Author: kannadanewsnow05

ಬೆಂಗಳೂರು : ಇತ್ತೀಚೆಗೆ ನಡೆದ T20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ಕೆಎಂಎಫ್‌ ಪ್ರಾಯೋಜಕತ್ವ ನೀಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿತ್ತು. ಇದೀಗ ಪ್ರೋ ಕಬಡ್ಡಿ ಪಂದ್ಯಾವಳಿಗೆ ಕರ್ನಾಟಕ ಹಾಲು ಮಹಾಮಂಡಳದ ನಂದಿನಿ ಬ್ರ್ಯಾಂಡ್‌ ಸೆಂಟ್ರಲ್‌ ಪ್ರಾಯೋಜಕತ್ವ ವಹಿಸಲು ಮುಂದಾಗಿದೆ. ಹೌದು ಇಂಡಿಯನ್ ಸೂಪರ್ ಲೀಗ್ ಪುಟ್ಬಾಲ್‌ನ 11ನೇ ಸೀಸನ್ ಸೆ.13 ರಿಂದ ಆರಂಭವಾಗಲಿದೆ. ಪಂದ್ಯದಲ್ಲಿ 13 ತಂಡಗಳು ಸ್ಪರ್ಧಿಸಲಿವೆ. ಈ ಪಂದ್ಯಾವಳಿ ಕೋಲ್ಕತ್ತಾ, ದೆಹಲಿ, ಕೇರಳ ಸೇರಿದಂತೆ ಹಲವೆಡೆ ನಡೆಯಲಿದೆ. ಜೊತೆಗೆ ಪ್ರೋ ಕಬಡ್ಡಿ ಪಂದ್ಯಾವಳಿಯ ಸೆಂಟ್ರಲ್ ಸ್ಪಾನ್ಪರ್‌ಶಿಪ್ ಸಹ ಪಡೆಯಲು ಕೆಎಂಎಫ್ ಮುಂದಾಗಿದೆ. ಈ ಎರಡು ಪಂದ್ಯಾವಳಿಗಳ ಸೆಂಟ್ರಲ್ ಟೈಟಲ್, ಎಲ್‌ಇಡಿ ಬೋರ್ಡ್‌ಗಳು, ಪ್ರೆಸೆಂಟೇಶನ್ ಬ್ಯಾಕ್‌ಡ್ರಾಪ್‌ಗಳು ಸೇರಿ ವಿವಿಧ ರೀತಿಯಲ್ಲಿ ಪ್ರಾಯೋಜಕತ್ವದ ಗುರಿಯನ್ನು ಕೆಎಂಎಫ್ ಹೊಂದಿದೆ. ಜೊತೆಗೆ ನಂದಿನಿ ಮೊಸರು, ಬೆಣ್ಣೆ ಮತ್ತು ತುಪ್ಪ ಸೇರಿದಂತೆ ಡೈರಿ ಉತ್ಪನ್ನಗಳನ್ನು ದೆಹಲಿ ಮಾರುಕಟ್ಟೆಯಲ್ಲಿ ಮುಂದಿನ ತಿಂಗಳಿನಿಂದ ಪರಿಚಯಿಸಲು ಸಿದ್ಧವಾಗಿದೆ ಎನ್ನಲಾಗಿದೆ. ಪ್ರೋ ಕಬಡ್ಡಿ ಜೊತೆಗೆ ಇಂಡಿಯನ್‌ ಸೂಪರ್‌ ಲೀಗ್‌…

Read More

ಧಾರವಾಡ : ಧಾರವಾಡ ಕೆಐಎಡಿಬಿಯಲ್ಲಿ ನಕಲಿ ರೈತರ ಖಾತೆಗಳನ್ನು ಸೃಷ್ಟಿಸಿ, 30 ಕೋಟಿ ಅಕ್ರಮ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಇಬ್ಬರನ್ನು ವಾಹನದಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಹೌದು ಕೆಐಎಡಿಬಿ ಡಬಲ್ ಪೇಮೆಂಟ್ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ವಿಶೇಷ ಭೂಸ್ವಾಧೀನಾಧಿಕಾರಿ ವಿ.ಡಿ. ಸಜ್ಜನ್ ಹಾಗೂ ಕೆಐಎಡಿಬಿಯಲ್ಲಿ ಏಜೆಂಟ್​ ಆಗಿ ಕೆಲಸ ಮಾಡ್ತಿದ್ದ ಅಶ್ಫಾಕ್​ ​ದುಂಡಸಿ ಇಬ್ಬರನ್ನು ಇಡಿ ವಶಕ್ಕೆ ಪಡೆದಿದ್ದು, ಇಬ್ಬರನ್ನು ವಾಹನದಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಜಾಮೀನು ಸಿಗದ ಹಿನ್ನೆಲೆ ಈ ಇಬ್ಬರು ಧಾರವಾಡ ಜಿಲ್ಲಾ ಕಾರಾಗೃಹದಲ್ಲಿದ್ದರು. ಇತ್ತೀಚೆಗೆ ಕೆಐಎಡಿಬಿ ಕಚೇರಿ ಮೇಲೆ ದಾಳಿ ಮಾಡಿದ್ದ ಇಡಿ ತಂಡ, ಅನೇಕ ದಾಖಲೆ ಪತ್ರ ವಶಕ್ಕೆ ಪಡೆದು ಪರಿಶೀಲನೆ ನಡೆಸಿತ್ತು. ಅದರಂತೆ ಪ್ರಕರಣದ ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ಕರೆದೊಯ್ಯಲಾಗಿದೆ.

Read More

ಹುಬ್ಬಳ್ಳಿ : ಟಗರು ಟಗರು ಅಂತರಲ್ಲ ಅದು ಸಿಎಂ ಸಿದ್ದರಾಮಯ್ಯರ ಮೇಲೆ ಪ್ರೀತಿ ಅಲ್ಲ. ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿಲ್ಲ ಅವರ ಒಳ್ಳೆಯತನವನ್ನು ಹೊಗಳುಭಟ್ಟರು ಹಾಳು ಮಾಡಿದ್ದಾರೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಳ್ಳೆಯ ಮನುಷ್ಯ. ಭ್ರಷ್ಟಾಚಾರ ಮಾಡಿದವನಲ್ಲ. ದುಡ್ಡು ಮಾಡಬೇಕಿದ್ದರೇ ಈ ಹಿಂದೆ ಅಧಿಕಾರದ ಅವಧಿಯಲ್ಲಿಯೇ ಸಾಕಷ್ಟು ಮಾಡ್ತಿದ್ದರು. ಆದರೆ, ಅಂತಹ ಕಾರ್ಯಕ್ಕೆ ಕೈ ಹಾಕಿಲ್ಲ ಅವರ ಒಳ್ಳೆಯತನವನ್ನು ಹೊಗಳುಭಟ್ಟರು ಹಾಳು ಮಾಡಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ. ಮುಡಾ (ಮೈಸೂರಿನ ನಗಾರಭಿವೃದ್ಧಿ ಪ್ರಾಧಿಕಾರ) ಪ್ರಕರಣ ಈಗ ಕೋರ್ಟ್​​ನಲ್ಲಿದೆ. ಬಿಜೆಪಿಯವರು ಏನಾದರೂ ದಾಖಲೆಗಳಿದ್ದರೆ ಕೋರ್ಟ್ ಮುಂದೆ ಇಡಬೇಕು. ಕೋರ್ಟ್ ತೀರ್ಮಾನ ಮಾಡುತ್ತದೆ. ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡದೇ ಕಾಂಗ್ರೆಸ್ ಟೀಕೆ ಮಾಡುವುದೇ ಬಿಜೆಪಿಯವರ ಕೆಲಸವಾಗಿದೆ ಎಂದು ಅವರು ಹೇಳಿದರು. ನೈತಿಕತೆ ಇದ್ದರೆ ಬಿಜೆಪಿ ನಾಯಕರು ರಾಜೀನಾಮೆ ಕೊಡಬೇಕಿತ್ತು.‌ ರಾಜ್ಯದಲ್ಲಿ ವಿರೋಧ ಪಕ್ಷ ವಿರೋಧಪಕ್ಷದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ.…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಮಹದಾಯಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪಿಪಿಪಿ ಮಾದರಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು ಎಂದು ಕಾನೂನು ಸಚಿವ HK ಪಾಟೀಲ್ ತಿಳಿಸಿದರು. ಈ ಕುರಿತು ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪಿಪಿಪಿ ಮಾದರಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲು ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ. ಅಲ್ಲದೆ ಸ್ಥಳೀಯ ಉದ್ಯೋಗಿಗಳಿಗೆ ಕೌಶಲ್ಯತೆ ನೀಡಲು 100 ಕೋಟಿ ವೆಚ್ಚದಲ್ಲಿ ತರಬೇತಿ ನೀಡಲಾಗುತ್ತಿದ್ದು, ನಿಪುಣ ಕರ್ನಾಟಕ ಉಪಕ್ರಮ ಹೆಸರಲ್ಲಿ ತರಬೇತಿ ನೀಡಲು ಸಂಪುಟದಲ್ಲಿ ಇಂದು ಅನುಮೋದನೆ ನೀಡಲಾಯಿತು ಎಂದು ತಿಳಿಸಿದರು. ಅಲ್ಲದೆ ಕರ್ನಾಟಕ ಜೈವಿಕ ತಂತ್ರಜ್ಞಾನ ಅಡಿಯಲ್ಲಿ ಐದು ವರ್ಷಗಳ ಕಾಲ ನಾಲ್ಕು ಕೋಟಿ ವೆಚ್ಚದಲ್ಲಿ ಪ್ರೋತ್ಸಾಹ ದನ ನೀಡಲು ಅನುಮೋದನೆ…

Read More

ಬೆಂಗಳೂರು : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದರ ಮಧ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಜಾರಿ ನಿರ್ದೇಶನಾಲಯ (ED) ನೋಟಿಸ್ ನೀಡಿದೆಯಾ ಎಂಬ ಸುದ್ದಿ ಹರಿದಾಡುತ್ತಿದೆ.ಆದರೆ ಇದಕ್ಕೆ ಸಿಎಂ ಕಛೇರಿ ಸ್ಪಷ್ಟನೇ ನೀಡಿದ್ದು ಇದೆಲ್ಲ ಸುಳ್ಳು ಎಂದು ತಿಳಿಸಿದೆ. ಹೌದು ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಇಡಿ ನೋಟಿಸ್‌ ನೀಡಲಾಗಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಕಚೇರಿ ಸ್ಪಷ್ಟನೆಯನ್ನು ನೀಡಿದೆ. ವಾಲ್ಮೀಕಿ ಹಗರಣದಲ್ಲಿ ಈಗಾಗಲೇ ಮಾಜಿ ಸಚಿವ ಬಿ ನಾಗೇಂದ್ರ ಬಂಧನ ಆಗಿದೆ. ಅವರನ್ನು ಇಡಿ ಬಂಧನಕ್ಕೆ ಒಳಪಡಿಸಿತ್ತು. ಅಲ್ಲದೆ, ನಿಗಮದ ಇತರ ಅಧಿಕಾರಿಗಳನ್ನು ಕೂಡಾ ಬಂಧನ ಮಾಡಲಾಗಿದೆ. ಅಲ್ಲದೆ ನಿಗಮದ ಇತರ ಅಧಿಕಾರಿಗಳ ಬಂಧನವೂ ಆಗಿದೆ. ಇದೀಗ ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೂ ಇಡಿ ನೋಟಿಸ್ ನೀಡಿದೆ ಎಂಬ…

Read More

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನವರು ಜೈಲು ಪಾಲಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಪತ್ನಿ ವಿಜಯಲಕ್ಷ್ಮಿ ನಟ ದರ್ಶನ ಅವರನ್ನು ಭೇಟಿ ಮಾಡಿದ್ದರು. ಇದೀಗ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ದರ್ಶನ್ ಸಹೋದರ ತೂಗುದೀಪ ಅವರೊಂದಿಗೆ ವಿಜಯಲಕ್ಷ್ಮಿ ಮತ್ತೊಮ್ಮೆ ದರ್ಶನವರನ್ನು ಭೇಟಿ ಮಾಡಿದ್ದಾರೆ. ಹೌದು ಚಾರ್ಜ್‌ಶೀಟ್ ಸಲ್ಲಿಕೆಯ ಬಳಿಕ ಇಂದು ದರ್ಶನ್ ಭೇಟಿಗೆ ದಿನಕರ್ ತೂಗುದೀಪ್ ಜೊತೆ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ, ಹೈ ಸೆಕ್ಯೂರಿಟಿ ಸೆಲ್‌ನಿಂದ ಹೊರಬಂದ ಆರೋಪಿ ದರ್ಶನ್ ಪತ್ನಿ ಮತ್ತು ಸಹೋದರನನ್ನು ನೋಡಿ ಭಾವುಕರಾಗಿದ್ದಾರೆ. ಜೈಲಿನ ಒಳಗಡೆ ಹೋಗುವುದಕ್ಕೂ ಮುಂಚೆ ವಿಜಯಲಕ್ಷ್ಮಿ ಅವರ ಬ್ಯಾಗ್ ಗಳನ್ನು ಪೊಲೀಸ್ ಸಿಬ್ಬಂದಿ ಚೆಕ್ ಮಾಡಿ ಒಳಗೆ ಬಿಟ್ಟರು. ಇನ್ನೂ ಈ ವೇಳೆ, ಬಳ್ಳಾರಿ ಸೆಂಟ್ರಲ್ ಜೈಲಿನ ಸಂದರ್ಶಕರ ಕೊಠಡಿಯಲ್ಲಿ ಸಹೋದರ ಮತ್ತು ಪತ್ನಿಯ ಜೊತೆ ದರ್ಶನ್ ಮಾತನಾಡಲು ಅರ್ಧ ಗಂಟೆ ಕಾಲಾವಕಾಶ ನೀಡಲಾಗಿದ್ದು, ಕಾನೂನು ಸಮರದ ಬಗ್ಗೆ ಚರ್ಚೆ ನಡೆಸಿದ್ದಾರೆ…

Read More

ರಾಯಚೂರು : ಹಳ್ಳ ದಾಟುತ್ತಿದ್ದ ವೇಳೆ ಮಳೆಯ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬ್ಯಾಂಕ್ ಸಿಬ್ಬಂದಿಯ ಮೃತ ದೇಹ ಇದೀಗ ಪತ್ತೆಯಾಗಿದೆ. ಮೃತನನ್ನು ರಾಯಚೂರು ತಾಲೂಕಿನ ಫತ್ತೆಪುರ ಗ್ರಾಮದ HDFC ಬ್ಯಾಂಕ್ ಸಿಬ್ಬಂದಿ ಬಸವರಾಜು (33) ಎಂದು ತಿಳಿದುಬಂದಿದೆ. ಕಳೆದ ಸೆಪ್ಟೆಂಬರ್ 3ರಂದು ರಾತ್ರಿ ಹಳ್ಳ ದಾಟುತ್ತಿದ್ದಾಗ ಬಸವರಾಜು ಕೊಚ್ಚಿ ಹೋಗಿದ್ದ. ಭಾರಿ ಮಳೆಯಿಂದಾಗಿ ಹೆಚ್ಚಿನ ನೀರಿನ ರಭಸದಿಂದ ಬಸವರಾಜು ಕೊಚ್ಚಿ ಹೋಗಿದ್ದ, ರಾಯಚೂರು ತಾಲೂಕಿನ ಫತ್ತೆಪುರ ಗ್ರಾಮದಿಂದ ಒಂದುವರೆ ಕಿಲೋಮೀಟರ್ ದೂರದಲ್ಲಿ ಇದೀಗ ಬಸವರಾಜುವಿನ ಮೃತ ದೇಹ ಪತ್ತೆಯಾಗಿದೆ. ಎನ್ ಡಿ ಆರ್ ಎಫ್, ಅಗ್ನಿಶಾಮಕದಳ ಪೊಲೀಸರ ಹುಡುಕಾಟ ವೇಳೆ ಪತ್ತೆಯಾಗಿದೆ. ಈ ಕುರಿತು ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಗಳ ವಿರುದ್ಧ ಇತ್ತೀಚಿಗೆ ಪೊಲೀಸರು ನ್ಯಾಯಾಲಯಕ್ಕೆ ಸುಮಾರು 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ದರ್ಶನ್ ಅವರ ಕೊಲೆ ಪ್ರಕರಣದ ಕುರಿತು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ನನಗೆ ತೊಂದರೆ ಬಂದಾಗ ಮತ್ತೊಬ್ಬರ ಹೆಗಲ ಮೇಲೆ ಗನ್ ಇಡುವ ಬದಲು,ನೇರವಾಗಿ ಮಾತಾಡಿ ಫೇಸ್ ಮಾಡಿದ್ದೇನೆ ಎಂದು ತಿಳಿಸಿದರು. ಕಳೆದ ಕೆಲವು ತಿಂಗಳುಗಳ ಹಿಂದೆ ಮಂಡ್ಯದಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ನಟ ದರ್ಶನ್ ಅವರು ಪರೋಕ್ಷವಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ವಿರುದ್ಧ ಹಲವು ಪದಗಳನ್ನು ಬಳಕೆ ಮಾಡಿದ್ದರು. ನಿರ್ಮಾಪಕ ಉಮಾಪತಿ ಗೌಡ ಕೂಡ ದರ್ಶನ ವಿರುದ್ಧ ಆಕ್ರೋಶ ಹೊರ ಹಾಕಿದ್ದರು ಆದರೆ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ ಜೈಲು ಪಾಲಾಗಿರುವ ವಿಚಾರವಾಗಿ ಮಾತನಾಡಿ,ಮಾನವೀಯತೆ ದೃಷ್ಟಿಯಿಂದ ನೋಡುವುದಾದರೆ ಖಂಡಿತ ನಡೆದಿರುವ ಘಟನೆ ದೊಡ್ಡ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳ ವಿರುದ್ಧ ಈಗಾಗಲೇ ಪೊಲೀಸರು ನ್ಯಾಯಾಲಯಕ್ಕೆ ಸುಮಾರು 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇದೀಗ ಚಾರ್ಜ್ ಶೀಟ್ ನಲ್ಲಿ ರೇಣುಕಸ್ವಾಮಿಯ ಕೊಲೆ ಯಾವ ರೀತಿ ಆಗಿದೆ ಎಂಬುದರ ಕುರಿತು ಸಂಪೂರ್ಣವಾದ ವಿವರ ಇಲ್ಲಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ವಿವರ ಕುರಿತಂತೆ ಜೂನ್ 9ರಂದು ಅಪರಿಚಿತ ದೇಹ ಪತ್ತೆಯಾಗಿರುವ ಕುರಿತು ದೂರು ದಾಖಲಾಗುತ್ತದೆ. ಜೂನ್ 10ರಂದು ಪೊಲೀಸರ ಮುಂದೆ ನಾಲ್ವರು ಶರಣಾಗಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸರ ಮುಂದೆ ನಾಲ್ವರು ಆರೋಪಿಗಳು ಶರಣಾಗಿದ್ದರು. ರಾಘವೇಂದ್ರ ಕಾರ್ತಿಕ್ ಕೇಶವಮೂರ್ತಿ ನಿಖಿಲ್ ನಾಯಕ್ ಪೊಲೀಸರಿಗೆ ಶರಣಾಗಿದ್ದರು. ಹಣಕಾಸಿನ ವಿಷಯಕ್ಕೆ ಕೊಲೆ ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಮೃತನ ಹೆಸರು ಬಳಸಿದ ಆಯುಧ, ವಾಹನಗಳ ಹೆಸರಿನಲ್ಲಿ ಗೊಂದಲದ ಹೇಳಿಕೆ ನೀಡಿದ್ದಾರೆ. ಅಲ್ಲದೆ ಪ್ರತ್ಯೇಕ ವಿಚಾರಣೆಯಲ್ಲಿ ಒಂದೊಂದು ರೀತಿಯ ಹೇಳಿಕೆ ನೀಡಿದ್ದರು. ಗೊಂದಲಕಾರಿ ವ್ಯತಿರಿಕ್ತ ಹೇಳಿಕೆ…

Read More

ಮಂಗಳೂರು : ನಡು ರಸ್ತೆಯಲ್ಲೇ ಚಲಿಸುತ್ತಿದ್ದ BMW ಕಾರೊಂದು ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯ ಸುರತ್ಕಲ್ ಎನ್ಐಟಿಕೆ ಹಳೆ ಟೋಲ್ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ. ಹೌದು ಬಿಎಂಡಬ್ಲ್ಯೂ ಕಂಪನಿಯ ಕಾರು ಸುಟ್ಟು ಕರಕಲಾದ ಕಾರು ಎಂದು ಹೇಳಲಾಗುತ್ತಿದ್ದು, ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು. ಎನ್ಐಟಿಕೆಯ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾರಿಗೂ ಅಪಾಯವಾಗಿಲ್ಲ. ಕೂಡಲೇ ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಿಸಿದರು.

Read More