Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ನಾಳೆಯೂ ಹಲವು ಪ್ರದೇಶಗಳಲ್ಲಿ ಗುರುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಅಲ್ಲದೆ ರಾಜ್ಯದ 6 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ 29ರವರೆಗೂ ರಾಜ್ಯದ ಕೆಲವೆಡೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಹೇಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಅದೇ ರೀತಿಯಾಗಿ ಉಡುಪಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಕೋಲಾರ, ಶಿವಮೊಗ್ಗ ಹಾಗೂ ರಾಮನಗರ ಜಿಲ್ಲೆಯ ಹಲವೆಡೆ ಗುಡುಗು ಹಾಗೂ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದು ಮಾಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿತ್ತು. ಈ ಒಂದು ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ ಪಾಸ್ ಪೋರ್ಟ್ ರದ್ದಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ತಿಳಿಸಿದರು. ಬೆಂಗಳೂರಲ್ಲಿ ಸದಾಶಿವನಗರದ ತಮ್ಮ ನಿವಾಸದ ಬಳಿ, ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,ಕೇಂದ್ರ ಸರ್ಕಾರವು ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡಿದರೆ ಅರ್ಥವಿಲ್ಲ. ಪ್ರಜ್ವಲ್ ರೇವಣ್ಣ ಅವರ ಮೇಲೆ ವಾರಂಟ್ ಜಾರಿ ಮಾಡಿರುವುದನ್ನು ತಿಳಿಸಲಾಗಿದೆ. ವಾರಂಟ್ ಜಾರಿಯಾದ ನಂತರ ಪಾಸ್ಪೋರ್ಟ್ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ಹೇಳಿದರು. ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ. ಈ ಬಗ್ಗೆ ಮುಖ್ಯಮಂತ್ರಿ, ಎಸ್ಐಟಿ ಪತ್ರ ಬರೆದಿದ್ದಾರೆ. ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ ಎಂದರು.…
ಮೈಸೂರು : ಕಾಂಗ್ರೆಸ್ ಕಾರ್ಯಕರ್ತೆ ಹಾಗೂ ಸ್ಯಾಂಡಲ್ ವುಡ್ ನಟಿ ವಿದ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಮಾಡಿ ಪರಾರಿಯಾಗಿದ್ದ ಪತಿ ನಂದೀಶನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪತ್ನಿ ವಿದ್ಯಾ ಹತ್ಯೆಗೈದು ಮಂಡ್ಯದಲ್ಲಿ ಪತಿ ನಂದೀಶ್ ತಲೆಮರಿಸಿಕೊಂಡಿದ್ದ. ಬನ್ನೂರು ಇನ್ಸ್ಪೆಕ್ಟರ್ ಪುನೀತ್ ನೇತೃತ್ವದಲ್ಲಿ ಇದೀಗ ನಂದೀಶ ಬಂಧನವಾಗಿದೆ. ಆರೋಪಿಯನ್ನು ಬಂಧಿಸಿ ಇದೀಗ ಪೊಲೀಸರು ಬನ್ನೂರಿಗೆ ಕರೆ ತರುತ್ತಿದ್ದಾರೆ ಎಂದು ತಿಳಿದುಬಂದಿದೆ. ಮೇ 20ರಂದು ರಾತ್ರಿ ಸುತ್ತಿಗೆಯಿಂದ ಹೊಡೆದು ಪತಿ ನಂದೀಶ್ ಕೊಂದಿದ್ದ. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ತುರಗನೂರು ಗ್ರಾಮದಲ್ಲಿ ನಟಿ ವಿದ್ಯಾ ಕೊಲೆಯಾಗಿತ್ತು. ಮೇ 20 ರಂದು ವಿದ್ಯಾ ಕೊಲೆ ಮೇ 20 ರಂದು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ತುರಗನೂರು ಗ್ರಾಮದಲ್ಲಿ ನಟಿ ವಿದ್ಯಾ ಕೊಲೆಯಾಗಿತ್ತು.ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ…
ದಕ್ಷಿಣಕನ್ನಡ : ಅನುಮತಿ ಪಡೆಯದೆ ಠಾಣೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದು, ಹಾಗೂ ಪಿ ಎಸ್ ಐ ಗೆ ಧಮ್ಕಿ ಹಾಕಿದ ಆರೋಪದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಇದೀಗ ಹರೀಶ್ ಪೂಂಜಾ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರ್ಡಡಿ ಗ್ರಾಮದಲ್ಲಿ ಹರೀಶ್ ಪೂಂಜಾ ನಿವಾಸದಲ್ಲಿ ಸಭೆ ಮುಂದುವರೆದಿದೆ.ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ನಾಯಕರ ಸಭೆ ನಡೆಯುತ್ತಿದೆ. ಜಿಲ್ಲೆಯ ಶಾಸಕರು ಬಿಜೆಪಿ ನಾಯಕರು ಶಾಸಕ ಹರೀಶ್ ಪೂಂಜಾ ಭಾಗಿಯಾಗಿದ್ದಾರೆ. ಒಂದು ವೇಳೆ ಶಾಸಕ ಹರೀಶ್ ಪೂಂಜಾರನ್ನು ಬಂಧಿಸಿದರೆ ದಕ್ಷಿಣಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಲು ತೀರ್ಮಾನಿಸಲಾಗಿದೆ. ಸದ್ಯ ಪೊಲೀಸರ ಮುಂದಿನ ನಡೆಗಾಗಿ ಬಿಜೆಪಿ ನಾಯಕರು ಕಾಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ರಾಮನಗರ : ಮರದ ಎಲೆಗಳನ್ನು ಮುಚ್ಚಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಅಪರಿಚಿತ ರ ಜೊತೆ ಪತ್ನಿ ವಿಡಿಯೋ ಕಾಲ್ ಮಾಡಿದ್ದಕ್ಕೆ ಪತ್ನಿಯ ಶೀಲಾ ಸಂಖ್ಯೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ಕೊಲೆ ಮಾಡಿ ಮರದ ಎಲೆಗಳನ್ನು ಮುಚ್ಚಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆಯಾದ ಮಹಿಳೆಯನ್ನ ಮಂಗಳಹಳ್ಳಿ ನಿವಾಸಿ ಅಶ್ವಿನಿ (27) ಎಂದು ಹೇಳಲಾಗುತ್ತಿದೆ. ಪತ್ನಿಯನ್ನು ಪತಿ ರಮೇಶ್ (32) ಕೊಲೆಗೈದು ಪರಾರಿಯಾಗಿರುವ ಆರೋಪ ಕೇಳಿ ಬಂದಿದೆ. ಕಳೆದ ಹತ್ತು ವರ್ಷಗಳ ಹಿಂದೆ ಅಶ್ವಿನಿ ಹಾಗೂ ರಮೇಶ್ ಗೆ ಮದುವೆಯಾಗಿತ್ತು. ಅಪರಿಚಿತರ ಜೊತೆ ವಿಡಿಯೋ ಕಾಲ್ ಮಾಡಿದ್ದಕ್ಕೆ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಕಳೆದ ಹತ್ತು ವರ್ಷಗಳ ಹಿಂದೆ ಅಶ್ವಿನಿ ಹಾಗೂ ರಮೇಶಗೆ ಮದುವೆಯಾಗಿತ್ತು. ಕೆಲದಿನಗಳಿಂದ ಪತ್ನಿ ಮೇಲೆ ರಮೇಶ್ ಅನುಮಾನ ಪಟ್ಟು ಜಗಳವಾಡುತ್ತಿದ್ದ.ವಿಡಿಯೋ ಕಾಲ್ ಮಾಡುತ್ತಾಳೆ ಅಂತ ದಂಪತಿ ಮಧ್ಯೆ ಜಗಳ ಶುರುವಾಗಿತ್ತು. ಪತಿ ರಮೇಶನ್ನ ಬಿಟ್ಟು ಪತ್ನಿ ಅಶ್ವಿನಿ…
ಬೆಂಗಳೂರು : ಹೆರಿಗೆ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಬಾಣಂತಿಯನ್ನು ಜನನಿ (33) ಎಂದು ತಿಳಿದುಬಂದಿದೆ. ಸದ್ಯ ಮಣಿಪಾಲ್ ಆಸ್ಪತ್ರೆಯ ವೈದ್ಯರ ವಿರುದ್ಧ ಕುಟುಂಬಸ್ಥರು ಇದೀಗ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕ್ಲೌಡ್ ನೈನ್ ಆಸ್ಪತ್ರೆಯಲ್ಲಿ ಐವಿಎಫ್ ಮೂಲಕ ಜನನಿ ಹಾಗೂ ಕೇಶವ್ ದಂಪತಿ ಅವಳಿ ಮಕ್ಕಳನ್ನು ಪಡೆದಿದ್ದರು. ಕ್ಲೌಡ್ ನೈನ್ ಆಸ್ಪತ್ರೆಯಲ್ಲಿ ದಂಪತಿ ಹೆರಿಗೆ ಪ್ಯಾಕೇಜ್ ಮಾಡಿಸಿದ್ದರು. ಮೇ ಎರಡರಂದು ಕ್ಲೌಡ್ ನೈನ್ ಆಸ್ಪತ್ರೆಯಲ್ಲಿ ಪ್ರಸವಪೂರ್ವ ಹೆರಿಗೆಯಾಗಿತ್ತು. ಬಳಿಕ ಜನನಿಗೆ ಜಾಂಡಿಸ್ ಲಿವರ್ ಸಮಸ್ಯೆ ಇದೆ ಎಂದು ವೈದ್ಯರು ತಿಳಿಸಿದರು. ಬಳಿಕ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಬೆಳಿಗ್ಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬಾಣಂತಿ ಜನನಿ ಸಾವನ್ನಪ್ಪಿದ್ದಾಳೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ 30 ಲಕ್ಷ ಬಿಲ್ ಮಾಡಿರುವ ಆರೋಪ ಕೂಡ ಇದೀಗ ಕೇಳಿ ಬರುತ್ತಿದೆ.
ದಕ್ಷಿಣಕನ್ನಡ : ಬೆಂಬಲಿಗರ ಪರವಾಗಿ ಪೊಲೀಸ್ ಠಾಣೆಯ ಆವರಣದಲ್ಲಿ ಧರಣಿ ಹಾಗೂ ಠಾಣೆಯ ಪಿಎಸ್ಐಗೆ ಧಮ್ಕಿ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ವಿಟ್ಲ ಠಾಣೆಯ ಪೊಲೀಸ್ ಅಧಿಕಾರಿಗಳು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ನೋಟಿಸ್ ಜಾರಿ ಮಾಡಲಾಗಿದೆ. ವಿಟ್ಲ ಠಾಣೆಯ ಪೊಲೀಸರಿಂದ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ವಿಟ್ಲ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ್ ಹಾಗೂ ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಅವರಿಂದ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ. ತತನಿಕಾಧಿಕಾರಿಗಳ ಜೊತೆಗೆ ಠಾಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಇಂದು ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ತೆರಳಿದಾಗ, ಅವರ ನಿವಾಸದ ಮುಂದೆ ಬಾರಿ ಹೈಡ್ರಾಮಾ ನಡೆಯಿತು.ಹರೀಶ್ ಪೂಂಜಾ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದರು. ಪೊಲೀಸರ ಈ ವರ್ತನೆಗೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಆಡಳಿತ ವಹಿಸಿಕೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಕುರಿತಂತೆ ಬಿಜೆಪಿಯ ಮಾಜಿ ಸಚಿವ ಸಿ ಟಿ ರವಿ ಪ್ರತಿಕ್ರಿಯೆ ನೀಡಿದ್ದು, ಸಾವಿರಾರು ಹತ್ಯೆ ಆತ್ಮಹತ್ಯೆಗಳೇ ನಿಮ್ಮ ಸಾಧನೆಯ? ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ ಸಿ ಬಿ ಆರ್ ವರದಿ ಪ್ರಕಾರ ನಾಲ್ಕು ತಿಂಗಳಲ್ಲಿ 430 ಕೊಲೆಗಳಾಗಿವೆ. 700 ಹೆಚ್ಚು ರೈತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹತ್ಯೆ ಆತ್ಮಹತ್ಯೆಯಲ್ಲಿ ಪ್ರತಿ ತಿಂಗಳು ಶತಕದ ದುಡಿದಾಟಿದೆ. ಕೋವಿಡ್ ಅವಧಿಯ ಅಕ್ರಮಗಳ ತನಿಖೆಗೆ ಸಮಿತಿಯನ್ನು ರಚಿಸಿದ್ರಿ.ಕೋವಿಡ್ ಅಕ್ರಮಗಳ ತನಿಖಾ ವರದಿ ಬಂತ? ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ಬಂತಾ? ಬಿಟ್ ಕಾಯಿನ್ ಹಗರಣದ ತನಿಖಾ ವರದಿ ಬಂದಿದೆಯಾ? ಎಂದು ಪ್ರಶ್ನಿಸಿದ್ದಾರೆ. ಈಗ ಕೆಲವು ಆರೋಪಗಳ ಕುರಿತು ಸಮಿತಿ ರಚಿಸಿದ್ದೀರಿ ಒಂದು ವರ್ಷವಾದರೂ ಯಾವುದೇ ವರದಿಗಳು ಬಂದಿಲ್ಲ. ನಿಮ್ಮದೊಂದು ಸರ್ಕಾರ ನೂರಾರು ಗೊಂದಲ. ಸರ್ಕಾರ ಯಾವ ಹೊಸ ಯೋಜನೆಯನ್ನೂ…
ರಾಮನಗರ : ಹೆಂಡತಿಗೆ ತವರಿನಿಂದ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪ್ರತಿದಿನ ಗಂಡ ಕಿರುಕುಳ ನೀಡುತ್ತಿದ್ದ, ಅಲ್ಲದೆ ಆಸ್ತಿಗಾಗಿ ಪತ್ನಿಯ ಮೇಲೆ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಶ್ವಿನಿ (30) ಕೊಲೆಯಾದ ದುರ್ದೈವಿ ಎಂದು ತಿಳಿದುಬಂದಿದೆ.ಕೊಲೆ ಮಾಡಿದ ಪತಿಯನ್ನು ರಮೇಶ್ ಎಂದು ಹೇಳಲಾಗುತ್ತಿದೆ.ಕೆಲವು ವರ್ಷಗಳ ಹಿಂದೆ ಅಶ್ವಿನಿಯನ್ನು ಮದಿವೆ ಮಾಡಿಕೊಂಡಿದ್ದ ರಮೇಶ್, ವರದಕ್ಷಿಣೆ ಹಾಗೂ ಆಸ್ತಿ ವಿಚಾರಕ್ಕೆ ಹೆಂಡತಿ ಮತ್ತು ಅವರ ಮನೆಯವರೊಂದಿಗೆ ಜಗಳ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಆದರೆ, ಇಂದು ಜಮೀನ ಬಳಿ ಇರುವಾಗಲೇ ಇಬ್ಬರ ನಡುವೆಯೂ ಜಗಳ ಆರಂಭವಾಗಿದೆ. ತೆಂಗಿನ ತೋಟದಲ್ಲಿ ಗಂಡ ಹೆಂಡತಿ ಮಧ್ಯೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಶುರುವಾಗಿದೆ. ಈ ವೇಳೆ ರಮೇಶ್ ಅಶ್ವಿನಿ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ.ಪತ್ನಿ ಎನ್ನುವುದನ್ನೂ ನೋಡದೆ ಎದೆ, ಕತ್ತು, ತಲೆ ಸೇರಿದಂತೆ ಹಲವು ಭಾಗಗಳಲ್ಲಿ ರಮೇಶ್ ಭೀಕರವಾಗಿ ಹಲ್ಲೆ ಮಾಡಿದ್ದಾನೆ. ನಂತರ ಹೆಂಡತಿ ಸಾವನ್ನಪ್ಪಿರುವುದನ್ನು ಖಚಿತಪಡಿಸಿಕೊಂಡು ಅಲ್ಲಿಂದ…
ಹುಬ್ಬಳ್ಳಿ : ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ವಿಶ್ವನನ್ನು ಇದೀಗ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.ಅಲ್ಲದೆ ಇಂದು ಮೃತ ಅಂಜಲಿ ಮನೆಯಲ್ಲಿ ವಿಶ್ವ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ರೈಲಿನಿಂದ ಬಿದ್ದು ಗಾಯಗೊಂಡಿದ್ದ ಹಂತಕ ವಿಶ್ವನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸರ್ಕಾರ ಪ್ರಕರಣವನ್ನು ಸಿಐಡಿ ಗೆ ಹಸ್ತಾಂತರಿಸಿದ ನಂತರ ನಿನ್ನೆ ಸಿಐಡಿ ತಂಡ ಹುಬ್ಬಳ್ಳಿಗೆ ಆಗಮಿಸಿತ್ತು ಇಂದು ಕಿಂ ಶಾಸ್ತ್ರಿ ಗೆ ಭೇಟಿ ನೀಡಿ, ಆರೋಪಿ ವಿಶ್ವನ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ನಂತರ ಆತನನ್ನು ವಶಕ್ಕೆ ಪಡೆಯದ ಸಿಐಡಿ ಅಧಿಕಾರಿಗಳು ಬೆಂಡಿಗೇರಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಅಲ್ಲಿ ಆರೋಪಿ ವಿಶ್ವನ ತಾಯಿ ಶೋಭಾ ಅವರನ್ನು ಕರೆಸಿದ್ದು ಅವರನ್ನು ಕೂಡ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಹಾಗಾಗಿ ಹಂತಕ ಅಭಿಮಾನನ್ನು ಕರೆದುಕೊಂಡು ಹೋಬಳಿಯ ವೀರಾಪುರ ಓಣಿಯಲಿರುವ ಮೃತ ಜಲಿ ಮನೆಗೆ ಕರೆದುಕೊಂಡು ಹೋಗಿ…