Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮಿನಿ ಬಸ್ ಡಿಕ್ಕಿಯಾಗಿ ಕಾರಿನ ಚಾಲಕ ಸ್ಥಳದಲ್ಲಿ ಸಾವನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೆಜ್ಜೆಗದಹಳ್ಳಿ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಾಳುಗಳಿಗೆ ನೆಲಮಂಗಲದ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾರ್ಮೆಂಟ್ಸ್ ಫ್ಯಾಕ್ಟರಿಯ ಮಹಿಳೆಯರನ್ನು ಮಿನಿ ಬಸ್ ಕರೆದುಕೊಂಡು ಹೋಗುತ್ತಿತ್ತು. ಈ ವೇಳೆ ವೇಗವಾಗಿ ಬಂದಂತಹ ಮಿನಿ ಬಸ್ ಕಾರ್ಯಾಡಿಕೆ ಹೊಡೆದಿದೆ ಪರಿಣಾಮ ಚಾಲಕ ನವೀನ್ ಎನ್ನುವ ವ್ಯಕ್ತಿ ಸ್ಥಳದಲ್ಲಿ ಸಾವನಪ್ಪಿದ್ದು ಬಸ್ ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ ತಕ್ಷಣ ಅವರನ್ನು ನೆಲಮಂಗಲದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಬೆಂಗಳೂರಲ್ಲಿ ಭೀಕರ ಕೊಲೆಯಾಗಿದ್ದು ಅಪರಿಚಿತನ ವ್ಯಕ್ತಿಯ ತಲೆಯ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಅತ್ಯಂತ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹೌದು ಬೆಂಗಳೂರಿನ ಜೀವನ ಹಳ್ಳಿ ಬಳಿ ರೈಲ್ವೆ ಹಳಿ ಸಮೀಪ ಅಪರಿಚಿತನ ಬರ್ಬರ ಹತ್ಯೆಯಾಗಿರುವ ಘಟನೆ ನಡೆದಿದ್ದು,ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಂಟೋನ್ಮೆಂಟ್ ರೈಲ್ವೇ ಠಾಣೆಯ ಪೊಲೀಸರಿಗೆ ಮಾಹಿತಿ ರವಾನೆ ಮಾಡಲಾಗಿದೆ.ಅಪರಿಚಿತನ ಪತ್ತೆಗಾಗಿ ಇದೀಗ ಪೊಲೀಸರು ತನಿಖೆ ಕೈಗೊಂಡಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಬೆಂಗಳೂರು : ರಾಜ್ಯದ ಕರಾವಳಿ ಮತ್ತು ಒಳನಾಡಿನಲ್ಲಿ ಮುಂಗಾರು ತನ್ನ ಪ್ರಭಾವ ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ 3 ದಿನಗಳಿಗೆ ಅನ್ವಯವಾಗುವಂತೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ. ಮೀನುಗಾರರಿಗೆ ಸಹ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 1 ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದೂ ಸೇರಿದಂತೆ ಮೂರು ದಿನ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಪ್ರತಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಅಲ್ಲೆಲ್ಲಿ ಸಾಧಾರಣ ಮಳೆ ಬೀಳಲಿದೆ. ನೈಋತ್ಯ ಮಾನ್ಸೂನ್ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದೆ. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಇಂದು ಕರಾವಳಿಯ ಬಹುತೇಕ ಕಡೆಗಳಲ್ಲಿ,…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಈಗಾಗಲೇ ಜೈಲುವಾಸ ಅನುಭವಿಸುತ್ತಿದ್ದಾರೆ. ವಾರದಲ್ಲಿ ಮೂರು ದಿನ ಮಾತ್ರ ಭೇಟಿಗೆ ಅವಕಾಶ ಇರುವ ಹಿನ್ನೆಲೆಯಲ್ಲಿ ಈಗಾಗಲೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮಗ ಇತ್ತೀಚಿಗೆ ಭೇಟಿ ನೀಡಿದ್ದರು. ಅದಾದ ಬಳಿಕ ವಿನೋದ್ ಪ್ರಭಾಕರ್ ಕೂಡ ಭೇಟಿ ನೀಡಿದ್ದರು. ಇಂದು ನಿರ್ದೇಶಕ ನಟ ಪ್ರೇಮ್ ಹಾಗೂ ಪತ್ನಿ ರಕ್ಷಿತಾ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನವರನ್ನು ಭೇಟಿಯಾದರು. ದರ್ಶನ್‌ರನ್ನ ಭೇಟಿಯಾದ ಬಳಿಕ ಹೊರಬಂದ ರಕ್ಷಿತಾ ಭಾವುಕರಾಗಿದ್ದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 20 ದಿನಗಳಿಂದ ಆಗುತ್ತಿರುವುದನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ಇದು ದುರಾದೃಷ್ಟಕರ ಘಟನೆ. ಈ ಪ್ರಕರಣ ಆಗಿರುವುದರ ಬಗ್ಗೆ ಬೇಸರ ಖಂಡಿತಾ ಇದೆ. ನಾನು ಹೇಳೋದು ಇಷ್ಟೇ, ಯಾರೂ ಕೂಡ ಕಾನೂನಿಗಿಂತ ದೊಡ್ಡವರಲ್ಲ. ಎಲ್ಲರಿಗೂ ನ್ಯಾಯ ಸಿಗಲಿ ಎಂದು ಹೇಳಿದರು. ನಂತರ ಪ್ರೇಮ್ ಅವರು ಮಾತನಾಡಿ, ನಟ ದರ್ಶನ್ ನನಗೆ ಹಾಗೂ ರಕ್ಷಿತಾಗೆ ಬಹಳ ಆತ್ಮೀಯ ಸ್ನೇಹಿತರು.…
ಕೋಲಾರ : ರಾಹುಲ್ ಗಾಂಧಿ ಇರುವ ಕಾರಣ ಕಾಂಗ್ರೆಸ್ಗೆ ರಾಹುಕಾಲ ಬಂದಿದೆ. ಬೆಲೆ ಏರಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎರಡು ನಾಲಿಗೆಗಳು ಇವೆ. ಮಾಡಲ್ಲ ಅಂತ ಹೇಳಿದ್ದನ್ನು ಈಗ ಮಾಡುತ್ತಿದ್ದಾರೆ ಮಾದಿತ್ತಿದರೆ ಸಿಎಂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುತ್ತಾರೆ.ಕೇಂದ್ರ ಸರ್ಕಾರ ಏನೋ ನಿಮ್ಮ ಅತ್ತೆ ಮನೆಯ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಜಿಲ್ಲಾಡಳಿತ ಕಚೇರಿಯ ಬಳಿ ಜಿಲ್ಲಾ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿಮಾತನಾಡಿದ ಅವರು, ವಿದ್ಯುತ್ ಬೆಲೆ, ಡಿಸೇಲ್- ಪೆಟ್ರೋಲ್ ಬೆಲೆ, ಹಾಲಿನ ಬೆಲೆ, ಮದ್ಯದ ಬೆಲೆ, ಮುದ್ರಾಂಕ ನೋಂದಣಿ ಬೆಲೆಗಳನ್ನು ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಜೀವನವು ಆರ್ಥಿಕ ಸಂಕಷ್ಟದಲ್ಲಿರುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು. ಕಾಂಗ್ರೆಸ್ ಸರ್ಕಾರವು ರಾಜ್ಯದ ಜನತೆಗೆ ಐದು ಗ್ಯಾರಂಟಿಗಳ ಮೂಲಕ ಭಾಗ್ಯಗಳನ್ನು ಒಂದು ಕೈಯಲ್ಲಿ ಕೊಟ್ಟು, ಪೆಟ್ರೋಲ್ – ಡೀಸೆಲ್, ಅಗತ್ಯ ವಸ್ತುಗಳ ಬೆಲೆಯೇರಿಸುವ ಮೂಲಕ ಮತ್ತೊಂದು…
ಶಿವಮೊಗ್ಗ : ನಿನ್ನೆ ಹಾಸನದಲ್ಲಿ ಹಾಸನದಲ್ಲಿ ನಡೆದಂತಹ ಭೀಕರ ಅಪಘಾತದಲ್ಲಿ ಟಿಟಿ ವಾಹನದಲ್ಲಿದ್ದ 13 ಜನರು ಸಾವನಪ್ಪಿದ್ದರು. ಮಧುರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂಪಾಯಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ ಇದರ ಬೆನ್ನಲೇ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಅವರು ವೈಯಕ್ತಿಕವಾಗಿ ಮೃತರ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂಪಾಯಿ ನೀಡಲಿದ್ದಾರೆ ಎಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆ ಹಟ್ಟಿ ಗ್ರಾಮದಲ್ಲಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಮೃತ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ನಟ ಶಿವಣ್ಣ ಹಾಗೂ ಗೀತಾ ಅವರು ವೈಯಕ್ತಿಕವಾಗಿ ಪರಿಹಾರ ನೀಡಲು ತೀರ್ಮಾನಿಸಿದ್ದು, ಮೃತರ ಕುಟುಂಬಕ್ಕೆ 1 ಲಕ್ಷ ಪರಿಹಾರ ನೀಡಲಿದ್ದಾರೆ. ಶೀಘ್ರದಲ್ಲಿ ಮೃತರ ಕುಟುಂಬಕ್ಕೆ ಶಿವಣ್ಣ ಹಾಗೂ ಗೀತಾ ಶಿವರಾಜಕುಮಾರ್ ಪರಿಹಾರ ನೀಡಲಿದ್ದಾರೆ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು. ನಿನ್ನೆ ನಸುಕಿನ ಜವ 4 ಗಂಟೆಗೆ…
ಚಿಕ್ಕಬಳ್ಳಾಪುರ : ನಾನು ಕೊಟ್ಟಿರುವ ನಿವೇಶನಗಳಿಗೆ ನಿಮ್ಮ ಫೋಟೋ ಹಾಕಿಕೊಂಡಿದ್ದೀರಿ. ಗಂಡಸರಾಗಿದ್ದರೆ ಜಿಲ್ಲೆಯ ಪ್ರತಿಕ್ಷೇತ್ರದಲ್ಲಿ 25,000 ಸೈಟ್ ಕೊಡಿ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಸಿ ಸುಧಾಕರಗೆ ಸಂಸದ ಡಾ.ಕೆ ಸುಧಾಕರ್ ಸವಾಲು ಹಾಕಿದರು. ಚಿಕ್ಕಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಎಂಸಿ ಸುಧಾಕರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಚಿಮುಲ್ ರದ್ದು ಮಾಡಿ ಮತ್ತೆ ಕೋಚಿಮುಲ್ಗೆ ಸೇರಿಸಿದ್ದೀರಿ. ಬಜೆಟ್ ಮೀಟಿಂಗ್ ನಲ್ಲಿ ಸಚಿವ ಡಾ. ಎಂ ಸಿ ಸುಧಾಕರ್ ಇದ್ದರು. ಚಿಕ್ಕಬಳ್ಳಾಪುರ ಜಿಲ್ಲೆಗೆ ಅನ್ಯಾಯವಾಗುತ್ತಿದ್ದರು ಕೂಡ ಯಾಕೆ ಸಭೆಯಲ್ಲಿ ಮಾತನಾಡಲಿಲ್ಲ ಎಂದರು. ನಿಮಗೆ ಯಾಕೆ ಚಿಕ್ಕಬಳ್ಳಾಪುರ ಜಿಲ್ಲೆ ಬೇಕು ಹೇಳಿ? ನಾನೇನಾದರೂ ನಿಮ್ಮ ಸ್ಥಾನದಲ್ಲಿದ್ದರೆ ರಾಜೀನಾಮೆ ಬಿಸಾಕಿ ಬರುತ್ತಿದ್ದೆ. ಒಂದು ದಿನ ಬದುಕಿದ್ದರೂ ಸಿಂಹದಂತೆ ಬದುಕಬೇಕು.ಅಧಿಕಾರಕ್ಕೆ ಅಂಟಿಕೊಂಡು ಇದೀರಲ್ಲ ನಿಮಗೆ ನಾಚಿಕೆ ಆಗಲ್ವಾ? ಎಂದು ಸಚಿವ ಡಾ. ಎಮ್ ಸಿ ಸುಧಾಕರ್ ವಿರುದ್ಧ ಸಂಸದ ಡಾ. ಕೆ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.
ಉಡುಪಿ : ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ತಾಯಿಯನ್ನು ರಕ್ಷಣೆ ಮಾಡಲಾಗಿದೆ. ಘಟನೆಯು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರಡಿ ಗ್ರಾಮದ ನಂದ್ರೋಳಿ ಎಂಬಲ್ಲಿ ಈ ಘಟನೆ ನಡೆದಿದೆ. ಕೆರೆ ನೀರಿನಲ್ಲಿ ಮುಳುಗಿ ದನರಾಜ (13) ಛಾಯಾ (7) ಸಾವನ್ನಪ್ಪಿರುವ ದುರ್ದೈವಿ ಮಕ್ಕಳು ಎಂದು ಹೇಳಲಾಗುತ್ತಿದೆ. ರಕ್ಷಿಸಲ್ಪಟ್ಟ ತಾಯಿಯ ಸ್ಥಿತಿ ಗಂಭೀರವಾಗಿದ್ದು, ತಕ್ಷಣ ಆಕೆಯನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.
ಚಿಕ್ಕಬಳ್ಳಾಪುರ : ಆಂಧ್ರಪ್ರದೇಶದಲ್ಲಿ ಜಗನ್ಮೋಹನ ರೆಡ್ಡಿಗೆ ಬಂದಂತಹ ಪರಿಸ್ಥಿತಿ ಕೂಡ ರಾಜ್ಯ ಸರ್ಕಾರಕ್ಕೂ ಬರಲಿದೆ ಎಂದು ಬಿಜೆಪಿಯ ಸಂಸದ ಡಾಕ್ಟರ್ ಕೆ ಸುಧಾಕರ್ ಭವಿಷ್ಯ ನುಡಿದರು. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರದಲ್ಲಿ ಜಗನ್ ಗೆ ಬಂದ ಸ್ಥಿತಿ ರಾಜ್ಯ ಸರ್ಕಾರಕ್ಕೂ ಬರುತ್ತದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಗನ್ ಸ್ಥಿತಿ ಬರುತ್ತದೆ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಚೆಕ್ಬಳ್ಳಾಪುರ ಜಿಲ್ಲೆ ಕಡೆಗಣಿಸಲಾಗಿದೆ ಎಂದರು. 2023ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿದ್ದೇನೆ. ಸೋತಾಗ ತಂದೆ ತಾಯಿಯನ್ನು ಕಳೆದುಕೊಂಡಷ್ಟು ನೋವಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಜನ ಮತ್ತೆ ಪ್ರೀತಿ ತೋರಿದ್ದಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಸಂಸದ ಕೆ ಸುಧಾಕರ್ ಹೇಳಿದರು.
ಉಡುಪಿ : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ ಶ್ಲಾಘಿಸಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲುವಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಮಾತನಾಡಿದ ಅವರು, ಹತ್ತು ಜನ ಪುರುಷರಿಗೆ ಇರುವ ಶಕ್ತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇದೆ. ಅವರ ಆಸ್ಥೆಯಿಂದಲೇ ಇಂದು ರಾಜ್ಯಾದ್ಯಂತ ಗೃಹ ಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಜಾರಿಯಾಗಿದೆ ಎಂದು ತಿಳಿಸಿದ್ದಾರೆ. ಸಚಿವರ ಕಾಳಜಿಯಿಂದಲೇ ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆ ಗೃಹಲಕ್ಷ್ಮಿ ಇಂದು ಮನೆ ಮನೆಗೆ ತಲುಪುತ್ತಿದೆ. ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಇಂದು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಅವರ ಆಡಳಿತ ವೈಖರಿ ಇತರರಿಗೂ ಮಾದರಿಯಾಗಿದೆ ಎಂದು ವಿನಯ್ ಗುರೂಜಿ ಹೇಳಿದರು.