Author: kannadanewsnow05

ಬೆಳಗಾವಿ : ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ಸಂದರ್ಭ ದಲ್ಲಿ ಬೈಲಹೊಂಗಲ ಸಮೀಪ ನಾಯಿ ಅಡ್ಡ ಬಂದಿತು ಎಂದು ಅದರ ಪ್ರಾಣ ಉಳಿಸಲು ಹೋಗಿ ಕಳೆದ ಕೆಲವು ದಿನಗಳ ಹಿಂದೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಿತ್ತು. ಅಪಘಾತದಲ್ಲಿ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನು ಮೂಳೆ ಮುರಿತವಾಗಿತ್ತು. ಇದೀಗ 13 ದಿನಗಳ ನಂತರ ಚಿಕಿತ್ಸೆ ಪಡೆದು ಇಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಕಾಯ್ಕೊಂಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ತಕ್ಷಣ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈ ವೇಳೆ ವೈದ್ಯರು ಹೆಬ್ಬಾಳ್ಕರ್ ಅವರ ಬೆನ್ನು ಮೂಳೆ ಮುರಿತವಾಗಿದ್ದು, ಕತ್ತಿಗೆ ಗಾಯವಾಗಿದೆ ಎಂದು ತಿಳಿಸಿದ್ದರು. ಕಳೆದ 13 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Read More

ಚಿತ್ರದುರ್ಗ : ಇತ್ತೀಚಿಗೆ ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಹೃದಯಘಾತ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ. ಈಗ ಚಿತ್ರದುರ್ಗದಲ್ಲಿ 26 ವರ್ಷದ ಯುವಕನೊಬ್ಬ ಏಕಾಏಕಿ ಕುಸಿದುಬಿದ್ದು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಹೊರವಲಯದ ಪಿಳ್ಳೆಕೆರೇನಹಳ್ಳಿ ನಿವಾಸಿ ಶಿವಕುಮಾರ್ (26) ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.ಮೃತರು ತಾಯಿ, ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Read More

ಬೆಂಗಳೂರು : ಸಂವಿಧಾನ ಜಾರಿಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡ 75 ವರ್ಷಗಳ ನಂತರವೂ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಟ ನಡೆಸಬೇಕಾದ ವಿಷಾದನೀಯ ಸ್ಥಿತಿಯಲ್ಲಿ ಗಣರಾಜ್ಯೋತ್ಸವವನ್ನು ನಾವು ಆಚರಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಟ್ವೀಟ್ ನಲ್ಲಿ ಶುಭ ಕೋರಿದ ಅವರು, ಇದು ಗತವೈಭವದಲ್ಲಿ ಮೈಮರೆಯದೆ ವರ್ತಮಾನದ ವಾಸ್ತವಗಳಿಗೆ ಮುಖಾಮುಖಿಯಾಗುವ ಕಾಲ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಸಂವಿಧಾನದ ಮೂರು ಮುಖ್ಯ ಆಧಾರ ಸ್ಥಂಭಗಳು ಭದ್ರವಾಗಿದ್ದು ಆರೋಗ್ಯಕರವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಸಂವಿಧಾನದ ಪಾಲನೆಯಾಗುತ್ತಿದೆ ಮತ್ತು ಪ್ರಜಾಪ್ರಭುತ್ವ ಸುರಕ್ಷಿತವಾಗಿದೆ ಎಂದು ಅರ್ಥ. ಕಟುವಾದ ಸತ್ಯ ಏನೆಂದರೆ ಸರ್ವಾಧಿಕಾರದ ದಂಡದಡಿ ನಮ್ಮ ಕಾರ್ಯಾಂಗ ಕರ್ತವ್ಯಭ್ರಷ್ಟಗೊಳ್ಳುತ್ತಿದೆ, ಶಾಸಕಾಂಗವನ್ನು ಖರೀದಿಸಲಾಗುತ್ತಿದೆ ಮತ್ತು ನ್ಯಾಯಾಂಗಕ್ಕೆ ಬೆದರಿಕೆ ಒಡ್ಡಿ ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಷಡ್ಯಂತ್ರ ನಡೆಯುತ್ತಿದೆ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಆಧಾರ ಸ್ಥಂಭಗಳು ದುರ್ಬಲಗೊಂಡು ಶಕ್ತಿಹೀನವಾದಾಗ ಸಂವಿಧಾನವೇ ಅಪ್ರಸ್ತುತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲಾಗುವ ಸಾಧ್ಯತೆಗಳಿವೆ. ಇಂತಹದ್ದೊಂದು ಅಪಾಯದ ಸ್ಥಿತಿಯಲ್ಲಿ ಭಾರತ ಇಂದು ನಿಂತಿದೆ. ಪ್ರಜಾಪ್ರಭುತ್ವವನ್ನು…

Read More

ಬೆಂಗಳೂರು : ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ 5,300 ಕೋಟಿ ರೂ. ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಹಾಗೂ ಕೇಂದ್ರ ಜಲಶಕ್ತಿ ಸಚಿವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ರಾಜ್ಯದ ಕೇಂದ್ರದ ಭಾಗದ 2.25 ಲಕ್ಷ ಹೆಕ್ಟೇರ್‌ ಭೂ ಪ್ರದೇಶಕ್ಕೆ ನೀರುಣಿಸುವ ಮಹತ್ವದ ಉದ್ದೇಶದೊಂದಿಗೆ ಭದ್ರಾ ಮೇಲ್ದಂಡೆ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಹನಿ ನೀರಾವರಿ ಮೂಲಕ 2.25 ಲಕ್ಷ ಹೆಕ್ಟೇರ್‌ಗೆ ನೀರುಣಿಸುವ ಜತೆಗೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಯ 367 ಸಣ್ಣ ನೀರಾವರಿ ಕೆರೆಗಳಿಗೆ 29.90 ಟಿಎಂಸಿ ನೀರು ಒದಗಿಸಲು 2008ರಲ್ಲಿ ಯೋಜನೆ ನಿರ್ಮಾಣ ಶುರು ಮಾಡಲಾಯಿತು. ಈವರೆಗೆ 10.121 ಕೋಟಿ ರು. ವೆಚ್ಚ ಮಾಡಲಾಗಿದ್ದು, ಇನ್ನೂ 16,125 ಕೋಟಿ ರು. ಬೇಕಾಗಬಹುದು ಎಂದು ಕೇಂದ್ರ ಸರ್ಕಾರವು ಅಂದಾಜಿಸಿದೆ. ಡಿ.24, 2020ರಂದು ಭದ್ರಾ ಮೇಲ್ದಂಡೆ ಯೋಜನೆಯ ತಾಂತ್ರಿಕ ಆರ್ಥಿಕ ಕಾರ್ಯಸಾಧುವನ್ನು ಜಲಶಕ್ತಿ ಸಚಿವಾಲಯದ ಸಲಹಾ…

Read More

ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳದ ಹೆಚ್ಚಳದ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಹೊಸ ಪ್ಲಾನ್ ಮಾಡಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಸಂಜೆ 5 ಗಂಟೆ ಮೇಲೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲ ವಸೂಲಾತಿಗೆ ಹೋಗುವಂತಿಲ್ಲ. ಹೆಚ್ಚು ಬಡ್ಡಿ ಕೇಳುವಂತಿಲ್ಲ, ಕಿರುಕುಳ ನೀಡುವಂತಿಲ್ಲ ಎಂದು ಖಡಕ್ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ವಸೂಲಿ ಮಾಡಲಾಗುತ್ತಿದೆ. ಕಾನೂನು ಕೈಗೆತ್ತಿಕೊಳ್ಳಲು ನಿಮಗೆ ಅನುಮತಿ ಕೊಟ್ಟವರು ಯಾರು,? ಸಾಲ ವಸೂಲಿಗೆ ರೌಡಿಗಳನ್ನು ಇಟ್ಟುಕೊಂಡಿದ್ದೀರಾ? ಸಾಲ ತೀರಿಸಲು ಸಾಧ್ಯವೇ ಎಂಬುದನ್ನೂ ಗಮನಿಸದೇ ಒಬ್ಬನೇ ವ್ಯಕ್ತಿಗೆ ನಿಯಮ ಬಾಹಿರವಾಗಿ ಸಾಲ ನೀಡುವುದು ಸರಿಯಲ್ಲ. ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ…

Read More

ಮೈಸೂರು : ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಕುರಿತು ಯಾವುದೇ ಕಾಂಗ್ರೆಸ್ ನಾಯಕರಿಗೂ ಮಾತನಾಡದೆ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ ಎಂದು ಕಳೆದ ಕೆಲವು ದಿನಗಳ ಹಿಂದೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಡಕ್ ವಾರ್ನಿಂಗ್ ನೀಡಿದ್ದರು. ಆದರೆ ಇದೀಗ ಕಾಂಗ್ರೆಸ್ ಸಂಸದ ಸುನಿಲ್ ಬೋಸ್ ಸಿಎಂ ಸಿದ್ದರಾಮಯ್ಯ 5 ವರ್ಷದವರೆಗೆ ಸಿಎಂ ಆಗಿ ಮುಂದುವರೆಯಲಿದ್ದು ಎರಡುವರೆ ವರ್ಷ ಬಳಿಕ ಕೂಡ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಮೈಸೂರಿನ ಟಿ ನರಸೀಪುರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯನವರು 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಇಲ್ಲ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಇಲ್ಲ 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯನವರೇ ಮುಂದುವರೆಯುತ್ತಾರೆ ಎಂದರು. ಪಕ್ಷದ ಶಾಸಕರು, ಹೈಕಮಾಂಡ್ ಬೆಂಬಲ ಇರುವವರೆಗೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ. ಎರಡುವರೆ ವರ್ಷದ ಬಳಿಕವು ಸಹ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಡಿಗೆಹಳ್ಳಿ ಪೊಲೀಸರು ಲಾಯರ್ ಜಗದೀಶ್, ಅವರ ಪುತ್ರ,, ಗನ್ ಮ್ಯಾನ್ ಹಾಗೂ ಕಾರು ಚಾಲಕರನ್ನು ಕೋಡಿಗೆಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಇದೀಗ ಬಂಧಿತ ಎಲ್ಲ ನಾಲ್ಕು ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೌದು ಬಿಗ್‌ಬಾಸ್ ಸ್ಪರ್ಧಿ, ವಕೀಲ ಜಗದೀಶ್ ಮೇಲೆ ಹಲ್ಲೆ ನಡೆದಿದೆ. ಇದನ್ನು ಜಗದೀಶ್ ಅವರೇ ಸ್ವತಃ ವಿಡಿಯೋ ಮಾಡಿ ನನ್ನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದಿದ್ದಾರೆ. ವೈರಲ್ ಆದ ವಿಡಿಯೋದಲ್ಲಿ ಮೂಗಿನಿಂದ ರಕ್ತ ಬರುತ್ತಿರುವುದನ್ನು ಕಾಣಬಹುದು. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಡಿಗೆಹಳ್ಳಿ ಪೊಲೀಸರಿಂದ ವಕೀಲ ಜಗದೀಶ್ ಸೇರಿ ನಾಲ್ವರು ಅರೆಸ್ಟ್ ವಕೀಲ ಜಗದೀಶ್ ಜಗದೀಶ್ ಪುತ್ರ ಹಾಗೂ ಕಾರು ಚಾಲಕನನ್ನು ಅರೆಸ್ಟ್ ಮಾಡಿದ್ದು, ಸದ್ಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣ ಹಿನ್ನೆಲೆ? ಲಾಯರ್ ಜಗದೀಶ್ ಗೆ ಸೇರಿದ ಕಾಂಪ್ಲೆಕ್ಸ್ ಬಳಿಕ ಅಣ್ಣಮ್ಮ…

Read More

ಬೆಂಗಳೂರು : ಪ್ರೀತಿಯಲ್ಲಿ ಬಿರುಕು ಮೂಡಿದ ಹಿನ್ನೆಲೆಯಲ್ಲಿ ತಾನು ಕೊಡಿಸಿದ್ದ ಮೊಬೈಲ್ ಹಾಗೂ ದ್ವಿಚಕ್ರ ವಾಹನ ವಾಪಾಸ್ ಕೇಳಲು ಯುವತಿ ಮನೆ ಬಳಿ ತೆರಳಿದ್ದ ಮಾಜಿ ಪ್ರಿಯಕರನ ಮೇಲೆ ಮಾರಕಾಸ್ತದಿಂದ ಹಲ್ಲೆ ಮಾಡಿದ ಹಾಲಿ ಪ್ರಿಯಕರ ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನೇಪಾಳ ಮೂಲದ ಬಿಕಾಸ್ (26) ಎಂದು ತಿಳಿದುಬಂದಿದೆ.ಜ.13ರಂದು ಜಕ್ಕೂರು ಲೇಔಟ್‌ನ 10ನೇ ‘ಬಿ’ ಕ್ರಾಸ್‌ನಲ್ಲಿ ನೇಪಾಳದ ಲೋಕೇಶ್‌ ಗುರುಂಗ್‌(25) ಮೇಲೆ ಬಿಕಾಸ್‌ ಹಾಗೂ ಆತನ ಸಹಚರರು ಹಲ್ಲೆ ಮಾಡಿದ್ದರು.‌ಈ ಸಂಬಂಧ ನೀಡಿದ್ದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಸಹಚರರಿಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು ಲೋಕೇಶ್ ನಗರದಲ್ಲಿ ಸೇಲ್ ಕೆಲಸ ಮಾಡಿ ಕೊಂಡಿದ್ದ. ನೇಪಾಳ ಮೂಲದ ಸಂಧ್ಯಾ ಪಲಲ್ಲಿ ಹಾಗೂ ಆಕೆಯ ಕುಟುಂಬವನ್ನು ನೇಪಾಳದಿಂದ ನಗರಕ್ಕೆ ಕರೆತಂದು ಬಾಡಿಗೆ ಮನೆ ಮಾಡಿ ಇರಿಸಿದ್ದ. ಲೋಕೇಶ್ ಮತ್ತು ಸಂಧ್ಯಾ ಪಲ್ಸಲ್ಲಿ ಪರಸ್ಪರ ಪ್ರೀತಿಸುತ್ತಿದ್ದರು. ಲೋಕೇಶ್ ಯುವತಿಗೆಮೊಬೈಲ್, ದ್ವಿಚಕ್ರ ವಾಹನ ಕೊಡಿಸಿದ್ದ. 8 ತಿಂಗಳ…

Read More

ಬೆಂಗಳೂರು : ಕ್ಯಾನ್ಸರ್ ಹಿನ್ನೆಲೆಯಲ್ಲಿ ನಟ ಶಿವರಾಜ್‌ಕುಮಾ‌ರ್ ಅಮೆರಿಕದಲ್ಲಿ ಯಶಸ್ವಿಯಾಗಿ ಕ್ಯಾನ್ಸ‌ರ್ ಚಿಕಿತ್ಸೆ ಮುಗಿಸಿಕೊಂಡು ಭಾನುವಾರ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ಈಗಾಗಲೇ ಬೆಂಗಳೂರಿಗೆ ಬರುವ ಕುರಿತು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಈ ಕುರಿತು ವಿಡಿಯೋ ಮೂಲಕ ಸಂದೇಶ ಹಂಚಿ ಕೊಂಡಿರುವ ಶಿವರಾಜ್ ಕುಮಾರ್, ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮನ್ನೆಲ್ಲಾ ನೋಡಲು ನಾನು ಜನವರಿ 26ರಂದು ಗಣರಾಜ್ಯೋತ್ಸವ ದಿನ ಬೆಂಗಳೂರಿಗೆ ಬರುತ್ತಿದ್ದೇನೆ. ನಿಮ್ಮ ಆಶೀರ್ವಾದ ಹೀಗೇ ಇರಲಿ ಎಂದು ಹೇಳಿದ್ದಾರೆ. ಕಳೆದ 2024 ಡಿಸೇಂಬರ್ 18ರಂದು ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದ ಶಿವರಾಜ್‌ಕುಮಾರ್ ಅವರಿಗೆ ಚಿಕಿತ್ಸೆ ಯಶಸ್ವಿಯಾಗಿದೆ. ಚಿಕಿತ್ಸೆಯ ನಂತರವೂ ಕೆಲ ದಿನಗಳ ಕಾಲ ಅಮೆರಿಕಾದಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಶಿವಣ್ಣ ಹೆಚ್ಚು ಕಮ್ಮಿ ಒಂದು ತಿಂಗಳ ನಂತರ ಬೆಂಗಳೂರಿಗೆ ಮರಳಿ ಬರುತ್ತಿದ್ದಾರೆ. ಇದೀಗ ನಟ ಶಿವಣ್ಣ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

Read More

ಬೆಂಗಳೂರು : ರಸ್ತೆ ಮೇಲೆ ಬಿದ್ದಿದ್ದ ಕೇಬಲ್ ವೈಯರ್ ದ್ವಿಚಕ್ರ ವಾಹನದ ಚಕ್ರಕ್ಕೆ ಸುತ್ತಿಕೊಂಡು ನಿಯಂತ್ರಣ ತಪ್ಪಿ ರಸ್ತೆ ಬಿದ್ದ ಸವಾರನ ಮೇಲೆ ಬಿಎಂಟಿಸಿ ಬಸ್ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಎಚ್‌ಎಎಲ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೊಮ್ಮನಹಳ್ಳಿ ನಿವಾಸಿ ರೋಹಿತ್ ಆರ್. ಪಾಟೀಲ್ (23) ಮೃತ ಸವಾರ. ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ರೋಹಿತ್ ಶುಕ್ರವಾರ ಸಂಜೆ ಐಟಿಪಿಎಲ್ ರಸ್ತೆಯ ರಾಮೇಶ್ವರಂ ಕೆಫೆ ಸಮೀಪದ ಪಾಸ್ ಪೋರ್ಟ್ ಕಚೇರಿ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಕೇಬಲ್ ವೈರ್ ದ್ವಿಚಕ್ರ ವಾಹನದ ಚಕ್ರಕ್ಕೆ ಸುತ್ತಿಕೊಂಡು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಇದೇ ಸಮಯಕ್ಕೆ ಹಿಂದಿನಿಂದ ಬರುತ್ತಿದ್ದ ಬಿಎಂಟಿಎಸ್ ಬಸ್ ಚಕ್ರ ರೋಹಿತ್ ಮೇಲೆಯೇ ಉರುಳಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಶನಿವಾರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು…

Read More