Author: kannadanewsnow05

ಬೆಂಗಳೂರು : ಎಸ್ ಎಸ್ ಎಲ್ ಸಿ 2 ಬರೆಯುವ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ ಒಂದು ಇದ್ದು, ಪರೀಕ್ಷೆ 2ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಸೇವೆ ಒದಗಿಸಲು ಇದೀಗ ಬಿಎಂಟಿಸಿ ಮುಂದಾಗಿದೆ. ವಿದ್ಯಾರ್ಥಿಗಳು ಬಿಎಂಟಿಸಿ ಬಸ್ ಹೌದು ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಜೂನ್ 16 ರಿಂದ 22 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಯಲಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದ ವರೆಗು ಉಚಿತ ಪ್ರಯಾಣ ಇರಲಿದೆ ಹಾಲ್ ಟಿಕೆಟ್ ತೋರಿಸಿ ವಿದ್ಯಾರ್ಥಿಗಳು ಉಚಿತ ಪ್ರಯಾಣ ಮಾಡಬಹುದಾಗಿದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

Read More

ಬೆಂಗಳೂರು : ಹಾಸ್ಟೆಲ್ ರೂಮ್ನಲ್ಲಿ ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ಈ ದುರಂತ ನಡೆದಿದೆ. ಹೌದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯನ್ನು ಎಂಬಿಬಿಎಸ್ ವಿದ್ಯಾರ್ಥಿ ಲೋಕೇಂದ್ರನಾಥ ಕುಮಾರ್ ಸಿಂಗ್ ಎಂದು ತಿಳಿದುಬಂದಿದೆ. ಈತ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಎಂದು ಹೇಳಲಾಗುತ್ತಿದ್ದು, ಮೆಡಿಕಲ್ ಕಾಲೇಜು ಹಾಸ್ಟೆಲ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಲೋಕೇಂದ್ರನಾಥ್ ಮೊದಲ ವರ್ಷದ ಎಂಬಿಬಿಎಸ್ ಓದುತ್ತಿದ್ದ. ಬೆಳಗ್ಗೆ ಪ್ರಯೋಗಾತ್ಮಕ ಪರೀಕ್ಷೆಗೆ ಲೋಕೇಂದ್ರನಾಥ ಹಾಜರಾಗಿದ್ದ ಎನ್ನಲಾಗಿದೆ. ಆದರೆ ಮಧ್ಯಾಹ್ನ ಹಾಸ್ಟೆಲ್ ರೂಮಿಗೆ ಬಂದು ಡೋರ್ ಲಾಕ್ ಮಾಡಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲೋಕೇಂದ್ರನಾಥ್ ಮೂಲತಃ ರಾಜಸ್ಥಾನದವನೆಂದು ಹೇಳಲಾಗುತ್ತಿದ್ದು, ಇದೀಗ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರು ನಗರದಲ್ಲಿ ಪುಂಡರ ಅಟ್ಟಹಾಸ ಮಿತಿಮೀರಿದ್ದು, ಪೊಲೀಸ್ ಇಲಾಖೆ ನೋಡಿಯು ನೋಡದಂತೆ ಕಣ್ಣು ಮುಚ್ಚಿ ಕುಳಿತಿದೆ. ಇದೀಗ ಬೆಂಗಳೂರಿನಲ್ಲಿ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿದ್ದು, ಮಾರಾಕಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಗೈಯಲಾಗಿದೆ. ಹೌದು ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳಿಂದ ರಾಜೇಶ್ ಎನ್ನುವ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ಹನುಮಂತನಗರದ ಕಗ್ಗೀಸ ಬೇಕರಿ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಚಿಕ್ಕಮಗಳೂರು : ಈಗಾಗಲೇ ರಾಜ್ಯದಲ್ಲಿ ಮುಂಗಾರು ಪ್ರವೇಶಿಸಿದ್ದು ಎಲ್ಲೆಡೆ ಮಳೆ ಆರಂಭವಾಗಿದೆ. ಈ ವೇಳೆ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಚಿಕ್ಕಮಂಗಳೂರು ಮಡಿಕೇರಿ ಕೊಡಗು ಎಂದು ಆಗಮಿಸುತ್ತಾರೆ. ಅಲ್ಲದೆ ಕೆಲವರಿಗೆ ಸೆಲ್ಫಿ ಹುಚ್ಚು ಅತಿಯಾಗಿರುತ್ತದೆ. ಆದರೆ ಈ ವೇಳೆ ಅವರು ನಿರ್ಲಕ್ಷ ವಹಿಸಿ ತಮ್ಮ ಜೀವಕ್ಕೆ ತಾವೇ ಕುತ್ತು ತಂದುಕೊಳ್ಳುತ್ತಾರೆ. ಅಂತದ್ದೇ ಘಟನೆ ಇದೀಗ ಚಿಕ್ಕಮಗಳೂರಿನಲ್ಲಿ ನಡೆದಿದೆ. ಹೌದು ಇದೀಗ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ತೆಗೆದುಕೊಳ್ಳಲು ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಬ್ಬೆ ಫಾಲ್ಸ್ ನಲ್ಲಿ ಈ ದುರಂತ ಸಂಭವಿಸಿದೆ. ಹೈದರಾಬಾದ್ ಮೂಲದ ಪ್ರವಾಸಿಗ ಶ್ರವಣ್ (25) ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಬೈಕ್ ನಲ್ಲಿ ಹಬ್ಬೆ ಫಾಲ್ಸ್ ಗೆ ಹೈದರಾಬಾದ್ನ ಇಬ್ಬರು ಯುವಕರು ಬಂದಿದ್ದರು.ಫಾಲ್ಸ್ ನಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಕಡಿಮೆ ಪ್ರಮಾಣದ ನೀರಿದ್ದ…

Read More

ರಾಯಚೂರು : ಕೂಲಿ ಕೆಲಸ ಮಾಡಿಕೊಂಡಿದ್ದ ತಾಯಿಗೆ ಅನಾರೋಗ್ಯ ಕಾಡುತ್ತಿತ್ತು. ಇದರಿಂದ ಮನನೊಂದ ತಾಯಿ ಮಗಳ ಜೊತೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಾಳಮ್ಮ (45) ಹಾಗೂ ಮಗಳು ಅಮೃತ (12) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು ಎಂದು ತಿಳಿದು ಬಂದಿದೆ.ತಾಯಿ ಮಾಳಮ್ಮ ಕೂಲಿ ಕೆಲಸ ಮಾಡಿಕೊಂಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಮನನೊಂದು ತನ್ನ ಜೊತೆ ಮಗಳ ಸಮೇತ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಲಿಂಗಸುಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Read More

ಬೆಂಗಳೂರು : ನನಗೆ ಪತ್ನಿ ಗೌರ ಕೊಡುತ್ತಿಲ್ಲ ಮಾನಸಿಕ ಹಿಂಸೆ ಆಗುತ್ತಿದೆ ಎಂದು ನಟ ಯುವರಾಜ್ ಕುಮಾರ್ ಕೋರ್ಟಿಗೆ ಸಲ್ಲಿಸಿದ್ದ ವಿಚ್ಛೇದನದ ಅರ್ಜಿಯಲ್ಲಿ ಉಲ್ಲೇಖಿಸಿದ್ದು, ಕೋರ್ಟ್ ಮೂಲಕ ಪತ್ನಿ ಶ್ರೀದೇವಿಗೆ ನೋಟಿಸ್ ತಲುಪಿಸಿದ್ದರು. ಇದೀಗ ನೋಟಿಸ್ ಗೆ ಪತ್ನಿ ಶ್ರೀದೇವಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಲೀಗಲ್ ನೋಟಿಸಿದ ಬಗ್ಗೆ ಉತ್ತರಿಸಿದ್ದೇನೆ. ವಿಚ್ಛೇದನದ ಅರ್ಜಿ ಇನ್ನು ಕೂಡ ನನಗೆ ತಲುಪಿಲ್ಲ. ಅರ್ಜಿ ತಲುಪಿದರೆ ನ್ಯಾಯಾಲಯಕ್ಕೆ ನಾನು ಉತ್ತರ ಕೊಡುತ್ತೇನೆ. ವಿಚ್ಛೇದನದ ಬಗ್ಗೆ ಚಿತ್ರರಂಗ ಮಾಧ್ಯಮದವರಿಂದ ಮಾಹಿತಿ ತಿಳಿದುಬಂದಿದೆ. ಸದ್ಯಕ್ಕೆ ಬೇರೇನು ಮಾತನಾಡುವ ಸ್ಥಿತಿಯಲ್ಲಿ ನಾನು ಇಲ್ಲ. ವಿಚ್ಛೇದನದ ಬಗ್ಗೆ ಶ್ರೀದೇವಿ ಮೊದಲ ಪತ್ರಿಕೆಯ ನೀಡಿದ್ದಾರೆ. ದೊಡ್ಮನೆ ರಾಜಕುಮಾರ್‌ ಕುಟುಂಬದ ನಟ ಯುವರಾಜ್‌ ಕುಮಾರ್‌ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನಕ್ಕೆ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ನನಗೆ ಮಾನಸಿಕವಾಗಿ ಹಿಂಸೆ ನೀಡಲಾಗುತ್ತಿದೆ ಎಂದು ಆರೋಪಿಸಿ ಕೋರ್ಟ್ ಮೂಲಕ ಯುವರಾಜ್‌ ಕುಮಾರ್‌ ಪತ್ನಿ ಶ್ರೀದೇವಿಗೆ ನೋಟಿಸ್ ಕೂಡ ನೀಡಿದ್ದಾರೆ ಎಂದು ತಿಳಿದು…

Read More

ಆಂಧ್ರಪ್ರದೇಶ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಸ್ಥಾನ ಗಳಿಸದೆ ಹೋದರು, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಅವರ ಬೆಂಬಲದೊಂದಿಗೆ ನರೇಂದ್ರ ಮೋದಿಯವರು ನಿನ್ನೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.ಇದರ ಬೆನ್ನಲ್ಲೆ ಜೂನ್ 12 ರಂದು ಆಂಧ್ರಪ್ರದೇಶದ ಸಿಎಂ ಆಗಿ ಚಂದ್ರಬಾಬು ನಾಯ್ಡು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೌದು ಜೂನ್ 12 ರಂದು ಆಂಧ್ರದ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಒಂದು ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಅಲ್ಲದೆ ಇನ್ನೊಂದೆಡೆ ಒಡಿಶಾ ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ. ಆಂಧ್ರ ಒಡಿಸ್ಸಾ ಸಿಎಂ ಪ್ರಮಾಣ ವಚನ ಕಾರ್ಯಕ್ರಮ ಇವೆರಡು ಜೂನ್ 12 ರಂದು ನಡೆಯಲಿವೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ವಿಚ್ಛೇದನದ ಬಳಿಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ನಿವೇದಿತಾ ಯಾವುದೇ ಜೀವನಾಂಶ ಪಡೆದುಕೊಂಡಿಲ್ಲ ನಿವೇದಿತಾ ಇಂಡಿಪೆಂಡೆಂಟ್ ಮಹಿಳೆಯಾಗಿದ್ದಾರೆ ಜೊತೆ ಇದಾಗಲೂ ತಮ್ಮ ಕೆಲಸ ತಾವು ನೋಡ್ಕೋತಿದ್ದರು. ಮೂರನೇ ವ್ಯಕ್ತಿ ಜೊತೆ ನಿವೇದಿತಾ ಸಂಬಂಧ ಕಲ್ಪಿಸುವುದು ಬೇಸರ ತರಿಸಿದೆ ಎಂದು ತಿಳಿಸಿದರು. ಇತ್ತೀಚಿಗೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವೈಯಕ್ತಿಕ ಕಾರಣಗಳಿಂದ ವಿಚ್ಛೇದನ ಪಡೆದಿದ್ದರು ಇ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ವದಂತಿಗಳು ಹರಡಿದ್ದವು. ಇದೀಗ ಈ ಒಂದು ವದಂತಿಗೆ ಚಂದನ್ ಶೆಟ್ಟಿ ತೆರೆ ಎಳೆದಿದ್ದು,ನಿವೇದಿತಾ ಯಾವುದೇ ಜೀವನಾಂಶ ಪಡೆದುಕೊಂಡಿಲ್ಲ ನಿವೇದಿತಾ ಇಂಡಿಪೆಂಡೆಂಟ್ ಮಹಿಳೆಯಾಗಿದ್ದಾರೆ ಜೊತೆ ಇದಾಗಲೂ ತಮ್ಮ ಕೆಲಸ ತಾವು ನೋಡ್ಕೋತಿದ್ದರು. ಮೂರನೇ ವ್ಯಕ್ತಿ ಜೊತೆ ನಿವೇದಿತಾ ಸಂಬಂಧ ಕಲ್ಪಿಸುವುದು ಬೇಸರ ತರಿಸಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮಿಬ್ಬರ ಆಲೋಚನೆ ಜೀವನಶೈಲಿ…

Read More

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ನಿರೀಕ್ಷಿತ ಸ್ಥಾನಗಳನ್ನು ಪಡೆಯದೆ ಇದದರಿಂದ ಇದೀಗ ಕಾಂಗ್ರೆಸ್ ಹಲವು ಶಾಸಕರು ನಾಲಿಗೆ ಹರಿಬಿಡುತ್ತಿದ್ದಿದ್ದು, ಈ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಶಾಸಕರು ಬಾಯಿ ಮುಚ್ಕೊಂಡಿದ್ದರೆ ಒಳ್ಳೆಯದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು 14 ಇಲ್ಲ 15 ಸೀಟ್ ಬರುತ್ತೆ ಅಂತ ನಮಗೆ ವಿಶ್ವಾಸವಿತ್ತು. ಆದರೆ ನಾವು ವಿಫಲರಾಗಿದ್ದೇವೆ. ಜನ ಏನು ತೀರ್ಪು ಕೊಟ್ಟಿದ್ದಾರೆ ಅದಕ್ಕೆ ನಾವು ತಲೆಬಾಗಲೇಬೇಕಾಗುತ್ತದೆ. ನನ್ನ ಕ್ಷೇತ್ರದಲ್ಲಿ ಕೆಲವು ಲೀಡ್ ಬರುವಂತಹ ಕ್ಷೇತ್ರಗಳಲ್ಲಿ ವೋಟ್ ಬರ್ಲಿಲ್ಲ. ನಾನು ಕೂಡ ಅದನ್ನು ಪರಿಶೀಲಿರಿಶೀಲನೆ ಮಾಡುತ್ತಿದ್ದೀನಿ ಯಾಕೆ ಹೀಗಾಗಿದೆ ಎಂದು ಸೋಲು ಕಡಿಮೆಯಾಗಿರುವುದು ಒಪ್ಪಿಕೊಳ್ಳಲೇ ಬೇಕಾಗುತ್ತದೆ ಜನ ತೀರ್ಮಾನ ಕೊಟ್ಟಿದ್ದಾರೆ ಸ್ವೀಕರಿಸಲೇಬೇಕು ಎಂದರು.

Read More

ಬೆಂಗಳೂರು : ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದರಾಗಿದ್ದು ಇದೀಗ ಬೆಂಗಳೂರಿನ 42ನೇ ಎಸಿಎಂ ನ್ಯಾಯಾಲಯವು ಜೂನ್ 24ರ ವರೆಗೆ ನ್ಯಾಯಾಂಗ ಬಂದನ ವಿಧಿಸಿ ಆದೇಶ ಹೊರಡಿಸಿದೆ. ಎಸ್ಐಟಿ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಎಸ್ಐಟಿ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟಿಗೆ ಹಾಜರುಪಡಿಸಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಜ್ವಲ್ ರೇವಣಗೆ 14 ದಿನಗಳ ಕಾಲ ಅಂದರೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಎಸ ಐ ಟಿ ಅಧಿಕಾರಿಗಳು ಕೋರ್ಟಿಗೆ ಹಾಜರುಪಡಿಸಿದ್ದ ವೇಳೆ ಎಸ್ಐಟಿ ಅಧಿಕಾರಿಗಳು ಈ ವೇಳೆ ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ಸಲ್ಲಿಸಿದ್ದರು. ಈ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣಗೆ ಜೂನ್ 24ರ ವರೆಗೆ ನ್ಯಾಯಮದ ವಿಧಿಸಿ ಆದೇಶ ಹೊರಡಿಸಿದ್ದಾರೆ.

Read More