Author: kannadanewsnow05

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಜಂಬೂ ಸವಾರಿಗೆ ಇದೀಗ ಕ್ಷಣಗಣನೆ ಆರಂಭವಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂ ಸವಾರಿಗೆ ಚಾಲನೆ ನೀಡಲಾಗುತ್ತೆ. ಈಗಾಗಲೇ ಜಂಬೂ ಸವಾರಿಗೆ ಎಲ್ಲಾ ಸಿದ್ಧತೆಗಳು ನಡೆದಿದ್ದು, ಅಭಿಮನ್ಯು ಆನೆ 750 ಕೆ.ಜಿಯ ಅಂಬಾರಿಯನ್ನು ಹೊತ್ತಿದ್ದಾನೆ. ಅಭಿಮನ್ನುವಿಗೆ ಕುಮ್ಕಿ ಆನೆಗಳಾಗಿ ಹಿರಣ್ಯ ಮತ್ತು ಲಕ್ಷ್ಮಿ ಭಾಗವಹಿಸಲಿವೆ. ಅದೇ ರೀತಿಯಾಗಿ ಆನೆಯಾಗಿ ಧನಂಜಯ ಸಾಲಗಳಾಗಿ ಗೋಪಿ, ಮಹೇಂದ್ರ, ಸುಗ್ರೀವ, ಏಕಲವ್ಯ ಮತ್ತು ಪ್ರಶಾಂತ ಆನೆಗಳು ಭಾಗವಹಿಸಿವೆ. ಇನ್ನು ರಾಜ ಮನೆತನದ ದಸರೆಯಲ್ಲಿ ಭೀಮ ಮತ್ತು ಕಂಜನ್ ಆನೆಗಳು ಸೇರಿದಂತೆ ಒಟ್ಟು 9 ಆನೆಗಳು ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

Read More

ಹುಬ್ಬಳ್ಳಿ : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ರಾಜಿನಾಮೆ ನೀಡಿ ಎಂದು ವಿಪಕ್ಷಗಳು ಆಗ್ರಹಿಸುತ್ತಿದ್ದರೆ. ಇನ್ನೊಂದೆಡೆ ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆ ನೀಡಲ್ಲ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಇದರ ಮಧ್ಯ ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಇದು ಸಿದ್ದರಾಮಯ್ಯ ಅವರಿಗೆ ಕೊನೆಯ ದಸರಾ ಹಾಗೂ ವಿಜಯದಶಮಿ ಆಗಲಿದ್ದು, ಬಳಿಕ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕೊಡುತ್ತಾರೆ ಎಂದು ಸ್ಪೋಟಕ ಭವಿಷ್ಯ ನುಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ಅವರ ಪಕ್ಷದಲ್ಲಿ ಹಲವರು ಟವಲ್ ಹಾಕಿಕೊಂಡು ಕಾಯುತ್ತಿದ್ದಾರೆ.ಮುಡಾ ಹಾಗೂ ವಾಲ್ಮೀಕಿ ಹಗರಣದಲ್ಲಿ ಕಾಂಗ್ರೆಸ್ ಸಿಲುಕಿದೆ. ವಿಷಯ ಡೈವರ್ಟ್ ಮಾಡಲು ಕಾಂಗ್ರೆಸ್ ಸರ್ಕಾರ ಏನೇನೋ ಮಾಡ್ತಿದೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ದೂರಿದರು. ಹಳೆ ಹುಬ್ಬಳ್ಳಿ ಗಲಭೆ ಕೆಸ್ ಅನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಇದನ್ನು ನಾವು ಖಂಡಿಸುತ್ತೇವೆ ಯಾವುದೇ ಕಾರಣಕ್ಕೂ ನಾವು…

Read More

ವಿಜಯನಗರ : ಇತ್ತೀಚಿಗೆ ಯುವ ಜನತೆ ಮೊಬೈಲ್ಗೆ ಎಷ್ಟು ಅಡಿಕ್ಟ್ ಆಗಿದೆ ಎಂದರೆ, ತಮ್ಮ ಪ್ರಾಣ ಹೋಗುತ್ತೆ ಎಂದು ತಿಳಿದಿದ್ದರು ಕೂಡ ಕೆಲವು ಹುಚ್ಚಾಟಗಳನ್ನಾಡುತ್ತಾರೆ. ಇದೀಗ ಕೋಡಿ ಬಿದ್ದಿದ್ದ ಕೆರೆಯಲ್ಲಿ ಯುವಕನೊಬ್ಬ ಸೆಲ್ಫಿ ತೆಗೆಯಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಗಂಡಬೊಮ್ಮನಹಳ್ಳಿಯ ಚೇತನ್ ಕುಮಾರ್ (21) ಮೃತ ದುರ್ದೈವಿ. ಭಾರಿ ಮಳೆಯಿಂದಾಗಿ ಗಂಡಬೊಮ್ಮನಹಳ್ಳಿ ಕೆರೆ ಸಂಪೂರ್ಣ ಭರ್ತಿಯಾಗಿತ್ತು ಎನ್ನಲಾಗುತ್ತಿದೆ.ಈ ವೇಳೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಕೋಡಿ ಬಿದ್ದ ಕೆರೆಬಳಿ ನಿಂತು ಚೇತನ್ ಕುಮಾರ್ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾನೆ. ಸೆಲ್ಫಿ ತೆಗೆಯುತ್ತಿದ್ದಾಗಲೇ ಕಾಲು ಜಾರಿ ಬಿದ್ದು ಯುವಕ ನೀರುಪಾಲಾಗಿದ್ದಾನೆ. ತಕ್ಷಣ ಅಕ್ಕಪಕ್ಕದ ಜನರು ರಕ್ಷಣೆಗೆ ಮುಂದಾಗಿದ್ದಾರೆ. ಆದರೂ ಚೇತನ್ ನನ್ನು ಕಾಪಾಡಲು ಆಗಲಿಲ್ಲ ನೋಡನೋಡುತ್ತಿದ್ದಂತೆ ಯುವಕ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಘಟನೆ ಕುರಿತಂತೆ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಟ ದರ್ಶನವರು ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಅವರಿಗೆ ತೀವ್ರವಾಗಿ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ವೈದ್ಯರು, ಅವರನ್ನು ತಪಾಸಣೆ ಮಾಡಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಎಷ್ಟೇ ಹೇಳಿದರು ಕೂಡ ಅವರು ಬೇಡ ಬೆಂಗಳೂರಿಗೆ ಹೋಗಿ ನಾನು ಸ್ಕ್ಯಾನಿಂಗ್ ಮಾಡಿಸಿಕೊಳ್ಳುತ್ತೇನೆ ಎಂದು ಹಠ ಹಿಡಿದಿದ್ದಾರೆ. ಅಲ್ಲದೆ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 54ನೇ ಸಿಸಿಎಚ್ ಕೋರ್ಟ್, ವಿಚಾರಣೆಯ ಬಳಿಕ ಅಕ್ಟೋಬರ್ 14ರಂದು ತೀರ್ಪು ಕಾಯ್ದಿರಿಸಿ ಆದೇಶ ನೀಡಿದೆ.ಇದರ ಮಧ್ಯ ಜೈಲಿನಲ್ಲಿ ಆಗಾಗ ದರ್ಶನ್ ಗೆ ರೇಣುಕಾ ಸ್ವಾಮಿಯ ಆತ್ಮ ಕಾಟ ಕೊಡುತ್ತಿದೆ ಎಂಬ ಗಾಳಿ ಸುದ್ದಿ ಹರಡಿತ್ತು. ಇದು ಎಷ್ಟು ಸತ್ಯವೋ ಅಥವಾ ಮಿಥ್ಯವೋ ಎಂಬುದು ಗೊತ್ತಿಲ್ಲ. ಆದರೆ ರೇಣುಕಾ ಸ್ವಾಮಿಯ ಆತ್ಮ ನಟ ದರ್ಶನ್ ಅವರಿಗೆ ಕಾಟ ಕೊಡುತ್ತಿತ್ತು ಎಂಬ ಊಹಾಪೋಹಗಳು ಎದ್ದಿದ್ದವು. ಇದೀಗ ದರ್ಶನ್ ಹಾಗೂ ಗ್ಯಾಂಗ್​ನಿಂದ…

Read More

ರಾಮನಗರ : ನವೆಂಬರ್ ನಲ್ಲಿ ಮಹಾರಾಷ್ಟ್ರ ಹಾಗೂ ಜಾರ್ಖಂಡ್ನಲ್ಲಿ ಚುನಾವಣೆ ನಡೆಯಲಿದ್ದು, ಅದಕ್ಕೂ ಪೂರ್ವದಲ್ಲಿ ಚನ್ನಪಟ್ಟಣ ಉಪಚುನಾವಣೆ ನಡೆಯಲಿದೆ. ಹಾಗಾಗಿ ಚುನಾವಣೆ ಪೂರ್ವ ಸಿದ್ಧತೆ ಕುರಿತು ಇಂದು ಸಭೆ ಕರೆದಿದ್ದೆ. ಇನ್ನೂ ಒಂದು ವಾರದಲ್ಲಿ ಚುನಾವಣೆ ಘೋಷಣೆಯಾಗಲಿದೆ. ಅಭ್ಯರ್ಥಿ ಆಯ್ಕೆ ಬಗ್ಗೆ ಅಂತಿಮವಾಗಿ ದೆಹಲಿ ಮಟ್ಟದಲ್ಲಿ ಬಿಜೆಪಿಯ ಹೈಕಮಾಂಡ್ ಹಾಗೂ ನಾವು ಕೂತು ಚರ್ಚೆ ಮಾಡ್ತೇವೆ‌ ಎಂದು ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ತಿಳಿಸಿದರು. ಇಂದು ಜಿಲ್ಲೆಯ ಬಿಡದಿಯ ಕೇತಿಗಾನಹಳ್ಳಿಯ ತೋಟದ ಮನೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿ ಯಾರು ಆಗಬೇಕು ಅನ್ನೋದಕ್ಕೆ ಸಭೆ ಕರೆದಿದ್ದೇನೆ. ಜೆಡಿಎಸ್- ಬಿಜೆಪಿ ಎರಡು ಪಕ್ಷಗಳು ಹೊಂದಾಣಿಕೆಯಲ್ಲಿ ಕೆಲಸ ಮಾಡಬೇಕು. ನವೆಂಬರ್ ಒಳಗೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಚುನಾವಣೆ ನಡೆಯಬೇಕಿದೆ. ಅದೇ ಸಮಯದಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ಕೂಡ ನಡೆಯಲಿದೆ ಎಂದರು. ಚನ್ನಪಟ್ಟಣದಲ್ಲಿ ಕಾರ್ಯಕರ್ತರೇ ನನ್ನ ಚುನಾವಣೆ ನಡೆಸಿದ್ದಾರೆ.. 2013 ರಲ್ಲೂ ನಮಗೆ ಹೆಚ್ಚಿನ ಮತಗಳು ಬಂದಿದ್ದವು. ನಮ್ಮ ಸಂಘಟನೆ ದೃಷ್ಟಿಯಿಂದ ಕೂತು ಚರ್ಚೆ ಮಾಡ್ತೇವೆ.…

Read More

ಮೈಸೂರು : ನಾಡಿನ ಜನತೆಗೆ ನಾಡಹಬ್ಬ ಮೈಸೂರು ದಸರಾದ ಶುಭಾಶಯಗಳು. ಈ ಹಬ್ಬ ದುಷ್ಟ ಶಕ್ತಿಗಳ ಸಂಹಾರ ಮಾಡಿ ಶಿಷ್ಟರನ್ನು ರಕ್ಷಿಸುವ ಹಬ್ಬವಾಗಿದೆ. ಜನರ ಆಶೀರ್ವಾದ ಸಿಕ್ಕಿದೆ ಅದಕ್ಕೆ 7 ಬಾರಿ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದ್ದೇನೆ ಎಂದು ನಂದಿದ್ವಜಕ್ಕೆ ಪೂಜೆ ನೆರವೇರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇಂದು ಮೈಸೂರು ಅರಮನೆ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ, ಸಚಿವ ಮಂಕಾಳು ವೈದ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವು ಸಚಿವರು ಇಂದು ನಂದಿ ದ್ವಜ ಪೂಜೆಯಲ್ಲಿ ಭಾಗವಹಿಸಿದ್ದರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ವಿಜಯದಶಮಿಯು ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ, ಪಂಜಿನ ಮೆರವಣಿಗೆ ಸೇರಿದಂತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ…

Read More

ಮೈಸೂರು : ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಇಂದು ಮೈಸೂರಿನ ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು ಸೇರಿ ನಂದಿ ದ್ವಜಕ್ಕೆ ಪೂಜೆ ನೆರವೇರಿಸಿದರು. ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಈಡುಗಾಯಿ ಒಡೆಯುವ ಮೂಲಕ ಪೂಜೆಯನ್ನು ನೆರವೇರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯವಿಜಯದಶಮಿಯು ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ, ಪಂಜಿನ ಮೆರವಣಿಗೆ ಸೇರಿದಂತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರೆಯ ಶುಭಾಶಯಗಳು. ಈ ಬಾರಿನಲ್ಲಿ ಉತ್ತಮ ಮಳೆ ಹಾಗೂ ಬೆಳೆಯಾಗಿದ್ದು, ರೈತರಲ್ಲಿ ನೆಮ್ಮದಿ ಮನೆಮಾಡಿದೆ. ರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ ಎಂದು ಹಾರೈಸುತ್ತೇನೆ.…

Read More

ಬೆಂಗಳೂರು : ಕೇಂದ್ರ ಸರ್ಕಾರದಿಂದ ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ತೆರಿಗೆ ತಾರತಮ್ಯ ವಿಚಾರವಾಗಿ ಬೆಂಗಳೂರಿನಲ್ಲಿ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ತಮ್ಮ ವೈಯಕ್ತಿಕ ಸಿಟ್ಟನ್ನು ಕಕನ್ನಡಿಗರ ಮೇಲೆ ತೀರಿಸಿಕೊಳ್ಳಬೇಡಿ ಎಂದು ವಾಗ್ದಾಳಿ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ವಿಚಾರ ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿದ್ದು, ನಾವು ಕಟ್ಟುವ ತೆರಿಗೆಗೆ ಸೂಕ್ತವಾಗಿ ಮರುಪಾವತಿ ಮಾಡಿ ಅನ್ನುತ್ತಿದ್ದೇವೆ. ಉತ್ತರ ಪ್ರದೇಶ 100 ರೂಪಾಯಿ ತೆರಿಗೆ ಪಾವತಿ ಮಾಡಿ 300 ರೂಪಾಯಿ ಪಡೆಯುತ್ತಿದೆ. ಮಧ್ಯಪ್ರದೇಶ 100 ರೂಪಾಯಿ ತೆರಿಗೆ ಪಾವತಿಸಿ 290 ರೂಪಾಯಿ ಪಡೆಯುತ್ತಿದೆ. ಬಿಹಾರ 100 ರೂಪಾಯಿ ತೆರಿಗೆ ಪಾವತಿಸಿ 918 ರೂಪಾಯಿ ಪಡೆಯುತ್ತಿದೆ. ಆದರೆ ನಮ್ಮ ರಾಜ್ಯ 100 ರೂಪಾಯಿ ಪಾವತಿಸಿದರೆ 13 ರೂಪಾಯಿ ಅಷ್ಟೇ ಸಿಗುತ್ತಿದೆ. ತೆರಿಗೆ ತಾರತಮ್ಯ ಬಗ್ಗೆ ಹಣಕಾಸು ಆಯೋಗಕ್ಕೂ ಮನವಿ ಮಾಡಿದ್ದೇವೆ. ತಮ್ಮ ವೈಯಕ್ತಿಕ ಸಿಟ್ಟನ್ನು…

Read More

ಮೈಸೂರು : ಮುಡಾ ಹಗರಣದ ಸಂಕಷ್ಟದ ನಡುವೆ ಕೂಡ ಕ್ಷಮಿಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಆಯುಧ ಪೂಜೆ ವಿಜಯದಶಮಿ ಹಾಗೂ ಇಂದು ನಡೆವ ಜಂಬೂ ಸವಾರಿ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳ ಅಲ್ಲಿ ಅವರು ಭಾಗವಹಿಸಲಿದ್ದಾರೆ. ಇಂದು ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ ನಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ವೈರಿಗಳು ಇರುತ್ತಾರೆ ಹಿತೈಷಿಗಳು ಕೂಡ ಇರುತ್ತಾರೆ, ನನಗೆ ದೇವರ ಆಶೀರ್ವಾದವಿದೆ ಎಂದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ಧರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಡಿನ ಜನರಿಗೆ ದಸರಾ ಹಬ್ಬದ ಶುಭಾಶಯಗಳು ತಿಳಿಸಿದ ಸಿಎಂ ಸಿದ್ದರಾಮಯ್ಯ ಅವರು, ನಾಳೆ ನಡೆಯುವ ಜಂಬೂಸವಾರಿಯಲ್ಲಿ ನಾನು ಭಾಗವಹಿಸುತ್ತೇನೆ. ಸುಧೀರ್ಘವಾಗಿ ಹೆಚ್ಚು ಬಾರಿ ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡುತ್ತಿದ್ದೇನೆ. ನಾಡಿನ ಜನ ಹಾಗೂ ದೇವರ ಆಶೀರ್ವಾದದಿಂದ ಪುಷ್ಪರ್ಚನೆ ಮಾಡುತ್ತಿದ್ದೇನೆ ಎಂದು ತಿಳಿಸಿದರು. ನನ್ನ ಮೇಲೆ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಸದಾ ಇರುತ್ತದೆ. ಜನರು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಅದಕ್ಕೆ ಇಷ್ಟೊಂದು ಬಾರಿ…

Read More

ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಹಳೆ ಹುಬ್ಬಳ್ಳಿ ಪ್ರಕರಣವನ್ನು ಹಿಂಪಡೆದ ವಿಚಾರವಾಗಿ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದಕ್ಕೆ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ಅವರು, ಭಾರತದ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ. ಅಂತವರನ್ನ ಪೂಜಿಸುವ ಬಿಜೆಪಿಯಿಂದ ಏನು ನಿರೀಕ್ಷಿಸಲು ಸಾಧ್ಯ? ಎಂದು ವಾಗ್ದಾಳಿ ನಡೆಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕಾಂಗ್ರೆಸ್ ಮೊಟ್ಟ ಮೊದಲ ಬಾರಿಗೆ ಒಳ್ಳೆಯ ಕೇಸನ್ನು ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು. ಹಳೆ ಹುಬ್ಬಳ್ಳಿ ಕೇಸ್ ಹಿಂಪಡೆದ ವಿಚಾರವಾಗಿ ಪ್ರಹ್ಲಾದ್ ಜೋಶಿ ಟೀಕಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಭಾರತದ ಮೊಟ್ಟ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ. ಗೋಡ್ಸೆಯನ್ನು ಬಿಜೆಪಿ ಪ್ರಹ್ಲಾದ್ ಜೋಶಿ ಪೂಜೆ ಮಾಡುತ್ತಾರೆ. ಇಂಥವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದರು.

Read More