Author: kannadanewsnow05

ತುಮಕೂರು : ತುಮಕೂರಿನಲ್ಲಿ ಬೆಳ್ಳಂಬೆಳ್ಳಿಗ್ಗೆ ಭೇಕರವಾದಂತಹ ಅಪಘಾತ ಸಂಭವಿಸಿದ್ದು, ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಒಂದು ರಸ್ತೆ ಪಕ್ಕದಲ್ಲಿರುವ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮಹಿಳೆಯರು  ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೌದು ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಬೆಳಗ್ಗಿನ ಜಾವ 4.30ರ ವೇಳೆಗೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನೆಲ್ಲ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಒಂದು ಖಾಸಗಿ ಬಸ್ ನಲ್ಲಿ 29 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದೆ. ಗೋವಾದಿಂದ ಬೆಂಗಳೂರಿಗೆ ಖಾಸಗಿ ಬಸ್ ತೆರಳುತ್ತಿತ್ತು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು,…

Read More

ಬೆಂಗಳೂರು : ಬೆಂಗಳೂರಿನಲ್ಲಿ ಒಂದು ವಿಚಿತ್ರವಾದಂತ ಘಟನೆ ನಡೆದಿದ್ದು, ಬೆಕ್ಕಿನ ಮರಿ ಒಂದು ಕೇವಲ ಮೂತ್ರ ಮಾಡಿದ್ದಕ್ಕೆ ವ್ಯಕ್ತಿ ಒಬ್ಬ ಕಾಲಿನಿಂದ ಒದ್ದು ಗಾಯಗೊಳಿಸಿದ್ದಾನೆ. ಇದೀಗ ಬೆಕ್ಕಿನ ಮರಿಗೆ ಒದ್ದವನ ವಿರುದ್ಧ ವ್ಯಕ್ತಿ ಒಬ್ಬರು ಮೈಕೋ ಲೇಔಟ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಹೌದು ಈ ಒಂದು ಘಟನೆ ನಡೆದಿದ್ದು, ಬೆಂಗಳೂರಿನ ಬಿಟಿಎಂ ಲೆಔಟ್ ನಲ್ಲಿ ನಡೆದಿದ್ದು, ಮೊಹಮ್ಮದ್ ಅಫ್ತಾಬ್ ನೀಡಿರುವ ದೂರಿನ ಮೇರೆಗೆ ಮನೀಶ್ ರತ್ನಾಕ‌ರ್ ಎನ್ನುವವರ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ, ಭಾರತೀಯ ನ್ಯಾಯ ಸಂಹಿತೆ ಕಾಯ್ದೆ ಸೆಕ್ಷನ್‌ 325ರಡಿ ಎಫ್‌ಐಆ‌ರ್ ದಾಖಲಾಗಿದೆ. ದೂರುದಾರ ಮೊಹಮ್ಮದ್ ಅಫ್ತಾಬ್ ಹಾಗೂ ಆರೋಪಿ ಮನೀಶ್ ರತ್ನಾಕ‌ರ್ ಬಿಟಿಎಂ ಲೇಔಟ್ ಎರಡನೇ ಹಂತದಲ್ಲಿ ಒಂದೇ ಮನೆಯಲ್ಲಿ ವಾಸವಿದ್ದರು. ನವೆಂಬ‌ರ್ 26ರಂದು ಮನೀಶ್ ರತ್ನಾಕ‌ರ್ ಮನೆಯಲ್ಲಿದ್ದಾಗ ಬೆಕ್ಕು ಮನೆಯಲ್ಲಿ ಮೂತ್ರ ವಿಸರ್ಜನೆ ಮಾಡಿದೆ. ಇದರಿಂದ ಸಿಟ್ಟಿಗೆದ್ದ ಮನೀಶ್‌, ಬೆಕ್ಕಿಗೆ ಕಾಲಿನಿಂದ ಒದ್ದು ಗಾಯಗೊಳಿಸಿದ್ದಾರೆ. ಬಳಿಕ ಮೊಹಮ್ಮದ್ ಅಫ್ತಾಬ್‌ಗೆ ಕರೆ ಮಾಡಿ, ಬೆಕ್ಕು ಮನೆಯಲ್ಲಿ…

Read More

ಮೈಸೂರು : ತಮಿಳುನಾಡಿನ ಕರಾವಳಿ ತೀರದಲ್ಲಿ ಫೆಂಗಲ್ ಚಂಡಮಾರುತ ಉಂಟಾಗಿದೆ. ಈ ಪರಿಣಾಮ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಇದೀಗ ಇಂದು ಮೈಸೂರಿನ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಹೌದು ಮೈಸೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆಯಾಗಿದ್ದು, ಫೆಂಗಲ್ ಚಂಡಮಾರುತದಿಂದ ಜಡಿ ಮಳೆ ಹಾಗೂ ವಿಪರೀತ ಚಳಿ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಸೂಚನೆ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಈಗಾಗಲೇ ನಿನ್ನೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

Read More

ನಾಗ್ಪುರ : ಜನನ ಪ್ರಮಾಣ 2.1 ಕ್ಕಿಂತ ಕಡಿಮೆಯಾದರೆ ಸಮಾಜದ ಅಳಿವು ಸಂಭವಿಸಬಹುದು. ಹಾಗಾಗಿ ಪ್ರತಿಯೊಬ್ಬ ದಂಪತಿಗಳು ಮೂರು ಮಕ್ಕಳನ್ನು ಹೆರಬೇಕು ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ್ದು ಇದೀಗ ಭಾರಿ ವೈರಲ್ ಆಗಿದೆ. ನಾಗ್ಪುರದಲ್ಲಿ ನಡೆದ ‘ಕಥಲೆ ಕುಲ್ ಸಮ್ಮೇಳನ’ದಲ್ಲಿ ಮಾತನಾಡಿದ ಅವರು, ಸಮಾಜದ ಜನಸಂಖ್ಯೆಯು 2.1 ಕ್ಕಿಂತ ಕಡಿಮೆಯಾದರೆ, ಆ ಸಮಾಜವು ಭೂಮಿಯಿಂದ ಕಣ್ಮರೆಯಾಗುತ್ತದೆ ಎಂದು ಆಧುನಿಕ ಜನಸಂಖ್ಯಾ ವಿಜ್ಞಾನವೇ ಹೇಳುತ್ತದೆ. ಈಗಾಗಲೇ ಈ ರೀತಿಯಲ್ಲಿ ಅನೇಕ ಭಾಷೆಗಳು ಮತ್ತು ಸಮಾಜಗಳು ಅಸ್ತಿತ್ವವನ್ನು ಕಳೆದುಕೊಂಡಿವೆ. ಹಾಗಾಗಿ ಜನಸಂಖ್ಯೆಯು 2.1 ಕ್ಕಿಂತ ಕಡಿಮೆ ಇರಬಾರದು ಎಂದು ಹೇಳಿದ್ದಾರೆ. ಅನೇಕ ಬಿಜೆಪಿ ನಾಯಕರು ಜನಸಂಖ್ಯಾ ನಿಯಂತ್ರಣದ ಬಗ್ಗೆ ಧ್ವನಿ ಎತ್ತಿರುವ ಸಮಯದಲ್ಲೇ ಮೋಹನ್ ಭಾಗವತ್ ಅವರು ಈ ಹೇಳಿಕೆ ನೀಡಿದ್ದು, ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಕೆಲವು ತಿಂಗಳ ಹಿಂದೆ ರಾಜಸ್ಥಾನದ ಬಿಜೆಪಿ ಶಾಸಕ ಬಾಲ್ಮುಕುಂಡಾಚಾರ್ಯ ಜನಸಂಖ್ಯಾ ನಿಯಂತ್ರಣ ಮಸೂದೆ ತರುವ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಇದೀಗ ಮೋಹನ್ ಭಾಗವತ್​…

Read More

ಬೆಂಗಳೂರು : ತಮಿಳುನಾಡಿನ ಕರಾವಳಿ ತೀರದಲ್ಲಿ ಫೆಂಗಲ್ ಚಂಡಮಾರುತ ಉಂಟಾಗಿದೆ. ಈ ಪರಿಣಾಮ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ಸಂಬಂಧ ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದು, ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದಂತ ಹಾಸನ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಹಾಗೂ ಕರಾವಳಿ ಜಿಲ್ಲೆಗಳಾದಂತ ಉಡುಪಿ, ದಕ್ಷಿಣ ಕನ್ನಡದಲ್ಲಿಯೂ ಭಾರೀ ಮಳೆಯಾಗಲಿದೆ. ಸಾರ್ವಜನಿಕರು ಎಚ್ಚರಿಕೆಯವಹಿಸುವಂತೆ ತಿಳಿಸಿ, ಯೆಲ್ಲೋ ಅಲರ್ಟ್ ನೀಡಿದ್ದಾರೆ. ಇಂದು ಕೊಡಗು, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ ಮತ್ತು ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ,…

Read More

ಹಾವೇರಿ : ಹಾವೇರಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮನೆ ಮುಂದೆ ಆಟವಾಡುತ್ತಿದ್ದ 12 ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಣಕ್ಕೆ ಯತ್ನಿಸಿದ್ದು, ಅದೃಷ್ಟವಶಾತ್ ಬಾಲಕ ತನ್ನ ಸಮಯ ಪ್ರಜ್ಞೆಯಿಂದ ಕಿಡ್ನಾಪರಿಂದ ಬಚಾವ್ ಆಗಿರುವ ಘಟನೆ ಹಾವೇರಿ ನಗರದ ಪುರದ ಓಣಿಯಲ್ಲಿ ನಡೆದಿದೆ. ಅಪಹರಣಕ್ಕೊಳಗಾಗಿದ್ದ ಬಾಲಕನನ್ನು ಮೊಹ್ಮದ್ ಅಯಾನ್(12) ಎಂದು ತಿಳಿದುಬಂದಿದೆ. ಹಾವೇರಿ ನಗರದ ಪುರದ ಓಣಿ ನಿವಾಸಿ ಮೊಹಮ್ಮದ್ ಅಯಾನ್ ನಿನ್ನೆ ಸಂಜೆ ಸುಮಾರು 7 ಗಂಟೆಗೆ ಎಂದಿನಂತೆ ಹೊರಗಡೆ ಬಂದಿದ್ದ. ಈ ವೇಳೆ ಮಾರುತಿ ಇಕೋ ವ್ಯಾನ್ ನಲ್ಲಿ ಮಾಸ್ಕ್ ಧರಿಸಿದ್ದ ಅಪಹರಿಸಲು ಬಂದ ನಾಲ್ವರು ಆಗುಂತಕರು. ಬಾಲಕನ್ನು ಹಿಡಿದು ವ್ಯಾನ್‌ಗೆ ತಳ್ಳಿದ್ದಾರೆ. ಓಣಿಯಿಂದ ಕಿಡ್ನಾಪ್ ಮಾಡಿದ ಬಳಿಕ ಅಲ್ಲಿಂದ ಅಕ್ಕಿಪೇಟೆಗೆ ಕರೆತಂದಿರುವ ದುರುಳರು. ಈ ವೇಳೆ ಅಲ್ಲಿಂದ ಬಿಡಿಸಿಕೊಳ್ಳಲು ಯತ್ನಿಸಿದ ಬಾಲಕನ ಮುಖದ ಭಾಗ, ಗಲ್ಲ ಹಾಗೂ ಬೆನ್ನಿಗೆ ಹಲ್ಲೆ ಮಾಡಿದ್ದಾರೆ. ಅಷ್ಟರಲ್ಲಿ ಅಪಹರಣಕಾರರಿಗೆ ತುರ್ತು ವಿಸರ್ಜನೆ ಹಿನ್ನೆಲೆ ಮಧ್ಯೆ ವ್ಯಾನ್ ನಿಲ್ಲಿಸಿ ಕೆಳಗಿಳಿದಿದ್ದಾರೆ. ಗಾಡಿ ನಿಲ್ಲಿಸಿ ಡೂರ್…

Read More

ಬೆಂಗಳೂರು : ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ದೃಷ್ಟಿಯಿಂದ ಇದನ್ನು ಮಾಡುತ್ತಿದ್ದೀರಾ ಎಂದು ಕೇಳಿದಾಗ, “ನಾವು ಯಾವುದೋ ಒಂದು ಉದ್ದೇಶ ಇಟ್ಟುಕೊಂಡು ವೇದಿಕೆ ಸಿದ್ಧ ಮಾಡಬೇಕಲ್ಲವೇ. ಶೀಘ್ರದಲ್ಲಿ ಚುನಾವಣೆ ನಡೆಯಲಿರುವುದಂತೂ ನಿಜ. ಅದನ್ನು ನಿಲ್ಲಿಸಲು ಆಗುವುದಿಲ್ಲ.ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಫೆಬ್ರವರಿ ವೇಳೆಗೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಈ ಸಮಾವೇಶ ಹಾಸನಕ್ಕೆ ಸೀಮಿತವೇ ಅಥವಾ ರಾಜ್ಯಾದ್ಯಂತ ಮಾಡುತ್ತೀರಾ ಎಂದು ಕೇಳಿದಾಗ, “ನಾವು ರಾಜ್ಯಾದ್ಯಂತ ತಲುಪಬೇಕು. ಹಾಸನ ಕಾರ್ಯಕ್ರಮ ನಂತರ ಬೆಳಗಾವಿಯಲ್ಲಿ ದೊಡ್ಡ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ನಾಳೆ ಸಭೆ ಮಾಡಿ ನಂತರ ಹೆಚ್ಚಿನ ಮಾಹಿತಿ ನೀಡುತ್ತೇವೆ” ಎಂದು ತಿಳಿಸಿದರು. ಯಾವುದೇ ಸ್ಥಾನ ಖಾಲಿ ಇಲ್ಲ: ಫೆಬ್ರವರಿಯಲ್ಲಿ ಸಂಪುಟ ವಿಸ್ತರಣೆ ಆಗುವುದೇ ಎಂದು ಕೇಳಿದಾಗ, “ನಾನು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಹೊರತು, ಮುಖ್ಯಮಂತ್ರಿಯಲ್ಲ. ಸಧ್ಯಕ್ಕೆ ಈ ಬಗ್ಗೆ ಚರ್ಚೆ ಇಲ್ಲ. ಅದರ ಅವಶ್ಯಕತೆಯೂ ಇಲ್ಲ. ಸಧ್ಯದಲ್ಲೇ ಅಧಿವೇಶನವಿದೆ. ಒಂದು…

Read More

ಕೋಲಾರ : ಜಿಲ್ಲೆಯಲ್ಲಿ ಇಂದು ಫೆಂಗಲ್ ಚಂಡಮಾರುತದ ಕಾರಣ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಆದೇಶಿಸಿದ್ದು ಇಂದು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ. ಹಾಗಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಾಳಿನ ರಜೆಯನ್ನು ಮತ್ತೊಂದು ರಜಾ ದಿನಗಳಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶದಲ್ಲಿ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲೂ ರಜೆ ಘೋಷಣೆ ಅದೇ ರೀತಿಯಾಗಿ ಫೆಂಗನ್ ಚಂಡಮಾರುತದ ಕಾರಣದಿಂದ ತುಂತುರು ಮಳೆಯ ಜೊತೆಗೆ ಚಳಿಗಾಳಿ ಬೀಸುವ ಕಾರಣದಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದು, ಅದರಲ್ಲಿ ಇಂದು ಫೆಂಗಲ್ ಚಂಡಮಾರುತದ…

Read More

ಬೆಳಗಾವಿ : ವಕ್ಫ್ ವಿಚಾರಕ್ಕೆ ಬಿಜೆಪಿಯ ಒಂದು ತಂಡ ಇದೀಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಇದರ ಮಧ್ಯ ಶಾಸಕ ಯತ್ನಾಳ್ ಹಾಗೂ ಬಿವೈ ವಿಜಯೇಂದ್ರ ಎರಡೂ ಬಣಗಳ ಬಡಿದಾಟ ತೀವ್ರ ತಾರಕಕ್ಕೆ ಏರಿದೆ. ಇದೀಗ ಈ ವಿಚಾರವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ವಕ್ಫ್ ವಿರುದ್ಧ ಹೋರಾಟ ತೀವ್ರಗೊಳಿಸಬೇಕಾದರೆ ಮೊದಲು ಹಿಂದುಗಳಾಗಬೇಕು. ಒಕ್ಕಲಿಗ, ಲಿಂಗಾಯತ ಅಂತ ಹೋದ್ರೆ 30% ಇರೋ ಮುಸ್ಲಿಂರು ನಿಮ್ಮನ್ನು ಹೊಡೆದು ಹಾಕ್ತಾರೆ ಎಂದು ತಿಳಿಸಿದರು. ಒಂದುವರೆ ವರ್ಷದಿಂದ ಸರ್ಕಾರ ತಾಲಿಮಾನ ರೀತಿ ನಡೆದುಕೊಳ್ಳುತ್ತಿದೆ. ಹಿಂದೂಗಳ ಮಾರಣ ಹೋಮ ಜೊತೆಗೆ ಭೂಮಿಕ ಕಬಳಿಗೆ ಆಗುತ್ತಿದೆ. ಜಮೀರ್ ಅಹ್ಮದ್ ಖಾನ್ ನಾಲ್ಕುವರೆ ಅಡಿ ಇದ್ದಾನೆ.ಅಲ್ಲಾನ ಆಸ್ತಿ ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಹೇಳುತ್ತಾನೆ. ಜಮೀರ್ ನಿಮ್ಮ ಅಲ್ಲಾಗೂ ನಮ್ಮ ಭಾರತಕ್ಕೂ ಏನು ಸಂಬಂಧವಿದೆ? ಅರಬ್ನಳ್ಳಿ ಹುಟ್ಟಿರುವ ಅಲ್ಲಗೆ ಭಾರತದ ಜೊತೆಗೆ ಏನು ಸಂಬಂಧ? ಜಮೀರ್ ಅಹ್ಮದ್ ನಿಮ್ಮ ಧರ್ಮಕ್ಕೂ ಭಾರತಕ್ಕೂ ಏನು ಸಂಬಂಧ? ಎಂದು ಪ್ರಶ್ನಿಸಿದರು.…

Read More

ಉಡುಪಿ : ಡ್ಯಾಮ್ ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆಯ ಗುಮ್ಮಲ ಡ್ಯಾಂನಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆಯ ಗ್ರಾಮದಲ್ಲಿ ಈಜುಲು ಹೋದ ಇಬ್ಬರು ಬಾಲಕರು ನೀರು ಪಾಲಾಗಿ ಮುಳುಗಿ ಸಾವನ್ನಪ್ಪಿದ್ದರೆ. ಮೃತರನ್ನು ಶ್ರೀಶ (13) ಹಾಗೂ ಜಯಂತ್ (19) ಎಂದು ತಿಳಿದು ಬಂದಿದೆ.ರಜೆ ಹಿನ್ನೆಲೆಯಲ್ಲಿ ಗೆಳೆಯರ ಜೊತೆಗೆ ಇಬ್ಬರು ಈಜಲು ಹೋಗಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Read More