Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಲೂಟಿ ನಡೀತಿದೆ. ಇದು ಬ್ರ್ಯಾಂಡ್ ಬೆಂಗಳೂರು ಅಲ್ಲ ಲೂಟಿ ಬೆಂಗಳೂರು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತಾಡಿದ ಕುಮಾರಸ್ವಾಮಿ, ಬೆಂಗಳೂರಿಗೆ ಈ ಸರ್ಕಾರ ಕೊಟ್ಟ ಕೊಡುಗೆಯಾದರೂ ಏನು? ಅಕ್ಕಿ ಕೊಡುವುದಕ್ಕೆ ಯೋಗ್ಯತೆ ಇಲ್ಲ. ಈ ಸರ್ಕಾರಕ್ಕೆ ಯೋಗ್ಯತೆ ಇಲ್ಲ. 5 ಕೆಜಿ ಅಕ್ಕಿ ಮೋದಿ ಸರ್ಕಾರ ನೀಡುತ್ತಿದೆ ಎಂದು ತಿಳಿಸಿದರು. ಹೆಚ್ಚುವರಿ ಐದು ಕೆಜಿ ಹೆಚ್ಚು ಕೊಟ್ಟಿಲ್ಲ.ಈ ಕಡೆ ಹಣವು ಇಲ್ಲ ಕಳೆದ ಮೂರು ತಿಂಗಳಿನಿಂದ ಹೆಚ್ಚುವರಿ ಹಣ ನೀಡಿಲ್ಲ ಮಾ ತೆತ್ತಿದರೆ ಬ್ರಾಂಡ್ ಮಂಗಳೂರು ಎಂದು ಹೇಳುತ್ತಾರೆ.ಬ್ರಾಂಡ್ ಬೆಂಗಳೂರು ಅಲ್ಲ ಇದು ಲೂಟಿ ಬೆಂಗಳೂರು ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಡೆಸಿದರು. ಎರಡು ಮೂರು ಮಳೆಗೇ ಬೆಂಗಳೂರಿನಲ್ಲಿ ಮನೆಗಳಿಗೆ ನೀರು ತುಂಬಿಕೊಂಡಿದೆ. ಬಿಡಿಎನಲ್ಲಿ ಮೊನ್ನೆ ಕ್ಲೋಸ್ಡ್ ಡೋರ್ ಮೀಟಿಂಗ್ ಮಾಡಿದ್ದಾರಂತೆ. ಬಹಳ ರಹಸ್ಯವಾಗಿ ಸಭೆ…
ದಾವಣಗೆರೆ : ಕಳೆದ ಎರಡು ದಿನಗಳ ಹಿಂದೆ ಚನ್ನಗಿರಿ ಠಾಣೆಯಲ್ಲಿ ಆದಿಲ್ ಎನ್ನುವ ವ್ಯಕ್ತಿಯ ಲಾಕಪ್ ಡೆತ್, ಹಾಗೂ ಠಾಣೆ ಬಳಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆ ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದ್ದಂತೆ 25 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಎಸ್ಪಿ ಉಮಾಪ್ರಶಾಂತ್, ಪ್ರಕರಣದ ತನಿಖೆ ಸಿಐಡಿಗೆ ವಹಿಸಲಾಗಿದೆ. ಶೀಘ್ರವಾಗಿ ಸಿಐಡಿ ಅಧಿಕಾರಿಗಳು ಪ್ರಕರಣವನ್ನು ತಮ್ಮ ವ್ಯಾಪ್ತಿಗೆ ತೆಗೆದುಕೊಳ್ಳಲಿದೆ ಎಂದರು. ಕಾನೂನು ಪ್ರಕಾರ ನ್ಯಾಯಾಧೀಶರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಮೂರು ದಿನದಲ್ಲಿ ಪೋಸ್ಟ್ ಮಾರ್ಟಂ ವರದಿ ಬರಲಿದ್ದು ಸತ್ಯ ಹೊರಬೀಳಲಿದೆ. ಪ್ರಕರಣದ ಬಗ್ಗೆ ಮಾಹಿತಿ ಚನ್ನಗಿರಿ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ ಮಾಹಿತಿ ಪಡೆದುಕೊಂಡಿದ್ದಾರೆ. ಕಲ್ಲು ತೂರಾಟ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ 25 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದೇವೆ. ಬಂಧಿತರು…
ನವದೆಹಲಿ : ಇಂದು ರಾತ್ರಿ ರೆಮಲ್ ಚಂಡಮಾರುತ ನೆಲಕ್ಕೆ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಪಶ್ಚಿಮಬಂಗಾಳದ ಕರಾವಳಿಗೆ ಈ ಒಂದು ಚಂಡಮಾರುತ ಅಪ್ಪಳಿಸಲಿದೆ. ಹಾಗಾಗಿ ಕೊಲ್ಕತ್ತಾ ಏರ್ಪೋರ್ಟ್ ನಲ್ಲಿ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಹೌದು ಇಂದು ರಾತ್ರಿ ರೆಮಲ್ ಚಂಡಮಾರುತ ನೆಲಕ್ಕೆ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 9:00 ವರೆಗೆ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಮುನ್ನೆಚ್ಚರಿಕೆ ಕ್ರಮವಾಗಿ ಕೊಲ್ಕತ್ತದಲ್ಲಿ ರೈಲು ಸೇವೆ ಸಹ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಅಕ್ಕಿಯ ಜೊತೆಗೆ ಮನೆಯ ಸದಸ್ಯರು ಎಷ್ಟಿದ್ದಾರೋ ಅಷ್ಟು ದುಡ್ಡನ್ನು ಪಡಿತರ ಅಕೌಂಟಿಗೆ ಹಾಕುತ್ತಿತ್ತು. ಇದೀಗ ಕಳೆದ ಮೂರು ತಿಂಗಳಿನಿಂದ ದುಡ್ಡು ಅಕೌಂಟಿಗೆ ಬಂದಿಲ್ಲ.ಈ ಕುರಿತಂತೆ ಬಿಜೆಪಿ ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟರ್ ನಲ್ಲಿ ವಾಗ್ದಾಳಿ ನಡೆಸಿದೆ. ಹಾಗಾಗಿ ರಾಜ್ಯ ಬಿಜೆಪಿಯು ಟ್ವೀಟ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದೆ.ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ಬೇಕೋ ಬೇಡ್ವೋ ಎಂದು ಕಿವಿಯ ಮೇಲೆ ಹೂವಿಟ್ಟಿದ್ದ ಸಿಎಂ ಸಿದ್ದರಾಮಯ್ಯ ಅವರು, ಈಗ ಜನತೆಯ ತಲೆ ಮೇಲೆ ಹೂವಿನ ಕುಂಡವನ್ನೇ ಇಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದೆ. ಸೋಲು ಖಚಿತ-ನಿಶ್ಚಿತ-ಖಂಡಿತವೆಂದ ತಕ್ಷಣ ಗ್ಯಾರಂಟಿಗಳಿಗೆ ಲಭಿಸಿದೆ ಸಂಚಕಾರ.10 ಕೆಜಿ ಅಕ್ಕಿಯೂ ಇಲ್ಲ, ಅಕ್ಕಿಯ ಬದಲು ದುಡ್ಡು ಇಲ್ಲ, ಇದೊಂದು ರೀತಿ ಉಂಡು ಹೋದ ಕೊಂಡು ಹೋದದ ಅಪರಾವತಾರ.ಸಿಎಂ ಸಿದ್ದರಾಮಯ್ಯ ಅವರೇ, 3 ತಿಂಗಳಿನಿಂದ ಅಕ್ಕಿ ದುಡ್ಡು ಬಂದಿಲ್ಲ, ದುಡ್ಡು ಕೊಡ್ತಿರೋ ಇಲ್ವೋ ಅನ್ನೊದನ್ನ ಹೇಳ್ಬಿಡಿ.…
ರಾಜಸ್ತಾನ : ರಾಜಸ್ಥಾನದ ಅಜ್ಮೀರ್ ನ ರೆಸ್ಟೋರೆಂಟ್ ಒಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ರಾಜಸ್ಥಾನದ ಅಜ್ಮೀರ್ನಲ್ಲಿರುವ ರೆಸ್ಟೋರೆಂಟ್ನಲ್ಲಿ ಇಂದು ಭಾರೀ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್ ನಲ್ಲಿ ಇರಿಸಲಾಗಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ರೆಸ್ಟೊರೆಂಟ್ಗೆ ಬೆಂಕಿ ಹೊತ್ತಿಕೊಂಡಿದ್ದು ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಸೃಷ್ಟಿಸಿದೆ. ರೈಲು ನಿಲ್ದಾಣದ ಮುಂಭಾಗದಲ್ಲಿ ನಿರ್ಮಿಸಲಾಗಿದ್ದ ಹೊಟೇಲ್ಗೆ ಬೆಂಕಿ ತಗುಲಿರುವ ಬಗ್ಗೆ ಮಾಹಿತಿ ಪಡೆದ ಮೂರ್ನಾಲ್ಕು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಟ್ಟರು.ಪ್ರಕರಣದ ಕುರಿತು ಮಾಹಿತಿ ನೀಡಿರುವ ಕ್ಲಾಕ್ ಟವರ್ ಪೊಲೀಸ್ ಠಾಣಾಧಿಕಾರಿ ದಿನೇಶ್ ಕುಮಾರ್, ಅಜ್ಮೀರ್ನ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿರುವ ರೆಸ್ಟೋರೆಂಟ್ನಲ್ಲಿ ಅಡುಗೆ ಮಾಡುವಾಗ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ವಾಸ್ತವವಾಗಿ, ಅಜ್ಮೀರ್ನ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ನಿರ್ಮಿಸಲಾದ ರೆಸ್ಟೋರೆಂಟ್ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಎಷ್ಟು ತೀವ್ರವಾಗಿತ್ತು ಎಂದರೆ ರೆಸ್ಟೋರೆಂಟ್ನಲ್ಲಿ ಸ್ಫೋಟ ಸಂಭವಿಸಿದೆ. ಬೆಂಕಿ ಅವಘಡದಿಂದ ಪ್ರದೇಶದಲ್ಲಿ ಆತಂಕ ಮನೆ ಮಾಡಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ವಾಹನವು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು…
ರಾಮನಗರ : ಕೆಲಸದ ನಿಮಿತ್ಯ ಬೈಕ್ ಮೇಲೆ ತೆರಳುತ್ತಿದ್ದ ಬೆಳೆ ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಒಬ್ಬ ಮಹಿಳೆ ಸ್ಥಳದಲ್ಲಿ ಸಾವನ್ನುಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಅವರೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಬಸ್ ಡಿಕ್ಕಿ ಹೊಡೆದು ಓರ್ವ ಸವಾರ ಹಾಗೂ ಮಹಿಳೆ ಸಾವನ್ನಪ್ಪಿದ್ದರೆ. ಅವರೆಹಳ್ಳಿ ಕೆರೆ ಏರಿ ಬಳಿ ಈ ಅಪಘಾತ ಸಂಭವಿಸಿದೆ.ರಾಮನಗರ ಕನಕಪುರ ರಸ್ತೆ ಅವರೇಹಳ್ಳಿ ಕೆರೆ ಬಳಿ ಈ ಒಂದು ಅಪಘಾತ ಸಂಭವಿಸಿದೆ.ಕನಕಪುರದಿಂದ ರಾಮನಗರ ಕಡೆ ಬೈಕ್ ತೆರಳುತ್ತಿತ್ತು. ಈ ವೇಳೆ ಬೈಕ್ ಸವಾರ ಹಾಗೂ ಮಹಿಳೆ ಸಾವನ್ನಪ್ಪಿದ್ದಾರೆ. ಮೃತರು ಮಾಗಡಿ ತಾಲೂಕಿನ ಹೊನ್ನಾಪುರ ಪಾಳ್ಯದವರು ಎಂದು ಹೇಳಲಾಗುತ್ತಿದೆ. ರಾಮನಗರ ಗ್ರಾಮಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಗೂಡ್ಸ್ ವಾಹನದ ಚಾಲಕ ಸಾವು ವಾಟರ್ ಟ್ಯಾಂಕರ್ ಡಿಕ್ಕಿ ಹೊಡೆದು ಗೂಡ್ಸ್ ವಾಹನದ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೆಳ್ಳಂದೂರು ಬಸ್ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ಚಾಲಕ…
ಉಡುಪಿ : ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡಿಲ್ಲವೆಂದು ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿರುವ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ನಿನ್ನೆ ಪಕ್ಷದಿಂದ ಉಚ್ಚಾಟಿಸಲಾಯಿತು. ಈ ಕುರಿತು ಪ್ರತಿಕ್ರಿಯೆ ನೀಡಿರುವವರು ನನಗೆ ಮೋದಿ ಹಾಗೂ ರಾಜ್ಯದ ನಾಯಕರಿಗೆ ಬೈದಿಲ್ಲ ಬಿಜೆಪಿ ಪಕ್ಷದ ವ್ಯವಸ್ಥೆ ಕುರಿತು ಅಸಮಾಧಾನವಿದೆ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೋದಿಗೆ ಬೈದಿಲ್ಲ ರಾಜ್ಯದ ನಾಯಕರಿಗೆ ಬೈದಿಲ್ಲ, ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ. ಪಕ್ಷದ ನಾಯಕರನ್ನು ಟೀಕಿಸಿದ ಜಗದೀಶ್ ಶೆಟ್ಟರ್ ಮತ್ತೆ ಬಂದರು.ಪಕ್ಷಕ್ಕೆ ವಾಪಸ್ ಆಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದು ಹೇಳಿದರು. ಇದು ಶಾಶ್ವತವಾದ ವಜಾ ಅಲ್ಲ ಎಂದು ರಘುಪತಿ ಭಟ್ ತಿಳಿಸಿದರೂ. ಪರಿಷತ್ ಚುನಾವಣೆಯಲ್ಲಿ ಗೆದ್ದ ಮೇಲೆ ವಜಾ ರದ್ದಾಗುತ್ತದೆ.ಬಿಜೆಪಿ ಕಾರ್ಯಕರ್ತ ನನ್ನ ವಜಾ ಮಾಡಲು ಸಾಧ್ಯವಿಲ್ಲ ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಅಸಮಾಧಾನ ಹೊರಹಾಕಿದ್ದಾರೆ.
ಕಲಬುರ್ಗಿ : ಕೆಲವರು ಅಡ್ಡ ದಾರಿಯ ಮೂಲಕ ಹಣ ಗಳಿಸಲು ಹೋಗಿ ಬೀದಿಗೆ ಬಂದಿರುವ ಅನೇಕ ಘಟನೆಗಳನ್ನು ನೋಡಿರುತ್ತೇವೆ. ಇದೀಗ ಅಂತಹದ್ದೇ ಘಟನೆ ಕಲಬುರ್ಗಿ ನಗರದಲ್ಲಿ ನಡೆದಿದ್ದು ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ದಂಪತಿಗಳಿಬ್ಬರು ಸುಮಾರು 30 ಕೋಟಿ ರೂಪಾಯಿ ವಂಚನೆ ಎಸೆಗಿರುವ ಘಟನೆ ಕಲಬುರಗಿ ನಗರದ ರೋಜಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಕಲಬುರಗಿ ನಗರದ ಗಾಂಧಿನಗರದ ಬಳಿ ದಂಪತಿಗಳಾದಉತ್ಕರ್ಷ ಹಾಗೂ ಸಾವಿತ್ರಿ ಬಿ.ಎಲ್ ಕಾಂಪ್ಲೆಕ್ಸ್ನಲ್ಲಿ ಟ್ರೇಡಿಂಗ್ ಕಂಪನಿ ನಡೆಸುತ್ತಿದ್ದರು.ಯುವಕ ಯುವತಿಯರನ್ನು ಗುರಿಯಾಗಿಸಿಕೊಂಡು ದಂಪತಿ ಸುಮಾರು 500ಕ್ಕೂ ಹೆಚ್ಚು ಜನರಿಗೆ ವಂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಕೆಲವರಿಂದ 25 ಲಕ್ಷ ರೂ.ನಿಂದ 1 ಕೋಟಿ ರೂ. ವರೆಗೂ ಹೂಡಿಕೆ ಮಾಡಿಸಿಕೊಂಡಿದ್ದರು ಎಂದು ಹೇಳಲಾಗುತ್ತಿದ್ದು, ದಂಪತಿಗೆ ವಿಜಯಸಿಂಗ್ ಹಜಾರೆ ಹಾಗೂ ಸುಧಾ ಎಂಬವರು ಸಹಾಯ ಮಾಡಿದ್ದಾರೆ ಎಂದು ಜನ ಆರೋಪಿಸಿದ್ದಾರೆ. ಈ ಸಂಬಂಧ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರು ದಾಖಲಾಗುತ್ತಿದ್ದಂತೆ ದಂಪತಿ ಅಪಾರ್ಟ್ಮೆಂಟ್ನಿಂದ ಸುನಿಲ್ ಎಂಬವರ ಕಾರಿನಲ್ಲಿ ಪರಾರಿಯಾಗಿದ್ದಾರೆ.…
ಶಿವಮೊಗ್ಗ : ಕೆಲವರು ಯಾವುದೋ ಒಂದು ಕಾರಣಕ್ಕೆ ಅಥವಾ ಯಾವುದೋ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಜೀವನದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಿದ್ದೇವೆ ಆದರೆ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರು ಹೊಟ್ಟೆ ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ವಿದ್ಯುತ್ ನಗರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೌದು ಆತ್ಮಹತ್ಯೆ ಮಾಡಿಕೊಂಡ ಅಕ್ಷತಾ ಅವರಿಗೆ ಅನಾರೋಗ್ಯ ಕಾಡುತ್ತಿತ್ತು. ಹಾಗಾಗಿ ಇಂದು ಅಕ್ಷತಾ ಅವರು ಸೊರಬ ಪಟ್ಟಣದ ವಿದ್ಯುತ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ದಿನಗಳಿಂದ ಅಕ್ಷತಾ ಅನಾರೋಗ್ಯದಿಂದ ಬಳಲುತ್ತಿದ್ದರು. ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತ ಅಕ್ಷತಾ ಅವರು ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದವರು ಎಂದು ಹೇಳಲಾಗುತ್ತಿದೆ. ಕೆಲ ವರ್ಷಗಳ ಹಿಂದೆ ಚಂದ್ರಗುತ್ತಿ ಗ್ರಾಮದ ಸಂತೋಷ್ ಜೊತೆ ಅಕ್ಷತಾ ಅವರ ಮದುವೆ ಆಗಿತ್ತು ಎಂದು ತಿಳಿದುಬಂದಿದೆ. ಹೊಟ್ಟೆನೋವು ತಾಳಲಾರದೆ ಸೊರಬ ಪಟ್ಟಣದ ವಿದ್ಯುತ್ ನಗರದ ಮನೆಯಲ್ಲಿ ಅಕ್ಷತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತಂತೆ…
ಗುಜರಾತ್ : ಇಂದು ಸಂಜೆ ಗುಜರಾತಿನ ರಾಜ್ಕೋಟ್ ನಲ್ಲಿ ಗೇಮಿಂಗ್ ಜೋನ್ ನಲ್ಲಿ ಭಾರಿ ಅಗ್ನಿವಗಡ ಸಂಭವಿಸಿ 9 ಮಕ್ಕಳು ಮಹಿಳೆಯರು ಸೇರಿ 24 ಜನರು ಸಚಿವ ದಹನ ಹೊಂದಿದ್ದಾರೆ. ಘಟನೆ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ನಲ್ಲಿ ಸಂತಾಪ ಸೂಚಿಸಿದ್ದಾರೆ. ರಾಜ್ಕೋಟ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ತೀವ್ರ ನೊಂದಿದ್ದೇವೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೂ ಇವೆ. ಗಾಯಗೊಂಡವರಿಗೆ ಪ್ರಾರ್ಥನೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಸ್ಥಳೀಯ ಆಡಳಿತ ಕಾರ್ಯೋನ್ಮುಖವಾಗಿದೆ.ಘಟನೆ ಕುರಿತಂತೆ 24 ಗಂಟೆಯಲ್ಲಿ ವರದಿ ನೀಡುವಂತೆ ಗುಜರಾತ್ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.ಇದೆ ವೇಳೆ ಗೇಮಿಂಗ್ ಝೋನ್ ಮಾಲೀಕ ಸರಿ ನಾಲ್ವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ದುರಂತದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.ರಾಜಕೋಟ್ ನಲ್ಲಿ ಅಗ್ನಿ ದುರಂತ ನಮ್ಮೆಲ್ಲರಿಗೂ ದುಃಖ ತಂದಿದೆ. ಘಟನೆ ನಡೆದ ತಕ್ಷಣ ಗುಜರಾತ್ ಮುಖ್ಯಮಂತ್ರಿಗೆ ಕರೆ ಮಾಡಿದ್ದೆ. ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಗೆ…