Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಹಾಗೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಎಸ್ಐಟಿ ವಶದಲ್ಲಿರುವ ಬಿಜೆಪಿ ಮುಖಂಡ ದೇವರಾಜೇಗೌಡ ನಿನ್ನೆ ಡಿಕೆ ಶಿವಕುಮಾರ್ ವಿರುದ್ಧ 100 ಕೋಟಿ ರೂಪಾಯಿ ಆಫರ್ ಆರೋಪ ಮಾಡಿದ್ದರು. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ದೇವರಾಜೇಗೌಡ ಒಬ್ಬ ತಲೆ ಕೆಟ್ಟವನು ಆತನನ್ನು ಆಸ್ಪತ್ರೆಗೆ ಸೇರಿಸಬೇಕಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಾಜ್ ಗೌಡ ಏನು ಬೇಕಾದರೂ ಮಾತನಾಡಿಕೊಳ್ಳಲಿ. ದೇವರಾಜೇಗೌಡ ತಲೆ ಕೆಟ್ಟವನು ಆತನನ್ನು ಆಸ್ಪತ್ರೆಗೆ ಸೇರಿಸಬೇಕು. ನಾನು ದೇವರಾಜೇಗೌಡ ಜೊತೆಗೆ ಯಾವುದೇ ಮಾತುಕತೆ ನಡೆಸಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಯಾವುದೇ ವಿಷಯಕ್ಕೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ನಿನ್ನೆ ಪೊಲೀಸ್ ವಾಹನದಲ್ಲಿ ಕುಳಿತುಕೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ, ನರೇಂದ್ರ ಮೋದಿ ಬಿಜೆಪಿ ಹಾಗೂ ಎಚ್…
ಹುಬ್ಬಳ್ಳಿ : ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಸುಕಿನ ಜಾವದಲ್ಲಿ ಅಂಜಲಿ ಅಂಬೀಗೆರ ಎನ್ನುವ ಯುವತಿಯನ್ನು ಪ್ರೀತಿ ನಿರಾಕರಣೆ ಮಾಡಿದ್ದಕ್ಕಾಗಿ ವಿಶ್ವ ಅಲಿಯಾಸ್ ಗಿರೀಶ್ ಸಾವಂತ್ ಎನ್ನುವ ಯುವಕ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದ. ಇದೀಗ ಆರೋಪಿಯಾಗಿರುವ ವಿಶ್ವ ಅವರ ತಾಯಿ ಶ್ವೇತಾ ಹೇಳಿಕೆ ನೀಡಿದ್ದು, ಅಂತಹ ಮಗ ನನಗೆ ಬೇಕಿಲ್ಲ. ನಾನು ಅವನನ್ನು ನೋಡಲು ಎಲ್ಲಿಯೂ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಆರೋಪಿಯ ವಿಶ್ವ ತಾಯಿ ಶ್ವೇತಾ ಹೇಳಿಕೆ ನೀಡಿದ್ದು, ನನಗೆ ಇವನೊಬ್ಬನೆ ಮಗ ಏನು ಕೆಲಸ ಮಾಡುತ್ತಿದ್ದನು ಗೊತ್ತಿಲ್ಲ. ನ್ಯಾಯಾಲಯ ಅವನಿಗೆ ಏನೂ ಶಿಕ್ಷೆ ಕೊಡುತ್ತದೆಯೋ ಕೊಡಲಿ ಎಂದು ತಿಳಿಸಿದರು. ನನ್ನ ಮಗ ವಿಶ್ವ ಮಾಡಿದ ತಪ್ಪಿಗೆ ನಾವೆಲ್ಲ ಶಿಕ್ಷೆ ಅನುಭವಿಸುತ್ತಿದ್ದೇವೆ. ಮೊದಲು ವಿಶ್ವ ಚೆನ್ನಾಗಿದ್ದ ನಾಲ್ಕು ವರ್ಷದ ನಂತರ ಹೀಗೆ ಆಗಿದ್ದಾನೆ. ಅಂತಹ ಮಗ ನನಗೆ ಬೇಡ ಅವನನ್ನು ನೋಡಲು ಹೋಗುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಆರೋಪಿ ವಿಶ್ವತಾಯಿ…
ಗದಗ : ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಪ್ರಮುಖ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿತ್ತು. ಈಗಾಗಲೇ ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ರಾಜ್ಯವನ್ನು ದಿವಾಳಿ ಮಾಡಿದೆ. ಇದೀಗ ಹೊಸ ಘೋಷಣೆಯೊಂದಿಗೆ ಇಡೀ ದೇಶವನ್ನು ದಿವಾಳಿ ಮಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಗದಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ರಾಹುಲ್ ಗಾಂಧಿ ಹಾಗೂ ಕೇಜ್ರಿವಾಲ್ ಅನಗತ್ಯವಾಗಿ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ದೇಶದ ಜನರನ್ನು ಹಾದಿ ತಪ್ಪಿಸುತ್ತಿದ್ದಾರೆ. ಇನ್ನೊಂದೆಡೆ ಸಂವಿಧಾನ ತೆಗೆದು ಹಾಕುತ್ತಾರೆ ಎನ್ನುವ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ದೇಶದಲ್ಲಿ ಯಾವಾಗೆಲ್ಲ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆಯೋ ಆಗಲೇ ಸಂವಿಧಾನ ತಿದ್ದುಪಡಿಯಾಗಿದೆ ಎಂದು ಹೇಳಿದರು. ಸಂವಿಧಾನಕ್ಕೆ ಹೆಚ್ಚು ಬಾರಿ ತಿದ್ದುಪಡಿ ತಂದಿದ್ದು ಯಾರು? ದೇಶದ ಜನತೆಯ ಮೇಲೆ ಎಮರ್ಜೆನ್ಸಿ ಹೇರಿದ್ದು ಯಾರು? ವ್ಯಕ್ತಿ, ಮಾಧ್ಯಮ ಸ್ವಾತಂತ್ರ್ಯ ಹರಣ ಮಾಡಿದ್ದು, ದೇಶದಲ್ಲಿ ಸರ್ವಾಧಿಕಾರಿ ಆಡಳಿತ ನಡೆಸಿದ್ದು ಯಾರು?…
ಬೆಂಗಳೂರು : ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ ಪೈಕಿ 1 ಕ್ಷೇತ್ರ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ವಿಧಾನಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ. ಇದೀಗ 6 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಿಸಿದೆ. ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಪರಿಷತ್ ವಿಪಕ್ಷ ಮುಖ್ಯ ಸಚೇತಕ ರವಿಕುಮಾರ್, ನೈರುತ್ಯ ಪದವೀಧರ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸುನಿಲ್ ಕುಮಾರ್ ಉಸ್ತುವಾರಿಯನ್ನಾಗಿ ಹಾಗೂ ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಸಹ ಉಸ್ತುವಾರಿಯನ್ನಾಗಿ ನೇಮಿಸಿದೆ. ಅದೇ ರೀತಿ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಜ್ಯ ಮುಖ್ಯ ವಕ್ತಾರ ಅಶ್ವತ್ ನಾರಾಯಣ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಕೆ ಎಸ್ ನವೀನ್ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಉಪಾಧ್ಯಕ್ಷ ಎಂ ರಾಜೇಂದ್ರ ಅವರನ್ನು ಬಿಜೆಪಿ ನೇಮಕ ಮಾಡಿದೆ. ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ್ ಪಾಟೀಲ್, ಪರಿಷತ್‌ನ ನೈಋತ್ಯ…
ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಜೆಪಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೆಸರು ಕೆಡಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನನಗೆ ಕೋಟಿ ಆಫರ್ ನೀಡಿದ್ದರು ಎಂದು ವಕೀಲ ದೇವರಾಜೇಗೌಡ ಗಂಭೀರವಾದ ಆರೋಪ ಮಾಡಿದ್ದರು. ಈಗ ಇವರ ಹೇಳಿಕೆಯ ಬೆನ್ನಲ್ಲೇ ಜೆಡಿಎಸ್ ಟ್ವೀಟ್ ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. 1) ಡಿಸಿಎಂ ಡಿ.ಕೆ.ಶಿವಕುಮಾರ್ 2) ಕೃಷಿ ಸಚಿವ ಚೆಲುವರಾಯಸ್ವಾಮಿ 3) ಕಂದಾಯ ಸಚಿವ ಕೃಷ್ಣಭೈರೇಗೌಡ 4) IT BT ಸಚಿವ ಪ್ರಿಯಾಂಕ್ ಖರ್ಗೆ 5) ಇನ್ನೂ ಒಬ್ಬ ಸಚಿವ + ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿಗಳಾದ ಮಾನ್ಯ ಶ್ರೀ ನರೇಂದ್ರಮೋದಿ ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದು. ಈ ಸಂಚು ಸಾಕಾರಗೊಳಿಸಲು CDಶಿವಕುಮಾರ್ ಸಾಹೇಬರು ವಕೀಲರಾದ ಶ್ರೀ ದೇವರಾಜೇಗೌಡರಿಗೆ ಆಫರ್ ಮಾಡಿದ ಮೊತ್ತ ಬರೋಬ್ಬರಿ ₹100 ಕೋಟಿ! ಎಂದು…
ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶ್ರೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, ಪ್ರಕರಣದ 8ನೇ ಆರೋಪಿಯಾಗಿರುವ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ ನಾನು ಜೈಲಿಂದ ಹೊರಗಡೆ ಬಂದ ತಕ್ಷಣ ಸರ್ಕಾರ ಪತನವಾಗಲಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನದಲ್ಲಿ ನಾಳೆ ಸಂಜೆಯವರೆಗೆ ಎಸ್ ಐ ಟಿ ಕಸ್ಟಡಿಯಲ್ಲಿರುವ ದೇವರಾಜ ಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣದ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡ ಇದೆ. ನನ್ನ ವಿರುದ್ಧ ಲೈಂಗಿಕ ಕಿರುಕುಳ ಕೆಸ್ ಹಾಕಿಸಿದ್ರು ಸಾಕ್ಷಿ ಸಿಗಲಿಲ್ಲ.ನಂತರ ಅತ್ಯಾಚಾರಕ್ಕೆ ಸಾಕಿದರು ಅದರಲ್ಲೂ ಸಾಕ್ಷಿ ಸಿಗಲಿಲ್ಲ ಎಂದು ಹಾಸನದಲ್ಲಿ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ ಹೇಳಿಕೆ ನೀಡಿದರು. ನನ್ನ ಮಟ್ಟ ಹಾಕಲು ಪೆನ್ ಡ್ರೈವ್ ಕೆಸ್ ನಲ್ಲಿ ಲಾಕ್ ಮಾಡಿಸಿದ್ದಾರೆ. ಇವರೆಲ್ಲರ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡ ಇದೆ ನಾನು ಕೂಡ ಕಾನೂನು ಹೋರಾಟ ಮಾಡುತ್ತೇನೆ. ನಾನು ಜೈಲಿಂದ ಬಂದ ತಕ್ಷಣ…
ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶ್ರೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, ಪ್ರಕರಣದ 8ನೇ ಆರೋಪಿಯಾಗಿರುವ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ ಮೋದಿ ಬಿಜೆಪಿ ಹಾಗೂ ಹೆಚ್‍ಡಿ ಕುಮಾರಸ್ವಾಮಿಗೆ ಕೆಟ್ಟ ಹೆಸರು ತರಲು ಡಿಕೆ ಶಿವಕುಮಾರ್ ನನಗೆ 100 ಕೋಟಿ ಅವರ ನೀಡಿದರು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹಾಸನದಲ್ಲಿ ನಾಳೆ ಸಂಜೆ ಅವರಿಗೆ ಎಸ್ ಐ ಟಿ ಕಸ್ಟರ್ಡಿಯಲ್ಲಿರುವ ದೇವರಾಜ ಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣದ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡ ಇದೆ. ಹಾಸನದಲ್ಲಿ ಎಸ್ಐಟಿ ವಶದಲ್ಲಿರುವ ದೇವರಾಜೇಗೌಡ ಸ್ಪೋಟಕ ಹೇಳಿಕೆ ನೀಡಿದ್ದು, ನನ್ನ ವಿರುದ್ಧ ಲೈಂಗಿಕ ಕಿರುಕುಳ ಕೆಸ್ ಹಾಕಿಸಿದ್ರು ಸಾಕ್ಷಿ ಸಿಗಲಿಲ್ಲ.ನಂತರ ಅತ್ಯಾಚಾರಕ್ಕೆ ಸಾಕಿದರು ಅದರಲ್ಲೂ ಸಾಕ್ಷಿ ಸಿಗಲಿಲ್ಲ ಎಂದು ಹಾಸನದಲ್ಲಿ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ ಹೇಳಿಕೆ ನೀಡಿದರು. ನನ್ನ ಮಟ್ಟ ಹಾಕಲು ಪೆನ್ಡ್ರಾವ್ ಕೆಸ್ ನಲ್ಲಿ ಲಾಕ್ ಮಾಡಿಸಿದ್ದಾರೆ. ಇವರೆಲ್ಲರ…
ಉತ್ತರಕನ್ನಡ : ಇಂದು ರಾಜ್ಯದಲ್ಲಿ ಅತ್ಯಂತ ಘೋರವಾದ ಘಟನೆಗಳು ನಡೆದಿದ್ದು, ರಾಮನಗರ ಜಿಲ್ಲೆಯಲ್ಲಿ ಈಜಲು ತೆರಳಿದ್ದ ಮೂರು ಬಾಲಕರು ಸಾವನ್ನಪ್ಪಿದ್ದು, ಇದೀಗ ಹೊಳೆಯಲ್ಲಿ ಸ್ಥಾನಕ್ಕೆಂದು ಹೋಗಿದ್ದ ಇಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ನಡೆದಿದೆ. ಹೌದು ಕಡವಿನಕಟ್ಟೆ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಸಾವನನಪಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ಈ ಘಟನೆ ಸಂಭವಿಸಿದೆ. ಸೂರಜ ನಾಯಕ (15) ಪಾರ್ವತಿ ಶಂಕರ ನಾಯಕ್ (35) ಎನ್ನುವವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಇವರು ಭಟ್ಕಳ ತಾಲೂಕಿನ ಕೊಂಡಕೋಡ್ಲು ಗ್ರಾಮದವರು ಎಂದು ತಿಳಿದುಬಂದಿದೆ. ಅಲ್ಲದೆ ಇವರ ಜೊತೆಗೆ ಸುಮಾರು ಹದಿನೈದು ಜನರು ಹೊಳೆಯಲ್ಲಿ ಸ್ಥಾನಕ್ಕೆಂದು ತೆರಳಿದ್ದರು ಎಂದು ಹೇಳಲಾಗುತ್ತಿದೆ. ಸ್ನಾನ ಮಾಡಲು ಹೋದಾಗ ಈ ದುರಂತ ಸಂಭವಿಸಿದೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : ಪ್ರಜ್ವಲ್ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 8ನೇ ಆರೋಪಿ ಆಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡನನ್ನು ನಾಳೆ ಸಂಜೆ 5:00 ವರೆಗೆ ಎಸ್ಐಟಿಗೆ ನೀಡಿ ಹಾಸನದ ಐದನೇ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ. ಹೌದು ಕಳೆದ ಹಲವು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ವಕೀಲ ದೇವರಾಜ ಗೌಡನನ್ನು ಇಂದು ಎಸ್ಐಟಿ ಅಧಿಕಾರಿಗಳು ಅಕಿರದೇವರಾಜೇಗೌಡರನ್ನು ಹಾಸನಾದ 5ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್, ನಾಳೆ ಸಂಜೆ 5:00 ಗಂಟೆವರೆಗೆ ದೇವರಾಜೇಗೌಡ ಎಸ್ ಐ ಟಿ ಕಸ್ಟಡಿಗೆ ನೀಡಿ ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಈ ಆದೇಶ ನೀಡಿದೆ. ಹಾಗಾಗೀ ಇದೀಗ ವಿಚಾರಣೆ ನಡೆಸಲು ಎಸ್ ಐ ಟಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದಾರೆ.
ಬೆಂಗಳೂರು : ಬಹಿರ್ದೆಸೆಗೆ ಎಂದು ತೆರಳಿದ್ದ ಬಾಲಕನ ಮೇಲೆ ದುಷ್ಕರ್ಮಿಗಳು ತಲೆ ಹಾಗೂ ಹೊಟ್ಟೆ ಭಾಗಕ್ಕೆ ದೊಣ್ಣೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನರಿಗಾ ಗ್ರಾಮದಲ್ಲಿ ನಡೆದಿದೆ. ನರಿಗಾ ಗ್ರಾಮದಲ್ಲಿ ದೊಣ್ಣೆಯಿಂದ ಹೊಡೆದು ಬಾಲಕನ ಭೀಕರ ಹತ್ಯೆ ಮಾಡಲಾಗಿದೆ.ಮೃತ ಬಾಲಕನನ್ನು ಪ್ರಾಣೇಶ್ (15) ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನರಿಗ ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಮೇ 15ರಂದು ನಡೆದ ಈ ಒಂದು ಘಟನೆ ಇದೀಗ ತಡವಾಗಿ ಬಳಕೆಗೆ ಬಂದಿದೆ ಎಂದು ಹೇಳಲಾಗುತ್ತಿದೆ. ಬಹಿರ್ದೆಸೆಗೆ ಎಂದು ಬಾಲಕ ಪ್ರಾಣೇಶ್ ತೆರಳಿದ್ದ. ಈ ವೇಳೆ ಆತನ ಮೇಲೆ ದುಷ್ಕರ್ಮಿಗಳು ದೊಣ್ಣೆಯಿಂದ ಹಲ್ಲಿ ಮಾಡಿದ್ದಾರೆ. ಇದೀಗ ಪ್ರಾಣೇಶ್ ಶವವಾಗಿ ಪತ್ತೆಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಬಾಲಕ ಪ್ರಾಣೇಶನ ತಲೆಗೆ ಹೊಟ್ಟೆ ಭಾಗಕ್ಕೆ ಹೊಡೆದು ಕೊಲೆ ಮಾಡಲಾಗಿದೆ. ಶಾಲೆಗೆ ರಜೆ ಹಿನ್ನೆಲೆಗೆ ತಂದೆ ತಾಯಿ ಬಳಿಗೆ ಪ್ರಾಣೇಶ್ ಬಂದಿದ್ದ.ಮೂಲತಃ ಮಂತ್ರಾಲಯದ ಕೂಲಿಕಾರ್ಮಿಕ ದಂಪತಿಯ…