Author: kannadanewsnow05

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಸತೀಶ್ ಜಾರಕಿಹೊಳಿ ಅವರ ನಡೆ ತೀವ್ರ ಕುತೂಹಲ ಮೂಡಿಸಿದೆ.ಕಳೆದ ಎರಡು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ ಬಳಿಕ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.ಇದರ ಮಧ್ಯ ಪ್ರತಿಯೊಬ್ಬರಿಗೂ ಸಚಿವ, ಡಿಸಿಎಂ, ಸಿಎಂ ಅನಂತರ ಕೇಂದ್ರ ಸಚಿವ ರಾಗಲು ಎಲ್ಲರಿಗೂ ಆಸೆ ಇರುತ್ತದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಮೊದಲು ಸಚಿವ, ಅಮೇಲೆ ಡಿಸಿಎಂ, ಬಳಿಕ ಸಿಎಂ, ಅನಂತರ ಕೇಂದ್ರ ಸಚಿವರಾಗಬೇಕು ಅಂತಾ ಆಸೆ ಇರುತ್ತದೆ. ಆದರೆ ಸದ್ಯಕ್ಕೆ ಸಿಎಂ ರೇಸ್ ಸನ್ನಿವೇಶ ಇಲ್ಲ. ಮುಡಾ ತನಿಖೆ ಆಗಬೇಕು. ಪಾರ್ಟಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಯಾರೊಬ್ಬರ ವೈಯುಕ್ತಿಕ ತೀರ್ಮಾನ ಅಲ್ಲ. ಯಾರೂ ಕಿಂಗ್ ಮೇಕರ್ ಆಗಲು ಕಾಂಗ್ರೆಸ್ ನಲ್ಲಿ ಸಾಧ್ಯವಿಲ್ಲ. ಈಗ ರಾಜೀನಾಮೆ ಪ್ರಶ್ನೆ ಇಲ್ಲ ಎಂದರು. ನಮ್ಮ ಪಕ್ಷದ ಪರವಾಗಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಘೋರ ದುರಂತ ಒಂದು ಸಂಭವಿಸಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಮಹಿಳೆ ಒಬ್ಬರು ಸಾವನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯ ಬಳಿ ನಿಂತಿದ್ದಾಗ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ (50) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮಂಜಮ್ಮ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಕುರಿತಂತೆ ಬೆಂಗಳೂರು ದಕ್ಷಿಣ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ದುಷ್ಕರ್ಮಿಗಳು ವ್ಯಕ್ತಿಯನ್ನು ಸಂಪೂರ್ಣವಾಗಿ ಬೆತ್ತಲೆಗೊಳಿಸಿ ಭೀಕರವಾಗಿ ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾಗಿರುವ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಹೌದು ಬೆಂಗಳೂರಿನಲ್ಲಿ ಮತ್ತೊಂದು ಅವಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ಬೆತ್ತಲೆಗೊಳಿಸಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಬೆಂಗಳೂರಿನ ಥಣಿಸಂದ್ರದಲ್ಲಿ ಈ ಒಂದು ಘಟನೆ ನಡೆದಿದೆ ಎನ್ನಲಾಗುತ್ತಿದೆ. ನಡು ರಸ್ತೆಯಲ್ಲಿ ಬಟ್ಟೆ ಬಿಚ್ಚಿಸಿ ವ್ಯಕ್ತಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಒಂದು ಹಲ್ಲೆಯ ವಿಡಿಯೋವನ್ನು ಬೆಂಗಳೂರು ನಗರ ಪೊಲೀಸ್ ಪೇಜಿಗೂ ಈ ಒಂದು ವಿಡಿಯೋ ಟ್ಯಾಗ್ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗುತ್ತಿದೆ. ಥಣಿಸಂದ್ರದ ಹಜ್ ಭವನ ಮುಂಭಾಗ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ.ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. https://twitter.com/karnatakaportf/status/1843156226550505484?t=IvVYNHdAzdR6TbrdRiPmoQ&s=19

Read More

ವಿಜಯಪುರ : ದಸರಾ ಮುಗಿದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದು ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಚಿವ ಜಮೀರ್ ಅಹ್ಮದ್ ತಿರುಗೇಟು ನೀಡಿದ್ದು, ಬಿವೈ ವಿಜಯೇಂದ್ರ ಹೇಳಿದ ತಕ್ಷಣ ರಾಜೀನಾಮೆ ಕೊಡೋಕೆ ಆಗುತ್ತಾ? ಮುಂದಿನ 5 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು. ದಸರಾ ಬಳಿಕ ಸಿಎಂ ರಾಜೀನಾಮೆ ನೀಡುತ್ತಾರೆ ಎಂಬ ಹೇಳಿಕೆ ವಿಚಾರವಾಗಿ ಬಿ ವೈ ವಿಜಯೇಂದ್ರ ಹೇಳಿಕೆಗೆ ಸಚಿವ ಜಮೀರ್ ಅಹ್ಮದ್ ತಿರುಗೇಟು ನೀಡಿದ್ದು, ವಿಜಯೇಂದ್ರ ಏನು ಕಾಂಗ್ರೆಸ್ ಹೈಕಮಾಂಡಾ? ಬಿವೈ ವಿಜಯೇಂದ್ರ ಹೇಳಿದಾಗ ರಾಜೀನಾಮೆ ಕೊಡುವುದಕ್ಕೆ ಆಗುತ್ತಾ? ರಾಹುಲ್, ಸೋನಿಯಾ, ಮಲ್ಲಿಕಾರ್ಜುನ ಖರ್ಗೆ ಅವ್ರೆ ನಮ್ಮ ಹೈಕಮಾಂಡ್ ಎಂದರು. ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಜೊತೆಗಿದ್ದೇವೆ ಎಂದು ಹೇಳಿದ್ದಾರೆ. ಪಕ್ಷದ ವಿಚಾರ ಹೇಳೋಕೆ ಬಿ ವೈ ವಿಜಯೇಂದ್ರ ಯಾರು? ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ. ರಾಜೀನಾಮೆ ಇಲ್ಲ ಎಂದು…

Read More

ಬೆಂಗಳೂರು : ಉಗ್ರಪ್ಪ ಮತ್ತು ನಾನು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಂಡವರಲ್ಲ. ಈ ಕಾರಣಕ್ಕೇ ನನಗೆ ಮಸಿ ಬಳಿಯಲು ಕೆಲವರು ಯತ್ನಿಸುತ್ತಿದ್ದಾರೆ. ಅವರ ಈ ಪ್ರಯತ್ನಗಳು ಹೇಗೆ ಯಶಸ್ವಿ ಆಗುತ್ತದೆ ಎಂದು ನಾನೂ ನೋಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಮುಡಾ ಹಗರಣ ಸಂಬಂಧ ವಿಪಕ್ಷಗಳು ರಾಜಿನಾಮೆಗೆ ಆಗ್ರಹಿಸುತ್ತಿರುವ ಕುರಿತಾಗಿ ಸವಾಲು ಹಾಕಿದರು. ಇಂದು ಅವರು ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಅವರ ಬದುಕು, ಹೋರಾಟವನ್ನು ಕಟ್ಟಿಕೊಟ್ಟಿರುವ ಸಮರ್ಥ ಜನ ನಾಯಕ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ಉಗ್ರಪ್ಪ ಅವರಿಗೆ ಇನ್ನೂ ಹೆಚ್ಚಿನ ಸ್ಥಾನಮಾನ‌ ಸಿಗಬೇಕಿತ್ತು. ಸಿಕ್ಕಿಲ್ಲ ಎನ್ನುವ ಬೇಸರ ನನಗೂ ಇದೆ. ಮುಂದೆ ಅವಕಾಶ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು. ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ವಿದ್ಯಾರ್ಥಿ ಜೀವನದಲ್ಲೇ ಜನಹೋರಾಟದಲ್ಲಿ ಭಾಗಿಯಾಗಿ ಜೈಲು ಸೇರಿದ್ದವರು.ಉಗ್ರಪ್ಪ ಬಹಳ ನಿಷ್ಠುರವಾದಿ. ಸಾರ್ವಜನಿಕ ಜೀವನದಲ್ಲಿ ಮೌಲ್ಯಗಳ ವಿಚಾರದಲ್ಲಿ ಯಾರ ಜೊತೆಗೂ ರಾಜಿ ಮಾಡಿಕೊಳ್ಳುವುದಿಲ್ಲ. ರಾಜಕೀಯ ಹೋರಾಟದಲ್ಲಿ…

Read More

ಬಳ್ಳಾರಿ : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಇದರಿಂದ ಜನರ ಜೀವನ ಆಸ್ತವ್ಯಸ್ತವಾಗಿದೆ. ಇದೀಗ ಬಳ್ಳಾರಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುತ್ತಿದ್ದು ಸಿಡಿಲಿಗೆ ಹದಿನೈದು ಕುರಿಗಳು ಸಾವನ್ನಪ್ಪಿದ್ದು, ಇಬ್ಬರು ಕುರಿಗಾಹಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೌದು ಇಂದು ಸಂಜೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕೋಡಾಲ್ ಗ್ರಾಮದಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುತ್ತಿದ್ದು, ಈ ವೇಳೆ ಸಿಡಿಲಿಗೆ 15 ಕುರಿಗಳು ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಕುರಿಗಾಹಿಗಳಾದ ಉಳೂರು ಗ್ರಾಮದ ಬಸಪ್ಪ ಹಾಗೂ ಕರಿಮಿಂಚಾಲಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ.ಕೂಡಲೇ ಕುರಿಗಾಹಿಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೋರಣಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ನವರೇ ಸಿದ್ದರಾಮಯ್ಯಗೆ ರಾಜೀನಾಮೆ ಕೊಡುಸ್ತಾರೆ. ಈಗಾಗಲೇ ಸರಣಿ ಸಭೆಗಳು ಆಗುತ್ತಿವೆ. ಹಾಗಾಗಿ ಈ ಸರ್ಕಾರ ಜಾಸ್ತಿ ದಿನ ಇರಲ್ಲ. ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್ ಯಾರು ಬೇಕಾದರು ಸಿಎಂ ಆಗಲಿ. ಪರಮೇಶ್ವರ ನಮ್ಮ ಜಿಲ್ಲೆಯವರಾಗಿದ್ದರಿಂದ ಅವರೇ ಸಿಎಂ ಆಗಲಿ ಎಂದು ಬಯಸುತ್ತೇವೆ ಎಂದು ತುಮಕೂರಿನಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಹೇಳಿಕೆ ನೀಡಿದರು. ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನು ಯಾವುದೇ ತಪ್ಪು ಮಾಡಿಲ್ಲ ಹಾಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಪದೇ ಪದೇ ಸ್ಪಷ್ಟನೆ ನೀಡಿದ್ದಾರೆ. ಆದರೆ ವಿಪಕ್ಷ ನಾಯಕರು ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ. ಇದೀಗ ತುಮಕೂರಿನಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಕಾಂಗ್ರೆಸ್ ನವರೇ ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಕೊಡಿಸ್ತಾರೆ ಎಂದು ಹೊಸ ಬಾಂಬ್ ಸಿಡಿಸಿದರು. ಇಂದು ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ತಿಂಗಳ ಕೊನೆಯ ಅಥವಾ ನವೆಂಬರ್…

Read More

ಕೊಪ್ಪಳ : ಸಿಎಂ ಸಿದ್ದರಾಮಯ್ಯ ಬೆಂಗವಾಲು ಪಡೆಗೆ ವಿರುದ್ಧ ಕಾರು ಚಾಲನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಾಸಕ ಜನಾರ್ಧನ ರೆಡ್ಡಿ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದೆ. ಗಂಗಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಿನ್ನೆ ರಾತ್ರಿ ಈ ಒಂದು ಘಟನೆ ನಡೆದಿತ್ತು. ಕರ್ತವ್ಯದಲ್ಲಿದ್ದ ಪೊಲೀಸರಿಂದ ಚಾಲಕನ ವಿರುದ್ಧ ಕಂಪ್ಲೇಂಟ್ ನೀಡಲಾಗಿದೆ. ಗಂಗಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಝೀರೋ ಟ್ರಾಫಿಕ್ ಕಾನೂನು ಉಲ್ಲಂಘನೆ ಫೇಸ್ ದಾಖಲಾಗಿದೆ. ಘಟನೆ ಹಿನ್ನೆಲೆ? ರಾಯಚೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ ಇದ್ದ ವಾಹನ ತೆರಳುತ್ತಿದ್ದಾಗ ಸ್ವತಃ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಕೂಡ ವಿರುದ್ಧ ದಿಕ್ಕಿನಲ್ಲಿ ಚಲಿಸಿರುವಂತಹ ಘಟನೆ ಜಿಲ್ಲೆಯ ಗಂಗಾವತಿ ನಗರದ ಸಿಬಿಎಸ್ ವೃತ್ತದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಸಿಎಂ ಬಂದ ಹಿನ್ನಲ್ಲೆ ಜೀರೊ ಟ್ರಾಪಿಕ್ ಮಾಡಲಾಗಿದೆ. ಸುಮಾರು 20 ನಿಮಿಷ ಟ್ರಾಫಿಕ್ ಜಾಮ್ ಆಗಿದ್ದರಿಂದ ಡಿವೈಡರ್…

Read More

ಉಡುಪಿ : ಇಂದು ಸಂಜೆ 4 ಗಂಟೆಯ ಸುಮಾರಿಗೆ ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮೇಘಸ್ಫೋಟವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಪರಿಣಾಮ ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದು ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಆವಾಂತರ ಸೃಷ್ಟಿಯಾಗಿದೆ. ಅಲ್ಲದೆ ಈ ಒಂದು ಭೀಕರ ಮೇಘ ಸ್ಫೋಟಕ್ಕೆ ಹಲವು ರೈತರ ಜಮೀನು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ರಬ್ಬರ್ ಗಿಡ, ಅಡಿಕೆ ಮರ,ತೆಂಗಿನ ತೋಟ ಸೇರಿದಂತೆ ಹಲವು ಬೆಳೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಭಾರಿ ನೆರೆಯಿಂದ ಮನೆ ಮುಂದೆ ನಿಲ್ಲಿಸಿದಂತಹ ಎರಡು ಕಾರುಗಳು ಹಾಗೂ ಎರಡು ಬೈಕ್ ಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿರುವಂತಹ ಘಟನೆ ನಡೆದಿದೆ. ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, ಸ್ಥಳಿಯರಿಂದ ರಕ್ಷಣೆ ಕಾರ್ಯಚರಣೆ ಮುಂದುವರೆದಿದ್ದು, ಘಟನೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಬೆಂಗಳೂರು : ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು ನಿನ್ನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅತಿಯಾದ ಮಳೆಯಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿತ್ತು. ಅಲ್ಲದೆ ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯ ಅಬ್ಬರ ಮುಂದುವರಿಯಲಿದ್ದು, ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 10 ರ ವರೆಗೆ ಮಳೆಯಾಗಲಿದೆ. ಇಂದಿನಿಂದ ಅಕ್ಟೋಬರ್ 9ವರೆಗೆ 12 ಜಿಲ್ಲೆಗಳಿಗೆ ಯಲ್ಲೋ ಆರ್ಲಟ್ ಘೋಷಣೆಯಾಗಿದೆ. ಬೆಂಗಳೂರಿಗೆ ಇನ್ನೂ ಮೂರು ದಿ‌ನ ಭಾರೀ ಮಳೆ ಸಾಧ್ಯತೆ ಇದೆ. ಇಂದಿನಿಂದ ಅಕ್ಟೋಬರ್ 9 ವೆರೆಗೆ ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಿ ಅ.9ವೆರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಯಲ್ಲಿ ಇಂದಿನಿಂದ ಅ.10 ರವರೆಗೆ ಮಳೆ ಆಗಲಿದೆ…

Read More