Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಒಂದುಕಡೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ವಿಪಕ್ಷಗಳು ಆಗ್ರಹಿಸುತ್ತಿದ್ದರೆ, ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ ಅವರು ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆ ಕೊಡಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಲೇ ಬಂದಿದ್ದಾರೆ. ಇದರ ಮಧ್ಯ ದಲಿತ ಸಿಎಂ ವಿಚಾರ ಮುನ್ನೆಲೆಗೆ ಬಂದಿದ್ದು ದಲಿತ ಸಿಎಂ ಆಗಲೇಬೇಕು ಅನ್ನೋದು ನಮ್ಮೆಲ್ಲರ ಒತ್ತಾಯವಾಗಿದೆ ಎಂದು ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸ್ಥಾನ ಪಲ್ಲಟವಾದರೆ ದಲಿತರು ಸಿಎಂ ಆಗುವ ನಂಬಿಕೆ ಇದೆ. ಸಿಎಂ ಹುದ್ದೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಿಎಂ ಹುದ್ದೆಯ ಬಗ್ಗೆ ಬೀದಿಯಲ್ಲೋ ಸ್ವಾಮೀಜಿಗಳು ಮಾತನಾಡುವುದಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರು ಶೋಷಿತರ ಪರ ಇದ್ದಾರೆ. ಯಾವುದೇ ಪಕ್ಷ ಇರಲಿ ದಲಿತ ಸಿಎಂ ರಾಜ್ಯಕ್ಕೆ ಅಗತ್ಯವಿದೆ.ಕಾಂಗ್ರೆಸ್ ಪಕ್ಷದಲ್ಲಿ ದಲಿತ ಮುಖ್ಯಮಂತ್ರಿ ಕೂಗು ವಿಚಾರವಾಗಿ ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹೇಳಿಕೆ ನೀಡಿದರು. ದಲಿತರನ್ನು ಸಿಎಂ ಮಾಡದಿದ್ದರೆ ಯಾವ ಪಕ್ಷದವರು…
ತುಮಕೂರು : ಸದ್ಯ ರಾಜ್ಯ ರಾಜಕೀಯದಲ್ಲಿ ಒಂದು ಕಡೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಿಲುಕಿ ಸಂಕಷ್ಟ ಎದುರಿಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಯ ಮೇಲೆ ಟವೆಲ್ ಹಾಕಿದ್ದಾರೆ. ಇದರ ಮಧ್ಯ ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕ್ರಮದಲ್ಲಿ ದಲಿತ ಮುಖಂಡರಿಂದ ಈ ಒಂದು ಘೋಷಣೆ ಮಾಡಲಾಯಿತು. ತುಮಕೂರಿನ ಎಂಪ್ರೆಸ್ ಕಾಲೇಜು ಸಭಾಂಗಣದಲ್ಲಿ ದಲಿತ ಸಂಘರ್ಷ ಸಮಿತಿಯ ರಾಜ್ಯ ಸರ್ವ ಸದಸ್ಯರ ಮಹಾ ಅಧಿವೇಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ಈ ವೇಳೆ ದಲಿತ ಮುಖಂಡರು ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಘೋಷಣೆ ಕೂಗಿದರು.
ಮೈಸೂರು : ದಸರಾ ಮುಗಿದ ಬಳಿಕ ಸಿಎಂ ರಾಜೀನಾಮೆ ನೀಡುತ್ತಾರೆ ಸಿದ್ದರಾಮಯ್ಯನವರು ರಾಜೀನಾಮೆ ಕೊಟ್ಟೆ ಕೊಡ್ತಾರೆ. ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಶುರುವಾಗಿದೆ. ಮತ್ತೊಂದು ಕಡೆಗೆ ಸಚಿವರು ರಾಜ್ಯ ಪ್ರವಾಸ ಮಾಡುತ್ತಿಲ್ಲ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳ ಮಾತೇ ಇಲ್ಲ. ಎಂದು ಮೈಸೂರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು. ಸರ್ಕಾರ ಬದುಕಿದಿಯೋ, ಸತ್ತಿದ್ಯೋ ಎಂದು ಜನರೇ ಪ್ರಶ್ನಿಸುತ್ತಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಪರವಾಗಿ ಜಿ ಟಿ ದೇವೇಗೌಡ ಅವರು ಬ್ಯಾಟಿಂಗ್ ಬೀಸಿದ್ದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅದನ್ನು ಸರಿ ಮಾಡಿಕೊಳ್ಳುವ ಶಕ್ತಿ ಹೆಚ್ ಡಿ ಕುಮಾರಸ್ವಾಮಿಗೆ ಇದೆ ಅದು ಅವರ ವೈಯಕ್ತಿಕ ವಿಚಾರ ನಾನು ಅದರ ಬಗ್ಗೆ ಟೀಕಿಸುವುದಿಲ್ಲ. ಚನ್ನಪಟ್ಟಣ ಉಪಚುನಾವಣೆ ಕುರಿತಾಗಿ, ದೆಹಲಿಯಲ್ಲಿ ಎಚ್ ಡಿ ಕುಮಾರಸ್ವಾಮಿ ಭೇಟಿಯಾಗಿ ಅಗರ್ವಾಲ್ ಚರ್ಚಿಸಿದ್ದಾರೆ. ಅಲ್ಲಿ ಏನೇನು ಚರ್ಚೆಯಾಗಿದೆ ಎಂದು ನನಗೆ ಸರಿಯಾಗಿ ಮಾಹಿತಿ ಇಲ್ಲ. ಟಿಕೆಟ್ ವಿಚಾರವಾಗಿ ಹೈಕಮಾಂಡ್ ಜೊತೆಗೆ ಮಾತನಾಡುತ್ತೇನೆ. ಕ್ಷೇತ್ರದಲ್ಲಿ ಸಿಪಿ ಯೋಗೇಶ್ವರ್ ಅವರಿಗೆ ತನ್ನದೇ ಆದ…
ಬೆಂಗಳೂರು : ಜಾತಿಗಣತಿ ವರದಿ ಜಾರಿ ಮಾಡುವ ಕುರಿತು ಇದೀಗ ಹಲವು ಸಚಿವರು ಒಂದೊಂದು ಹೇಳಿಕೆಗಳನ್ನ ನೀಡುತ್ತಿದ್ದಾರೆ.ಇನ್ನು ಇದೆ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಜಾತಿಗಣತಿ ಕುರಿತು ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಿ ಅಸೆಂಬ್ಲಿಗೆ ತರಬೇಕಾ, ಬೇಡವಾ ಎಂದು ತೀರ್ಮಾನ ಮಾಡುತ್ತೇವೆ ಎಂದರು. ಕೇಂದ್ರ ಜನಗಣತಿ ಕೂಡ ಆಗಲಿ. ಓವರ್ ಲ್ಯಾಪ್ ಆಗಿದ್ದರೆ ಮುಂದೆ ಸರಿಪಡಿಸಿಕೊಳ್ಳಬಹುದು. ಯಾವುದಾದರೂ ಸಮುದಾಯದ ಅಂಕಿ ಸಂಖ್ಯೆ ಹೆಚ್ಚು ಕಮ್ಮಿ ಆಗಿದ್ದರೆ ಆಮೇಲೆ ಸರಿ ಮಾಡಿಕೊಳ್ಳಬಹುದು. ಯಾವಾಗಲೂ ಕೇಂದ್ರ ಸರ್ಕಾರದ ಜನಗಣತಿಯನ್ನೇ ಎಲ್ಲರೂ ಪರಿಗಣಿಸುತ್ತಾರೆ, ಉಪಯೋಗಿಸುತ್ತಾರೆ. ಒಂದು ಸಾರಿ ಕ್ಯಾಬಿನೆಟ್ಗೆ ಬಂದು ಚರ್ಚೆಯಾಗಲಿ, ಆಮೇಲೆ ನೋಡೋಣ. ರಾಜ್ಯ ಸರ್ಕಾರ 160 ಕೋಟಿ ರೂಪಾಯಿ ಖರ್ಚು ಮಾಡಿದೆ. ಅದಕ್ಕೂ ಲೆಕ್ಕ ಕೊಡಬೇಕು. ನಾಳೆ ಸಿಎಜಿ ಕೂಡ ಇದಕ್ಕೆ ಆಕ್ಷೇಪ ಮಾಡಬಹುದು ಎಂದು ಪರಮೇಶ್ವರ್ ಹೇಳಿದರು. ಜಾತಿ ಜನಗಣತಿ ಸ್ವೀಕಾರ ವಿಚಾರವಾಗಿ ಪ್ರತಿಕ್ರಿಯಿಸಿ, ಇದೊಂದು ವಿಚಿತ್ರ ಸಂದರ್ಭ. ಜಾತಿ ಜನಗಣತಿ ಸ್ವೀಕಾರ ಮಾಡಿಲ್ಲ ಅಂದ್ರೆ ಮಾಡಿಲ್ಲ ಅಂತಾರೆ. ಮಾಡಿದರೆ ಯಾಕೆ…
ರಾಮನಗರ : ಮುಂದಿನ ವಿಧಾನಸಭಾ ಚುನಾವಣೆಗೆ 2028ರ ವರೆಗೆ ಕಾಯಬೇಕಾಗಿಲ್ಲ.ಅದಕ್ಕಿಂತಲೂ ಮುಂಚೆನೆ ಚುನಾವಣೆ ನಡೆದರೆ ರಾಮನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದರು. ಇಂದು ರಾಮನಗರ ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ತೆಗೆಯುವುದಲ್ಲ ಇವರ ಪಾಪದ ಕೊಡ ತುಂಬಿದೆ. ಆತ್ಮಸಾಕ್ಷಿ ಅಂತ ಹೇಳುತ್ತಾರಲ್ಲ ಎಂತಹ ಭಂಡಾರನ್ನು ನೀವು ನೋಡುವುದಕ್ಕೆ ಸಾಧ್ಯವಿಲ್ಲ. ಚುನಾವಣೆಗೆ 2028ರ ವರೆಗೆ ನಾವು ಕಾಯಬೇಕಾಗಿಲ್ಲ ಅದಕ್ಕಿಂತ ಮುಂಚೆ ಚುನಾವಣೆ ಬಂದರೆ ನಾಲ್ಕು ಕ್ಷೇತ್ರ ಗೆಲ್ಲುತ್ತೇವೆ ರಾಮನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳನ್ನು ಗೆಲ್ಲುತ್ತೇವೆ. ರಾಮನಗರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುತ್ತೇನೆ ದೇಶದಲ್ಲಿಯೇ ಮಾದರಿ ಜಿಲ್ಲೆಯ ನಾಗಿ ಮಾಡುತ್ತೇನೆ ಎಂದರು. ನಾನು ಯಾರಿಗೂ ಹೆದರುವ ವ್ಯಕ್ತಿಯಲ್ಲ ನಾನು ದೇವರಿಗೆ ಮಾತ್ರ ಹೆದರುತ್ತೇನೆ. ಶಿವನ ಆಶೀರ್ವಾದ ನಮಗೆ ಇರುವವರೆಗೂ ಯಾರೂ ಮುಗಿಸಲು ಆಗಲ್ಲ. ನನಗೆ 3 ಬಾರಿ ಆಪರೇಷನ್ ಆಗಿದೆ. ಒಳ್ಳೆಯ ಕೆಲಸ ಮಾಡಬೇಕು ಬಡವರಿಗೆ ಒಳ್ಳೆಯ ಕೆಲಸ…
ಚಿಕ್ಕಮಗಳೂರು : ಇತ್ತೀಚಿಗೆ ಈ ಹೃದಯಘಾತ ಎನ್ನುವುದು ಜ್ವರ, ಕೆಮ್ಮು, ನೆಗಡಿ ಎಂಬಂತೆ ಸಾಮಾನ್ಯ ಕಾಯಿಲೆಯಾಗಿಬಿಟ್ಟಿದೆ. ವಯಸ್ಸಿನ ಅಂತರವಿಲ್ಲದೆ ಚಿಕ್ಕವರಿಂದ ಹಿಡಿದು ವೃದ್ಧರವರೆಗೂ ಹೃದಯಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಚಿಕ್ಕಮಂಗಳೂರಿಗೆ ಪ್ರವಾಸಿಗರನ್ನು ಕರೆ ತಂದಿದ್ದ ಟಿಟಿ ವಾಹನದ ಚಾಲಕ ಹೃದಯಾಘಾತದಿಂದ ಸಾವನಪ್ಪಿದ್ದಾನೆ. ಹೌದು ಚಿಕ್ಕಮಗಳೂರಿಗೆ ಪ್ರವಾಸಿಗರನ್ನು ಕರೆ ತಂದಿದ ಟಿಟಿ ವಾಹನದ ಚಾಲಕ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಸೋಮನಹಳ್ಳಿಯ ನಿವಾಸಿ ಅವಿನಾಶ್ (25) ಮೃತ ಚಾಲಕ ಎಂದು ಹೇಳಲಾಗುತ್ತಿದೆ. ತಾನಾರಿಯ ಹೋಂ ಸ್ಟೇನಲ್ಲಿದ್ದಾಗ ಚಾಲಕ ಅವಿನಾಶಗೆ ಹೃದಯಾಘಾತವಾಗಿತ್ತು. ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಸಮೀಪದ ತಾನಾರಿಯ ಹೋಂ ಸ್ಟೇನಲ್ಲಿ ಹೃದಯಘಾತವಾಗಿತ್ತು. ಕೂಡಲೇ ಅವಿನಾಶ್ ನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆ ಫಲಕಾರಿ ಆಗದೆ ಚಾಲಕ ಅವಿನಾಶ್, ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೀದರ್ : ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ರೈತನ ಜಮೀನಿನ ಮೇಲೆ ಪೊಲೀಸರು ದಾಳಿ ಮಾಡಿ ಸುಮಾರು ಮೂರು ಕೋಟಿಗೂ ಅಧಿಕ ಗಾಂಜಾ ಬೆಳೆಯನ್ನು ನಾಶಪಡಿಸಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ನಡೆದಿದೆ. ಹೌದು ಗಾಂಜಾ ಬೆಳೆದಿದ್ದ ರೈತನ ಜಮೀನಿನ ಮೇಲೆ ಪೊಲೀಸರ ದಾಳಿ ನಡೆಸಿದ್ದು, ಆರು ಅಡಿ ಉದ್ದದ ಸಾವಿರಕ್ಕೂ ಹೆಚ್ಚು ಗಾಂಜಾ ಹಸಿಗಳನ್ನು ರೈತ ಬೆಳೆದಿದ್ದ. ಬಸವಕಲ್ಯಾಣ ತಾಲೂಕಿನ ಉಜಾಳಂಬ ಗ್ರಾಮದ ಬಳಿ ಪೊಲೀಸರು ದಾಳಿ ಮಾಡಿದ್ದಾರೆ.ಬೀದರ್ ಎಸ್ ಪಿ ಪ್ರದೀಪ್ ಗುಂಟೆ ನೇತೃತ್ವದಲ್ಲಿ ಈ ಒಂದು ರೆಡ್ ನಡೆದಿದೆ. ಅಂದಾಜು ಮೂರು ಕೋಟಿಗೂ ಹೆಚ್ಚು ಮೌಲ್ಯದ ಗಾಂಜಾ ಗಿಡಗಳನ್ನು ನಾಶ ಮಾಡಿದ್ದಾರೆ. ಮಹಾರಾಷ್ಟ್ರದ ಮೂಲದ ಬಸವರಾಜ್ ಎಂಬುವರು ಗಾಂಜಾ ಬೆಳೆದಿದ್ದರು. ಬಸವಕಲ್ಯಾಣ ತಾಲೂಕಿನ ಮಂಟಾಳ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
ದಾವಣಗೆರೆ : ಸಿಎಂ ಸ್ಥಾನದ ಕುರಿತಾಗಿ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಾಗುತ್ತಿದ್ದು, ಇತ್ತೀಚಿಗೆ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು ತೀವ್ರ ಕುತೂಹಲ ಕೆರಳಿಸಿತ್ತು. ಬಳಿಕ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ದಲಿತರಿಗೆ ಮುಸ್ಲಿಮರಿಗೆ ಒಕ್ಕಲಿಗರಿಗೆ ಲಿಂಗಾಯತರಿಗೆ ಎಲ್ಲರಿಗೂ ಸಿಎಂ ಆಗುವ ಆಸೆ ಇದೆ ಎಂದು ಹೇಳಿದರು. ದಾವಣಗೆರೆಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ದಲಿತರು, ಮುಸ್ಲಿಂ, ಒಕ್ಕಲಿಗರು ಸೇರಿ ಎಲ್ಲರಿಗೂ ಸಿಎಂ ಆಗುವ ಆಸೆ ಇದೆ. ಆದರೆ ಮುಂದಿನ 5 ವರ್ಷದ ಅವಧಿಯಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಸಿಎಂ ಹುದ್ದೆಯಿಂದ ಟಗರನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವೇ ಇಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿಕೆ ನೀಡಿದರು. ಸಿಎಂ ಕುರ್ಚಿಯಲ್ಲಿ ಟಗರು ಗಟ್ಟಿಯಾಗಿ ಕುಳಿತದೆ. ಸಿಎಂ ಕುರ್ಚಿಯಲ್ಲಿರುವ ಟಗರನ್ನು ಯಾರಿಂದಲೂ ಸಾಧ್ಯವಿಲ್ಲ ಎಂದು ದಾವಣಗೆರೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದರು. ದೇಶದಲ್ಲಿ ಸಿದ್ದರಾಮಯ್ಯ ಅವರಷ್ಟು ಜನಪ್ರಿಯ…
ರಾಯಚೂರು : ಕಳೆದ ಕೆಲವು ತಿಂಗಳ ಹಿಂದೆ ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಘಟನೆ ನಡೆದಿತ್ತು. ಇದೀಗ ರಾಯಚೂರು ಜಿಲ್ಲೆಯಲ್ಲಿ ಅಂತದೇ ಘಟನೆ ನಡೆದಿದ್ದು ಮರಕ್ಕೆ ಕಟ್ಟಿಹಾಕಿ ಮಹಿಳೆಯನ್ನು ಸ್ಥಳೀಯರು ಥಳಿಸಿರುವ ಘಟನೆ ರಾಯಚೂರಿನ ಮಕ್ತಲಪೇಟೆಯಲ್ಲಿ ನಡೆದಿದೆ. ಹೌದು ರಾಯಚೂರಿನ ಮಕ್ತಲಪೇಟೆಯಲ್ಲಿ ಮರಕ್ಕೆ ಮಹಿಳೆಯನ್ನು ಕಟ್ಟಿ ಹಿಂಸೆ ನೀಡಲಾಗಿದೆ. ಮಕ್ಕಳನ್ನು ಮುಟ್ಟಿದ್ದಕ್ಕೆ ಆತಂಕದಿಂದ ಸ್ಥಳೀಯರು ಮಹಿಳೆಯನ್ನು ಕಟ್ಟಿಹಾಕಿದ್ದರು. ಮಹಿಳೆಗೆ ಹಿಂಸೆ ನೀಡಿ ಬಳಿಕ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿ ನೇತಾಜಿ ನಗರ ಪೊಲೀಸರು ಮಹಿಳೆಯನ್ನು ರಕ್ಷಿಸಿದ್ದಾರೆ.ವಿಚಾರಣೆಯ ವೇಳೆ ಮಹಿಳೆ ಮಾನಸಿಕ ಅಸ್ವಸ್ಥಳು ಎಂಬ ಮಾಹಿತಿ ಸಿಕ್ಕಿದೆ. ಮಹಿಳೆಯನ್ನು ಹಗ್ಗದಿಂದ ಮರಕೆ ಕಟ್ಟಿ ಹಾಕಿದ್ದ ವಿಡಿಯೋ ಸದ್ಯ ವೈರಲ್ ಆಗಿದೆ.ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಹಾಕಲಾಗಿದೆ.
ರಾಮನಗರ : ವೃಷಣ ಶಸ್ತ್ರಚಿಕಿತ್ಸೆಯ ನಂತರ 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷದಿಂದ ಬಾಲಕ ಆರ್ಯ ಮೃತಪಟ್ಟಿರುವುದಾಗಿ ಪೋಷಕರು ಆರೋಪಿಸುತ್ತಿದ್ದಾರೆ. ಒಂದೇ ವೃಷಣವನ್ನು ಹೊಂದಿದ್ದ ಆರ್ಯ ಮಿಷನ್ ಆಸ್ಪತ್ರೆಗೆ ದಾಖಲಾಗಿದ್ದ. ಹಲವು ಆಸ್ಪತ್ರೆಗಳ ವೈದ್ಯರಿಗೆ ಈಗಾಗಲೇ ಪೋಷಕರು ಆರ್ಯನನ್ನು ಚಿಕಿತ್ಸೆಗೆ ಎಂದು ತೋರಿಸಿದ್ದರು. ಒಂದೇ ವೃಷಣವಿದ್ದರೂ ವೈದ್ಯರು ಬದುಕಬಹುದು ಎಂದು ಸಲಹೆ ನೀಡಿದ್ದರು. ಆದರೆ ಶ್ರೀದೇವಿ ಆಸ್ಪತ್ರೆಯ ವೈದ್ಯರು ಆಪರೇಷನ್ ಮಾಡಿಸಬೇಕೆಂದಿದ್ದರು. ನಿನ್ನೆ ಶ್ರೀದೇವಿ ಆಸ್ಪತ್ರೆಗೆ 6 ವರ್ಷದ ಬಾಲಕ ಆರ್ಯ ದಾಖಲಾಗಿದ್ದ ಆರೋಗ್ಯವಾಗಿದ್ದ ಆರ್ಯನಿಗೆ ವೈದ್ಯರು ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಆಪರೇಷನ್ ಥಿಯೇಟರ್ ಗೆ ವೈದ್ಯರು ಕರೆದೊಯ್ದಿದ್ದಾರೆ. ಆಪರೇಷನ್ ಆದ ಕೆಲವೇ ಹೊತ್ತಿನಲ್ಲಿ 6 ವರ್ಷದ ಬಾಲಕ ಆರ್ಯ ಸಾವನ್ನಪ್ಪಿದ್ದಾನೆ ಈ ಒಂದು ಬಾಲಕನ ಸಾವಿಗೆ ಶ್ರೀದೇವಿ ಆಸ್ಪತ್ರೆಯ ವೈದ್ಯರೇ ಕಾರಣವೆಂದು ಪೋಷಕರು ಆರೋಪಿಸಿದ್ದಾರೆ. ಶ್ರೀದೇವಿ ಮಿಷನ್ ಆಸ್ಪತ್ರೆಯ ಮುಂಭಾಗ ಇದೀಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶ್ರೀದೇವಿ ಆಸ್ಪತ್ರೆಗೆ…














