Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ಇತ್ತೀಚಿಗೆ ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ವಿಜಯಪುರದಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆಯಾಗಿದ್ದು, ದುಷ್ಕರ್ಮಿಗಳು ಯುವಕನ ಮೇಲೆ ಮಾರಕಷ್ಟಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರಬರವಾಗಿ ಹತ್ಯೆಗೈದಿರುವ ಘಟನೆ ನಗರದ ಎಪಿಎಂಸಿ ಮೇಕೆ ಹಾಗೂ ಕುರಿ ಮಾರುಕಟ್ಟೆ ಬಳಿ ನಡೆದಿದೆ. ಕೊಲೆಯಾದ ಯುವಕನನ್ನು ರೋಹಿತ್ ವಸಂತ್ ಪವಾರ್ (23) ಎಂದು ತಿಳಿದುಬಂದಿದೆ. ವಿಜಯಪುರ ನಗರದ ಕಂಬಾರ ಓಣಿ ನಿವಾಸಿ ರೋಹಿತ್ನನ್ನು ದುಷ್ಕರ್ಮಿಗಳು ಕೊಲೆಗೈದು ಮುಳ್ಳುಕಂಟಿಯಲ್ಲಿ ಶವ ಬಿಸಾಡಿದ್ದಾರೆ. ಘಟನಾ ಸ್ಥಳದಲ್ಲಿ ಬಿಯರ್ ಬಾಟಲ್ ಹಾಗೂ ಚಿಪ್ಸ್ ಪ್ಯಾಕೆಟ್ ಪತ್ತೆಯಾಗಿದೆ. ಮೃತನ ಪರಿಚಯಸ್ಥರಿಂದಲೇ ಕೊಲೆ ನಡೆದಿರುವ ಶಂಕೆಯನ್ನು ಮೃತನ ಕುಟುಂಬ ಆರೋಪಿಸಿದೆ. ಮೇಲ್ನೋಟಕ್ಕೆ ಇದು ಯುವಕನ ಪರಿಚಯಸ್ಥರಿಂದಲೇ ಈ ಒಂದು ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ.ರೋಹಿತ್ ಕೊಲೆ ಬಗ್ಗೆ ಆತನ ಸ್ನೇಹಿತ ಖಾಲಿದ್ ಇನಾಂದಾರ್ ನಿಮ್ಮ ಮಗನ ಕೊಲೆಯಾಗಿದೆ ಎಂದು ತಿಳಿಸಿದಾಗ ಕುಟುಂಬಸ್ಥರೆಲ್ಲರೂ ಗಾಬರಿಯಾಗಿ ಎಲ್ಲೆಡೆ ರೋಹಿತ್ ಗಾಗಿ ಹುಡುಕಾಡಿದ್ದಾರೆ.ಖಾಲೀದ್ ಮನೆಗೆ ಹೋದರೂ ಖಾಲೀದ್ ಆಗಲಿ…
ವಿಜಯಪುರ : ವಿಜಯಪುರದಲ್ಲಿ ಮಸೀದಿ ಬಳಿ ದಲಿತರ ಸಮುದಾಯ ಭವನ ನಿರ್ಮಾಣ ಮಾಡುವುದಕ್ಕೆ ಮುಸ್ಲಿಂ ಸಮುದಾಯದವರಿಂದ ವಿರೋಧ ವ್ಯಕ್ತವಾಗಿದ್ದು, ಕೆಲಕಾಲ ಎರಡೂ ಸಮುದಾಯದವರ ವಾಗ್ವಾದದಿಂದ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.ವಿಜಯಪುರ ನಗರದ ಇಕ್ಲಾಸಖಾನ್ ಮಸೀದಿ ಬಳಿಯ ಜಾಗದಲ್ಲಿ ದಲಿತ ಸಮುದಾಯದ ಯುವಕರು ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗಿದ್ದರು. ಇದಕ್ಕೆ ಮುಸ್ಲಿಂ ಮುಖಂಡರು ವಿರೋಧ ವ್ಯಕ್ತ ಪಡೆಸಿದ್ದಾರೆ. ವಿಜಯಪುರ ನಗರದಲ್ಲಿ ಸರ್ಕಾರದ ಜಾಗದಲ್ಲಿ ಸಮುದಾಯ ಭವನ ನಿರ್ಮಾಣ ಮಾಡುವುದನ್ನು ತಡೆಯುವುದಕ್ಕೆ ನೀವ್ಯಾರು? ಇಲ್ಲಿ ನಾವು ಸಮುದಾಯ ಭವನ ನಿರ್ಮಿಸುತ್ತೇವೆ ಎಂದು ದಲಿತ ಸಮುದಾಯದ ಮುಖಂಡರು ಹೇಳಿದ್ದಾರೆ. ಮಸೀದಿ ಭಾರತೀಯ ಪುರಾತತ್ವ ಇಲಾಖಾ ವ್ಯಾಪ್ತಿಯ ಸಂರಕ್ಷಿತ ವಲಯದಲ್ಲಿದ್ದು ಇಲ್ಲಿ ಸಮುದಾಯ ಭವನ ನಿರ್ಮಾಣ ಮಾಡದಂತೆ ಮುಸ್ಲಿಂ ಮುಖಂಡರು ವಿರೋಧಿಸಿದ್ದಾರೆ. ಇದರಿಂದಾಗಿ ಎರಡು ಸಮುದಾಯಗಳ ಯುವಕರು ಜಮಾಯಿಸಿ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಆದರೆ, ಮುಸ್ಲಿಂ ಸಮುದಾಯದ ಮುಖಂಡರು ಬಂದು ವಿಜಯಪುರದ ಎಲ್ಲ ಮಸೀದಿಗಳ ಬಳಿಯೂ ಯಾವುದೇ ಕಟ್ಟಡ ನಿರ್ಮಾಣ ಮಾಡಬೇಕೆಂದರೆ ನೀವು ಸರ್ಕಾರದ ಅನುಮತಿ ಮಾತ್ರವಲ್ಲ,…
ಉತ್ತರಕನ್ನಡ : ಇದೆ ಮೇ 15 ರಿಂದ 22ವರೆಗೆ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಉತ್ತರ ಕನ್ನಡ ಡಿಸಿ ಇದೀಗ ಮೀನುಗಾರರಿಗೆ ಸೂಚನೆ ನೀಡಿದ್ದಾರೆ. ಬಂಗಾಳಕೊಲ್ಲಿ ಸಮುದ್ರದಲ್ಲಿ ವಾಯು ಭಾರ ಕುಸಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯಿಂದ ಮೀನುಗಾರರಿಗೆ ಇದೀಗ ಮುನ್ಸೂಚನೆ ನೀಡಲಾಗಿದೆ. ಹಾಗಾಗಿ ಸಮುದ್ರದಲ್ಲಿರುವ ಮೀನುಗಾರರು ದಡ ಸೇರುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾಣಕರ ಆದೇಶ ನೀಡಿದ್ದಾರೆ ಕರಾವಳಿಯಲ್ಲಿ 40 ಕಿ.ಮೀ ನಿಂದ 55 km ವೇಗದಲ್ಲಿ ಗಾಳಿ ಬೀಸಲಿದೆ ಅರಬಿ ಸಮುದ್ರ ಒರಟಾಗಲಿದ್ದು ದುರ್ಘಟನೆ ಸಂಭವಿಸುವ ಸಾಧ್ಯತೆ ಇದೆ ಮೀನುಗಾರಿಕೆಗೆ ಹೋದವರು ತಕ್ಷಣ ದಡ ಸೇರುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಗದಗ : ರಥದ ಚಕ್ರದ ಅಡಿ ಸಿಲುಕಿ ಇಬ್ಬರು ಧಾರಣವಾಗಿ ಸಾವನ್ನಪ್ಪಿರುವಾಗ ಘಟನೆ ರೋಣ ಪಟ್ಟಣದ ಶ್ರೀ ವೀರಭದ್ರೇಶ್ವರ ರಥೋತ್ಸವದ ವೇಳೆ ಈ ಒಂದು ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.ವೀರಭದ್ರೇಶ್ವರ ರಥೋತ್ಸವದ ವೇಳೆ ಈ ಒಂದು ಅವಘಡ ಸಂಭವಿಸಿದೆ. ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಭಕ್ತರು ರಥವನ್ನು ಎಳೆಯುತ್ತಿರುವಾಗ ಉತ್ತತ್ತಿ ಹಾರಿಸುತ್ತಿದ್ದರು. ಈ ವೇಳೆ ಉತ್ತತ್ತಿ ಅರಿಸುವಾಗ ನೂಕು ನುಗ್ಗಲು ಉಂಟಾಗಿದೆ. ಇದೆ ಸಂದರ್ಭದಲ್ಲಿ ಇಬ್ಬರು ರಥದ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದರೆ. ಮೃತ ಪಟ್ಟವರ ಪೈಕಿ ಮಲ್ಲಪ್ಪ (55) ಎಂದು ಗುರುತಿಸಲಾಗಿದ್ದು ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಘಟನೆ ಕುರಿತಂತೆ ರೋಣ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಕನ್ನಡ : ಕ್ರಿಕೆಟ್ ಆಡುವ ವೇಳೆ ಸಿಡಿಲು ಬಡಿದು ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಬನವಾಸಿಯಲ್ಲಿ ನಡೆದಿದೆ. ಹೌದು ಕ್ರಿಕೆಟ್ ಆಡುವಾಗ ಸಿಡಿಲು ಬಿಡುವುದು ಬಾಲಕ ದುರ್ಮರಣ ಹೊಂದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಘಟನೆ ನಡೆದಿದೆ. ಬನವಾಸಿ ಕದಂಬ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುತ್ತಿದ್ದ ವಿದ್ಯಾರ್ಥಿ ಈ ವೇಳೆ ಸಿಡಿಲು ಬಡಿದು ಸಾಜಿದ್ ಶೇಖ್ (16) ಸಾವನ್ನಪ್ಪಿದ್ದಾನೆ. ಘಟನೆ ಕುರಿತಂತೆ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ : ವೇಗವಾಗಿ ಬಂದಂತಹ ಟಿಪ್ಪರ್ ಹಿಂದಿನಿಂದ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೋ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿರುವಾಗ ಘಟನೆ ಕಲ್ಬುರ್ಗಿ ಜಿಲ್ಲೆಯ ಆಫ್ಜಲಪುರ ತಾಲ್ಲೂಕಿನ ಅಳ್ಳಗಿ ಕ್ರಾಸ್ ನಲ್ಲಿ ನಡೆದಿದೆ. ಹೌದು ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಆಫ್ಜಲಪುರ ತಾಲೂಕಿನ ಅಳ್ಳಗಿ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ದೇವಾನಂದ ಘತ್ತರಗಿ (25) ಬಸವರಾಜ ದುರ್ಗಾ (56) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಮೃತರು ಆಫ್ಜಲಪುರ ತಾಲೂಕಿನ ಹೊಸೂರು ಗ್ರಾಮದವರು ಎಂದು ಹೇಳಲಾಗುತ್ತಿದೆ.ಅಪಘಾತದ ನಂತರ ಟಿಪ್ಪರ್ ಸ್ಥಳದಲ್ಲಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.ಸ್ಥಳಕ್ಕೆ ಆಫ್ಜಲ್ಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಘಟನೆ ಕುರಿತಂತೆ ಆಫ್ಜಲ್ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದರು ಆದರೆ ನನ್ನ ಮಗಳನ್ನು ಹತ್ಯೆ ಮಾಡಿದರು. ಮೊದಲು ನನ್ನ ಮಗಳ ಕೊಲೆ ನಡೆಯಿತು. ಬಳಿಕ ಅಂಜಲಿ ಯುವತಿಯ ಕೊಲೆ ನಡೆಯಿತು. ಸಂಚು ರೂಪಿಸಿ ಕೊಲೆ ಮಾಡಿದ್ದಾರೆ ಎಂದು ನೇಹಾ ತಂದೆ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾರ್ಪೋರೇಟರ್ ನಿರಂಜನ್ ಹಿರೇಮಠ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನ್ನ ವಾರ್ಡಿನಲ್ಲಿಯೇ ಒಂದು ತಿಂಗಳಲ್ಲೇ ಎರಡು ಕೊಲೆ ನಡೆದಿದೆ. ಮೊದಲನೆಯದು ನನ್ನ ಮಗಳದ್ದು ಎರಡನೆಯದು ಇದೀಗ ಅಂಜಲಿ ಅಂಬಿಗೇರದ್ದು, ಇವೆರಡು ಕೊಲೆಗಳನ್ನು ಸಂಚು ರೂಪಿಸಿಯೇ ಮಾಡಲಾಗಿದೆ.ಇದರ ಹಿಂದೆ ರಾಜಕೀಯ ಷಡ್ಯಂತರವಿದೆ. ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು. ಕೂಲಿ ಮಾಡಿ ಬದುಕುವ ಜನಾಂಗದ ಯುತಿ ಕೊಲೆ ಮಾಡಿದ್ದಾರೆ. ನನ್ನ ಮಗಳ ಬಲಿ ಪಡೆದಿದ್ದಕ್ಕೆ ಇಡೀ ಜಗತ್ತು ಆಕ್ರೋಶ ವ್ಯಕ್ತ ಪಡಿಸಿದರು. ಅನೇಕ ರಾಜಕೀಯ ನಾಯಕರು ಮನೆ ಬರುವುದನ್ನು ತಪ್ಪಿಸಿದರು. ರೇವಣ್ಣ ಅವರು ಮನೆ ಬರುತ್ತಿದ್ದರು ಅವರನ್ನು…
ಬೆಂಗಳೂರು : ಅಕ್ರಮ ಮಾನವ ಕಳ್ಳ ಸಾಗಾಣಿಕೆ ಕೇಸ್ : ಬಾಂಗ್ಲಾದ ಇಬ್ಬರು ಆರೋಪಿಗಳ ವಿರುದ್ಧ ‘NIA’ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು : ಬಾಂಗ್ಲಾದೇಶದ ಮೂಲಕ ಅಕ್ರಮವಾಗಿ ಭಾರತಕ್ಕೆ ಮಾನವ ಕಳ್ಳ ಸಾಗಣೆ ಮಾಡುತ್ತಿದ್ದ ಬಾಂಗ್ಲಾದೇಶದ ಇಬ್ಬರು ಆರೋಪಿಗಳ ವಿರುದ್ಧ ಇದೀಗ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ತಿಳಿದುಬಂದಿದೆ. ಹೌದು ಬಾಂಗ್ಲಾದೇಶದ ಪ್ರಜೆಗಳಿಂದ ಅಕ್ರಮ ಮಾನವ ಕಳ್ಳ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಇದೀಗ NIA ಪೂರ್ವ ಚಾರ್ಜ್ ಶೀಟ್ ಸಲ್ಲಿಸಿದೆ. ಬಾಂಗ್ಲಾದೇಶ ಮೂಲದ ಮೊಹಮ್ಮದ್ ಸಹಜಲಾಲ್ ಹಲ್ದಾರ್ ಹಾಗೂ ಮೊಹಮ್ಮದ್ ಇದ್ರಿಸ್ ಎನ್ನುವ ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ. ಹತ್ತು ವರ್ಷಗಳ ಹಿಂದೆ ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ಬಂದಿದ್ದರು. ಬೆಂಗಳೂರಿನಲ್ಲಿ ಆರೋಪಿಗಳು ಕಸ ವಿಲೇವಾರಿ ಕೆಲಸ ಮಾಡಿಕೊಂಡಿದ್ದರು. ನಂತರ ತಾವೇ ಸ್ವಂತವಾಗಿ ಕಸ ವಿಲೇವಾರಿ ಘಟಕವನ್ನು ಆರಂಭಿಸಿದ್ದರು. ಇದಕ್ಕಾಗಿ ಮಾರಗೊಂಡನಹಳ್ಳಿ ಹಾಗೂ ಸೀಗೆಹಳ್ಳಿಯಲ್ಲಿ ಜಾಗವನ್ನು ಬಾಡಿಗೆಗೆ ಪಡೆದಿದ್ದರು ಎನ್ನಲಾಗಿದೆ. ಆ ಜಾಗದಲ್ಲಿ ಶೆಡ್ ನಿರ್ಮಿಸಿ ಅಕ್ರಮ ಬಾಂಗ್ಲಾ ವಲಸಿಗರನ್ನು ಇಟ್ಟಿದ್ದರು.ಕೆಲಸದ ಭರವಸೆ ನೀಡಿ ಕಳ್ಳ ಸಾಗಾಣಿಕೆ ಮೂಲಕ ಭಾರತಕ್ಕೆ ಕರೆತರುತ್ತಿದ್ದರು. ಭಾರತ ಬಾಂಗ್ಲಾ ಗಡಿ…
ಮಂಡ್ಯ : ಕಳೆದ ವರ್ಷ ಇಡೀ ದೇಶವೇ ಬೆಚ್ಚಿ ಬೀಳಿಸುವಂತೆ ಮಂಡ್ಯ ಜಿಲ್ಲೆಯಲ್ಲಿ ಭ್ರೂಣಲಿಂಗ ಹತ್ಯೆ ಪ್ರಕರಣ ನಡೆದಿತ್ತು. ಇದೀಗ ಇತ್ತೀಚಿಗೆ ಪಾಂಡವಪುರದಲ್ಲೂ ಕೂಡ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಒಂದು ಘಟನೆ ಕುರಿತಂತೆ ಮಂಡ್ಯ ಸಂಸದ ಅಂಬರೀಶ್ ರವರು ಸರ್ಕಾರದ ವಿರುದ್ಧ ಕಿಡಿ ಕಾರಿಂದು ಭ್ರೂಣಲಿಂಗ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ಅಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಮಂಡ್ಯ ಜಿಲ್ಲೆಯ ಹಲವೆಡೆ ಹಲವು ತಿಂಗಳುಗಳ ಹಿಂದೆಯೇ ಬೆಳಕಿಗೆ ಬಂದ ಭ್ರೂಣಲಿಂಗ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಹಾಗೂ ತಪ್ಪಿತಸ್ಥರನ್ನು ಶಿಕ್ಷಿಸಲು ರಾಜ್ಯ ಸರ್ಕಾರ ವಿಫಲವಾಗಿರುವುದು ವಿಷಾದನೀಯ ಹಾಗೂ ಖಂಡನೀಯ. ಹಲವು ಬಾರಿ ಈ ಕುರಿತು ಜಿಲ್ಲಾ ಆರೋಗ್ಯಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ತಂದು ಎಚ್ಚರಿಸಿದ್ದರೂ ಈ ಬಗ್ಗೆ ಅಸಡ್ಡೆ…
ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜಗೌಡರಿಗೆ ಮತ್ತೆ 2 ದಿನ SIT ಕಸ್ಟಡಿಗೆ ನೀಡಿ ಹಾಸನದ 5 ನೇ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ. ಇಂದು ಹಾಸನದ 5 ನೇ ಸಿವಿಲ್ ಕೋರ್ಟ್ ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಬಿಜೆಪಿ ಮುಖಂಡ ದೇವರಾಜೆಗೌಡಗೆ ಮತ್ತೆ ಎರಡು ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಪೆನ್ ಡ್ರೈವ್ ಕೇಸ್ ನಲ್ಲಿ ದೇವರಾಜೇಗೌಡ ಎಂಟನೇ ಆರೋಪಿಯಾಗಿದ್ದಾರೆ. ಮತ್ತೆ 2 ದಿನ SIT ಕಸ್ಟಡಿಗೆ ನೀಡಿ ಮೇ 20ರ ಸಂಜೆ 5 ಗಂಟೆಗೆ ಕೋರ್ಟಿಗೆ ಹಾಜರುಪಡಿಸುವಂತೆ ಕೋರ್ಟ್ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ದೇವರಾಜೇಗೌಡ ನನ್ನು ಒಂದು ದಿನ ಎಸ್ಐಟಿ ವಶಕ್ಕೆ ಕೋರ್ಟ್ ನೀಡಿತ್ತು. ಇದೀಗ ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ದೇವರಾಜೆಗೌಡನನ್ನು ಕೋರ್ಟಿಗೆ…