Author: kannadanewsnow05

ಬೆಂಗಳೂರು : ಇತ್ತೀಚಿಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಹನಿಟ್ರ್ಯಾಪ್ ಭಾರಿ ಸದ್ದು ಮಾಡಿತ್ತು. ವಿಧಾನ ಪರಿಷತ್ತಿನಲ್ಲೂ ಕೂಡ ಹನಿಟ್ರ್ಯಾಪ್ ವಿಷಯಕ್ಕೆ ಸಂಬಂಧಿಸಿದಂತೆ ಆರೋಪ ಪ್ರತ್ಯಾರೋಪಗಳು ನಡೆದವು. ಈ ವೇಳೆ ಕಾಂಗ್ರೆಸ್ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಇದೆಲ್ಲದಕ್ಕೆ ಬಿಜೆಪಿಯೇ ಕಾರಣ ಎಂದು ಆರೋಪಿಸಿದರು. ಇದಕ್ಕೆ ಬಿವೈ ವಿಜಯೇಂದ್ರ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ಟ್ವೀಟ್ ನಲ್ಲಿ “ಆಕಾಶಕ್ಕೆ ಉಗುಳಿದರೆ ನಾನು ದೊಡ್ಡ ಮನುಷ್ಯನಾಗುತ್ತೇನೆ” ಎಂಬ ಹುಂಬತನದಲ್ಲಿ ಅತಿರೇಕದ, ಅವಿವೇಕದ, ಕೊಳಕು ಹೇಳಿಕೆಗಳನ್ನು ನೀಡುವ ಬಿಕೆ ಹರಿಪ್ರಸಾದ್ ರವರೇ, ಸ್ವಾತಂತ್ರ್ಯಾ ನಂತರ ಭಾರತದಲ್ಲಿ ಕಾಂಗ್ರೆಸ್ ಆಳ್ವಿಕೆಯ ಕೊಳಕುಗಳನ್ನು ಸ್ವಚ್ಛ ಮಾಡಿದ್ದು, ಮಹಾತ್ಮ ಗಾಂಧಿಯವರು ಆರಂಭಿಸಿದ ಸ್ವಚ್ಛ ಭಾರತ ಹಾಗೂ ಸ್ವದೇಶಿ ಚಳುವಳಿಯ ಕನಸನ್ನು ಅಕ್ಷರಶಃ ನನಸು ಮಾಡಿದ್ದು ದೇಶದ ಹೆಮ್ಮೆಯ ಪುತ್ರ ಪ್ರಧಾನಿ ನರೇಂದ್ರ ಮೋದಿ ಜೀ ಯವರು ಎನ್ನುವುದನ್ನು ನೀವೂ ಸೇರಿದಂತೆ ನಿಮ್ಮ ಕಾಂಗ್ರೆಸ್ಸಿಗರು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಿಮ್ಮ @INCKarnataka ದ ತಟ್ಟೆಯಲ್ಲಿ ಹಗರಣಗಳು ಎಂಬ ಹೆಗ್ಗಣಗಳು ಸತ್ತು…

Read More

ಬೆಳಗಾವಿ : ಸದ್ಯ ರಾಜ್ಯದಲ್ಲಿ ಹನಿ ಟ್ರ್ಯಾಪ್ ವಿಷಯ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ಮೇಲೆ ಹನಿ ಟ್ರ್ಯಾಪ್ ಗೆ ಯತ್ನ ನಡೆದಿತ್ತು ಎನ್ನಲಾಗಿದೆ. ಇನ್ನು ಇದೇ ವಿಚಾರವಾಗಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಾತನಾಡಿ, ಇದೇನು ಹೊಸ ವಿಷಯವೇನಲ್ಲ ಹಿಂದೆಯೂ ಹಲವು ಬಾರಿ ಹನಿ ಟ್ರ್ಯಾಪ್ ನಡೆದಿದ್ದವು.ಸಮ್ಮಿಶ್ರ ಸರ್ಕಾರ ಪತನವಾಗಲು ಕೂಡ ಹನಿ ಟ್ರ್ಯಾಕ್ ವಿಷಯ ಕೇಳಿಬಂದಿತ್ತು ಎಂದು ತಿಳಿಸಿದರು. ಇದೊಂದು ಗಂಭೀರ ವಿಷಯ ಈ ಹಿಂದೆಯೂ ಇಂತಹ ಘಟನೆ ನಡೆದಿವೆ. ಸಾರ್ವಜನಿಕ ಜೀವನದಲ್ಲಿರುವವರಿಗೆ ಉದ್ದೇಶಪೂರ್ವಕವಾಗಿ ಸಿಲುಕಿಸುವ ಯತ್ನ ಆಗಿದೆ. ಹನಿ ಟ್ರ್ಯಾಪ್ ಅನ್ನೋದು ಹೊಸ ವಿಷಯವೇನೆಲ್ಲ. ಬೆಳಗಾವಿ ಜಿಲ್ಲೆ ಸೇರಿ ಬೇರೆ ಕಡೆಗಳಲ್ಲೂ ಇಂತಹ ಪ್ರಕರಣಗಳು ನಡೆದಿದೆ.ಸಮ್ಮಿಶ್ರ ಸರ್ಕಾರ ಪತ್ರವಾದಾಗಲು ಹನಿ ಟ್ರ್ಯಪ್ ವಿಷಯ ಕೇಳಿ ಬಂದಿತ್ತು ಎಂದು ದಿನೇಶ ಗುಂಡೂರಾವ್ ತಿಳಿಸಿದರು. ಬೇರೆ ಉದ್ಯಮದಲ್ಲಿ ಇರುವವರಿಗೆ ಟ್ರ್ಯಪ್ ಮಾಡುವಂಥದ್ದು ನೋಡಿದ್ದೇವೆ. ಹಾಗಾಗಿ ಇದು…

Read More

ಗದಗ : ಗದಗದಲ್ಲಿ ಭೀಕರ ಸಿಲಿಂಡರ್ ಸ್ಪೋಟವಾಗಿದ್ದು, ಘಟನೆಯಲ್ಲಿ 14 ವರ್ಷದ ಬಾಲಕ ಸೇರಿ 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ,ಗದಗ ತಾಲೂಕಿನ ಹೊಸೂರು ಗ್ರಾಮದಲ್ಲಿ ಒಂದು ದುರಂತ ಸಂಭವಿಸಿದೆ. ಸಿಲಿಂಡರ್ ಸ್ಫೋಟವಾಗಿ 6 ಜನರಿಗೆ ಗಂಭೀರವಾಗಿ ಗಾಯಗಳಾಗಿದೆ. ಬಸಪ್ಪ ಆದಿವರ್ ಎಂಬ ಅವರ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿದೆ. 14 ವರ್ಷದ ಬಾಲಕ ಸೇರಿ 6 ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಲಕ್ಷ್ಮವ್ವ ಕಣವಿ, ಬಸವಣ್ಣೆವ್ವ ಹೊರಪೇಟಿ, ಮಂಜುಳಾ, ನಿರ್ಮಲ ಹಾಗೂ ಶರಣಪ್ಪಗೆ ಗಾಯಗಳಾಗಿದ್ದು ತಕ್ಷಣ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಫೋನ್ ಮಾಡಿದರು ಕೂಡ ಆಂಬುಲೆನ್ಸ್ ಮತ್ತು ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪ ಕೇಳಿ ಬಂದಿದೆ. ಘಟನೆ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ : ಅಕ್ರಮವಾಗಿ ಭೂ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಕುರಿತು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಮುಡಾ ಕೇಸ್ ನಲ್ಲಿ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಆಗ್ರಹಿಸಿ ಪ್ರತಿಭಟನೆ ಮಾಡಿದರು. ನಾವೇನು ಎಚ್ ಡಿ ಕುಮಾರಸ್ವಾಮಿ ಅವರಿಗೆ ರಾಜೀನಾಮೆ ಕೇಳಿದ್ದೀವ? ಈ ಹಿಂದೆ ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಲು ನಾನು ಸಹ ಕಾರಣನಾಗಿದ್ದೇನೆ ಎಂದು ತಿಳಿಸಿದರು. ಮಂಡ್ಯದಲ್ಲಿ ಕೃಷಿ ಇಲಾಖೆ ಸಚಿವ ಎನ್. ಚೆಲುವರಾಯಸ್ವಾಮಿ ಮಾತನಾಡಿ, ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಜಮೀನು ತೆರವಾಗಿದೆ. ನಮ್ಮ ಹಿಂದೆ ಎಚ್ ಡಿ ಕುಮಾರಸ್ವಾಮಿ ಬಿದ್ದಿರುವುದು ಗೊತ್ತಾಗಿದೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಏನು ಮಾಡದಿದ್ದರೂ ಕೂಡ ಪಾದಯಾತ್ರೆ ನಡೆಸಿ ಬಿಜೆಪಿಯವರು ರಾಜೀನಾಮೆಗೆ ಪಟ್ಟು ಹಿಡಿದರು. ಆದರೆ ನಾವು ಕುಮಾರಸ್ವಾಮಿ ರಾಜೀನಾಮೆ ಬಗ್ಗೆ ಮಾತನಾಡಿದ್ದೇವಾ? ನಾವೇನು ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆ ಕೇಳಿದ್ದೀವಾ?ಎಂದು ವಾಗ್ದಾಳಿ ನಡೆಸಿದರು. ಈ ಹಿಂದೆ…

Read More

ಬೆಂಗಳೂರು : ಮುಂದಿನ 2 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಭಾರೀ ಗಾಳಿ ಮತ್ತು ಮಳೆಯಾಗುವ ಸಾಧ್ಯತೆ ಇರುವುದರಿಂದ ನಾಗರಿಕರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ರಾಯಚೂರು, ಬೀದರ್, ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿತ್ರದುರ್ಗ, ಹಾವೇರಿ, ಚಾಮರಾಜನಗರ, ಮೈಸೂರು, ಬಳ್ಳಾರಿ ಮತ್ತು ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರಿನಲ್ಲಿ ಮಳೆ ಈಗಾಗಲೇ ಆರಂಭವಾಗಿದ್ದು, ನಗರದ ಉತ್ತರ ಮತ್ತು ಈಶಾನ್ಯ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಭಾರೀ ಗಾಳಿ ಬೀಸುತ್ತಿರುವ ಕುರಿತು ವರದಿಯಾಗಿದೆ. ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯೂ ಸುರಿದಿದೆ. ಅದೇ ರೀತಿ ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಇಂದು ಮಧ್ಯಾಹ್ನ…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಗೃಹಲಕ್ಷ್ಮಿ ಯೋಜನೆಯ ಹಣ 2 ತಿಂಗಳ ಹಿಂದಿನ ಕಂತು ಜಮೆ ಆಗಿತ್ತು. ಆದರೆ ಇತ್ತೀಚಿನ 2 ಕಂತುಗಳ ಹಣ ಇನ್ನು ಜಮೆ ಆಗಿಲ್ಲ ಎಂಬುದು ಯಜಮಾನಿಯರ ಆರೋಪವಾಗಿದೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇನ್ನೊಂದು ವಾರ ಅಂದರೆ ಮಾರ್ಚ್ 31ರ ಬಳಿಕ 2 ಕಂತುಗಳ ಹಣ ಖಾತೆಗೆ ಜಮೆ ಆಗಲಿದೆ ಎಂದ್ ಸ್ಪಷ್ಟನೆ ನೀಡಿದ್ದಾರೆ. ಹೌದು ಈ ಕುರಿತು ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ಬಳಿಕ ಅಂದರೆ ಇನ್ನೊಂದು ವಾರ ಬಿಟ್ಟು ಹಾಕಲಾಗುತ್ತದೆ. ಈಗಾಗಲೇ ಹಿಂದಿನ 2 ಕಂತುಗಳ ಹಣ ಖಾತೆಗೆ ಹಾಕಲಾಗಿದೆ. ಇನ್ನು ಉಳಿದ 2 ಕಂತುಗಳ ಹಣವನ್ನು ಮಾರ್ಚ್ 31 ರ ನಂತರ ಅಕೌಂಟಿಗೆ ಹಾಕಲಾಗುತ್ತದೆ ಎಂದು ಅವರು ಸ್ಪಷ್ಟನೆ ನೀಡಿದರು. ನಮ್ಮ ಸರ್ಕಾರದ ಅವಧಿಯಲ್ಲೆ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2000 ರೂಪಾಯಿ ಹೆಚ್ಚಿಸಿದೆವು. ಅದಾದ ನಂತರ ಯಾವುದೇ…

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಕೊಲೆ ಆಗಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಉದ್ಯಮಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬಿಜಿಎಸ್‌ ಲೇಔಟ್‌ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.ಕೊಲೆಯಾದ ಉದ್ಯಮಿಯನ್ನು ಲೋಕನಾಥ್‌ ಸಿಂಗ್‌ (37) ಎಂದು ತಿಳಿದುಬಂದಿದೆ. ಈ ತಿಂಗಳಲ್ಲಿ ಕೊಲೆಯಾದ ಲೋಕನಾಥ್‌ ಸಿಂಗ್ ಗೆ ಮದುವೆ ನಿಶ್ಚಯವಾಗಿತ್ತು. ಆದರೆ ಇದೀಗ ದುಷ್ಕರ್ಮಿಗಳ ಕೈಯಿಂದ ಬರ್ಬರವಾಗಿ ಕೊಲೆಯಾಗಿದ್ದು, ಕೊಲೆಯಾದ ಬಳಿಕ ಲೋಕನಾಥ್‌ ಗನ್‌ಮ್ಯಾನ್‌ ನಾಪತ್ತೆಯಾಗಿದ್ದ. ನಂತರ ಪೊಲೀಸ್‌ ಠಾಣೆಯಲ್ಲಿ ಪ್ರತ್ಯಕ್ಷನಾಗಿದ್ದಾನೆ. ಸದ್ಯ ಪೊಲೀಸರು ಈತನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ಚಿಕ್ಕಬಳ್ಳಾಪುರ : ಪ್ರವಾಸಿಗರ ಅಚ್ಚು ಮೆಚ್ಚಿನ ತಾಣವಾದ ನಂದಿ ಹಿಲ್ಸ್ ಎಂದೇ ಪ್ರಸಿದ್ಧವಾಗಿರುವ ನಂದಿ ಗಿರಿಧಾಮ ನಾಳೆಯಿಂದ 1 ತಿಂಗಳವರೆಗೆ ಅಂದರೆ ನಾಳೆಯಿಂದ ಮಾರ್ಚ್ 24 ರವರೆಗೆ ವರೆಗೆ 1 ತಿಂಗಳ ಕಾಲ ವಿಶ್ವವಿಖ್ಯಾತ ಪ್ರವಾಸಿತಾಣ ನಂದಿಗಿರಿಧಾಮ ಬಂದ್ ಇರಲಿದೆ.ಕಾರಣ ನಂದಿಗಿರಿಧಾಮದ ರಸ್ತೆ ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ 1 ತಿಂಗಳು ನಂದಿಬೆಟ್ಟದ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ. ಹೌದು ನಂದಿಗಿರಿಧಾಮದ ಅಂಕು ಡೊಂಕಿನ ರಸ್ತೆಗೆ ಡಾಂಬರೀಕರಣ ಮಾಡುವ ಸಲುವಾಗಿ ಮಾರ್ಚ್ 24 ರಿಂದ ಏಪ್ರಿಲ್ 25 ರವರೆಗೂ ಬರೋಬ್ಬರಿ 1 ತಿಂಗಳ ಕಾಲ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗುತ್ತಿದೆ. ಆದ್ರೆ ಪ್ರವಾಸಿಗರ ಹಿತದೃಷ್ಟಿಯಿಂದ ವೀಕೆಂಡ್​ ಶುಕ್ರವಾರ ಸಂಜೆ 6-30 ರಿಂದ ಸೋಮವಾರ ಬೆಳಿಗ್ಗೆ 8 ಗಂಟೆಯವರೆಗೆ ಮಾತ್ರ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ವೀಕೆಂಡ್ ನಲ್ಲಿ ಮಾತ್ರ ಅವಕಾಶ ವಾರಾಂತ್ಯದ ದಿನಗಳಲ್ಲಿ ಶುಕ್ರವಾರ ಸಂಜೆ 6:30ರಿಂದ ಸೋಮವಾರ ಬೆಳಿಗ್ಗೆ 08…

Read More

ಕಲಬುರ್ಗಿ : ಸ್ನೇಹಿತರ ಜೊತೆಗೆ ಕೃಷಿ ಹೊಂಡಕ್ಕೆ ಈಜಲು ತೆರಳಿದ್ದ SSLC ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಫ್ಜಲ್ಪುರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಫ್ಜಲ್ಪುರದ ಮಹಾಂತೇಶ್ವರ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶ್ರೀಶೈಲ ನಿಲೆಗಾರ (16) ಶನಿವಾರ ಕೃಷಿ ಹೊಂಡದಲ್ಲಿ ಈಜಲು ಹೋಗಿ ಅವನು ಮೃತನಾಗಿದ್ದಾನೆ. ಈ ವೇಳೆ ಡಬ್ಬಿಗೆ ಕಟ್ಟಿರುವ ಹಗ್ಗ ಹರಿದು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಶ್ರೀಶೈಲ ಎಸ್ಸೆಸ್ಸೆಲ್ಸಿ ಕನ್ನಡ ಪರೀಕ್ಷೆ ಬರೆದಿದ್ದ.ಬಾಲಕನ ತಂದೆ ಪಾನಿಪುರಿ ವ್ಯಾಪಾರ ಮಾಡುತ್ತಿದ್ದರು.‌

Read More

ಚಿಕ್ಕಬಳ್ಳಾಪುರ : ಜಮೀನು ವಿವಾದದ ಹಿನ್ನೆಲೆಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಸೊನಗನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು 100ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿರುವ ದುಷ್ಕರ್ಮಿಗಳು, ಗ್ರಾಮದ ಗಂಗಮ್ಮಗೆ ಸೇರಿದ ತೋಟದಲ್ಲಿ ಈ ಒಂದು ಕೃತ್ಯ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಸೊನಗನಹಳ್ಳಿ ಗ್ರಾಮದಲ್ಲಿ ಗಂಗಮ್ಮ ಎಂಬುವರಿಗೆ ಸೇರಿದ ತೋಟದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಡಿಕೆ ಮರಗಳನ್ನು ಬೆಳೆದಿದ್ದರು. ಜಮೀನು ವಿವಾದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಅಡಕೆ ಮರಗಳನ್ನು ನಾಶ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಹಶೀಲ್ದಾರ್ ನ್ಯಾಯಾಲಯದಲ್ಲಿ ಕೇಸ್ ದಾಖಲಿಸಿದ್ದಕ್ಕೆ ಈ ಒಂದು ಕೃತ್ಯ ಎಸಗಲಾಗಿದೆ ಎನ್ನಲಾಗಿದ್ದು, ಘಟನೆ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More