Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ವ್ಯಕ್ತಿಯೊಬ್ಬನ ಮೃತ ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆಗೈದು ನೇಣು ಬಿಗಿದಿರುವ ಶಂಕೆ ವ್ಯಕ್ತವಾಗುತ್ತಿದ್ದು, ಘಟನೆಯು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕುಣಿಕೇನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹೌದು ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದ್ದು, ಮೃತನನ್ನು ಗೋಪಿ (35) ಎಂದು ಹೇಳಲಾಗುತ್ತಿದೆ. ಸಾವನ್ನಪ್ಪಿರುವ ಗೋಪಿ ಮೂಲತಃ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತೊರೆಮಾವಿನಹಳ್ಳಿ ಗ್ರಾಮದವನು ಎಂದು ತಿಳಿಬಂದಿದೆ. ಸಾವಿನ ಬಗ್ಗೆ ಗೋಪಿ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದು ಯಾರೋ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಘಟನಾ ಸ್ಥಳಕ್ಕೆ ದಂಡಿನಶಿವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಂಡಿನಶಿವರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ. ಇಂದಿನಿಂದ ಜೂನ್ 11ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ. ಹೌದು ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ ಉತ್ತರ ಕನ್ನಡ ಜಿಲ್ಲೆ 23 cm, ಕಾರವಾರ 22 cm, ಗೋಕರ್ಣ 20cm, ಕುಮಟಾ 20 cm, ನಷ್ಟು ಮಳೆಯಾಗಿದೆ ಉತ್ತರ ಕರ್ನಾಟಕದಲ್ಲಿ 3.1-7.6 ಕಿಲೋಮೀಟರ್ ಎತ್ತರದಲ್ಲಿ ಸುಳಿ ಗಾಳಿ ಬೀಸಲಿದೆ. ಹೀಗಾಗಿ ಜೂನ್ 11 ರವರೆಗೆ ಗುಡುಗು ಮಿಂಚು ಗಾಳಿ ಸಹಿತ ಮಳೆ ಆಗಲಿದೆ. ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರಿ ಆಗುವ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಗದಗ, ಧಾರವಾಡ, ಹಾವೇರಿ, ವಿಜಯಪುರ, ಶಿವಮೊಗ್ಗ, ಚಿಕ್ಕಮಂಗಳೂರು, ಹಾಸನ, ಕೊಡಗು ಜಿಲ್ಲೆಯಲ್ಲೂ ಕೂಡ ಮಳೆ ಆಗಲಿದೆ.ಹಾಗಾಗಿ ಇಂದಿನಿಂದ ಜೂನ್ 11ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರತಿ ಗಂಟೆಗೆ 40 ರಿಂದ 50 km ವೇಗದಲ್ಲಿ ಗಾಳಿ ಬೀಸುವ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ದಲ್ಲಿ ನಡೆದಿದೆ ಎನ್ನಲಾದ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯೂನಿಯನ್ ಬ್ಯಾಂಕಿನ ಮೂವರು ಸಿಬ್ಬಂದಿಗಳಿಗೆ ಎಸ್ಐಟಿ ತುರ್ತು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದೆ. ಹೌದು ನಿಗಮದ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತ ರೌಲ್, ಬ್ಯಾಂಕ್ ಬ್ರಾಂಚ್ ಹೆಡ್ ದೀಪಾ ಎಸ್, ಕೃಷ್ಣಮೂರ್ತಿಗೆ ನೋಟಿಸ್ ನೀಡಲಾಗಿದೆ. ತುರ್ತಾಗಿ ವಿಚಾರಣೆಗೆ ಹಾಜರಾಗಲು ನೋಟಿಸ್ ಕೊಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹಾಗೂ ಇಡಿ ಎಂಟ್ರಿ ಕೊಟ್ಟಿದ್ದು, ಈಗಾಗಲೇ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ಒಂದು ಪ್ರಕರಣದಲ್ಲಿ ನಿಗಮದ ಅಧಿಕ ಚಂದ್ರಶೇಖರನ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದರು. ಹಾಗಾಗಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಈಗಾಗಲೇ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಬೀ ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ ಅಲ್ಲದೆ ಈ ಒಂದು…
ಕಲಬುರ್ಗಿ : ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಕಲ್ಬುರ್ಗಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಕುರಿತಂತೆ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಹೀಗಾಗಿ ಜಿಲ್ಲಾಧಿಕಾರಿ ಫೌಜಿಯಾ ತರುನ್ನಮ್ ರೆಡ್ ಅಲರ್ಟ್ ಘೋಷಿಸಿ ಅದೇಶಿಸಿದ್ದಾರೆ. ಈಗಾಗಲೇ ರಾಜ್ಯದ ಹಲವೆಡೆ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದ್ದು, ಕಲ್ಬುರ್ಗಿ ಜಿಲ್ಲೆಯಲ್ಲಿ ಮುಂದಿನ 3 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿ ಜಿಲ್ಲಾಧಿಕಾರಿ ಅದೆಸಿದ್ದಾರೆ. ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರುನ್ನಮ್ ರೆಡ್ ಅಲರ್ಟ್ ಘೋಷಿಸಿದ್ದಾರೆ.
ಬೆಂಗಳೂರು : ವೇಗವಾಗಿ ಬಂದಂತಹ ಟಿಪ್ಪರ್ ಒಂದು ಬೈಕಿಗೆ ಗುದ್ದಿದ ಪರಿಣಾಮ ಬೈಕ್ ಮೇಲೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೌದು ಸರ್ಜಾಪುರದಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಈ ಅಪಘಾತ ಸಂಭವಿಸಿದೆ. ಪೀಣ್ಯ ದಾಸರಹಳ್ಳಿ ಮೂಲದ ಬೈಕ್ ಸವಾರ ನವೀನ್ (25) ದಾರುಣವಾಗಿ ಸಾವನ್ನಪ್ಪಿದ್ದಾನೆ. ವೇಗವಾಗಿ ಬಂದು ಬೈಕಿಗೆ ಟಿಪ್ಪರ್ ಡಿಕ್ಕಿ ಹೊಡೆದಿದ್ದರಿಂದ ಈ ಒಂದು ದುರಂತ ಸಂಭವಿಸಿದೆ. ಲಾರಿ ಚಾಲಕನ ಬೇಜವಾಬ್ದಾರಿಗೆ ಬೈಕ್ ಸವಾರ ನವೀನ್ ಬಲಿಯಾಗಿದ್ದಾನೆ.ಲಾರಿ ಚಾಲಕರ ಕ್ರಾಶ್ ಡ್ರೈವಿಂಗ್‌ಗೆ ಪೊಲೀಸರು ಕಡಿವಾಣ ಹಾಕದೆ ಇರುವುದರಿಂದ ದಿನಕ್ಕೊಂದು ಅಪಘಾತವಾಗಿ ಸಾವು ನೋವು ಸಂಭವಿಸುತ್ತಿದ್ದರೂ ಕೂಡ ಮೌನವಹಿಸಿದ್ದಾರೆ. ಪೊಲೀಸರ ನಿರ್ಲಕ್ಷದಿಂದ ಸವರಾರ ಪಾದಚಾರಿಗಳ ಪ್ರಾಣಕ್ಕೆ ಕುತ್ತುಬರುತ್ತದೆ ಎಂದು ಸರ್ಜಾಪುರ ಠಾಣೆ ಪೊಲೀಸರ ವಿರುದ್ಧ ಇದೀಗ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ನವದೆಹಲಿ : ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರನ್ನು ನೇಮಕ ಮಾಡಲಾಗಿದೆ. ಇಂದು ನಡೆದಂತ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಸಂಸದೀಯ ಅಧ್ಯಕ್ಷರಾದ ಬಳಿಕ ಪ್ರತಿಕ್ರಿಯೆ ನೀಡಿದ ಸೋನಿಯಾ ಗಾಂಧಿಯವರು ಇದೊಂದು ಭಾವನಾತ್ಮಕ ಕ್ಷಣವಾಗಿದೆ ಎಂದು ತಿಳಿಸಿದರು. ಹೌದು ಇಂದು ನವದೆಹಲಿಯ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ನಡೆಯಿತು.ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೆಸರನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಪ್ರಸ್ತಾಪಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಸ್ತಾಪಕ್ಕೆ ಗೌರವ್ ಗೋಗಯ್, ತಾರಿಕ್ ಅನ್ವರ್ ಹಾಗೂ ಕೆ.ಸುಧಾಕರ್ ಅನುಮೋದನೆ ನೀಡಿದರು. ಇತರೆ ಎಲ್ಲಾ ಸದಸ್ಯರು ಒಕ್ಕೊರಲ ಒಪ್ಪಿಗೆಯನ್ನು ಸೂಚಿಸಿದರು. ಹೀಗಾಗಿ ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
ಬೆಳಗಾವಿ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಅತಿ ದೊಡ್ಡ ಆಘಾತವಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಹೊರತಾಗಿಯೂ ಕೂಡ ಉತ್ತರ ಪ್ರದೇಶದಲ್ಲಿ ಬಿಜೆಪಿ ನಿರೀಕ್ಷಿತ ಸ್ಥಾನಗಳನ್ನು ಪಡೆಯಲು ವಿಫಲವಾಗಿದೆ. ಇನ್ನು ಇದೇ ವಿಚಾರವಾಗಿ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಸುದ್ಧಿಗಾರರಿಗೆ ಪ್ರತಿಕ್ರಿಯೆ ನೀಡಿದ್ದು, ಉತ್ತರ ಪ್ರದೇಶ ರಾಜ್ಯದ ಅಯೋಧ್ಯೆ ಲೋಕಸಭಾ ಕ್ಷೇತ್ರದಲ್ಲಿ ತಪ್ಪು ಅಭ್ಯರ್ಥಿ ಆಯ್ಕೆಯೇ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಅಯೋಧ್ಯೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆಯೇ ತಪ್ಪಾಗಿದೆ. ಇದೇ ಕಾರಣಕ್ಕಾಗಿ ಸೋಲು ಅನುಭವಿಸಿದೆ. ಈ ಚುನಾವಣೆಯಲ್ಲಿ ಮತದಾರರು ಅರ್ಹ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ. ಮತದಾನ ಮಾಡುವುದು, ಅಭ್ಯರ್ಥಿ ಆಯ್ಕೆ ಅವರವರ ವೈಯಕ್ತಿಕ ವಿಚಾರ. ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸರಿಯಾಗಿರಲಿಲ್ಲ. ಹಾಗಾಗಿಯೇ ಬಿಜೆಪಿ ಸೋತಿರಬಹುದು ಎಂಬುವುದು ನಮ್ಮ ಗಮನಕ್ಕೆ ಬಂದಿದೆ ಎಂದು ತಿಳಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕುದುರೆ ರೇಸ್ ನಡೆಸಲು ಅನುಮತಿ ಕೋರಿ ಬೆಂಗಳೂರು ಟರ್ಫ್ ಕ್ಲಬ್ ಸಲ್ಲಿಸಿದ್ದ ಮನವಿ ತಿರಸ್ಕರಿಸಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರು ಟರ್ಫ್ ಕ್ಲಬ್ ರೇಸ್ ಕೋರ್ಸ್ ಹೈಕೋರ್ಟ್ ಮೆಟ್ಟಿಲೇರಿದೆ ಎಂದು ತಿಳಿದುಬಂದಿದೆ. ಹೌದು ಬಿಟಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಬಿಟಿಸಿ ಅರ್ಜಿಯ ವಿಚಾರಣೆ ನಡೆಸಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಜೂ.12ಕ್ಕೆ ಮುಂದೂಡಿದೆ. ವಿಚಾರಣೆ ವೇಳೆ ಸಕ್ಷಮ ಪ್ರಾಧಿಕಾರ ಕ್ಲಬ್ ಹಾಗೂ ಬುಕ್ಕಿಗಳ ಅಕ್ರಮಗಳ ಬಗ್ಗೆ ಸಿಸಿಬಿ ತನಿಖೆ ಬಾಕಿ ಇದೆ ಎಂದೂ ಸಹ ಹೇಳಿದೆ. ಆದರೆ ಸಕ್ಷಮ ಪ್ರಾಧಿಕಾರ ಅರ್ಜಿ ತಿರಸ್ಕಾರಕ್ಕೆ ನೀಡಿರುವ ಕಾರಣಗಳು ಸರಿಯಲ್ಲ, ಅದಕ್ಕೂ ರೇಸ್ಗೂ ಸಂಬಂಧವಿಲ್ಲ. ಹಾಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕುದುರೆ ರೇಸ್ ನಡೆಸಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ವೇಳೆ ಅರ್ಜಿದಾರರ ಪರ ವಕೀಲರು, ಮೊದಲು ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿರೇಸ್ ಚಟುವಟಿಕೆ…
ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗಳಿಸದೆ ಹೋಗಿದ್ದರಿಂದ ಇದೀಗ ಕಾಂಗ್ರೆಸ್ ನಾಯಕರೇ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ವಿಚಾರದ ಕುರಿತು ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.ಇನ್ನೂ ಈ ವಿಚಾರದ ಕುರಿತಾಗಿ ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಕರ್ನಾಟಕ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜಕೀಯ ದೃಷ್ಟಿಕೋನದಿಂದ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ ಗ್ಯಾರಂಟಿ ಯೋಜನೆ ಜಾರಿಯಿಂದ ಪಕ್ಷಕ್ಕೆ ಲಾಭವಾಗಬಹುದು ಎಂದು ತಿಳಿಸಿದರು. ಬಡವರು ಕಾರ್ಮಿಕರು ಕೃಷಿ, ಕೆಲಸ ಮತ್ತು ಕೂಲಿ, ಕೆಲಸ ಮಾಡುವವರು ಗ್ರಾಮಾಂತರ ಭಾಗದ ಜನರ ಹಿತದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆಂತಲೂ ಗ್ಯಾರಂಟಿ ಜಾರಿ ಮಾಡಲಾಗಿದೆ.ಈ ಹಿಂದೆಯೂ ಇಂದಿರಾಗಾಂಧಿ ಬಡತನ ನಿರ್ಮೂಲನೆ ಮಾಡಿದ್ರು. ಈ ಉದ್ದೇಶದಿಂದ ನಾವು ಗ್ಯಾರಂಟಿ…
ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ಎಸ್ಐಟಿ ಕೋಶದಲ್ಲಿದ್ದು ಹಿಂದೂ ಅಧಿಕಾರಿಗಳು ಅವರನ್ನು ಸ್ಥಳ ಮಹಾಜರಿಗಾಗಿ ಹಾಸನ ಜಿಲ್ಲೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಹಾಸನದ ಸಂಸದರ ನಿವಾಸದಲ್ಲಿ ಸತತ ನಾಲ್ಕು ಗಂಟೆಗಳ ಕಾಲ SIT ಅಧಿಕಾರಿಗಳು ಸ್ಥಳ ಮಹಜರು ನಡೆಸಿದರು. ಹೌದು ಪ್ರಜ್ವಲ ರೇವಣ್ಣ ಅವರನ್ನು SIT ಅಧಿಕಾರಿಗಳು ಹಾಸನ, ಹೊಳೆನರಸೀಪುರಕ್ಕೆ ಇಂಡಬಕರೆದು ತಂದು ಸತತ ನಾಲ್ಕು ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿದರು. ಸ್ಥಳ ಮಹಜರು ಪ್ರಕ್ರಿಯೆ ಮುಗಿಸಿ 4 ವಾಹನಗಳಲ್ಲಿ ತೆರಳಿದ ಎಸ್ಐಟಿ. ಈ ವೇಳೆ ಪ್ರಜ್ವಲ್ ರೇವಣ್ಣನನ್ನು ಕರೆದೊಯ್ಯುವಾಗ ಬೆಂಬಲಿಗರು ಘೋಷಣೆ ಕೂಗಿದ ಘಟನೆ ಜರುಗಿತು. ಪ್ರಜ್ವಲ್ ಮತ್ತು ಎಚ್ ಡಿ ರೇವಣ್ಣಗೆ ಜೈ ಎಂದು ಬೆಂಬಲಿಗರು ಘೋಷಣೆ ಕೂಗಿದರು.ಪ್ರಜ್ವಲ್ ರೇವಣ್ಣ ಕುಳಿತಿದ್ದ ಎಸ್ಐಟಿ ವಾಹನ ಹಿಂಬಾಲಿಸಿ ಘೋಷಣೆ ಕೂಗಿದರು.