Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಲ್ಲಿ ಪಾಪಿ ಪತಿಯೊಬ್ಬ ಪತ್ನಿ ಡಿವೋರ್ಸ್ ಕೇಳಿದಕ್ಕೆ ಪತ್ನಿಯ ಖಾಸಗಿ ಫೋಟೋಗಳು ಅಪ್ಲೋಡ್ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾಲತಾಣದಲ್ಲಿ ಪತ್ನಿಯ ಖಾಸಗಿ ಫೋಟೋ ಅಪ್ಲೋಡ್ ಮಾಡಿದ್ದ ಪತಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಗೋವಿಂದರಾಜುವನ್ನು ಅಮೃತಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗೋವಿಂದರಾಜು ಬಂದು ನಿತ್ಯ ಗಲಾಟೆ ಮಾಡಿದಕ್ಕೆ ಪತ್ನಿ ಡಿವೋರ್ಸ್ ಕೇಳಿದ್ದಾರೆ. ಪತಿ ಗೋವಿಂದರಾಜು ಆನ್ಲೈನ್ ಬೆಟ್ಟಿಂಗ್, ಕುಡಿತದ ಚಟಕ್ಕೆ ಹಣ ಕಳೆದುಕೊಂಡಿದ್ದ. ಬಳಿಕ ಮನೆ ಬಿಟ್ಟು ಪಿಜಿಯಲ್ಲಿ ಗೋವಿಂದರಾಜು ಪತ್ನಿ ವಾಸವಿದ್ದರು. ಪಿಜಿ ಬಳಿಯೂ ಗೋವಿಂದರಾಜು ಹೋಗಿ ಗಲಾಟೆ ಮಾಡಿದ್ದ. ಘಟನೆ ಬಳಿಕ ಪತ್ನಿ ಡೈವೋರ್ಸ್ ಕೇಳಿದ್ದಾರೆ. ಇದೆ ದ್ವೇಷಕ್ಕೆ ಪತ್ನಿಯ ಖಾಸಗಿ ಫೋಟೋಗಳನ್ನ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಘಟನೆ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪತ್ನಿಯ ದೂರು ಆಧರಿಸಿ ಪತಿ ಗೋವಿಂದರಾಜುವನ್ನು ಅರೆಸ್ಟ್ ಮಾಡಿದ್ದಾರೆ.
ಧಾರವಾಡ : ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ತೆರವು ಕೊರಿದ್ದ ಅರ್ಜಿಯ ಕುರಿತಂತೆ ಧಾರವಾಡ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಇದೀಗ ಈ ಒಂದು ತಡೆ ನೀಡಲು ವಿಭಗೀಯ ಪೀಠ ನಕಾರಾ ವ್ಯಕ್ತಪಡಿಸಿದೆ. ಅಕ್ಟೋಬರ್ 28ರಂದು ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರದ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ನವೆಂಬರ್ 4ರಂದು ನಡೆದಿದ್ದ ಅರ್ಜಿಯ ವಿಚಾರಣೆ ವಾದ ಪ್ರತಿವಾದ ಆಲಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು ಇಂದು ಹೈಕೋರ್ಟ್ ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ವಿಭಗೀಯ ಪೀಠ ನಕಾರ ವ್ಯಕ್ತಪಡಿಸಿದೆ. ತಡೆ ತೆರವಿಗೆ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿತು. ರಾಜ್ಯ ಸರ್ಕಾರದ ಮೇಲ್ಮನವಿ ವಜಾಗೊಳಿಸಿತು.
BREAKING : ‘EPFO’ ಸ್ಟಾಫ್ ಕೋ-ಆಪರೇಟಿವ್ ಸೊಸೈಟಿ ವಂಚನೆ ಕೇಸ್ : ಪ್ರಕರಣ ‘CID’ ಗೆ ವಹಿಸಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು : ಬೆಂಗಳೂರಿನ EPFO ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದ ಕೋಟ್ಯಾಂತರ ರೂ. ವಂಚನೆಯಲ್ಲಿ ಅಕೌಂಟೆಂಟ್ ಜಗದೀಶ್ ಮಾಸ್ಟರ್‌ಮೈಂಡ್ ಎಂಬುದು ಬಯಲಾಗಿದೆ. ಸದ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಸರ್ಕಾರ ನಿರ್ಧರಿಸಿದೆ. ಹೌದು EPFO ಸ್ಟಾಫ್ ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣದ ಗಂಭೀರತೆಯನ್ನು ಮನಗಂಡ ಸರ್ಕಾರ, ತನಿಖೆಯನ್ನು ಸಿಐಡಿಗೆ ವರ್ಗಾಯಿಸಲು ನಿರ್ಧರಿಸಿದೆ. ಪ್ರಾಥಮಿಕ ತನಿಖೆಯನ್ನು ಮುಗಿಸಿದ ನಂತರ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಿದ್ದಾರೆ. ಪ್ರಸ್ತುತ ತನಿಖೆ ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಅವರ ಮೇಲ್ವಿಚಾರಣೆಯಲ್ಲಿ ಮುಂದುವರಿದಿದೆ. ಇಪಿಎಫ್ಒ ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸಿಇಒ ಗೋಪಿನಾಥ್ ಈ ಕೇಸ್‌ನ ಮಾಸ್ಟರ್‌ಮೈಂಡ್ ಎಂದು ಈ ಹಿಂದೆ ಭಾವಿಸಿದ್ದ ಪೊಲೀಸರು ಅಕೌಂಟೆಂಟ್ ಜಗದೀಶ್‌ನ ಆಸ್ತಿ, ಖಾತೆಗಳು ಹಾಗೂ ವಂಚನೆ ವಿಧಾನ ನೋಡಿ ಆಘಾತಕ್ಕೊಳಗಾಗುವಂತಾಗಿದೆ. ಕೇವಲ 21,000 ರೂ. ಸಂಬಳ ಪಡೆಯುತ್ತಿದ್ದ ಜಗದೀಶ್ ಕೋಟ್ಯಂತರ ಮೌಲ್ಯದ ಮನೆ, ಕಾರು, ಫಾರ್ಮ್‌ಹೌಸ್ ಸೇರಿದಂತೆ ಹಲವು ಆಸ್ತಿಗಳನ್ನು ಹೊಂದಿರುವುದು ಪತ್ತೆಯಾಗಿದೆ.
ಧಾರವಾಡ : ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ತೆರವು ಕೊರಿದ್ದ ಅರ್ಜಿಯ ತೀರ್ಪು ಇಂದು ಹೊರಬೀಳಲಿದೆ. ಧಾರವಾಡ ಹೈಕೋರ್ಟಿನಿಂದ ಇಂದು ತೀರ್ಪು ಹೊರಬೀಳಲಿದೆ. ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಅಕ್ಟೋಬರ್ 28ರಂದು ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರದ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ನವೆಂಬರ್ 4ರಂದು ನಡೆದಿದ್ದ ಅರ್ಜಿಯ ವಿಚಾರಣೆ ವಾದ ಪ್ರತಿವಾದ ಆಲಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು ಇಂದು ಹೈಕೋರ್ಟ್ ದ್ವಿಸದಸ್ಯ ಪೀಠ ತೀರ್ಪು ಪ್ರಕಟಿಸಲಿದೆ.a
ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡ್ರೈವರ್ ಗಳು ಕುಡಿದು ಬಂದು ಕರ್ತವ್ಯಕ್ಕೆ ಹಾಜರಾಗುತ್ತಿದ್ದರು. ಕುಡಿದು ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್‌ಗಳ ಬಳಿ ಲಂಚ ಪಡೆದು ಡ್ಯೂಟಿ ನೀಡಿದ್ದಕ್ಕೆ ಬಿಎಂಟಿಸಿ ಅಧಿಕಾರಿ ಸೇರಿ 9 ಮಂದಿಯನ್ನು ಅಮಾನತು ಮಾಡಲಾಗಿದೆ. ಹೌದು ಬಿಎಂಟಿಸಿ ಚಾಲಕರು ಕುಡಿದು ಡ್ರೈವ್ ಮಾಡುತ್ತಿರುವ ವೀಡಿಯೋ ವೈರಲ್ ಆಗಿತ್ತು. ಕುಡಿದು ಬರುತ್ತಿದ್ದ ಬಸ್ ಡ್ರೈವರ್‌ಗಳಿಗೆ ಲಂಚ ಪಡೆದು ಅಧಿಕಾರಿಗಳು ಡ್ಯೂಟಿ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಡಿಪೋ ಮ್ಯಾನೇಜರ್ ಸೇರಿದಂತೆ 9 ಚಾಲಕರು ಸಸ್ಪೆಂಡ್ ಆಗಿದ್ದಾರೆ. ಡಿಪೋ- 35 ರ (ಕನ್ನಹಳ್ಳಿ) ಎಲೆಕ್ಟ್ರಿಕ್ ಬಸ್‌ಗಳನ್ನು ಡ್ರೈವಿಂಗ್ ಮಾಡಲು ಚಾಲಕರು ಕುಡಿದು ಬರುತ್ತಿದ್ದರು. ಸುಮಾರು 150 ಕ್ಕೂ ಹೆಚ್ಚು ಡ್ರೈವರ್‌ಗಳ ಬಳಿ ಅಧಿಕಾರಿಗಳು ಸಾವಿರಾರು ರೂಪಾಯಿ ಹಣ ಪಡೆದು ಬಸ್ ಓಡಿಸಲು ಅವಕಾಶ ನೀಡಿದ್ದರು. ಇದರಿಂದ ಅಪಘಾತ ಪ್ರಮಾಣ ಕೂಡ ಹೆಚ್ಚಳವಾಗಿದೆ. ಅದಕ್ಕಾಗಿ ಕಠಿಣ ಕ್ರಮಕೈಗೊಳ್ಳಲಾಗಿದೆ. ಅಮಾನತುಗೊಂಡವರು ಘಟಕ ವ್ಯವಸ್ಥಾಪಕ ಎಂ.ಜಿ.ಕೃಷ್ಣ, ಸಂಚಾರ ನಿರೀಕ್ಷಕ ಶ್ರೀನಿವಾಸ ಡಿ, ಅರುಣ್ ಕುಮಾರ್.ಇ.ಎಸ್. (ಸಹಾಯಕ…
ಶಿವಮೊಗ್ಗ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೆಎಸ್ಆರ್ಟಿಸಿ ಡಿಪೋದ ಭದ್ರತಾ ಸಿಬ್ಬಂದಿಯೊಬ್ಬರು ಕರ್ತವ್ಯ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಂದೀಪ್ (41) ಮೃತ ಕೆ ಎಸ್ ಆರ್ ಟಿ ಸಿ ಸಿಬ್ಬಂದಿ. ಸಂದೀಪ್ ಸಾಗರದ ಮಾರಿಕಾಂಬ ದೇವಾಲಯದ ಹಿಂಭಾಗದ ರಸ್ತೆಯ ನಿವಾಸಿಯಾಗಿದ್ದಾರೆ. ಸಂದೀಪ್ ಬುಧವಾರ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸಂದೀಪ್ರನ್ನು ಸಹೋದ್ಯೋಗಿಗಳು ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಷ್ಟರಲ್ಲೇ ಸಂದೀಪ್ ಸಾವನ್ನಪ್ಪಿದ್ದಾರೆ. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸಂದೀಪ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ. ಇನ್ನು KSRTC ಭದ್ರತಾ ಸಿಬ್ಬಂದಿ ಸಂದೀಪ್ ಹೃದಯಘಾತದಿಂದ ಸಾವನ್ನಪ್ಪಿರುವ ವಿಚಾರ ತಿಳಿದು, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕೆಎಸ್ಆರ್ಟಿಸಿ ಸಿಬ್ಬಂದಿ ಸಂದೀಪ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತು ಈಗಾಗಲೇ ಭಾರಿ ಚರ್ಚೆ ನಡೆಯುತ್ತಿದ್ದು, ಇದರ ಮಧ್ಯ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಅವರು ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರುತ್ತಾರೋ ಅಷ್ಟು ದಿನವೂ ಅವರೇ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರೇ ನಮ್ಮ ನಾಯಕರು ಅವರ ನೇತೃತ್ವದಲ್ಲಿಯೆ ಪಕ್ಷ ಸಂಘಟನೆ ನಡೆಯಲಿದೆ. ನಾಯಕತ್ವ ಬದಲಾವಣೆ ಎಲ್ಲವೂ ಕೂಡ ಊಹಾಪೋಹ. ಯಾವುದೇ ವಿಚಾರ ಕೂಡ ಪಕ್ಷದ ಮುಂದೆ ಇಲ್ಲ. ಐದು ವರ್ಷ ಆದಮೇಲೆ ಕೂಡ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರಬಹುದು. ಅವರು ನಮ್ಮ ನಾಯಕರು ಅವರ ನಾಯಕತ್ವದಲ್ಲಿ ನಾವು ಪಕ್ಷವನ್ನು ಸಂಘಟನೆ ಮಾಡುತ್ತಿದ್ದೇವೆ ಪಕ್ಷವನ್ನು ಕಟ್ಟುತ್ತಿದ್ದು, ಮುಂದಿನ ಎಲ್ಲಾ ಚುನಾವಣೆಗಳು ಅವರ ನೇತೃತ್ವದಲ್ಲಿ ನಡೆಯಲಿವೆ ಎಂದು ತಿಳಿಸಿದರು.
ಬೆಂಗಳೂರು : 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ ‘ಅಂತಿಮ ವೇಳಾಪಟ್ಟಿ’ ಯನ್ನು ಪ್ರಕಟಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಕುರಿತು ಸುತ್ತೋಲೆ ಹೊರಡಿಸಿದ ಪರೀಕ್ಷಾ ಮಂಡಳಿ ‘ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ದಿನಾಂಕ:04-11-2025 ರಂದು ಪ್ರಕಟಿಸಲಾಗಿದೆ’. ‘ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ” ದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ.
ಬಾಗಲಕೋಟೆ : ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾಗಿದಂತಹ ಎಚ್ ವೈ ಮೇಟಿ ಅವರು ಅನಾರೋಗ್ಯದಿಂದ ನಿನ್ನೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಸಾವನಪ್ಪಿದ್ದರು. ಇಂದು ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ ಗ್ರಾಮಕ್ಕೆ ಮೃತ ದೇಹ ಶಿಫ್ಟ್ ಮಾಡಲಾಗಿತ್ತು. ಇದೀಗ ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ಕುರುಬ ಸಮಾಜದ ಸಂಪ್ರದಾಯದಂತೆ ಎಚ್ ವೈ ಮೇಟಿ ಅವರ ತಂದೆ ತಾಯಿ ಪಕ್ಕದಲ್ಲೇ ಅವರ ಅಂತ್ಯಕ್ರಿಯೆ ನೆರವೇರಿತು. ಸಿಎಂ ಸಿದ್ದರಾಮಯ್ಯ ಹಾಗೂ ಅನೇಕ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ಅಂತ್ಯಕ್ರಿಯೆ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಎಚ್ ವೈ ಮೇಟಿಗೆ ಇನ್ನೊಂದು ಹೆಸರೇ ನಿಷ್ಠಾವಂತ. ಮೇಟಿ ನನ್ನ ಜೊತೆಗೆ ಹೆಚ್ಚು ಮಾತನಾಡುತ್ತಿರಲಿಲ್ಲ ಎದುರು ಕೂಡುತ್ತಿರಲಿಲ್ಲ. ಆದರೆ ನನ್ನ ನಿರ್ಧಾರಕ್ಕೆ ಯಾವಾಗಲೂ ಬದ್ಧರಾಗಿರುತ್ತಿದ್ದರು ನಾನು ಏನೇ ತೀರ್ಮಾನ ಮಾಡಿದರು ಅದಕ್ಕೆ ಅವರು ಬದ್ಧರಾಗಿರುತ್ತಿದ್ದರು. ನಾನು ಕಾಂಗ್ರೆಸ್ ಸೇರಿದಾಗ ಮೇಟಿ ಕೂಡ ಕಾಂಗ್ರೆಸ್ ಸೇರಿದರು. ನಾನು ಹೆಚ್ ವೈ ಮೇಟಿ ಅವರಿಗಿಂತ ಒಂದು ವರ್ಷ ಚಿಕ್ಕವನು ಆದರೆ ನನ್ನನ್ನು…
ಬೆಂಗಳೂರು : ಸಾಮಾನ್ಯವಾಗಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟ ನೀಡಲಾಗುತ್ತಿತ್ತು ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಊಟ ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಸರ್ಕಾರ ಈ ಒಂದು ಯೋಜನೆ ರೂಪಿಸಿತ್ತು. ಇದೀಗ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡಲು ಶಿಕ್ಷಣ ಇಲಾಖೆ, ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಹೌದು ಪಿಯುಸಿ ವಿದ್ಯಾರ್ಥಿಗಳಿಗೂ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್, ಸಿಕ್ಕಿದ್ದು ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಸರಕಾರಿ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಚಿಂತನೆ ನಡೆದಿದೆ ಸರ್ಕಾರಿ ಕಾಲೇಜುಗಳ ಪ್ರವೇಶ ಅತಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ. ಈ ಮೂಲಕ ಇನ್ನು ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಇನ್ಮುಂದೆ ಮಧ್ಯಾಹ್ನದ ಬಿಸಿ ಊಟ ನೀಡಲಾಗುತ್ತದೆ.













