Author: kannadanewsnow05

ಬೆಂಗಳೂರು : ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಸಿಎಂ ಮನೆಗೆ ಬಿಜೆಪಿ ನಾಯಕರ ಮುತ್ತಿಗೆ ವಿಚಾರವಾಗಿ, ನಮ್ಮ ಕಾಲದಲ್ಲಿ ಯಾವ ಹಗರಣವೂ ಆಗಿಲ್ಲ. ಎಲ್ಲಾ ಬಿಜೆಪಿ ಅವರ ಕಾಲದಲ್ಲೇ ಆಗಿರೋದು. ರಾಜಕೀಯಕ್ಕಾಗಿ ಪ್ರತಿಭಟನೆ ಮಾಡಿದ್ರೆ ಮಾಡಲಿ ಎಂದು ಬಿಜೆಪಿ ನಾಯಕರಿಗೆ ಡಿಸಿಎಂ ಡಿಕೆಶಿ ತಿರುಗೇಟು ನೀಡಿದರು. ಚನ್ನಪಟ್ಟಣ ತಾಲೂಕಿನ ಭೈರಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ ೪ ಸಾವಿರ ಕೋಟಿ ರು. ಅಕ್ರಮ ಆರೋಪ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದರು. ಸಿಎಂ ಪತ್ನಿ ವಿರುದ್ಧವೂ ಅಕ್ರಮ ಸೈಟ್ ಪಡೆದ ಆರೋಪಕ್ಕೆ ಪ್ರತಿಕ್ರಿಯಿಸಿ, ಸಿಎಂ ಹೆಂಡತಿ ಯಾಕೆ ಅಕ್ರಮ ಮಾಡುತ್ತಾರೆ? ಅವರ ಆಸ್ತಿ ಮುಡಾಗೆ ಭೂ ಸ್ವಾಧೀನ ಅಗಿದೆ. ಅದಕ್ಕೆ ಪರ್ಯಾಯ ಜಾಗ ಕೊಡಬೇಕು. ಹಾಗಾಗಿ ಅವರಿಗೆ ಸೈಟ್ ಕೊಟ್ಟಿರುತ್ತಾರೆ. ಬಿಜೆಪಿಯವರ ಆಡಳಿತದಲ್ಲೇ ಸೈಟ್ ಕೊಟ್ಟಿದ್ದಾರೆ. ಅವರು ಡಿನೋಟಿಫಿಕೇಷನ್ ಮಾಡಿಕೊಂಡಿಲ್ಲ ಎಂದರು. ಚನ್ನಪಟ್ಟಣವೂ ಬೆಂಗಳೂರಿಗೆ ಸೇರುತ್ತೆ : ಡಿಸಿಎಂ ಡಿಕೆ ಇನ್ನು ಚನ್ನಪಟ್ಟಣ ಬೆಂಗಳೂರು ಸೇರ್ಪಡೆ ವಿಚಾರವಾಗಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿ ಒಬ್ಬ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಅಮೃತ ಹಳ್ಳಿಯ ಸಿದ್ದಿ ಕಾಲೇಜಿನಲ್ಲಿ ಜೈ ಕಿಸಾನ್ ರಾಯ್ ಕೊಲೆ ಮಾಡಲಾಗಿದೆ. ಹೌದು ಅಮೃತ ಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಜೈ ಕಿಸಾನ್ ರಾಯ್ ಸೆಕ್ಯೂರಿಟಿ ಗಾರ್ಡ ನನ್ನು ಹತ್ಯೆ ಮಾಡಲಾಗಿದೆ. ಸಿಂಧಿ ಕಾಲೇಜು ವಿದ್ಯಾರ್ಥಿ ಭಾರ್ಗವ ಎನ್ನುವವ ಚಾಕುವಿನಿಂದ ಇರಿದು ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲೇ ಸೆಕ್ಯೂರಿಟಿ ಕಾರ್ಡ್ ಜೈ ಕಿಸಾನ್ ರಾಯ್ ಮೃತಾಪಟ್ಟಿದ್ದಾನೆ. ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

Read More

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಹೌದು ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಸಲಿಂಗ ಕಾಮ ಕೇಸ್​ನಲ್ಲಿ ಹೆಚ್​.ಡಿ.ರೇವಣ್ಣ ಪುತ್ರ, ಜೆಡಿಎಸ್​ ಎಂಎಲ್​ಸಿ ಸೂರಜ್​ ರೇವಣ್ಣ ಜೈಲು ಸೇರಿದ್ದಾರೆ. ಇದೀಗ ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿ ಎಮ್ ಎಂ ನ್ಯಾಯಾಲಯ ವಿಚಾರಣೆ ನಡೆಸಿ ಜುಲೈ 18ರ ವರೆಗೆ ಸೂರಜ್ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಎಂದು ಆದೇಶ ಹೊರಡಿಸಿದೆ.

Read More

ಬೆಳಗಾವಿ : ವೈದ್ಯರ ನಿರ್ಲಕ್ಷದಿಂದ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಮೃತ ಮಗುವಿನ ಸಂಬಂಧಿಕರಿಂದ ಆಸ್ಪತ್ರೆಯಲ್ಲಿ ಗಲಾಟೆ ನಡೆದಿದ್ದು, ಆಸ್ಪತ್ರೆ ಪರಿಕಲ್ಪಗಳನ್ನು ಒಡೆದು ಹಾಕಿ ಸಂಬಂಧಿಕರು ಇದೀಗ ಆಕ್ರೋಶ ಹೊರಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದಿದೆ. ಗೋಕಾಕ್ ಪಟ್ಟಣದ ಡಾ. ಮಹಾಂತೇಶ್ ಕಡಾಡಿ ಎಂಬುವವರಿಗೆ ಸೇರಿದ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕನ ಬ್ಯಾಳಿ ಕಾಟ ಬಳಿ ಇರುವ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ. ಶಿವಾನಂದ ನಿಂಗಪ್ಪ ಬಡಬಡಿ ಎಂಬುವರ 7 ತಿಂಗಳ ಮಗು ಸಾವನ್ನಪ್ಪಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ತಡ ರಾತ್ರಿ ಮಗು ಸ್ಥಿತಿ ಗಂಭೀರವಾಗಿದೆ ಎಂದು ಸಿಬ್ಬಂದಿ ತಿಳಿಸಿದರು. ಬೆಳಿಗ್ಗೆ ಮಗುವನ್ನು l ಬೇರೆ ಆಸ್ಪತ್ರೆಗೆ ದಾಖಲಿಸಿ ಅಂದಿದ್ದರು. ಆದರೆ ಆಂಬುಲೆನ್ಸ್ ಬರುವಷ್ಟರಲ್ಲಿ ಆಸ್ಪತ್ರೆ ವೈದ್ಯರು ಮಗು ಮೃತಪಟ್ಟಿದ್ದೆ ಎಂದಿದ್ದಾರೆ. ಹೀಗಾಗಿ ಆಸ್ಪತ್ರೆಯ ಪರಿಕರ ಒಡೆದು ಹಾಕಿ, ಡಾ.ಮಹಾಂತೇಶ್ ಕಡಾಡಿ ವಿರುದ್ಧ ಆಕ್ರೋಶ…

Read More

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ. ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ. ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಲುಗನ್ ಹಾಗೂ ಇತರೆ…

Read More

ಬೆಂಗಳೂರು : ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಏನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಅವರ ಪತ್ನಿಗೂ ಕೂಡ ಸೈಟ್ ಹಂಚಿಕೆಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ನಾನು ಯಾಕಪ್ಪ ರಾಜೀನಾಮೆ ಕೊಡಬೇಕು?ಇದರಲ್ಲಿ ನನ್ನ ಪಾತ್ರ ಏನಿದೆ? ಎಂದು ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಮುಡಾ ಅಕ್ರಮದ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಯಾಕೆ ಸಿಬಿಐ ತನಿಖೆಗೆ ಕೊಡಬೇಕು? ಬಿಜೆಪಿ ಸರ್ಕಾರದ ಅವಧಿಯಲ್ಲೆ ಸೈಟ್ ಹಂಚಿಕೆ ಮಾಡಿದ್ದು. ಈಗ ದುರುಪಯೋಗ ಆಗಿದೆ ಅಂತ ಆರೋಪ ಮಾಡಿದ್ದಾರೆ. ದುರುಪಯೋಗ ಆಗಿದೆಯಾ ಇಲ್ವಾ ಅಂತ ತನಿಖೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಯಾರ ಅವಧಿಯಲ್ಲಿ ಸೈಟ್ ಹಂಚಿಕೆ ಆಯಿತು ಅವರನ್ನು ವರ್ಗಾವಣೆ ಮಾಡಲಾಗಿದೆ. ತನಿಖೆ ಮಾಡಲು ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಿದ್ದೇವೆ. ನಾನು ಯಾಕಪ್ಪಾ ರಾಜೀನಾಮೆ ಕೊಡಬೇಕು? ನನ್ನ ಪಾತ್ರ ಏನಿದೆ? ಅಶೋಕ್ ರಾಜೀನಾಮೆ ಕೇಳುತ್ತಾನೆ ಅಂತ ಕೊಡಲು ಆಗುತ್ತಾ? ಅವರ ಕಾಲದಲ್ಲೇ ಅಕ್ರಮ…

Read More

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ಸೇರಿದಂತೆ 3 ಪ್ರಕರಣಗಳಿಗೆ ಸಂಬಂಧಿಸಿದಂತೆ ಇದೀಗ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದಿಗ 3 ಪ್ರಕರಣಗಳಲ್ಲಿ ಜಾಮೀನು ಕೋರಿ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಮೊದಲು ಸೆಷನ್ಸ್ ಕೋರ್ಟ್ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಹೀಗಾಗಿ 3 ಪ್ರಕರಣಗಳಿಗೆ ಸಂಬಂಧಿಸಿದಂತೆ ಇದೀಗ ಪ್ರಜ್ವಲ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

Read More

ಮಂಗಳೂರು : ಮಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ಮಣ್ಣು ಕುಸಿತ ಉಂಟಾಗಿದೆ.ಈ ವೇಳೆ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿರುವ ಘಟನೆ ಮಂಗಳೂರಿನ ಬಲ್ಮಠದಲ್ಲಿ ನಡೆದಿದೆ. ಹೌದು ಮಣ್ಣು ಕುಸಿತ ಆಗಿ ಇಬ್ಬರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿದ್ದಾರೆ. ಮಂಗಳೂರಿನ ನಗರದ ಬಲ್ಮಠದಲ್ಲಿ ನಡೆದ ಘಟನೆಯಾಗಿದೆ. ಖಾಸಗಿ ಕಟ್ಟಡ ನಿರ್ಮಾಣದ ಕಾಮಗಾರಿಯ ವೇಳೆ ಈ ಒಂದು ಘಟನೆ ನಡೆದಿದೆ. ಇಬ್ಬರು ಕಾರ್ಮಿಕರ ರಕ್ಷಣೆಗೆ ಇದೀಗ ಎಸ್ ಡಿ ಆರ್ ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು. ಸುಮಾರು 20 ಅಡಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಮೈ ಮೇಲೆ ಮಣ್ಣು ಬಿದ್ದಿದೆ ಎಂದು ಹೇಳಲಾಗುತ್ತಿದೆ. ತಕ್ಷಣ ಘಟನ ಸ್ಥಳಕ್ಕೆ ಸಿಬ್ಬಂದಿ ಹಾಗೂ ಎಸ್ ಡಿ ಆರ್ ಎಫ್ ತಂಡ ಭೇಟಿ ನೀಡಿದ್ದು ರಕ್ಷಣಾ ಕಾರ್ಯಚರಣೆ ಒಂದು…

Read More

ವಿಜಯಪುರ : ನಿನ್ನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣ ನದಿಯ ತಟದಲ್ಲಿ 8 ಜನರು ಇಸ್ಪೀಟ್​ ಆಡುತ್ತಿದ್ದರು. ಈ ವಿಚಾರ ತಿಳಿದು ಪೊಲೀಸರು ದಾಳಿ ಮಾಡಿದ್ದು, ತಪ್ಪಿಸಿಕೊಳ್ಳಲು ಎಂಟೂ ಜನರು ತೆಪ್ಪದಲ್ಲಿ ನದಿಯ ಮತ್ತೊಂದು ತಟಕ್ಕೆ ಹೋಗುತ್ತಿದ್ದ ವೇಳೆ ತೆಪ್ಪ ಮಗಚಿದೆ. ಐವರು ನೀರು ಪಾಲಾಗಿದ್ದು, ಮೂವರ ಮೃತ ದೇಹ ಸಿಕ್ಕಿದೆ.ಉಳಿದ ಇಬ್ಬರ ಮೃತದೆಹಕ್ಕಾಗಿ ಇದೀಗ ಶೋಧಕಾರ್ಯ ಮುಂದುವರೆದಿದೆ. ನೀರು ಪಾಲಾಗಿದ್ದ ಪುಂಡಲೀಕ ಯಂಕಂಚಿ, ತಯ್ಯಬ್ ಚೌಧರಿ (40), ಕೊಲ್ಹಾರ ಪಟ್ಟಣದ ನಿವಾಸಿ ದಶರಥ ಗೌಡರ್ (54) ಮೃತದೇಹ ಪತ್ತೆಯಾಗಿವೆ. ಆಂಬುಲೆನ್ಸ್ ಮೂಲಕ ಮರಣೋತ್ತರ ಪರೀಕ್ಷೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ಶವಗಳನ್ನು ರವಾನೆ ಮಾಡಲಾಗಿದೆ. ರಫೀಕ್ ಬಾಂಬೆ ಹಾಗೂ ಮೆಹಬೂಬ್ ವಾಲೀಕಾರಗಾಗಿ ಅಗ್ನಿಶಾಮಕ ದಳ, ಪೊಲೀಸರಿಂದ ಶೋಧಕಾರ್ಯ ನಡೆದಿದೆ. ಘಟನೆ ಹಿನ್ನೆಲೆ? ನಿನ್ನೆ ವಿಜಯಪುರ ಜಿಲ್ಲೆಯ ಕೋಲಾರ ಸಮೀಪ ಬಳುತಿ ಜಾಕ್ ವೆಲ್ ನಲ್ಲಿ ಕೃಷ್ಣಾ ನದಿ ತಟ್ಟದಲ್ಲಿ 8 ಜನರು ಇಸ್ಪೀಟ್ ಆಡಲು ಕುಳಿತಿದ್ದರು. ಇವಳೆ…

Read More

ದಾವಣಗೆರೆ : ದಾವಣಗೆರೆಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಐವರ ಸ್ಥಿತಿ ಗಂಭೀರವಾಗಿರುವ ಘಟನೆ ದಾವಣಗೆರೆಯ ಎಸ್ ಜಿ ಓ ಕಾಲೋನಿಯಲ್ಲಿ ಈ ಒಂದು ದುರ್ಘಟನೆ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ತಾಯಿ ಪಾರಮ್ಮ, ಮಗ ಪ್ರವೀಣ, ಸೊಸೆ ಭಾಗ್ಯ ಹಾಗೂ ಇಬ್ಬರು ವೃದ್ಧ ದಂಪತಿಗೆ ಗಂಭೀರವಾದ ಗಾಯಗಳಾಗಿದ್ದು, ತಕ್ಷಣ ಅವರನ್ನು ಗಾಯಾಳುಗಳಿಗೆ ದಾವಣಗೆರೆಯ ಜಿಲ್ಲಾ ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ವೃದ್ಧ ದಂಪತಿ ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿತ್ತು. ಈ ವೇಳೆ ನೋಡಲು ಹೋದಾಗ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ವೃದ್ಧ ದಂಪತಿ ಸೇರಿದಂತೆ ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಘಟನೆ ಕುರಿತಂತೆ ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More