Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಗಣರಾಜ್ಯೋತ್ಸವ ಅಂಗವಾಗಿ ಭಾಷಣ ಮಾಡಿದರು. 76ನೇ ಗಣರಾಜ್ಯೋತ್ಸವದ ಈ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ ಎಂದು ಹೇಳಿ ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಹಾಡಿ ಹೊಗಳಿದ್ದಾರೆ. ರಾಜ್ಯಪಾಲರ ಭಾಷಣದ ಸಂಪೂರ್ಣ ವಿವರ ಇಲ್ಲಿದೆ 1. ಜನವರಿ 26 ಭಾರತದಲ್ಲಿ ಪ್ರಜಾಪ್ರಭುತ್ವ ಉದಯವಾದ ಐತಿಹಾಸಿಕ ದಿನ. ಎಪ್ಪತ್ತಾರು ವರ್ಷಗಳ ಹಿಂದೆ ಈ ದಿನದಂದು ಭಾರತೀಯರಾದ ನಾವು ನಮಗೆ ನಾವೇ ಅರ್ಪಿಸಿಕೊಂಡ ಸಂವಿಧಾನದ ಮೂಲಕ ಈ ದೇಶದಲ್ಲಿ ರಾಜಶಾಹಿ ಮತ್ತು ವಸಾಹತುಶಾಹಿ ಆಡಳಿತಕ್ಕೆ ಇತಿಶ್ರೀ ಹಾಡಿ ಜನಾಡಳಿತದ ಹೊಸ ಪರ್ವವನ್ನು ಪ್ರಾರಂಭಿಸಿದ ದಿನ. ಶತಶತಮಾನಗಳಿಂದ ದೇಶದಲ್ಲಿ ಅಸ್ತಿತ್ವದಲ್ಲಿದ್ದ, ತಾರತಮ್ಯಗಳನ್ನು ಪ್ರತಿಪಾದಿಸುತ್ತಿದ್ದ ನಿಯಮಗಳನ್ನು ಕೊನೆಗೊಳಿಸಿ ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎನ್ನುವ ಮಾನವೀಯ ಯುಗಕ್ಕೆ ನಾವಂದು ಕಾಲಿರಿಸಿದ ದಿನ. ಈ ದಿನಕ್ಕಾಗಿ ಭಾರತ ಉಪಖಂಡವು ಸಾವಿರಗಟ್ಟಲೆ ವರ್ಷಗಳಿಂದ ಹೋರಾಟ…
ಚಿತ್ರದುರ್ಗ : “ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ನೀಡುವುದಾಗಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಕೂಡ ರಾಜ್ಯ ಬಜೆಟ್ ನಲ್ಲಿ ಈ ವಿಚಾರ ಸೇರಿಸಿದ್ದರು. ಆದರೆ ಇದುವರೆಗೂ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿ ನೀಡಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿರುವ ವಾಣಿವಿಲಾಸ ಸಾಗರಕ್ಕೆ ಬಾಗಿನ ಸಮರ್ಪಿಸಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡಿ ಎಂದು ಮನವಿ ಮಾಡಿದ್ದೆವು. ಮಾಜಿ ಸಂಸದರಾಗಿದ್ದ ನಾರಾಯಣಸ್ವಾಮಿ ಅವರು ಪತ್ರವನ್ನು ಬರೆಸಿಕೊಂಡು ಹೋದರು. ಕೇಂದ್ರ ಸರ್ಕಾರ ಬೇರೆ ರೀತಿ ಹಣ ನೀಡುವುದಾಗಿ ಅವರು ಹೇಳಿದರು. ಅದಕ್ಕೂ ಒಪ್ಪಿಕೊಂಡೆವು. ಆದರೂ ಅನುದಾನ ಬಂದಿಲ್ಲ. ಇಡೀ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ” ಎಂದು ಹೇಳಿದರು. “ಭದ್ರಾ ಮೇಲ್ದಂಡೆ ವಿಚಾರವಾಗಿ…
ತುಮಕೂರು : ಸಾಮಾನ್ಯವಾಗಿ ಸೈಬರ್ ವಂಚಕರು ದೊಡ್ಡ ದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡುವ ವ್ಯಕ್ತಿಗಳನ್ನು ಹಾಗೂ ಉದ್ಯಮಿಗಳನ್ನು ಅಲ್ಲದೆ ಸರ್ಕಾರಿ ನೌಕರರನ್ನು ಗುರಿಯಾಗಿಸಿಕೊಂಡು ವಂಚನೆ ಎಸಗುತ್ತಾರೆ. ಆದರೆ ಹುಟ್ಟಿದ ಊರನ್ನು ಬಿಟ್ಟು ಕೆಲಸ ಅರಿಸಿಕೊಂಡು ಬೇರೆ ಊರಿಗೆ ಬಂದಂತಹ ಗಾರೆ ಕೆಲಸದವರನ್ನು ಬಿಡದೆ ವಂಚಕರು 10 ಲಕ್ಷ ಪೀಕಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಹೌದು ತುಮಕೂರು ನಗರದ ಜಯನಗರದಲ್ಲಿ ಯಾದಗಿರಿ ಜಿಲ್ಲೆಯ ಹತ್ತಾರು ಯುವಕರು ಗಾರೆ ಕೆಲಸ ಮಾಡಿಕೊಂಡು ವಾಸಿಸುತ್ತಿದ್ದಾರೆ. ಇದೀಗ ಸೈಬರ್ ವಂಚಕರ ಬಲೆಗೆ ಬಿದ್ದು 10 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ಮೋಸ ಹೋಗಿದ್ದಾರೆ ಎಂದು ಇದೀಗ ವರದಿಯಾಗಿದೆ. ಮೊದಲ ಬಾರಿಗೆ ₹9,800 ಜಮಾ ಮಾಡಿದ್ದು, ನನ್ನ ಖಾತೆಗೆ ₹11 ಸಾವಿರ ವಾಪಸ್ ಹಾಕಿದ್ದರು. ಇದನ್ನು ನಂಬಿ ಬೇರೆಯವರಿಂದ ಹಣ ಪಡೆದು ₹5.18 ಲಕ್ಷ ಹಣವನ್ನು COSTA ಆ್ಯಪ್‌ನಲ್ಲಿ ಜಮಾ ಮಾಡಿದೆ. ನನ್ನ ಜತೆಗೆ ಕೆಲಸ ಮಾಡುತ್ತಿರುವ ಅಂಬರೀಶ್, ಶರಣಗೌಡ, ಆನಂದ, ಶಾಂತಪ್ಪ ಇತರರು ಸುಮಾರು 10 ಲಕ್ಷ…
ಬೆಂಗಳೂರು : ಕಿರುತೆರೆಯ ಹಿರಿಯ ನಟಿಯ ವಿರುದ್ಧ ಇದೀಗ ಗಂಭೀರವಾದ ಆರೋಪ ಕೇಳಿ ಬಂದಿದ್ದು ನಿರ್ದೇಶಕ ಹರ್ಷವರ್ಧನ್ ಅವರು ಬ್ಲಾಕ್ಮೇಲ್ ಮಾಡಿ ಮದುವೆಯಾದ ಬಳಿಕ ಕಿರುಕುಳ ನೀಡಿದ್ದಾರೆ ಎಂದು ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ನಟಿಯ ವಿರುದ್ಧ ದೂರು ನೀಡಿದ್ದಾರೆ. ಹೌದು ಕಿರುತೆರೆ ಹಿರಿಯ ನಟಿ ಶಶಿಕಲಾ ವಿರುದ್ಧ ನಿರ್ದೇಶಕ ಹರ್ಷವರ್ಧನ್ ಈ ಒಂದು ಗಂಭೀರವಾದ ಆರೋಪ ಮಾಡಿದ್ದು,ಬ್ಲಾಕ್ ಮೇಲ್ ಮಾಡಿ ಮದುವೆ ಆಗಿ ಈಗ ಕಿರುಕುಳ ನೀಡ್ತಿದ್ದಾರೆ ಅಂತ ಆರೋಪ ಮಾಡಿದ್ದಾರೆ. ಪ್ರಜಾರಾಜ್ಯ ಸಿನಿಮಾ ನಿರ್ದೇಶನ ಮಾಡಿದ್ದ ಹರ್ಷವರ್ಧನ್ ದೂರು ನೀಡಿದ್ದಾರೆ.
ಬೆಂಗಳೂರು : ಅನಾರೋಗ್ಯದ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ಶಿವರಾಜ್ ಕುಮಾರ್ ಅವರು ಚಿಕಿತ್ಸೆ ಪಡೆದು ಗುಣಮುಖರಾಗಿ ಬೆಂಗಳೂರಿಗೆ ಇಂದು ವಾಪಸ್ಸಾಗಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸಿನಿಮಾ ಸೆಲೆಬ್ರಿಟಿಗಳು, ಆಪ್ತರು ಶಿವಣ್ಣ ಅವರನ್ನು ಸ್ವಾಗತಿಸಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬರುತ್ತಲೇ ಎಲ್ಲರೆಡೆ ಮುಗುಳ್ನಗುತ್ತಾ ಕೈಬೀಸಿದ ಶಿವಣ್ಣ, ತಮ್ಮ ಸ್ವಾಗತಕ್ಕೆ ಆಗಮಿಸಿದವರನ್ನು ತಬ್ಬಿ ಸಂತಸ ಪಟ್ಟರು. ವಿಮಾನ ನಿಲ್ದಾಣದ ಬಳಿಯ ಟೋಲ್ ಗೇಟ್ನಲ್ಲಿ ಅಭಿಮಾನಿಗಳು ಶಿವಣ್ಣನಿಗೆ ಸೇಬು ಹಣ್ಣಿನ ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ಶಿವಣ್ಣ ಸಹ ಕಾರು ನಿಲ್ಲಿಸಿ ಅಭಿಮಾನಿಗಳು ಸ್ವಾಗತ ಸ್ವೀಕರಿಸಿದ್ದಾರೆ. ಸ್ವಾಗತ ಮಾಡಿದ ಅಭಿಮಾನಿಗಳಿಗೆ ಧನ್ಯವಾದ ಹೇಳಿ, ಮಾನ್ಯತಾ ಟೆಕ್ ಪಾರ್ನ್ನ ಮನೆಯತ್ತ ಪ್ರಯಾಣ ಬೆಳೆಸಿದ್ದಾರೆ.
ವಿಜಯನಗರ : ಇಂದು ದೇಶದಾದ್ಯಂತ 76ನೇ ಗಣರಾಜ್ಯೋತ್ಸವ ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈಗಾಗಲೇ ಬೆಂಗಳೂರಿನಲ್ಲಿ ಧ್ವಜಾರೋಹಣ ನಡೆಸಿ ರಾಜ್ಯಪಾಲ ಥಾವರ ಚಂದ್ ಗೆಹ್ಲೊಟ್ ಅವರು ಭಾಷಣ ಮಾಡುತ್ತಿದ್ದಾರೆ. ಇದರ ಮಧ್ಯ ವಿಜಯನಗರದಲ್ಲಿರುವ ದೇಶದ ಎರಡನೇ ಅತಿ ದೊಡ್ಡ ಧ್ವಜಸ್ಥಂಭದಿಂದ ತ್ರಿವರ್ಣ ಧ್ವಜ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಹೌದು ಇಲ್ಲಿನ ಪುನೀತ್ ರಾಜ್ ಕುಮಾರ್ ಕ್ರೀಡಾಂಗಣದಲ್ಲಿರುವ ದೇಶದ ಎರಡನೇ ಬೃಹತ್ ಧ್ವಜಸ್ತಂಭಕ್ಕೆ ಏರುತ್ತಿದ್ದ ಬೃಹತ್ ಧ್ವಜ ಕುಸಿದು ಬಿದ್ದ ಘಟನೆ ಭಾನುವಾರ ಗಣರಾಜ್ಯೋತ್ಸವ ನಡೆಯುತ್ತಿದ್ದ ವೇಳೆಯೇ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಈ ಧ್ವಜವನ್ನು ಸಾಂಕೇತಿಕವಾಗಿ ಏರಿಸಿ ವೇದಿಕೆಗೆ ಬಂದು ಸಂಪ್ರದಾಯಿಕ ಧ್ವಜಾರೋಹಣ ನೆರವೇರಿಸಿದ್ದರು. ಬಳಿಕ ಪರೇಡ್ ವೀಕ್ಷಿಸಿ ಪರೇಡ್ ತಂಡಗಳು ಪಥಸಂಚಲನದಲ್ಲಿ ನೀಡಿದ ಗೌರವ ವಂದನೆ ಸ್ವೀಕರಿಸುತ್ತಿದ್ದ ವೇಳೆ ತ್ರಿವರ್ಣ ಧ್ವಜ ಒಮ್ಮಿಂದೊಮ್ಮೆಲೆ ಕುಸಿದು ಬಿತ್ತು. ಅದೃಷ್ಟವಶಾತ್ ಆ ಸಂದರ್ಭದಲ್ಲಿ ಧ್ವಜಸ್ತಂಭದ ಬುಡದಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿತು.ಸಚಿವರು ಭಾಷಣ ಕೊನೆಗೊಳಿಸಿದ ಬಳಿಕ, ಧ್ವಜ…
ಕಲಬುರ್ಗಿ : ಇತ್ತೀಚಿಗೆ ಬೆಂಗಳೂರು, ತುಮಕೂರು ಚಿಕ್ಕಮಂಗಳೂರು ಭಾಗಗಳಲ್ಲಿ ಚಿರತೆ ಪ್ರತ್ಯಕ್ಷವಾಗುತ್ತಿತ್ತು. ಇದೀಗ ಹೊಲವೊಂದರಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಚಿರತೆ ದಾಳಿ ಮಾಡಿ ಅದನ್ನು ಕೊಂದು ತಿಂದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯಾಗಾಪುರ ತಾಂಡದಲ್ಲಿ ನಡೆದಿದೆ. ಯಾಗಾಪುರ ತಾಂಡಾದ ನಿವಾಸಿ ಲಕ್ಷ್ಮಣ ಸೇವಾನಾಥ ಚವ್ಹಾಣ ಎನ್ನುವವರು ತಮ್ಮ ಹೊಲದಲ್ಲಿ ಶುಕ್ರವಾರ ರಾತ್ರಿ ಹಸುವನ್ನು ಕಟ್ಟಿ ಹಾಕಿ ಮನೆಗೆ ಹೋದ ಬಳಿಕ ಚಿರತೆ ದಾಳಿ ಮಾಡಿದೆ ಎನ್ನಲಾಗಿದೆ. ಬೆಳಗ್ಗೆ ಹೊಲಕ್ಕೆ ಬಂದಾಗ ಹಸು ಕಾಣಲಿಲ್ಲ, ಕೂಡಲೇ ಭಯಭೀತರಾಗಿ ಹುಡುಕಾಡಲು ಶುರುಮಾಡಿದ್ದಾರೆ. ಸ್ವಲ್ಪ ದೂರದಲ್ಲಿ ಹಸುವನ್ನು ಚಿರತೆ ಕೊಂದು ತಿಂದಿರುವುದು ಗಮನಕ್ಕೆ ಬಂದಿದೆ. ಇದರಿಂದ ತಾಂಡಾದ ನಿವಾಸಿಗಳು ಭಯಭೀತರಾಗಿದ್ದಾರೆ.ಹೀಗಾಗಿ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯುವಂತೆ ರೈತರು ಆಗ್ರಹಿಸಿದ್ದಾರೆ.
ಬೆಳಗಾವಿ : ಕಳೆದ ಸಂಕ್ರಾಂತಿ ಹಬ್ಬದಂದು ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸುವ ಸಂದರ್ಭದಲ್ಲಿ ಬೈಲಹೊಂಗಲದ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿತ್ತು. ಈ ವೇಳೆ ಅವರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ತಕ್ಷಣ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಎಂದು ದಾಖಲಿಸಲಾಗಿತ್ತು ಈ ವೇಳೆ ವೈದ್ಯರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನುಮೂಳೆ ಮುರಿತವಾಗಿದ್ದು ಕುತ್ತಿಗೆ ಬಳಿ ಗಾಯವಾಗಿದೆ ಎಂದು ತಿಳಿಸಿದರು. ಇದೀಗ ಸತತ 13 ದಿನಗಳ ನಂತರ ಶಸ್ತ್ರಚಿಕಿತ್ಸೆ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವೇಳೆ ಆಸ್ಪತ್ರೆಯ ವೈದ್ಯರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಧನ್ಯವಾದ ತಿಳಿಸಿದ್ದಾರೆ. ಪ್ರಿಯ ವೈದ್ಯರೇ, ಕಳೆದ 13 ದಿನಗಳು ಇಲ್ಲಿ ನನಗೆ ಆಸ್ಪತ್ರೆಗಿಂತ ಮನೆಯಂತೆ ಭಾಸವಾಯಿತು, ನೀವು ನನ್ನ ಕುಟುಂಬಕ್ಕಿಂತ ಕಡಿಮೆಯಿಲ್ಲದಂತೆ ನನ್ನನ್ನು ನೋಡಿಕೊಂಡಿದ್ದೀರಿ. ನನ್ನ ಕಷ್ಟದ ಸಮಯದಲ್ಲಿ, ನೀವು ನನ್ನ…
ಬೆಂಗಳೂರು : ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಗೆ ತೊಗಲುಗೊಂಬೆ ಆಟದ ಹಿರಿಯ ಕಲಾವಿದೆಯಾಗಿರುವ ಜಿಲ್ಲೆಯ ಮೋರನಾಳ ಗ್ರಾಮದ ಭೀಮವ್ವ ದೊಡ್ಡಬಳ್ಳಪ್ಪ ಶಿಳ್ಳೇಕ್ಯಾತ ಅವರಿಗೆ ಒಲಿದು ಬಂದಿದೆ. ಈ ಒಂದು ಪ್ರಶಸ್ತಿ ಒಲಿದು ಬಂದಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೀಮವ್ವ ಅವರಿಗೆ ಟ್ವೀಟ್ ಮುಖಾಂತರ ಅಭಿನಂದನೆ ಸಲ್ಲಿಸಿದ್ದಾರೆ. ಕೊಪ್ಪಳ ಜಿಲ್ಲೆಯ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರು 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವುದು ಇಡೀ ನಾಡು ಹೆಮ್ಮೆಪಡುವಂತದ್ದು. ಸರಿಸುಮಾರು 7 ದಶಕಗಳ ಕಾಲ ತೊಗಲುಗೊಂಬೆಯಾಟವನ್ನೇ ಬದುಕಿನ ಹಾದಿಯಾಗಿಸಿಕೊಂಡು, ನೆಲದ ಕಲೆಯನ್ನು ದೇಶ – ವಿದೇಶಗಳಿಗೂ ಪರಿಚಯಿಸಿದ ಹಿರಿಯ ಜೀವ ಭೀಮವ್ವನವರು ಈ ಗೌರವಕ್ಕೆ ಅತ್ಯಂತ ಅರ್ಹರು ಎನ್ನುವುದು ನನ್ನ ಭಾವನೆ. ಪ್ರಶಸ್ತಿ ವಿಜೇತ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು. ಗ್ರಾಮೀಣ ಕಲೆ, ಜಾನಪದ ಸಂಸ್ಕೃತಿಗಳು ಇತಿಹಾಸದ ಪುಟ ಸೇರುತ್ತಿರುವ ಇಂದಿನ ಆಧುನಿಕ ಕಾಲಘಟ್ಟದಲ್ಲಿ ಕಲಾಸೇವೆಗೆ ಬದುಕು ಸಮರ್ಪಿಸಿ, ಅದನ್ನು ಜನಮಾನಸದಲ್ಲಿ ಉಳಿಯುವಂತೆ…
ಬೆಂಗಳೂರು : ಇಂದು ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದರು. ಈ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ 5 ಪ್ರಮುಖ ಗ್ಯಾರಂಟಿಗಳನ್ನು ಇದೆ ವೇಳೆ ಹಾಡಿ ಹೊಗಳಿದರು. ಇಂದು ದೇಶಕ್ಕೆ ಐತಿಹಾಸಿಕ ದಿನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಗ್ಯಾರಂಟಿಗಳ ಮೂಲಕ ದೇಶದಲ್ಲಿ ಹೊಸ ಸಂದೇಶ ನೀಡಿದೆ. ಗ್ಯಾರಂಟಿಗಳನ್ನು ಟೀಕೆ ಮಾಡುವವರಿಗೆ ತಕ್ಕ ಸಂದೇಶವನ್ನು ನೀಡಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆ ಅಡಿಯಲ್ಲಿ ಪ್ರತಿಮೆಗಳಿಗೆ ತಿಂಗಳಿಗೆ 2000 ಹಣ ನೀಡಲಾಗುತ್ತಿದೆ. ಕೋಟ್ಯಾಂತರ ಮಹಿಳೆಯರು ಈ ಒಂದು ಯೋಜನೆಯ ಲಾಭ ಪಡೆದಿದ್ದಾರೆ ಎಂದು ತಿಳಿಸಿದರು. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ 35,180 ಕೋಟಿ ಮೀಸಲಿಟ್ಟಿದ್ದೇವೆ. ಅಷ್ಟೇ ಅಲ್ಲದೆ ಗೃಹಜೋತಿ ಯೋಜನೆ ಜಾರಿ ಮಾಡಿದ್ದೇವೆ.ರಾಜ್ಯದ 1.62…








