Author: kannadanewsnow05

ಹಾಸನ : ಮದ್ಯದ ಅಮಲಿನಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿ ಒಬ್ಬರು ಚರಂಡಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಗೆ ತೆರಳುವಾಗ ಚರಂಡಿಗೆ ಬಿದ್ದು ಓಂಕಾರ (40) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸಂಪೂರ್ಣ ಕೊಳಚೆಯಿಂದ ತುಂಬಿದ್ದ ಚರಂಡಿಗೆ ಬಿದ್ದು ಓಂಕಾರ್ ಸಾವನ್ನಪ್ಪಿದ್ದಾರೆ. ಚರಂಡಿಯನ್ನು ಸ್ವಚ್ಛ ಮಾಡದ ಗ್ರಾಮ ಪಂಚಾಯತಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಅ ಘಟನೆ ಕುರಿತಂತೆ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾವೇರಿ : ರಾಜ್ಯ ರಾಜಕಾರಣದಲ್ಲಿ ಸದ್ಯ ಸಿಎಂ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕೂಗು ಕೇಳಿ ಬರುತ್ತಿದ್ದು, ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವುದೇ ರೀತಿಯಾದಂತಹ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಅವರು ನನಗೂ ಸಿಎಂ ಆಗುವ ಆಸೆ ಇದೆ ಹಾಗೂ ಕೆಪಿಸಿಸಿ ಅಧ್ಯಕ್ಷ ಇದೆ ಆದರೆ ಹೈಕಮಾಂಡ್ ತೀರ್ಮಾನ ಅಂತಿಮ ಆಗಿರುತ್ತದೆ ಎಂದು ತಿಳಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನಗೂ ಸಿಎಂ ಆಗಲು ಹಾಗೂ ಕೆಪಿಸಿಸಿ ಅಧ್ಯಕ್ಷನಾಗಲು ಆಸೆ ಇದೆ. ಆದರೆ ಅಂತಿಮವಾಗಿ ಪಕ್ಷ ತೀರ್ಮಾನ ಮಾಡುತ್ತದೆ. ಹಿಂದೆ ಸಿಎಂ ಆಗುತ್ತಾರೆ ಅಂತ ನನ್ನ ಹೆಸರು ಓಡಾಡುತ್ತಿತ್ತು. ಈಗ ಅಧ್ಯಕ್ಷ ಆಗುತ್ತಾರೆ ಅಂತ ನನ್ನ ಹೆಸರು ಓಡಾಡುತ್ತಿದೆ. ಎಷ್ಟೇ ಹೆಸರು ಓಡಾಡಿದರು ಸಹ ನಮ್ಮ ಉತ್ಸಾಹ ಅಷ್ಟೇ. ಇದಕ್ಕೆಲ್ಲ ಆದರೆ ಪಕ್ಷದ ತೀರ್ಮಾನ ಅಂತಿಮವಾಗಿರುತ್ತದೆ. ನಾವೆಲ್ಲರೂ ಕಾದು ನೋಡಬೇಕು ಅಷ್ಟೇ.…

Read More

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 50:50 ಅನುಪಾತದಲ್ಲಿ ಹಗರಣ ನಡೆದಿದೆ.ಮೇಲ್ನೋಟಕ್ಕೆ ಹಗರಣ ನಡೆದಿದೆ ಎಂದು ಹೇಳುತ್ತಿದ್ದೂ, ಹಾಗಾಗಿ ತನಿಖೆಯಿಂದ ಎಲ್ಲವೂ ಹೊರಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ 50:50 ಅನುಪಾತದಲ್ಲಿ ಹಗರಣ ಆಗಿದೆ. ಇದನ್ನು ನಾನು ಒಪ್ಪಿಕೊಳ್ಳುತ್ತೇನೆ. ಮೇಲ್ನೋಟಕ್ಕೆ ಹಗರಣದ ಆಗಿದೆ ಎಂದು ಎಲ್ಲರೂ ಮಾತನಾಡುತ್ತಿದ್ದಾರೆ. ತನಿಖೆಯಿಂದ ಎಲ್ಲವೂ ಹೊರಬರಲಿದೆ. ಇನ್ನೂ ನನ್ನ ತಂದೆ, ತಾಯಿ, ಮಾವನ ವಿರುದ್ಧ ಕಾನೂನುಬಾಹಿರವಾಗಿ ಬದಲಿ ಭೂಮಿ ಪಡೆದ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ. ಇದು ತನಿಖಾ ಸಂಸ್ಥೆಗೂ ಸಹ ಗೊತ್ತಿದೆ. ಇಡಿಯಿಂದ ಮುಡಾ ಕ್ಲೀನ್ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಮುಡಾವನ್ನು ಕ್ಲೀನ್ ಮಾಡಲು ಆಯೋಗ ರಚನೆ ಮಾಡಿದ್ದೇವೆ. ಮುಡಾವನ್ನು ಖಂಡಿತ ನಾವೇ ಕ್ಲೀನ್ ಮಾಡುತ್ತೇವೆ. ಸಿಎಂ ವರ್ಚಸ್ಸಿಗೆ ಧಕ್ಕೆ ತಂದು ಅಧಿಕಾರಕ್ಕೆ ಬರುವುದೇ ಬಿಜೆಪಿಯ ಮುಖ್ಯ ಗುರಿ. ಅದಕ್ಕಾಗಿ ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವವನ್ನು…

Read More

ತುಮಕೂರು: ತುಮಕೂರಿನ ಪ್ರಾದೇಶಿಕ ಸಾರಿಗೆ ಕಚೇರಿ ಮೇಲೆ ಅಕ್ರಮವಾಗಿ ನೊಂದಣಿ ಪ್ರಕ್ರಿಯೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬುಧವಾರ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಗುರುವಾರವೂ ತನಿಖೆಯನ್ನು ಮುಂದುವರೆಸಿದ್ದು, ದಾಖಲೆಗಳ ತಪಾಸಣೆ ನಡೆಸುತ್ತಿದ್ದಾರೆ.ಈ ವೇಳೆ ಆರ್ ಟಿ ಓ ಕಚೇರಿಯಲ್ಲಿ ಅಕ್ರಮ ನೋಂದಣಿ ಪ್ರಕ್ರಿಯೆಯಿಂದ ಸರ್ಕಾರಕ್ಕೆ ಸುಮಾರು 300 ಕೋಟಿ ರೂಪಾಯಿ ತೆರಿಗೆ ನಷ್ಟವಾಗಿದೆ ಎಂಬುದು ಬೆಳಕಿಗೆ ಬಂದಿದೆ. ಹೌದು ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನೋಂದಣಿಯಾಗಿರುವ ಸುಮಾರು 6 ಸಾವಿರಕ್ಕೂ ಹೆಚ್ಚಿನ ಟ್ರ್ಯಾಕ್ಟರ್‌ಗಳಲ್ಲಿ 2,500 ಕೃಷಿ ದೃಢೀಕರಣ ಪತ್ರ (ಬೋನಾಫೈಡ್) ನೀಡಿ ಮಧ್ಯವರ್ತಿಯೊಬ್ಬ ಟ್ರ್ಯಾಕ್ಟರ್ ಗಳನ್ನು ನೋಂದಣಿ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.ಸಾರಿಗೆ ಅಧಿಕಾರಿಗಳು ಹಾಗೂ ಮಧ್ಯವರ್ತಿಯಿಂದ ನಡೆದಿರುವ ಈ ಅಕ್ರಮದಲ್ಲಿ ಸರ್ಕಾರಕ್ಕೆ 300 ಕೋಟಿಗೂ ಹೆಚ್ಚು ತೆರಿಗೆ ನಷ್ಟವಾಗಿದೆ ಎನ್ನಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ನಕಲಿ ಕೃಷಿ ದೃಢೀಕರಣ ಪತ್ರ ನೀಡಿ ನೋಂದಣಿ ಮಾಡಿಸಿರುವ ಕಡತಗಳ ಬೆನ್ನತ್ತಿದ್ದಾರೆ. 2,500 ಟ್ರ್ಯಾಕ್ಟರ್, 500ಕ್ಕೂ ಹೆಚ್ಚು ಜೆಸಿಬಿಗಳನ್ನು ನಕಲಿ ಕೃಷಿ ದೃಢೀಕರಣ ಪತ್ರವನ್ನು…

Read More

ಬೆಂಗಳೂರು : ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು, ಸಾರ್ವಜನಿಕರ ಯಾವುದೇ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಡುತ್ತಾರೆ ಎನ್ನುವುದು ತಿಳಿದಿರುವ ಸಂಗತಿ. ಆದರೆ ಇದೀಗ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲೂ ಕೂಡ ಅಲ್ಲಿನ ಕೆಲ ಡಿ ಗ್ರೂಪ್ ಸಿಬ್ಬಂದಿಗಳು ಸೇರಿದಂತೆ ಹಲವರು ರೋಗಿಗಳ ಸಂಬಂಧಿಕರ ಬಳಿ ಲಂಚಕ್ಕೆ ಬೇಡಿಕೆ ಇಡುತ್ತಾರೆ ಎನ್ನುವ ದೂರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ಆಸ್ಪತ್ರೆಯ ಮೇಲೆ ದಾಳಿ ಮಾಡಿದ್ದಾರೆ. ಹೌದು ಕೆ ಸಿ ಜನರಲ್ ಆಸ್ಪತ್ರೆಯ ವಿರುದ್ಧ ಲೋಕಾಯುಕ್ತಕ್ಕೆ ಸಾರ್ವಜನಿಕರು ದೂರು ನೀಡಿದ ಹಿನ್ನೆಲೆ ಇದೀಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ಕೆ ಸಿ ಜನರಲ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ನೇತೃತ್ವದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹೆರಿಗೆ ವಾರ್ಡ್ ನಲ್ಲಿ ಇದ್ದಂತಹ ಮಂಜುಳಾ ಎಂಬ ಮಹಿಳೆಯೊಬ್ಬರು ಕಳೆದ ತಿಂಗಳು ನಮ್ಮ ಮಗಳನ್ನು ಹೆರಿಗೆಗೆ ಅಂತ ಕರೆದುಕೊಂಡು ಬಂದಿದ್ದೇವೆ.…

Read More

ಬೆಂಗಳೂರು : ನಾಳೆ ರೋಮ್ ನಗರದ ವ್ಯಾಟಿಕನ್ ಸಿಟಿಯಲ್ಲಿ ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಈ ಒಂದು ಕಾರ್ಯಕ್ರಮದಲ್ಲಿ ಕರ್ನಾಟಕದ ವಿಧಾನಸಭೆಯ ಸ್ಪೀಕರ್ ಆಗಿರುವಂತಹ ಯುಟಿ ಖಾದರ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗಿಯಾಗಿ ಭಾಷಣ ಮಾಡಲಿದ್ದಾರೆ. ನವೆಂಬರ್ 30ರಂದು ಅಂದರೆ ನಾಳೆ ಅಂತರಾಷ್ಟ್ರೀಯ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು ರೋಮ್ ನ ವ್ಯಾಟಿಕನ್ ಸಿಟಿಯಲ್ಲಿ ಈ ಒಂದು ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮ ನಡೆಯಲಿದೆ. ಸರ್ವಧರ್ಮ ಸಮ್ಮೇಳನದ ಅತಿಥಿಯಾಗಿ ಸ್ಪೀಕರ್ ಯು ಟಿ ಖಾದರ್ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಯು ಟಿ ಖಾದರ್ ಭಾಷಣ ಮಾಡಲಿದ್ದಾರೆ. ಮಾನವೀಯತೆಗಾಗಿ ಧರ್ಮಗಳ ಬಗ್ಗಟ್ಟು ಎಂಬ ವಿಷಯದಲ್ಲಿ ಭಾಷಣ ಮಾಡಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡಲಿದ್ದಾರೆ ಈ ವೇಳೆ ಖಾದರ್ ಅವರು ಕ್ರೈಸ್ತ ಧರ್ಮ ಗುರುಗಳಾದಂತಹ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಲಿದ್ದಾರೆ.

Read More

ತುಮಕೂರು : ಇತ್ತೀಚಿಗೆ ಕಾಂಗ್ರೆಸ್ ಶಾಸಕ ಗವಿಯಪ್ಪ ಗ್ಯಾರಂಟಿಗಳಲ್ಲಿ ಯಾವುದಾದರೂ ಎರಡು ಯೋಜನೆಗಳನ್ನು ನಿಲ್ಲಿಸಿ, ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡಿ ಎಂದು ಹೇಳಿಕೆ ನೀಡಿದ್ದರು. ಇದೀಗ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಶಾಸಕರಿಗೆ 25 ಕೋಟಿ ಹಾಗೂ ವಿಪಕ್ಷಗಳ ಶಾಸಕರಿಗೆ 10 ರಿಂದ 15 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ತುಮಕೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ಕೆಲ ಶಾಸಕರಿಗೆ ಅನುದಾನವೇ ಕೊಡುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ವಿಪಕ್ಷ ಶಾಸಕರಿಗೆ 10 ರಿಂದ 15 ಕೋಟಿ ಹಣ ಕೊಡುತ್ತೇವೆ. ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ಆತಂಕ ಬೇಡ ಅನುದಾನ ಕೊಡುತ್ತೇವೆ ನಾನು ಮತ್ತು ಕೆ.ಎನ್ ರಾಜಣ್ಣ ಈ ಒಂದು ಜವಾಬ್ದಾರಿ ತೆಗೆದುಕೊಳ್ಳುತ್ತೇವೆ. ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಆದಾಗ ಮಾತ್ರ ರಾಜ್ಯದ ಅಭಿವೃದ್ಧಿ ಆಗಲಿದೆ. ಬಿಜೆಪಿ ಜೆಡಿಎಸ್ ಶಾಸಕರು ಸಿಎಂ ಗೆ ಕಪ್ಪು ಬಾವುಟ ತೋರಿಸುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷದ…

Read More

ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಂದು ಬೆಳ್ಳಂ ಬೆಳಿಗ್ಗೆ ಇಡಿ ಶಾಕ್ ನೀಡಿದ್ದು, ಅಶ್ಲೀಲ ಚಿತ್ರಗಳ ವಿತರಣೆ ಆರೋಪ ಪ್ರಕರಣಕ್ಕೇ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಅವರ ನಿವಾಸದ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹೌದು ಅಶ್ಲೀಲ ಜಾಲಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ಉದ್ಯಮಿ ರಾಜ್ ಕುಂದ್ರಾ, ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಅವರ ನಿವಾಸ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಇಂದು ದಾಳಿ ನಡೆಸಿತು. ಅಧಿಕಾರಿಗಳ ಪ್ರಕಾರ ಕುಂದ್ರಾ ಅವರ ಸಹಚರರ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಅಶ್ಲೀಲ ಚಿತ್ರಗಳನ್ನು ನಿರ್ಮಿಸಿದ ಆರೋಪದ ಮೇಲೆ ಕುಂದ್ರಾ ಅವರನ್ನು ಜೂನ್ 2021 ರಲ್ಲಿ ಬಂಧಿಸಲಾಯಿತು. ಎರಡು ತಿಂಗಳು ಜೈಲಿನಲ್ಲಿ ಕಳೆದ ನಂತರ ಅವರಿಗೆ ಸೆಪ್ಟೆಂಬರ್ 2021 ರಲ್ಲಿ ಜಾಮೀನು ನೀಡಲಾಯಿತು. ಇದೀಗ ಇಡಿ ಅಧಿಕಾರಿಗಳು ಮತ್ತೆ ದಾಳಿ ಮಾಡಿದ್ದು ಹಲವು ದಾಖಲೆಗಳನ್ನು…

Read More

ಬೆಂಗಳೂರು : ಉಪ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಹರಕು ಬಾಯಿ ಕಾರಣ. ಹಾಗಾಗಿ ಶಾಸಕ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಮಾಜಿ ಶಾಸಕರು ಕುರುಡುಮಲೆಯ ವಿನಾಯಕನ ದರ್ಶನ ಪಡೆಯುತ್ತೇವೆ. ಪಕ್ಷದ ಕಾರ್ಯಕರ್ತರು ಮುಖಂಡರಿಗೆ ವಿಶ್ವಾಸ ಹೆಚ್ಚಿಸಲು ಪ್ರವಾಸ ಕೈಗೊಳ್ಳಲಾಗಿದೆ. ರಾಜ್ಯದ ಬಿಜೆಪಿಯಲ್ಲಿ ಕೆಲವರು ಗೊಂದಲವನ್ನು ಸೃಷ್ಟಿ ಮಾಡುತ್ತಿದ್ದಾರೆ. ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದರು. ನಿನ್ನೆ ಮೊನ್ನೆ ಬಂದು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಸ್ವಯಂ ಘೋಷಿತವಾಗಿ ಯತ್ನಾಳ್ ಅವರು ಹಿಂದೂ ಹುಲಿ ಎಂದು ಹೇಳುತ್ತಾರೆ. ನಿನ್ನೆ ಮಾಜಿ ಸಿಎಂ ಪ್ರಧಾನಿ ಗೌಡರ ಬಗ್ಗೆ ಏನೇನೋ ಹೇಳಿದ್ದಾರೆ. ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಮಾಡುತ್ತೇವೆ. ಯತ್ನಾಳ್ ಬಣ ಕಾಂಗ್ರೆಸ್ ಏಜೆಂಟರು. ಬೀದಿಯಲ್ಲಿ ತಮಟೆ ಹೊಡೆಯುತ್ತಿದ್ದಾರೆ. ಇದನ್ನು ಸಹಿಸುವುದಿಲ್ಲ ಎಂದರು. ಪ್ರಧಾನಿ ಮೋದಿಗೆ ಸಲಹೆ ಕೊಡುವಷ್ಟು ದೊಡ್ಡವರಾಗಿದ್ದಾರಾ? ವಕ್ಫ್ ವಿರುದ್ಧದ ಹೋರಾಟಕ್ಕಾಗಿ…

Read More

ಶಿವಮೊಗ್ಗ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಾದ ಎಕ್ಸ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ವಿರುದ್ಧ ಇದೀಗ ಶಿವಮೊಗ್ಗ ನಗರದ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಹೌದು ಸಾಮಾಜಿಕ ಜಾಲತಾಣಗಳದ ಎಕ್ಸ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಮೋಹಿತ್ ಎನ್ನುವ ವ್ಯಕ್ತಿ ಸಚಿವ ಮಧು ಬಂಗಾರಪ್ಪ ಅವರ ಬಗ್ಗೆ ಎಕ್ಸ್ ಮತ್ತು ಇನ್‍ಸ್ಟಾಗ್ರಾಂನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದವನ ವಿರುದ್ಧ ವಿನೋಬ ನಗರ ಪೊಲೀಸ್‌ ಠಾಣೆಯ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಸಚಿವ ಮಧು ಬಂಗಾರಪ್ಪರವರ ಹೇಳಿಕೆಯೊಂದನ್ನ ಆಧರಿಸಿ, ಅವರ ವಿರುದ್ದ ವೈಯಕ್ತಿಕ ನಿಂದನೆ ಮಾಡಿ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದರು. ಸಂವಿಧಾನಾತ್ಮಕ ಹುದ್ದೆಯಲ್ಲಿರುವ ವ್ಯಕ್ತಿಯ ಕುರಿತು ಏಕವಚನದಲ್ಲಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಸರ್ಕಾರದ ಘನತೆಗೆ ಧಕ್ಕೆ ತರುವಂತಹ ಹಾಗೂ ಸರ್ಕಾರದ ಯೋಜನೆಯ ವಿರುದ್ಧವಾಗಿ ಸುಳ್ಳು ಮಾಹಿತಿ ಪ್ರಸಾರ ಮಾಡಿ ಸಾರ್ವಜನಿಕರನ್ನು ಸರ್ಕಾರದ ವಿರುದ್ಧ…

Read More