಂತೆ ಸ್ಥಳಕ್ಕೆ ಆಗಮಿಸಿದ ಮೃತ ಪೊಲೀಸ್ ಪೇದೆಯ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.ಕುಡಿಯೋದ ಬಿಡಿ, ಮಕ್ಕಳು, ಮಡದಿ ಬಗ್ಗೆ ಗಮನ ಕೊಡಿ, ಮಕ್ಕಳ ಶಾಲೆ ಫೀ ತುಂಬಬೇಕು ಎಂದು ಹೇಳಿದ್ದೆ ಅಷ್ಟೇ ಎಂದು ಮೃತ ಪೇದೆ ಪತ್ನಿ ಪೊಲೀಸರ ಎದುರು ತಿಳಿಸಿ ದುಃಖಿತರಾದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರು : ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಪಾಲಕರು ವಾಹನ ಚಲಾಯಿಸಲು ಅವಕಾಶ ಮಾಡಿಕೊಡುವ ಮುನ್ನ ಈ ಸುದ್ದಿಯನ್ನು ಒಮ್ಮೆ ಓದಿ. ವಾಹನ ಚಲಾಯಿಸಿ ಅಪಘಾತ ಉಂಟು ಮಾಡಿದರೆ, ವಾಹನದ ಮಾಲೀಕರು ಸಂಬಂಧಪಟ್ಟವರಿಗೆ ಪರಿಹಾರ ನೀಡಬೇಕೇ ಹೊರತು ವಿಮಾ ಕಂಪನಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಹೌದು ವಿಮಾ ಕಂಪನಿಯ ಮೇಲೆ ಹೊಣೆಗಾರಿಕೆ ವಹಿಸಿದ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿಯ ತೀರ್ಪು ರದ್ದುಗೊಳಿಸಿ ನ್ಯಾಯಮೂರ್ತಿ ಹಂಚಾಟೆ ಸಂಜೀವ್‌ಕುಮಾರ್ ಈ ತೀರ್ಪು ನೀಡಿದ್ದಾರೆ. ಆ ಮೂಲಕ, ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ನ ಮೇಲ್ಮನವಿಯನ್ನು ಪುರಸ್ಕರಿಸಿದ್ದಾರೆ. 2014ರ ಆಗಸ್ಟ್ 11ರಂದು ತೀರ್ಪು ನೀಡಿದ್ದ ಟ್ರಿಬ್ಯೂನಲ್, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ನೆಲೆಸಿರುವ ಮೃತರ ಕುಟುಂಬದ ಸದಸ್ಯರಾದ ಬೀಬಿ ನೈಸಾ ಮತ್ತು ಹಕ್ಕುದಾರರಿಗೆ ವಾರ್ಷಿಕ ಶೇ 8ರ ಬಡ್ಡಿಯೊಂದಿಗೆ 2.56 ಲಕ್ಷ ರೂ.ಗಳ ಪರಿಹಾರ ನೀಡುವಂತೆ ವಿಮಾ ಕಂಪನಿಗೆ ಆದೇಶ ನೀಡಿತ್ತು. ಮೃತರ ಕುಟುಂಬ ಸದಸ್ಯರಿಗೆ 2.56 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ವಿಮಾ…