Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಮುಖ 5 ಗ್ಯಾರಂಟಿಗಳನ್ನು ಜಾರಿಗೆ ಮಾಡಿದೆ ಅದರಲ್ಲಿ ಮಹಿಳೆಯರಿಗೆ ವಿಶೇಷವಾಗಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡುವುದಕ್ಕೆ ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿವೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಕ್ತಿ ಯೋಜನೆ ನಿಲ್ಲಿಸಿ ಮೊದಲಿನಂತೆ ಟಿಕೆಟ್ ವ್ಯವಸ್ಥೆ ಜಾರಿ ಮಾಡುವುದರ ಕುರಿತು ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಹೌದು, ಈ ಕುರಿತಂತೆ ವಿಧಾನಸೌಧದ ಗ್ರ‍್ಯಾಂಡ್ ಮೆಟ್ಟಿಲು ಮೇಲೆ ನಡೆದ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಉದ್ಘಾಟನೆ ವೇಳೆ ಮಾತನಾಡಿದ ಡಿಸಿಎಂ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಮಾತನಾಡಿದ್ದು, ಮತ್ತೆ ಟಿಕೆಟ್ ವ್ಯವಸ್ಥೆ ಜಾರಿ ಆಗುವ ಸುಳಿವು ಕೊಟ್ಟಿದ್ದಾರೆ. ನನಗೆ ಅನೇಕರು ಇಮೇಲ್ ಮುಖಾಂತರ ಹಾಗೂ ಮೆಸೇಜ್ ಮಾಡಿ ನಾವು ಬಸ್ನಲ್ಲಿ ದುಡ್ಡು ಕೊಟ್ಟು ಟಿಕೆಟ್ ತೆಗೆದುಕೊಳ್ಳುತ್ತೇವೆ ಉಚಿತ ಪ್ರಯಾಣ ಬೇಡ. ನಾವು ಹಣ ಕೊಟ್ಟು ಟಿಕೆಟ್ ತೆಗೆದುಕೊಳ್ಳುತ್ತೇವೆ ಆದರೆ ಬಸ್ ನಲ್ಲಿ ಟಿಕೆಟ್ ಪಡೆದುಕೊಂಡರು ಹಣ…
ಚಾಮರಾಜನಗರ : ಮದುವೆಗೆ ಹೆಣ್ಣು ಸಿಗುತ್ತಿಲ್ಲ ದಯವಿಟ್ಟು ಕರುಣೆ ತೋರಿಸಿ ವಧುವನ್ನ ಹುಡುಕಿ ಕೊಡು ಎಂದು ಮಲೆ ಮಹದೇಶ್ವರನನ್ನು ಮನಸಲ್ಲಿ ಪ್ರಾರ್ಥಿಸಿ ಯುವಕರ ದಂಡೊಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಬರಿಗಾಲಲ್ಲಿ ಪಾದಯಾತ್ರೆ ಆರಂಭಿಸಿದ್ದಾರೆ. ಹೌದು ಇಂತಹ ಒಂದು ಅಚ್ಚರಿ ಮೂಡಿಸುವಂತಹ ಸಂಪ್ರದಾಯ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿ ದೀಪಾವಳಿಯಂದು ಈ ಒಂದು ಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲಿ ಈ ರೀತಿ ಒಂದು ಸಂಪ್ರದಾಯವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಬಾರಿಯೂ ಕೂಡ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಸಂಭ್ರಮ ಜೋರಾಗಿದ್ದು, ಯುವಕರ ದಂಡೇ ಬೆಟ್ಟಕ್ಕೆ ಹರಿದು ಬರುತ್ತಿದೆ. ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಕೊಳ್ಳೇಗಾಲ ತಾಲೂಕಿನ ಹೊಸಮಾಲಂಗಿ ಗ್ರಾಮದ ಯುವಕರು ವಧು ಸಿಗಲೆಂದು ಇಷ್ಟಾರ್ಥ ಇಟ್ಟುಕೊಂಡು ಬರಿಗಾಲು ಪಾದಯಾತ್ರೆ ನಡೆಸಿದ್ದಾರೆ. ಹೊಸಮಾಲಂಗಿಯಲ್ಲಿ 62 ಮಂದಿ ಯುವಕರಿಗೆ ಮದುವೆಯಾಗಿಲ್ಲ, ಎಷ್ಟು ಹುಡುಕಿದರೂ ವಧು ಸಿಗುತ್ತಿಲ್ಲ. ಮಾದಪ್ಪ ಕರುಣೆ ತೋರಿಸಿ ನಮಗೆ ಮದುವೆ ಮಾಡಿಸು…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ 131 ದಿನಗಳ ಬಳಿಕ ನಟ ದರ್ಶನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಹಾಗಾಗಿ ಇಂದು ಸಾಯಂಕಾಲ ನಟ ದರ್ಶನ್ ಅವರು ಬಳ್ಳಾರಿಗೆ ಎಲ್ಲಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ ಬಳ್ಳಾರಿ ಜೈಲಿಗೆ ಆದೇಶ ರವಾನೆಯಾಗಿದ್ದು, ಈ ಕುರಿತಂತೆ ಬೆಂಗಳೂರಿನ ಸಿಸಿಹೆಚ್ 57 ರ ಜಡ್ಜ್ ಜೈಶಂಕರ್ ಆದೇಶ ಹೊರಡಿಸಿದ್ದು, ಎಲ್ಲ ಕಾನೂನು ಪ್ರಕ್ರಿಯೆ ಮುಗಿದ ನಂತರ ಬಳಿಕ ಬಳ್ಳಾರಿ ಜೈಲಿಗೆ ಪೋಸ್ಟ್ ಮೂಲಕ ರಿಲೀಸ್ ಆದೇಶ ರವಾನಿಸಲು ಸೂಚಿಸಲಾಗಿದೆ. ಹೌದು ಬಳ್ಳಾರಿ ಸೆಂಟ್ರಲ್ ಜೈಲ್ ಗೆ ದರ್ಶನ್ ಬಿಡುಗಡೆ ಆದೇಶದ ಪ್ರತಿ ರವಾನೆಯಾಗಿದೆ. ಇ-ಮೇಲ್ ಮೂಲಕ ಜೈಲಿಗೆ ಆದೇಶ ರವಾನಿಸಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಸಿ ಸಿ ಹೆಚ್ 57ರ ನ್ಯಾಯಾಧೀಶರಾದ ಜೈ ಶಂಕರ್ ಅವರು ಆದೇಶಿಸಿದ್ದಾರೆ. ಅಲ್ಲದೆ ಪೋಸ್ಟ್ ಮೂಲಕವೂ ಕೂಡ ರಿಲೀಸ್ ಆದೇಶ ರವಾನಿಸಲು ಸೂಚನೆ ನೀಡಿದ್ದಾರೆ.…
ಶಿಗ್ಗಾವಿ ಬೈ ಎಲೆಕ್ಷನ್ : ನಾಳೆ ಅಜ್ಜಂಪೀರ್ ಖಾದ್ರಿ ಸ್ವಇಚ್ಛೆಯಿಂದ ನಾಮಪತ್ರ ಹಿಂಪಡೆಯುತ್ತಾರೆ : ಸಚಿವ ಜಮೀರ್ ಅಹ್ಮದ್
ಹುಬ್ಬಳ್ಳಿ : ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿಲ್ಲವೆಂದು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಶಿಗ್ಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾಗಿದ್ದು ಈ ಹಿನ್ನಲೆಯಲ್ಲಿ ನಾಳೆ ಅಜ್ಜಂಪೀರ್ ಖಾದ್ರಿ ನಾಮಪತ್ರ ಹಿಂಪಡೆಯುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಕಳೆದ ಕೆಲವು ದಿನಗಳಿಂದ ಅಜ್ಜಂಪೀರ್ ಖಾದ್ರಿ ಬೆಂಗಳೂರಿನ ಸಚಿವ ಜಮೀರ್ ಅಹ್ಮದ್ ಖಾನ್ ಸರ್ಕಾರಿ ನಿವಾಸದಲ್ಲಿ ಇದ್ದರು. ಡಿಸಿ ಡಿಕೆ ಶಿವಕುಮಾರ್ ಅವರ ಜೊತೆಗೆ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾದ ಬೆನ್ನಲ್ಲೆ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡಿದ್ದರು ಇಂದು ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನದಲ್ಲಿ ಆಗಮಿಸಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ ವೇಳೆ ಜಮೀರ್ ಅಹ್ಮದ್ ಖಾನ್ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಜ್ಜಂಪೀರ್ ಖಾದ್ರಿ ನಾಳೆ ನಾಮಪತ್ರ ಹಿಂಪಡೆಯುತ್ತಾರೆ. ಸ್ವಇಚ್ಛೆಯಿಂದ ಅವರು ನಾಮಪತ್ರ ಹಿಂಪಡೆಯಲ್ಲಿದ್ದಾರೆ. ಈಗಾಗಲೇ ಖಾದ್ರಿ ಜೊತೆಗೆ ಸಿಎಂ ಸಿದ್ದರಾಮಯ್ಯ,…
ವಿಜಯನಗರ : ಇತ್ತೀಚಿಗೆ ಈ ಆನ್ಲೈನ್ ವಂಚನೆ, ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ಗ್ರಾಹಕರೊಬ್ಬರ ಬ್ಯಾಂಕ್ ನಲ್ಲಿದ್ದ 9.7 ಲಕ್ಷ ರೂಪಾಯಿಯನ್ನು ಸೈಬರ್ ವಂಚಕರು ಓಟಿಪಿ ಕೂಡ ಇಲ್ಲದೆ ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಈ ಒಂದು ಘಟನೆ ನಡೆದಿದ್ದು, ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ನಂದಿಹಳ್ಳಿಯ ಕಂಠಿ ವಿರೂಪಾಕ್ಷ ಹಣ ಕಳೆದುಕೊಂಡಿರುವರು. ಎರಡು ದಿನಗಳ ಹಿಂದೆಯಷ್ಟೇ ಜಮೀನು ಮಾರಾಟದ ಹಣ ಇವರ ಖಾತೆಗೆ ಜಮೆ ಆಗಿತ್ತು. ಆದರೆ ಅವರಿಗೆ ಬಂದಂತಹ ಒಂದು ಲಿಂಕ್ ನಿಂದ ಅವರ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿಯನ್ನು ಸೈಬರ್ ವಂಚಕರು ದೋಚಿದ್ದಾರೆ. ಕೆನರಾ ಬ್ಯಾಂಕ್ ಲೋಗೋ ಇರುವ ಆಯಪ್‌ನ ಲಿಂಕ್ ಇವರ ಮೊಬೈಲ್‌ಗೆ ಸಂದೇಶ ಬಂದಿದೆ. ಬ್ಯಾಂಕ್ ಸಂದೇಶವೆಂದು ತಿಳಿದು ಲಿಂಕ್ ಬಳಸಿ ಆಯಪ್ ಡೌನ್‌ಲೋಡ್ ಮಾಡಿದ್ದಾರೆ. ನಂತರದ 30 ನಿಮಿಷದಲ್ಲಿ ಖಾತೆಯಲ್ಲಿದ್ದ ಹಣವೆಲ್ಲ ಖಾಲಿಯಾಗಿದೆ.ಖಾತೆಯಲ್ಲಿಹಣ ಇಲ್ಲದಿರುವುದು ತಿಳಿದು, ಬ್ಯಾಂಕ್‌ಗೆ ಹೋಗಿ ವಿಚಾರಿಸಿದಾಗ ವಂಚನೆಯಾಗಿರುವುದು ತಿಳಿದಿದೆ. ಬ್ಯಾಂಕ್…
ಬೆಂಗಳೂರು : ಈ ಬಾರಿಯ 2024-25ನೇ ಸಾಲಿನಲ್ಲಿ 13,000 ಕೋಟಿ ವಾರ್ಷಿಕ ರಾಜಸ್ವ ಸಂಗ್ರಹ ಗುರಿ ಇದೆ ಎಂದು ಸಾರಿಗೆ ಇಲಾಖೆಯ ರಾಜಸ್ವ ಪರಿಶೀಲನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಶಕ್ತಿ ಭವನದಲ್ಲಿ ನಡೆದ ನೋಂದಣಿ ಮತ್ತು ಮುದ್ರಾಂಕ ಹಾಗೂ ಸಾರಿಗೆ ಇಲಾಖೆಯ 2024-25 ನೇ ಸಾಲಿನ ರಾಜಸ್ವ ಸಂಗ್ರಹ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದದು. ಸಭೆಯಲ್ಲಿ ಹಿಂದಿನ ಸಾಲಿಗಿಂತ ಈ ಅವಧಿಯಲ್ಲಿ ಹೆಚ್ಚುವರಿ ರಾಜಸ್ವ ಸಂಗ್ರಹವಾಗಿದೆ. 308.98 ಕೋಟಿ ಹೆಚ್ಚುವರಿ ರಾಜಸ್ವ ಸಂಗ್ರಹ ಆಗಿದೆ. ಮಾಸಿಕ ಗುರಿ ನಿಗದಿಪಡಿಸಿಕೊಂಡು ನಿಗದಿತ ಗುರಿ ಸಾಧಿಸಬೇಕು.ಮಾರ್ಚ್ ಅಂತ್ಯದೊಳಗೆ ನಿಗದಿತ ಗುರಿ ಸಾಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಇಲಾಖೆಯ ರಾಜ್ಯಸ್ವ ಪರಿಶೀಲನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಲಾಖೆಯು 26,000 ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಿದೆ. ಅಕ್ಟೋಬರ್ ತಿಂಗಳ ಅಂತ್ಯದವರೆಗೆ 13,724 ಕೋಟಿ ಸಂಗ್ರಹ ಆಗಿದೆ. ಮಾರ್ಚ್ ವರೆಗೆ ಪ್ರತಿ ತಿಂಗಳು 2400…
ಹಾಸನ : ಬಿಜೆಪಿ ಪಕ್ಷದ ವಿರುದ್ಧ ಆಗಾಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕುತ್ತಾರೆ. ಅದರಲ್ಲೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿ ವೈ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರ ಹಾಕುತ್ತಿರುತ್ತಾರೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಂದ್ರ ಈ ವಿಚಾರವಾಗಿ ಮಾತನಾಡಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ ಎಂದು ಬಿವೈ ವಿಜಯೇಂದ್ರ ತಿಳಿಸಿದರು. ಹಾಸನದಲ್ಲಿ ಹಾಸನಾಂಬೆ ದೇವಿ ದರ್ಶನ ಪಡೆದು ಸುದ್ದಿಗಾರರಿಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಯತ್ನಾಳ್, ಜಾರಕಿಹೊಳಿ ಅವರ ಅಸಮಾಧಾನ ಹೊರಹಾಕಲು ಬೇರೆ ವ್ಯವಸ್ಥೆ ಮಾಡಿಕೊಡಬೇಕು. ಆ ದಿಕ್ಕಿನಲ್ಲಿ ಯೋಚನೆ ಮಾಡುತ್ತಿದ್ದೇವೆ. ನಾನಂತೂ ಅದರ ಬಗ್ಗೆ ಏನು ತಲೆಕೆಡಿಸಿಕೊಳ್ಳುವ ಪ್ರಶ್ನೆ ಇಲ್ಲ. ಮಾಡಲು ಬೇಕಾದಷ್ಟು ಕೆಲಸವಿದೆ. ಸಂಘಟನೆ ಕೆಲಸ ಇದೆ, ಉಪಚುನಾವಣೆ ಇದೆ. ಇವತ್ತು ವಕ್ಫ್ ವಿಚಾರವಾಗಿ ಹೋರಾಟವನ್ನು ಕೈಗೊಳ್ಳಬೇಕಾಗುತ್ತದೆ ಎಂದರು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಬಿಜೆಪಿಯಲ್ಲಿ…
ಬೆಂಗಳೂರು : ಯಶ್ ನಟನೆಯ ಟಾಕ್ಸಿಕ್ ಚಿತ್ರದ ಸೆಟ್ ನಿರ್ಮಾಣ ಮಾಡಲು ಮರಗಳಿಗೆ ಕೊಡಲಿ ಏಟು ಹಾಕಲಾಗಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೆಚ್ಎಂಟಿ ತನ್ನ ವಶದಲ್ಲಿದ್ದ ಜಮೀನನ್ನು ಮಾರಾಟ ಮಾಡಿದೆ. ಮರ, ಗಿಡ ಎಲ್ಲಾ ಕಡಿದು ಸಿನಿಮಾ ಚಿತ್ರೀಕರಣಕ್ಕೆ ಬಾಡಿಗೆ ಕೊಟ್ಟಿದ್ದಾರೆ, ದುಡ್ಡು ಮಾಡ್ತಿದ್ದಾರೆ. ಎಲ್ಲಾ ರೀತಿಯ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಅವರಿಗೆ ಯಾವುದೇ ಅಧಿಕಾರ ಇಲ್ಲ’ ಎಂದು ಈಶ್ವರ ಖಂಡ್ರೆ ಅವರು ಹೇಳಿದ್ದಾರೆ. ಇಂದು ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಅರಣ್ಯ ಸಂರಕ್ಷಣೆ ಮಾಡುವುದು ನನ್ನ ಕರ್ತವ್ಯ. ಪ್ರಾಥಮಿಕ ಹಂತದಲ್ಲಿ ಅರಣ್ಯ ಇಲಾಖೆ ಮಾಹಿತಿ ಕೊಟ್ಟಿದೆ. ಒಳಗೊಳಗೆ ಏನಿದೆ ಅಂತ ತನಿಖೆ ಆಗಬೇಕು. ಅರಣ್ಯ ಇಲಾಖೆಯ ಜಾಗದಲ್ಲಿ ಸಣ್ಣ ವಿಲೇಜ್ ರೀತಿ ಸೆಟ್ ಹಾಕಿದ್ದಾರೆ. ಏನು ದೃಢೀಕರಣ ಬೇಕು? ಅಂಗೈ ಹುಣ್ಣಿಗೆ ಕನ್ನಡಿ ಅವಶ್ಯಕತೆ ಇಲ್ಲ ಎಂದರು. ಎಚ್ಎಂಟಿ ಸುಪ್ರೀಂ ಕೋರ್ಟ್ ಗೆ ಹೋಗಿದೆ ಅಲ್ಲಿ ವಿಚಾರಣೆಗೆ ಬರಬೇಕಿದೆ.ಅರಣ್ಯ ಪರವಾನಗಿ ತೆಗೆದುಕೊಂಡಿಲ್ಲ…
ಯಾದಗಿರಿ : ಯಾದಗಿರಿಯಲ್ಲಿ ಭೀಕರ ಅಪಘಾತ ನಡೆದಿದ್ದು, ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇನ್ನೊರ್ವನಿಗೆ ಗಂಭಿರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ಬಳಿ ನಡೆದಿದೆ. ವೆಂಕಟೇಶ ಚವ್ಹಾಣ್(20) ಮೃತಪಟ್ಟ ಸವಾರ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೊಡೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದ್ದು, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು : ನಗರದ ಪೀಣ್ಯ ಬಳಿಯ ಹೆಚ್ ಎಂ ಟಿಯ ಅರಣ್ಯ ಭೂಮಿಯಲ್ಲಿ ಸ್ಯಾಂಡಲ್ ವುಡ್ ನ TAXIC ಚಿತ್ರದ ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ ಮಾಡಲಾಗಿದೆ. ಹೀಗೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮರ ಕಡಿದವರ ವಿರುದ್ಧ ಅರಣ್ಯ ಇಲಾಖೆಯ ವತಿಯಿಂದ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ ಹೌದು ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಆದರೆ ಈ ಚಿತ್ರದ ಶೂಟಿಂಗ್ ಸಲುವಾಗಿ ನೂರಾರು ಮರಗಳನ್ನು ಕಡಿಯಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡದ ವಿರುದ್ಧ ಕ್ರಮ ಕೈಕೊಳ್ಳಲು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಸೂಚನೆ ನೀಡಿದ್ದಾರೆ. ಇದರಿಂದ ‘ಟಾಕ್ಸಿಕ್’ ಚಿತ್ರೀಕರಣಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮರ ನಾಶ ಮಾಡಿರುವ ಪ್ರದೇಶವನ್ನು ವೀಕ್ಷಿಸಿದ ಸಚಿವ ಈಶ್ವರ್ ಖಂಡ್ರೆ ಅವರು, X ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಎಚ್.ಎಂ.ಟಿ. ವಶದಲ್ಲಿರುವ…














