Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯಕ್ಕೆ ಬರುವ ಅನುದಾನಗಳ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೆ ನಾಳೆ ಮೂರನೇ ಬಾರಿಗೆ ಪ್ರಧಾನಿಯಾದ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಅಭಿನಂದನೆ ತಿಳಿಸಲಿದ್ದಾರೆ. ಹೌದು ಇಂದಿನಿಂದ ಮೂರು ದಿನಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯಕ್ಕೆ ಬರಬೇಕಿರುವ ಅನುದಾನಗಳ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಿದ್ದಾರೆ. ಕೇಂದ್ರ ಸಚಿವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಲಿದ್ದಾರೆ. ಇಂದು ರಾಜ್ಯದ 28 ಸಂಸದರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಅಲ್ಲದೇ ನಾಳೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಅಭಿನಂದಿಸಲಿದ್ದಾರೆ. ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಿರುವದರಿಂದ ನರೇಂದ್ರ ಮೋದಿಗೆ ಭೇಟಿಯಾಗಿ ಅಭಿನಂದನೆ ಸಲ್ಲಿಸಲಿದ್ದಾರೆ. ನಂತರ ಜೂನ್ 29ರಂದು ಅಮಿತ್ ಶಾ ಸೇರಿ ಹಲವು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ. ರಾಜ್ಯಕ್ಕೆ ಬರಬೇಕಿರುವ ಅನುದಾನದ ಬಗ್ಗೆ ಸಿಎಂ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಕಳೆದ ವರ್ಷ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭ್ರೂಣಹತ್ಯೆ ಪ್ರಕರಣ ಬಾರಿ ಸದ್ದು ಮಾಡಿತ್ತು. ಆದರೂ ಕೂಡ ಪೊಲೀಸ್ ಇಲಾಖೆ ಎಷ್ಟೇ ಕಠಿಣವಾದಂತ ಕ್ರಮ ಕೈಗೊಂಡರು ಸಹ ಇತ್ತೀಚಿಗೆ ಕೂಡ ಹಲವು ಭ್ರೂಣಹತ್ಯೆ ಪ್ರಕರಣಗಳು ನಡೆದಿದ್ದವು. ಭ್ರೂಣಹತ್ಯೆ ತಡೆಗೆ ಇದೀಗ ಆರೋಗ್ಯ ಇಲಾಖೆ ಹೊಸ ಪ್ಲಾನ್ ಮಾಡಿದ್ದು ತನ್ನ ವ್ಯಾಪ್ತಿಯಲ್ಲೇ ಪೊಲೀಸ್ ವಿಭಾಗ ತೆರೆಯಲು ಮುಂದಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಅವರು, ಮಾತನಾಡಿದ್ದು, ಆರೋಗ್ಯ ಇಲಾಖೆಯಲ್ಲಿ ಸಹಾಯಕ ಪೊಲೀಸ್ ಆಯುಕ್ತರ (ಎಸಿಪಿ) ಶ್ರೇಣಿ ಹುದ್ದೆ ಸೃಷ್ಟಿಸಿ ಅವರ ಮೂಲಕ ಪೊಲೀಸ್ ಇಲಾಖೆ ಜತೆಗೂಡಿ ಭ್ರೂಣಹತ್ಯೆ ತಡೆಯಲು ವ್ಯವಸ್ಥಿತ ಕಾರ್ಯತಂತ್ರ ರೂಪಿಸಲು ಉದ್ದೇಶಿಸಿರುವುದಾಗಿ ಸಚಿವರು ಘೋಷಿಸಿದರು. ಬೆಂಗಳೂರಿನ ಬೈಯಪ್ಪನಹಳ್ಳಿ ಪ್ರಕರಣದ ಬಳಿಕ, ಮಂಡ್ಯ- ಪಾಂಡವಪುರ, ಮೈಸೂರು, ಬಾಗಲಕೋಟೆ, ಬೆಳಗಾವಿ ಸೇರಿ ವಿವಿಧ ಕಡೆ ಪ್ರಕರಣ ಬೆಳಕಿಗೆ ಬಂದಿವೆ. ನಮ್ಮ ಆಸ್ಪತ್ರೆಯೊಂದರ ಆವರಣದ ವಸತಿ ಗೃಹದಲ್ಲೇ ಭ್ರೂಣಹತ್ಯೆ ಮಾಡುತ್ತಿದ್ದುದು ಗಮನಕ್ಕೆ ಬಂದಿತ್ತು. ಅವರನ್ನು ರೆಡ್ ಹ್ಯಾಂಡ್ ಆಗಿ…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರು ಆಯ್ಕೆಯಾಗಿದ್ದಾರೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ ಎಂದು ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಕಾರ್ಯಕಾರಣಿ ಸಭೆಯಲ್ಲಿ ನಾನೂ ಕೂಡ ರಾಹುಲ್ ಗಾಂಧಿಯವರೇ ವಿರೋಧ ಪಕ್ಷದ ನಾಯಕರಾಗಲು ಸೂಕ್ತ ಎಂದು ತಿಳಿಸಿದ್ದೆ.ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಎದುರಿಸಲು ರಾಹುಲ್ ಗಾಂಧಿ ಅವರು ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ಕಾರ್ಯಕಾರಿಣಿ ಸಭೆಯಲ್ಲಿ ನಾನು ಕೂಡ ಒತ್ತಾಯ ಮಾಡಿದ್ದೆ ಎಂದರು. ದೇಶದ ಹಿತ ದೃಷ್ಟಿಯಿಂದ ರಾಹುಲ್ ಗಾಂಧಿಯವರು ಲೋಕಸಭೆಯ ವಿರೋಧ ಪಕ್ಷದ ನಾಯಕರು ಆಗಿರುವುದು ಒಳ್ಳೆಯದು.ಹಾಗಾಗಿ ನಾನು ರಾಹುಲ್ ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು : ಬಾರ್ ನಲ್ಲಿ ಕುಡಿಯುತ್ತಿದ್ದ ವೇಳೆ ಕೇವಲ ಗುರಾಯಿಸಿದ್ದಕ್ಕೆ ವ್ಯಕ್ತಿಯ ಮೇಲೆ ನಾಲ್ಕು ಜನ ದುಷ್ಕರ್ಮಿಗಳು ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಹರ್ಷ (33) ಎಂದು ಹೇಳಲಾಗುತ್ತಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಗುಲ್ಬರ್ಗ ಮೂಲದ ಹರ್ಷ ಬಾರೋಂದಕ್ಕೆ ಕುಡಿಯಲು ಬಂದಾಗ ಈ ದುರ್ಘಟನೆ ನಡೆದಿದೆ, ಇಂದು ಸಂಜೆ 7 ಗಂಟೆಗೆ ಸುಮಾರಿಗೆ ಮೃತ ಹರ್ಷ ಕುಡಿಯಲು ಕಲ್ಕೆರೆ ಗೇಟ್ ನಲ್ಲಿರುವ SKR ಬಾರ್ಗೆ ಹೋಗಿದ್ದಾನೆ, ಕುಡಿಯುತ್ತಾ ಪಕ್ಕದ ಟೇಬಲ್ ಜೋರಾಗಿ ಮಾತಾನಾಡುತ್ತಿದ್ದವರ ಕಡೇಗೆ ತಿರುಗಿ ನೋಡಿದ್ದಾನೆ. ಕುಡಿದ ಮತ್ತಿನಲ್ಲಿ ಯುವಕರು ಏನೋ ಗುರಾಯಿಸ್ತಾ ಇದೀಯಾ ಎಂದು ಜಗಳ ಆರಂಭಿಸಿದ್ದಾರೆ. ಅದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿ ಬಿಯರ್ ಬಾಟಲ್ ನಿಂದ ತಲೆಗೆ ಹೊಡೆದು ನಂತರ ಹೊಟ್ಟೆಗೆ ಚುಚ್ಚಿದ್ದಾರೆ ಹೊಡೆತ ತಿಂದ ಹರ್ಷ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ…
ಬೆಂಗಳೂರು : ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗ ಡಗಳ ಅಭಿವೃದ್ಧಿ ನಿಗಮದ 187 ಕೋಟಿ ರು. ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರು ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ.ಈ ಒಂದು ಹಗರಣದಲ್ಲಿ ಸಚಿವರ ಹೆಸರು ಬರಬಾರದೆಂದು ನಾಗೇಂದ್ರ ಅವರ ಆಪ್ತರು ನನಗೆ ಧಮ್ಕಿ ಹಾಕಿದ್ದಾರೆಂದು ಆರೋಪಿ ಸತ್ಯ ನಾರಾಯಣ ವರ್ಮಾ ಕೋರ್ಟ್ ಮುಂದೆ ಹೇಳಿಕೆ ನೀಡಿದ್ದಾನೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣ ಅವ್ಯವಹಾರ ಆಗಿರುವ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಈಗ ಹೈದರಾಬಾದ್ ಮೂಲದ ಆರೋಪಿಯೊಬ್ಬನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ತನ್ನ ಹೈದರಾಬಾದ್ ಮನೆಗೇ ಬಂದು ನಾಗೇಂದ್ರ ಕಡೆಯವರು ಹಗರಣದಲ್ಲಿ ಸಚಿವರ ಹೆಸರು ಹೊರಬರದಂತೆ ನೋಡಿಕೊಳ್ಳಬೇಕೆಂದು ಬೆದರಿಸಿದ್ದರು ಎಂದು ಆರೋಪಿ ಸತ್ಯ ನಾರಾಯಣ ವರ್ಮಾ ಕೋರ್ಟ್ ಮುಂದೆ ಹೇಳಿಕೆ ನೀಡಿದ್ದಾನೆ. ನಾನು ಬಂಧನಕ್ಕೆ ಒಳಗಾಗುವ ಮುನ್ನ ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತರು ಹೈದರಾಬಾದ್ನ ನನ್ನ ಮನೆಗೆ ಬಂದಿದ್ದರು. ಹಗರಣದಲ್ಲಿ…
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಂದು ಸಿಐಡಿ ಪೊಲೀಸರು ಆರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ. ತಮ್ಮ ಮನೆಗೆ ಸಹಾಯ ಕೋರಿ ತಾಯಿ ಜತೆ ಬಂದಿದ್ದಾಗ 17 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪನವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ CID ಪೊಲೀಸರು, ನ್ಯಾಯಾಲಯಕ್ಕೆ ಯಡಿಯೂರಪ್ಪನವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಮುಂದಾಗಿದ್ದಾರೆ. ದೂರು ನೀಡಿದ ಸಂತ್ರಸ್ತೆ ಇದೀಗ ಸಾವನ್ನಪ್ಪಿದ್ದು ಆಕೆಯ ಸಹೋದರ ಈಗ ಬಿಎಸ್ ಯಡಿಯೂರಪ್ಪ ವಿರುದ್ಧ ಕಾನೂನು ಹೋರಾಟ ಮಾಡುತ್ತಿದ್ದು, ಹೀಗಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು : ಹೊರ ರಾಜ್ಯದಿಂದ ರಾಜಧಾನಿ ಬೆಂಗಳೂರಿಗೆ ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ರೈಲ್ವೆ ಹೊರ ಗುತ್ತಿಗೆ ನೌಕರನೊಬ್ಬನನ್ನು ಬೈಯಪ್ಪನಹಳ್ಳಿ ರೈಲ್ವೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರೈಲ್ವೆ ಹೊರಗುತ್ತಿಗೆ ನೌಕರ ದೀಪಸ್ ದಾಸ್ ಎಂದ್ ಹೇಳಲಾಗುತ್ತಿದ್ದು, ಆರೋಪಿಯಿಂದ 32 ಲಕ್ಷ ರು ಮೌಲ್ಯದ 32.8 ಕೆಜಿ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ.ಬೆಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ಬೆಡ್ ರೋಲರ್ ಆಗಿದ್ದ. ಆ ರೈಲಿನ ಸಿಬ್ಬಂದಿ ಬೋಗಿಯ ಬೆಡ್ ಶೀಟ್ಗಳಡಿ ಗಾಂಜಾ ತುಂಬಿದ್ದ ಕಿಟ್ ಬ್ಯಾಗನ್ನು ಇಟ್ಟುಕೊಂಡು ತ್ರಿಪುರಾ ದಿಂದ ಬೆಂಗಳೂರಿಗೆ ತಂದಿದ್ದ. ತ್ರಿಪುರಾದ ಆಗರ್ತಲಾದಿಂದ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೆ ಟರ್ಮಿನಲ್ಗೆ ಬಂದ ರೈಲ್ವೆನಲ್ಲಿ ಗಾಂಜಾ ಸಾಗಿಸುವ ಬಗ್ಗೆ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಆರೋಪಿಬಂಧಿತನಾಗಿದ್ದಾನೆ ಎಂದು ರೈಲ್ವೆ ಎಸ್ಪಿ ಡಾ.ಎಸ್.ಕೆ.ಸೌಮ್ಯಲತಾ ತಿಳಿಸಿದ್ದಾರೆ. ಕಳೆದೊಂದು ವರ್ಷದಿಂದ ಗುತ್ತಿಗೆ ಆಧಾರದಡಿ ಡಿ ರೈಲ್ವೆ ಇಲಾಖೆಯಲ್ಲಿ ಕೆಲಸಮಾಡುತ್ತಿದ್ದ. ತ್ರಿಪುರಾದಲ್ಲಿ ಆತನಿಗೆ ಸುಮನ್ ಗಾಂಜಾ ಕೊಟ್ಟಿದ್ದು, ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾ ಣದಲ್ಲಿ ಬಿಸ್ವಜಿತ್ಗೆ ಗಾಂಜಾವನ್ನು ಆತ ತಲುಪಿಸಬೇಕಿತ್ತು. ಈ…
ನವದೆಹಲಿ : ಮಾಜಿ ಉಪ ಪ್ರಧಾನಿ ಹಾಗೂ ಭಾರತ ರತ್ನ ಪುರಸ್ಕೃತ , ಬಿಜೆಪಿಯ ಹಿರಿಯ ನಾಯಕರಾಗಿರುವ ಎಲ್ ಕೆ ಅಡ್ವಾಣಿ ಅವರು ವಯೋಸಹಜ ಕಾಯಿಲೆ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಉಪ ಪ್ರಧಾನಿ ಹಾಗೂ ಭಾರತ ರತ್ನ ಪುರಸ್ಕೃತ ಎಲ್ ಕೆ ಅಡ್ವಾಣಿ ಅವರು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅವರಿಗೆ ವಯೋ ಸಹಜ ಸಮಸ್ಯೆ ಹಿನ್ನೆಲೆಯಲ್ಲಿ ಅವರು ಇದೀಗ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು ಅಶ್ಲೀಲ ವಿಡಿಯೋ ಹಂಚಿದ್ದು ಯಾರೆಂದು ಗೊತ್ತಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಅಶ್ಲೀಲ ವಿಡಿಯೋ ಹಂಚಿದ್ದು ಯಾರು ಅಂತ ನಮಗೆ ಮಾಹಿತಿ ಇದೆ. ಸಾರ್ವಜನಿಕವಾಗಿ ಅನೇಕ ವಿಚಾರಗಳನ್ನು ಹಂಚಿಕೊಳ್ಳಲು ಆಗುವುದಿಲ್ಲ. ತನಿಖೆ ಮುಗಿದ ಬಳಿಕ ಸಾರ್ವಜನಿಕರಿಗೆ ಮಾಹಿತಿ ಗೊತ್ತಾಗುತ್ತದೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದರು.
ಮೈಸೂರು : ಬಡವರಿಗಾಗಿ ತಂದಿರುವಂತಹ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲು ಗ್ಯಾರಂಟಿಗಳೆ ಕಾರಣ. ಗ್ಯಾರಂಟಿ ಯೋಜನೆಗಳಿಂದಲೇ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಕಾರಣವಾಯಿತು. ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷೆ ಮಾಡಿದಷ್ಟು ಸ್ಥಾನ ಸಿಗಲಿಲ್ಲ. ಆದರೂ ರಾಜ್ಯದಲ್ಲಿ ನಾವು 9 ಸ್ಥಾನವನ್ನು ಗೆದ್ದಿದ್ದೇವೆ ಎಂದರು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ನನ್ನ ತಂದೆಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೆ. ವರುಣ ಕ್ಷೇತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ಬಿಟ್ಟು ಕೊಟ್ಟಿದ್ದೆ.ಹೀಗಾಗಿ ಪಕ್ಷದ ವರಿಷ್ಠರು ಹಿರಿಯರು ನನ್ನನ್ನು ಎಂಎಲ್ಸಿ ಮಾಡಿದ್ದಾರೆ.ಪಕ್ಷವು ಏನೇ ಜವಾಬ್ದಾರಿ ನೀಡಿದರು ನಿಭಾಯಿಸುತ್ತೇನೆ.ಕಾಂಗ್ರೆಸ್ ಪಕ್ಷ ಬಲವರ್ಧನೆಗೆ ಶ್ರಮಿಸುತ್ತೇನೆ ಎಂದು ಮೈಸೂರಿನಲ್ಲಿ ಎಂಎಲ್ಸಿ ಡಾಕ್ಟರ್ ಯತೆಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು.