Author: kannadanewsnow05

ಬೀದರ್ : ವಕ್ಫ್ ವಿವಾದದ ಕುರಿತಂತೆ ಈಗಾಗಲೇ ವಿಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಮಾಡುತ್ತಿದ್ದು, ಇದುವರೆಗೂ ರೈತರ ಜಮೀನುಗಳು, ಶಾಲೆ, ಸರ್ಕಾರಿ ಕಚೇರಿಗಳು ಹಾಗೂ ಹಲವು ದೇವಸ್ಥಾನಗಳ ಮೇಲೆ ವಕ್ಫ್ ನ ಕರಿನೆರಳು ಬಿದ್ದಿತ್ತು. ಇದೀಗ ಬೀದರ್ ನಲ್ಲಿರುವ ವಿಶ್ವಗುರು ಬಸವಣ್ಣನವರು ಪಠಿಸುತ್ತಿದ್ದ ವಚನ ಮಹಾಮಠ ಬಸವಗಿರಿಯ ಜಾಗವು ಕೂಡ ವಕ್ಫ್ ಎಂದು ನಮೂದಾಗಿದೆ. ಹೌದು ಬೀದರ್‌ನ ಪಾಪನಾಶ ದೇವಸ್ಥಾನದ ಬಳಿಯಿರುವ ಬಸವಗಿರಿಯ ಸರ್ವೇ ನಂ.37ರ 5 ಎಕರೆ 19 ಗುಂಟೆ ಜಾಗ 2019ರಲ್ಲಿ ವಕ್ಫ್ಗೆ ಸೇರಿಸಿದ್ದು ಬಸವ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. 2008 ರಲ್ಲಿ ಈ ಬಸವಗಿರಿ ಉದ್ಘಾಟನೆಯಾಗಿದ್ದು, ಬಹುತೇಕ 16 ವರ್ಷದಿಂದ ಪ್ರತಿ ದಿನ ಇಲ್ಲಿಗೆ ನೂರಾರು ಭಕ್ತರು ಭೇಟಿ ನೀಡಿ ಬಸವಣ್ಣನವರ ಭಾವಚಿತ್ರಕ್ಕೆ ನಮಿಸಿ ವಚನಗಳ ಪಠಣೆ ಮಾಡುತ್ತಾರೆ. ಬೀದರ್‌ನಲ್ಲಿ ಇದುವರೆಗು ರೈತರ ಜಮೀನು, ಐತಿಹಾಸಿಕ ಸ್ಮಾರಕಗಳು, ಸರ್ಕಾರಿ ಜಾಗಗಳು ಸೇರಿದಂತೆ ಒಟ್ಟು 13 ಸಾವಿರಕ್ಕೂ ಅಧಿಕ ಆಸ್ತಿ ವಕ್ಫ್ ಪಾಲಾಗಿದೆ. ಇದೀಗ ಮತ್ತೆ ಬಗೆದಷ್ಟು…

Read More

ಬೆಳಗಾವಿ : ಕೆ ಎಲ್ ಇ ಸಂಸ್ಥೆಯ ಕಾನೂನು ವಿದ್ಯಾರ್ಥಿ ಒಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಹಾಸ್ಟೆಲ್ ನಲ್ಲಿ KLE ಸಂಸ್ಥೆಯ ಕಾನೂನು ವಿದ್ಯಾರ್ಥಿ ನೇಣಿಗೆ ಶರಣು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶಶಾಂಕ್ ಬಟಕುರ್ಕಿ (19) ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಇದುವರೆಗೆ ಕಾರಣ ತಿಳಿದು ಬಂದಿಲ್ಲ. ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ : ಯುವಕ ಚುಡಾಯಿಸಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಅಪ್ರಾಪ್ತೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ. ಕಳೆದ ಹಲವಾರು ದಿನಗಳಿಂದ ಅಪ್ರಾಪ್ತೆಯ ಹಿಂದೆ ಯುವಕ ಬಿದ್ದಿದ್ದ. ಪ್ರೀತಿ ಪ್ರೇಮದ ಹೆಸರಿನಲ್ಲಿ ಬಾಲಕಿಗೆ ಸಂಗಮೇಶ್ ಜಂಜವಾರ್ ಕಿರುಕುಳ ನೀಡಿದ್ದಾನೆ. ಕಾಲೇಜಿಗೆ ತೆರಳುತ್ತಿದ್ದ ವೇಳೆ ಹಿಂಬಾಲಿಸಿ ಸಂಗಮೇಶ್ ಬಾಲಕಿಗೆ ಚುಡಾಯಿಸುತ್ತಿದ್ದ. ಅಲ್ಲದೇ ಅಪ್ರಾಪ್ತೆಯ ಜೊತೆಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ನನ್ನ ಪ್ರೀತಿಸು ಎಂದು ಬಾಲಕಿಗೆ ಸಂಗಮೇಶ್ ಬಲವಂತ ಮಾಡುತ್ತಿದ್ದ. ಸಂಗಮೇಶನನ್ನು ಪ್ರಶ್ನಿಸಿದ್ದ ಬಾಲಕಿಯ ಸಹೋದರಿಯ ಮೇಲೆ ಕೂಡ ಆತ ಹಲ್ಲೆ ಮಾಡಿದ್ದ. ಅಲ್ಲದೆ ಸಂಗಮೇಶ ವಿರುದ್ಧ ಜೀವ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದ ಆರೋಪ ಕೇಳಿ ಬಂದಿದೆ. ಈ ಕುರಿತಂತೆ ನವೆಂಬರ್ 27ರಂದು ಮುದ್ದೇಬಿಹಾಳ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ದೂರು ನೀಡಿದ್ದಾಳೆ. ಸಂಗಮೇಶ್, ಮೌನೇಶ್ ಮಾದರ ಹಾಗೂ ಚಿದಾನಂದ ಕಟ್ಟಿಮನಿ ವಿರುದ್ಧ ದೂರು ಸಲ್ಲಿಸಿದ್ದಾಳೆ. ಮೂವರ…

Read More

ಹಾವೇರಿ : ಹಾವೇರಿಯಲ್ಲಿ ಗೌರವದ ದುರಂತ ಒಂದು ನಡೆದಿದ್ದು ನೀರಿನ ಟ್ರ್ಯಾಕ್ಟರ್ ಒಂದು ನಿಯಂತ್ರಣ ತಪ್ಪಿ ಪಾದಚಾರಿಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಷಣ್ಮುಖ ಬಣಗಾರ್ (38) ಎನ್ನುವ ಪಾದಚಾರಿಯೊಬ್ಬರು ಸಾವನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರದಲ್ಲಿ ಈ ಒಂದು ಘಟನೆ ನಡೆದಿದೆ. ಚಾಲಕನ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಾದಾಚಾರಿ ಮೇಲೆ ಹರಿದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ರಾಣಿಬೆನ್ನೂರು ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಟ್ರಾಕ್ಟರ್ ಮಾಲೀಕ ಮಾಲತೇಶ್ ಹಾಗೂ ಚಾಲಕ ಮಾರುತಿ ವಿರುದ್ಧ FIR ದಾಖಲಾಗಿದೆ.

Read More

ಯಾವುದೇ ಧರ್ಮ ಮತ್ತು ಸಮಾಜವು ಕೀಳರಿಮೆ ಹಾಗೂ ಪ್ರತ್ಯೇಕತೆಯನ್ನು ಅನುಭವಿಸುವ ವಾತಾವರಣವಿರಬಾರದು. ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ ಎಂದು ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಹೇಳಿದ್ದಾರೆ. ರೋಮಿನ ವ್ಯಾಟಿಕನ್ ನಗರದಲ್ಲಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಮೊದಲ ಅಂತರರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದ ಶತಮಾನೋತ್ಸವ ಸ್ಮರಣಾರ್ಥ “ಮಾನವೀಯತೆಗಾಗಿ ಧರ್ಮಗಳ ಒಗ್ಗಟ್ಟು” ಎಂಬ ಶೀರ್ಷಿಕೆಯೊಂದಿಗೆ ಆಯೋಜಿಸಲಾದ ಮೂರು ದಿನಗಳ ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ, ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದ ಅವರು ನಾವು ವೈವಿಧ್ಯತೆಗಳನ್ನು ಹೊಂದಿದ್ದರೂ, ಪ್ರತಿಯೊಬ್ಬರೊಳಗಿರುವ ದೈವಿಕ ಚೇತನವು ಒಂದೇ. ಸಮಾಜವನ್ನು ಮುನ್ನಡೆಸುವ ನನ್ನ ಸಹೋದರ ಸಹೋದರಿಯರೇ, ನಾವಿಂದು ದ್ವೇಷವನ್ನು ತಿರಸ್ಕರಿಸುವ ಪ್ರತಿಜ್ಞೆ ಮಾಡೋಣ ಎಂದರು. ನಾನು ಇಲ್ಲಿ ಯಾವುದೇ ಒಂದು ಧರ್ಮದ ಪ್ರತಿನಿಧಿಯಾಗಿ ಬಂದಿಲ್ಲ‌. ಬದಲಾಗಿ ಮಾನವೀಯತೆಯ ವಿನಮ್ರ ಧ್ವನಿಯಾಗಿ, ಶಾಂತಿ, ಪ್ರೀತಿ ಮತ್ತು ಸೌಹಾರ್ದತೆಯಿಂದ ತುಂಬಿದ ಒಂದು ಸುಂದರ ಪ್ರಪಂಚದ ಕನಸು ಕಾಣುವ ಶತಕೋಟಿ ಜನರ ಸಾಮೂಹಿಕ ಆಶಯ, ಹೋರಾಟ ಮತ್ತು ಆಕಾಂಕ್ಷೆಗಳನ್ನು ಹೊತ್ತುಕೊಂಡು…

Read More

ಮೈಸೂರು : ಚಲಿಸುತ್ತಿದ್ದಂತಹ ಕೆಎಸ್ಆರ್ಟಿಸಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್‍ಡಿ ಕೋಟೆ ತಾಲೂಕಿನ ನಡಾಡಿ ಗ್ರಾಮದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಬಸ್ನಲ್ಲಿ ಸಂಚರಿಸುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಎಚ್ ಡಿ ಕೋಟೆ ಘಟಕಕ್ಕೆ ಸೇರಿದ KSRTC ಸಾರಿಗೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದೇವಲಾಪುರ ಜಕ್ಕಹಳ್ಳಿ ಗ್ರಾಮದ ಮಾರ್ಗ ಮದ್ಯ ಈ ಘಟನೆ ನಡೆದಿದೆ. ನಡಾಡಿ ಗ್ರಾಮದಿಂದ ಎಚ್ ಡಿ ಕೋಟೆಗೆ ಈ ಒಂದು ಬಸ್ ತೆರಳುತ್ತಿತ್ತು. ಎಚ್ ಡಿ ಕೋಟೆ ಘಟಕಕ್ಕೆ ಸೇರಿದ ಸಾರಿಗೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.ಬಸ್ ನಲ್ಲಿದ್ದ ಸುಮಾರು 50 ಕ್ಕೂ ಹೆಚ್ಚು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More

ಬೆಳಗಾವಿ : ಆ ಯುವತಿಗೆ ಮದುವೆಯಾಗಿತ್ತು. ಆದರೂ ಕೂಡ ಬೇರೆ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವೇಳೆ ಅಕ್ರಮ ಸಂಬಂಧ ಹೊಂದಿದ್ದ ಯುವಕ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಈಕೆಯ ಫೋಟೋ ಹಾಕಿದ್ದಾನೆ. ಅಕ್ರಮ ಸಂಬಂಧ ಬಯಲಾದ ಹಿನ್ನೆಲೆ, ಮನನೊಂದ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಒಂದು ಘಟನೆಯು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಆರತಿ ಕಾಂಬಳೆ (26) ಎಂದು ತಿಳಿದುಬಂದಿದೆ. ಈಕೆ ಮದುವೆಯಾಗಿ ರಾಯಭಾಗ್ ತಾಲೂಕಿನ ಮೊರಬ ಗ್ರಾಮದಲ್ಲಿ ಗಂಡನ ಮನೆಯಲ್ಲಿ ವಾಸಿಸುತ್ತಿದ್ದಳು. ಆರತಿಗೆ ಮದುವೆ ಆಗಿದ್ದರೂ ಇನ್ನೊಬ್ಬನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು.ಆರತಿ ಜೊತೆ ಸ್ನೇಹ ಬೆಳೆಸಿದ್ದ ಸಾಗರ ಕಾಂಬಳೆ ತನ್ನ ವಾಟ್ಸ್‌ಆಯಪ್ ಸ್ಟೇಟಸ್‌ನಲ್ಲಿ ಆರತಿಯ ಫೋಟೋ ಹಾಕಿದ್ದಾನೆ. ಸಾಗರ ವಾಟ್ಸಪ್ ಸ್ಟೇಟಸ್‌ನಲ್ಲಿ ಆರತಿ ಫೋಟೋ ಹಾಕಿದ್ದು ಫುಲ್ ವೈರಲ್ ಆಗಿತ್ತು. ಅಕ್ರಮ ಸಂಬಂಧ ಬಯಲಾದ ಹಿನ್ನೆಲೆ ಮನನೊಂದು ಇಂದು ಆರತಿ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ಸಂಬಂಧಿಕರ…

Read More

ಮಹಾರಾಷ್ಟ : ಕಳೆದ ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ NDA ಮೈತ್ರಿ ಕೂಟದ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. ಆದರೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಈ ಒಂದು ಗ್ರಾಮದಲ್ಲಿ ಗ್ರಾಮಸ್ಥರು ಇವಿಎಂ ಮಷೀನ್‌ಗಳ ಮೇಲೆ ಅಪನಂಬಿಕೆ ಹೊಂದಿದ್ದು ಇಂದು ಅವರು ಬ್ಯಾಲೆಟ್ ಪೇಪರ್ ಮತದಾನ ಮಾಡುವ ಮೂಲಕ ಅಣುಕು ಮತದಾನ ನಡೆಸಿದ್ದಾರೆ. ಹೌದು ಮಹಾರಾಷ್ಟ್ರದ ಗ್ರಾಮ ಒಂದರಲ್ಲಿ ಬ್ಯಾಲೆಟ್ ಪೇಪರ್ ಮತದಾನ ನಡೆದಿದ್ದು, ಸೊಲ್ಲಾಪುರ ಜಿಲ್ಲೆಯ ಮರ್ಕಡ್ವಾಡಿಯಲ್ಲಿ ಅಧಿಕೃತ ಮತದಾನ ಪ್ರಕ್ರಿಯೆ ನಡೆದಿದೆ. ಇವಿಎಂ ಮಷಿನ್ ಮೇಲೆ ನಂಬಿಕೆ ಇಲ್ಲದೆ ಬ್ಯಾಲೆಟ್ ಪೇಪರ್ ಮತದಾನ ನಡೆಸಲಾಗಿದೆ. ಮರ್ಕಡ್ವಾಡಿ ಗ್ರಾಮದವರೇ ಈ ಒಂದು ಅಣುಕು ಮತದಾನ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮರ್ಕಡ್ವಾಡಿ ಗ್ರಾಮದಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಮತಗಳಿಸಿತ್ತು. ಹಾಗಾಗಿ ಇವಿಎಂ ಮೇಲೆ ಮರ್ಕಡ್ವಾಡಿ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದರು. ಹೀಗಾಗಿ ಬ್ಯಾಲೆಟ್ ಪೇಪರ್ ಮೂಲಕ ಇದೀಗ ಗ್ರಾಮದಲ್ಲಿ…

Read More

ಬೆಂಗಳೂರು : ‘KEA’ ಸೀಟ್ ಬ್ಲಾಕಿಂಗ್ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯ ಪೊಲೀಸರು ಕಿಂಗ್ ಪಿನ್ ಸಮೇತ 10 ಆರೋಪಿಗಳನ್ನು ಬಂಧಿಸಿದ್ದರೆ. ಬಂಧಿತ ಆರೋಪಿಗಳನ್ನು ಹರ್ಷ, ರವಿಶಂಕರ್, ಪುನೀತ್, ಶಶಿಕುಮಾರ್, ಪುರುಷೋತ್ತಮ್, ಪ್ರಕಾಶ್ ಹಾಗೂ ಅವಿನಾಶ್ ಸೇರಿದಂತೆ 10 ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಹರ್ಷ ಎನ್ನುವ ಆರೋಪಿ ಕೆಇಎ ಸೀಟ್ ಬ್ಲಾಕಿಂಗ್ ಹಗರಣದ ಕಿಂಗ್ ಪಿನ್ ಎಂದು ತಿಳಿದುಬಂದಿದೆ. ಕೌನ್ಸೆಲಿಂಗ್ ಗೆ ಆಯ್ಕೆಯಾಗಿ ಕಾಲೇಜು ಸೆಲೆಕ್ಟ್ ಮಾಡಿಕೊಳ್ಳದವರ ಸೀಟ್ ಗಳು, ಖಾಸಗಿ ಕಾಲೇಜಿನಲ್ಲಿ ಸೀಟ್ ಪಡೆದು ಹೋಗದ ವಿದ್ಯಾರ್ಥಿಗಳ ವಿದ್ಯಾರ್ಥಿಗಳ ಸೀಟ್ ಗಳನ್ನು ಬಂಧಿತ ಆರೋಪಿಗಳು ಬ್ಲಾಕ್ ಮಾಡುತ್ತಿದ್ದರು ಎನ್ನಲಾಗಿದೆ. ಲಕ್ಷಾಂತರ ರೂಪಾಯಿಗೆ ಮ್ಯಾನೇಜ್ಮೆಂಟ್ ಕೋಟಾದ ಅಡಿ ಬೇರೆಯವರಿಗೆ ಡೀಲ್ ಮಾಡಿಕೊಳ್ಳುತ್ತಿದ್ದರು. ಮಧ್ಯವರ್ತಿಗಳ ಸಹಾಯದಿಂದ ಆರೋಪಿಗಳು ಡಿಲೀಟ್ ಮಾಡುತ್ತಿದ್ದರು ಎನ್ನಲಾಗಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸೀಟ್ ಡೀಲಿಂಗ್ ನಲ್ಲಿ ಪ್ರತಿಷ್ಠಿತ ಕಾಲೇಜುಗಳ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಗರಣದ…

Read More

ಮಂಗಳೂರು : ತಮಿಳುನಾಡಿನಲ್ಲಿ ಉಂಟಾದ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯಕ್ಕೂ ತಟ್ಟಿದ್ದು, ಇದೀಗ ಮಂಗಳೂರಿನ ಬಂದರಿನಲ್ಲಿ ಇದಂತಹ ಸುಮಾರು ಹತ್ತಕ್ಕೂ ಹೆಚ್ಚು ಮೀನುಗಾರಿಕಾ ಬೋಟ್ ಗಳು ಸಮುದ್ರದಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಹೌದು ಮಂಗಳೂರಿನ ಬಂದರಿನಲ್ಲಿ ಲಂಗರು ಹಾಕಿದ್ದ, ಮೀನುಗಳಿಗಾಗಿ ಬಲೆ ಬೀಸುವ ದೋಣಿಗಳು ಕೊಚ್ಚಿ ಹೋಗಿದ್ದು, ಮಂಗಳೂರಿನಲ್ಲಿ ಮೀನುಗಾರಿಕೆ ಹಲವು ಬೋಟ್ ಗಳು ಸಹ ಕೊಚ್ಚಿ ಹೋಗಿವೆ. ಅಲ್ಲದೆ ಇನ್ನೊಂದು ಕಡೆ ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಸಮೀಪ ಆದ್ಯಪಾಡಿಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ಭೂ ಕುಸಿತ ಹಿನ್ನೆಲೆಯಲ್ಲಿ ಬಜಪೆ ಮತ್ತು ಆದ್ಯಪಾಡಿಯ ರಸ್ತೆಯ ಸಂಪರ್ಕ ಸಂಪೂರ್ಣವಾಗಿ ಕಡಿತವಾಗಿದ್ದು, ಮಾನಾ ಶಾಲಿಯಾನ್ ಎಂಬುವರಿಗೆ ಸೇರಿದ ಮನೆಗೆ ಭೂಕುಸಿತದ ಹಾನಿ ಉಂಟಾಗಿದೆ.

Read More