Author: kannadanewsnow05

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ರಜತ್ ಹಾಗೂ ವಿನಯ್ ಗೌಡ ಅವರು ಕೈಯಲ್ಲಿ ಲಾಂಗ್ ಹಿಡಿದುಕೊಂಡು ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ಠಾಣೆ ಪಿಎಸ್ಐ ದೂರು ನೀಡಿದ್ದು, ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಹೌದು ಬಸವೇಶ್ವರ ಠಾಣೆಯಲ್ಲಿ ಆರ್ಮ್ ಆಕ್ಟ್ ಅಡಿ ಎಫ್ಐಆರ್ ದಾಖಲಾಗಿದೆ. ಬಸವೇಶ್ವರನಗರ ಪಿಎಸ್ಐ ಭಾನುಪ್ರಕಾಶ್ ದೂರು ಆಧರಿಸಿ ರೀಲ್ಸ್ ಮಾಡುವಾಗ ಕೈಯಲ್ಲಿ ಲಾಂಗ್ ಹಿಡಿದುಕೊಂಡು ಪೋಸ್ ನೀಡಿದ್ದಾರೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ ರಜತ್ ಕೈಯಲ್ಲಿ ಲಾಂಗ್ ಹಿಡಿದು ಪೋಸ್ ಕೊಟ್ಟು ರಿಲ್ಸ್ ಅಪ್ಲೋಡ್ ಮಾಡಿದ್ದ ಎನ್ನಲಾಗಿದೆ. ಲಾಂಗ್ ಹಿಡಿದು ಬರೆದ ವಾತಾವರಣ ಸೃಷ್ಟಿಯಾಗುವಂತೆ ರಜತ್ ರಿಲೀಸ್ ಮಾಡಿದ್ದ. ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿ ಹಾಳು ಮಾಡುವ ರೀತಿ ದುರ್ವರ್ತನೆ ತೋರಿದ್ದರಿಂದ 18 ಸೆಕೆಂಡ್ ಗಳ ವಿಡಿಯೋ ಲಿಂಕ್ ಮೂಲಕ ದೂರು ದಾಖಲಾಗಿದೆ.…

Read More

ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ ಉಪಮುಖ್ಯಮಂತ್ರಿ ಮುಕೇಶ್ ಅಗ್ನಿಹೋತ್ರಿ ಅವರು ಇಂದು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಅವರು ಪ್ರಯಾಣಿಸುತ್ತಿದ್ದ ಅಲೈಯನ್ಸ್ ಏರ್ಲೈನ್ಸ್ ವಿಮಾನ ತುರ್ತು ಭೂಸ್ಪರ್ಶವಾಯಿತು. ಹೌದು ಹಿಮಾಚಲ ಪ್ರದೇಶ ಡಿಸಿಎಂ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶವಾಗಿದೆ. ಶಿಮ್ಲಾ ಏರ್ಪೋರ್ಟ್ ನಲ್ಲಿ ವಿಮಾನ ತುರ್ತು ಭೂಸ್ಪರ್ಶವಾಗಿದೆ. ಅಲೈಯನ್ಸ್ ಏರ್ಲೈನ್ಸ್ ವಿಮಾನ ತುರ್ತು ಭೂ ಸ್ಪರ್ಶವಾಗಿದೆ. ಹಿಮಾಚಲ ಪ್ರದೇಶ ಡಿಸಿಎಂ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಮುಖೇಶ್ ಅಗ್ನಿಹೋದ್ರಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶವಾಗಿದೆ. ಮುಕೇಶ್ ಅಗ್ನಿಹೊತ್ರಿ ಹಿಮಾಚಲ ಪ್ರದೇಶದ ಉಪಮುಖ್ಯಮಂತ್ರಿ ಆಗಿದ್ದು, ಅವರು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶವಾಗಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಚಿಕ್ಕಮಗಳೂರು : ಸುಡು ಬೇಸಿಗೆಯಿಂದ ಬಳಲಿದ್ದ ಚಿಕ್ಕಮಂಗಳೂರು ಜಿಲ್ಲೆಗೆ ವರುಣ ಇಂದು ತಂಪೆರೆದಿದ್ದಾನೆ ಗುಡುಗು ಸಹಿತ ಇಂದು ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗಿದ್ದು ಅಲ್ಲದೆ ಇನ್ನೊಂದು ದುರಂತ ಒಂದು ಕೂಡ ಸಂಭವಿಸಿದೆ ಸಿಡಿಲು ಬಡಿದು ಓರ್ವ ಮಹಿಳೆ ಕೂಡ ಇಂದು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆ ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ (65) ಎಂದು ತಿಳಿದು ಬಂದಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಮೃಪಟ್ಟಿದ್ದಾರೆ.ಹೊಲದಲ್ಲಿ ಕೆಲಸ ಮಾಡುತ್ತಿದ್ದ ಉಳಿದವರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ : ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಸಂಚಲನ ಸೃಷ್ಠಿಸಿದ ಬೆನ್ನಲ್ಲೇ, ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ದಿಢೀರ್ ಬೆಳವಣಿಗೆ ಎನ್ನುವಂತೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಅದಕ್ಕೆ ಈಗ ಸಭಾಪತಿ ಬಸವರಾಜ್ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ ಅವರು, ವೈರಲ್ ಆದ ಪತ್ರದಲ್ಲಿ ಸಹಿ ಇಲ್ಲ. ಸಹಿ ಮಾಡಿದ ಪತ್ರ ಲಾಕರ್ ನಲ್ಲಿದೆ. ನನ್ನ ಪಿಎ ಆ ಪತ್ರವನ್ನು ವೈರಲ್ ಮಾಡಿದ್ದಾರೆ. ರಾಜೀನಾಮೆ ಕೊಡಬೇಕು ಅನ್ನೋ ನಿರ್ಧಾರ ಮಾಡಿದ್ದು ನಿಜ. ಆದರೆ ಸಚಿವರು ಸೇರಿದಂತೆ ಬಹಳ ಜನ ನನಗೆ ಕರೆ ಮಾಡುತ್ತಿದ್ದಾರೆ. ದುಡುಕಿನ ನಿರ್ಧಾರ ಬೇಡ ಅಂತ ಹೇಳುತ್ತಿದ್ದಾರೆ. ಕೆಲವು ಸಲ ಹಿತೈಷಿಗಳ ಮಾತು ಕೇಳಬೇಕಾಗುತ್ತದೆ. ಪತ್ರ ಇನ್ನೂ ಲಾಕರ್ ನಲ್ಲಿದೆ ರಾಜೀನಾಮೆ ಕುರಿತು ವಿಚಾರ ಮಾಡುತ್ತೇನೆ. ಮಾನಸಿಕವಾಗಿ ಬೇಸರವಾಗಿದ್ದು ನಿಜ. ಹೀಗಾಗಿ ರಾಜೀನಾಮೆ ನೀಡುವ ಬಗ್ಗೆ ನಿರ್ಧಾರ ಮಾಡಿದ್ದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ…

Read More

ಕೋಲಾರ : ಕೋಲಾರದಲ್ಲಿ ಭೀಕರವಾದ ಕೊಲೆ ನಡೆದಿದ್ದು, ರೌಡಿಶೀಟರ್ ಒಬ್ಬ ತನ್ನ ಪ್ರಿಯತಮೇ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಸಿಕ್ಕ ಸಿಕ್ಕಲ್ಲಿ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ತಾಲೂಕಿನಲ್ಲಿ ನಡೆದಿದೆ. ಹತ್ಯೆಯಾದ ರೌಡಿಶೀಟರ್ ನನ್ನು ಶಿವಕುಮಾರ್ ಅಲಿಯಾಸ್ ತೇನ್ ಕೊಲೆಯಾದವ ಎಂದು ತಿಳಿದುಬಂದಿದೆ. ಮಾರಿಕೊಪ್ಪಂನ ರಿವೀಟರ್ಸ್ ಲೈನ್ ನಿವಾಸಿ ಶಿವಕುಮಾರ್ ನನ್ನು ಹತ್ಯೆ ಮಾಡಲಾಗಿದೆ. ಪ್ರಿಯತಮೆ ಜೊತೆ ಕಾಮಸಮುದ್ರಕ್ಕೆ ಹೋಗುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಕುರಿತು ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕ್ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ರೌಡಿಶೀಟರ್ ಜೊತೆಗಿದ್ದ ಪ್ರಿಯತಮೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಕೊಲೆಯಾದ ಶಿವಕುಮಾರ್ ಆಂಡರ್ಸನ್ ಪೇಟೆ ಠಾಣೆಯ ರೌಡಿಶೀಟರ್ ಎಂದು ತಿಳಿದುಬಂದಿದೆ. ಶಿವಕುಮಾರ್ ವಿರುದ್ಧ 3 ಕೊಲೆ ಮತ್ತು ಹಲ್ಲೆ ಪ್ರಕರಣಗಳು ಇದ್ದವು.

Read More

ತುಮಕೂರು : ಸದ್ಯ ರಾಜ್ಯದಲ್ಲಿ ಹನಿಟ್ರ್ಯಾಪ್ ಎನ್ನುವ ವಿಚಾರ ಭಾರಿ ಸದ್ದು ಮಾಡುತ್ತಿದ್ದು, ಸಹಕಾರ ಸಚಿವ ಕೆ.ಎನ್ ರಾಜಣ್ಣ ವಿರುದ್ಧ ಎರಡರಿಂದ ಮೂರು ಬಾರಿ ಹನಿ ಟ್ರ್ಯಾಪ್ ಪ್ರಯತ್ನ ನಡೆದಿದೆ ಎನ್ನುವ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಇನ್ನು ಇದೇ ವಿಚಾರವಾಗಿ ಅವಶ್ಯಕತೆ ಬಿದ್ದರೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗುತ್ತೇನೆ. ಹನಿಟ್ರ್ಯಾಪ್ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಲ್ಲ, ಅವಶ್ಯಕತೆ ಬಿದ್ದರೆ ಭೇಟಿಯಾಗುವುದಾಗಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಮುಖ್ಯಮಂತ್ರಿಯನ್ನು ಭೇಟಿ ಮಾಡಬಹುದು. ಗೃಹ ಸಚಿವರನ್ನು ಭೇಟಿ ಮಾಡಿ ಲಿಖಿತ ರೂಪದಲ್ಲಿ ದೂರು ಕೊಡುವುದಾಗಿ ತಿಳಿಸಿದರು. ಸದನದಲ್ಲಿ ನಾನೊಂದು ಹೇಳಿಕೆ ಮಾಡಿದ್ದೇನೆ. ಅದಕ್ಕೆ ಬದ್ಧ ಇದ್ದೇನೆ. ಏನೇನು ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿದೆ ಅದಕ್ಕೆ ಗೃಹ ಮಂತ್ರಿಗಳನ್ನ ಭೇಟಿ ಮಾಡಿ ಲಿಖಿತ ರೂಪದಲ್ಲಿ ದೂರು ಕೊಡುತ್ತೇನೆ ಎಂದರು. ಗೃಹ ಸಚಿವರು ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ಮಾಡಿ ತನಿಖೆ ಮಾಡಿದರೆ ಸೂಕ್ತ. ಇದರಲ್ಲಿ ಇವರು, ಅವರು…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ಅಡ್ವಾನ್ಸ್ ಆಗಿ ಹಣ ಕೊಟ್ಟಿದ್ದ ಮಾಲೀಕನನ್ನೇ ತಂದೆ ಮಗ ಇಬ್ಬರು ಸೇರಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಡಬಗೆರೆ ಕ್ರಾಸ್ನ ಆರ್ ಆರ್ ಇಂಡಸ್ಟ್ರಿಯಲ್ಲಿ ರಮೇಶ್ ಎನ್ನುವ ವ್ಯಕ್ತಿಯ ಕೊಲೆಯಾಗಿದೆ. ಕೊಲೆಗೈದ ಆರೋಪಿಗಳನ್ನು ಸೈಯದ್ ತಾಜುದ್ದೀನ್ (50) ಸೈಯದ್ ಆಯೂಬ್ ಎನ್ನುವವರನ್ನು ಅರೆಸ್ಟ್ ಮಾಡಲಾಗಿದೆ. ರಮೇಶ್ ಬಳಿ ಇಬ್ಬರು ಕೆಲಸಗಾರರು 6 ಲಕ್ಷ ರೂಪಾಯಿ ಅಡ್ವಾನ್ಸ್ ಪಡೆದಿದ್ದರು ಎನ್ನಲಾಗಿದೆ. ಆದರೆ ಸರಿಯಾಗಿ ಕೆಲಸಕ್ಕೆ ಬಾರದೆ ಆರೋಪಿಗಳು ಸತಾಯಿಸುತ್ತಿದ್ದರು. ಇಬ್ಬರು ಕೂಡ ಕೆಲಸ ಮಾಡದೆ ರಮೇಶನಿಗೆ ಬೆದರಿಕೆ ಹಾಕುತ್ತಿದ್ದರು. ಇಂದು ಮಧ್ಯಾಹ್ನ ಮಾಲೀಕ ರಮೇಶ್ ಜೊತೆಗೆ ಗಲಾಟೆ ಆಗಿದೆ. ಈ ಸಂದರ್ಭದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಆರೋಪಿಗಳು ಮಾಲೀಕರನ್ನು ಕೊಲೆಗೈದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇತ್ತೀಚಿಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಹನಿಟ್ರ್ಯಾಪ್ ಭಾರಿ ಸದ್ದು ಮಾಡಿತ್ತು. ವಿಧಾನ ಪರಿಷತ್ತಿನಲ್ಲೂ ಕೂಡ ಹನಿಟ್ರ್ಯಾಪ್ ವಿಷಯಕ್ಕೆ ಸಂಬಂಧಿಸಿದಂತೆ ಆರೋಪ ಪ್ರತ್ಯಾರೋಪಗಳು ನಡೆದವು. ಈ ವೇಳೆ ಕಾಂಗ್ರೆಸ್ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಇದೆಲ್ಲದಕ್ಕೆ ಬಿಜೆಪಿಯೇ ಕಾರಣ ಎಂದು ಆರೋಪಿಸಿದರು. ಇದಕ್ಕೆ ಬಿವೈ ವಿಜಯೇಂದ್ರ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ಟ್ವೀಟ್ ನಲ್ಲಿ “ಆಕಾಶಕ್ಕೆ ಉಗುಳಿದರೆ ನಾನು ದೊಡ್ಡ ಮನುಷ್ಯನಾಗುತ್ತೇನೆ” ಎಂಬ ಹುಂಬತನದಲ್ಲಿ ಅತಿರೇಕದ, ಅವಿವೇಕದ, ಕೊಳಕು ಹೇಳಿಕೆಗಳನ್ನು ನೀಡುವ ಬಿಕೆ ಹರಿಪ್ರಸಾದ್ ರವರೇ, ಸ್ವಾತಂತ್ರ್ಯಾ ನಂತರ ಭಾರತದಲ್ಲಿ ಕಾಂಗ್ರೆಸ್ ಆಳ್ವಿಕೆಯ ಕೊಳಕುಗಳನ್ನು ಸ್ವಚ್ಛ ಮಾಡಿದ್ದು, ಮಹಾತ್ಮ ಗಾಂಧಿಯವರು ಆರಂಭಿಸಿದ ಸ್ವಚ್ಛ ಭಾರತ ಹಾಗೂ ಸ್ವದೇಶಿ ಚಳುವಳಿಯ ಕನಸನ್ನು ಅಕ್ಷರಶಃ ನನಸು ಮಾಡಿದ್ದು ದೇಶದ ಹೆಮ್ಮೆಯ ಪುತ್ರ ಪ್ರಧಾನಿ ನರೇಂದ್ರ ಮೋದಿ ಜೀ ಯವರು ಎನ್ನುವುದನ್ನು ನೀವೂ ಸೇರಿದಂತೆ ನಿಮ್ಮ ಕಾಂಗ್ರೆಸ್ಸಿಗರು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಿಮ್ಮ @INCKarnataka ದ ತಟ್ಟೆಯಲ್ಲಿ ಹಗರಣಗಳು ಎಂಬ ಹೆಗ್ಗಣಗಳು ಸತ್ತು…

Read More

ಬೆಳಗಾವಿ : ಸದ್ಯ ರಾಜ್ಯದಲ್ಲಿ ಹನಿ ಟ್ರ್ಯಾಪ್ ವಿಷಯ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ಮೇಲೆ ಹನಿ ಟ್ರ್ಯಾಪ್ ಗೆ ಯತ್ನ ನಡೆದಿತ್ತು ಎನ್ನಲಾಗಿದೆ. ಇನ್ನು ಇದೇ ವಿಚಾರವಾಗಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಾತನಾಡಿ, ಇದೇನು ಹೊಸ ವಿಷಯವೇನಲ್ಲ ಹಿಂದೆಯೂ ಹಲವು ಬಾರಿ ಹನಿ ಟ್ರ್ಯಾಪ್ ನಡೆದಿದ್ದವು.ಸಮ್ಮಿಶ್ರ ಸರ್ಕಾರ ಪತನವಾಗಲು ಕೂಡ ಹನಿ ಟ್ರ್ಯಾಕ್ ವಿಷಯ ಕೇಳಿಬಂದಿತ್ತು ಎಂದು ತಿಳಿಸಿದರು. ಇದೊಂದು ಗಂಭೀರ ವಿಷಯ ಈ ಹಿಂದೆಯೂ ಇಂತಹ ಘಟನೆ ನಡೆದಿವೆ. ಸಾರ್ವಜನಿಕ ಜೀವನದಲ್ಲಿರುವವರಿಗೆ ಉದ್ದೇಶಪೂರ್ವಕವಾಗಿ ಸಿಲುಕಿಸುವ ಯತ್ನ ಆಗಿದೆ. ಹನಿ ಟ್ರ್ಯಾಪ್ ಅನ್ನೋದು ಹೊಸ ವಿಷಯವೇನೆಲ್ಲ. ಬೆಳಗಾವಿ ಜಿಲ್ಲೆ ಸೇರಿ ಬೇರೆ ಕಡೆಗಳಲ್ಲೂ ಇಂತಹ ಪ್ರಕರಣಗಳು ನಡೆದಿದೆ.ಸಮ್ಮಿಶ್ರ ಸರ್ಕಾರ ಪತ್ರವಾದಾಗಲು ಹನಿ ಟ್ರ್ಯಪ್ ವಿಷಯ ಕೇಳಿ ಬಂದಿತ್ತು ಎಂದು ದಿನೇಶ ಗುಂಡೂರಾವ್ ತಿಳಿಸಿದರು. ಬೇರೆ ಉದ್ಯಮದಲ್ಲಿ ಇರುವವರಿಗೆ ಟ್ರ್ಯಪ್ ಮಾಡುವಂಥದ್ದು ನೋಡಿದ್ದೇವೆ. ಹಾಗಾಗಿ ಇದು…

Read More

ಗದಗ : ಗದಗದಲ್ಲಿ ಭೀಕರ ಸಿಲಿಂಡರ್ ಸ್ಪೋಟವಾಗಿದ್ದು, ಘಟನೆಯಲ್ಲಿ 14 ವರ್ಷದ ಬಾಲಕ ಸೇರಿ 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ,ಗದಗ ತಾಲೂಕಿನ ಹೊಸೂರು ಗ್ರಾಮದಲ್ಲಿ ಒಂದು ದುರಂತ ಸಂಭವಿಸಿದೆ. ಸಿಲಿಂಡರ್ ಸ್ಫೋಟವಾಗಿ 6 ಜನರಿಗೆ ಗಂಭೀರವಾಗಿ ಗಾಯಗಳಾಗಿದೆ. ಬಸಪ್ಪ ಆದಿವರ್ ಎಂಬ ಅವರ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿದೆ. 14 ವರ್ಷದ ಬಾಲಕ ಸೇರಿ 6 ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಲಕ್ಷ್ಮವ್ವ ಕಣವಿ, ಬಸವಣ್ಣೆವ್ವ ಹೊರಪೇಟಿ, ಮಂಜುಳಾ, ನಿರ್ಮಲ ಹಾಗೂ ಶರಣಪ್ಪಗೆ ಗಾಯಗಳಾಗಿದ್ದು ತಕ್ಷಣ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಫೋನ್ ಮಾಡಿದರು ಕೂಡ ಆಂಬುಲೆನ್ಸ್ ಮತ್ತು ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪ ಕೇಳಿ ಬಂದಿದೆ. ಘಟನೆ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More