Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನ ಪ್ರಸಿದ್ಧ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸುಮಾರು 20 ವರ್ಷಗಳಿಗೂ ಹೆಚ್ಚು ಕಾಲದಿಂದ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸಿದ್ದ ದಾದಿಯರನ್ನು ಖಾಯಂಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ. ಬಿ.ಜೆ.ರಾಣಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಎಸ್.ಸಂಜಯಗೌಡ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ. ರಾಜ್ಯದ ಅತ್ಯುತ್ತಮ ಸಂಸ್ಥೆಗಳಲ್ಲಿ ಒಂದೆನಿಸಿರುವ ಸಂಸ್ಥೆ ಮಾದರಿಯಾಗಬೇಕು. ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಅಧ್ಯಕ್ಷರಾಗಿರುವ ಗೌರ್ನರಿಂಗ್ ಕೌನ್ಸಿಲ್ ಆಡಳಿತ ನಿರ್ವಹಣೆ ನೋಡಿಕೊಳ್ಳುವ ಸಂಸ್ಥೆ ತನ್ನ ನರ್ಸ್ಗಳ ವಿಚಾರದಲ್ಲಿ ನ್ಯಾಯಯುತವಾಗಿ ನಡೆದುಕೊಳ್ಳಬೇಕು ಎಂದು ಪೀಠ ಹೇಳಿದೆ. ಹಾಗಾಗಿ ಅರ್ಜಿದಾರರು 20 ವರ್ಷಕ್ಕೂ ಅಧಿಕ ಸಮಯದಿಂದ ಗುತ್ತಿಗೆ ಆಧಾರದ ಮೇಲೆ ಸ್ಟಾರ್ಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಗಾಗಿ 10 ವರ್ಷ ಸೇವೆ ಪೂರೈಸಿದ ದಿನದಿಂದ ಅನ್ವಯವಾಗುವಂತೆ ಅವರ ಸೇವೆಯನ್ನು ಖಾಯಂಗೊಳಿಸಬೇಕು. 10 ವರ್ಷವನ್ನು ಪರಿಗಣಿಸುವಾಗ ಮಧ್ಯದಲ್ಲಿ ಒಂದೆರಡು ದಿನ ಬ್ರೇಕ್ ಅವಧಿಯನ್ನು ಪರಿಗಣಿಸಬಾರದು ಎಂದು ಪೀಠ ಸೂಚನೆ ನೀಡಿದೆ.
ದಾವಣಗೆರೆ : ಮದ್ಯದಂಗಡಿ ನಡೆಸಲು ಕಟ್ಟಡವನ್ನು ಬಾಡಿಗೆ ಕೊಡದಂತಹ ಕಟ್ಟಡದ ಮಾಲೀಕ ಹಾಗೂ ಆತನ ಕುಟುಂಬಸ್ಥರ ಮೇಲೆ ಪುರಸಭೆ ಕಾಂಗ್ರೆಸ್ ಸದಸ್ಯ ಹಾಗೂ ಆತನ 50 ಜನ ಸಹಚರರಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ದಾವಣಗೆರೆಯ ಚನ್ನಗಿರಿ ಪಟ್ಟಣದಲ್ಲಿ ನಡೆದಿದೆ. ಕಟ್ಟಡ ಮಾಲೀಕ ರುದ್ರೋಜಿರಾವ್, ಆತನ ಕುಟುಂಬ ಸದಸ್ಯರಾದ ಶ್ವೇತಾ, ರಾಹುಲ್, ಶಿವಾಜಿ ಎಂಬುವವರ ಮೇಲೆ ಪೊಲೀಸರ ಮುಂದೆಯೇ ಪುರಸಭೆ ಕಾಂಗ್ರೆಸ್ ಸದಸ್ಯ ಶ್ರೀಕಾಂತ್ ಚೌಹಾಣ್ ಮತ್ತು ಆತನ 50 ಸಹಚರರಿಂದ ಹಲ್ಲೆ ನಡೆದಿದೆ. ಚನ್ನಗಿರಿ ಪಟ್ಟಣದ ಬಸ್ ಸ್ಟ್ಯಾಂಡ್ ಸಮೀಪ 3 ಅಂತಸ್ತಿನ ಸ್ವಂತ ಕಟ್ಟಡದ ಮಾಲೀಕತ್ವ ಹೊಂದಿರುವ ರುದ್ರೋಜಿರಾವ್, ಪುರಸಭೆ ಕಾಂಗ್ರೆಸ್ ಸದಸ್ಯನಿಗೆ 3 ಅಂತಸ್ತು ಕಟ್ಟಡದಲ್ಲಿ 2 ಅಂತಸ್ತಗಳನ್ನು ಬಾಡಿಗೆ ನೀಡಿದ್ದರು. ಕಳೆದ 12 ವರ್ಷಗಳಿಂದ ಶ್ರೀಕಾಂತ್ ಚೌಹಾಣ್ ಇದೇ ಕಟ್ಟಡದಲ್ಲಿ ಮದ್ಯದಂಗಡಿ ನಡೆಸುತ್ತಿದ್ದ. ಮದ್ಯದಂಗಡಿ ಲೈಸೆನ್ಸ್ ನಕಲಿ ಸಹಿ ಮಾಡಿ ರಿನೇವಲ್ ಮಾಡುತ್ತಿದ್ದ.ಇದನ್ನು ಪ್ರಶ್ನಿಸಿದ ರುದ್ರೋಜಿರಾವ್, ಶ್ರೀಕಾಂತ್ ಚೌಹ್ವಾಣ್ ಮೇಲೆ ಜಿಲ್ಲಾಧಿಕಾರಿ ಸೇರಿದಂತೆ ಅಬಕಾರಿ ಆಯುಕ್ತರಿಗೆ…
ಬೆಂಗಳೂರು : ಅಕ್ಟೋಬರ್ 2ರಂದು ಗಾಂಧಿ ಜಯಂತಿಯಂದು ಸರ್ಕಾರದ ಆದೇಶವನ್ನು ಉಲ್ಲಂಘಿಸಿ, ಅಕ್ರಮವಾಗಿ ಮಧ್ಯ ಮಾರಾಟ ಮಾಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಎರಡು ದಾಭಾಗಗಳ ಕ್ಯಾಶಿಯರ್ ವಿರುದ್ಧ FIR ದಾಖಲಾಗಿದೆ. ನೆಲಮಂಗಲ ನಗರದ ಮನೋಜ್ ಡಾಬಾ ಕ್ಯಾಶಿಯರ್ ನವೀನ್ ಹಾಗೂ ಮಿರಾಕಲ್ ಢಾಬಾ ಕ್ಯಾಶಿಯರ್ ಸಂಜಯ್ ಗೌಡ ವಿರುದ್ಧ ಕೆಎಸ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿರುವ ಡಾಬಾಗಳು. ಗಾಂಧಿ ಜಯಂತಿಯಂದು ಡಾಬಾಗಳಲ್ಲಿ ಅಕ್ರಮವಾಗಿ ಮದ್ಯ ಮಾರುತಿದ್ದರು. ಖಚಿತ ಮಾಹಿತಿ ಮೇರೆಗೆ ನೆಲಮಂಗಲ ಟೌನ್ ಪೋಲೀಸರು ಡಾಬಾ ಗಳ ಮೇಲೆ ದಾಳಿ ಮಾಡಿದ್ದರು. ನೆಲಮಂಗಲದ ಟೌನ್ ಪಿಎಸ್ಐ ಜಯಂತಿ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿತ್ತು. ಅಕ್ಟೋಬರ್ 2ರಂದು ಎಂಸಿಆರ್ ದಾಖಲಿಸಿದ್ದರು. ನ್ಯಾಯಾಲಯದ ಅನುಮತಿ ಪಡೆದು ನವೀನ್ ಸಂಜಯ್ ವಿರುದ್ಧ FIR ದಾಖಲಾಗಿದೆ. ಪ್ರಕರಣ ಕುರಿತಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯನಗರ : ಪ್ರತಿದಿನ ಕುಡಿದು ಬಂದು ಪತ್ನಿಯ ಜೊತೆಗೆ ಪತಿ ಜಗಳವಾಡುತ್ತಿದ್ದ, ಇದರಿಂದ ಬೇಸತ್ತು ಪತ್ನಿ ಹಾಗೂ ಪತಿ ಇಬ್ಬರೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ನಡೆದಿದೆ. ನಗರದ ರಾಮರಹಿಂ ನಿವಾಸಿಗಳಾದ ಮಂಜುನಾಥ (28 )ಗೀತಾ (25) ಕೌಟುಂಬಿಕ ಕಲಹದಿಂದ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.ಪತಿ ಮಂಜುನಾಥ್ ದಿನವು ಕುಡಿದು ಬಂದು ಹೆಂಡತಿಗೆ ಕಿರುಕುಳ ನೀಡಿ ಗಲಾಟೆ ಮಾಡುತ್ತಿದ್ದ. ನಿನ್ನೆ ರಾತ್ರಿ ಕೂಡ ಇದೇ ರೀತಿ ಪುನರಾವರ್ತನೆಯಾದಾಗ ಮಂಜುನಾಥ್ ಮತ್ತು ಗೀತಾ ಇಬ್ಬರೂ ನೇಣು ಬಿಗಿದುಕೊಂಡು ಆ ಮಾತೆಗೆ ಶರಣಾಗಿದ್ದಾರೆ. ಘಟನೆ ಕುರಿತಂತೆ ಹಗರಿಬೊಮ್ಮನಹಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ : ಪತಿಯೊಬ್ಬ ತನಗೆ ಕುಡಿಯುವುದಕ್ಕೆ ಹಾಗೂ ವಿಸ್ಪೀಟ್ ಆಡುವುದಕ್ಕೆ ಪತ್ನಿಯ ಬಳಿ ಹಣ ಕೇಳಿದ್ದಾನೆ. ಈ ವೇಳೆ ಪತ್ನಿ ನನ್ನ ಹತ್ತಿರ ಹಣ ಇಲ್ಲ ಎಂದಾಗ ಪತಿ ಹೊಲಕ್ಕೆ ಸಿಂಪಡಿಸುವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಅಣಿಮೇಗಳ ತಾಂಡಾದಲ್ಲಿ ನಡೆದಿದೆ. ಮಹಾಂತೇಶ್ ನಾಯ್ಕ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದುಬಂದಿದೆ. ಮದ್ಯಪಾನ ಮತ್ತು ಇಸ್ಟೀಟ್ ಜೂಜಾಟದ ಚಟ ಹೊಂದಿದ್ದ ಮಹಾಂತೇಶ್, ಪತ್ನಿಗೆ ಕರೆ ಮಾಡಿ ನನಗೆ 5 ಸಾವಿರ ರೂಪಾಯಿ ಬೇಕಾಗಿದೆ ಕೊಡು ಎಂದು ಪೀಡಿಸಿದ್ದಾನೆ. ಪತ್ನಿ ಮೋತಿಬಾಯಿ ಹಣವಿಲ್ಲ ಎಂದು ಹೇಳಿದ್ದಕ್ಕಾಗಿ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಸ್ಥಳೀಯರು ಕೂಡಲೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯಪುರ : ವಕ್ಫ್ ಆಸ್ತಿ ಸರ್ಕಾರದಿಂದ ಒಂದಿಂಚು ತೆಗೆದುಕೊಂಡಿಲ್ಲ ಇದೆಲ್ಲವೂ ದಾನಿಗಳು ಕೊಟ್ಟಿದ್ದು.ವಕ್ಫ್ ಆಸ್ತಿ ಏನು ನಿಮ್ಮಪ್ಪಂದು ಅಲ್ಲ ಎಂದು ವಿಜಾಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಚಿವ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದರು. ಇಂದು ವಿಜಯಪುರದಲ್ಲಿ ಕಾರ್ಯಕ್ರಮದಲ್ಲಿ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಜಮೀರ್ ಅಹ್ಮದ್ ಕಿಡಿ ಕಾರಿದ್ದು, ವಕ್ಫ್ ಆಸ್ತಿಯಲ್ಲಿ ಒಂದಿಷ್ಟು ಸಹ ಸರ್ಕಾರದ ಆಸ್ತಿ ಇಲ್ಲ. ಇದು ದಾನಿಗಳು ದಾನ ನೀಡಿರುವ ಆಸ್ತಿ. ವಕ್ಫ್ ಆಸ್ತಿ ಬಸನಗೌಡ ಪಾಟೀಲ್ ಯತ್ನಾಳ್ ಅಪ್ಪನ ಆಸ್ತಿಯಲ್ಲ ಎಂದು ಕಿಡಿ ಕಾರಿದರು. ವಕ್ಫ್ ಆಸ್ತಿ ನಿಮ್ಮಪ್ಪನ ಆಸ್ತಿಯು ಅಲ್ಲ ನಮ್ಮಪ್ಪನ ಆಸ್ತಿಯೂ ಅಲ್ಲ. ಸಮಾಜಕ್ಕೆ ಒಳ್ಳೆಯದಾಗಲೆಂದು ದಾನ ಮಾಡಿರುವ ಆಸ್ತಿ ಇದು. ಒಂದಿಂಚು ಸರ್ಕಾರದ ಜಮೀನು ತಗೊಂಡಿಲ್ಲ ಮಿಸ್ಟರ್ ಯತ್ನಾಳ್ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ವಾಗ್ದಾಳಿ ನಡೆಸಿದರು.
ಬೀದರ್ : ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೀದರ್ ನಾ ದೇವವನ ಎಂಬಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಗಣೇಶ್ಪುರ ಗ್ರಾಮದ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ದಂಪತಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಮೃತರನ್ನು ಗಣೇಶ್ ಪುರ ಗ್ರಾಮದ ಜಗನ್ನಾಥ (35) ಪತ್ನಿ ರೇಣುಕಾ (35) ಪುತ್ರ ವಿನೋದ್ ಕುಮಾರ್ (14) ಸ್ಥಳದಲ್ಲಿ ದುರ್ಮರಣ ಹೊಂದಿದ್ದಾರೆ. ಕೂಡಲೇ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೀದರ್ ನ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು.
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಹಳಿಯ ಮೇಲೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿತ್ತು.ಇದೀಗ ಕಾಡುಗೋಡಿ ಟ್ರೀ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಿಬ್ಬಂದಿಗಳ ಮೇಲೆ ಕುಡಿದ ಮತ್ತಿನಲ್ಲಿ ಇಬ್ಬರು ಆರೋಪಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹೌದು ನಿನ್ನೆ ಕುಡಿದ ಮತ್ತಿನಲ್ಲಿ ಇಬ್ಬರೂ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿಗಳು ತಪಾಸಣೆ ಮಾಡಿ ಅವರನ್ನು ತಡೆದಿದ್ದರು. ಇದರಿಂದ ಕುಪಿತಗೊಂಡ ಇಬ್ಬರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.ಈ ವೇಳೆ ಮಹಿಳಾ ಸಿಬ್ಬಂದಿ ಹಾಗೂ ಟಿಕೆಟ್ ಆಪರೇಟರ್ ಜೊತೆ ಅಸಭ್ಯ ಪದ ಬಳಸಿ ನಿಂದಿಸಿದ್ದಾರೆ. ಅದಾದ ಬಳಿಕ ಗಲಾಟೆ ತಾರಕಕ್ಕೆ ಏರಿದ್ದು ಈ ವೇಳೆ, ಸಿಬ್ಬಂದಿಗಳು ಇಬ್ಬರನ್ನು ಹಿಡಿದುಕೊಂಡಿದ್ದಾರೆ ಆದರೆ ಅದರಲ್ಲಿ ಓರ್ವ ತಪ್ಪಿಸಿಕೊಂಡು ಓಡಿಹೋಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ BMRCL ಅಧಿಕಾರಿಗಳು ದೂರು ದಾಖಲಿಸಿದ್ದಾರೆ.
ನವದೆಹಲಿ : ಜಾತಿ ಗಣತಿ ವರದಿ ಜಾರಿ ಮಾಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ವಿಚಾರವಾಗಿ ಅಧಿಕಾರದಿಂದ ಕೆಳಗಿಳಿಯುವ ಹೊತ್ತು ಬಂದಿದೆ.ಹಾಗಾಗಿ ಜಾತಿ ಗಣತಿ ಅಸ್ತ್ರದ ಬಗ್ಗೆ ಹೇಳುತ್ತಿದ್ದಾರೆ ಎಂದು ದೆಹಲಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ ಪ್ರತಿಕ್ರಿಯೆ ನೀಡಿದರು. ನವದೆಹಲಿಯಲ್ಲಿ ಜಾತಿ ಗಣತಿ ವರದಿ ಜಾರಿ ಕುರಿತಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿಗಣತಿಗೆ ತಕರಾರು ಇಲ್ಲ.ಆದರೆ ಅದು ಜಾತಿಗಣತಿನೆ ಅಲ್ಲ. ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಸಹ ಹೇಳಿದ್ದಾರೆ. ಅಧಿಕಾರದಿಂದ ಕೆಳಗಿಳಿಯುವ ಹೊತ್ತು ಬಂದಿದೆ.ಹಾಗಾಗಿ ಜಾತಿ ಗಣತಿ ಅಸ್ತ್ರದ ಬಗ್ಗೆ ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದು ಚುನಾವಣಾ ಪೂರ್ವದಲ್ಲಿ ಮಾಡುವ ಸಮೀಕ್ಷೆ ಇದ್ದಂತೆ ಹಾಗಾಗಿ ಈ ಸಮೀಕ್ಷೆಯನ್ನು ಬಿಡುಗಡೆ ಮಾಡುವುದು ಬೇಡ ಸಿದ್ದರಾಮಯ್ಯನವರು ಮಾಡಿಸಿದ್ದ ಜಾತಿ ಸಮೀಕ್ಷೆಗೆ ಸಹಿ ಇಲ್ಲ ಚಾದರ ಸದಸ್ಯ ಕಾರ್ಯದರ್ಶಿ ಸಮೀಕ್ಷೆಗೆ ಸಹಿ ಮಾಡಿಲ್ಲ. ಯಾಕೆ ಸಹಿ ಮಾಡಿಲ್ಲ ಅನ್ನೋದು ಇದುವರೆಗೂ ಗೊತ್ತಾಗಿಲ್ಲ…
ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. 28 ಗಂಟೆಗಳ ಕಾರ್ಯಾಚರಣೆ ಬಳಿಕ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಒಬ್ಬಳು ಮುಮ್ತಾಜ್ ಅಲಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದಳು ಎಂಬ ಆರೋಪ ಕೇಳಿ ಬಂದಿದ್ದು, ಈ ಒಂದು ಬ್ಲಾಕ್ ಮೇಲ್ ಗೆ ಮಹಿಳೆಯ ಪತಿ ಕೂಡ ಸಾತ್ ನೀಡಿದ್ದಾನೆ ಎಂದು ತಿಳಿದುಬಂದಿದೆ. ಹೌದು ಮಹಿಳೆ ಬ್ಲ್ಯಾಕ್ಮೇಲ್ ಗೆ ಆಕೆ ಪತಿಯೇ ಸಾತ್ ನೀಡಿದ್ದ ಎನ್ನಲಾಗುತ್ತಿದೆ. ರಹಮತ್ ಅಲಿಯಾಸ್ ಆಯೇಷಾ ಎಂಬ ಮಹಿಳೆಯಿಂದ ಬ್ಲಾಕ್ ಮೇಲ್ ಮಾಡಲಾಗಿತ್ತು. ಇದಕ್ಕೆ ಆಕೆಯ ಪತಿ ಕೂಡ ಬ್ಲಾಕ್ ಮೇಲ್ ಮಾಡಲು ಸಹಕರಿಸಿದ್ದಾನೆ. ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್ ರೆಹಮತ್ ಅಲಿಯಾಸ್ ಆಯೇಷಾ ಎಂಬ ಮಹಿಳೆಯಿಂದ ಅಲಿಗೆ ಬ್ಲಾಕ್ ಮೇಲ್ ಮಾಡಲಾಗುತ್ತಿತ್ತು. ಆರೋಪಿ ಮಹಿಳೆ ರೆಹಮತ್ ಅಲಿಯಾಸ್ ಆಯೇಷ ಎನ್ನುವ ಮಹಿಳೆ ಮುಮ್ತಾಜ್ ಅಲಿಯನ್ನು ಹನಿ ಟ್ರಾಪ್…













