Author: kannadanewsnow05

ಬಾಗಲಕೋಟೆ : ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚುತ್ತಿದ್ದು ಇದರಿಂದ ಅನೇಕ ಜನರ ಪ್ರಾಣಕ್ಕೆ ಕುತ್ತು ತಂದೊಡ್ಡುವ ಸಾಧ್ಯತೆಗಳು ಇವೆ ಇದೀಗ ಸ್ಪೋಟಕ ಮಾಹಿತಿ ಒಂದು ಬಹಿರಂಗ ವಾಗಿದ್ದು ಬಾಗಲಕೋಟೆ ಜಿಲ್ಲೆ ಒಂದರಲ್ಲೇ 384 ನಕಲಿ ವೈದ್ಯರು ಇರುವ ಮಾಹಿತಿ ಬಹಿರಂಗವಾಗಿದೆ. ಹೌದು ಬಾಗಲಕೋಟೆ ಜಿಲ್ಲೆಯಲ್ಲಿ ಹೆಚ್ಚಾದ ನಕಲಿ ವೈದ್ಯರ ಹಾವಳಿಯಿಂದ ಜನ ಕಂಗಾಲಾಗಿದ್ದಾರೆ.ಬಾಗಲಕೋಟೆ ಜಿಲ್ಲೆಯಲ್ಲಿ 384 ನಕಲಿ ವೈದ್ಯರಿರುವ ಮಾಹಿತಿ ಬಹಿರಂಗವಾಗಿದ್ದು, ನಕಲಿ ವೈದ್ಯರ ವಿರುದ್ಧ ಜಿಲ್ಲಾಡಳಿತದಿಂದ ಇದೀಗ ಕೇಸ್ ದಾಖಲಾಗಿದೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ವಿದ್ಯಾರ್ಥಿ ದೆಸೆ ಅತ್ಯಂತ ಅಮೂಲ್ಯ. ಶಿಕ್ಷಕರು ಶಿಸ್ತು ಕಲಿಸುವ ನೆಪದಲ್ಲಿ ಜೀವಕ್ಕೆ ಹಾನಿಯಾಗುವಂತಹ ಕೃತ್ಯಗಳಿಗೆ ಮುಂದಾಗಬಾರದು ಎಂದು ಅಭಿಪ್ರಾಯ ಪಟ್ಟಿರುವ ಹೈಕೋರ್ಟ್,ವಿದ್ಯಾರ್ಥಿನಿಯೊಬ್ಬರಿಗೆ ಬೆದರಿಕೆ ಹಾಕುವ ಮೂಲಕ ಆತ್ಮಹತ್ಯೆಗೆ ಕಾರಣವಾದ ಶಿಕ್ಷಕರ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ. ವಿದ್ಯಾರ್ಥಿನಿಯ ಸಾವಿನ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಖಾಸಗಿ ಪ್ರೌಢ ಶಾಲೆ ಶಿಕ್ಷಕರಾದ ರೂಪೇಶ್ ಮತ್ತು ಸದಾನಂದ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ವಿದ್ಯಾರ್ಥಿ ದೆಸೆ ಅತ್ಯಂತ ಅಮೂಲ್ಯ. ಶಿಕ್ಷಕರು ಶಿಸ್ತು ಕಲಿಸುವ ನೆಪದಲ್ಲಿ ಜೀವಕ್ಕೆ ಹಾನಿಯಾಗುವಂತಹ ಕೃತ್ಯಗಳಿಗೆ ಮುಂದಾಗಬಾರದು ಎಂದು ಅಭಿಪ್ರಾಯಪಟ್ಟಿದೆ. ಸಹಪಾಠಿ ಒಬ್ಬರಿಗೆ ಚುಂಬಿಸುವ ವಿಡಿಯೋವನ್ನು ಪ್ರಚಾರ ಮಾಡುವುದಾಗಿ ಹೆದರಿಕೆ ಹಾಕಿದ್ದರಿಂದ ವಿದ್ಯಾರ್ಥಿನಿಯ ಸಾವಿಗೆ ಕಾರಣರಾಗಿದ್ದ ಆರೋಪದಲ್ಲಿ ದಾಖಲಾದ ಎಫ್ಐಆರ್ ರದ್ದು ಕೋರಿ ಇಬ್ಬರು ಶಿಕ್ಷಕರು ಅರ್ಜಿ ಸಲ್ಲಿಸಿದರು.ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು ಘಟನೆ ಕುರಿತು ವಿಚಾರಣೆ ನಡೆಸಬೇಕಾದ ಅಗತ್ಯವಿದೆ ಎಂದು ತಿಳಿಸಿ ಅರ್ಜಿ ವಜಾಗೊಳಿಸಿದೆ. ಹದಿಹರೆಯದ…

Read More

ಬೆಳಗಾವಿ : ಇತ್ತೀಚಿಗೆ ಮಹಾರಾಷ್ಟ್ರದ ಲೊನಾವಾಲಾ ದುರಂತದಲ್ಲಿ ಮಹಿಳೆ ಮಕ್ಕಳು ಸೇರಿ 6 ಜನರು ನೀರು ಪಾಲಾಗಿದ್ದರು.ಇದರ ಬೆನ್ನಲ್ಲೆ ಇದೀಗ ಎಚ್ಚೆತ್ತ ಅರಣ್ಯ ಇಲಾಖೆ ಖಾನಾಪುರ ತಾಲೂಕಿನ ಕಾಡಂಚಿನಲ್ಲಿರುವ ಪ್ರಸಿದ್ಧ ಜಲಪಾತಗಳ ವೀಕ್ಷಣೆಗೆ ಬ್ರೇಕ್ ಹಾಕಿದೆ. ಹೌದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬಟವಾಡೆ ಫಾಲ್ಸ್, ಚಿಕ್ಕಲೆ ಫಾಲ್ಸ್, ಪಾರವಾಡ ಫಾಲ್ಸ್, ಚೋರ್ಲಾ ಫಾಲ್ಸ್, ವಜ್ರಾ ಫಾಲ್ಸ್​​ ಹೀಗೆ 7 ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಹೀಗಾಗಿ ಸಹಜವಾಗಿ ಈ ಒಂದು ಸಮಯದಲ್ಲಿ ಫಾಲ್ಸ್ ಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ನಿರಾಸೆಯಾಗಿದೆ. ಫಾಲ್ಸ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ಕಾರ್ಯ ನಿರ್ವಹಿಸುತ್ತಿದ್ದಾರೆ. ಫಾಲ್ಸ್ ಮುಖ್ಯ ರಸ್ತೆಗೆ ಮೂವರು ಫಾರೆಸ್ಟ್ ಗಾರ್ಡ್​ಗಳು ಕಾವಲು ಕಾಯುತ್ತಿದ್ದಾರೆ. ವೀಕೆಂಡ್​ನಲ್ಲಿ ಫಾಲ್ಸ್ ನೋಡಲು ಕರ್ನಾಟಕ, ಗೋವಾ, ಮಹಾರಾಷ್ಟ್ರ ರಾಜ್ಯದಿಂದ ಬರುವ ಪ್ರವಾಸಿಗರಿಗೆ ನಿರಾಸೆಯಾಗಿದೆ.

Read More

ರಾಯಚೂರು : ರಾತ್ರಿ ಊಟ ಮಾಡಿದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ ಬೇಧಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ಶಾಲೆಯ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಹೌದು ನಿನ್ನೆ ರಾತ್ರಿ ಊಟ ಮಾಡಿದ ಮಕ್ಕಳಲ್ಲಿ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡ ಮಕ್ಕಳನ್ನು ಮಾನ್ವಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ನೀರು ಶುದ್ಧಿಕರಣಕ್ಕಾಗಿ ಟ್ಯಾಂಕ್ ನಲ್ಲಿ ಪುಡಿ ಬಳಕೆಯೆ ಕಾರಣ ಎಂದು ಆರೋಪ ಕೇಳಿ ಬಂದಿದೆ. ಅಲ್ಲದೆ ಇದೇ ನೀರಿನಿಂದ ಅಡುಗೆ ತಯಾರಿಸಿದ ಸಿಬ್ಬಂದಿಗಳು ಮಕ್ಕಳಿಗೆ ನೀಡಿದ್ದಾರೆ.ಊಟದ ಬಳಿಕ ಮಕ್ಕಳಲ್ಲಿ ವಾಂತಿ ಹೊಟ್ಟೆ ನೋವು ಭೇದಿ ಕಾಣಿಸಿಕೊಂಡಿದೆ. ಈ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜನರಲ್ಲಿ ಆತಂಕ ಮೂಡಿಸಿದೆ. ಕಳೆದ ನಾಲ್ಕು ದಿನಗಳಲ್ಲಿ ಆರು ಮಕ್ಕಳು ಡೆಂಘಿಗೆ ಬಲಿಯಾಗಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಕೂಡ ಡೆಂಗಿ ಸೋಂಕಿಗೆ 11 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ಹೌದು ಅಂಜನಾಪುರದ 11 ವರ್ಷದ ಬಾಲಕ ಗಗನ್ ಸಾವನ್ನಪ್ಪಿದ್ದಾನೆ. ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಗಗನ್ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಚೈತನ್ಯ ಟೆಕ್ನೋ ಶಾಲೆಯಲ್ಲಿ ಬಾಲಕ ಗಗನ್ ಓದುತ್ತಿದ್ದ ಚಲನೆಗಳಿಂದ ಗಗನ್ ಡೆಂಗಿ ಜ್ವರದಿಂದ ಬಳಲುತ್ತಿದ್ದ ಎನ್ನಲಾಗಿದೆ. ಇನ್ನೂ ಮೃತ ಬಾಲಕನ ಪೋಷಕರು ಶಾಲೆಯಲ್ಲಿ ಸರಿಯಾದ ರೀತಿಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುತ್ತಿಲ್ಲ. ಹೀಗಾಗಿ ರೋಗ ಹರಡುವ ಸಾಧ್ಯತೆ ಇದೆ ಹಾಗಾಗಿ ಶಾಲಾ ಆಡಳಿತ ಮಂಡಳಿಯ ವಿರುದ್ಧ ಇದೀಗ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

Read More

ಬೆಂಗಳೂರು : ಮೊಬೈಲ್ ಚಾರ್ಜಿಂಗ್ ಹಾಕಿದ ಸಂದರ್ಭದಲ್ಲಿ ಅನೇಕ ದುರಂತಗಳು ಸಂಭವಿಸುತ್ತಲೇ ಇರುತ್ತವೆ. ಜನರಲ್ಲಿ ಎಷ್ಟೇ ಜಾಗೃತಿ ಮೂಡಿಸಿದರು ಸಹ ನಿರ್ಲಕ್ಷಕ್ಕೆ ತಮ್ಮ ಜೀವ ಕಳೆದುಕೊಳ್ಳುತ್ತಾರೆ. ಇದೀಗ ಮೊಬೈಲ್ ಚಾರ್ಜ್ ಹಾಕುವಾಗ ಕರೆಂಟ್ ಶಾಕ್ ಗೆ ಯುವಕ ಸಾವನ್ನಪ್ಪಿದ್ದಾನೆ. ಹೌದು ಬೀದರ್ ಮೂಲದ ಶ್ರೀನಿವಾಸ್ ಎನ್ನುವ ವಿದ್ಯಾರ್ಥಿ ಸಾವನಪ್ಪಿದ್ದಾನೆ ಮೃತ ಶ್ರೀನಿವಾಸ್ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಕೋರ್ಸ್ ಮಾಡುತ್ತಿದ್ದ ಎನ್ನಲಾಗಿದೆ. ಮೊಬೈಲ್ ಚಾರ್ಜಿಂಗ್ ವೈರ್ ಇಂದ ವಿದ್ಯುತ್ ಪ್ರವಹಿಸಿ ಶ್ರೀನಿವಾಸ್ ಎನ್ನುವ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಈ ವೇಳೆ ಮೊಬೈಲ್ ಚಾರ್ಜರ್ ವೈರ್ ಕೂಡ ಸ್ವಲ್ಪ ಡ್ಯಾಮೇಜ್ ಆಗಿತ್ತು ಎನ್ನಲಾಗಿದೆ. ಕರೆಂಟ್ ಶಾಕ್ ನಿಂದ ರೂಮ್ನಲ್ಲಿ ವಿದ್ಯಾರ್ಥಿ ಶ್ರೀನಿವಾಸ ಬಿದ್ದಿದ್ದ. ಈ ವೇಳೆ ಊಟಕ್ಕೆ ಕರೆಯಲು ಬಂದಿದ್ದ ಮತ್ತೊಬ್ಬ ವಿದ್ಯಾರ್ಥಿಗೂ ಕರೆಂಟ್ ಶಾಕ್ ತಗುಲಿದೆ. ಅದೃಷ್ಟವಶತ ಪ್ರಾಣಾಪಾಯದಿಂದ ಪರಗಿದ್ದಾನೆಮ್ ತಕ್ಷಣ ಬಸವೇಶ್ವರನಗರ ಪೊಲೀಸರಿಗೆ ಪಿಜಿ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಧಿ ವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೇಸ್ ದಾಖಲಿಸಿ…

Read More

ಉತ್ತರಪ್ರದೇಶ : ಉತ್ತರಪ್ರದೇಶದ ಹತ್ರಾಸ್ ನಲ್ಲಿ ಎರಡು ದಿನಗಳ ಹಿಂದೆ ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತಾ ದುರಂತದಿಂದ 120ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು ಅನೇಕ ಜನರು ಗಾಯಗೊಂಡಿದ್ದರು. ಘಟನೆ ಬಳಿಕ ಇಂದು ಬೋಲೇ ಬಾಬಾ ಮೊದಲ ಪ್ರತಿಕ್ರಿಯೆ ನೀಡಿದ್ದು, ಈ ಒಂದು ದುರಂತದಿಂದ ನನಗೆ ಬಹಳ ಸಂಕಟವಾಗಿದೆ ಎಂದು ತಿಳಿಸಿದರು. ನಾಲ್ಕು ದಿನಗಳ ಬಳಿಕ ಬೋಲೇ ಬಾಬಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮೃತರ ಕುಟುಂಬಗಳು ಗಾಯಾಳುಗಳಿಗೆ ಸಹಾಯ ಮಾಡುತ್ತೇನೆ. ಈ ಘಟನೆಗೆ ಕಾರಣರಾದವರನ್ನ ಸರ್ಕಾರ ಬಿಡುವುದಿಲ್ಲ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ. ಕಾಲ್ತುಳಿತದ ದೊರೆತದ ಬಗ್ಗೆ ಬೋಲೇ ಬಾಬಾ ಮೊದಲ ಪ್ರತಿಕ್ರಿಯೆ ನೀಡಿದರು. ಆರೋಪಿ ಶರಣಾಗತಿ 121 ಜನರ ಸಾವಿಗೆ ಕಾರಣವಾದ ಹತ್ರಾಸ್ ಕಾಲ್ತುಳಿತದ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ಎಸ್ಐಟಿ, ಎಸ್ಟಿಎಫ್ ಮತ್ತು ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ಅವರ ವಕೀಲ ಎಪಿ ಸಿಂಗ್ ಶುಕ್ರವಾರ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ. “ಹತ್ರಾಸ್ ಪ್ರಕರಣದಲ್ಲಿ ಎಫ್ಐಆರ್ನಲ್ಲಿ ಹೆಸರಿಸಲಾದ ದೇವ್…

Read More

ಶಿವಮೊಗ್ಗ : ರಾಜ್ಯದಲ್ಲಿ ಹೆಚ್ಚುತ್ತಿರುವ ಮಳೆಯಿಂದಾಗಿ ಈಗ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಇದರ ಬೆನ್ನಲ್ಲೆ, ಝೀಕಾ ವೈರಸ್ ಕೂಡ ರಾಜ್ಯಕ್ಕೆ ಒಕ್ಕರಿಸಿಕೊಂಡಿದ್ದು, ಇದೀಗ ಶಿವಮೊಗ್ಗದಲ್ಲಿ ಝೀಕಾ ವೈರಸ್ ಗೆ ವೃದ್ಧರೊಬ್ಬರೂ ಸಾವನ್ನಪ್ಪಿದ್ದಾರೆ. ಹೌದು ಶಿವಮೊಗ್ಗ ಜಿಲ್ಲೆಯ ಗಾಂಧಿ ನಗರದ ನಿವಾಸಿಯ ವೃದ್ಧರು ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದರು.ಜೂನ್ 21ರಂದು ಝೀಕಾ ವೈರಸ್ ಪತ್ತೆಯಾಗಿತ್ತು. ಹಾಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ವೃದ್ಧರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಡಿಸ್ಚಾರ್ಜ್ ಆಗಿದ್ದರು. ಅದಾದ ಬಳಿಕ ಕುಟುಂಬದವರು ಗುರುವಾರ ಮನೆಗೆ ಕರೆದುಕೊಂಡು ಹೋಗಿದ್ದರು. ನಿನ್ನೆ ಮನೆಯಲ್ಲಿ 74 ವರ್ಷದ ವೃದ್ಧರು ಝೀಕಾ ವೈರಸ್ ನಿಂದ ಮೃತಪಟ್ಟಿದ್ದಾರೆ. ಹೀಗಾಗಿ ಶಿವಮೊಗ್ಗದಲ್ಲಿ ಜೀವ ವೈರಸ್ ಗೆ 74 ವರ್ಷದ ವೃದ್ಧರು ಮೊದಲ ಬಲಿಯಾಗಿದ್ದಾರೆ.ಶಿವಮೊಗ್ಗದ ಗಾಂಧಿನಗರದ ಮನೆಯಲ್ಲಿ ಸಾವನ್ನಪ್ಪಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಇಷ್ಟು ದಿನ ಮಹಿಳೆಯರಿಗೆ 2000 ನೀಡುತ್ತಾ ಬಂದಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಲಿಂಗತ್ವ ಅಲ್ಪಸಂಖ್ಯಾತರಿಗೂ ಕೂಡ ಇನ್ನು ಮುಂದೆ ಅವರ ಖಾತೆಗೆ 2,000 ಹಣ ಬರಲಿದೆ. ಹೌದು ಈ ಕುರಿತು ರಾಜ್ಯ ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದೆ. ಅದರಂತೆ ಇನ್ನು ಮುಂದೆ ಮಹಿಳೆಯರ ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೂ ಕೂಡ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಅಡಿ ಅವರ ಖಾತೆಗೆ 2000 ಹಣ ಬಂದು ಬೀಳಲಿದೆ. ಅದರಿಂದ ಸಹಜವಾಗಿ ಲಿಂಗತ ಅಲ್ಪಸಂಖ್ಯಾತರ ಆರ್ಥಿಕ ಮಟ್ಟ ಸುಧಾರಿಸುತ್ತದೆ ಎಂದು ಹೇಳಲಾಗುತ್ತಿದೆ. ಅರ್ಜಿ ಸಲ್ಲಿಸುವುದು ಹೇಗೆ? ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಜು.8ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ…

Read More

ಬೆಂಗಳೂರು : ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬ ವ್ಯಕ್ತಿಯ ಬಹುಮುಖ್ಯ ಹಕ್ಕಾಗಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕ ಹಾಗೂ ಸರ್ಕಾರದ ಆಸ್ತಿಪಾಸ್ತಿಗಳಿಗೆ ಹಾನಿಯಾಗುವುದು ಸಹಜ ಹಾಗಂತ ಪ್ರತಿಭಟನೆಗಳನ್ನು ಪ್ರಯೋಗ ಶಾಲೆಯಲ್ಲಿ ನಡೆಸಲು ಆಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿತು. ಜೂನ್ 20ರಂದು ಬಿಜೆಪಿಯ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ನೇತೃತ್ವದಲ್ಲಿ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತಡೆ ಉಂಟಾಗಿದೆ. ಪ್ರತಿಭಟನಕಾರರು ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಈ ವಿಚಾರಣೆ ನಡೆಸಿದ ಕೋರ್ಟ್ ನಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆ‌ರ್ ರದ್ದುಪಡಿಸಬೇಕು’ ಎಂದು ಕೋರಿ ಬಿಜೆಪಿಯ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು ಶುಕ್ರವಾರ ವಿಚಾರಣೆ ನಡೆಸಿದರು. ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ…

Read More